ಬೆಂಗಳೂರು: ಅಲ್ಲಿ ಬ್ರೋಕರ್ ಗಳ್ದೇ ಆಟ.. ಅವರು ಫಿಕ್ಸ್ ಮಾಡಿದ್ದೇ ರೇಟ್ . ಅವರ ಆಟಕ್ಕೆ ಅಲ್ಲಿನ ಅಧಿಕಾರಿಗಳೇ ಸಪೋರ್ಟ್ ಇದರಿಂದ ಜಿಲ್ಲಾಡಳಿತ ಅಂಗಳದಲ್ಲಿ ನಿತ್ಯವೂ ಕಿರಿಕಿರಿ. ಇದೆಕ್ಕೆಲ್ಲಾ ಬ್ರೇಕ್ ಹಾಕಬೇಕು ಅಂತ ಬೆಂಗಳೂರು ಜಿಲ್ಲಾಡಳಿತ ಕಚೇರಿಯ ಎಲ್ಲಾ ವಿಭಾಗಗಳು ಕಾರ್ಯವೈಖರಿ ಬದಲಾಗಲಿದೆ.ಹೌದು ನಗರದ ಭ್ರಷ್ಟ ಕೂಪವಾಗಿರೋ ಜಿಲ್ಲಾಡಳಿತ ಇನ್ಮೇಲೆ ಕಂಪ್ಯೂಟರ್ ಕರಣ ಆಗ್ತಿದೆ.. ಬೆಂಗಳೂರು ನಗರ ಕಂದಾಯ ಇಲಾಖೆ ಆವರಣದಲ್ಲಿ ಬ್ರೋಕರ್ ಗಳ ಹಾವಳಿ ಹೆಚ್ಚಾಗಿದೆ ಅನ್ನೋದು ಇವತ್ತು ನಿನ್ನೆಯ್ದಲ್ಲ. ಇದಕ್ಕೆ ಬ್ರೇಕ್ ಹಾಕಬೇಕು ಅಂತ ಬೆಂಗಳೂರು ನಗರ ಡಿಸಿ ಕೆಎ ದಯಾನಂದ್ ಇದೀಗ ಹೆಜ್ಜೆ ಇಟ್ಟಿದ್ದಾರೆ. ಕಂದಾಯ ಇಲಾಖೆಯಲ್ಲಿ ಹೊಸ ವ್ಯವಸ್ಥೆಗೆ ಒಗ್ಗಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇ ಆಡಳಿತ ಮಾಡಿದೆ. ಈ ಮೊದಲು ಕಡತಗಳು ತಿಂಗಳುಗಟ್ಟಲೇ ವಿಲೇವಾರಿ ಆಗದೆ ಕಚೇರಿಗೆ ಸಾರ್ವಜನಿಕರು ಅಲೆದಾಡಬೇಕಿದೆ ಎಂಬುದು ನಾಗರಿಕರ ಪ್ರಮುಖ ತಗಾದೆ ಇತ್ತು. ಇದಕ್ಕೆ ಕಡಿವಾಣ ಹಾಕಿ ಕಡತ ವಿಲೇವಾರಿಯಲ್ಲಿ ತ್ವರಿತ ಹಾಗೂ ಪಾರದರ್ಶಕ ವ್ಯವಸ್ಥೆ ತರಬಯಸಲು ಎಲ್ಲಾ…
Author: AIN Author
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ವಿಳಂಬವಾಗುತ್ತಿರುವುದು ಮತ್ತು ಆರ್ಥಿಕ ಇಲಾಖೆ ಸೂಚನೆ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ತಿಂಗಳದ್ದು ಸುಮಾರು ಒಂದು ಕೋಟಿ ಹತ್ತು ಲಕ್ಷ ಜನರಿಗೆ ಸರ್ಕಾರದಿಂದ ಹಣ ಬಿಡುಗಡೆ ಆಗಿದೆ. ಕೆವೈಸಿ ತೊಂದರೆ, ತಾಂತ್ರಿಕ ತೊಂದರೆ ಆಗಿದ್ದರಿಂದ ಹಣ ವರ್ಗಾವಣೆಗೆ ತೊಂದರೆ ಆಗಿದೆ. ಸರ್ಕಾರದಿಂದ ಹಣ ಬರುವುದು ಕೂಡ ಲೇಟ್ ಆಗ್ತಿದೆ. ತಡವಾದರೂ ಒಮ್ಮೆಯೇ ನಾಲ್ಕು ಸಾವಿರ ಹಣ ಜಮಾ ಆಗುತ್ತದೆ. ಅಗಸ್ಟ್ 30ರ ನಂತರ ನೋಂದಣಿ ಮಾಡಿಸಿದವರಿಗೆ ಒಂದು ಕಂತಿನ ಹಣ ಬಂದಿದೆ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ. ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಇಲಾಖೆಯಿಂದ ಆಗ್ತಿದೆ. ಬೆಂಗಳೂರಿನ ಬಾಲ ಭವನದಲ್ಲಿ ಪ್ರತಿಯೊಂದು ಜಿಲ್ಲೆಯ ಸಿಡಿಪಿಒ ಕರೆದು ಕ್ಲಿಯರ್ ಮಾಡುತ್ತಿದ್ದೇವೆ. ಆರ್ಥಿಕ ಇಲಾಖೆಯ ಸುತ್ತೋಲೆಯನ್ನು ಸೋಮವಾರ ನೋಡಿದ್ದೇನೆ. ಇದು ಬಹಳ ಒಳ್ಳೆಯದು, ಜನರಿಗೆ ಹಣ ಯಾವಾಗ ಬರುತ್ತೆ ಅಂತಾ ಗೊಂದಲವಿತ್ತು. 15ರಿಂದ 20ರ ಒಳಗೆ ಗೃಹಲಕ್ಷ್ಮಿ ಹಣ ಬರುತ್ತೆ ಅನ್ನೋ ವಿಶ್ವಾಸವಿರಲಿ.…
ಧಾರವಾಡ: ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದರ ಜೊತೆಗೆ ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿಯೂ ಅಭಾವ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಲಪ್ರಭಾ ಜಲಾಶಯದಿಂದ 1 ಟಿಎಂಸಿ ನೀರು ಧಾರವಾಡ ಜಿಲ್ಲೆಗೆ ಬಿಡುಗಡೆಯಾಗಿದ್ದು, ಇಂದಿನಿಂದ 9 ದಿನಗಳ ಕಾಲ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಯಲಿದೆ. ಧಾರವಾಡ ಜಿಲ್ಲೆಯ ಕುಂದಗೋಳ, ಅಣ್ಣಿಗೇರಿ, ನವಲಗುಂದ ಹಾಗೂ ಹುಬ್ಬಳ್ಳಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಾಕಷ್ಟು ಸಮಸ್ಯೆ ಎದುರಾಗಿದೆ. ಸದ್ಯ ಬಿಡುಗಡೆಯಾಗುತ್ತಿರುವ 1 ಟಿಎಂಸಿ ನೀರಿನಿಂದ ಈ ನೀರಿನ ಅಭಾವ ಇರುವ ಪ್ರದೇಶಗಳಲ್ಲಿ ಕೆರೆ ತುಂಬಿಸಿಕೊಳ್ಳಲು ಅನುಕೂಲವಾಗಲಿದೆ. https://ainlivenews.com/supreme-ray-healing-centre-reiki-treatment/ ಈ ಹಿಂದೆ ಮಲಪ್ರಭಾ ನೀರಿನಿಂದ ಜಿಲ್ಲೆಯ 81 ಕೆರೆಗಳನ್ನು ತುಂಬಿಸಲಾಗಿತ್ತು. ಅದರಲ್ಲಿ ಸುಮಾರು 50 ಕೆರೆಗಳಲ್ಲಿ ಅರ್ಧದಷ್ಟು ನೀರು ಇನ್ನೂ ಇದೆ. 32 ಕೆರೆಗಳು ಅರ್ಧಕ್ಕಿಂತಲೂ ಕಡಿಮೆ ನೀರು ಹೊಂದಿವೆ. ಅಂತ ಕೆರೆಗಳಿಗೆ ನೀರು ತುಂಬಿಸಲು ಈಗ ಆದ್ಯತೆ ನೀಡಲಾಗಿದೆ. ಇದರಿಂದ 5 ರಿಂದ 6 ತಿಂಗಳವರೆಗೆ ನೀರಿನ…
ರಾಯಚೂರು: ಹಠಾತ್ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ರಾಯಚೂರು (Raichuru) ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ಜನರಲ್ ಸರ್ಜನ್ ಡಾ. ಚಂದ್ರಶೇಖರ ಮಾದಿನೂರು ಸಾವನ್ನಪ್ಪಿರುವ ವೈದ್ಯ. https://ainlivenews.com/supreme-ray-healing-centre-reiki-treatment/ ಎಂದಿನಂತೆ ರೋಗಿಗಳನ್ನ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಿದ್ದರು. ಸ್ವಲ್ಪ ಒತ್ತಡ ಎನ್ನಿಸಿದ್ದರಿಂದ ವಿಶ್ರಾಂತಿ ಪಡೆಯಲು ಮನೆಗೆ ತೆರಳಲು ಮುಂದಾದಾಗ ಮೆಟ್ಟಿಲು ಹತ್ತುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಮೇಲ್ಮಹಡಿಯಲ್ಲೇ ಮನೆಯಿದ್ದಿದುದರಿಂದ ಮೆಟ್ಟಿಲು ಹತ್ತಿ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಠಾತ್ ಹೃದಯಾಘಾತದಿಂದ ಸಾವು ಸಂಭವಿಸಿದ್ದು ಇಡೀ ಆಸ್ಪತ್ರೆಯಲ್ಲಿ ನೀರವ ಮೌನ ಆವರಿಸಿದೆ.
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮ ಜಿಲ್ಲೆಯ ಒಂದಷ್ಟು ಸಮಸ್ಯೆ ಇದೆ, ಬಗೆಹರಿಸಿಕೊಳ್ಳುತ್ತೇವೆ. ರಾಜಕೀಯವಾಗಿ ಎಲ್ಲಾ ಜಿಲ್ಲೆಗಳಲ್ಲೂ ಈ ಸಮಸ್ಯೆ ಇದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಬೆಳಗಾವಿಯಲ್ಲಿ ಸಮಸ್ಯೆ ಇತ್ತು. ಈಗಲೂ ಸಮಸ್ಯೆ ಇದ್ದೇ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಹೇಳಿದರು. ರಾಜ್ಯ ಬಿಜೆಪಿ ನಾಯಕರಿಂದ ಬರ ಅಧ್ಯಯನ ಪ್ರವಾಸ ವಿಚಾರವಾಗಿ ಮಾತನಾಡಿ ಕೇಂದ್ರವೇ ಅಧ್ಯಯನ ಮಾಡಿದೆ, ಇವರೇನು ಅಧ್ಯಯನ ಮಾಡುತ್ತಾರೆ? ನಾವು ಕೂಡ ಬರ ಅಧ್ಯಯನ ಮಾಡಿದ್ದೀವಲ್ಲ. ಬಿಜೆಪಿಯವರು ರಾಜಕೀಯಕ್ಕಾಗಿ ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ. ಕೇಂದ್ರ ತಂಡ ಅಧ್ಯಯನ ಮಾಡಿ ಹೋಗಿದೆ, ಆದರೆ ವರದಿ ನೀಡಿಲ್ಲ. ಮೊದಲು ಕೇಂದ್ರ ಸರ್ಕಾರದ ಬಳಿ ಚರ್ಚಿಸಿ ಅನುದಾನ ಕೊಡಿಸಲಿ. ಬರ ಅಧ್ಯಯನ ಮಾಡಬಾರದು ಅಂತಾ ನಾವು ಹೇಳಲು ಹೋಗಲ್ಲ. ಕೇಂದ್ರ ಸರ್ಕಾರದ ಬಳಿ 17,900 ಕೋಟಿ ರೂ. ಪರಿಹಾರ ಕೇಳಿದ್ದೇವೆ. 33,700 ಕೋಟಿ ನಷ್ಟವಾಗಿದೆ, ಅದನ್ನ ಮೊದಲು ಕೊಡಿಸಲಿ ಎಂದರು.
ಬೆಂಗಳೂರು: ಕೆಇಎ (KEA) ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಎಸ್ಕೇಪ್ ಪ್ರಕರಣ ಸಂಬಂಧ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಪರೀಕ್ಷೆಯಲ್ಲಿ ಅಕ್ರಮವಾದಾಗ ಸುಮ್ಮನೆ ಕುಳಿತಿಲ್ಲ. ಬಿಜೆಪಿಯವರು ಗಾಳಿಯಲ್ಲಿ ಗುಂಡು ಹಾರಿಸೋದು ಬಿಡಬೇಕು. ಇದರ ಬಗ್ಗೆ ಸಿಎಂ ಹಾಗೂ ಗೃಹ ಸಚಿವರು ಸಹ ಪ್ರತಿಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದ್ರು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆರ್.ಡಿ. ಪಾಟೀಲ್‌ಗೆ ನಾವಾಗಲಿ ನಮ್ಮ ಸರ್ಕಾರವಾಗಲಿ ದಯೆ ತೋರಿಸೋ ಉದ್ದೇಶವಿಲ್ಲ. ನಾವು ಕಳೆದ ನಾಲ್ಕು ದಿನಗಳಲ್ಲಿ 20 ಜನಗಳಿಗಿಂತ ಅಧಿಕ ಮಂದಿಯನ್ನು ಅರೆಸ್ಟ್ ಮಾಡಿದ್ದೀವಿ. ಆರ್.ಡಿ. ಪಾಟೀಲ್ ಕೂಡ ಇನ್ನೊಂದು ಎರಡು ಅಥವಾ ಮೂರು ದಿನಗಳಲ್ಲಿ ಸಿಗಬಹುದು. ನಮ್ಮ ಪೋಲಿಸ್ ಅಧಿಕಾರಿಗಳು ಆರ್.ಡಿ. ಪಾಟೀಲ್ ಹಿಡಿಯೋದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಪರೀಕ್ಷಾ ಸಮಯದಲ್ಲಿ ತಪಾಸಣೆ ಕೂಡಾ ಮಾಡಿದ್ದೀವಿ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರು: ಕೆಇಎ ಅಕ್ರಮದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ನಾಪತ್ತೆ ವಿಚಾರ ವಿಚಾರ ಏನು ಅಂತ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತೇನೆ. ಆರ್.ಡಿ.ಪಾಟೀಲ್ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಳ್ಳಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಹಾಗೆ ಸರ್ಕಾರಿ ನೌಕರರಿಗೆ ನ್ಯಾಯಯುತವಾಗಿ ವೇತನ ಪರಿಷ್ಕರಣೆ ಮಾಡಲು ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗುತ್ತಿದೆ. ಆದರೆ ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ. ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿಗಳ ಜಾರಿಗೆ ಹಣ ಇಲ್ಲ. ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ. ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ. ನಮ್ಮ ಸರ್ಕಾರ ಇದ್ದಾಗ ದೇಶದಲ್ಲೇ ಅಭಿವೃದ್ಧಿ ಹೊಂದಿದ ರಾಜ್ಯ ನಮ್ಮದಾಗಿತ್ತು. ಈಗ ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ. ಈ ಸರ್ಕಾರ ಬದುಕಿದ್ದೂ ಸತ್ತಂತೆ ಆಗಿದೆ. ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್ನವರು ಕಾಲಹರಣ ಮಾಡುತ್ತಿದ್ದಾರೆ. ಬಹಳ ಕಾಲ ಇವರನ್ನು ಹೀಗೇ ಬಿಡಲು ಆಗಲ್ಲ. ನಮ್ಮೆಲ್ಲಾ ಮುಖಂಡರೂ…
ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಿಂದ ಬರ ಅಧ್ಯಯನ ಪ್ರವಾಸ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಕೇಂದ್ರವೇ ಅಧ್ಯಯನ ಮಾಡಿದೆ, ಇವರೇನು ಅಧ್ಯಯನ ಮಾಡುತ್ತಾರೆ? ನಾವು ಕೂಡ ಬರ ಅಧ್ಯಯನ ಮಾಡಿದ್ದೀವಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಜೆಪಿಯವರು ರಾಜಕೀಯಕ್ಕಾಗಿ ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ. ಕೇಂದ್ರ ತಂಡ ಅಧ್ಯಯನ ಮಾಡಿ ಹೋಗಿದೆ, ಆದರೆ ವರದಿ ನೀಡಿಲ್ಲ. ಮೊದಲು ಕೇಂದ್ರ ಸರ್ಕಾರದ ಬಳಿ ಚರ್ಚಿಸಿ ಅನುದಾನ ಕೊಡಿಸಲಿ. ಬರ ಅಧ್ಯಯನ ಮಾಡಬಾರದು ಅಂತಾ ನಾವು ಹೇಳಲು ಹೋಗಲ್ಲ. ಕೇಂದ್ರ ಸರ್ಕಾರದ ಬಳಿ 17,900 ಕೋಟಿ ರೂ. ಪರಿಹಾರ ಕೇಳಿದ್ದೇವೆ. 33,700 ಕೋಟಿ ನಷ್ಟವಾಗಿದೆ, ಅದನ್ನ ಮೊದಲು ಕೊಡಿಸಲಿ. ಬಿಜೆಪಿಯ 25 ಸಂಸದರಿದ್ದಾರಲ್ಲ ಚರ್ಚಿಸಿ ಅನುದಾನ ಕೊಡಿಸಲಿ. ನಮ್ಮ ಸಚಿವರ ಭೇಟಿಗೆ ಕೇಂದ್ರ ಸರ್ಕಾರ ಸಮಯವನ್ನೇ ಕೊಟ್ಟಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು. ವೈಜ್ಞಾನಿಕ ಸಮೀಕ್ಷೆ ನಡೆಸಿಲ್ಲ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬರ ಅಧ್ಯಯನ ನಡೆಸಿದ್ದು…
ಮಂಗಳೂರು: ಪ್ರಖ್ಯಾತ ಹುಲಿವೇಷ ತಂಡವಾದ ಕಲ್ಲೇಗ ಟೈಗರ್ಸ್‌ನ (Kallega Tigers) ಮುಖ್ಯಸ್ಥ ಬರ್ಬರವಾಗಿ ಹತ್ಯೆಯಾದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ ನೆಹರೂ ನಗರ (Nehru Nagar) ಜಂಕ್ಷನ್‌ನಲ್ಲಿ ನಡೆದಿದೆ. ಅಕ್ಷಯ್ ಕಲ್ಲೇಗ (26) ಬರ್ಬರವಾಗಿ ಹತ್ಯೆಯಾದ ಯುವಕ. ಹುಲಿಕುಣಿತದಲ್ಲಿ ಕಲ್ಲೇಗ ಟೈಗರ್ಸ್ ತಂಡದ ನೇತೃತ್ವ ವಹಿಸಿಕೊಂಡಿದ್ದ ಅಕ್ಷಯ್‌ನನ್ನು ಮಾಣಿ-ಮೈಸೂರು ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿ ಕೊಲೆ (Murder) ಮಾಡಲಾಗಿದೆ. ಹತ್ಯೆಗೈದ ಬನ್ನೂರು ನಿವಾಸಿ ಮನೀಷ್ ಹಾಗೂ ಚೇತು ಘಟನೆಯ ಬಳಿಕ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿರುವ ಮಾಹಿತಿ ಲಭಿಸಿದೆ. ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದ ವಿಚಾರದಲ್ಲಿ ಆರೋಪಿಗಳು ಹಾಗೂ ಅಕ್ಷಯ್ ನಡುವೆ ಗಲಾಟೆಯಾಗಿತ್ತು. ಈ ಸಂದರ್ಭ ಎರಡು ಸಾವಿರ ರೂ. ನೀಡುವ ವಿಚಾರದಲ್ಲಿ ಮಾತುಕತೆ ವಿಕೋಪಕ್ಕೆ ತಿರುಗಿದೆ. https://ainlivenews.com/supreme-ray-healing-centre-reiki-treatment/ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಕೊನೆಗೆ ಮೂರಕ್ಕೂ ಅಧಿಕ…
ಕೋಲಾರ: ರೈತರ ವಿರುದ್ಧ ಅಪಾಯಕಾರಿ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ. ರೈತ ಕಾಯ್ದೆಯನ್ನ ರದ್ದುಪಡಿಸದೆ, ಹಿಂದಿನ ಸರ್ಕಾರ ತಂದ ಕಾಯ್ದೆಗಳನ್ನ ಜಾರಿ ಮಾಡುತ್ತಿದೆ. ಯಾವ ಕಾರ್ಪೋರೇಟ್ ಕಂಪನಿ ನಿಮ್ಮೊಂದಿಗೆ ಇದ್ದಾರೆ? ಇಂತಹ ಅಪಾಯದ ಕೆಲಸಕ್ಕೆ ಕೈ ಹಾಕಬೇಡಿ. ಕಾಯ್ದೆ ರದ್ದಿಪಡಿಸಬೇಕೆಂದು ಚಳುವಳಿ ಮಾಡಿದಾಗ, https://ainlivenews.com/supreme-ray-healing-centre-reiki-treatment/ ಕಾಯ್ದೆ ರೈತರಿಗೆ ವಿರುದ್ದ ಇದೆ ಎಂದು ಹೇಳಿದ್ರಿ. ಆಗ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ಚಳುವಳಿಯಲ್ಲಿ ಭಾಗವಹಿಸಿದ್ರು. ಜಾಹಿರಾತು ನೀಡುವ ಮೂಲಕ ರೈತರನ್ನ ಹರಾಜಿಗೆ ಇಟ್ಟಿದ್ದೀರಿ ಎಂದು ಕೋಲಾರದಲ್ಲಿ ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.