Author: AIN Author

ಬೆಂಗಳೂರು:-ಡಿಕೆಶಿ ವಿರುದ್ಧ ಸಿಬಿಐ ತನಿಖೆ ವಾಪಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ಸಿದ್ದರಾಮಯ್ಯ ತಿರುಚುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಇ.ಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಕೆಲವು ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸಿಬಿಐಗೆ ವಹಿಸುವಂತೆ ಸೂಚನೆ ನೀಡಿದ್ದರಿಂದಲೇ ನಮ್ಮ ಸರ್ಕಾರ ಈ ಕ್ರಮ ತೆಗೆದುಕೊಂಡಿತ್ತು ಎಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡರು. ಅಂದು ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯ ಪಡೆದೇ ಸಿಬಿಐ ತನಿಖೆಗೆ ಆದೇಶ ಮಾಡಲಾಗಿತ್ತು. ಇ.ಡಿಯವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಸಿಬಿಐಗೆ ಕೊಡುವಂತೆ ಸೂಚನೆ ಕೊಟ್ಟಿದ್ದರಿಂದ ಆದೇಶ ಮಾಡಿದೆವು. ಇದರಲ್ಲಿ ಯಾವುದೇ ನಿಯಮಗಳು ಉಲ್ಲಂಘನೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇದೆಲ್ಲವೂ ಗೊತ್ತಿದ್ದರೂ ಜನರನ್ನು ದಿಕ್ಕು ತಪ್ಪಿಸಲು ಸುಳ್ಳು ಹೇಳುತ್ತಿದ್ದಾರೆ. ಎಜಿಯವರ ಅಭಿಪ್ರಾಯದ ಮೇರೆಗೆ ಸಿಬಿಐಗೆ ವಹಿಸಿದ್ದೆವು. ಒಂದಲ್ಲ, ಎರಡಲ್ಲ, ಸಾವಿರ ಬಾರಿ ಹೇಳುತ್ತೇನೆ. ನಾನು ಹೇಳಿರುವುದಕ್ಕೆ ಬದ್ಧನಾಗಿದ್ದೇನೆ. ಇನ್ನು ಮುಂದಾದರೂ ಸರ್ಕಾರ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು…

Read More

ತುಮಕೂರು:- ಸಿಬಿಐನಿಂದ ತನಿಖೆ ವಾಪಸ್ ಪಡೆದ ಸರ್ಕಾರ, ಜನರ ಮುಂದೆ ಬೆತ್ತಲಾಗಿದೆ ಎಂದು ಎ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲಿನ ಪ್ರಕರಣದ ತನಿಖೆಯನ್ನು ಸಿಬಿಐನಿಂದ ರಾಜ್ಯ ಸರ್ಕಾರ ವಾಪಸ್ ಪಡೆದು ಜನರ ಮುಂದೆ ಬೆತ್ತಲಾಗಿದೆ ಎಂದರು. ಒಮ್ಮೆ ಎಫ್‌ಐಆರ್ ದಾಖಲಿಸಿ, ದೋಷಾರೋಪಣೆ ಪಟ್ಟಿ ಸಲ್ಲಿಸಿದ ನಂತರ ಬದಲಾವಣೆ ಮಾಡಲು ನ್ಯಾಯಾಧೀಶರ ಅನುಮತಿ ಪಡೆಯಬೇಕು. ನ್ಯಾಯಾಲಯದಲ್ಲಿ ಇರುವ ಪ್ರಕರಣದ ಬಗ್ಗೆ ನ್ಯಾಯಾಧೀಶರೇ ತೀರ್ಮಾನ ತೆಗೆದುಕೊಳ್ಳಬೇಕು. ವಾಪಸ್ ಪಡೆಯಲು ಸಚಿವ ಸಂಪುಟಕ್ಕೆ ಅಧಿಕಾರ ಇಲ್ಲ’ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ಕಾನೂನು, ನಿಯಮಗಳ ಬಗ್ಗೆ ಮಾತನಾಡುತ್ತಾರೆ. ಹಿಂದೆ ಸಿಬಿಐನವರು ಅನುಮತಿ ಕೇಳಿದ್ದು, ಸರ್ಕಾರ ಒಪ್ಪಿಗೆ ನೀಡಿತ್ತು. ಶಿವಕುಮಾರ್ ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ನಿರ್ದೋಷಿಯಾಗಿ ಹೊರ ಬಂದು ಜನರ ಮುಂದೆ ನಿಲ್ಲಬೇಕಿತ್ತು. ವಾಪಸ್ ತೆಗೆದುಕೊಂಡಿರುವುದನ್ನು ನೋಡಿದರೆ ನ್ಯಾಯಾಲಯಕ್ಕೆ ಸವಾಲ್ ಹಾಕಿದಂತಿದೆ ಎಂದು ತಿಳಿಸಿದರು. ಲೋಕಸಭೆ ಚುನಾವಣೆಗೂ ಮುನ್ನ ಒಳ ಮೀಸಲಾತಿ ಜಾರಿಗೆ ಬರಲಿದೆ. ಹಿಂದಿನ ಬಿಜೆಪಿ ಸರ್ಕಾರ ಒಳ ಮೀಸಲಾತಿ…

Read More

ಶಿವಮೊಗ್ಗ:- ನ.26ರಂದು ಶಿವಮೊಗ್ಗಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ನವೆಂಬರ್ 26ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ. ಸಂಜೆ 4 ಗಂಟೆಗೆ ಗದಗ ದಿಂದ ಶಿವಮೊಗ್ಗಕ್ಕೆ ಬರುವ ಅವರು, ಇಲ್ಲಿನ ಈಡಿಗರ ಭವನದಲ್ಲಿ ನಡೆಯುವ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದು, ನವೆಂಬರ್ 27ರಂದು ಬೆಳಿಗ್ಗೆ 9.30ಕ್ಕೆ ಬಾಳೆಹೊನ್ನೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಮದ್ದೂರು:- ರೈತರು ಕಾವೇರಿ ಹೋರಾಟ ಕೈಬಿಡಿ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಧರಣಿಯನ್ನು ಕೈಬಿಡುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು 38 ದಿನಗಳವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಈ ಕುರಿತು ಜಲಸಂಪನ್ಮೂಲ ಸಚಿವರು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಜಲಾಶಯಗಳಲ್ಲಿ ನೀರು ಇದ್ದರೆ ತಾನೇ ಬಿಡೋಕೆ ಸಾಧ್ಯ. ನೀರಿನ ಪರಿಸ್ಥಿತಿ ಏನು ಇದೆ ಎನ್ನುವುದನ್ನೂ ನೋಡಬೇಕಿದೆ. ನಮ್ಮಲ್ಲಿ ನೀರು ಇದ್ದರೆ ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ. ಈಗಾಗಲೇ ಬೆಳೆಗೆ ನೀರು ಕೊಟ್ಟಿದ್ದೇವೆ. ಸದ್ಯಕ್ಕೆ ಕುಡಿಯಲು ಮಾತ್ರ ನೀರು ಇದೆ. ವಾಸ್ತವ ಪರಿಸ್ಥಿತಿಯನ್ನು ನೀರು ನಿರ್ವಹಣಾ ಸಮಿತಿ, ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಇದರ ನಡುವೆಯೂ ನೀರು ಹರಿಸುವಂತೆ ಶಿಫಾರಸು ಮಾಡಿದರೆ ನೀರು ಬಿಡಲು ಹೇಗೆ ಸಾಧ್ಯ ಎಂದು…

Read More

ಬೆಂಗಳೂರು:- ಬಿಜೆಪಿಗೆ ಮರಳಿ ಹೋಗುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಜನಾರ್ದನ್ ರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಈಗ ಅದು ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ ಎಂದರು. ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಈಗ ಅದು ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ. ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಯೋಚನೆಯೇ ಮಾಡಿಲ್ಲ. ಕೆಆರ್​ಪಿಪಿ ಪಕ್ಷದ ಸ್ಥಾಪಿಸಿದಾಗ ಯಾರೆಲ್ಲಾ ಎಷ್ಟೇ ಪ್ರಯತ್ನಿಸಿದರೂ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ನಾನು ಮುಂದೆ ಹೋಗುತ್ತೇನೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನನ್ನ ಸಹಾಯ ಕೇಳುವ ಪರಿಸ್ಥಿತಿಯಲ್ಲಿ ಬಿಜೆಪಿ ಇಲ್ಲ. ಯಡಿಯೂರಪ್ಪ ಅವರನ್ನು ತಂದೆಯ ಸ್ಥಾನದಲ್ಲಿ ಗೌರವಿಸಿದರೆ, ಶ್ರೀರಾಮುಲು ಅವರನ್ನು ಮಗು ರೂಪದಲ್ಲಿ ನೋಡುತ್ತೇನೆ. ಅವರು ಆಯಾ ಪಕ್ಷದಲ್ಲಿ ಚೆನ್ನಾಗಿರಲಿ ಎಂದು ಬಯಸುವೆ ಹೊರತು ಅವರನ್ನು ಆಹ್ವಾನ ಮಾಡಲ್ಲ ಎಂದು ಹೇಳಿದ್ದಾರೆ.

Read More

ಹೈದರಾಬಾದ್:- ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಉತ್ತರ ಪ್ರದೇಶದಲ್ಲಿ ಹಲಾಲ್‌ ಟ್ಯಾಗ್ ಇರುವ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ ಬೆನ್ನಲ್ಲೇ ಹಲಾಲ್‌ ಟ್ಯಾಗ್ ಇರುವ ಉತ್ಪನ್ನಗಳ ನಿಷೇಧದ ಕುರಿತು ಸ್ಪಷ್ಟನೆ ನೀಡಿದ್ದಾರೆ ದೇಶಾದ್ಯಂತ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ನಿಷೇಧದ ಕುರಿತು ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹಲಾಲ್‌ ಪ್ರಮಾಣಪತ್ರ ಇರುವ ಉತ್ಪನ್ನಗಳ ಮಾರಾಟ, ಸಂಗ್ರಹಣೆ, ಸಾಗಣೆಯ ನಿಷೇಧದ ಕುರಿತು ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದರು. ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ಕೆಲವು ದಿನಗಳ ಹಿಂದಷ್ಟೇ ನಿಷೇಧಿಸಿತ್ತು. “ಜನರ ಆರೋಗ್ಯದ ದೃಷ್ಟಿಯಿಂದ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ಉಲ್ಲೇಖಿಸಿದೆ ಎನ್ನಲಾಗಿದೆ.

Read More

ಹೊರಗಡೆ ನನಗೂ 35 ಕಂಪನಿಯಿದೆ ಎಂಬ ವಿನಯ್​ ಹೇಳಿಕೆಗೆ ಇಶಾನಿ ಖಡಕ್ ಉತ್ತರ ನೀಡಿದ್ದಾರೆ. ಬಿಗ್​ ಮನೆಯಿಂದ ಔಟ್​ ಆದ ಬಳಿಕ ಖಾಸಗಿ ವಾಹಿನಿಯೊಂದರಲ್ಲಿ ನಡೆದ ವಿಶೇಷ ಸಂದರ್ಶನದಲ್ಲಿ ಭಾಗಿಯಾದ ಇಶಾನಿ ಬಿಗ್​ಬಾಸ್​ ಮನೆಯೊಳಗಿನ ಹಲವು ರೋಚಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ತಮಗೆ ಮನೆಯಲ್ಲಿ ಉಳಿಯಲು ಒಂದು ಚಾನ್ಸ್ ಕೊಡಬಹುದಿತ್ತು ಎಂದು ಅಭಿಪ್ರಾಯಿಸಿದರು. ಈ ಮಧ್ಯೆ ಪ್ರತಾಪ್ ಮತ್ತು ವಿನಯ್​​ ನಡುವೆ ಉಂಟಾದ ಒಂದು ಬಿರುಸಿನ ವಾಗ್ದಾಳಿಯಲ್ಲಿ ವಿನಯ್​ ನೀಡಿದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಟ್ರೋಲ್​ಗೆ ಗುರಿಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಇಶಾನಿ ಈಗ ಪ್ರತಿಕ್ರಿಯಿಸಿದ್ದಾರೆ. ಡ್ರೋಣ್ ಪ್ರತಾಪ್​ಗೆ ಹೊರಗಡೆ ನನಗೂ 35 ಕಂಪೆನಿಯಿದೆ ಎಂದು ವಿನಯ್​​ ಹೇಳಿದ್ದನ್ನು ನೆನಪಿಸಿಕೊಂಡ ಇಶಾನಿ, ‘ಇದು ತುಂಬ ಹಾಸ್ಯಸ್ಪದವಾಗಿದೆ, ಟ್ರೋಲ್​ ಮಾಡಿದ್ದಾರೆ ಎಂದರೆ ಏನೂ ಹೇಳಲಿ? ಜನಗಳಿಗೆ ಏನು ಅನಿಸುತ್ತೋ ಅದನ್ನೇ ಮಾಡಿದ್ದಾರೆ’ ಎಂದು ಹೇಳಿದರು

Read More

ತುಮಕೂರು:- ಆಜಾನ್ ಸದ್ದು ಕೇಳಿಸುತ್ತಿದ್ದಂತೆ ಗೃಹ ಸಚಿವ ಪರಮೇಶ್ವರ್ ಅವರು ಮಾತು ನಿಲ್ಲಿಸಿದ್ದಾರೆ. ತುಮಕೂರಿನ ಚಿಲುಮೆ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿತ್ತು. ಸ್ವತ್ತು ಕಳವು ಪ್ರಕರಣದಲ್ಲಿ ವಶಪಡಿಸಿಕೊಂಡಿರುವ ಸ್ವತ್ತುಗಳ ಪ್ರದರ್ಶನ ಹಾಗೂ ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದ ಬಳಿಕ ಸಚಿವ ಡಾ.ಜಿ.ಪರಮೇಶ್ವರ್ ನಡೆಸುತ್ತಿದ್ದರು. ಈ ವೇಳೆ ಆಜಾನ್ ಸದ್ದು ಕೇಳಿಸಿದೆ. ಆಜಾನ್ ಸದ್ದು ಕೇಳುತ್ತಿದ್ದಂತೆ ಪರಮೇಶ್ವರ ಅವರು ಸೈಲೆಂಟ್ ಆಗಿದ್ದಾರೆ. ಸುಮಾರು ಎರಡು ನಿಮಿಷಕ್ಕೂ ಹೆಚ್ಚು ಕಾಲ ಮಾತು ನಿಲ್ಲಿಸಿ ಪರಮೇಶ್ವರ್ ಸುಮ್ಮನೇ ಕುಳಿತರು. ಆಜಾನ್ ಬಳಿಕ ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದಾರೆ.

Read More

ಬೆಂಗಳೂರು:- ನವಂಬರ್​ 27ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಪಕ್ಷವು ಜನತಾ ದರ್ಶನ ನಡೆಸುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಜನತೆಗೆ ಮತ್ತಷ್ಟು ಹತ್ತಿರವಾಗುವ ಬಗ್ಗೆ ಚಿಂತನೆ ನಡೆಸಿದೆ. ಇನ್ನು ಜನತಾ ದರ್ಶನದಲ್ಲಿ ಭಾಗಿಯಾಗುವ ಜನರು ನಿಮ್ಮಗಳ ಜಯೆ ಈ ಅಗತ್ಯ ದಾಖಲೆಗಳನ್ನು ಕೊಂಡೊಯ್ಯುವುದು ಅತ್ಯಗತ್ಯ ಎಂದು ತಿಳಿದು ಬಂದಿದೆ. ಈ ಕುರಿತು ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ ನವೆಂಬರ್ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ. ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾಹಿತಿಯನ್ನು ಹಂಚಿಕೊಂಡಿದೆ. ನವೆಂಬರ್​ 27ರಂದು ಸಿಎಂ ನಡೆಸಲಿರುವ ಜತನಾ ದರ್ಶನದಲ್ಲಿ ರಾಜ್ಯ ಸರ್ಕಾರದ ಸಚಿವರು ಸೇರಿದಂತೆ…

Read More

ಚಿತ್ರದುರ್ಗ:- ಡಿಕೆಶಿ ವಿರುದ್ಧ CBI ತನಿಖೆ ಹಿಂಪಡೆದ ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕ ಆರ್ ಅಶೋಕ್ ಖಂಡಿಸಿದ್ದಾರೆ. ವಿಪಕ್ಷ ನಾಯಕ ಸ್ಥಾನ ಪಡೆದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದ ಅವರು ಶಿವಶರಣ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ರಕ್ಷಣೆಗಾಗಿ ಕಾಂಗ್ರೆಸ್ ಕಾನೂನನ್ನು ಉಲ್ಲಂಘಿಸಿದೆ ಎಂದಿದ್ದಾರೆ. ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಕೇಸ್‍ನ್ನು ಸಿಬಿಐನಿಂದ ಮರಳಿ ಪಡೆದ ರಾಜ್ಯ ಸಚಿವ ಸಂಪುಟದ ತೀರ್ಮಾನ ಅಕ್ರಮ ಹಾಗೂ ಅನ್ಯಾಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿದ್ದವರು, ಈ ರೀತಿಯ ತೀರ್ಮಾನಕ್ಕೆ ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸುರ್ಜೇವಾಲಾ ಅವರ ಒತ್ತಡದಿಂದಾಗಿ ಸಿಎಂ ಒಪ್ಪಿದ್ದಾರೆ. ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕಪ್ಪು ಚುಕ್ಕಿ ಎಂದಿದ್ದಾರೆ. ಡಿಕೆಶಿ ರಕ್ಷಣೆಗಾಗಿಯೇ ವಿಶೇಷ ಸಂಪುಟ ಸಭೆ ನಡೆದಿದೆ. ಈ ಹಿಂದೆ ಸಣ್ಣ ವಿಚಾರಕ್ಕೂ ದೊಡ್ಡದಾಗಿ ಪ್ರಚಾರ ಪಡೆದು ಬಳಿಕ ಘೋಷಿಸುವ ಸಂಪ್ರದಾಯವಿತ್ತು.…

Read More