ದೇಹದ ಅಂಗಗಳನ್ನು ಜೋಪಾನ ಮಾಡಿಕೊಳ್ಳುವುದು ನಮ್ಮದೇ ಜವಾಬ್ದಾರಿ. ಒಂದು ಬಾರಿ ಅಂಗ ಊನವಾದರೆ ಮತ್ತೆಂದೂ ಮೊದಲಿನಂತಾಗದು. ಕೆಲವೊಂದು ಸೂಕ್ಷ್ಮ ಅಂಗಗಳನ್ನು ಆರೋಗ್ಯವಾಗಿರಿಸಿಕೊಳ್ಳುವುದು ಅಗತ್ಯವಾಗಿರುತ್ತದೆ. ಅಂತಹ ಅಂಗಗಳಲ್ಲಿ ಕಿವಿ ಕೂಡ ಒಂದು. ಸಾಮಾನ್ಯವಾಗಿ ಕಿವಿಗೆ ನೋವು ಬರುವುದು ಕುಗ್ಗೆ ಕಟ್ಟಿದಾಗ, ಕಿವಿಯ ಸೋಂಕು, ವಸಡಿನ ಸಮಸ್ಯೆ ಇದ್ದಾಗ, ಸೈನಸ್ ಇದ್ದಾಗಲೂ ಕಿವಿ ನೋವು ಬರುತ್ತದೆ. ಅಂತಹ ಸಂದರ್ಭದಲ್ಲಿ ತಕ್ಷಣ ಆರೈಕೆ ಮಾಡಿಕೊಳ್ಳಬೇಕು. 2, 3 ದಿನವಾದರೂ ಗುಣವಾಗದಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು. ಹಾಗಾದರೆ ಕಿವಿ ನೋವು ಆರಂಭವಾದರೆ ಯಾವೆಲ್ಲಾ ಮನೆಮದ್ದು ಮಾಡಬಹುದು ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ. ಬೆಳ್ಳುಳ್ಳಿ ಕಿವಿ ನೋವಿಗೆ ಬೆಳ್ಳುಳ್ಳಿ ಅತ್ತುತ್ತಮ ಪರಿಹಾರವನ್ನು ನೀಡುತ್ತದೆ. ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿ ಹೊಂದಿದ್ದು ನೋವನ್ನು ಶಮನಮಾಡುವ ಗುಣ ಹೊಂದಿದೆ. ಕಿವಿ ನೋವಿಗೆ ಬೆಳ್ಳುಳ್ಳಿಯನ್ನು ಬೇಯಿಸಿ ಚೆನ್ನಾಗಿ ಜಜ್ಜಿ ಚಿಟಿಕೆ ಉಪ್ಪು ಸೇರಿಸಿ ಅದನ್ನು ಒಂದು ಹತ್ತಿಯ ಬಟ್ಟೆಯಲ್ಲಿ ಕಟ್ಟಿಕೊಳ್ಳಿ. ನಂತರ ಅದನ್ನು ನೊಯುತ್ತಿರುವ ಕಿವಿಯ ಮೇಲೆ ಇಟ್ಟುಕೊಳ್ಳಿ. 3 ರಿಂದ…
Author: AIN Author
ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ. ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ, 7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ. 7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ. 7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ…
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ…
ಗೋವತ್ಸ ದ್ವಾದಶೀ, ರಮಾ ಏಕಾದಶಿ ಸೂರ್ಯೋದಯ: 06.16 AM, ಸೂರ್ಯಾಸ್ತ : 05.51 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಶ್ವಯುಜ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಏಕಾದಶಿ 10:41 AM ತನಕ ನಂತರ ದ್ವಾದಶಿ ನಕ್ಷತ್ರ: ಇವತ್ತು ಉತ್ತರ ಫಾಲ್ಗುಣಿ 09:57 PM ತನಕ ನಂತರ ಹಸ್ತ ಯೋಗ: ಇವತ್ತು ವೈಧೃತಿ 04:49 PM ತನಕ ನಂತರ ವಿಷ್ಕುಂಭ ಕರಣ: ಇವತ್ತು ಬಾಲವ 10:41 AM ತನಕ ನಂತರ ಕೌಲವ 11:42 PM ತನಕ ನಂತರ ತೈತಲೆ ರಾಹು ಕಾಲ: 01:30 ನಿಂದ 03:00 ವರೆಗೂ ಯಮಗಂಡ: 06:00 ನಿಂದ 07:30 ವರೆಗೂ ಗುಳಿಕ ಕಾಲ: 09:00 ನಿಂದ 10:30 ವರೆಗೂ ಅಮೃತಕಾಲ: 01.58 PM to 3.44 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:37 ನಿಂದ ಮ.12:22 ವರೆಗೂ ಮೇಷ ರಾಶಿ: ಸಂಬಳಕ್ಕಾಗಿ ವಾಗ್ವಾದ, ವ್ಯಾಪಾರ ಮಧ್ಯಮ,ಹಣದ ವಿಷಯದಲ್ಲಿ ಸಾಮಾನ್ಯ ದಿನವಾಗಿದೆ.…
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆಯುವ ಈ ಬಾರಿಯ ಚಳಿಗಾಲದ ಅಧಿವೇಶನವು ಮಾದರಿ, ಸರ್ವರೂ ಮೆಚ್ಚುವ ಹಾಗೂ ಜನಸಾಮಾನ್ಯರಿಗೆ ಹೆಚ್ಚು ಪ್ರಯೋಜನವಾಗುವಂತಹಾ ಹಾಗೂ ಬಹುತೇಕ ಉತ್ತರ ಕರ್ನಾಟಕದ ಜನರಿಗೆ ಸಮಾಧಾನ, ಸಂತೃಪ್ತಿ ತರುವ ಅಧಿವೇಶನ ಆಗಲಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸುವರ್ಣ ವಿಧಾನಸೌಧದಲ್ಲಿ ಸಿದ್ಧತೆ ಪರಿಶೀಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವರು, ಶಾಸಕರಿಗೆ ಹಾಗೂ ವೀಕ್ಷಣೆಗೆ ಬರುವ ಜನಸಾಮಾನ್ಯರಿಗೆ ಎಲ್ಲ ರೀತಿ ವ್ಯವಸ್ಥೆ ಮಾಡಲಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ಪಾಸ್ ತೆಗೆದುಕೊಳ್ಳಲು ಕಷ್ಟ ಆಗಬಾರದು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಒಳಗೆ ಬರಲು ಪಾಸಿನ ವ್ಯವಸ್ಥೆ ಮಾಡಲಾಗಿದೆ. ಇನ್ನು ಅಧಿವೇಶನ ನಡೆಯುವ ದಿನಾಂಕವನ್ನು ಶೀಘ್ರವೇ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಅಧಿವೇಶನ ಯಾವಾಗ ಬೇಕಾದರೂ ಆಗಲಿ, ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ಒಟ್ಟಾರೆ ಕಡಿಮೆ ಬಜೆಟ್ನಲ್ಲಿ ಅರ್ಥಪೂರ್ಣ ಅಧಿವೇಶನಕ್ಕೆ ಎಲ್ಲ ಸಿದ್ಧತೆ ಕೈಗೊಂಡಿದ್ದೇವೆ. ಶಾಸಕರು ಅಧಿವೇಶನಕ್ಕೆ ಗೈರಾಗುವ ವಿಚಾರವಾಗಿ…
ಬೆಂಗಳೂರು ;- ಸರ್ಕಾರ ಪತನಕ್ಕೆ ಆಪರೇಷನ್ ಯಾಕೆ ಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈ ಸರ್ಕಾರ ಕೆಡವಲು ನಾವು ಆಪರೇಷನ್ ಕಮಲ ನಡೆಸಬೇಕಿಲ್ಲ, ಅದೇ ನಾರ್ಮಲ್ ಡೆಲಿವರಿಯಾಗುತ್ತದೆ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆಗೆ ಕುಮಾರಸ್ವಾಮಿ ಸಲಹೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರೀಗ ನಮ್ಮ ಮಿತ್ರ ಪಕ್ಷದವರು. ನಮಗೆ ಸಲಹೆ ನೀಡುವುದಕ್ಕೆ ಕುಮಾರಸ್ವಾಮಿಯವರಿಗೆ ಅಧಿಕಾರವಿದೆ. ನಾವು ಜೆಡಿಎಸ್‌ಗೆ ಸಲಹೆ ನೀಡಬಹುದು. ನಾವು ಹೊಂದಾಣಿಕೆಯಲ್ಲಿ ಇದ್ದೇವೆ. ಕುಮಾರಸ್ವಾಮಿಗೆ ಸಲಹೆ ಕೊಡುವ ಸ್ಥಿತಿ ಈಗ ಇಲ್ಲ. ಆ ಸಂದರ್ಭ ಬಂದಾಗ ಕೊಡುತ್ತೇನೆ. ಅವರು ಬಹಳ ಅನುಭವಿ, ಎರಡು ಬಾರಿ ಮುಖ್ಯಮಂತ್ರಿಯಾದವರು ಎಂದರು.
ದಾವಣಗೆರೆ:ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧಿಸಿರುವ ಚನ್ನಗಿರಿ ಪೊಲೀಸರು, 4.50 ಲಕ್ಷ ರೂಪಾಯಿ ಮೌಲ್ಯದ ಒಟ್ಟು 89.52 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯ ವಡ್ನಾಳ್ ರಾಜಣ್ಣ ಬಡಾವಣೆ ವಾಸಿ ಖಾಜಿ ಮೊಹಲ್ಲಾದ ಚಾಲಕ ಮೊಹಮ್ಮದ್ ಗೌಸ್ ಎಸ್. ಅಲಿಯಾಸ್ ಅಸ್ಲಾಂ (32) ಬಂಧಿತ ಆರೋಪಿ. 4,50,000 ರೂಪಾಯಿ ಮೌಲ್ಯದ 89.52 ಗ್ರಾಂ ಬಂಗಾರದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಚನ್ನಗಿರಿ ನಗರದ ಕಾಳಮ್ಮನ ಬೀದಿ ವಾಸಿ ಜ್ಯೋತಿ ಮಂಡಕ್ಕಿ ವ್ಯಾಪಾರಿ ಮಂಜುನಾಥ್ ಅವರ ಪತ್ನಿ ಜ್ಯೋತಿ ಅವರು ಅಕ್ಟೋಬರ್ 14ರಂದು ಸಂಜೆ ನಾಲ್ಕು ಗಂಟೆಗೆ ಎಂದಿನಂತೆ ಮಂಡಕ್ಕಿ ಬೋಂಡಾ ವ್ಯಾಪಾರಕ್ಕೆಂದು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದರು. ಈ ವೇಳೆ ಯಾರೋ ಕಳ್ಳರು ಮನೆಯ ಬೀಗವನ್ನು ಮುರಿದು ಬೀರುವಿನಲ್ಲಿದ್ದ ಒಟ್ಟು 4 ಲಕ್ಷ 61 ಸಾವಿರ ರೂಪಾಯಿ ಮೌಲ್ಯದ 132 ಗ್ರಾಂ ಬಂಗಾರದ ಒಡವೆಗಳನ್ನು ಮತ್ತು 15 ಸಾವಿರ ರೂಪಾಯಿ ಮೌಲ್ಯದ 250 ಗ್ರಾಂ ಬೆಳ್ಳಿ ವಸ್ತುಗಳು, ಹಾಗೂ 1…
ರಾಮನಗರ ;- ಕೇಂದ್ರ ಸರ್ಕಾರ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಸರ್ಕಾರದ ನಡವಳಿಕೆಯನ್ನು ನೋಡಿದರೆ ನಮ್ಮ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಭಾವನೆ ಮೂಡುತ್ತಿದೆ ಎಂದರು. ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ. ಆದರೆ ನಮಗೆ ಪರಿಹಾರ ಕೊಡುವಾಗ ಕೇಂದ್ರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯದಲ್ಲಿ 25 ಬಿಜೆಪಿ ಸಂಸದರಿ¨ªಾರೆ. ಮೋದಿ ಬಳಿ ಕುಳಿತು ರಾಜ್ಯದ ವಾಸ್ತವ ಮನವರಿಕೆ ಮಾಡುವ ಧೈರ್ಯ ಯಾರಿಗೂ ಇಲ್ಲ. ಮೋದಿ ಬಳಿ ದೇವರಿಗೆ ನಮಸ್ಕಾರ ಹಾಕಿದ ರೀತಿ ನಮಸ್ಕಾರ ಹಾಕಿ ಬರ್ತಾರೆ ಅಷ್ಟೇ. ರಾಜ್ಯದ ಜನರು, ರೈತರ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇಲ್ಲ. ಅವರಿಂದ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಸಂಸದರ ವಿರುದ್ಧ ಟೀಕಾಪ್ರಹಾರ ನಡೆಸಿದರು.
ಚಿಕ್ಕಮಗಳೂರು:- ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಪ್ರಯತ್ನ ಫಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಮ್ಮ ಸರ್ಕಾರ ಗಟ್ಟಿಯಾಗಿದೆ. ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಪ್ರಯತ್ನ ಫಲಿಸುವುದಿಲ್ಲ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಬೆದರಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ಇದೆಯೇ ಎಂಬ ಪ್ರಶ್ನೆಗೆ ಆ ಇಲಾಖೆ ನನ್ನ ಕೈಕೆಳಗೆ ಕೆಲಸ ನಿರ್ವಹಿಸುತ್ತಿದೆ. ಈ ವಿಚಾರ ಮೊದಲು ನನಗೆ ತಿಳಿಯಬೇಕಲ್ಲವೇ ಇದೆಲ್ಲ ಸುಳ್ಳು ಎಂದು ಅಲ್ಲಗಳೆದರು. ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ತುಳಿತದಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೊಪ್ಪಳ;- ಕಾಂಗ್ರೆಸ್ ಸೇರಲು ಬಿಜೆಪಿ, ಜೆಡಿಎಸ್‌ನ ಕೆಲ ಶಾಸಕರು ಸಜ್ಜಾಗಿದ್ದಾರೆ ಎಂದು ಸಚಿವ ಆರ್ ಬಿ ತಿಮ್ಮಾಪುರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಂಬರುವ ಲೋಕಸಭಾ ಚುನಾವಣೆ ವೇಳೆಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಕೆಲವರು ನನ್ನೊಂದಿಗೂ ಸಂಪರ್ಕದಲ್ಲಿದ್ದಾರೆ’ ಎಂದರು. ಪಕ್ಷಕ್ಕೆ ಬರುವ ಶಾಸಕರ ಹೆಸರು ಹೇಳಲು ಈಗಿನ್ನು ಕಾಲ ಪಕ್ವವಾಗಿಲ್ಲ. ಇದು ರಾಜಕಾರಣದ ಶಕ್ತಿಯ ಆಟ. ಯಾವಾಗ ಹೇಳಬೇಕೊ ಆವಾಗ ಹೇಳುತ್ತೇನೆ’ ಎಂದರು. ‘ನನ್ನೊಂದಿಗೆ ಸಂಪರ್ಕದಲ್ಲಿರುವ ಬೇರೆ ಶಾಸಕರ ಹೆಸರು ಹೇಳಿದರೆ ಅವರಿಗೆ ಕಷ್ಟವಾಗುತ್ತದೆ. ಚುನಾವಣೆ ಹತ್ತಿದ ಬಂದಾಗ ನಿಮಗೇ ಎಲ್ಲ ಗೊತ್ತಾಗುತ್ತದೆ’ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಲೂಟಿಕೋರ ಎಂದು ಕೆ.ಎಸ್. ಈಶ್ವರಪ್ಪ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ‘ಈಶ್ವರಪ್ಪ ಅವರ ವಯಸ್ಸಿಗೆ ಸರಿಯಾದ ನಡವಳಿಕೆಯಿಲ್ಲ. ಇದನ್ನು ಜನ ಕೂಡ ಒಪ್ಪುವುದಿಲ್ಲ’ ಎಂದರು.