ಬೆಂಗಳೂರಿನಲ್ಲಿ ಕುಡಿಯುವ ನೀರಿಗಾಗಿ ಕಾವೇರಿ ಜಲಾನಯನ ಪ್ರದೇಶಗಳಿಂದ 24 ಟಿಎಂಸಿ ನೀರು ಮೀಸಲಿಡಲು ಸರ್ಕಾರ ಆದೇಶಿಸಿದ್ದು, ಈ ನೀರಿನ ಬಳಕೆಗೆ ಬೆಂಗಳೂರು ಜಲ ಮಂಡಳಿಗೆ ಅಧಿಕಾರ ನೀಡಿದೆ ಎಂದು ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. https://ainlivenews.com/knee-pain-treatment-joint-pain-treatment/ ನವದೆಹಲಿಯಲ್ಲಿ (New Delhi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿಗೆ ಕುಡಿಯುವ ನೀರಿಗಾಗಿ 24 ಟಿಎಂಸಿ ನೀರು ಬಳಕೆಗೆ ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ. ಈ ನೀರಿನ ಬಳಕೆಗೆ ಸರ್ಕಾರ ಈಗ ಆದೇಶಿಸಿದೆ. ಇನ್ಮುಂದೆ ಕಡ್ಡಾಯವಾಗಿ ಈ ನೀರು ಬೆಂಗಳೂರಿಗೆ ಬಳಕೆಯಾಗಲಿದೆ ಎಂದರು. ಮೇಕೆದಾಟು ಅಣೆಕಟ್ಟು ನಿರ್ಮಾಣದ ಬಗ್ಗೆ ಚರ್ಚೆ ಆರಂಭವಾಗಲಿದೆ. ಶೀಘ್ರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದೆ. ಬಳಿಕ ಇದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಬಹುದು. ಈ ಹಿನ್ನೆಲೆ ಕರ್ನಾಟಕ ಹೇಗೆ ತಯಾರಿಯಾಗಬೇಕು ಎನ್ನುವ ಬಗ್ಗೆ ವಕೀಲರ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು
Author: AIN Author
ಮಡಿಕೇರಿ: ಮಹಿಳೆಯೊಬ್ಬಳಿಂದ ಹನಿಟ್ರ್ಯಾಪ್‍ಗೊಳಗಾಗಿ (Honeytrap) ನಿವೃತ್ತ ಯೋಧನೊಬ್ಬ (Retired Soldier) ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾದ ಘಟನೆ ನಗರದ (Madikeri) ಉಕ್ಕುಡ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ನಿವೃತ್ತ ಯೋಧನನ್ನು ಸಂದೇಶ್ (40) ಎಂದು ಗುರುತಿಸಲಾಗಿದೆ. ಮನೆಯ ಸಮೀಪದ ಪಂಪಿನ ಕೆರೆ ಬಳಿ ಸಂದೇಶ್ ಮೊಬೈಲ್ ಹಾಗೂ ಚಪ್ಪಲಿ ಪತ್ತೆಯಾಗಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೆರೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಂದೇಶ್ ಫೇಸ್‍ಬುಕ್‍ನಲ್ಲಿ ಪರಿಚಯವಾದ ವಿವಾಹಿತ ಮಹಿಳೆಯೊಬ್ಬಳ ಸ್ನೇಹಕ್ಕೆ ಬಿದ್ದು ಆಕೆಯಿಂದಲೇ ಹನಿಟ್ರ್ಯಾಪ್‍ಗೆ ಒಳಗಾಗಿದ್ದಾನೆ. ಆಕೆಯ ಕಾಟ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ್ ಡೆತ್‍ನೋಟ್ ಬರೆದಿಟ್ಟಿದ್ದಾನೆ. ಮಂಗಳವಾರದಿಂದ ಕೆರೆಯಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ. ನ್ಯಾಯ ಕೊಡಿಸುವಂತೆ ಸಂದೇಶ್ ಪತ್ನಿ ಕಣ್ಣೀರು ಹಾಕಿದ್ದಾಳೆ. ಈ ಸಂಬಂಧ ಮಡಿಕೇರಿ ನಗರ ಪೊಲೀಸ್ (Police) ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಶಾಲೆಗಳಿಗೆ ಮೆಟಲ್ ಡಿಟೆಕ್ಟರ್ ಅಳವಡಿಸುವಂತೆ ಶಾಲೆಗಳಿಗೆ ನೊಟೀಸ್ ನೀಡಲಾಗಿದ್ದು ಪೊಲೀಸ್ ಇಲಾಖೆ ಆದೇಶಕ್ಕೆ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಆಕ್ರೋಶಗೊಂಡಿದೆ. ಶಾಲೆಗಳಲ್ಲಿ ಕಡ್ಡಾಯವಾಗಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡುವಂತೆ ಆದೇಶ ಹೊರಡಿಸಿದ ಪೊಲೀಸ್ ಇಲಾಖೆ ವಿರುದ್ಧ ಕಿಡಿಕಾರಿದ್ದು ಕೆ.ಪಿ. ಅಗ್ರಹಾರ ಪೊಲೀಸ್ ಠಾಣಾ ಅಧಿಕಾರಿಗಳಿಂದ ನೊಟೀಸ್ ನೀಡಲಾಗಿದೆ. ಮಾಗಡಿ ರಸ್ತೆಯ ಗುರುಕುಲ ಇಂಟರ್ನ್ಯಾಷನಲ್ ಶಾಲೆಗೆ ನೋಟೀಸ್ ನೀಡಲಾಗಿದ್ದು ಪಬ್ಲಿಕ್ ಸೇಫ್ಟ್ ಆಕ್ಟ್ ಅಡಿ ಶಾಲೆಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡುವಂತೆ ನೊಟೀಸ್ ಕೊಡಲಾಗಿದೆ. ಶಾಲೆಗಳು ಪಬ್ಲಿಕ್ ಸೇಫ್ಟ್ ಆಕ್ಟ್ ನಲ್ಲಿ ಬರೋದಿಲ್ಲ ಅಂತಿರೋ ಖಾಸಗಿ ಶಾಲಾ ಮಾಲೀಕರ ಸಂಘ ಶಿಕ್ಷಣ ಇಲಾಖೆಯಿಂದ ಈ ಬಗ್ಗೆ ಯಾವುದೇ ಆದೇಶ ಹೊರಡಿಸಿಲ್ಲ ಇಂತಹ ಯಾವುದೇ ಸೂಚನೆ ನೀಡಿಲ್ಲ ಅಂತಿರೋ ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆ ಆದೇಶಕ್ಕೂ ಶಿಕ್ಷಣ ಇಲಾಖೆಗೂ ಸಂಬಂಧವಿಲ್ಲ ಅಂತ ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟನೆ
ಧಾರವಾಡ: ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಅವರು ತಮ್ಮ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ಧಾರವಾಡ ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಮಹಾದೇವಪ್ಪ ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಊಟದ ವ್ಯವಸ್ಥೆ ಬಗ್ಗೆಯೂ ವಿದ್ಯಾರ್ಥಿಗಳ ವಿಚಾರಿಸಿ, ವಿದ್ಯಾರ್ಥಿಗಳಿಂದ ಅಹವಾಲು ಕೂಡ ಸ್ವೀಕರಿಸಿದರು. ಹಾಸ್ಟೆಲ್‌ಗೆ ಭೇಟಿ ನೀಡಿ ಎಲ್ಲವನ್ನೂ ಪರಿಶೀಲಿಸಿದ ನಂತರ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಸಚಿವ ಮಹಾದೇವಪ್ಪ ಅವರು ತಮ್ಮ ಅಂಗರಕ್ಷಕನಿಂದಲೇ ಶೂ ಹಾಕಿಸಿಕೊಂಡ ಪ್ರಸಂಗ ನಡೆಯಿತು.
ಬೆಂಗಳೂರು: ಬಿಜೆಪಿಯವರು ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು ಸ್ವಪಕ್ಷದ ವಿರುದ್ಧವೇ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಿಡಿಕಾರಿದರು. https://ainlivenews.com/knee-pain-treatment-joint-pain-treatment/ ನಗರದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನಲ್ಲಿದ್ದವನು. ಅವರಾಗೆ ಪಕ್ಷಕ್ಕೆ ಸೇರಿಸಿಕೊಂಡರು. ಈಗ ಎಸ್.ಟಿ.ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನನ್ನನ್ನ ಪಕ್ಷ ಬಿಡಿಸಲು ರೆಡಿಯಾಗಿದ್ದಾರೆ. ನಾನು ಕ್ಷೇತ್ರದ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ? ಜೊತೆಗೆ ನಾನು ಸಿಎಂ, ಡಿಸಿಎಂ ಹೊಗಳುವುದನ್ನು ಸಹಿಸುತ್ತಿಲ್ಲ. ನನ್ನ ಕಚೇರಿಯಿಂದ ಕಾಂಗ್ರೆಸ್ ಗ್ಯಾರಂಟಿಯಿಂದ ಫಾಲೋಅಪ್ ಮಾಡಿದ್ದೇನೆ. ಇದರಿಂದ ನನ್ನ ಕ್ಷೇತ್ರದ ಜನರಿಗೆ ಅನುಕೂಲವಾಗಿದೆ. ಆದರೆ ಬಿಜೆಪಿಯವರು ಅದೆಲ್ಲ ಕಾಂಗ್ರೆಸ್ ಗ್ಯಾರಂಟಿ, ಅದನ್ನ ನೀವೇಕೆ ಉತ್ತೇಜನ ನೀಡುತ್ತೀರಿ ಎಂದು ಪ್ರಶ್ನೆ ಮಾಡುತ್ತಾರೆ. ಅರೇ, ಸರ್ಕಾರ ಯಾವುದಾದರೂ ಇರಲಿ. ಜನಕ್ಕೆ ಒಳ್ಳೆಯದು ಮಾಡುವುದು ಬೇಡವ ಎಂದು ಪ್ರಶ್ನಿಸಿದರು ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ. ಬೆಲೆ ಇಲ್ಲದವರ ಹೇಳಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ.…
ಬೆಂಗಳೂರು: ಸೋಮಶೇಖರ್ ಪಕ್ಷದಿಂದ ಹೊರ ಹೋಗಲಿ ಎಂದು ಹೇಳಿಲ್ಲ. ಹಾಗೇ ಹೇಳಲು ನಾನ್ಯಾರು? ಅನೇಕರು ಜಾಮೂನು ತಿಂದಿದ್ದಾರೆ, ವಿಷ ಕುಡಿದವರು ಇದ್ದಾರಾ? ಜಾಮೂನು ತಿಂದು ಮಂತ್ರಿಗಳಾಗಿದ್ದರು. ಮತ್ತೆ ನಮ್ಮ ಸರ್ಕಾರ ಬಂದಿದ್ದರೆ ಅವರು ಈ ಮಾತು ಹೇಳುತ್ತಿದ್ರಾ? ಶಾಸಕ ಎಸ್.ಟಿ.ಸೋಮಶೇಖರ್ ಟೀಕಿಸೋದು ನನ್ನ ಉದ್ದೇಶ ಅಲ್ಲ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ ವಿಚಾರ ಬಗ್ಗೆ ಮಾತನಾಡಿದ ಅವರು ಯಾವುದೇ ಒಬ್ಬ ವ್ಯಕ್ತಿಯಿಂದ ಬಿಜೆಪಿ ನಿಂತಿಲ್ಲ ಜಯಪ್ರಕಾಶ್ ಹೆಗ್ಡೆ ಇನ್ನೂ ಬೇರೆ ಕಡೆ ಹೋಗಿಲ್ಲ, ಹೋಗುತ್ತಾರಾ ಅಂತಾ ಗೊತ್ತಿಲ್ಲಇವತ್ತಿನವರೆಗೂ ಅವರು ಪಕ್ಷದ ವಿರುದ್ಧ ಒಂದೂ ಮಾತಾಡಿಲ್ಲ ಎಂದರು. https://ainlivenews.com/knee-pain-treatment-joint-pain-treatment/ ಮಹಾರಾಷ್ಟ್ರ ಬಿಜೆಪಿ ನಾಯಕರ ಮೂಲಕ ಕಾಂಗ್ರೆಸ್ ಶಾಸಕರ ಸಂಪರ್ಕ ವಿಚಾರ ಬಗ್ಗೆಯೂ ಮಾತನಾಡಿ ನನಗೆ ಅದು ಗೊತ್ತಿಲ್ಲಪ್ಪ ಮಹಾರಾಷ್ಟ್ರದಲ್ಲಿ ನಾವು ಗ್ರಾ.ಪಂ. ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಮಗ್ಗುಲು ಮುರಿದಿದ್ದೇವೆ ನಾನು ಓಬಿಸಿ ಅಷ್ಟೇ ಅಲ್ಲ, ನಾನು ಹಿಂದುತ್ವವಾದಿ ಬರೀ ಒಬಿಸಿ, ದಲಿತರು ಅಂತಾ ಸಿದ್ದರಾಮಯ್ಯ ನಾಟಕ ಮಾಡಿದ ಹಾಗೆ ನಾವು…
ಬೆಂಗಳೂರು: KEA ನಡೆಸಿದ FDA ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. https://ainlivenews.com/knee-pain-treatment-joint-pain-treatment/ ನಗರದಲ್ಲಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಂದರ್ಭದಲ್ಲಿ ನಮ್ಮವರೇ ಇರುತ್ತಾರೆ. ಮೊಬೈಲ್ ಫಾರೆನ್ಸಿಕ್ ರಿಪೋರ್ಟ್ಗಾಗಿ ಕಳಿಸಲಾಗಿದೆ. ಪರೀಕ್ಷೆಯಲ್ಲಿ ಏನೆಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ನಾವು ತೆಗೆದುಕೊಂಡಿದ್ದೇವೆ ಎಂದರು. ಕೆಲವು ಕಡೆಗಳಲ್ಲಿ ಪರೀಕ್ಷೆ ಅಕ್ರಮ ನಡೆದಿದೆ. ಪ್ರಕರಣದ ಗಂಭೀರತೆ ಮೇಲೆ ಸರ್ಕಾರ ತನಿಖಾ ಸಂಸ್ಥೆಗೆ ಕೇಸ್ ನೀಡುತ್ತೆ. ಪ್ರಾಥಮಿಕ ತನಿಖಾ ವರದಿ ರೆಡಿ ಮಾಡಿ ತನಿಖಾ ಸಂಸ್ಥೆಗೆ ನೀಡಬೇಕಾಗುತ್ತೆ. ಬಿಜೆಪಿ ಅವರೇ ದಯವಿಟ್ಟು ಆತ್ಮಾವಲೋಕನ ಮಾಡಿಕೊಳ್ಳಿ ಬಿಜೆಪಿ ಸರ್ಕಾರದಲ್ಲಿ ನಿಮ್ಮ ಮಂತ್ರಿಗಳು, ಶಾಸಕರೆ ಆರೋಪಿಗಳಿಗೆ ಸಹಕಾರ ಕೊಟ್ಟಿದ್ದು ಎಲ್ಲರಿಗೂ ಗೊತ್ತಿದೆ. ನಮ್ಮ ಅಧಿಕಾರಿಗಳು ಯಾರಾದ್ರು ಇದರಲ್ಲಿ ಇದ್ದರೆ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
ಬೆಂಗಳೂರು: ನಮ್ಮ ಜೆಡಿಎಸ್ ಪಕ್ಷದಿಂದ ಯಾವುದೇ ಶಾಸಕರು ಪಕ್ಷವನ್ನು ತೊರೆದು ಹೋಗಲ್ಲ ಎಂದು ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. https://ainlivenews.com/knee-pain-treatment-joint-pain-treatment/ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿನ್ನೆ ಸಭೆಯಲ್ಲಿ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು. ಕೆಲವೊಬ್ಬರು ನಮ್ಮ ಪಕ್ಷದಲ್ಲಿ ಶಾಸಕರು ಪಕ್ಷ ಬಿಟ್ಟು ಹೋಗ್ತಾರೆಂದು ಗೊಂದಲ ಸೃಷ್ಟಿ ಮಾಡ್ತಿದ್ದಾರೆ ಆದ್ರೆ ನಮ್ಮ ಪಕ್ಷದಿಂದ ಯಾರು ಪಕ್ಷ ತೊರೆಯುವುದಿಲ್ಲ ಎಂದರು. ಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಭಾಗಿಯಾಗಿರಲಿಲ್ಲ ಅವರು ನಮ್ಮ ಮನೆಯ ಮಗ, ಅವರಲ್ಲಿ ಸ್ವಲ್ಪ ಗೊಂದಲ ಇದೆ. ಅವರನ್ನು ಕರೆದು ಮಾತನಾಡ್ತೇನೆ. ಶಾಸಕರು ಪಕ್ಷ ಬಿಟ್ಟು ಹೋಗ್ತಾರೆಂದು ಗೊಂದಲ ಸೃಷ್ಟಿ ಮಾಡ್ತಿದ್ದಾರೆ.
ಬೆಂಗಳೂರು: ದೀಪಾವಳಿ ಮುಗಿದ ನಂತರ ನವೆಂಬರ್ 15ಕ್ಕೆ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. https://ainlivenews.com/knee-pain-treatment-joint-pain-treatment/ ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೀಪಾವಳಿ ನಂತರ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗುತ್ತವೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ, ಹೀಗಿರುವಾಗ ನಮ್ಮ ಶಾಸಕರನ್ನು ಅವರು ಸೆಳೆದುಕೊಳ್ಳುವುದು ದೂರದ ಮಾತು ಎಂದರು
ಬೆಂಗಳೂರು: 15 ದಿನದೊಳಗೆ ಎಲ್ಲರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ. ಹೀಗಾಗಿ ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. https://ainlivenews.com/knee-pain-treatment-joint-pain-treatment/ ಬೆಂಗಳೂರು ಒನ್ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ವರಂ ಬೆಂಗಳೂರು ಒನ್ ಸೆಂಟರ್ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪರಿಶೀಲನೆ ನಡೆಸಿ ಪ್ರತಿ ಜಿಲ್ಲೆಯಿಂದಲೂ ಮಾಹಿತಿ ಪಡೆಯುತ್ತಿದ್ದಾರೆ. ಕಲಬುರಗಿ ಜಿಲ್ಲೆಯಲ್ಲೇ 14 ಸಾವಿರ ‘ಗೃಹಲಕ್ಷ್ಮೀ’ ಅರ್ಜಿ ಬಾಕಿ ಇದೆ. ಈ ಹಿನ್ನೆಲೆ ಕಲಬುರಗಿ ಸಿಡಿಪಿಒಗೆ ತರಾಟೆ ತೆಗೆದುಕೊಂಡಿದ್ದಾರೆ. ಆದಷ್ಟು ಬೇಗ ಅರ್ಜಿಯನ್ನು ವಿಲೇವಾರಿ ಮಾಡಲು ಏನು ಸಮಸ್ಯೆ? ಏಕೆ ಇಷ್ಟು ಅರ್ಜಿ ಬಾಕಿ ಇದೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ವಾರದೊಳಗೆ ಅರ್ಜಿ ವಿಲೇವಾರಿ ಮಾಡುವುದಾಗಿ CDPO ತಿಳಿಸಿದ್ದಾರೆ.