ಪಾರ್ಟಿ, ಶಾಪಿಂಗ್ ಮತ್ತು ಆಫೀಸ್ಗಳಲ್ಲಿ ಹೈ ಹೀಲ್ಸ್ ಧರಿಸಲು ಯುವತಿಯರು ಹೆಚ್ಚು ಇಷ್ಟ ಪಡುತ್ತಾರೆ. ಹೀಗಿರುವಾಗ ತುಂಬಾ ಹೊತ್ತು ಹೈ ಹೀಲ್ಸ್ ಧರಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಯಾವೆಲ್ಲಾ ತೊಂದರೆಗಳು ಕಾಣಿಸಿಕೊಳ್ಳಬಹುದು ಎಂಬುದು ಈ ಕೆಳಗಿನಂತಿದೆ. ಎಚ್ಚರವಿರಲಿ. ಹೈ ಹೀಲ್ಸ್ ಧರಿಸಿ ನಿರಂತರ ಓಡಾಡುವುದರಿಂದ ಪಾದಗಳಿಗೆ ಒತ್ತಡ ಉಂಟಾಗುತ್ತದೆ. ಹಿಮ್ಮಡಿ ನೋವು, ಜತೆಗೆ ಕಾಲುಗಳ ನೋವು ಕಾಣಿಸಿಕೊಳ್ಳುತ್ತದೆ. ನಿಮ್ಮ ಮೃದುವಾದ ಪಾದಗಳು ಊದಿಕೊಳ್ಳುತ್ತವೆ ಇದು ಹೆಚ್ಚು ನೋವನ್ನು ಉಂಟು ಮಾಡುತ್ತದೆ. ಆರೋಗ್ಯಕ್ಕೆ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ತಿಳಿಯಿರಿ. ಕಾಲುಗಳಲ್ಲಿ ನೋವು ಹೈ ಹೀಲ್ಸ್ಅನ್ನು ಗಂಟೆಗಳ ಕಾಲ ಧರಿಸುವುದರಿಂದ ಸೊಂಟ, ಬೆನ್ನಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ಕಾರಣದಿಂದ ಸ್ನಾಯುಗಳಲ್ಲಿ ಒತ್ತಡ ಉಂಟಾಗುತ್ತದೆ. ಮೊಣಕಾಲುಗಳು ಮತ್ತು ಸೊಂಟದ ನೋವು ಅತಿರೇಕಕ್ಕೂ ಹೋಗಬಹುದು. ಹಾಗಾಗಿ ಆದಷ್ಟು ಹೈ ಹೀಲ್ಸ್ ಧರಿಸುವುದನ್ನು ತಪ್ಪಿಸಿ. ಮಂಡಿ ನೋವು ಎತ್ತರದ ಹಿಮ್ಮಡಿಯ ಪಾದರಕ್ಷೆಗಳನ್ನು ಧರಿಸುವುದರಿಂದ ಬೆನ್ನು ಮೂಳೆಯ ಮೇಲೆ ಒತ್ತಡ ಉಂಟಾಗುತ್ತದೆ. ಅದು ಮಂಡಿಗಳ ನೋವನ್ನೂ ಉಂಟು…
Author: AIN Author
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ. ಶ್ರೀ ಸೋಮಶೇಖರ್ B.Sc Mob.No.9353488403 ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು. ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು. ಶ್ರೀ ಸೋಮಶೇಖರ್B.Sc ( ವಂಶಪಾರಂಪರಿತ) ಜ್ಯೋತಿಷ್ಯಶಾಸ್ತ್ರ,…
ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ. ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ, 7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ. 7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ. 7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ…
ಸೂರ್ಯೋದಯ: 06.16 AM, ಸೂರ್ಯಾಸ್ತ : 05.51 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಶ್ವಯುಜ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ದ್ವಾದಶಿ 12:35 PM ತನಕ ನಂತರ ತ್ರಯೋದಶಿ ನಕ್ಷತ್ರ: ಇವತ್ತು ಪೂರ್ಣ ಹಸ್ತ ಯೋಗ: ಇವತ್ತು ವಿಷ್ಕುಂಭ05:06 PM ತನಕ ನಂತರ ಪ್ರೀತಿ ಕರಣ: ಇವತ್ತು ತೈತಲೆ 12:35 PM ತನಕ ನಂತರ ಗರಜ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ: 03:00 ನಿಂದ 04:30 ವರೆಗೂ ಗುಳಿಕ ಕಾಲ: 07:30 ನಿಂದ 09:00 ವರೆಗೂ ಅಮೃತಕಾಲ: 05.35 PM to 07.20 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:37 ನಿಂದ ಮ.12:22 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ ರಾಶಿ:…
ಲಂಕಾ ವಿರುದ್ಧ 5 ವಿಕೆಟ್ಗಳ ಗೆಲುವು ಸಾಧಿಸಿರುವ ನ್ಯೂಜಿಲೆಂಡ್ ತಂಡವು ಸೆಮೀಸ್ ಹಾದಿ ಸುಲಭಗೊಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್ನ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಲಂಕಾ ಪಡೆಯು ನ್ಯೂಜಿಲೆಂಡ್ ತಂಡದ ವಿರುದ್ಧ ಸೋತು ಮುಖಭಂಗ ಅನುಭವಿಸಿದೆ. ಶ್ರೀಲಂಕಾ ನೀಡಿದ್ದ 172 ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಕಿವೀಸ್ ಪಡೆ, 5 ವಿಕೆಟ್ಗಳ ಪ್ರಯಾಸದ ಗೆಲುವು ಸಾಧಿಸಿದೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಕಣಕ್ಕಿಳಿದ ಸಿಂಹಳೀಯರ ಕನಸು ಭಗ್ನವಾಗಿದೆ. ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಂಕಾ ಕುಸಲ್ ಪೆರೆರ(51), ಮಹೀಶ ತೀಕ್ಷಣ(38), ದಿಲ್ಶಾನ್ ಮಧುಶಂಖ(19)ರ ಬ್ಯಾಟಿಂಗ್ ನೆರವಿನಿಂದ 46.4 ಓವರ್ಗಳಲ್ಲಿ 171ರನ್ಗಳಿಸಿ ಸರ್ವಪತನ ಕಂಡಿತು. 32.1 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 128 ರನ್ಗಳ ಮಾತ್ರ ಕಲೆ ಹಾಕಿದ್ದ ತಂಡ 150 ರನ್ಗಳಿಗೆ ಸರ್ವಪತನ ಗೊಳ್ಳಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಮಹೇಶ್ ತೀಕ್ಷಣ 10ನೇ ವಿಕೆಟ್ಗೆ ದಿಲ್ಶಾನ್ ಮಧುಶಂಕ ಜೊತೆ ಸೇರಿ 43…
ಬೆಂಗಳೂರು;- ಮಾರಕಾಸ್ತ್ರಗಳಿಂದ ಹೊಡೆದು ರೌಡಿ ಕೊಲೆ ನಡೆದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ಸಹದೇವನನ್ನು (32) ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸಹದೇವ್, ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ಚಹಾ ಕುಡಿಯಲು ಅಂಗಡಿಯೊಂದಕ್ಕೆ ಬಂದಿದ್ದ. ಇದೇ ಸಂದರ್ಭದಲ್ಲಿ ಮೂರು ಬೈಕ್ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು, ಕೊಲೆ ಮಾಡಿ ಪರಾರಿಯಾಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ 2016ರಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದಲ್ಲಿ ಸಹದೇವ್ ಆರೋಪಿಯಾಗಿದ್ದ. ಕೋಣನಕುಂಟೆ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿತ್ತು’ ಎಂದು ತಿಳಿಸಿವೆ. ‘ಸ್ಥಳೀಯ ಪರಿಚಯಸ್ಥರ ಜೊತೆ ಸಹದೇವ್ ಜಗಳ ಮಾಡಿದ್ದನೆಂಬ ಮಾಹಿತಿಯಿದೆ. ಇದೇ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ಇದೆ’ ಎಂದು ಹೇಳಿವೆ.
ಯಲಹಂಕ:- ಮೂರು ದಿನಗಳಿಂದ ಸುರಿಯುತ್ತಿರೊ ಮಳೆಗೆ ಅಪಾರ್ಟ್ಮೆಂಟ್ ಗೆ ಹಾವು ನುಗ್ಗಿದ ಘಟನೆ ಜರುಗಿದೆ. ಕೇಂದ್ರೀಯ ವಿಹಾರದ ನೆಲಮಹಡಿಯ ನೀರಲ್ಲಿ ಕೆರೆ ಹಾವು ಕಾಣಿಸಿಕೊಂಡಿದೆ. ಯಲಹಂಕ ಕೆರೆ ಕೋಡಿ ಬಿದ್ದರೆ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಮುಳುಗಡೆಯಾಗಿದೆ. ವೆಂಕಟಾಲ ಕಡೆಯ ಯಲಹಂಕ ಕೆರೆಕೋಡಿಯ ಮೂಲಕ ಕೆರೆ ಹಾವು ಬಂದಿದೆ. ತಗ್ಗು ಪ್ರದೇಶದಲ್ಲಿ ಕೇಂದ್ರೀಯ ವಿಹಾರ ನಿರ್ಮಾಣ ಆಗಿದ್ದು, ಮಳೆ ಬಂದರೆ ವಿಷಜಂತುಗಳಿಗೆ ಇದು ಸ್ವರ್ಗವಾಗಿದೆ. ಎಲ್ಲಾ ಹಾವು, ಕ್ರಿಮಿಕೀಟ, ಕಪ್ಪೆಗಳು, ಮಳೆ ನೀರಿಂದ ಕೇಂದ್ರಿಯ ವಿಹಾರಕ್ಕೆ ಬಂದಿವೆ. ಮೊನ್ನೆ ಮತ್ತು ಕಳೆದ ರಾತ್ರಿ ಸುರಿದ ಮಳೆಗೆ ಕೆರೆಹಾವು ಕೇಂದ್ರೀಯ ವಿಹಾರಕ್ಕೆ ಆಗಮಿಸಿವೆ. ಮಳೆ ಕಡಿಮೆಯಾದರೆ ಸಹಜವಾಗಿಯೇ ಹಾವು ಚೇಳು ಕಣ್ಮರೆಯಾಗ್ತವೆ. ಮಳೆಗಾಲದಲ್ಲಿ, ಹೆಚ್ಚು ಮಳೆಯಾದರೆ ಮಾತ್ರ ಆತಂಕ ಶುರುವಾಗಿದೆ. ವಯಸ್ಸಾದ ಹಿರಿಯರು, ನಿವೃತ್ತ ನೌಕರರು, ಕೇಂದ್ರ ಸರ್ಕಾರದ ನೌಕರರು ಇಲ್ಲಿಯ ವಾಸಿಗಳಾಗಿವೆ. ಇದೀಗ ಎಲ್ಲರೂ ಹಾವು, ವಿಷಜಂತುಗಳಿಂದ ಭಯಗೊಂಡಿದ್ದಾರೆ.
ಬೆಂಗಳೂರು ;- ಮುನಿರತ್ನ ವಿರುದ್ಧ ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡ್ತಿದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಖಂಡಿಸಿ ಹಾಗು ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ವಿರೋಧಿಸಿ ತಿಂಗಳಾಂತ್ಯಕ್ಕೆ ಮೂರು ದಿನ ಸರ್ಕಾರದ ವಿರುದ್ಧ ಧರಣಿ ನಡೆಸಲಿದ್ದು ಬೆಳಗಾವಿ ಅಧಿವೇಶನದಲ್ಲಿಯೂ ಈ ವಿಚಾರವನ್ನು ಇರಿಸಿಕೊಂಡು ಬಿಜೆಪಿ ಹೋರಾಟ ನಡೆಸಲಿದೆ ಎಂದರು. ಮುನಿರತ್ನ ವಿರುದ್ಧ ಈ ರೀತಿಯ ಸೇಡಿನ ರಾಜಕಾರಣ ಸರಿಯಲ್ಲ. ಆಡಳಿತ ಪಕ್ಷ ನಮ್ಮ ಶಾಸಕ ಮುನಿರತ್ನ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವುದನ್ನು ಖಂಡಿಸುತ್ತೇನೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮಂಜೂರಾಗಿ ಅರ್ಧಂಬರ್ಧ ಕೆಲಸ ಆಗಿ ನಿಲ್ಲಿಸುವ ಮೂಲಕ ಒಂದು ರೀತಿಯ ಗೊಂದಲದ ವಾತಾವರಣ ನಿರ್ಮಾಣ ಮಾಡಿದೆ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಕೊಡಲಿ ಪೆಟ್ಟು ನೀಡಿದೆ ಎಂದು ಆರೋಪಿಸಿದರು.
ಬೆಂಗಳೂರು;- ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ ವಿಚಾರವಾಗಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಬಿಜೆಪಿಯವರಿಗೆ ಆಪರೇಷನ್ ಬಿಟ್ಟರೆ ಬೇರೆ ಇನ್ನೇನಾದರೂ ಗೊತ್ತಿದೆಯಾ?. ಆಪರೇಷನ್ ಒಂದೇ ಗೊತ್ತಿರೋದು. ಜನಕ್ಕೆ ಏನು ಬೇಕೋ ಅದನ್ನು ಮಾಡುವುದು ಗೊತ್ತಿಲ್ಲ ಅವರಿಗೆ. ಭ್ರಷ್ಟಾಚಾರದಲ್ಲಿ ಮುಳುಗಿ ಕೆಲಸ ಇಲ್ಲದೇ ಕೂತಿದ್ದಾರೆ ಇವತ್ತು. ಜನರೇ ತಿರಸ್ಕಾರ ಮಾಡಿದ್ದಾರೆ ಅವರನ್ನು. ಜನರು ಬಿಜೆಪಿ ಮೇಲೆ ನಂಬಿಕೆ ಕಳೆದುಕೊಂಡಾಗ ಈ ತರಹ ಮಾತಾಡೋದು ಸರ್ವೆ ಸಾಮಾನ್ಯ ಎಂದು ಟೀಕಿಸಿದರು. ಜನರ ಮನಸ್ಸನ್ನು ಬೇರೆ ಕಡೆಗೆ ಒಯ್ಯಬೇಕು ಅಂದ್ರೆ ಬಿಜೆಪಿ ಆಪರೇಷನ್ ಹೆಸರೇ ಹೇಳಬೇಕು. ಬಿಜೆಪಿಗೆ ನಮ್ಮ ಗ್ಯಾರಂಟಿಗಳಿಂದ ಆಘಾತ ಆಗಿದೆ. ಆಘಾತ ತಪ್ಪಿಸಿಕೊಳ್ಳಲು ಆಪರೇಷನ್ ಕಮಲದ ಹೆಸರು ಹೇಳ್ತಿದ್ದಾರೆ. ವಿಪಕ್ಷ ನಾಯಕರು ಇದ್ದಾರೋ ಇಲ್ವೋ ಅವರಿಗೆ ಬಿಟ್ಟಿದ್ದು. ಆದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು, ನಮ್ಮ ತಟ್ಟೆಯಲ್ಲಿ ಜಿರಳೆ ಹುಡಿಕಿದರೆ ನಾವೇನು ಮಾಡೋಕಾಗತ್ತೆ? ಎಂದರು. ಡಿ.ಕೆ. ಸುರೇಶ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ,…
ಬೆಂಗಳೂರು;- ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ದೇಶ ಆಳಿ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬ್ರಿಟೀಷರ ವಿರುದ್ಧ ಹೋರಾಡಲು ಸೇವಾದಳ ಕಟ್ಟಲಾಯಿತು. ಸೇವಾ ದಳದ ಕಾರ್ಯಕರ್ತರನ್ನು, ಯಾರೇ ಗಾಂಧಿ ಟೋಪಿ ಹಾಕಿದವರು, ಇವರು ಸೇವಾ ದಳದವರೇ ಎಂದು ಗುರುತಿಸಿಕೊಳ್ಳುತ್ತಾರೆ. ಸೇವಾದಳ ಕಾಂಗ್ರೆಸ್ನ ಆಧಾರಸ್ತಂಬ ಇದ್ದಂತೆ. ಮಹಾತ್ಮಾ ಗಾಂಧಿ ನಾಯಕತ್ವದಲ್ಲಿ ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಟ್ಟರು. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಸೇವಾದಳದ ಕಾರ್ಯಕರ್ತರು ಹುತಾತ್ಮರಾಗಿದ್ದಾರೆ. ಕಾಂಗ್ರೆಸ್ ಮಾತ್ರ ಈ ದೇಶಕ್ಕೆ ಸ್ವಾತಂತ್ರ್ಯ ಕೊಟ್ಟವರು. ಬಿಜೆಪಿಯವರು ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿಲ್ಲ ಎಂದು ಟೀಕಿಸಿದರು. ಬಿಜೆಪಿಯಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಯಾರೊಬ್ಬರೂ ಮಡಿದಿಲ್ಲ. ಆದರೆ, ಅವರು ದೇಶ ಭಕ್ತಿ ಬಗ್ಗೆ ಪುಂಕಾನುಪುಂಕವಾಗಿ ಮಾತನಾಡುತ್ತಾರೆ. ಇವತ್ತು ದೇಶ ಭಕ್ತಿ ಇದ್ದರೆ ಅದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮಾತ್ರ. ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟವರು. ನಾವು ವೈವಿಧ್ಯತೆಯಲ್ಲಿ ಏಕತೆ ಕಾಣುವವರು. ಸಮಗ್ರ ಭಾರತ…