ಖ್ಯಾತ ನಟಿ ತ್ರಿಷಾಗೆ ಮಾನಹಾನಿ ಆಗುವಂತಹ ಹೇಳಿಕೆ ನೀಡಿದ್ದ ಹಿರಿಯ ನಟ ಮನ್ಸೂರ್ ಅಲಿ ಖಾನ್ ಕೊನೆಗೂ ಕ್ಷಮೆ ಕೇಳಿದ್ದಾರೆ. ಪೊಲೀಸ್ ಠಾಣೆ, ಕೋರ್ಟ್ ಮೆಟ್ಟಿಲು ಏರುತ್ತಿದ್ದಂತಯೆ ಎಚ್ಚೆತ್ತುಕೊಂಡ ಮನ್ಸೂರ್, ತನ್ನಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳಿದ್ದಾರೆ. ನಿಮ್ಮ ವಿವಾಹದ ದಿನದಂದು ಮಾಂಗಲ್ಯವನ್ನು ಮುಟ್ಟಿ ಆಶೀರ್ವದಿಸುವಂತಹ ಅವಕಾಶ ನನಗೆ ಬರಲಿ ಎಂದು ಅವರು ಹೇಳಿದ್ದಾರೆ. ಮೊನ್ನೆಯಷ್ಟೇ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ. ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ…
Author: AIN Author
ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024ರ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಲು ಭಾರತ ಚುನಾವಣಾ ಆಯೋಗದ ಅಧಿಕಾರಿಗಳು ಬೆಂಗಳೂರು ನಗರ ಜಿಲ್ಲೆಗೆ ಇಂದು ಭೇಟಿ ನೀಡಿದರು. ನಗರ ವ್ಯಾಪ್ತಿಯಲ್ಲಿಯ ಅನಿವಾಸಿ ಭಾರತೀಯ ಮತದಾರ(NRI)ರನ್ನು ಗುರುತಿಸಿ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮತದಾರರ ಪಟ್ಟಿಗಳ ಪರಿಷ್ಕರಣೆಯ ಪ್ರಕ್ರಿಯೆಯನ್ನು ಪರಿಶೀಲಿಸುವ ಸಂಬಂಧ ಭಾರತ ಚುನಾವಣಾ ಆಯೋಗದಿಂದ ಆಗಮಿಸಿದ್ದ ತಂಡದ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅನಿವಾಸಿ ಭಾರತೀರು ನಮೂನೆ 6A ಮೂಲಕ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡೂ ಟರ್ಮಿನಲ್ ಗಳ ಪ್ರವೇಶದ್ವಾರಗಳ ಬಳಿ ಬ್ಯಾನರ್ ಗಳನ್ನು ಅಳವಡಿಸಲು ಜಿಲ್ಲಾ ಪಂಚಾಯ್ತಿ ಮುಖ್ಯ ನಿರ್ವಾಹಕ ಅಧಿಕಾರಿ ಕಾಂತರಾಜು ಅವರಿಗೆ ಸೂಚನೆ ನೀಡಿದರು. ನಗರದಲ್ಲಿ ಚುಣಾವಣೆಯ ಮಹತ್ವ, ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಸೇರಿದಂತೆ…
ರಾಯ್‍ಪುರ: ಕಬ್ಬಿಣದ ಅದಿರು ಗಣಿಯೊಂದರ ಬಳಿ ಸುಧಾರಿತ ಸ್ಫೋಟಕ (IED Blast) ಸ್ಫೋಟದಿಂದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಛತ್ತೀಸ್‍ಗಢದ (Chhattisgarh) ನಾರಾಯಣಪುರ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲಿಸರು ತಿಳಿಸಿದ್ದಾರೆ. ಮೃತರನ್ನು ನಾರಾಯಣಪುರದ ರಿತೇಶ್ ಗಗ್ಡಾ (21) ಮತ್ತು ಶ್ರವಣ್ ಗಗ್ಡಾ (24) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವನನ್ನು ಉಮೇಶ್ ರಾಣಾ ಎಂದು ಗುರುತಿಸಲಾಗಿದೆ. ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ರಾಜಧಾನಿ ರಾಯ್‍ಪುರದಿಂದ ಸುಮಾರು 350 ಕಿ.ಮೀ ದೂರದಲ್ಲಿರುವ ಆಮ್ಡೈ ಘಾಟಿ ಕಬ್ಬಿಣದ ಅದಿರು ಗಣಿಗೆ ಮೂವರು ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. https://ainlivenews.com/miley-is-the-new-president-of-argentina-who-talks-to-a-dead-dog/ ಅಲ್ಲಿನ ಸರ್ಕಾರ ಜೆಎನ್‍ಐಎಲ್ ಸಂಸ್ಥೆಗೆ ಈ ಕಬ್ಬಿಣದ ಅದಿರು ಗಣಿ ನೀಡಿದೆ. ಈ ಯೋಜನೆಗೆ ಮಾವೋವಾದಿಗಳ ವಿರೋಧವಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟ ನಡೆದ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಈ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರಿಗೆ ಈಗ ಗೋಲ್ಡನ್ ಆಪರ್ಚುನಿಟಿ ಇದೆ. ಡಿಕೆಶಿ ಅವರು ತಾವು ಸತ್ಯಹರಿಶ್ಚಂದ್ರರು ಅಂತ ಸಾಬೀತು ಮಾಡುವ ಅವಕಾಶ ಇದೆ. ಜನತೆಯ ಮುಂದೆ ನೀವು ತಪ್ಪು ಮಾಡಿಲ್ಲ ಅಂತ ತನಿಖೆ ಎದುರಿಸಿ ತೋರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲೆಸೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಅಕ್ರಮ ಆಸ್ತಿ ಗಳಿಕೆ ಪ್ರಕರಣ. ಈ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಣಯ ಸಂಪೂರ್ಣ ಕಾನೂನು ಬಾಹಿರ ಎಂದು ಕಿಡಿಕಾರಿದ್ದಾರೆ. ಐಟಿ ದಾಳಿ ಆದಾಗ ರಾಜ್ಯ ಮತ್ತು ಬೇರೆ ಬೇರೆ ಭಾಗಗಳಲ್ಲಿ ಸಾಕಷ್ಟು ಹಣ ಸೀಜ್ ಆಯ್ತು. ಇನ್ನೂ ಐಟಿ ತನಿಖೆಯೂ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ದುರಾದೃಷ್ಟಕರ. ಸರ್ಕಾರ ಕಾನೂನಿಗೆ ವಿರುದ್ಧವಾಗಿ ಈ ನಿರ್ಣಯ ಕೈಗೊಂಡಿದೆ. ಡಿಕೆಶಿಯವರನ್ನು ಉಳಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಡಿಕೆಶಿ ಅವರಿಗೆ ಕಾನೂನಿನ ಭಯ ಇದೆಯಾ? ಮೊದಲು ಡಿಕೆಶಿ ಅವರೇ ಸರ್ಕಾರದ ನಿರ್ಧಾರ ವಿರೋಧಿಸಬೇಕಿತ್ತು. ಎಲ್ಲೋ ಒಂದು…
ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಅಮಾನತು ವಿಚಾರ ಸಂಬಂಧ ಮಾಜಿ ಸಚಿವ ಸಿ.ಟಿ. ರವಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿ.ಕೆ. ಶಿವಕುಮಾರ್ ಅವರು ಆಲೂಗಡ್ಡೆ ಹಾಕಿ ಚಿನ್ನ ತೆಗೆದಿದ್ರೆ ಜನಸಾಮಾನ್ಯರಿಗೆ ತಿಳಿಸಲಿ ಎಂದು ವ್ಯಂಗ್ಯವಾಡಿದ್ದಾರೆ. https://ainlivenews.com/if-peoples-money-goes-into-peoples-pockets-why-is-bjp-upset-cms-question/ 2020ರಲ್ಲಿ ಸಿಬಿಐ ಎಫ್ಐಆರ್ ಹಾಕಿದೆ. ಇದನ್ನ ಚಾಲೆಂಜ್ ಮಾಡಿ ಡಿಕೆಶಿ ಹೈಕೋರ್ಟ್ ಮೊರೆ ಹೋಗಿದ್ದರು. ಮೂರು ತಿಂಗಳ ಒಳಗೆ ಸಿಬಿಐ ಫೈನಲ್ ರಿಪೋರ್ಟ್ ಸಬ್ಮಿಟ್ ಮಾಡಲು ಹೇಳಿತ್ತು. ಈ ಹಂತದಲ್ಲಿ ವಾಪಸ್ ಪಡೆದಿದ್ದಾರೆ. ವಿತ್ ಡ್ರಾ ಮಾಡಲು ಬರುವುದಿಲ್ಲ. ಒಬ್ಬ ಭ್ರಷ್ಟ ಆರೋಪಿಯ ರಕ್ಷಣೆಗೆ ನಿಲ್ಲೋದು ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಇಟ್ಟವರು ಮಾಡುವ ಕೆಲಸವಲ್ಲ ಎಂದು ಕಿಡಿಕಾರಿದ್ದಾರೆ. ನಮ್ಮವರ ಮೇಲೂ ಆರೋಪ ಇದ್ದವು ಸರ್ಕಾರದ ಮುಖ್ಯ ಕಾರ್ಯದರ್ಶಿ, ಹೋಂ ಸೆಕ್ರೆಟರಿಗೆ ಪ್ರಶ್ನೆ ಮಾಡುತ್ತೇನೆ. ಯಾವ ಆಧಾರದ ಮೇಲೆ ಕ್ಯಾಬಿನೆಟ್‌ಗೆ ತಂದ್ರಿ ಈ ವಿಚಾರವನ್ನು? ನೀವು ಮಾಡಿರೋದು ಸಂವಿಧಾನದ ವಿರೋಧಿ. ನಮ್ಮವರ ಮೇಲೂ ಆರೋಪ…
ಬೆಂಗಳೂರು: ಬಹುದಿನಗಳಿಂದ ಖಾಲಿ ಇದ್ದ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಬಿಜೆಪಿ ನಾಯಕ ಆರ್.ಅಶೋಕ್ ಆಯ್ಕೆಯಾಗಿದ್ದು ಈಗ ರಾಜ್ಯದ ಎಲ್ಲಾ ಹಿರಿಯ ನಾಯಕರ ಆಶೀರ್ವಾದ ಪಡೆದಿದ್ದರು ಅದೇ ರೀತಿ ಇಂದು ಬಿಜೆಪಿ ಹಿರಿಯ ಮುಖಂಡ ಸಿ.ಟಿ ರವಿ ಅವರನ್ನು ಭೇಟಿಯಾದರು ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಅಧಿಕೃತವಾಗಿ ಕಾಯಾರಂಭ ಮಾಡಿರುವ ಅವರನ್ನು ಅಭಿನಂದಿಸಿದರು. ಮಾನ್ಯ ಅಶೋಕ್ ಅವರನ್ನು ಬಿಜೆಪಿಯ ಹಿರಿಯ ಮುಖಂಡ ಮಾನ್ಯ ಸಿ.ಟಿ. ರವಿ ಅವರು ಶುಕ್ರವಾರ ಭೇಟಿ ಮಾಡಿ ಅಭಿನಂದಿಸಿದರು.
ಬೆಂಗಳೂರು: ಬೆಂಗಳೂರಿನ (Bengaluru) ಜಯನಗರದ ಡಿಸಿಪಿ ಕಚೇರಿ ಎದುರೇ ಯುವತಿ ಬಟ್ಟೆ ಎಳೆದಾಡಿ ಲೈಂಗಿಕ ಕಿರುಕುಳ(sexual harassment) ನೀಡಿದ್ದ ಆರೋಪಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಬರೋಬ್ಬರಿ 500 ಸಿಸಿಟಿವಿಗಳ ಪರಿಶೀಲನೆ ಮಾಡಿ ಆರೋಪಿ ಬಿನ್ನಿಪೇಟೆಯ ಹರೀಶ್ (22) ಎನ್ನುವಾತನ್ನು ಜಯನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. https://ainlivenews.com/rape-of-three-year-old-girl-in-bangalore-accused-arrested/ ಇದೇ ತಿಂಗಳ 6 ರಂದು ರಾತ್ರಿ 10 ಗಂಟೆ ಸುಮಾರಿಗೆ ಬೈಕ್ನಲ್ಲಿ ತೆರಳುತ್ತಿದ್ದ ಯುವತಿಯನ್ನು ಚುಡಾಯಿಸಿದ್ದನು. ಆಕೆಯ ಬಟ್ಟೆ ಎಳೆದಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಆರೋಪಿ ಎಸ್ಕೇಪ್ ಆಗಿದ್ದನು. ಈ ಘಟನೆಯನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಂಡಿದ್ದ ಜಯನಗರ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಲು ಬರೋಬ್ಬರಿ 500 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಳಿಕ ಯುವತಿಯನ್ನು ಚುಡಾಯಿಸಿದ್ದು ಹರೀಶ್ ಎನ್ನುವ ಯುವಕ ಎಂಬುದು ಪೊಲೀಸರು ಕೊನೆಗೆ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಕೃತ್ಯ ಎಸಗಿದ್ದ ಯುವಕ ತನ್ನ ಮೇಲೆ ಕೇಸ್ ದಾಖಲಾಗಿರುವ ಬಗ್ಗೆ ಅರಿವಿಲ್ಲದೇ, ಏನು ಆಗಿಲ್ಲವೆಂಬಂತೆ ತನ್ನ ಪಾಡಿಗೆ ತಾನಿದ್ದನು. ಸಿಸಿಟಿವಿಗಳ ಬೆನ್ನತ್ತಿ ಜಯನಗರ ಪೊಲೀಸರು ಆರೋಪಿಯನ್ನು…
ಬೆಂಗಳೂರು: ಇಡೀ ಬೆಂಗಳೂರು ಮಂದಿಗೆ ಸುಖಃಕರ ಪ್ರಯಾಣ ಮಾತ್ರವಲ್ಲದೆ ಚಿತ್ರ ಮಂದಿರುಕ್ಕೂ ನಮ್ಮ ಮೆಟ್ರೋ ಸೇವೆ ನೀಡ್ತಿದೆ.ಆದ್ರೆ ರೆವಿನ್ಯೂ ಬರುತ್ತೆ ಅಂತ ರಿಯಾಯಿತಿ ದರದಲ್ಲಿ ಸ್ಟೇಷನ್ , ಮೆಟ್ರೋ ಒಳಗೆ ಶೂಟಿಂಗ್ ಮಾಡಿಕೊಳ್ಳಿ ಅಂತ ಮೆಟ್ರೋ ಬೇಡಿಕೊಂಡರು ಸ್ಯಾಂಡಲ್ ವುಡ್ ನಿರ್ದೆಶಕರು ಕೇಳುತ್ತಿಲ್ಲ. ಮಲೇಷಿಯಾ ಸೇರಿದಂತೆ ವಿದೇಶದಲ್ಲಿ ಶೂಟಿಂಗ್ ಮಾಡೋದರಿಂದ ನಮ್ಮ ಮೆಟ್ರೋಗೆ ಡಿಮ್ಯಾಂಡ್ ಇಲ್ಲದಂತಾಗಿದೆ. ಆದ್ರೂ ಇಷ್ಟು ದಿನ ಸ್ಥಗಿತಗಿಗೊಂಡಿದ್ದ ಶೂಟಿಂಗ್ ಕಾರ್ಯಕ್ಕೆ ಮತ್ತೆ ಮೆಟ್ರೋ ಚಾಲನೆ ನೀಡಿದೆ. ನಮ್ಮ ಮೆಟ್ರೋ ನಿಗಮ ಪ್ರಯಾಣಿಕರಿಂದ ಹಣ ಬರೋದಿಲ್ಲ ಅಂತ ಶೂಟಿಂಗ್ ಮೂಲದ ರೆವಿನ್ಯೂ ಗಳಿಸೋಕೆ ಮುಂದಾಗಿದೆ. ಮೆಟ್ರೋ ಸ್ಟೇಶನ್ನಲ್ಲಿ ಹಾಡುಗಳು ಹಾಗೂ ದೃಶ್ಯಗಳ ಸಿನಿಮಾಗಳ ಚಿತ್ರೀಕರಣ ಮಾಡಬೇಕು ಅಂತ ಈ ಮೊದಲು ಸ್ಯಾಂಡಲ್ ವುಡ್ ನಿರ್ದೇಶಕರು ಮಲೇಷಿಗೆ ಹೋಗುತ್ತಿದ್ರು. ಆದರೆ ಇದೀಗ ನಮ್ಮ ಮೆಟ್ರೋ ರೈಲಿನಲ್ಲಿ ಚಿತ್ರೀಕರಣ ಮಾಡೋಕೆ ಕಲ್ಪಿಸಲಾಗಿದೆ. ಚಿತ್ರತಂಡ ಮೆಟ್ರೋ ನಿಗಮದಿಂದ ಅನುಮತಿ ಪಡೆದು ಚಿತ್ರೀಕರಣ ಮಾಡಕೊಳ್ಳಬಹುದು. ಆದರೆ ಕನ್ನಡ ಚಿತ್ರರಂಗ ಮೆಟ್ರೋದಲ್ಲಿ ಶೂಟಿಂಗ್ ಮಾಡೋಕೆ ಹಿಂಜರಿಯುತ್ತಿದೆ.…
ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ವೆಚ್ಚದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ಡಾಂಬರ್ ಹಾಕಲಾಗಿದ್ದು ಬಿಜೆಪಿ ಕೆಲ ಮುಖಂಡರು ಕಳಪೆ ಎಂದು ಸುಳ್ಳು ಆರೋಪ ಮಾಡುತ್ತಿದ್ದರೆ ಎಂದು ಜಿ.ಪಂ ಮಾಜಿ ಸದಸ್ಯ ಚುಂಚೇಗೌಡ ಹೇಳಿದರು. ಇನ್ನೂ ಒಂದು ಪದರ ಡಾಂಬರ್ ಹಾಕುವುದು ಬಾಕಿ ಇದೆ, ಅಷ್ಟರಲ್ಲಿ ಈ ಆರೋಪವನ್ನು ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರ ಆರೋಪವನ್ನು ತಳ್ಳಿ ಹಾಕಿದರು. ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ ಡಾಂಬರು ಹಾಕಿದ 15 ದಿನಗಳಲ್ಲೇ ಗುಂಡಿಗಳು ಬಿದ್ದಿವೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಸ್ಥಳಕ್ಕೆ ಆಗಮಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಈ ಗ್ರಾಮಕ್ಕೆ ರಸ್ತೆ ಇರಲಿಲ್ಲ. ರಾತ್ರಿ ಹೊತ್ತು ಓಡಾಡಲೂ ಗ್ರಾಮಸ್ಥರು ಪರದಾಡಬೇಕಾಗಿತ್ತು. ಕೊನೆಗೂ ಹೊನ್ನಾದೇವಿಪುರ ರಸ್ತೆಗೆ ಡಾಂಬರು ಭಾಗ್ಯ ಸಿಕ್ಕಿದೆ,…
ಧಾರವಾಡ: ರಾಜ್ಯ ಸರ್ಕಾರಗಳು ಒಂದು ಪ್ರಕರಣವನ್ನು ತನಿಖೆ ನಡೆಸಲು ಸಿಬಿಐಗೆ ಶಿಫಾರಸು ಮಾಡುವ ಹಾಗೂ ಹಿಂಪಡೆಯುವ ಅಧಿಕಾರ ಇರುತ್ತದೆ. ಈಗ ಡಿಕೆಶಿಯವರ ಪ್ರಕರಣದಲ್ಲಿ ಕ್ಯಾಬಿನೆಟ್ ನಿರ್ಣಯ ತೆಗೆದುಕೊಂಡಿದೆ. ಇಂತಹ ಸಂದರ್ಭಗಳಲ್ಲಿ ವಾದ ವಿವಾದ ಇದ್ದೇ ಇರುತ್ತದೆ. ಆದರೆ ನಾನು ಈ ವಿಚಾರದಲ್ಲಿ ಸರ್ಕಾರದ ಪರವಾಗಿ ನಿಲುತ್ತೇನೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದ ಕೃಷಿ ವಿವಿ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಪಮುಖ್ಯಂಮತ್ರಿ ಅವರ ಮೇಲಿನ ಆಕ್ರಮ ಆಸ್ತಗಳಿಕ್ಕೆ ಪ್ರಕರಣದ ತನಿಖೆಉನ್ನು ಸಿಬಿಐ ನಡೆಸುತಿದ್ದು, ಇದನ್ನು ಹಿಂಪಡೆಯಲು ಈಗ ಕ್ಯಾಬಿನೆಟ್‌ನಲ್ಲಿ ತೀರ್ಮಾಣ ಮಾಡಲಾಗಿದೆ. ಕ್ಯಾಬಿನೆಟ್ ಅಂದರೆ ಸರ್ಕರವೇ ಆಗಿರುತ್ತದೆ. ಹಾಗಾಗಿ ನಾನು ಸರ್ಕಾರದ ಪರವಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು. ಸಿಬಿಐಗೆ ವಹಿಸಿದ್ದು ಹಿಂದಿನ ಸರ್ಕಾರದ ನಿರ್ಧಾರ ಎನ್ನುವ ಚರ್ಚೆ ಇರಬಹುದು. ಈಗ ಸರ್ಕಾರ ತೆಗೆದುಕೊಂಡ ನಿರ್ಧಾರವೇ ಅಂತಿಮ. ಕಾನೂನಿನ ಅಡಿಯಲ್ಲಿ ಯಾರು ಬೇಕಾದರೂ ಮೇಲ್ಮನವಿ ಹೋದರೆ ಹೋಗಲಿ. ತಮ್ಮ ಮೇಲಿನ ತನಿಖೆ ವಾಪಸ್ ಪಡೆಯುವಂತೆ ಕ್ಯಾಬಿನೆಟ್…