ದೊಡ್ಡಬಳ್ಳಾಪುರ: ಅಂಗನವಾಡಿ ಕಟ್ಟಡ ಶೀಥಲಾವಸ್ಥೆ ಹಂತಕ್ಕೆ ತಲುಪಿದ್ದು, ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಹಣ ಹಣ ಮಂಜೂರಾಗಿದ್ದರು ಸಹ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆ ಹಂತಕ್ಕೆ ತಲುಪಿದ್ದು, ಕಳೆದ 4 ನಾಲ್ಕು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.15 ರಿಂದ 20 ಮಕ್ಕಳು ಅಂಗನವಾಡಿ ಕೇಂದ್ರದಲ್ಲಿದ್ದು ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಬೇಕಾದ ಸೌಲಭ್ಯಗಳ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ 2022 ರಲ್ಲಿ ಖನಿಜ ಪ್ರತಿಷ್ಠಾನ ನಿಧಿ ಯೋಜನೆಯಡಿ 10 ಲಕ್ಷ ಮತ್ತು ನರೇಗಾ ಯೋಜನೆಯಡಿ 05 ಲಕ್ಷ ಹಣ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಮಂಜೂರಾಗಿದೆ. ಆದರೆ ಮಂಜುರಾತಿಯಾಗಿ ವರ್ಷಗಳೆ ಕಳೆದರು ಸಂಭಂದಿಸಿದ ಅಧಿಕಾರಿಗಳು ಗಮನ ಅರಿಸದೆ ನಿರ್ಲಕ್ಷ್ಯ ತೋರಿದ್ದಾರೆ. ‘ಕಟ್ಟಡ ನೆಲಸಮ ಮಾಡುವಂತೆ ಗ್ರಾಮ ಪಂಚಾಯ್ತಿಗೆ ಆದೇಶ’ ಶೀಥಿಲಾವಸ್ಥೆ ಹಂತಕ್ಕೆ ತಲುಪಿರುವ ಅಂಗನವಾಡಿ ಕಟ್ಟಡವನ್ನು ನೆಲಸಮ ಮಾಡುವಂತೆ…
Author: AIN Author
ಕಲಬುರಗಿ: ಕಲಬುರಗಿಯಲ್ಲಿ ನಡೆದ KEA ಪರೀಕ್ಷಾ ಅಕ್ರಮ ಪ್ರಕರಣದ ಕಿಂಗ್ ಪಿನ್ RD ಪಾಟೀಲ್ ಬಲಗೈ ಬಂಟರಿಬ್ಬರನ್ನ ಪೋಲೀಸರು ಬಂಧಿಸಿದ್ದಾರೆ RD ಎಸ್ಕೇಪ್ ಆದ ನಂತ್ರ ಮಹಾರಾಷ್ಟ್ರಕ್ಕೆ ತೆರಳಲು ಇಬ್ಬರು ಆಪ್ತರು ಸೊಲ್ಲಾಪುರದ ವರೆಗೆ ಕಾರಲ್ಲಿ ಡ್ರಾಪ್ ಮಾಡಿದ್ರು ಎನ್ನಲಾಗಿದೆ.ಹೀಗಾಗಿ ಕಿಂಗ್ ಪಿನ್ ಗೆ ಸಹಕಾರ ನೀಡಿದ ಆರೋಪದ ಹಿನ್ನಲೆ ರವಿ ಸೇರಿದಂತೆ ಇಬ್ಬರು ಆರೋಪಿಗಳನ್ನ ಪೋಲೀಸರು ಲಾಕ್ ಮಾಡಿದ್ದಾರೆ.
ಬೆಂಗಳೂರು: ಕೆಲಸಕ್ಕಾಗಿ ಉದ್ಯಮಕ್ಕೆ ಹೋಗುವ ಹೆಣ್ಣುಮಕ್ಕಳು ಎಷ್ಟೇ ಕಾಳಜಿಯಿಂದ ಎಚ್ಚರ ವಹಿಸಿ ಕೆಲಸ ಮಾಡಿದರು ಸಾಕಾಗುವುದಿಲ್ಲ. ಅವರು ಧರಿಸುವ ಬಟ್ಟೆ, ತಲೆ ಕೂದಲು, ವೇಲುಗಳೇ ಅವರಿಗೆ ಅಪಾಯ ತಂದು ಅವರ ಸಾವಿಗೂ ಕಾರಣವಾಗಬಹುದು. ಹೌದು, ರಾಜ್ಯದ ರಾಜಧಾನಿ ಬೆಂಗಳೂರಿನ ಒಂದು ಕಾರ್ಖಾನೆಯಲ್ಲಿ ಅಂತಹುದೇ ಘಟನೆ ನಡೆದಿದೆ. ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ (Paint Mixer) ಕೂದಲು ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ (Sri Paints Factory) ಇಂತಹ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ. ಇದೊಂದು ಪೈಂಟ್ ಮಿಕ್ಸಿಂಗ್ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್‌ನಲ್ಲಿ ಪೌಡರ್ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಘಟನೆ ವಿವರ ಗ್ರೈಂಡರ್‌ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಸತತ ಮಳೆಗೆ ಭಾರಿ ಅವಘಡ ಸೃಷ್ಟಿಯಾಗಿದೆ.. ಚಿತ್ತಾಪುರ ತಾಲೂಕಿನ ಅಲ್ಲೂರು ಕೆ ಗ್ರಾಮದಲ್ಲಿ ರೈತ ನಾಗರೆಡ್ಡಿಗೆ ಸೇರಿದ ಅಪಾರ ಪ್ರಮಾಣದ ಕಬ್ಬು ಸಂಪೂರ್ಣ ನೆಲಕಚ್ಚಿದೆ.. ಸಾಲಸೂಲ ಮಾಡಿ ಬೆಳೆದಿದ್ದ ಕಬ್ಬು ಮಳೆಗೆ ಹಾಳಾದ ಪರಿಣಾಮ ಸರ್ಕಾರ ನೆರವಿಗೆ ಬರಬೇಕೆಂದು ಅನ್ನದಾತ ಆಗ್ರಹಿಸಿದ್ದಾನೆ.
ಬೆಂಗಳೂರು: ಉಸಿರುಗಟ್ಟಿಸಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೂಡ್ಲು ಬಳಿಯ ನಂಜಾರೆಡ್ಡಿ ಲೇಔಟ್ ನಲ್ಲಿ ನಡೆದಿದೆ. ಅನುರಾಧ ಅಲಿಯಾಸ್ ಅಲೀಮಾ ಅಸಹಜ ರೀತಿಯಲ್ಲಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ರಾಜಶೇಖರ ಮಹಿಳೆಯನ್ನು ಕೊಲೆ ಮಾಡಿದ್ದ ಆರೋಪಿ, ಆರಂಭದಲ್ಲಿ ಈ ಘಟನೆ ಸಂಬಂಧಿಸಿ ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೇ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂಬ ಸಾವಿನ ಸಿಕ್ರೇಟ್ ಬಯಲಾಗಿದೆ. ರಾಜಶೇಖರನ ಜೊತೆ ಅನುರಾಧ ಎರಡನೇ ಮದುವೆಯಾಗಿದ್ದಳು. ರಾಜಶೇಖರಗೆ ಬೇರೊಬ್ಬ ಮಹಿಳೆ ಜೊತೆಗೆ ಸಂಬಂಧ ಇದೆ ಅನ್ನೋ ವಿಚಾರಕ್ಕೆ ಗಲಾಟೆ ತೀವ್ರಗೊಂಡು, ಕೈಗಳಿಂದ ಕುತ್ತಿಗೆ ಹಿಸುಕಿ ನಂತರ ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ಬಳಿಕ ಅವನೇ ಮಹಿಳೆಯನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಪೊಲೀಸ್ ಠಾಣೆಗೆ ಅಗಮಿಸಿದ ಆರೋಪಿ ಆತ್ಮಹತ್ಯೆ ಎಂದು ಪೊಲೀಸರನ್ನು ನಂಬಿಸಿದ್ದಾನೆ. ಇದರ ಪ್ರಕಾರ ಪರಪ್ಪನ ಅಗ್ರಹಾರ ಪೊಲೀಸರು ಆತ್ಮಹತ್ಯೆ ಪ್ರಕರಣ ಎಂದು ದಾಖಲು ಮಾಡಿಕೊಂಡಿದ್ದರು. ಮರಣೋತ್ತರ ಪರೀಕ್ಷೆ ವರದಿ…
ಹುಬ್ಬಳ್ಳಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ತಮಿಳುನಾಡಿನ ನಾಗರಕೋಯಿಲ್ ಮತ್ತು ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ಮೂರು ಟ್ರಿಪ್‌ಗಳಿಗಾಗಿ ವಿಶೇಷ ರೈಲುಗಳನ್ನು ಓಡಿಸಲು ದಕ್ಷಿಣ ರೈಲ್ವೆ ವಲಯವು ನಿರ್ಧರಿಸಿದೆ. ಈ ಕುರಿತು ಬುಧವಾರ ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ನ.7, 14 ಮತ್ತು 21ರಂದು ನಾಗರಕೋಯಿಲ್-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (06083) ರೈಲು ಸಂಜೆ 7:35 ಗಂಟೆಗೆ ನಾಗರ ಕೋಯಿಲ್‌ನಿಂದ ಹೊರಟು ಮರುದಿನ ಮಧ್ಯಾಹ್ನ 12:40 ಗಂಟೆಗೆ ಬೆಂಗಳೂರು ತಲಿಪಲಿದೆ. ಅದೇರೀತಿ ನ. 8, 15ಮತ್ತು22ರಂದು ಎಸ್‌ಎಂವಿಟಿ ಟರ್ಮಿನಲ್‌ಬೆಂಗಳೂರು-ನಾಗರಕೋಯಿಲ್ ವಿಶೇಷ ಎಕ್ಸ್‌ಪ್ರೆಸ್ (06084) ರೈಲು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 6:10 ಗಂಟೆಗೆ ನಾಗರಕೋಯಿಲ್ ತಲುಪಲಿದೆ. ಈ ವಿಶೇಷ ರೈಲುಗಳು ವಲ್ಲಿಯೂರ್, ತಿರುನೆಲ್ವೇಲಿ, ಕೋವಿಲ್ಪಟ್ಟಿ, ಸತೂರ್, ವಿರುಧುನಗರ, ಮಧುರೈ, ದಿಂಡಿಗಲ್, ತಿರುಚ್ಚಿರಾಪಳ್ಳಿ, ಕರೂರ, ನಮಕ್ಕಲ್, ಸೇಲಂ, ಮೊರಪ್ಪೂರ್, ತಿರುಪತ್ತೂರು, ಬಂಗಾರಪೇಟೆ, ಕೃಷ್ಣರಾಜಪುರಂಗಳಲ್ಲಿ ನಿಲುಗಡೆಗೊಳ್ಳಲಿವೆ. ವಿಶೇಷ ರೈಲುಗಳಲ್ಲಿ ಒಂದು ಎಸಿ ಟು-1ಟೈರ್,…
ಮಡಿಕೇರಿ: ವಿವಾಹಿತ ಮಹಿಳೆಯಿಂದ ಹಾನಿಟ್ಯ್ರಾಪ್‌ಗೆ ಒಳಗಾದ ನಿವೃತ್ತ ಯೋಧ ಡೆತ್ ನೋಟ್ ಬರೆದಿಟ್ಟು ಮಂಗಳವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ಇದೀಗ ಅವರ ಮನೆ ಸಮೀಪದ ಪಂಪಿನ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ಮಾಜಿ ಯೋಧನನ್ನು ಸಂದೇಶ್ ಎಂದು ಗುರುತಿಸಲಾಗಿದೆ. ಮಾಜಿ ಯೋಧ ಕಣ್ಮರೆಯಾಗಿ 30 ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿದೆ. ಬುಧವಾರ ರಾತ್ರಿ 8:20 ರ ಸುಮಾರಿಗೆ ಕೆರೆಯ 40 ಆಡಿ ಆಳದಲ್ಲಿ ಸಂದೇಶ್ ಮೃತದೇಹ ಪತ್ತೆಯಾಗಿದೆ. ಬೆಳಗ್ಗೆಯಿಂದಲೂ ಅಗ್ನಿಶಾಮಕ ದಳ, ಸ್ಥಳೀಯರು ಕೆರೆಯಲ್ಲಿ ಹುಡುಕಾಟ ನಡೆಸಿದ್ದರು. ಯಾವುದೇ ಪ್ರಯೋಜನ ಆಗದೇ ಇದ್ದ ಸಂದರ್ಭದಲ್ಲಿ ಮಲ್ಪೆಯ ಹೆಸರಾಂತ ಮುಳುಗು ತಜ್ಞ ಈಶ್ವರ್ ಮತ್ತು ತಂಡದವರನ್ನು ಕರೆಸಿ ಮೃತದೇಹದ ಶೋಧ ಕಾರ್ಯವನ್ನು ಮಾಡಲಾಗಿತ್ತು. 1 ಗಂಟೆಗೂ ಅಧಿಕ ಕಾಲ ಕರೆಯಲ್ಲಿ ಆಕ್ಸಿಜನ್‌ನೊಂದಿಗೆ ಶೋಧ ಕಾರ್ಯ ನಡೆಸಲಾಗಿದ್ದು, ಈ ವೇಳೆ ಮಾಜಿ ಯೋಧನ ಮೃತ ದೇಹ ಪತ್ತೆಯಾಗಿದೆ. ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದ ಮಾಜಿ ಸೈನಿಕ ಸಂದೇಶ್ ತನ್ನ ಸಾವಿಗೆ ಜೀವಿತ, https://ainlivenews.com/knee-pain-treatment-joint-pain-treatment/ ಆಕೆಯನ್ನು ಬೆಂಬಲಿಸುತ್ತಿದ್ದ ಪೊಲೀಸ್ ಸತೀಶ್…
ಕಲಬುರಗಿ: ಕೆಇಎ ಪರೀಕ್ಷೆ ಅಕ್ರಮದ ಆರೋಪಿ R.D.ಪಾಟೀಲ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಕಲಬುರಗಿ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ. ಈ ಹಿಂದೆ ಕಲಬುರಗಿ ಜಿಲ್ಲಾ 1ನೇ ಸತ್ರ ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ರುದ್ರಗೌಡ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದ. ಹೊರಗಡೆ ಇದ್ದುಕೊಂಡೇ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ. ಇಂದು ಜಾಮೀನು ಸಿಗದಿದ್ರೆ ಕೋರ್ಟ್ಗೆ ರುದ್ರಗೌಡ ಶರಣಾಗುವ ಸಾಧ್ಯತೆ ಇದೆ.
ಬೆಂಗಳೂರು: ಚುನಾವಣಾ ರಾಜಕೀಯದಿಂದ ಡಿ.ವಿ.ಸದಾನಂದಗೌಡ ನಿವೃತ್ತಿ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಂಸದ ಡಿ.ವಿ.ಸದಾನಂದಗೌಡಗೆ ಹೈಕಮಾಂಡ್ ಸೂಚನೆ ಕೊಟ್ಟಿದೆ. ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿ ಇರಲು ಹೈಕಮಾಂಡ್ ಹೇಳಿದೆ. ಚುನಾವಣೆಗೆ ನಿಲ್ಲದಂತೆ ಸದಾನಂದಗೌಡಗೆ ಹೈಕಮಾಂಡ್ ಸೂಚಿಸಿದೆ ಎಂದು ತಿಳಿಸಿದರು.
ಮಧುಗಿರಿ;- ಕೇಂದ್ರದ ಬಿಜೆಪಿಗೆ ಕರ್ನಾಟಕದ ಬಗ್ಗೆ ಕೇಂದ್ರಕ್ಕೆ ಕಾಳಜಿ ಇಲ್ಲ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಸರ್ಕಾರ ರಾಜ್ಯದ ರೈತರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕೇಂದ್ರದ ಬರ ಅದ್ಯಯನ ತಂಡ ರಾಜ್ಯದಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿ ವರದಿ ನೀಡಿದ ನಂತರವೂ ಕೇಂದ್ರದಿಂದ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ’ ಎಂದರು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ರಾಜ್ಯದ ರೈತರ ಕಷ್ಟಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ರಾಜಕೀಯಕ್ಕಾಗಿ ಬಿಜೆಪಿ ಬರ ಅಧ್ಯಯನ ಮಾಡುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಹಣ ಕೊಡಿಸುವ ಕೆಲಸ ಮಾಡಬೇಕು ಎಂದರು. ಶೇ 75 ಮಳೆ ಕುಂಠಿತವಾಗಿದೆ. ₹37 ಸಾವಿರ ಕೋಟಿ ನಷ್ಟವಾಗಿದೆ. ಕೆಂದ್ರ ಸರ್ಕಾರಕ್ಕೆ ₹17 ಸಾವಿರ ಕೋಟಿ ನಷ್ಟ ಬರಿಸಿ ಕೊಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೆ ಹಣ ಬಿಡುಗಡೆ ಮಾಡಿಲ್ಲ. ರಾಜ್ಯದ ಬರ ಪರಿಸ್ಥಿತಿ ವಿವರಿಸಲು ಕೃಷಿ ಸಚಿವ ಕೃಷ್ಣ ಬೈರೇಗೌಡ…