ಬೆಂಗಳೂರು:- ಭ್ರೂಣ ಹತ್ಯೆ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಭ್ರೂಣ ಹತ್ಯೆ ಪ್ರಕರಣ ನಡೆದಿರುವುದು ಅಮಾನವೀಯ. ಈ ಪ್ರಕರಣದಿಂದಾಗಿ ಎಲ್ಲರೂ ತಲೆ ತಗ್ಗಿಸುವಂತಾಗಿದೆ. ಇಂತಹ ಅಮಾನವೀಯ ಕೆಲಸಗಳಿಗೆ ಬೆಂಬಲ ಕೊಡಬಾರದು. ಇದು ನಮ್ಮ ವೈವಸ್ಥೆಯ ವೈಫಲ್ಯ. ಮುಂದೆ ಈ ರೀತಿಯ ಪ್ರಕರಣ ಮರುಕಳಿಸದಂತೆ ಮನವಿ ಮಾಡುತ್ತೇನೆ ಎಂದರು. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. 21ನೇ ಶತಮಾನದಲ್ಲೂ ಹೆಣ್ಣು ಮಕ್ಕಳ ಬಗ್ಗೆ ತಾತ್ಸಾರ ಮನೋಭಾವ ಸರಿಯಲ್ಲ ಎಂದರು. ಇನ್ನೂ ರಾಜ್ಯ ಸರ್ಕಾರವು ಬರ ನಿರ್ವಹಣೆಯಲ್ಲಿ ವಿಫಲವಾಗಿದ್ದು, ಸಚಿವರುಗಳ ಮೇಲಿನ ಆರೋಪಗಳ ಕುರಿತು ಬೆಳಗಾವಿ ಅಧಿವೇಶನದ್ಲಲಿ ಬಿಜೆಪಿ ಜೊತೆಗೂಡಿ ಜಂಟಿ ಹೋರಾಟ ನಡೆಸುವುದಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಬರ ನಿರ್ವಹಣೆ ಮಾಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸುತ್ತಿದ್ದಾರೆ. ಈ ಬಗ್ಗೆ ನನಗೆ ತಿಳುವಳಿಕೆ ಇಲ್ಲ ಎಂದು ಅವರು ಹೇಳಿದ್ದಾರೆ. ಹಾಗಾದರೆ…
Author: AIN Author
ಬಳ್ಳಾರಿ :- ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಹಲಕುಂದಿ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವರು, ಮಳೆ ಇಲ್ಲದೇ ಒಣಗಿರುವ ತೊಗರಿ,ಸೂರ್ಯಕಾಂತಿ ಜೋಳ ಬೆಳೆಹಾನಿ ಪರಿಶೀಲಿಸಿದರು. ಹಾಗೂ ಇದೇ ವೇಳೆ ಕೃಷಿ ಅಧಿಕಾರಿಗಳು ಹಾಗೂ ರೈತರಿಂದ ಸಚಿವರು ಮಾಹಿತಿ ಪಡೆದರು. ಪ್ರತಿ ರೈತರಿಗೆ ಪ್ರೂಟ್ಸ್ ತಂತ್ರಾಂಶ ಮೂಲಕ ಪರಿಹಾರ ನೀಡಲು ಅನುಕೂಲವಾಗುತ್ತದೆ, ಪ್ರತಿ ರೈತರು ಕೃಷಿ ಇಲಾಖೆಯ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರಿ. ಸರ್ಕಾರ ನೀಡುವ ಪರಿಹಾರ ಪಡೆಯಲು ಅನುಕೂಲವಾಗುತ್ತದೆ. ಯಾವೊಬ್ಬ ರೈತನನ್ನು ಕಡೆಗಣನೆ ಮಾಡಬಾರದು ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಇದೇ ವೇಳೆ ಕೃಷಿ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ ಸಾಥ್ ನೀಡಿದ್ದಾರೆ.
ರಣ್‌ಬೀರ್ ಕಪೂರ್, ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಅನಿಮಲ್’ ಸಿನಿಮಾ ರಿಲೀಸ್ ಮುನ್ನವೇ ಅಭಿಮಾನಿಗಳಿಗೆ ಸಂದೀಪ್ ರೆಡ್ಡಿ ವಂಗಾ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತೆಲುಗಿನ ಸ್ಟಾರ್ ನಟ ಪ್ರಿನ್ಸ್ ಮಹೇಶ್ ಬಾಬುಗೆ ನಿರ್ದೇಶನ ಮಾಡಲಿದ್ದಾರೆ. ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಅರ್ಜುನ್ ರೆಡ್ಡಿ’ ಸಿನಿಮಾ ಸಕ್ಸಸ್‌ಫುಲ್ ಪ್ರದರ್ಶನ ಕಾಣುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಿತ್ತು. ‘ಅನಿಮಲ್’ (Animal) ಸಿನಿಮಾ ಮಾಡುವಾಗಲೇ ಪ್ರಭಾಸ್ ಜೊತೆ ‘ಸ್ಪಿರಿಟ್’ ಚಿತ್ರ ಮಾಡೋದಾಗಿ ಅನೌನ್ಸ್ ಆಗಿದೆ. ಈ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ ಕೂಡ ನೀಡಿದ್ದಾರೆ. ಮಹೇಶ್ ಬಾಬುಗೆ (Mahesh Babu) ಈಗಾಗಲೇ ಭೇಟಿಯಾಗಿ ಕಥೆ ಹೇಳಿದ್ದಾರೆ ಸಂದೀಪ್. ಚಿತ್ರಕಥೆ ಕೇಳಿಯೇ ಥ್ರಿಲ್ ಆಗಿ ಮಹೇಶ್ ಬಾಬು ಓಕೆ ಎಂದಿದ್ದಾರೆ. ಚಿತ್ರಕ್ಕೆ ಡೆವಿಲ್ ಎಂದು ಹೆಸರಿಟ್ಟಿದ್ದು, ಅನಿಮಲ್ ಸಿನಿಮಾದ ರೀತಿಯೇ ಇನ್ನೂ ಸಖತ್ ವೈಲೆಂಟ್ ಆಗಿ ಮೂಡಿ ಬರಲಿದೆಯಂತೆ. ಎಂದೂ ನೋಡಿರದ ಲುಕ್, ಪಾತ್ರದಲ್ಲಿ ಮಹೇಶ್ ಬಾಬು ಅವರನ್ನ ಈ ಚಿತ್ರದಲ್ಲಿ ಕಣ್ತುಂಬಿಕೊಳ್ಳಬಹುದು. ಸಂದೀಪ್…
ವಿಜಯಪುರ: ಮಾಗಡಿ ಶಾಸಕನೇ ಬ್ರಿಟಿಷ ಇದ್ದಂಗೆ ಅದಾನ. ಆ ಶಾಸಕನ ಬಗ್ಗೆ ಹೆಚ್ಚು ಮಾತಾಡಿ ಪ್ರಯೋಜನ ಇಲ್ಲ ಎಂದು ಬಿಜೆಪಿಯವ್ರನ್ನು ಬ್ರಿಟಿಷರಿಗೆ ಹೋಲಿಸಿದ್ದ ಮಾಗಡಿ ಶಾಸಕ ಬಾಲಕೃಷ್ಣಗೆ ಸಂಸದ ರಮೇಶ ಜಿಗಜಿಣಗಿ ತಿರುಗೇಟು ನೀಡಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಪುಲ್ವಾಮಾದಲ್ಲಿ ಸೈನಿಕರು ಸಾಯಲು ಮೋದಿ ಯಾಕೆ ಕಾರಣರಾಗುತ್ತಾರೆ? ನಮ್ಮ ಸೈನಿಕರಿಗೆ ಉಗ್ರರು ತೊಂದರೆ ಮಾಡಿದ್ದಕ್ಕೆ ಮೋದಿ ಅವರು ಸರ್ಜಿಕಲ್ ಸ್ಟ್ರೈಕ್ ಮಾಡಿ ಪಾಕಿಸ್ತಾನದೊಳಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದರು ಇದು ತಪ್ಪಾ? ಎಂದು ಪ್ರಶ್ನಿಸಿದರು. https://ainlivenews.com/do-you-know-which-are-the-most-visited-websites-by-indians/ ಇನ್ನು ಬಿಜೆಪಿಯವರು ಬ್ರಿಟಿಷರಿಗಿಂತ ಡೇಂಜರ್ ಇದ್ದಾರೆ ಎಂಬ ಮಾಗಡಿ ಶಾಸಕನ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ಆ ಶಾಸಕನ ಬಗ್ಗೆ ನಾನೇನು ಮಾತಾನಾಡುವದಿಲ್ಲ. ನೋಡೋದಕ್ಕೆ ಆ ಮಾಗಡಿ ಶಾಸಕನೇ ಬ್ರಿಟಿಷ ಇದ್ದಂಗೆ ಅದಾನ. ಬಿಜೆಪಿ ಜೆಡಿಎಸ್ ಸಮಿಶ್ರ ಸರ್ಕಾರವಾದ್ರೆ ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಗೆ ಆದ ಗತಿ ಜೆಡಿಎಸ್ ಗೆ ಆಗತ್ತೆ ಎಂಬ ಹೇಳಿಕೆ ನೀಡಿರುವ ಆ ಶಾಸಕನ ಬಾಯಿ ಇರೋದೇ ಹಾಗೆ…
ಚಂಡೀಗಢ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಟ್ರಕ್ (Truck) ಅನ್ನು ರೈಲ್ವೇ ಹಳಿ (Railway Track) ಮೇಲೆ ಬಿಟ್ಟಿದ್ದು, ಅದೇ ಮಾರ್ಗವಾಗಿ ಆಗಮಿಸುತ್ತಿದ್ದ ರೈಲಿನ ಲೋಕೋ ಪೈಲಟ್ ಸಮಯಪ್ರಜ್ಞೆಯಿಂದಾಗಿ ಭಾರೀ ದುರಂತವೊಂದು ತಪ್ಪಿರುವ ಘಟನೆ ಪಂಜಾಬ್‌ನ (Punjab) ಲೂಧಿಯಾನಾದಲ್ಲಿ (Ludhiana) ನಡೆದಿದೆ. ರಾತ್ರಿ ಟ್ರಕ್ ಚಾಲಕನೊಬ್ಬ ಕುಡಿದ ನಶೆಯಲ್ಲಿ ಟ್ರಕ್ ಅನ್ನು ಲೂಧಿಯಾನಾ-ದೆಹಲಿ ರೈಲ್ವೆ ಹಳಿಯಲ್ಲಿ ಓಡಿಸಿದ್ದಾನೆ. ಆತ ಶೇರ್ಪುರದಿಂದ ಲೂಧಿಯಾನ ರೈಲ್ವೆ ನಿಲ್ದಾಣದ ಕಡೆಗೆ ಹೋಗಿದ್ದು, ಈ ವೇಳೆ ಟ್ರಕ್ ಹಳಿಯ ಮೇಲೆ ಸಿಲುಕಿಕೊಂಡಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (GRP) ತನಿಖಾಧಿಕಾರಿ ಜಸ್ವಿರ್ ಸಿಂಗ್ ಹೇಳಿದ್ದಾರೆ. ಟ್ರಕ್ ರೇಲ್ವೆ ಹಳಿಯಲ್ಲಿ ಸಿಲುಕಿಕೊಂಡ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಕೆಲವೇ ನಿಮಿಷಗಳಲ್ಲಿ ಅದೇ ಮಾರ್ಗವಾಗಿ ರೈಲೊಂದು ಆಗಮಿಸಿದ್ದು, https://ainlivenews.com/do-you-know-which-are-the-most-visited-websites-by-indians/ ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಈ ವೇಳೆ ಹಳಿಯ ಮೇಲೆ ಟ್ರಕ್ ನಿಂತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನು ತಿಳಿದ ಲೋಕೋ ಪೈಲಟ್ ಟ್ರಕ್…
ಬೆಂಗಳೂರು:- ಕಾಂಗ್ರೆಸ್ ಸರ್ಕಾರದಲ್ಲೂ ಭ್ರಷ್ಟಾಚಾರ ತಾಂಡವ ವಾಡುತ್ತಿದೆ ಎಂದು ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಆಯೋಗಕ್ಕೆ ಕೆಂಪಣ್ಣ ದೂರು ನೀಡಿದ್ದಾರೆ. ಕೆಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಬಂದಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗಿತ್ತು. ಹೆಚ್ಚು ಭ್ರಷ್ಟಾಚಾರ ಇರುವ ಕೆಲವು ಇಲಾಖೆಗಳ ಕುರಿತು ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಮಾಹಿತಿ ನೀಡಿದ್ದೇವೆ. ಹಿಂದೆ ನಡೆದಿರುವ ಭ್ರಷ್ಟಾಚಾರದ ತನಿಖೆಯ ಜತೆಯಲ್ಲೇ ಈಗ ನಡೆಯುತ್ತಿರುವ ಅಕ್ರಮಗಳನ್ನೂ ನಿಯಂತ್ರಿಸುವಂತೆ ಆಯೋಗಕ್ಕೆ ಮನವಿ ಮಾಡಿದ್ದೇವೆ’ ಎಂದರು., ಗುತ್ತಿಗೆದಾರರ ಸಂಘದ ನಿಯೋಗವು ಮಂಗಳವಾರ ಆಯೋಗಕ್ಕೆ ದೂರು ಸಲ್ಲಿಸಿದೆ. ಅದನ್ನು ಇನ್ನೂ ಪರಿಶೀಲಿಸಿಲ್ಲ. ಹೀಗಾಗಿ ದೂರಿನಲ್ಲಿ ಏನು ಉಲ್ಲೇಖಿಸಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ’ ಎಂದು ಎಚ್.ಎನ್. ನಾಗಮೋಹನ್ ದಾಸ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ನಡೆದ ಪೂಜಾ ಗಾಂಧಿ ಅವರ ಅದ್ದೂರಿ ಮದುವೆಗೆ ಆಗಮಿಸಿದ್ದ ನಟಿ ಸಂಜನಾ ಗಲ್ರಾನಿ, ಪೂಜಾ ಜೊತೆಗೆ ಮಾಡಿಕೊಂಡಿದ್ದ ಜಗಳವನ್ನು ನೆನಪು ಮಾಡಿಕೊಂಡಿದ್ದಾರೆ. ನಾವಿಬ್ಬರೂ ‘ದಂಡುಪಾಳ್ಯ’, ‘ದಂಡುಪಾಳ್ಯ 2’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೆವು. ಆಗ ನಮ್ಮಿಬ್ಬರಿಗೂ ತುಸು ಜಗಳವಾಗಿತ್ತು, ಅದು ಕೋಳಿ ಜಗಳ ಅಷ್ಟೆ. ಇಬ್ಬರು ಜಡೆಗಳನ್ನು ಒಂದೆಡೆ ಹಾಕಿದಾಗ ಆಗುವ ಸಾಮಾನ್ಯ ಜಗಳ ಅದು. ಆದರೆ ನಮ್ಮಿಬ್ಬರ ಮನಸ್ಸಿನಲ್ಲಿ ದ್ವೇಷ ಇಲ್ಲ. ಪೂಜಾ ಗಾಂಧಿಗೆ ಒಳ್ಳೆಯದಾಗಬೇಕು, ನನ್ನಂತೆ ಅವರಿಗೂ ಮುದ್ದಾದ ಮಗುವಾಗಬೇಕು ಎಂದು ಹಾರೈಸಿದರು. ಇನ್ನೂ ನಟಿ ಪೂಜಾ ಗಾಂಧಿ ಇಂದು ಯಲಹಂಕದಲ್ಲಿ ಉದ್ಯಮಿ ವಿಜಯ್ ಘೋರ್ಪಡೆ ಅವರೊಟ್ಟಿಗೆ ಮಂತ್ರ ಮಾಂಗಲ್ಯ ವಿಧಾನದಲ್ಲಿ ವಿವಾಹವಾಗಿದ್ದಾರೆ. ವಿವಾಹ ಕಾರ್ಯಕ್ಕೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಆಗಮಿಸಿದ್ದರು
ಮಹಿಳೆಯರು ತುಟಿಗಳ ಕುರಿತಾಗಿ ಹೆಚ್ಚಿನ ಕಾಳಜಿಯನ್ನು ವಹಿಸುತ್ತಾರೆ. ಕೆಲವೊಮ್ಮೆ ಒಣಗಿದ ತುಟಿ, ತುಟಿಯ ಚರ್ಮ ಕಿತ್ತು ಬರುವ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ತುಟಿ ಒಣಗಲು ಮತ್ತು ಚರ್ಮ ಕಿತ್ತುಬರಲು ಕಾರಣ ಮತ್ತು ಪರಿಹಾರವೇನು ಇಲ್ಲಿದೆ ಮಾಹಿತಿ. ತುಟಿಗಳು ಒಣಗುವುದು ಚಳಿಗಾಲದಲ್ಲಿ ಮಾತ್ರ ಎನ್ನುವ ಭಾವನೆ ತಪ್ಪು. ಬೇಸಿಗೆ ಕಾಲದಲ್ಲಿಯೂ ತುಟಿ ಡ್ರೈ ಆಗುತ್ತೆ. ತುಟಿಯ ಚರ್ಮವು ದೇಹದ ಇತರರ ಭಾಗಗಳ ಚರ್ಮಕ್ಕಿಂತ ತೆಳ್ಳಗೆ ಮತ್ತು ಮೃದುವಾಗಿರುತ್ತದೆ. ಹಾಗಾಗಿ ತುಟಿಯ ಚರ್ಮದ ಕುರಿತಾಗಿ ವಿಶೇಷ ಕಾಳಜಿಯನ್ನು ವಹಿಸಬೇಕಾಗುತ್ತದೆ. ತುಟಿಗಳಲ್ಲಿ ಕಡಿಮೆ ಪ್ರಮಾದ ತೈಲ ಗ್ರಂಥಿಗಳಿರುತ್ತವೆ. ಶೀತ, ಶುಷ್ಕಗಾಳಿ, ತುಟಿಯುನ್ನು ಒಣಗುವಂತೆ ಮಾಡುತ್ತದೆ. ಇದರಿಂದ ತುಟಿಯ ಚರ್ಮ ಒಣಗಿ ಸಿಪ್ಪೆಯಂತಾಗಿ ಕಿತ್ತು ಬರುತ್ತದೆ. ಚಳಿಗಾಲದಲ್ಲಿ ಹೆಚ್ಚಾಗಿ ತುಟಿಗಳು ಬಿರುಕು ಬಿಡುವುದು, ಚಪ್ಪಟೆಯಂತಾಗುವುದು ಸಹಜವಾಗಿದೆ. ಚಳಿಗಾಲದಲ್ಲಿ ತುಟಿ ಒಣಗಿದಂತಾಗಿ ಚರ್ಮ ಕಿತ್ತು ಬರುವುದು ಮಹಿಳೆಯರಿಗರೆ ಕಿರಿಕಿರಿಯನ್ನು ಉಂಟುಮಾಡುತ್ತದೆ. ಹೊರಗೆ ಹೋಗುವಾಗ ಮಹಿಳಿಯರು ಟೈಟಾನಿಯಂ ಡೈ ಆಕ್ಸೈಡ್ ಮತ್ತು ಜೆನಿಕ್ ಆಕ್ಸೈಡ್ ಅಂಶವನ್ನು ಹೊಂದಿರುವ ಸನ್ಸ್ಕ್ರೀನ್ ಬಳಕೆಯನ್ನು…
ತಲೆಗೂದಲು ತುಂಬಾ ನಯವಾಗಿರಬೇಕು ಅನ್ನೋದು ಎಲ್ಲಾ ಹುಡುಗಿಯರ ಆಸೆಯಾಗಿರುತ್ತೆ. ಹೀರೋಯಿನ್ಗಳ ಸಾಫ್ಟ್&ಸ್ಲೀಕ್ ಕೂದಲು ನೋಡಿದಾಗ ಅಯ್ಯೋ ಅಂಥ ಕೂದಲು ನಮಗಿಲ್ವಲ್ಲಾ ಅಂತಾನೂ ಅನ್ನಿಸುತ್ತೆ. ಅದಕ್ಕೆಲ್ಲಾ ಹಣ ಖರ್ಚು ಮಾಡ್ಬೇಕು ಅಂತ ವರಿ ಮಾಡ್ಬೇಡಿ. ಮನೆಯಲ್ಲೇ ಸುಲಭವಾಗಿ ಸಿಗೋ ಕೆಲವು ಸಾಮಗ್ರಿಗಳಿಂದ ಸಾಫ್ಟ್ ಕೂದಲು ನಿಮ್ಮದಾಗಿಸಿಕೊಳ್ಳಬಹುದು. ಇದಕ್ಕೆ ಸ್ವಲ್ಪ ಸಮಯ ಮೀಸಲಿಡಬೇಕು ಅಷ್ಟೇ. ಆ ಟಿಪ್ಸ್ ಇಲ್ಲಿದೆ ನೋಡಿಗುಲಾಬಿ ದಳ- ಕೊಬ್ಬರಿ ಎಣ್ಣೆ ಗುಲಾಬಿಯನ್ನ ಅಲಂಕಾರಕ್ಕೆ, ಮುಡಿದುಕೊಳ್ಳೋಕೆ ಬಳಸೋ ಜೊತೆಗೆ ಅದರಿಂದ ನಿಮ್ಮ ಕೂದಲ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು. ಇದಕ್ಕೆ ನೀವು ಕಷ್ಟನೂ ಪಡಬೇಕಿಲ್ಲ. ತಲೆಗೆ ಎಣ್ಣೆ ಹಚ್ಚುವಾಗೆಲ್ಲಾ ಈ ಟಿಪ್ಸ್ ಫಾಲೋ ಮಾಡಿದ್ರೆ ಸಾಕು. ಕೊಬ್ಬರಿ ಎಣ್ಣೆಯನ್ನ ಸ್ವಲ್ಪ ಬಿಸಿ ಮಾಡಿ(ಸ್ವಲ್ಪ ಬಿಸಿಯಾದ್ರೆ ಸಾಕು, ಹೊಗೆ ಬರುವಂತೆ ಕಾಯಿಸಬಾರದು) ಅದಕ್ಕೆ ಗುಲಾಬಿ ದಳಗಳನ್ನ ಹಾಕಿ. ಹೀಗೆ ಮಾಡಿದಾಗ ನೊರೆ ಬರುತ್ತದೆ. ಎಣ್ಣೆ ತಣ್ಣಗಾದ ನಂತರ ಗುಲಾಬಿ ದಳಗಳನ್ನ ಕಿವುಚಿ ತೆಗೆಯಿರಿ. ನಂತರ ಎಣ್ಣೆಯನ್ನ ತಲೆಗೆ ಸಂಪೂರ್ಣವಾಗಿ ಹಚ್ಚಿ ಮಸಾಜ್ ಮಾಡಿ. 3 ಗಂಟೆಗಳ…
ಬೆಂಗಳೂರು:- ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಚಾಮರಾಜನಗರದಲ್ಲಿ 17.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.