ತುಮಕೂರು: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಗೋವಿಂದ ಆಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯರನ್ನು ಇಳಿಸಲು ಡಿ.ಕೆ.ಶಿವಕುಮಾರ್ ಪರ ಗ್ಯಾಂಗ್ ಈಗಾಗಲೇ ರೆಡಿ ಆಗಿ ಕೂತಿದೆ. ಇನ್ನೊಂದು ಕಡೆ ಶಿವಕುಮಾರ್ ಅವರನ್ನು ಸಿಕ್ಕಿಹಾಕಿಸಲು ಸಿದ್ದರಾಮಯ್ಯ ಅವರು ಪರಮೇಶ್ವರ್ ಮನೆಯಲ್ಲಿ ಮೀಟಿಂಗ್ ಮಾಡಿದ್ದಾರೆ. ನಾಲ್ಕು ಜನ ಸೇರಿ ಶಿವಕುಮಾರ್‌ಗೆ ಖೆಡ್ಡಾ ತೋಡಲು ರೆಡಿ ಮಾಡಿದ್ದಾರೆ ಎಂದರು. ಹಿಂದೆ ಮೈತ್ರಿ ಸರ್ಕಾರವನ್ನು ಬೀಳಿಸುವುದಕ್ಕೆ ಬೆಳಗಾವಿಯಲ್ಲಿಯೇ ಪ್ಲಾನ್ ಆಗಿತ್ತು. ಈಗಲೂ ಅಲ್ಲಿಂದಲೇ ತಯಾರಿ ನಡೀತಾ ಇದೆ. ಇವೆಲ್ಲ ಬೆಳವಣಿಗೆಯನ್ನು ನೋಡಿದರೆ ಶೀಘ್ರ ಸರ್ಕಾರ ಗೋವಿಂದ ಆಗಲಿದೆ ಎಂದರು. https://ainlivenews.com/golden-opportunity-to-work-in-banking-sector-there-are-8283-vacancies-in-sbi/ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಆದರೆ ಯಾರಿಗೆ ಎಷ್ಟು ಸೀಟು ಅನ್ನೋದು ಇನ್ನೂ ನಿರ್ಧಾರ ವಾಗಿಲ್ಲ. ರಾಷ್ಟ್ರೀಯ ನಾಯಕರು, ಜೆಡಿಎಸ್ ವರಿಷ್ಠ ದೇವೇಗೌಡರು ಸೇರಿ ತೀರ್ಮಾನ ಮಾಡುತ್ತಾರೆ ಎಂದ ಅವರು, ಮೊದಲೆಲ್ಲ 24, 25 ಕಡೆಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೆವು. ಈ ಬಾರಿ 28 ಕ್ಷೇತ್ರಗಳಲ್ಲಿಯೂ ನಾವು…
Author: AIN Author
ಸೋಮವಾರ ಕಾಂತಾರ (Kantara Chapter 2) ಸಿನಿಮಾದ ಮುಹೂರ್ತ ಅತ್ಯಂತ ಸರಳವಾಗಿ ನಡೆದಿದೆ. ಜೊತೆಗೆ ಸಿನಿಮಾದ ಫಸ್ಟ್ ಲುಕ್ ಮತ್ತು ಟೀಸರ್ ಕೂಡ ಚಿತ್ರತಂಡ ಬಿಡುಗಡೆ ಮಾಡಿದೆ. ಎರಡಕ್ಕೂ ನೋಡುಗರಿಂದ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಟೀಸರ್ (Teaser) ರಿಲೀಸ್ ಆದ ಕೆಲವೇ ಕೆಲವು ನಿಮಿಷಗಳಲ್ಲಿ ಲಕ್ಷ ಲಕ್ಷ ವಿವ್ಯೂ ಸಿಕ್ಕಿವೆ. ಉಡುಪಿಯ ಕುಂಭಾಸಿಯಲ್ಲಿ ಚಿತ್ರದ ಮುಹೂರ್ತ (Muhurta) ನಡೆದಿದ್ದು, ಈ ಸಂದರ್ಭದಲ್ಲಿ ರಿಷಬ್ (Rishabh Shetty) ಮಾತನಾಡಿದ್ದಾರೆ. ‘ನಿರ್ಮಾಪಕ ವಿಜಯ್ ಕಿರಗೊಂದೂರು ದೊಡ್ಡ ಶಕ್ತಿ. ಇಡೀ ದೇಶದಲ್ಲಿ ಅವರು ಒಂದು ಪವರ್ ಹೌಸ್. ಕಾಂತರಾ ಈ ಮಟ್ಟಕ್ಕೆ ಹೋಗಲು ಅವರ ಬೆಂಬಲ ಬಹಳ ದೊಡ್ಡದು. ಕಾಂತಾರ ಚಿತ್ರಕ್ಕೆ ಅವರು ಸಂಪೂರ್ಣವಾಗಿ ಬೆಂಬಲ ಕೊಟ್ಟಿದ್ದಾರೆ. ಇಡೀ ಚಿತ್ರಕ್ಕೆ ಅವರು ದೊಡ್ಡ ಕಾನ್ಫಿಡೆನ್ಸ್ ಅನ್ನು ತುಂಬಿದ್ದಾರೆ. ಒಂದು ಚಿತ್ರಕ್ಕೆ ನಾವು ಇಂತಿಷ್ಟು ಬಜೆಟ್ ನಿರ್ಧಾರ ಮಾಡಿರುತ್ತೇವೆ. ಅದು ಮುಂದೆ ಎಲ್ಲೋ ಹೋಗಿ ತಲುಪುತ್ತದೆ. ಕಾಂತಾರ ಮೊದಲ ಅಧ್ಯಾಯ ಕಥೆ ಅಪೇಕ್ಷೆ ಮಾಡುತ್ತದೆ ಅದಕ್ಕೆ ನಿರ್ಮಾಪಕರು…
ನ್ಯೂಯಾರ್ಕ್: ಅಮೆರಿಕಾದ ಮಿಸೌರಿಯಲ್ಲಿ 63 ವರ್ಷ ವಯಸ್ಸಿನ ರೋಗಿಯ ದೊಡ್ಡ ಕರುಳಿನೊಳಗೆ (Intestines) ನೊಣ ಇರುವುದನ್ನು ಕಂಡು ವೈದ್ಯರೇ ದಂಗಾಗಿದ್ದಾರೆ. ಈ ನೊಣ (House Fly) ಹೊಟ್ಟೆಯೊಳಗೆ ಹೇಗೆ ಸೇರಿಕೊಂಡಿದೆ ಎಂಬುದೇ ಇದೀಗ ಯಕ್ಷ ಪ್ರಶ್ನೆಯಾಗಿದೆ. ಯಾಕೆಂದರೆ ರೋಗಿಗೆ ನೊಣವನ್ನು ನುಂಗಿರುವಂತಹ ಯಾವುದೇ ಸಂದರ್ಭ ನೆನಪಿಲ್ಲ. ಅಲ್ಲದೇ ಅವರು ಯಾವುದೇ ಅಸ್ವಸ್ಥತೆಯ ಲಕ್ಷಣ ಕಾಣಿಸಿಕೊಂಡಿಲ್ಲ ಎಂದು ಮಿಸೌರಿ ವಿಶ್ವವಿದ್ಯಾನಿಲಯದ ಗ್ಯಾಸ್ಟ್ರೋಎಂಟರಾಲಜಿಯ ಮುಖ್ಯಸ್ಥ ಮ್ಯಾಥ್ಯೂ ಬೆಚ್ಟೋಲ್ಡ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ರೋಗಿಯು ಆರೋಗ್ಯ ಪರೀಕ್ಷೆಯ ಎರಡು ದಿನಗಳ ಹಿಂದೆ ಪಿಜ್ಜಾ ಮತ್ತು ಲೆಟಿಸ್ ಅನ್ನು ಸೇವಿಸಿರುವುದಾಗಿ ತಿಳಿಸಿದ್ದಾರೆ. ಆದರೆ ತಾನು ಸೇವಿಸಿದ ಆಹಾರದಲ್ಲಿ ನೊಣ ಕಂಡ ನೆನಪಿಲ್ಲ. ಇದು ಕೊಲೊನೋಸ್ಕೋಪಿ ಸಮಯದಲ್ಲಿ ಅತ್ಯಂತ ಅಪರೂಪದ ಆವಿಷ್ಕಾರ ಎಂದು ವಿವರಿಸುತ್ತದೆ ಎಂದು ಅಮೆರಿಕನ್ ಜರ್ನಲ್ ಆಫ್ ಗ್ಯಾಸ್ಟ್ರೋಎಂಟರಾಲಜಿಯ ಸಂಶೋಧನೆಯಲ್ಲಿ ವರದಿಯಾಗಿದೆ. https://ainlivenews.com/golden-opportunity-to-work-in-banking-sector-there-are-8283-vacancies-in-sbi/ ರೋಗಿಯು ಆಕಸ್ಮಿಕವಾಗಿ ಅದನ್ನು ನುಂಗಿದ್ದಾನೆಯೋ ಅಥವಾ ಕೆಳಗಿನಿಂದ ನೊಣ ಪ್ರವೇಶಿಸಿದೆಯೋ ಎಂಬ ಪ್ರಶ್ನೆಯೂ ಎದ್ದಿದೆ. ಯಾಕೆಂದರೆ ನೊಣ ಕರುಳು ಸೇರಿಕೊಳ್ಳಲು ಈ ಎರಡು ಸಾಧ್ಯತೆಗಳಿವೆ.…
ಮುಂಬೈ: 16 ಆವೃತ್ತಿ ಕಳೆದರೂ ಟ್ರೋಫಿ ಗೆಲ್ಲುವಲ್ಲಿ ವಿಫಲವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈ ಬಾರಿ ಬಲಿಷ್ಠ ಆಟಗಾರರ ಪಡೆ ಕಟ್ಟಿ, ಟ್ರೋಫಿ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡಿದೆ. ಕಳೆದ ಆವೃತ್ತಿಯಲ್ಲಿದ್ದ 11 ಆಟಗಾರರಿಗೆ ಗೇಟ್ ಪಾಸ್ ನೀಡಿದ್ದು, 18 ಆಟಗಾರರನ್ನ ತಂಡದಲ್ಲಿ ಉಳಿಸಿಕೊಂಡಿದೆ. ಅಲ್ಲದೇ ಪರ್ಸ್‌ನಲ್ಲಿ 40.75 ಕೋಟಿ ರೂ. ಉಳಿಸಿಕೊಂಡಿದ್ದ ಆರ್‌ಸಿಬಿ, ಟ್ರೇಡ್ ವಿಂಡೋ (T) ನಿಯಮದಲ್ಲಿ ಮುಂಬೈ ತಂಡದಿಂದ 17.5 ಕೋಟಿ ರೂ.ಗೆ ಕ್ಯಾಮರೂನ್ ಗ್ರೀನ್ (Cameron Green) ಅವರನ್ನು ಖರೀದಿ ಮಾಡಿದೆ. ಇದರಿಂದ ಆರ್‌ಸಿಬಿ (RCB) ಪರ್ಸ್ ಮೊತ್ತ 23.25 ಕೋಟಿ ರೂ.ಗೆ ಇಳಿಕೆಯಾಗಿದೆ. ಕ್ಯಾಮರೂನ್ ಗ್ರೀನ್ ಅವರನ್ನು ಖರೀದಿಸಿರುವ ಬಗ್ಗೆ ಆರ್‌ಸಿಬಿ ಕೂಡ ತನ್ನ ಅಧಿಕೃತ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಗ್ರೀನ್ ಕೂಡ ಇದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. 2023ರಲ್ಲಿ ಐಪಿಎಲ್ (IPL 2023) ಪ್ರವೇಶಿಸಿದ ಗ್ರೀನ್ 16 ಪಂದ್ಯಗಳಿಂದ 50.22 ಸರಾಸರಿಯಲ್ಲಿ 425 ರನ್ ಗಳಿಸಿದ್ದಾರೆ. ಇದರಲ್ಲಿ 1 ಶತಕ, 2…
ತೋಟಗಾರಿಕೆ ಇಲಾಖೆಯು 2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ವಾಣಿಜ್ಯ ಹೂವಿನ ರಫ್ತಿಗಾಗಿ ತಳಿಗಳ ಕೊರತೆ ನಿವಾರಿಸಲು ಆಮದಿಗಾಗಿ ಪ್ರೋತ್ಸಾಹ ಕಾರ್ಯಕ್ರಮ ಹಮ್ಮಿಕೊಂಡಿದೆ. ಉತ್ಕೃಷ್ಟ ಗುಣಮಟ್ಟದ ಜಾಗತಿಕ ತಳಿಗಳನ್ನು ಪರಿಚಯಿಸಿ (ಆಮದು) ಮತ್ತು ಅವುಗಳ ರಫ್ತುನ್ನು ಉತ್ತೇಜಿಸುವುದು, ರೈತರ ಆದಾಯವನ್ನು ಅಧಿಕಗೊಳಿಸುವುದು, ಸ್ಥಳೀಯ/ ಗ್ರಾಮೀಣ ಮಟ್ಟದಲ್ಲಿ ಉದ್ಯೋಗ ಒದಗಿಸುವುದು, ರಫ್ತು ಆಧಾರಿತ ವಿವಿಧ ವಾಣಿಜ್ಯ ತಳಿಗಳ ಪ್ರದೇಶವನ್ನು ಹೆಚ್ಚಿಸುವುದು, ಹೊಸ ಪುಷ್ಪ ಬೆಳೆ/ತಳಿಗಳನ್ನು ಪರಿಚಯಿಸಲು ಸಸ್ಯಾಭಿವೃದ್ಧಿ ಅವಕಾಶಗಳ ಬಗ್ಗೆ ವಿದೇಶಗಳಿಗೆ ಅಧ್ಯಯನ ಪ್ರವಾಸಕ್ಕಾಗಿ ಅಧ್ಯಯನ ಮಾಡುವುದು ಯೋಜನೆಯ ಉದ್ದೇಶವಾಗಿದೆ. 2023-24 ನೇ ಸಾಲಿನ ಮಾರ್ಗಸೂಚಿಯಂತೆ ಸಾಮಾನ್ಯ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಣ್ಣ ಅತೀ ಸಣ್ಣ ರೈತರಿಗೆ ಹಾಗೂ ಮಹಿಳೆಯರಿಗೆ ಶೇ.50 ರಂತೆ ಗರಿಷ್ಠ ರೂ.4.00 ಲಕ್ಷಗಳಿಗೆ ಮೀರದಂತೆ ಕನಿಷ್ಟ 10 ಗುಂಟೆ ಪ್ರದೇಶದಲ್ಲಿ ಅನುಷ್ಟಾನಗೊಳಿಸಲು ಸಹಾಯಧನ ಪಡೆಯಲು ಈ ಕೂಡಲೇ ತಮ್ಮ ಹೆಸರನ್ನು ಆಯಾ ತಾಲ್ಲೂಕಿನ ತೋಟಗಾರಿಕೆ ಕಛೇರಿಗಳಲ್ಲಿ ನವೆಂಬರ್ ಅಂತ್ಯದೊಳಗೆ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಮಲ್ಲಿಕಾರ್ಜುನ…
ಜೈಪುರ: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಪ್ರೀತಿ (Online Relationship) ಹುಡುಕುವವರ ಸಂಖ್ಯೆ ಹೆಚ್ಚಾಗಿದೆ. ಯುವಕರು, ಮಹಿಳೆಯರು, ವೃದ್ಧರೂ ಸೇರಿದಂತೆ ಅನೇಕರು ಪ್ರೀತಿಯ ಮೋಹಕ್ಕೆ ಬಿದ್ದು ಬಲಿಯಾಗುತ್ತಿದ್ದಾರೆ. ಯುವಕರು ಚೆಂದದ ಹುಡುಗಿಯನ್ನು ಪಟಾಯಿಸಲು ನಾನಾ ತಂತ್ರಗಳನ್ನ ಹೆಣೆಯುತ್ತಾರೆ. ಅದಕ್ಕೆ ಸೊಪ್ಪು ಹಾಕುವ ಹುಡುಗಿಯರೂ ಆತನ ಜೊತೆ ಗಂಟೆಗಟ್ಟಲೆ ಮೆಸೇಜ್ ಮಾಡಲು, ಊರು ಸುತ್ತಲು ಈಗ ಆನ್‌ಲೈನ್ ಡೇಟಿಂಗ್ ಆ್ಯಪ್‌ಗಳು (Dating Apps) ಏಣಿಯಾಗಿವೆ. ಆದ್ರೆ ದೆಹಲಿಯಲ್ಲಿ (Delhi) ದುಷ್ಯಂತ ಎಂಬ ವ್ಯಕ್ತಿಯೊಬ್ಬ ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಜೈಪುರಕ್ಕೆ ಹೋಗಿ ಕೊಲೆಯಾಗಿದ್ದಾನೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರ ನ್ಯಾಯಾಲಯವು (Jaipur Court) ಚೆಲುವೆ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಷನ್ಸ್ ನ್ಯಾಯಾಧೀಶ ಅಜಿತ್ ಕುಮಾರ್ ಹಿಂಗರ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. https://ainlivenews.com/golden-opportunity-to-work-in-banking-sector-there-are-8283-vacancies-in-sbi/ 2018ರಲ್ಲಿ ಡೇಟಿಂಗ್ ಆಪ್‌ವೊಂದರಲ್ಲಿ ದೆಹಲಿಯ ದುಷ್ಯಂತ್ ಶರ್ಮಾ (ಪ್ರೊಫೈಲ್ ಹೆಸರು) ಹಾಗೂ ಜೈಪುರದ ಪ್ರಿಯಾ ಸೇಠ್ ಎಂಬಾಕೆಯೊಂದಿಗೆ ಪರಿಚಯವಾಗಿದೆ. ಇಬ್ಬರೂ ಚಾಟ್ ಮಾಡಿದಾಗ ಪರಸ್ಪರರ ಅಭಿವೃದ್ಧಿಗಳಿಗೆ ಸಾಮ್ಯತೆ…
ಕೌಲಾಲಂಪುರ್: ಪ್ರಧಾನಿ ಅನ್ವರ್ ಇಬ್ರಾಹಿಂ (Anwar Ibrahim) ನೇತೃತ್ವದ ಮಲೇಷ್ಯಾ (Malaysia) ಸರ್ಕಾರವು ಚೀನಾ (China) ಮತ್ತು ಭಾರತೀಯ (Indians) ನಾಗರಿಕರಿಗೆ ಪ್ರವೇಶ ವೀಸಾಗಳಿಗೆ ಸಂಬಂಧಿಸಿದಂತೆ ಮಹತ್ವದ ನೀತಿ ಬದಲಾವಣೆಯನ್ನು ಘೋಷಿಸಿದೆ. ಮಲೇಷ್ಯಾ ಸರ್ಕಾರ ಡಿಸೆಂಬರ್ 1ರಿಂದ 30 ದಿನಗಳವರೆಗೆ ವಾಸ್ತವ್ಯ ಹೂಡಲು ಚೀನಾ ಮತ್ತು ಭಾರತದ ನಾಗರಿಕರಿಗೆ ವೀಸಾಮುಕ್ತ ಪ್ರವೇಶವನ್ನು (Visa-Free Entry) ಘೋಷಿಸಿದೆ. ಪುತ್ರಜಯದಲ್ಲಿ ನಡೆದ ಪೀಪಲ್ಸ್ ಜಸ್ಟಿಸ್ ಪಾರ್ಟಿಯ ವಾರ್ಷಿಕ ಸಭೆಯಲ್ಲಿ ಭಾಷಣ ಮಾಡುವ ಸಂದರ್ಭ ಇಬ್ರಾಹಿಂ ಈ ಘೋಷಣೆ ಮಾಡಿದರು. ಭಾರತೀಯ ಪ್ರಯಾಣಿಕರಿಗೆ ಏನು ಬದಲಾವಣೆ? ವೀಸಾ ನಿರ್ಮೂಲನೆ: ಮಲೇಷ್ಯಾಕ್ಕೆ ಭೇಟಿ ನೀಡುವ ಭಾರತೀಯ ನಾಗರಿಕರಿಗೆ ಇನ್ನು ಮುಂದೆ ಡಿಸೆಂಬರ್ 1 ರಿಂದ ಪ್ರವೇಶ ವೀಸಾಗಳ ಅಗತ್ಯವಿಲ್ಲ. ವೀಸಾ-ಮುಕ್ತ ವಾಸ್ತವ್ಯ: ಭಾರತೀಯರು ವೀಸಾ ಪಡೆಯದೆ 30 ದಿನಗಳವರೆಗೆ ಮಲೇಷ್ಯಾದಲ್ಲಿ ಉಳಿಯಬಹುದು. ಭದ್ರತಾ ಸ್ಕ್ರೀನಿಂಗ್: ಮಲೇಷ್ಯಾಕ್ಕೆ ಭೇಟಿ ನೀಡುವ ಭಾರತೀಯ ಪ್ರಜೆಗಳಿಗೆ ಭದ್ರತಾ ಸ್ಕ್ರೀನಿಂಗ್ ಇರುತ್ತದೆ. ಈ ಕ್ರಮ ಕೈಗೊಳ್ಳಲು ಕಾರಣವೇನು? ವಿಶೇಷವಾಗಿ ಭಾರತ ಮತ್ತು ಚೀನಾದಿಂದ ಪ್ರವಾಸಿಗರು ಮತ್ತು ಹೂಡಿಕೆದಾರರ…
ಸಪೋಟ ಹಣ್ಣಿನಲ್ಲಿರುವ ವಿಶಾಲ ಶ್ರೇಣಿಯ ಪೋಷಕಾಂಶಗಳು ಆರೋಗ್ಯಕ್ಕೆ ಬಹಳ ಶ್ರೇಷ್ಠವಾಗಿರುವುದಲ್ಲದೆ ತಿನ್ನಲು ಅತ್ಯಂತ ರುಚಿಯಾಗಿಯೂ ಇರುತ್ತದೆ. ಉತ್ಕರ್ಷಣ ನಿರೋಧಿ ಅಂಶಗಳಿಂದ ಶ್ರೀಮಂತವಾಗಿರುವ ಸಪೋಟ ವಿಟಮಿನ್ ಇ, ಎ, ಸಿ ಮತ್ತು ಕಬ್ಬಿಣ ಮತ್ತು ತಾಮ್ರದ ಗುಣಗಳನ್ನು ಹೊಂದಿದೆ. * ವಿಟಮಿನ್ ಎ ಅಂಶವನ್ನು ಹೊಂದಿರುವ ಚಿಕ್ಕುವಿನಿಂದ ಕಣ್ಣಿನ ದೃಷ್ಟಿ ಸುಧಾರಣೆಯಾಗುತ್ತದೆ. * ಸಪೋಟದಲ್ಲಿ ವಿಟಮಿನ್ ‘ಎ’ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಲು ನೆರವಾಗುತ್ತದೆ. * ಈ ಹಣ್ಣಿನಲ್ಲಿ ವಿಟಮಿನ್ ಬಿ-ಕಾಂಪ್ಲೆಕ್ಸ್ ಹೇರಳವಾಗಿರುವ ಕಾರಣ ಈ ಗುಂಪಿನ ವಿಟಮಿನ್ನುಗಳಿಂದ ದೊರಕುವ ಎಲ್ಲಾ ಪ್ರಯೋಜನಗಳು ದೊರಕುತ್ತವೆ. * ಸಪೋಟ ಹಣ್ಣಿನಲ್ಲಿ ನಾರಿನಾಂಶ ಹೆಚ್ಚಾಗಿ ಇರುವುದರಿಂದ ಮಲಬದ್ಧತೆಗೆ ಸಂಭಂದಪಟ್ಟ ಕೊರತೆಗಳನ್ನು ಕಡಿಮೆ ಮಾಡಲು ಸಹಾಯಮಾಡುತ್ತದೆ. * ತಾಜಾ ಸಪೋಟವನ್ನು ಹಾಗೆಯೇ ತಿಂದರೆ ಜೀರ್ಣಕ್ರಿಯೆಗೆ ಬೇಕಾದ ನಾರಿನಂಶವನ್ನು ದೇಹ ಪಡೆಯಲು ಸಾಧ್ಯವಾಗುತ್ತದೆ. * ಸಪೋಟದಲ್ಲಿರುವ ಕಾರ್ಬೋಹೈಡ್ರೇಟ್ಸ್ ಮತ್ತು ಪೋಷಕಾಂಶಗಳು ಗರ್ಭಿಣಿಯರಿಗೆ ತುಂಬಾ ಒಳ್ಳೆಯದು. ಇದರಿಂದ ವಾಕರಿಕೆ, ತಲೆ ತಿರುಗುವುದು, ಸುಸ್ತು ಕಡಿಮೆಯಾಗುತ್ತದೆ. *…
ಭಾರತೀಯ ಸೇನೆಯು ಅಕ್ಟೋಬರ್ 2023 ರ ಭಾರತೀಯ ಸೇನೆಯ ಅಧಿಕೃತ ಅಧಿಸೂಚನೆಯ ಮೂಲಕ SSC (NT) ಕೋರ್ಸ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 28-ನವೆಂಬರ್-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಭಾರತೀಯ ಸೇನೆಯ ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ಭಾರತೀಯ ಸೇನೆ (ಭಾರತೀಯ ಸೇನೆ) ಹುದ್ದೆಗಳ ಸಂಖ್ಯೆ: 8 ಉದ್ಯೋಗ ಸ್ಥಳ: ಅಖಿಲ ಭಾರತ ಪೋಸ್ಟ್ ಹೆಸರು: SSC (NT) ಕೋರ್ಸ್ ವೇತನ: ರೂ.56100-218200/- ಪ್ರತಿ ತಿಂಗಳು ಭಾರತೀಯ ಸೇನಾ ನೇಮಕಾತಿ 2023 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ: ಭಾರತೀಯ ಸೇನೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ LLB ಪೂರ್ಣಗೊಳಿಸಿರಬೇಕು. ವಯಸ್ಸಿನ ಮಿತಿ: ಭಾರತೀಯ ಸೇನಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-ಜುಲೈ-2024 ರಂತೆ ಕನಿಷ್ಠ 21 ವರ್ಷಗಳು…
ಸೂರ್ಯೋದಯ: 06.24 AM, ಸೂರ್ಯಾಸ್ತ : 05.51 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಪಾಡ್ಯ 02:05 PM ತನಕ ನಂತರ ಬಿದಿಗೆ ನಕ್ಷತ್ರ: ಇವತ್ತು ರೋಹಿಣಿ 01:31 PM ತನಕ ನಂತರ ಮೃಗಶಿರ ಯೋಗ: ಇವತ್ತು ಸಿದ್ದಿ 10:04 PM ತನಕ ನಂತರ ಸಾಧ್ಯ ಕರಣ: ಇವತ್ತು ಬಾಲವ 02:21 AM ತನಕ ನಂತರ ಕೌಲವ 02:05 PM ತನಕ ನಂತರ ತೈತಲೆ ರಾಹು ಕಾಲ: 03:00 ನಿಂದ 04:30 ವರೆಗೂ ಯಮಗಂಡ: 09:00 ನಿಂದ 10:30 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 10.20 AM to 11.56 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:41 ನಿಂದ ಮ.12:25 ವರೆಗೂ ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಮೇಷ ರಾಶಿ ಬೇರೊಬ್ಬರ ಕಷ್ಟಕ್ಕೆ ಧನಸಹಾಯ…