Author: AIN Author

ಹಾಸನ: ಪ್ರಸಿದ್ದ ಹಾಸನಾಂಬ ಜಾತ್ರೆ ಅದ್ಧೂರಿಯಾಗಿ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಿದ್ಧ ಹಾಸನಾಂಬೆ ದರ್ಶನ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಕೆಎನ್​ ರಾಜಣ್ಣ, ಶಾಸಕ ಶಿವಲಿಂಗೇಗೌಡ ಸಾಥ್​ ನೀಡಿದರು. https://ainlivenews.com/supreme-ray-healing-centre-reiki-treatment/ ಹಾಸನಾಂಬೆ ದರ್ಶನದ ಬಳಿಕ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಈ ಬಾರಿ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಇಂದು ಎರಡನೇ ಬಾರಿಗೆ ಹಾಸನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ನಾಡಪ್ರಭು ಕೆಂಪೇಗೌಡರ ಜಯಂತಿಯ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಹಾಸನಕ್ಕೆ ಆಗಮಿಸಿದ್ದರು.

Read More

ಬೆಂಗಳೂರು: ಸರ್ಕಾರಿ ನೌಕರರಿಗೆ ನ್ಯಾಯಯುತವಾಗಿ ವೇತನ ಪರಿಷ್ಕರಣೆ ಮಾಡಲು ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗುತ್ತಿದೆ. ಆದರೆ ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಕಿಡಿ ಕಾರಿದರು. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿಗಳ ಜಾರಿಗೆ ಹಣ ಇಲ್ಲ. ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ. ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ. ನಮ್ಮ ಸರ್ಕಾರ ಇದ್ದಾಗ ದೇಶದಲ್ಲೇ ಅಭಿವೃದ್ಧಿ ಹೊಂದಿದ ರಾಜ್ಯ ನಮ್ಮದಾಗಿತ್ತು ಎಂದರು. ಈಗ ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ. ಈ ಸರ್ಕಾರ ಬದುಕಿದ್ದೂ ಸತ್ತಂತೆ ಆಗಿದೆ. ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್​ನವರು ಕಾಲಹರಣ ಮಾಡುತ್ತಿದ್ದಾರೆ. ಬಹಳ ಕಾಲ ಇವರನ್ನು ಹೀಗೇ ಬಿಡಲು ಆಗಲ್ಲ. ನಮ್ಮೆಲ್ಲಾ ಮುಖಂಡರೂ ಚರ್ಚೆ ಮಾಡಿ ಇದೆಲ್ಲದರ ವಿರುದ್ಧ ಹೋರಾಟ ಮಾಡಲು…

Read More

ಹಾಸನ: ನಮ್ಮ ನಾಡಿನಲ್ಲಿ ಸಂಪತ್ತು ಹೇರಳವಾಗಿದ್ದು ಅದು ಸಮರ್ಪಕವಾಗಿ ಎಲ್ಲರಿಗೂ  ಸದ್ಬಳಕೆಯಾಗುವಂತೆ ಹಾಗೂ ಹಂಚಿಕೆಯಾಗುವಂತೆ ಈ ರಾಜ್ಯವನ್ನು ಆಳುವವರೆಗೆ ದೇವರು ಜ್ಞಾನೋದಯ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದ ಆದಿ ದೇವತೆ ಹಾಸನಾಂಬ ದೇಗುಲಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿಯೊಡನೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ, ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ದೇವರಿಗೆ ಪೂಜೆ ಸಲ್ಲಿಸುವ ವೇಳೆ ಬರದ ಸಂಕಷ್ಟದಿಂದ ನೊಂದಿರುವ ನಾಡಿನ ಅನ್ನದಾತ ರೈತರಿಗೆ ಒಳ್ಳೆಯದಾಗಲಿ, ನಾಡಿನ ಎಲ್ಲ ಜನರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದ ಅವರು, ಬಡವರ ರೈತರ ದೀನದಲಿತರ ಸೇವೆ ಮಾಡಲು ಒಳ್ಳೆಯ ಆರೋಗ್ಯವನ್ನು ತಾಯಿ ನನಗೆ ಕರುಣಿಸಲಿ ಎಂದು  ಕೇಳಿಕೊಂಡಿರುವುದಾಗಿ ತಿಳಿಸಿದರು. https://ainlivenews.com/supreme-ray-healing-centre-reiki-treatment/ ಪತ್ರಕರ್ತರ ಪ್ರಶ್ನೆಯೆಂದಕ್ಕೆ ಉತ್ತರಿಸಿದ ಅವರು ಜೆ ಡಿ ಎಸ್ ನ ಎಲ್ಲಾ ಶಾಸಕರು ಹಾಸನಾಂಬ ದರ್ಶನಕ್ಕೆ ಆಗಮಿಸಲಿದ್ದು ಹಾಸನಾಂಬೆ ದೇವಿಯ ಪವಿತ್ರ ಕ್ಷೇತ್ರದಿಂದಲೇ ತಾವು ಒಗ್ಗಟ್ಟು ಪ್ರದರ್ಶನ ಮಾಡುವುದಾಗಿ ಇದೆ ವೇಳೆ…

Read More

ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ   ನಾಡಿನ ಹಿರಿಯ ರಾಜಕೀಯ ನಾಯಕ ಡಿ.ಬಿ.ಚಂದ್ರೇಗೌಡ ಅವರು ನಿಧನದ ಸುದ್ದಿ ಕೇಳಿ ಬಹಳ ದುಃಖವಾಯ್ತು. ಅವರ ನಿಧನಕ್ಕೆ ಸಂತಾಪ‌ ಸೂಚಿಸಿದ ವಾಟಾಳ್ ನಾಗರಾಜ್ ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ತು ಸದಸ್ಯರಾಗಿ ಭಾರತದ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರುಅವರು ರಾಜ್ಯದಲ್ಲಿ ಸಚಿವರಾಗಿದ್ದ ಅವರ ಆದರ್ಶ ಬದುಕುವಿಚಾರ ಪೂರ್ಣ ಆಲೋಚನೆ , ಪರಿಣಾಮಕಾರಿ ಭಾಷಣ ಅಧ್ಯಯನ ಶೀಲ ಮನಸ್ಸು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಬೇಕು ಎಂದರು. ಹಾಗೆ ಸ್ಪೀಕರ್ ಸ್ಥಾನಕ್ಕೆ ಗಾಂಭೀರ್ಯ ತಂದುಕೊಟ್ಟವರುನಾಡಿನ ಸಜ್ಜನ ರಾಜಕಾರಣಿಗಳ ಸಾಲಿನಲ್ಲಿ ಮತ್ತೊಬ್ಬರಿಲ್ಲ ಇವರು ನನ್ನ ಸಹಪಾಠಿ ಆತ್ಮೀಯ ಬಾಂಧವ್ಯದಿಂದ ಮಾತನಾಡಿಸುತ್ತಿದ್ದರು ಸಜ್ಜನ ವ್ಯಕ್ತಿ ಇವರ ಅಗಲಿಕೆ ಕನ್ನಡಿಗರಿಗೆ ತುಂಬಲಾರದ ನಷ್ಟ ಎಂದರು.

Read More

ಬಿಗ್ ಬಾಸ್ ಮನೆಯಲ್ಲಿ (Bigg Boss House 10) ಪ್ರತಿ ಬಾರಿಯಂತೆ ಈ ಸಲ ಕೂಡ ಲವ್ ಸ್ಟೋರಿಗಳ ಹಾವಳಿ ಜೋರಾಗಿದೆ. ಅದರಲ್ಲಿ ಸಂಗೀತಾ- ಕಾರ್ತಿಕ್ ಒಡನಾಟ ಹೈಲೆಟ್ ಆಗಿದೆ. ಇದೀಗ ‘ಸೂಪರ್ ಸಂಡೇ ವಿತ್ ಸುದೀಪ್’ ಕಾರ್ಯಕ್ರಮದಲ್ಲಿ ಕಾರ್ತಿಕ್‌ಗೆ ಕಿವಿಮಾತೊಂದನ್ನ ತನಿಷಾ ಹೇಳಿದ್ದಾರೆ. ಕಾರ್ತಿಕ್‌ಗೆ ನಮ್ಮ ಹುಡುಗಿ ನಿನ್ನ ಲವ್‌ನಲ್ಲಿ ಬೀಳಲ್ಲ, ವ್ಯರ್ಥ ಪ್ರಯತ್ನ ಅಂತ ತನಿಷಾ ಎಚ್ಚರಿಕೆ ನೀಡಿದ್ದಾರೆ.‌ ವೀಕೆಂಡ್ ಮಾತುಕತೆಯಲ್ಲಿ ಸುದೀಪ್, ಸಹಸ್ಪರ್ಧಿಗೆ ಬಲೂನ್ ಹೊಡೆದು ತಮ್ಮ ಅನಿಸಿಕೆಯನ್ನ ಹೇಳುವ ಅವಕಾಶ ಪ್ರತಿಯೊಬ್ಬರಿಗೂ ನೀಡಿದ್ದರು. ಆಗ ಎಲ್ಲರಂತೆ ತನಿಷಾ (Tanisha) ಕೂಡ, ಕಾರ್ತಿಕ್ (Karthik Mahesh) ಕುರಿತು ಮಾತನಾಡಿದ್ದಾರೆ. ನಿನ್ನ ನಿರ್ಧಾರಗಳೆಲ್ಲವೂ ಯಾವಾಗಲೂ ಸರಿ ಅಂದುಕೊಳ್ಳುತ್ತಿಯಾ ಆದರೆ ಅದು ಸುಳ್ಳು ಎಂದು ಬಲೂನ್ ಬ್ಲ್ಯಾಸ್ಟ್ ಮಾಡಿದ್ದಾರೆ. ಬಳಿಕ ನಮ್ಮ ಹುಡುಗಿ ಸಂಗೀತಾ ನಿನ್ನ ಲವ್‌ನಲ್ಲಿ ಬೀಳಲ್ಲ. ಅದು ನಿಮ್ಮ ಪ್ರಯತ್ನ ವ್ಯರ್ಥ ಎಂದಿದ್ದಾರೆ. ಇನ್ನೂ ಬಿಗ್ ಬಾಸ್ ಮನೆಯಲ್ಲಿ (Bigg Boss House) ಪರಿಚಯವಾದ ಸಹೋದರಿಯರ ಜೊತೆ…

Read More

ನವದೆಹಲಿ: ಮಾಲಿನ್ಯದ ಪ್ರಮಾಣ ಹೆಚ್ಚುತ್ತಿರುವುದರಿಂದ ದೆಹಲಿಯಲ್ಲಿ (Delhi) ನ.13 ರಿಂದ ನ.20 ರವರೆಗೆ ಸಮ-ಬೆಸ ಸಂಖ್ಯೆಯ ಕಾರು ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ (Delhi) ಪರಿಸರ ಸಚಿವ ಗೋಪಾಲ್ ರೈ (Environment Minister Gopal Rai) ಘೋಷಿಸಿದ್ದಾರೆ. ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ.  ಬೆಸ-ಸಮ ಯೋಜನೆಯ ವಾಹನಗಳ ನಂಬರ್ ಪ್ಲೇಟ್‍ನ ಕೊನೆಯ ಅಂಕಿಗಳ ಆಧಾರದ ಮೇಲೆ ಈ ಯೋಜನೆ ಜಾರಿ ಮಾಡಲಾಗುತ್ತದೆ. ಇದರ ಅಡಿಯಲ್ಲಿ ಬೆಸ ಅಂಕಿಗಳಲ್ಲಿ (1,3,5,7 ಮತ್ತು 9) ಕೊನೆಗೊಳ್ಳುವ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಬೆಸ ದಿನಾಂಕಗಳಲ್ಲಿ (0,2,4,6 ಮತ್ತು 8) ಸಮ ಸಂಖ್ಯೆಗಳನ್ನು ಹೊಂದಿರುವ ವಾಹನಗಳು ಸಮ ದಿನಾಂಕಗಳಲ್ಲಿ ರಸ್ತೆಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ ಎಂದಿದ್ದಾರೆ.  ಈ ಮೊದಲು 6 ರಿಂದ 12ನೇ ತರಗತಿಗಳಿಗೆ ಆನ್‍ಲೈನ್‍ಗೆ ತರಗತಿ ಆಯ್ಕೆಯನ್ನು ನೀಡಲಾಗಿತ್ತು. ಈಗ 10 ಮತ್ತು 12 ಹೊರತುಪಡಿಸಿ ಎಲ್ಲಾ ವರ್ಗಗಳ ಶಾಲೆಗಳು ನವೆಂಬರ್…

Read More

ರಾಯಚೂರು: ಲೋಕಸಭಾ ಹಾಗೂ ಪಂಚರಾಜ್ಯ ಚುನಾವಣೆ ವಾತಾವರಣ ಕಾಂಗ್ರೆಸ್‌ಗೆ (Congress) ಪೂರಕವಾಗಿದೆ. ಮಧ್ಯಪ್ರದೇಶ, ಅಸ್ಸಾಂ, ರಾಜಸ್ಥಾನ, ತೆಲಂಗಾಣ ಎಲ್ಲೆಡೆಯೂ ಕಾಂಗ್ರೆಸ್ ಪರ ಒಲವು ಕಾಣುತ್ತಿದೆ. ಇದರಿಂದಾಗಿ ಮೋದಿಯವರಿಗೆ (Narendra Modi) ನೋವಾಗುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ (N. Chaluvaraya Swamy) ವ್ಯಂಗ್ಯವಾಡಿದ್ದಾರೆ. ರಾಜ್ಯ ಲೂಟಿಗೆ ಸಿಎಂ ಮತ್ತು ಡಿಸಿಎಂ ಪೈಪೋಟಿ ನಡೆಸಿದ್ದಾರೆ ಎನ್ನುವ ಮೋದಿ ಹೇಳಿಕೆ ವಿಚಾರವಾಗಿ ರಾಯಚೂರಿನಲ್ಲಿ (Raichur) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಅನಾವಶ್ಯಕವಾಗಿ ಟೀಕೆ ಮಾಡುತ್ತಿದ್ದಾರೆ ಎಂದರು. ನಾಲ್ಕೈದು ತಿಂಗಳಲ್ಲಿ ಜನಪರವಾದ ಕಾರ್ಯಕ್ರಮ ಮಾಡಿ ತೋರಿಸಿದ್ದೇವೆ. ಜನರು ಬಿಜೆಪಿಯನ್ನು (BJP) ಸೋಲಿಸಿ ನಮ್ಮನ್ನು ಗೆಲ್ಲಿಸಿದ್ದಾರೆ. https://ainlivenews.com/supreme-ray-healing-centre-reiki-treatment/ ಜನರಿಗೆ ನಮ್ಮ ಮೇಲೆ ವಿಶ್ವಾಸವಿದೆ. ಮೋದಿ ಅವರು ರಾಜ್ಯದಲ್ಲಿ 26 ಕಾರ್ಯಕ್ರಮ ಮಾಡಿದರೂ ಬಿಜೆಪಿಗೆ ಸೋಲಾಯಿತು. 36,000 ಕೋಟಿಯ ಗ್ಯಾರಂಟಿ ಯೋಜನೆ (Guarantee Scheme) ನಾವು ಜಾರಿ ಮಾಡಿದ್ದೇವೆ. ವರ್ಷಕ್ಕೆ 56,000 ಕೋಟಿ ರೂ. ಆಗುತ್ತದೆ. ಈಗ ಎಲ್ಲಾ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಹೊಸ…

Read More

ಕನ್ನಡದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರದ್ದು ಎನ್ನಲಾದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಯಿತು. ಎದೆಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಯಾಕೆ ಹೀಗೆ ಎಂದು ಹಲವರು ಪ್ರಶ್ನಿಸಿದ್ದರು. ಆದರೆ, ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂದು ಗೊತ್ತಾಗಿದೆ. ಅಭಿಷೇಕ್ (Abhishek) ಅನ್ನುವವರು ಮೂಲ ವಿಡಿಯೋವನ್ನು ಪತ್ತೆ ಮಾಡಿ ಎರಡೂ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಹೌದು, ರಶ್ಮಿಕಾ ಮಂದಣ್ಣ ಎಂದು ಹೇಳಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು ಅಸಲಿಯಾ ಅಥವಾ ನಕಲಿಯಾ (Fake Video) ಎಂದು ಪತ್ತೆ ಹಚ್ಚುವಲ್ಲಿ ಹಲವರು ನಿರತರಾಗಿದ್ದರು. ಆ ವಿಡಿಯೋ ಖಂಡಿತಾ ರಶ್ಮಿಕಾ ಅವರದ್ದು ಅಲ್ಲ ಎಂದು ಕೆಲವರು ಹೇಳಿದ್ದರು. ಕೊನೆಗೂ ಅಭಿಷೇಕ್ ಅಸಲಿ ಮತ್ತು ನಕಲಿ ಎರಡೂ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಝರಾ ಪಟೀಲ್ (Zara Patel) ಎನ್ನುವವರದ್ದು ಎಂದು ಅಭಿಷೇಕ್ ಬರೆದುಕೊಂಡಿದ್ದಾರೆ. ಝರಾ ಪಟೇಲ್ ಅವರು ಆ ವಿಡಿಯೋವನ್ನು…

Read More

ಬಾಕ್ಸ್ ಆಫೀಸ್ ನಲ್ಲಿ ಸಖತ್ ಕಮಾಯಿ ಮಾಡಿರುವ ವಿಜಯ್ ನಟನೆಯ ‘ಲಿಯೋ’ (Leo) ಸಿನಿಮಾ ಸದ್ಯದಲ್ಲೇ ಒಟಿಟಿಯಲ್ಲೂ (OTT) ಸ್ಟ್ರೀಮಿಂಗ್ ಆಗಲಿದೆ. ಭಾರೀ ಗೆಲುವಿನ ಬೆನ್ನಲ್ಲೇ  ಒಟಿಟಿಯಲ್ಲೂ ಒಳ್ಳೆಯ ರೆಸ್ಪಾನ್ಸ್ ಸಿಗಲಿದೆ ಎಂದು ಅಂದಾಜಿಸಲಾಗುತ್ತಿದೆ. ನವೆಂಬರ್ 16 ರಿಂದ ನೆಟ್ ಪ್ಲಿಕ್ಸ್ ನಲ್ಲಿ ಲಿಯೋ ನೋಡಬಹುದಾಗಿದೆ. ಕಾಲಿವುಡ್‌ನಲ್ಲಿ (Kollywood) ವಿಜಯ್‌ಗೆ ದೊಡ್ಡ ಮಟ್ಟದಲ್ಲಿ ಫ್ಯಾನ್ ಬೇಸ್ ಇದೆ. ಅವರ ಸಿನಿಮಾಗಾಗಿಯೇ ಕಾದು ಕೂರುವ ಅಭಿಮಾನಿಗಳಿದ್ದಾರೆ. ‘ಲಿಯೋ’ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೌಂಡ್ ಮಾಡಿದ್ದರಿಂದ ಮತ್ತೊಂದು ಹೊಸ ಸಿನಿಮಾದಲ್ಲಿ ವಿಜಯ್ ಬ್ಯೂಸಿಯಾಗಿದ್ದಾರೆ. ವಿಜಯ್  ನಟನೆಯ 68ನೇ ಚಿತ್ರಕ್ಕೆ ವೆಂಕಟ್ ಪ್ರಭು (Venkat Prabhu) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ದಸರಾ ಹಬ್ಬದ (ಅ.24) ಶುಭ ಸಂದರ್ಭದಲ್ಲಿ ಅದ್ದೂರಿಯಾಗಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಚಿತ್ರದ ದೊಡ್ಡ ತಾರಾ ಬಳಗ ಈ ಸಮಾರಂಭದಲ್ಲಿ ಭಾಗಿಯಾಗಿತ್ತು. ದಳಪತಿ ವಿಜಯ್ ಜೊತೆ ಬಹುಭಾಷಾ ನಟ ಕನ್ನಡಿಗ ಪ್ರಭುದೇವ (Prabhudeva), ಸ್ನೇಹಾ, ಲೈಲಾ, ಮೀನಾಕ್ಷಿ ಚೌಧರಿ, ಜಯರಾಮ್, ಯೋಗಿ ಬಾಬು (Yogi…

Read More

ಬೆಳಗಾವಿ: ಚಳಿಗಾಲ ಅಧಿವೇಶನ ದಿನಾಂಕ ಇಂದು (ನ.07) ಘೋಷಣೆಯಾಗಲಿದೆ. ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ತೆರಳಲಿದ್ದಾರೆ. ಇಬ್ಬರು ಸಭಾಪತಿಗಳು ಸಭೆ ನಡೆಸಿ ನಂತರ ದಿನಾಂಕ ಘೋಷಣೆ ಮಾಡಲಿದ್ದಾರೆ. https://ainlivenews.com/supreme-ray-healing-centre-reiki-treatment/ ಚಳಿಗಾಲದ ಹಿನ್ನೆಲೆ ಸುವರ್ಣ ವಿಧಾನಸೌಧದ ಉಭಯ ಸದನಗಳನ್ನು, ಸಚಿವಾಲಯದ ಕಚೇರಿಗಳನ್ನು ಪರಿಶೀಲನೆ ಮಾಡಲಿದ್ದಾರೆ. ಬಳಿಕ ಡಿಸಿ ನಿತೇಶ್ ಪಾಟೀಲ್ ನೇತೃತ್ವದ 10 ಕಮಿಟಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮೈಕ್, ಲೈಟಿಂಗ್, ನೀರು, ಊಟ, ವಸತಿ, ವಾಹನ, ಪೊಲೀಸ್ ಭದ್ರತೆ ಬಗ್ಗೆ ಚರ್ಚೆ ಮಾಡಲಿದ್ದಾರೆ.  ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಸುವರ್ಣ ಸೌಧದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ.

Read More