ಬೆಂಗಳೂರು: ಹಬ್ಬ ಬಂತು ಅಂದರೆ ಖಾಸಗಿ ಬಸ್ಗಳಿಂದ ಹಗಲು ದರೋಡೆ ಶುರುವಾಗುತ್ತೆ. ಸಾಲು ಸಾಲು ರಜೆ ಅಂತ ಗೊತ್ತಾದ್ರೆ ಎರಡ್ಮೂರು ಪಟ್ಟು ದರ ಏರಿಕೆ ಮಾಡಿ, ಜನರಿಂದ ಸುಲಿಗೆ ಶುರುವಾಗುತ್ತೆ. ದೀಪಾವಳಿಗೆ ಅಂತ ಮನೆ ಕಡೆ ಹೊಗಲು ಸಿದ್ದವಾಗಿರೋರಿಗೆ ಶಾಕ್ ಎದುರಾಗಿದೆ.. ಪ್ರವೈಟ್ ಬಸ್ನಲ್ಲಿ ಟಿಕೆಟ್ ಬುಕ್ ಮಾಡಲು ಹೋದವರು ಡಬಲ್, ತ್ರಿಬಲ್ ರೇಟ್ ಕೊಡಬೇಕಿದೆ. ಹಬ್ಬ, ಸಾಲು ಸಾಲು ರಜೆ ಬಂದ್ರೆ ಸಾಕು ಖಾಸಗಿ ಬಸ್ ಗಳ ಸುಲಿಗೆ ಶುರುವಾಗುತ್ತೆ. ಕಣ್ಣುಮುಂದೆ ಸಿಕ್ಕಾಪಟ್ಟೆ ಪ್ರಯಾಣಿಕರಿಂದ ಸುಲಿಗೆ ನಡೆಯುತ್ತಿದ್ರೂ ಸಾರಿಗೆ ಇಲಾಖೆ ಮಾತ್ರ ತಲೆನೇಕೆಡಿಸಿಕೊಳ್ಳಲ್ಲ.ಪ್ರತಿ ಹಬ್ಬ ಹರಿದಿನದ ವೇಳೆ ಹೆಸರಿಗೆ ಮಾತ್ರ ಖಾಸಗಿ ಬಸ್ ಗಳ ಮೇಲೆ ದಾಳಿ ಮಾಡೋ ಇಲಾಖೆ ಶಾಶ್ವತವಾಗಿ ಏರಿಕೆಗೆ ಕಡಿವಾಣ ಹಾಕಲು ಪ್ರಯತ್ನ ನಡೆಯುತ್ತಿಲ್ಲ.ಇದೀಗ ದೀಪಾವಳಿ ಬರುತ್ತಿದ್ದು, ಇದನ್ನ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಮಾಲೀಕರು ಯರಬಿರ್ರಿ ಟಿಕೆಟ್ ದರವನ್ನ ಹೆಚ್ಚಸಿದ್ದಾರೆ. ಹೌದು ದೀಪಾವಳಿ ಹೀಗೆ ಹಬ್ಬಗಳ ಸೀಜನ್ ಬಂತು ಅಂದರೆ ಖಾಸಗಿ ಬಸ್…
Author: AIN Author
ತುಮಕೂರು: ಗಾಳಿ ಮಳೆ ಸಹಿತ ಭರ್ಜರಿ ಮಳೆ ಸುರಿದ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಚರಂಡಿಗೆ ಇಳಿದಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನಲ್ಲಿ ನಿಟ್ಟರಹಳ್ಳಿ ಗ್ರಾಮದಲ್ಲಿ KSRTC ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಇಳಿದಿರುವ ಘಟನೆ ನಡೆದಿದೆ. ಮಧುಗಿರಿಯಿಂದ ಕೊಂಡವಾಡಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ಚರಂಡಿಗೆ ಸಿಲುಕಿಕೊಂಡಿದ್ದರಿಂದ ಶಾಲಾ -ಕಾಲೇಜುಗಳಿಗೆ ಹೋಗಲು ಬಸ್ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿತ್ತು.
ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂತಾಪ ಸೂಚಿಸಿದರು. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಚಂದ್ರೇಗೌಡರು ನನ್ನ ನೆರೆ ಮನೆಯಲ್ಲಿಯೇ ಇದ್ದು ನನಗೆ ಅತ್ಯಂತ ಆತ್ಮೀಯರಾಗಿದ್ದರು. ಕಳೆದ ತಿಂಗಳು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದೆ, ಈಗ ಅವರು ನಮ್ಮನ್ನು ಅಗಲಿರುವುದು ಮನೆಯ ಹಿರಿಯರೊಬ್ಬರನ್ನು ಕಳೆದುಕೊಂಡಂತೆ ಆಗುತ್ತಿದೆ. ಚಂದ್ರೇಗೌಡರ ಅಗಲಿಕೆಯಿಂದ ರಾಜ್ಯ ಒಬ್ಬ ಪ್ರಾಮಾಣಿಕ ಹಿರಿಯ ನಾಯಕನನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಹುಬ್ಬಳ್ಳಿ, ನ. 07: ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶಾಸಕರಾಗಿ,ವಿಧಾನ ಪರಿಷತ್ ಸದಸ್ಯರಾಗಿ, ಸಂಸದರಾಗಿ, ರಾಜ್ಯ ಸಭಾಸದಸ್ಯರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದ ಡಿ.ಬಿ.ಚಂದ್ರೇಗೌಡರು ಸದಾ ಸಮಾಜದ ಹಿತ ಚಿಂತನೆ ಮಾಡುವವರಾಗಿದ್ದರು.ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದೊಂದಿಗೆ ಅತ್ಯಂತ ಆತ್ಮೀಯ ಸಂಬಂಧ ಹೊಂದಿದ್ದ ಅವರು ಶ್ರೀ ಪೀಠದ ಮೂವರು ಜಗದ್ಗುರುಗಳವರೊಡನೆ ನಿಕಟ ಸಂಪರ್ಕ ಹೊಂದಿದವರಾಗಿದ್ದರು. ಪ್ರಸ್ತುತ ಜಗದ್ಗುರುಗಳ ಹಲವಾರು ಸಮಾರಂಭಗಳಲ್ಲಿ ಪಾಲ್ಗೊಂಡಿದ್ದ ಅವರ ಅಗಲಿಕೆ ತಮ್ಮ ಮನಸ್ಸಿಗೆ ನೋವನ್ನುಂಟು ಮಾಡಿದೆ. ಅವರ ಅಗಲಿದ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿಯನ್ನು ಅನುಗ್ರಹಿಸಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಚಂದ್ರೇಗೌಡರು ನನ್ನ ನೆರೆ ಮನೆಯಲ್ಲಿಯೇ ಇದ್ದು ನನಗೆ ಅತ್ಯಂತ ಆತ್ಮೀಯರಾಗಿದ್ದರು. ಕಳೆದ ತಿಂಗಳು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದೆ, ಈಗ ಅವರು ನಮ್ಮನ್ನು ಅಗಲಿರುವುದು ಮನೆಯ ಹಿರಿಯರೊಬ್ಬರನ್ನು ಕಳೆದುಕೊಂಡಂತೆ ಆಗುತ್ತಿದೆ. ಚಂದ್ರೇಗೌಡರ ಅಗಲಿಕೆಯಿಂದ ರಾಜ್ಯ ಒಬ್ಬ ಪ್ರಾಮಾಣಿಕ ಹಿರಿಯ ನಾಯಕನನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಬೆಂಗಳೂರು: ಬ್ರಾಂಡೆಡ್ ಕಂಪನಿಯ ಹೆಸರಲ್ಲಿ ನಕಲಿ ಬಟ್ಟೆಗಳನ್ನು ತಯಾರಿಕ ಕಂಪನಿ ಮೇಲೆ ಬೊಮ್ಮನಹಳ್ಳಿ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಬಟ್ಟೆಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.. ಬೊಮ್ಮನಹಳ್ಳಿ ಹೊಸೂರು ಮುಖ್ಯ ರಸ್ತೆಯಲ್ಲಿರುವ ರಾಜು ಅಂಡ್ ಕಂಪನಿಯಲ್ಲಿ ಗಾರ್ಮೆಂಟ್ಸ್ ನಲ್ಲಿLINEN CLUB, Armani, Gant, Levis, RL-POLO, Hugo-Boss, UNDER-ARMOUR ಏಳು ಬ್ರಂಡೆಟ್ ಕಂಪನಿಗಳ ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಅಸಾಮಿಗಳು . ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮಾಲ್ ವಶಕ್ಕೆ ಪಡೆಯಲಾಗಿದೆ.. ಇನ್ನು ಕಾಲ ಸಂತೆಯಲ್ಲಿ ನಕಲಿ ಬ್ಯಾಂಡೆಡ್ ಗಳ ಹಾವಳಿ ಹೆಚ್ಚಾಗಿದೆ..ಇನ್ನುಹೊಸೂರು ಮುಖ್ಯ ರಸ್ತೆಯ ಬಾನು ನರ್ಸಿಂಗ್ ಹೋಮ್ ಸಮೀಪವಿರುವ ರಾಜ ಅಂಡ್ ಕಂಪನಿ ಬ್ರಾಂಡೆಡ್ ಕಂಪನಿಗೆ ಸೇರಿದ ನಕಲಿ, ಹೆಸರುಗಳನ್ನು ಬಟ್ಟೆ ಮೇಲೆ ಹಾಕಿ ಡಿಸ್ಟ್ರಿಬ್ಯೂಟರ್ ಗೆ ಮಾರಾಟ ಮಾಡುತ್ತಿದ್ದರು . ಹೀಗಾಗಿ ಸಾಕಷ್ಟು ದೂರು ಕೇಳಿಬಂದಿದ್ದು ಬೊಮ್ಮನಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ.. ಇನ್ನು ಬೆಂಗಳೂರುನ ಮಹಾನಗರದಲ್ಲಿ. ವಿಶ್ವ ದರ್ಜೆಯ ಬ್ರಾಂಡ್‌ಗಳನ್ನು ರಚಿಸಲು ಬಹುರಾಷ್ಟ್ರೀಯ…
ಚಿಕ್ಕಬಳ್ಳಾಪುರ: ತಂದೆಯ ತಿಥಿ ಕಾರ್ಯ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ತಾಯಿ ಮೃತಪಟ್ಟ ಧಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಬೆಂಗಳೂರು – ಹಿಂದೂಪುರ ಹೆದ್ದಾರಿ ಅಲಕಾಪುರ ಗೇಟ್ ಬಳಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಗುಂಡಗಲ್ಲು ಗ್ರಾಮದ 56 ವರ್ಷದ ಸುಶೀಲಮ್ಮ ಮೃತ ದುರ್ದೈವಿಯಾಗಿದ್ದು. ಬೆಂಗಳೂರಿನಲ್ಲಿ ವಾಸವಾಗಿರುವ ಮುರಳಿ ಎನ್ನುವಾತ ತನ್ನ ತಂದೆ ಅಶ್ವತ್ಥರೆಡ್ಡಿ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ತಿಥಿ ಕಾರ್ಯವನ್ನು ನೆನ್ನೆ ಗುಂಡಗಲ್ಲು ಗ್ರಾಮದಲ್ಲಿ ನೆರವೇರಿಸಿ ಇಂದು ಬೆಳಗ್ಗೆ ಕುಟುಂಬಸ್ಥರೊಂದಿಗೆ ಬೆಂಗಳೂರಿಗೆ ತೆರಳಲು ಸುಜುಕಿ ಗ್ರಾಂಡ್ ವಿಟಾರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಸ್ಥಳದಲ್ಲೇ ಸುಶೀಲಮ್ಮ ಮೃತಪಟ್ಟು ಆಕೆಯ ಮಗ ಮುರಳಿ ಸೋಸೆ ಗುಣವತಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದ್ದು ಘಟನೆ ಸಂಬಂಧ ಮಂಚೇನಹಳ್ಳಿ ಠಾಣೆಯ ಪೊಲೀಸರು ಬೇಟೆ…
ಬೆಂಗಳೂರು: ಮಹದೇವಪುರ ಕ್ಷೇತ್ರದ ಕಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಿಟ್ಟಿಗನಹಳ್ಳಿ ಹಾಗೂ ಬಂಡೇ ಹೊಸೂರಿನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳೀಯ ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವೈಜ್ಞಾನಿಕ ಘನ ತ್ಯಾಜ್ಯ ವಿಲೇವಾರಿಯಿಂದ ಸ್ಥಳೀಯರಿಗೆ ರೋಗಗಳು ಹರಡುತ್ತಿವೆ ಎಂದು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅದಷ್ಟೂ ಅಧಿಕಾರಿಗಳು ಎಚ್ಚೆತ್ತಕೊಂಡು ಕಸ ವಿಲೇವಾರಿ ಮಾಡುವುದನ್ನು ನಿಲ್ಲಿಸಿ, ಬೇರೆಡೆ ಸ್ಥಳಾಂತರಿಸುವಂತೆ ಆಗ್ರಹಿಸಿದರು.. ಬಿಬಿಎಂಪಿ ಕಸದ ಲಾರಿಗಳು ಹೆಚ್ಚಾಗಿ ಓಡಾಡುವುದರಿಂದ ರಸ್ತೆಗಳು ಹದಗೆಟ್ಟಿದ್ದು, ಕೂಡಲೇ ರಸ್ತೆಗಳು ದುರಸ್ಥಿಗೊಳಿಸಲು ಮನವಿ ಮಾಡಿದರು..
ಕನ್ನಡ ಸಾಹಿತ್ಯ ಪರಿಷತ್ ಗದಗ ತಾಲೂಕಾ ಘಟಕ ಹಾಗೂ ಮಹಾಂತ ಕಲಾ ಬಳಗದ ಸಂಯುಕ್ತ ಆಶ್ರಯದಲ್ಲಿ ಗದಗ ನಗರದ ಟ್ಯಾಗೋರ್ ರಸ್ತೆಯ 2 ನೇ ಕ್ರಾಸ್ ನಲ್ಲಿರುವ ಶ್ರೀ ಮಹಾಂತೇಶ್ವರ ದೇವಾಲಯದ ಆವರಣದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮ -50 ರ ಸರಣಿ ಕಾರ್ಯಕ್ರಮದ ಮೊದಲ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಮಹಿಳೆಯರಿಂದ ಜ್ಯೋತಿ ಬೆಳಗಿಸೋ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕರ್ನಾಟಕ ಏಕೀಕರಣ ಮತ್ತು ನಾಮಕರಣ ಹೋರಾಟದ ಕುರಿತಾಗಿ ಜೆಸಿ ಪ್ರೌಢ ಶಾಲೆಯ ಶಿಕ್ಷಕಿ ಜ್ಯೋತಿ ಹೇರಲಗಿ ಉಪನ್ಯಾಸವನ್ನು ನೀಡಿದ್ರು. ಕನ್ನಡ ನಾಡು, ನುಡಿ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಗದಗ ತಾಲೂಕಾ ಘಟಕದ ಅಧ್ಯಕ್ಷೆ ಡಾ. ರಶ್ಮಿ ಅಂಗಡಿ ಅವರು ಮಾತನಾಡಿದ್ರು. ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಣ ಸಮಿತಿ ಕಾಲೇಜಿನ ಉಪನ್ಯಾಸಕರಾದ ಬಾಹುಬಲಿ ಜೈನರ್ ಸೇರಿದಂತೆ ಟ್ಯಾಗೋರ್ ರಸ್ತೆಯ ಹಿರಿಯರಿಗೆ ಸನ್ಮಾನಿಸಲಾಯಿತು. ಇನ್ನು ಚಿಣ್ಣರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರ ನೀಡಲಾಯಿತು.
ಅಮೆರಿಕ: ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ, ಎರಡೂ ಕಡೆಗಳಿಂದ ನಡೆಯುತ್ತಿರುವ ಹಿಂಸಾಚಾರದ ಕೃತ್ಯಗಳನ್ನು ಸಮಾನವಾಗಿ ಖಂಡಿಸಿದ್ದಾರೆ. ತಮ್ಮ ಮಾಜಿ ಸಿಬ್ಬಂದಿ ‘Pod Save America’ ಸಂಸ್ಥೆಗಾಗಿ ನಡೆಸಿದ ಪಾಡ್ಕಾಸ್ಟ್ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಸ್ರೇಲ್ – ಹಮಾಸ್ ಸಮಸ್ಯೆ ನೂರು ವರ್ಷ ಹಳೆಯದಾಗಿದ್ದು, ಸದ್ಯ ಸಾಮಾಜಿಕ ಮಾಧ್ಯಮಗಳು ಈ ಬೆಂಕಿಗೆ ತುಪ್ಪ ಸುರಿಯುತ್ತಿವೆ ಮತ್ತು ದ್ವೇಷ ಹೆಚ್ಚಿಸುತ್ತಿವೆ ಎಂದು ಹೇಳಿದ್ದಾರೆ. https://ainlivenews.com/suprem-ray-healing-center-reiki/ ಈ ವಿಷಯದಲ್ಲಿ ನಾನು ಹಿಂದಿನ ದಿನಗಳನ್ನು ನೆನಪಿಸಿಕೊಳ್ಳುತ್ತೇನೆ. ನನ್ನ ಅಧ್ಯಕ್ಷತೆಯ ಅವಧಿಯಲ್ಲಿ ಈ ಸಮಸ್ಯೆಯ ನಿವಾರಣೆಗೆ ನಾನು ಮತ್ತೇನು ಮಾಡಬಹುದಿತ್ತು ಎಂದು ಪ್ರಶ್ನಿಸಿಕೊಳ್ಳುತ್ತೇನೆ. ನಾನು ಈ ವಿಚಾರದಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದು ನಿಜವಾದರೂ, ಅವುಗಳೆಲ್ಲದರ ಹೊರತಾಗಿ ನಾನು ಮತ್ತೇನೋ ಮಾಡಬಹುದಿತ್ತಾ ಎಂದು ನನ್ನ ಮನಸ್ಸು ನನಗೆ ಕೇಳುತ್ತಿರುತ್ತದೆ ಎಂದು ಹೇಳಿದ್ದಾರೆ.