ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪವು ಗಂಭೀರ ಸ್ವರೂಪದ್ದಾಗಿದೆ. ಈ ಪ್ರಕರಣದ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಅಕ್ಷಮ್ಯ. ಇದನ್ನು ಆಮ್ ಆದ್ಮಿ ಪಕ್ಷ ಖಡಾಖಂಡಿತವಾಗಿ ತಿರಸ್ಕರಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. https://ainlivenews.com/dkc-cbi-case-back-yatnal-says-he-will-go-to-court/ ಮುಖ್ಯಮಂತ್ರಿ ಚಂದ್ರು ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿದೆ. ಚಾರ್ಜ್‌ಶೀಟ್ ಹಾಕುವ ಹಂತಕ್ಕೆ ಬಂದಿದೆ. ಮುಕ್ತಾಯ ಹಂತದಲ್ಲಿರುವ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆಯುವುದು ದುರುದ್ದೇಶಪೂರಿತವಾಗಿದೆ. ಈ ನಿರ್ಧಾರ ಕಾನೂನಿಗೆ ವಿರುದ್ಧವಾಗಿದೆ ಎಂದರು. ಜನಸಮಾನ್ಯರ, ರೈತರ ಆಸ್ತಿಗಳಲ್ಲಿ ಕೊಂಚವೂ ಹೆಚ್ಚಾಗುವುದಿಲ್ಲ. ಆದರೆ, ರಾಜಕಾರಣಿಗಳ ಆಸ್ತಿ ನೂರಾರು ಪಟ್ಟು ಹೆಚ್ಚಾಗುವುದು ಹೇಗೆ? 2013-18ರ ಐದು ವರ್ಷದಲ್ಲಿ ಶಿವಕುಮಾರ್ ಅವರ ಆಸ್ತಿ ಶೇ 380ರಷ್ಟು ಏರಿಕೆಯಾಗಿದೆ. ಇದು ಹೇಗೆ ಸಾಧ್ಯವಾಯ್ತು ಎಂಬುದಕ್ಕೆ ಆಧಾರ ಬೇಕಲ್ಲವೇ? ಒಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಣೆ ಮಾಡಲು ರಾಜ್ಯ ಸರ್ಕಾರ…
Author: AIN Author
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ವಾಗ್ದಾಳಿ ಮಾಡಿದ್ದಾರೆ. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಕುರಿತು ಎಕ್ಸ್ (ಟ್ವಿಟರ್) ನಲ್ಲಿ “ಪ್ರಕರಣವನ್ನು ಹಿಂಪಡೆದಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಭ್ರಷ್ಟಾಚಾರ ಪ್ರಕರಣ ಹಿಂಪಡೆಯಲು ಸರ್ಕಾರ ಮರು ಪರಿಶೀಲಿಸಬೇಕು” ಎಂದು ಬರೆದುಕೊಂಡಿದ್ದಾರೆ. ಯತ್ನಾಳ್ ಟ್ವೀಟ್‌ನಲ್ಲೇನಿದೆ? ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಕೀಲರಾಗಿ ಅವರ ಹಲವು ಭ್ರಷ್ಟಾಚಾರದ ಪ್ರಕರಣವನ್ನು ಕೈಗೆತ್ತುಕೊಂಡು ವಾದ ಮಂಡಿಸಿದ್ದರು. ದುರಂತದ ವಿಷಯವೇನೆಂದರೆ, ಸರ್ಕಾರದ ಪ್ರಭಾವಿ ರಾಜಕಾರಣಿಯ ಖಾಸಗಿ ವಕೀಲರು ಅಡ್ವೋಕೇಟ್ ಜನರಲ್ ಆಗಿ ಡಿ.ಕೆ.ಶಿವಕುಮಾರ್ ಮೇಲೆ ನಡೆಯುತ್ತಿದ್ದ ಸಿ.ಬಿ.ಐ ತನಿಖೆಗೆ ಸರ್ಕಾರದ ಅನುಮತಿ ಹಿಂಪಡೆಯಬೇಕೆಂದು ಸಂಪುಟಕ್ಕೆ ಶಿಫಾರಸು ಮಾಡುತ್ತಾರೆ. ಈ ಶಿಫಾರಸಿನ ಕಾನೂನಿನ ಮಾನ್ಯತೆ ಬಗ್ಗೆ ಸಂಪುಟ…
ಉಡುಪಿ: ಪೆಟ್ರೋಲ್ ಪಂಪ್ (Petrol Pump) ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ (Tipper) ಹರಿದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ (Hebri) ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ನಡೆದಿದೆ. ಶಿವರಾಜ್ (38) ಟಿಪ್ಪರ್ ಹರಿದ ಪರಿಣಾಮ ಸಾವನ್ನಪ್ಪಿದ ಕಾರ್ಮಿಕ. ಮೃತ ಶಿವರಾಜ್ ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿ. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಬಳಿ ತಮ್ಮ ವಾಹನವನ್ನು ಬದಿಗಿಟ್ಟು ಮಲಗಿದ್ದರು. ನಿದ್ರೆಗೆ ಜಾರಿದ್ದ ವೇಳೆ ದುರ್ಘಟನೆ ನಡೆದಿದೆ. https://ainlivenews.com/miley-is-the-new-president-of-argentina-who-talks-to-a-dead-dog/ ಅದೇ ಪೆಟ್ರೋಲ್ ಪಂಪ್‌ಗೆ ಬಂದು ಪೆಟ್ರೋಲ್ ಹಾಕಿಸಿ ನಿರ್ಗಮಿಸುತ್ತಿದ್ದ ಟಿಪ್ಪರ್, ಅಲ್ಲೇ ಮಲಗಿದ್ದ ಶಿವರಾಜ್ ಹಾಗೂ ಮಹೇಂದ್ರ ಮೇಲೆ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನವೆಂಬರ್ 29ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಲ್ಲಿ ಸದ್ಯ ಮೋಡ ಕವಿದ ವಾತಾವರಣ ಇದ್ದು, ರಾತ್ರಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ…
ನಟ, ನಿರ್ದೇಶಕ, ಬಿಗ್ ಬಾಸ್ ವಿನ್ನರ್ ಪ್ರಥಮ್ (Pratham) ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಡ್ಯದ ಭಾನುಶ್ರೀ (Bhanushree) ಜೊತೆ ಅವರು ಸರಳವಾಗಿ ಮದುವೆಯಾಗಿದ್ದಾರೆ (Marriage). ಈ ಜೋಡಿಯನ್ನು ಶುಭ ಹಾರೈಸುವುದಕ್ಕಾಗಿ ಲವ್ಲಿ ಸ್ಟಾರ್ ಪ್ರೇಮ್, ಧ್ರುವ ಸರ್ಜಾ, ಗಾಯಕಿ ಇಶಾನಿ, ರಕ್ಷಕ್ ಬುಲೆಟ್ ಸೇರಿದಂತೆ ಹಲವಾರು ತಾರೆಯರು ಆಗಮಿಸಿದ್ದರು. ಎಲ್ಲರನ್ನೂ ಮದುವೆ ಕರೆಯಲಾರೆ ಎಂದು ಮೊದಲೇ ಪ್ರಥಮ್ ತಿಳಿಸಿದ್ದರು. ಎರಡು ಕುಟುಂಬಗಳ ಸದಸ್ಯರು ಮತ್ತು ಆಪ್ತರ ಮುಂದೆ ಸರಳವಾಗಿ ಮದುವೆ ಆಗುವುದಾಗಿ ಅವರು ತಿಳಿಸಿದ್ದರು. ಹಾಗೆಯೇ ಪ್ರಥಮ್ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ವಾರವಷ್ಟೇ ಇವರು ಸೋಷಿಯಲ್ ಮೀಡಿಯಾದಲ್ಲಿ, ‘ಮುಂದಿನ ವಾರ ಮದುವೆ. ಅಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೇ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೇಸೆಜ್ ಹಾಕಿ ನಿಮ್ಮನ್ನ ಮದುವೆಗೆ ಕಾಟಾಚಾರಕ್ಕೆ ಕರೆಯೋದಿಲ್ಲ. ಈಗ ಎಲ್ಲಿರ್ತೀರೋ ಅಲ್ಲಿಂದಲೇ ಹಾರೈಸಿ. ಗ್ರ್ಯಾಂಡ್ ಆಗಬಹುದಿತ್ತು. ನನಗೆ ಆಸಕ್ತಿ ಇಲ್ಲ. ಸರಳವಾಗಿ ಆಗ್ತಿರೋ ಕಾರಣ…
ಹಾಸನ: ಮಾಜಿ ಸಚಿವ ಎಚ್ ಡಿ ರೇವಣ್ಣ ಆಪ್ತ ಉದ್ಯಮಿ ಕೃಷ್ಣಗೌಡ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಆರೋಪಿಗಳ ಬಂಧನದ ವಿಷಯದಲ್ಲಿ ಜಿಲ್ಲಾ ಪೊಲೀಸ್ ವಿಫಲಗೊಂಡಿದ್ದರಿಂದ ಪ್ರಕರಣ ಹಳ್ಳಹಿಡಿದು ಹೋಗಬಹುದು ಎನ್ನುವ ಹಂತದಲ್ಲಿ ಕಾನೂನು, https://ainlivenews.com/miley-is-the-new-president-of-argentina-who-talks-to-a-dead-dog/ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ್ದಾರೆ. ಈಗ ಸಿಐಡಿ ಪ್ರವೇಶದಿಂದ ಪ್ರಕರಣದ ತನಿಖೆಯ ದಿಕ್ಕು ಬದಲಾಗುವ ಸಾಧ್ಯತೆ ಇದೆ. ಶುಕ್ರವಾರವೇ ಸಿಐಡಿಯ ತನಿಖಾಧಿಕಾರಿ ನಗರಕ್ಕೆ ಆಗಮಿಸಲಿದ್ದು ಆರೋಪಿಗಳಿಗೆ ಮತ್ತೊಮ್ಮೆ ಡ್ರಿಲ್ ಆರಂಭವಾಗಲಿದೆ.
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದ ಕಾನೂನು ಲೋಪವನ್ನು ನಮ್ಮ ಸರ್ಕಾರ ಸರಿ ಮಾಡಿದೆ ಎಂದು ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಸಿಬಿಐ (CBI) ಕೇಸ್ ವಾಪಸ್ ಪಡೆಯುವ ಸರ್ಕಾರದ ನಡೆಯನ್ನು ಗೃಹಸಚಿವ ಜಿ ಪರಮೇಶ್ವರ್ (G Parameshwara) ಸಮರ್ಥನೆ ಮಾಡಿಕೊಂಡಿದ್ದಾರೆ. https://ainlivenews.com/cm-siddaramaiah-works-as-a-lawyer-lecturer-hdk-spark/ ಡಿಕೆಶಿ ಸಿಬಿಐ ಕೇಸ್ ವಾಪಸ್ ಪಡೆಯುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ರಾಜಕೀಯ ಪ್ರೇರಿತ ಅಲ್ಲ. ಯಡಿಯೂರಪ್ಪ ಅವರು ಮೌಖಿಕ ನಿರ್ದೇಶನ ಕೊಟ್ಟು ಸಿಬಿಐಗೆ ಕೇಸ್ ಕೊಡಿ ಎಂದು ಸಿಎಸ್‌ಗೆ ಮೌಖಿಕ ಆದೇಶ ಕೊಟ್ಟಿದ್ದು ರಾಜಕೀಯ ಪ್ರೇರಿತ ಅಲ್ಲವಾ? ನಾವು ಮಾಡಿರೋದು ಕಾನೂನಿನ ಚೌಕಟ್ಟಿನಲ್ಲಿ. ಅಂದಿನ ಅಡ್ವೊಕೇಟ್ ಜನರಲ್ ಅವರು ಹೇಳಿದ್ರು, ಈಗ ನಮ್ಮ ಎಜಿ ಅವರು ನಮಗೆ ಅದನ್ನು ಹೇಳಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ನಮ್ಮ ಇತಿಮಿತಿಯಲ್ಲಿ ತೀರ್ಮಾನ ಮಾಡಿದ್ದೇವೆ. ಹಾಗಾಗಿ ಇದು ರಾಜಕೀಯ ಪ್ರೇರಿತ ಅಲ್ಲ ಎಂದಿದ್ದಾರೆ. ರಾಜಕೀಯ ಪ್ರೇರಿತ ಬಿಜೆಪಿ ಅವರು ಮಾಡಿದಾಗ ಒಂದು, ನಾವು ಮಾಡಿದಾಗ ಒಂದು ಆಗೋದಿಲ್ಲ. ಎಲ್ಲವೂ ಒಂದೇ…
ತುಮಕೂರು: ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡುತ್ತಾರೆ. ಅಂದು ಸಿಬಿಐನವರು ಅನುಮತಿ ಕೇಳಿದ್ದರು. ಸರ್ಕಾರ ಅನುಮತಿ ನೀಡಿತ್ತು. ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ತೀರ್ಪಾಗಲಿ. https://ainlivenews.com/shooting-in-metro-also-from-now-on-bmrcl-green-signal/ ನ್ಯಾಯಾಲಯದ ಮುಂದೆಯೇ ಕ್ಲೀನ್ ಚೀಟ್ ಪಡೆದು ಜನರ ಮುಂದೆ ಹೋಗಬೇಕಿತ್ತು. ಇದೊಂದು ನ್ಯಾಯಾಲಯಕ್ಕೆ ಸವಾಲ್ ಹಾಕಿದ ರೀತಿಯಲ್ಲಿದೆ. ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್. ಇಂತಹ ಪ್ರಕರಣಗಳನ್ನು ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡುವುದು ಸೂಕ್ತವಾಗಿರಲಿಲ್ಲ. ಎಂದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಾಗ್ದಾಳಿ ಮಾಡಿದರು.
ಕಲಬುರಗಿ: ಜಸ್ಟ್ 28 ಸೆಕೆಂಡ್ ಅಷ್ಟೆ.. ಅಷ್ಟರಲ್ಲಿಯೇ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ ಬೈಕನ್ನ ಖದೀಮನೊಬ್ಬ ಕದ್ದೊಯ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ..ಜೇವರ್ಗಿ ರಸ್ತೆಯ ಕೊಠಾರಿ ಭವನದ ಬಳಿ ಘಟನೆ ನಡೆದಿದ್ದ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ನೋಡ ನೋಡ್ತಿದ್ದಂತೆ ಕದ್ದೊಯ್ದಿದ್ದಾನೆ. ಚಂದ್ರಕಾಂತ ಎಂಬುವವರಿಗೆ ಸೇರಿರೋ ಬೈಕ ಅಂತ ಗೊತ್ತಾಗಿದ್ದು ಮುಖಕ್ಕೆ ಮಾಸ್ಕ್ ಕಟ್ಕೊಂಡು ಬಂದು ಬೈಕ್ ಕದಿಯೋ ಸೀನ್ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ..ಪ್ರಕರಣ ದಾಖಲಿಸಿಕೊಂಡ ಸ್ಟೇಷನ್ ಬಜಾರ್ ಠಾಣೆ ಪೋಲೀಸರು ಆರೋಪಿಗಾಗಿ ತಲಾಷ ನಡೆಸಿದ್ದಾರೆ.
ಹುಬ್ಬಳ್ಳಿ: ಜಾತಿ ಜನಗಣತಿ ಗೊಂದಲ ವಿಚಾರ, ಕಾಂಗ್ರೆಸ್ ಸರ್ಕಾರದಲ್ಲೇ ಗೊಂದಲವಿದೆ. ಜಾತಿ ಜನಗಣತಿ ವಿಚಾರದಲ್ಲೊ ದೊಡ್ಡ ಪ್ರಮಾಣದ ಗೊಂದಲಸೃಷ್ಠಿಯಾಗುತ್ತಿದೆ. ಇದು ಆಡಳಿತ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತೆ. ಜಾತಿ ಜನಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಜಾತಿಜನಗಣತಿ ಮಾಡಬೇಕಿರುವುದು ಕೇಂದ್ರ ಸರ್ಕಾರ. ಕೇಂದ್ರ ಸರ್ಕಾರದ ಕೆಲಸವನ್ನ ನಾವು ಮಾಡುತ್ತೇವೆ ಅಂತಾ ರಾಜ್ಯ ಸರ್ಕಾರ ಹೇಳುತ್ತಿದೆಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿಯ ಪತ್ರ ಮಾಯವಾಗಿದೆ ಅಂತಾ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರೇ ಪತ್ರ ಬರೆದಿದ್ದಾರೆ. ಈ ವಿಚಾರದ ಬಗ್ಗೆ ಸರ್ಕಾರದಲ್ಲೇ ಸಹಮತವಿಲ್ಲ. ಡಿ.ಕೆ.ಶಿವಕುಮಾರ , ಶಾಮನೂರು ಶಿವಶಂಕರಪ್ಪ ಮೊದಲಾದವರಿಂದ ಇದರ ಬಗ್ಗೆ ವಿರೋಧವಿದೆ. ಈ ಕುರಿತು ವರದಿ ಜಾರಿಯಾಗಬಾರದೆಂದ ವಿರೋಧ ಅವರಲ್ಲೇ ಇದೆ. ಸರ್ಕಾರದಲ್ಲಿ ಗೊಂದಲ, ಭಿನ್ನಾಭಿಪ್ರಾಯ ಇರುವಾಗ ವರದಿ ಹೇಗೆ ಸಲ್ಲಿಸುತ್ತಾರೆ ? ಕೆಲಶಾಸಕರನ್ನ ಎತ್ತಿಕಟ್ಟಿ ಸಿಎಂ ಸಿದ್ಧರಾಮಯ್ಯ ತಮ್ಮ ಪಾರುಪತ್ಯ ಮೆರೆಯುತ್ತಿದ್ದಾರೆ. ಜನರ ಹಿತದೃಷ್ಠಿಯಿಂದ…