Author: AIN Author

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ನೇರವಾಗಿ ತಿಳಿಸಿತ್ತು ಎಂದು ಡಿ.ವಿ.ಸದಾನಂದಗೌಡ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Yediyurappa) ಪ್ರತಿಕ್ರಿಯೆ ನೀಡಿದರು. ನಗರದಲ್ಲಿ ಮಾತನಾಡಿದ ಅವರು, ಡಿವಿಎಸ್ (Sadananda Gowda) ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಆದರೆ ಸಕ್ರಿಯ ರಾಜಕೀಯದಲ್ಲಿ ಇರ್ತಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ನೇರವಾಗಿ ತಿಳಿಸಿತ್ತು. ಅವರು ಚುನಾವಣೆಗೆ ನಿಲ್ಲಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಹೇಳಿದೆ. ಚುನಾವಣೆಗೆ ನಿಲ್ಲದಂತೆ ಹೈಕಮಾಂಡ್ ನೇರವಾಗಿ ಸೂಚಿಸಿದೆ ಎಂದು ಹೇಳಿದರು. ಪಕ್ಷದ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿಕೆ ಕುರಿತು ಮಾತನಾಡಿ, ಸೋಮಶೇಖರ್ ಬಳಿ ಮಾತಾಡಿದ್ದೇನೆ. ಅವರು ಪಕ್ಷ ಬಿಟ್ಟು ಹೋಗಲ್ಲ. ಅಸಮಾಧಾನ ಇದ್ದರೆ ಮಾತಾಡಿ ಸರಿಪಡಿಸ್ತೇನೆ ಎಂದು ತಿಳಿಸಿದರು.

Read More

ಬೆಂಗಳೂರು: ಕಳೆದ ಒಂದು ವಾರದಿಂದ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ ಮುಂದುವರೆದಿದೆ. ಈ ಬಿಸಿ ಈಗ ಮಲ್ಲೇಶ್ವರಂ ಮಾರ್ಕೆಟ್‌ಗೂ (Malleshwaram Market) ತಟ್ಟಿದ್ದು, ಬೀದಿಬದಿ ವ್ಯಾಪಾರಿಗಳ (Street Vendors) ಗೋಳು ಹೇಳತೀರದಂತಿದೆ ಬೆಂಗಳೂರಿನಲ್ಲಿ (Bengaluru) ಕಳೆದ ಒಂದು ವಾರದಿಂದ ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿರುವ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ ಮಲ್ಲೇಶ್ವರಂ ಮಾರ್ಕೆಟ್‌ಗೂ ಕಾಲಿಟ್ಟಿದೆ. ಮಲ್ಲೇಶ್ವರಂ 8ನೇ ಕ್ರಾಸ್‌ನಲ್ಲಿ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರ ಮಾಡದಂತೆ ಅಂಗಡಿಗಳನ್ನು ಎತ್ತಿಸಲಾಗಿದ್ದು, ವ್ಯಾಪಾರಿಗಳು ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಬೇರೆ ಬೇರೆ ಕಡೆ ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳ ತೆರವು ಆರಂಭಿಸಿರುವ ಬಿಬಿಎಂಪಿ ಬುಧವಾರ ಸಂಜೆ ದಿಢೀರ್ ಅಂತಾ ಮಲ್ಲೇಶ್ವರಂ 8ನೇ ಕ್ರಾಸ್‌ನ ಮಾರ್ಕೆಟ್‌ನಲ್ಲೂ ಕಾರ್ಯಚರಣೆ ಆರಂಭಿಸಿತ್ತು. ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಿಗಳನ್ನು ಪೊಲೀಸರು ಮತ್ತು ಮಾರ್ಷಲ್‌ಗಳ ಸಹಾಯದಿಂದ ತೆರವು ಮಾಡಲಾಯಿತು. ಆರಂಭದಲ್ಲಿ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ಆದರೆ ಪೊಲೀಸರು ದೊಡ್ಡ ಮಟ್ಟದ ವಿರೋಧಕ್ಕೆ…

Read More

ಕಲಬುರಗಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (AKBMS) ಕಲಬುರಗಿ ಜಿಲ್ಲಾ ಯುವ ಘಟಕದ ಸಂಚಾಲಕರಾಗಿ  ನಾರಾಯಣ ಜಹಗೀಧರ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಬಗ್ಗೆ AKBMS ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿಯವರು ಮಾಧ್ಯಮ ಪ್ರಕಟಣೆ ನೀಡಿದ್ದು, ಸಮಾಜದ ಏಳಿಗೆಯಲ್ಲಿ ಪಾಲ್ಗೊಂಡು ಸಂಘಟನೆ ದೃಷ್ಟಿಯಿಂದ ಅವಿರತವಾಗಿ ಶ್ರಮಿಸುವಂತೆ ಸಲಹೆ ನೀಡಿದ್ದಾರೆ..ಜಾಗೀರದಾರ್ ನೇಮಕದ ಬಗ್ಗೆ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಶ್ರೀಧರ್ ಸರಾಫ್  ಸೇರಿದಂತೆ ಅನೇಕ ಪ್ರಮುಖರು ಹಾರೈಸಿದ್ದಾರೆ. 

Read More

ಧಾರವಾಡ: ಪ್ರತಿ ಟನ್ ಕಬ್ಬಿಗೆ 4 ಸಾವಿರ ರೂಪಾಯಿ ಬೆಲೆ ನಿಗದಿ ಹಾಗೂ ಕಬ್ಬು ಬೆಳೆ ವಿಮೆ ಜಾರಿಗೆ ಅಗ್ರಹಿಸಿ, ಧಾರವಾಡದಲ್ಲಿ ಕಬ್ಬು ಬೆಳೆಗಾರರ ರೈತರು ಕೂಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ಹೊರ ಹಾಕಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆ ಹಾಗೂ ರೈತ ಹೋರಾಟಗಾರ ಕೂಡಿಹಳ್ಳಿ ಚಂದ್ರಶೇಖರ ಅವರ ನೇತೃತ್ವದಲ್ಲಿ, ನಗರದ ಮುರುಘಾಮಠದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ರಾಜ್ಯದಲ್ಲಿ ಬರಗಾಲ ಬಿದಿದ್ದು, ರೈತರು ಬಿದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ರಾಜ್ಯ ಕಾಂಗ್ರೆಸ್ ಸಚಿವರುಗಳು ಪಂಚ್ ರಾಜ್ಯಗಳ ಚುನಾವಣೆ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ. ಇಂತವರಿಗೆ ಅಧಿಕಾರ ಅಷ್ಟೇ ಮುಖ್ಯ ರಾಜ್ಯ ಜನತೆಯ ಕಷ್ಟಗಳಲ್ಲ. ಕಬ್ಬು ಬೆಳೆಗಾರರು ಮಳೆ ಇಲ್ಲದೆ ಪರದಾಡುತ್ತಿದ್ದಾರೆ. ಪಂಪಸೆಟ್‌ಗಳಿಗೆ ಸರಿಯಾಗಿ ಸಮರ್ಪಕ ವಿದ್ಯುತ್‌ನ್ನು ಸರ್ಕಾರ ನೀಡುತ್ತಿಲ್ಲ. ಇದರಿಂದಾಗಿ ಹಲವು ಕಬ್ಬು ಬೆಳೆಗಾರರ…

Read More

ಧಾರವಾಡ: ಬ್ಯಾಂಕ್ ಅಧಿಕಾರಿಗಳ ಕಿರುಕುಳದಿಂದ ಮಹದೇವಪ್ಪ ಜಾವೂರ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಸಾಲಾ ಮನ್ನಾ ಸೇರಿ ಕುಟುಂಬಕ್ಕೆ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಧಾರವಾಡದಲ್ಲಿ ರೈತರು ಬೀದಿಗೆ ಇಳಿದು ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನೇತೃತ್ವದಲ್ಲಿ ನಗರದ ಕಲಾಭವನದಿಂದ ಜಿಲ್ಲಾಧಿಕಾರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅನ್ನದಾತರು ರಾಜ್ಯ ಸರ್ಕಾರದ ವಿರುದ್ಧ, ಬ್ಯಾಂಕ್ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳದ ಮಹದೇವಪ್ಪ ಜಾವೂರ ರೈತ ಕೆವಿಜಿ ಬ್ಯಾಂಕನ ಅಧಿಕಾರಿಗಳ ಕಿರುಕುಳದಿಂದ ಆತ್ಮಹ್ಯೆ ಮಾಡಿಕೊಂಡಿದ್ದಾರೆ. ಕೆವಿಜಿ ಬ್ಯಾಂಕನಲ್ಲಿ ಮಹದೇವಪ್ಪ ಅವರು ಸಾಲ ಹೊಂದಿದ್ದರು. ಆದರೆ ಈಗ ಬರಗಾಲ ಬಿದಿದ್ದು, ರೈತನ ಬದುಕು ಕಷ್ಟಕರವಾಗಿದೆ. ಇಂತಹ ಸಮಯದಲ್ಲಿ ಬ್ಯಾಂಕ ಅಧಿಕಾರಿಗಳು ರೈತರಿಗೆ ಸಾಲ ಮರುಪಾವತಿ ಹೆಸರಿನಲ್ಲಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ರೈತರಿಗೆ…

Read More

ಬೆಂಗಳೂರು: ಬಿಜೆಪಿಯಿಂದ ಮತ್ತೆ ಆಪರೇಷನ್​ ಕಮಲ ಪ್ರಯತ್ನ ವಿಚಾರವಾಗಿ ಮಾತನಾಡಿದ ಸಂಸದ ಡಿಕೆ ಸುರೇಶ್, ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೆ ಏನಾದರೂ ಗೊತ್ತಿದೆಯಾ? ಎಂದು ಸಂಸದ ಡಿ.ಕೆ.ಸುರೇಶ್‌ ಬಿಜೆಪಿ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಜನರಿಗೆ ಏನು ಬೇಕೋ ಅದನ್ನು ಮಾಡುವುದು ಬಿಜೆಪಿಗೆ ಗೊತ್ತಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿದ್ದರಿಂದ ಇವತ್ತು ಕೆಲಸ ಇಲ್ಲದೆ ಕೂತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ಆಘಾತ ಆಗಿದೆ. ಆಘಾತ ತಪ್ಪಿಸಿಕೊಳ್ಳಲು ಆಪರೇಷನ್ ಕಮಲದ ಹೆಸರು ಹೇಳುತ್ತಿದ್ದಾರೆ ಎಂದರು. ವಿಪಕ್ಷ ನಾಯಕರು ಇದ್ದಾರೋ ಇಲ್ವೋ ಅವರಿಗೆ ಬಿಟ್ಟಿದ್ದು. ಆದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು ನಮ್ಮ ತಟ್ಟೆಯಲ್ಲಿ ಜಿರಳೆ ಹುಡಿಕಿದೇ ನಾವೇನು ಮಾಡಲು ಆಗುತ್ತದೆ ಎಂದರು.

Read More

ವಿಜಯನಗರ: ಹೊಸಪೇಟೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಮದುವೆ ಆಮಂತ್ರಣ ಹಂಚುವ ಮೂಲಕ ಮಾಜಿ ಸಂಸದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಮಾಜಿ ಸಚಿವ ಶ್ರೀ ರಾಮುಲು ಪುತ್ರಿ ಮದುವೆ ಆಮಂತ್ರಣವನ್ನು ಮಾಜಿ ಸಂಸದೆ ಜೆ. ಶಾಂತ  ಹಂಚಿದ್ದಾರೆ. ಮದುವೆಯ ಆಮಂತ್ರಣ ಪತ್ರ ಹಂಚೋದ್ರ ಜತೆಗೆ ಮದುವೆಗೆ ಬನ್ನಿ ಅಂತ ಮೈಕ್ ನಲ್ಲೇ ಆಮಂತ್ರಣ ಕೊಟ್ಟಿದ್ದಾರೆ. ನಗರಸಭೆ ಸದಸ್ಯರು, ಮಾಜಿ ಸದಸ್ಯರು, ನಗರಸಭೆ ಸಿಬ್ಬಂದಿಗೆ ಆಮಂತ್ರಣ ಪತ್ರ ಹಂಚಿಕೆ ಮಾಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ನಗರಸಭೆಯಲ್ಲಿ ಮದುವೆ ಆಮಂತ್ರಣ ಹಂಚಿಕೆ ಮಾಡಲಾಗಿದ್ದು, ಇದ್ದರಿಂದ ಶಿಷ್ಟಾಚಾರ ಉಲ್ಲಂಘನೆ ಮಾಡಿದಂತಾಗಿದೆ.

Read More

ಬೆಂಗಳೂರು: ಟೀ ಕುಡಿಯಲು ಬೇಕರಿ ಬಳಿ ಬಂದಿದ್ದ ರೌಡಿಶೀಟರ್‌ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ (Bengaluru) ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ. ಸಹದೇವ್ ಕೊಲೆಯಾದ ರೌಡಿಶೀಟರ್. ರಾತ್ರಿ 9:30 ರ ಸುಮಾರಿಗೆ ಸಹದೇವ್‌ ಹತ್ಯೆಯಾಗಿದೆ. ಈತ ಕೋಣನಕುಂಟೆ ಠಾಣೆ ವ್ಯಾಪ್ತಿಯ ರೌಡಿಶೀಟರ್‌ ಆಗಿದ್ದ. ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಟೀ ಕುಡಿಯಲು ಬೇಕರಿ ಬಳಿ ರೌಡಿಶೀಟರ್‌ ಸಹದೇವ್‌ ಬಂದಿದ್ದ. ಈ ವೇಳೆ ಮೂರು ಬೈಕ್‌ನಲ್ಲಿ ಬಂದಿದ್ದ ಆರು ಮಂದಿ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.

Read More

ಬೆಂಗಳೂರು: ರಾಜಕೀಯ ಬೆಳವಣಿಗೆಯೊಂದರಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ  (Tejaswi Surya) ಅವರು ಇಂದು ದಿಢೀರ್ ಆಗಿ ಭೇಟಿಯಾಗಿದ್ದಾರೆ. ಈ ಸಂಬಂಧ ಡಿಕೆಶಿ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದಾರೆ. ಜೊತೆಗೆ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಅವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದರು ಎಮದು ಬರೆದುಕೊಂಡಿದ್ದಾರೆ.

Read More

ಬೆಂಗಳೂರು: ಆಮ್ ಆದ್ಮಿ ಪಕ್ಷವು ಕಳೆದ ಮೂರು ದಿವಸಗಳ ಹಿಂದೆ ಪತ್ರಿಕಾಗೋಷ್ಠಿಯನ್ನು ನಡೆಸಿ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಯ 140 ಕೋಟಿ ಬೃಹತ್ ಹಗರಣವನ್ನು ಬಯಲು ಗೆಳೆದಿತ್ತು ಈ ಸಂಬಂಧ 330 ಪುಟಗಳ ದಾಖಲೆಯನ್ನು ಸಹ ಬಹಿರಂಗಗೊಳಿಸಿತ್ತು. ಅಕ್ರಮ ಕೋವಿಡ್ ಟೆಸ್ಟ್ ಗಳನ್ನು ಮಾಡಿ ನೂರಾರು ಕೋಟಿ ಅಕ್ರಮ ಅವ್ಯವಹಾರಗಳನ್ನು ನಡೆಸಿದ ಹಗರಣವನ್ನು ಬಯಲು ಮಾಡಲಾಗಿತ್ತು. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ. ಟಿ. ನಾಗಣ್ಣ “ಪಕ್ಷದ ಕಾನೂನು ಘಟಕವು ಈ ಬೃಹತ್ ಹಗರಣದ ರೂವಾರಿ ಹಾಗೂ ಪ್ರಮುಖ ಆರೋಪಿ ಅಂದಿನ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಸುಧಾಕರ್, ಕಿದ್ವಾಯಿ ಗ್ರಂಥೀ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ. ರಾಮಚಂದ್ರ ಹಾಗೂ ಬಿಎಂಎಸ್ ಸಂಸ್ಥೆಯ ಮಾಲೀಕ ಎಸ್ ಪಿ ರಕ್ಷಿತ್ ರವರ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಐಸಿಎಂಆರ್) ದೂರನ್ನು ನೀಡಲಾಗಿದೆ. ಈ ಕೂಡಲೇ ಕಿದ್ವಾಯಿ ಸ್ಮಾರಕ ಗ್ರಂಥಿ ಕ್ಯಾನ್ಸರ್ ಆಸ್ಪತ್ರೆ ಹಾಗೂ ಆರೋಪಿತ…

Read More