ಬೆಂಗಳೂರು: ರಾಜ್ಯಾದ್ಯಂತ ಇನ್ನೂ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಇಂದು (ನ.10,11) ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕದಲ್ಲಿ ಕಳೆದ 3-4 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮುಂಗಾರು ಕೈಕೊಟ್ಟಿದ್ದು, ಹಿಂಗಾರು ರೈತನ ಕೈಹಿಡಿದೆ. ಮಳೆಯಾಗುತ್ತಿರುವುದರಿಂದ ಒಣಗುತ್ತಿದ್ದ ಬೆಳೆಗಳಿಗೆ ಜೀವ ಕಳೆ ಬಂದಿದೆ. ಇದರಿಂದ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಮಳೆಯಾಗುತ್ತಿರುವುರಿಂದ ರಾಜ್ಯದ ಕೆಲವು ನದಿಗಳಲ್ಲಿ ಒಳಹರಿವು ಕೊಂಚ ಹೆಚ್ಚಾಗಿದೆ. ಆದರೆ ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾಗಿಲ್ಲ. ಇದರಿಂದ ಪ್ರಮುಖ…
Author: AIN Author
ಬೆಂಗಳೂರು: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ಸನ್ನಿಧಿಗೆ ವಿಧಾನ ಪರಿಷತ್ ಶಾಸಕರಾದ ಟಿ.ಎ,ಶರವಣ ಅವರು ಭೇಟಿ ನೀಡಿ ತಾಯಿಯ ದರ್ಶನ ಮಾಡಿದರು ಹಾಗೆ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಕೂಡ ಭೇಟಿ ನೀಡಿದರು. ದೇವಾಲಯಕ್ಕೆ ಭೇಟಿ ನೀಡಿದ ಟಿ.ಎ,ಶರವಣ ಅವರನ್ನು ದೇವಾಲಯದ ಆಡಳಿತ ಮಂಡಳಿ ಗೌರವಿಸಿದೆ.ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ದಿನದ ಇಪ್ಪನ್ಕಾಲ್ಕು ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಟಿ.ಎ,ಶರವಣ ದಂಪತಿ ಹಾಸನಾಂಬೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಈ ವೇಳೆ ರಾಜ್ಯದಲ್ಲಿ ಸುಭಿಕ್ಷವಾಗಿ ಮಳೆಯಾಗಿ, ರೈತಾಪಿ ವರ್ಗದವರ ಬಾಳಲ್ಲಿ ಬೆಳಕು ಮೂಡಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಹಾಸನ ಜಿಲ್ಲೆಯಲ್ಲಿರುವ ಹಾಸನಾಂಬ ದೇಗುಲದ ಬಾಗಿಲನ್ನು ವರ್ಷಕ್ಕೊಮ್ಮೆ ಮಾತ್ರ ತೆರೆಯಲಾಗುತ್ತದೆ.ಈ ಬಾರಿ 14 ದಿನಗಳ ಕಾಲ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಹಾಗೆ ನವೆಂಬರ್ 7ರಂದು ಮಾಜಿ ಸಿಎಂ ಕುಮಾರಸ್ವಾಮಿ ದಂಪತಿ ಕೂಡ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದ್ದರು ಹಾಗೆ ಅದೇ ದಿನ ಸಿಎಂ ಸಿದ್ದರಾಮಯ್ಯ ಕೂಡ…
ಬೆಂಗಳೂರು: ಕರೆಂಟ್ ಶಾಕ್‌ನಿಂದ (Electrocuted) ದಿಢೀರ್ ನೂಕು ನುಗ್ಗಲು ಸೃಷ್ಟಿಯಾದ ಘಟನೆ ಹಾಸನಾಂಬೆ ದೇವಸ್ಥಾನದಲ್ಲಿ (Hasanamba Temple) ಬಳಿ ನಡೆದಿದೆ. ವರ್ಷಕ್ಕೆ ಒಂದು ಬಾರಿ ತೆರೆಯಲ್ಪಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2 ರಿಂದ ತೆರೆದಿದ್ದು ಇಂದು ಬೆಳಗ್ಗೆಯಿಂದಲೂ ಸಾವಿರಾರು ಸಂಖ್ಯೆಯ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದ್ದರು. https://ainlivenews.com/knee-pain-treatment-joint-pain-treatment/ ಮಧ್ಯಾಹ್ನ 1.30ರ ವೇಳೆ ಉಚಿತ ದರ್ಶನದ ಸಾಲಿ ಹಾಕಿದ್ದ ಬ್ಯಾರಿಕೇಡ್‌ನಲ್ಲಿ ವಿದ್ಯುತ್ ಪ್ರವಹಿಸಿದೆ. ಬ್ಯಾರಿಕೇಡ್ ವಿದ್ಯುತ್ ಪ್ರವಹಿಸಿದ್ದನ್ನು ಕಂಡು ಸಾಲಿನಲ್ಲಿದ್ದ ಭಕ್ತರು ಜೀವ ಉಳಿಸಿಕೊಳ್ಳಲು ಎದ್ನೋ ಬಿದ್ನೋ ಎಂದು ಸ್ಥಳದಿಂದ ಓಡಿದ್ದಾರೆ. ಈ ವೇಳೆ ಒಬ್ಬರ ಮೇಲೆ ಒಬ್ಬರು ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದ ಸ್ವಯಂಸ್ವೇವಕರು ಮತ್ತು ಸ್ಥಳೀಯರು ಕೆಲವರನ್ನು ಹೊರಗೆಳೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. 20 ಮಂದಿಗೆ ಕರೆಂಟ್ ಶಾಕ್ ಹೊಡೆದಿದ್ದು, ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಶ್ವಾನ ಪ್ರಿಯರಿಗೆ ಬ್ಯಾಡ್ ನ್ಯೂಸ್ ಶ್ವಾನ ಪ್ರೀತಿಗೂ ಇನ್ಮುಂದೆ ಬರಲಿದೆ ಹೊಸ ರೂಲ್ಸ್ ಬೆಂಗಳೂರಿಗರೇ ಇನ್ಮುಂದೆ ಬೇಕಾ ಬಿಟ್ಟಿ ಮನೆಯಲ್ಲಿ ಶ್ವಾನ ಸಾಕಾಂಗಿಲ್ಲ ಮುದ್ದಿನ ಶ್ವಾನದ ಮಲಮೂತ್ರ ವಿಸರ್ಜನೆಗೆ ನಿಮಗಿಷ್ಟ ಬಂದಾಗ ಹೊರಗಡೆ ಕರೆದೊಯ್ಯಂಗಿಲ್ಲ ನಾಯಿ ಸಾಕುವ ವಿಚಾರವಾಗಿ ಬರಲಿದೆ ಹೊಸ ರೂಲ್ಸ್ ಬಿಬಿಎಂಪಿ ಪಶು ಸಂಗೋಪನೆ ಇಲಾಖೆಯಿಂದ ಪ್ರತ್ಯೇಕ ಮಾರ್ಗ ಸೂಚಿ ಬಿಡುಗಡೆಗೆ ಪ್ಲಾನ್ ಹಾಗಿದ್ರೆ ಏನೇನ್ ಮಾರ್ಗಸೂಚಿ ಸಾಧ್ಯತೆ..? 1. ಒಂದು ಮನೆಯಲ್ಲಿ ಗರಿಷ್ಠ ಎಷ್ಟು ನಾಯಿಗಳನ್ನ ಸಾಕಬಹುದು..? 2.ಮಲ ಮೂತ್ರ ವಿಸರ್ಜನೆಗೆ ಎಷ್ಟು ಗಂಟೆಗೆ ಮನೆಯಿಂದ ಹೊರಗಡೆ ಕರೆದುಕೊಂಡು ಹೋಗಬೇಕು..? 3. ನೆರೆ ಹೊರೆಯವರಿಗೆ ತೊಂದ್ರೆಯಾಗದಂತೆ ಏನೇನ್ ಕ್ರಮ ತೆಗೆದುಕೊಳ್ಳಬೇಕು..? 4. ನಾಯಿ ಸಾಕಲು ಮತ್ತು ಮಾರಾಟ ಮಾಡಲು ಕಡ್ಡಾಯವಾಗಿ ಅನುಮತಿ 5. ನಾಯಿಗಳಿಗೆ ಕಡ್ಡಾಯವಾಗಿ ರೇಬಿಸ್ ಲಸಿಕೆ ಹಾಕಿಸಿರಬೇಕು ಯಾಕೆ ಮಾರ್ಗಸೂಚಿ…? ನಗರದಲ್ಲಿ ಶ್ವಾನ ಸಾಕಾಣಿಕೆ ಸಂಖ್ಯೆ ದಿನೇ ದಿನೇ ಹೆಚ್ಚಳ ವಿವಿಧ ತಳಿಗಳ ನಾಯಿಗಳ ಖರೀದಿ ಮತ್ತು ಮಾರಾಟ ಪ್ರಕ್ರಿಯೆ ಸಹ ಏರಿಕೆ…
ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿದೇಶಗಳಿಂದ ಚಿನ್ನಭಾರಣ ಕಳ್ಳಸಾಗಣೆ ಮಾಡುತ್ತಿದ್ದ ಐದು ಜನ ಪ್ರಯಾಣಿಕರನ್ನ ಬಂಧಿಸಿದ್ದಾರೆ. ಬಂಧಿತರಿಂದ 3ಕೋಟಿ 9 ಲಕ್ಷ ಮೌಲ್ಯದ 5ಕೆಜಿ 135 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಎರಡು ದಿನದಲ್ಲಿ ಕುವೈತ್, ದುಬೈ, ಶಾರ್ಜಾದಿಂದ ಬೆಂಗಳೂರಿಗೆ ಈ ಪ್ರಯಾಣಿಕರು ಬಂದಿದ್ದರು. ಮಾತ್ರೆ, ಒಳ ಉಡುಪು, ಮಹಿಳೆಯರ ಪರ್ಸ್ಗಳಲ್ಲಿ ಕಳ್ಳಸಾಗಾಣೆ ಮಾಡಲು ಯತ್ನಿಸಿದ್ದರು. ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ನವದೆಹಲಿ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ವಿರುದ್ಧದ ತನಿಖೆಗೆ ನೀಡಿರುವ ತಡೆ ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಇತ್ಯರ್ಥಪಡಿಸಿದೆ. ಇಂದು ವಿಚಾರಣೆ ನಡೆಸಿದ ನ್ಯಾ. ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಲು ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ವಕೀಲರು, ಹೈಕೋರ್ಟ್ ಏಕ ಸದಸ್ಯ ಪೀಠ ತನಿಖೆಗೆ ನೀಡಿರಲಿಲ್ಲ. ಆದರೆ ವಿಭಾಗೀಯ ಪೀಠ ತಡೆ ನೀಡಿತ್ತು. ತಡೆ ರದ್ದು ಕೋರಿ ಈಗಾಗಲೇ ಹೈಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸಿದೆ. ಪ್ರಕರಣದ ತನಿಖೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ವಾದ ಆಲಿಸಿದ ಪೀಠ ಈಗಾಗಲೇ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವ ಹಿನ್ನೆಲೆ ವಿಚಾರಣೆ ಅಲ್ಲೇ ಮುಂದುವರಿಸಿ, ಪ್ರಕರಣವನ್ನು ಪ್ರಸ್ತಾಪಿಸಿ ನಾವು ಅರ್ಜಿ ಇತ್ಯರ್ಥಪಡಿಸಲು ಹೈಕೋರ್ಟ್‌ಗೆ ನಿರ್ದೇಶನ ನೀಡುತ್ತಿದ್ದೇವೆ ಎಂದು ಆದೇಶಿಸಿದರು. ಸುಪ್ರೀಂ ಕೋರ್ಟ್ ಈ ಆದೇಶದಿಂದ ಪ್ರಕರಣ ಈಗ ಮತ್ತೆ ಹೈಕೋರ್ಟ್ ಅಂಗಳ ತಲುಪಿದೆ.…
ಮೈಸೂರು: ಜಿಲ್ಲೆಯ ಪಟಾಕಿ ವ್ಯಾಪಾರದ ಮಳಿಗೆ ಗೋದಾಮಿನಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಾರಾಟ ಮಳಿಗೆ ದಾಸ್ತಾನು ಕೇಂದ್ರದಲ್ಲಿ ಮುಂಜಾಗ್ರತಾ ಕ್ರಮವಾಗಿ 20ಕ್ಕೂ ಹೆಚ್ಚು ಅಗ್ನಿ ನಂದಿಸುವ ಸಾಧನ ಇರಿಸಲಾಗಿದೆ. ಇದರ ಜೊತೆಗೆ ಬಕೆಟ್‌ನಲ್ಲಿ ಮರಳು ನೀರು ಸಂಗ್ರಹಣೆ ಮಾಡಲಾಗಿದೆ. 10 ಆಟೋಮ್ಯಾಟಿಕ್ ಅಗ್ನಿ ನಂದಿಸುವ ಸಾಧನ, https://ainlivenews.com/knee-pain-treatment-joint-pain-treatment/ 10 ಮ್ಯಾನ್ಯುಯಲ್ ಅಗ್ನಿ ನಂದಿಸುವ ಸಾಧನ, 40 ಡಿಗ್ರಿ ಉಷ್ಣಾಂಶ ತಾಗಿದರೆ ಆಟೋಮ್ಯಾಟಿಕ್ ಆಗಿ ಬೆಂಕಿ ನಂದಿಸುವ ಸಾಧನಗಳನ್ನು ಅಳವಡಿಸಲಾಗಿದೆ. ಬೆಂಕಿ ಅವಘಡ ಸಂಭವಿಸಿದರೆ ಯಾವ ರೀತಿ ನಂದಿಸಬೇಕೆಂಬುವುದರ ಬಗ್ಗೆ ಪ್ರತಿ ಸಿಬ್ಬಂದಿಗೂ ಅಗ್ನಿಶಾಮಕ ಸಿಬ್ಬಂದಿಯಿಂದ ತರಬೇತಿ ನೀಡಲಾಗಿದೆ.
ಬೆಂಗಳೂರು: ಇಂದಿನಿಂದ ಐದು ದಿನಗಳ ಕಾಲ ಪಟಾಕಿ ಮಾರಾಟ ಮಾಡಲು BBMP ಅವಕಾಶ ನೀಡಿದೆ. ಬೆಂಗಳೂರಿನ ಬಿಬಿಎಂಪಿಯ 62 ಮೈದಾನಗಳಲ್ಲಿ 267 ಪಟಾಕಿ ವ್ಯಾಪಾರಗಳಿಗೆ ಮಾರಾಟ ಮಾಡಲು ಅಷ್ಟೇ ಅವಕಾಶ ನೀಡಿದೆ. ಬಿಬಿಎಂಪಿ ಈ ಬಾರಿ ಪಟಾಕಿ ಮಳಿಗೆಗಳಿಗೆ ಅನುಮತಿ ನೀಡುವ ಜವಾಬ್ದಾರಿಯನ್ನು ಪೊಲೀಸ್ ಇಲಾಖೆಗೆ ನೀಡಿದೆ. ಹೀಗಾಗಿ ಅನುಮತಿ ಇಲ್ಲದೆ ಪಟಾಕಿ ಮಾರಾಟ ಕಂಡು ಬಂದರೆ ಅಕ್ರಮ ಮಾರಾಟಗಾರರ ವಿರುದ್ಧ ಖಾಕಿ ಕಟ್ಟೆಚ್ಚರ ವಹಿಸಿದೆ. ನಗರದಾದ್ಯಂತ ಹಸಿರು ಪಟಾಕಿಗಷ್ಟೇ ಮಾರಾಟ ಮಾಡಲು ಅವಕಾಶ ನೀಡಿದೆ. ನಿಗದಿಗಿಂತ ಹೆಚ್ಚು ಪ್ರಮಾಣದ ಪಟಾಕಿ ದಾಸ್ತಾನು ಮಾಡುವಂತಿಲ್ಲ. ಸಾಧ್ಯವಾದಷ್ಟೂ ಬೆಂಕಿ ತಡೆಯುವ ಉಪಕರಣಗಳನ್ನೇ ಬಳಸಿ ಮಳಿಗೆ ನಿರ್ಮಿಸಬೇಕು. ಮಳಿಗೆ ಮುಂಭಾಗ ಹಾಗೂ ಹಿಂಭಾಗ ಪ್ರವೇಶಿಸುವ ಅವಕಾಶ ಇರಬೇಕು. ಪ್ರತಿ ಮಾರಾಟ ಮಳಿಗೆಗೆ 3 ಮೀಟರ್ ಅಂತರ ಕಡ್ಡಾಯವಾಗಿರಬೇಕು. ಪರವಾನಗಿ ಪತ್ರ ಮಳಿಗೆಯಲ್ಲಿ ಪ್ರದರ್ಶಿಸಬೇಕು. ವಿದೇಶಿ ತಯಾರಿಕ ಪಟಾಕಿ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಪಟಾಕಿಯನ್ನು 18 ವರ್ಷದೊಳಗಿನ ಮಕ್ಕಳಿಗೆ ಮಾರಾಟ ಮಾಡುವಂತಿಲ್ಲ.
ಬೆಂಗಳೂರು: ವಿರಾಟ್ ಪತ್ನಿ ಅನುಷ್ಕಾ ಶರ್ಮಾ ಅವರು ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಎನ್ನುವ ಸುದ್ದಿ ಕೆಲ ತಿಂಗಳಿಂದ ಕೇಳಿ ಬರುತ್ತಲೇ ಇದೆ. ಈ ಬಗ್ಗೆ ಅನುಷ್ಕಾ ಶರ್ಮಾ ಆಗಲೀ, ವಿರಾಟ್ ಕೊಹ್ಲಿ ಆಗಲಿ ಸ್ಪಷ್ಟನೆ ನೀಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹೀಗೊಂದು ಚರ್ಚೆಗಳು ನಡೆಯುತ್ತಲೆ ಇದೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಕಾಣಿಸಿದೆ. ಭಾರತ ಹಾಗೂ ನೆದರ್ಲ್ಯಾಂಡ್ ಮ್ಯಾಚ್ ಬೆಂಗಳೂರಿನಲ್ಲಿ ಇದೆ. ಇದಕ್ಕಾಗಿ ಭಾರತ ತಂಡ ಬೆಂಗಳೂರಿಗೆ ಆಗಮಿಸಿದೆ. ಬೆಂಗಳೂರಿನ ಹೋಟೆಲ್ ಒಂದರಲ್ಲಿ ವಿರಾಟ್ ಉಳಿದುಕೊಂಡಿದ್ದಾರೆ. ಹೋಟೆಲ್ನಲ್ಲಿ ವಿರಾಟ್ ಹಾಗೂ ಅನುಷ್ಕಾ ಕೈ ಕೈ ಹಿಡಿದು ಸಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಗಮನ ಸೆಳೆದಿದೆ.
ಮಂಗಳೂರು: ಪಟಾಕಿ ಮಳಿಗೆ ಹಾಕಲು ಹೊಸ ನಿಯಮಾವಳಿ ಹಾಕಿದ್ದು ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದ ಹುನ್ನಾರ ಎಂದು ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಗಂಭೀರ ಆರೋಪ ಮಾಡಿದ್ದಾರೆ. https://ainlivenews.com/knee-pain-treatment-joint-pain-treatment/ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿ ಮಾಡಲಾಗುತ್ತಿದೆ. ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಅಡ್ಡಿ ಮಾಡುತ್ತಿದ್ದಾರೆ. ಈ ಮೂಲಕ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ವಾಗ್ದಾಳಿ ಮಾಡಿದರು.