Author: AIN Author

ಧಾರವಾಡ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹರಾಜರಿಗೆ ಅವಮಾನ ಮಾಡಿರುವ ಘಟನೆ ಖಂಡಿಸಿ ಹಾಗೂ ಪದೇ ಪದೇ ಶಿವಾಜಿ ಮಾಹರಾಜರ ಅಪಮಾನ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ, ಧಾರವಾಡದಲ್ಲಿ ಮರಾಠ ಸಮಾಜದ ಮುಖಂಡರು ಮನವಿ ಸಲ್ಲಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಗೆ ಬಂದ ಮರಾಠ ಮಡಳ ಮುಖಂಡರು ಹಾಗೂ ಸಮಾಜದ ಮುಖಂಡರು ಶ್ರೀ ಶಿವಾಜಿ ಮಹರಾಜರಿಗೆ ಅಪಮಾನ ಮಾಡುವವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇತ್ತೀಚೆಗೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದಲ್ಲಿನ ಮುಸ್ಲಿಂ ಕೆಲವು ಕಿಡಗಡಿಗಳು ಟಿಪ್ಪು ಸುಲ್ತಾನ ಮುಂದೆ ಬೇಡಿಕೊಳ್ಳುವ ರೀತಿ ಶಿವಾಜಿ ಮಹರಾಜರ ಪೋಟೊಎಡಿಟ್ ಮಾಡಿ ಅಪಮಾನ ಮಾಡಿದ್ದಾರೆ. ಈಗಾಗಲೇ ಆ ಕೃತ್ಯ ನಡೆಸಿದವರನ್ನು ಬಂಧನ ಮಾಡಲಾಗಿದೆ. ಆದರೆ ಈ ರೀತಿಯ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ.‌ ನಾವು ಎಲ್ಲ ಸಮಾಜದ ನಾಯಕರನ್ನು ಹಾಗೂ ಗುರುಗಳನ್ನು ಗೌರವದಿಂದ ಕಾಣುತ್ತವೆ. ಆದರೆ ಕೆಲವು…

Read More

ಬಾಗಲಕೋಟೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪವು ಗಂಭೀರ ಸ್ವರೂಪದ್ದಾಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಾಲಿಂಗಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಪ್ರಕರಣದ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಜೆಯಲು ರಾಜ್ಯ ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಅಕ್ಷಮ್ಯ. ಇದನ್ನು ಆಮ್ ಆದ್ಮಿ ಪಕ್ಷ ಖಡಾಖಂಡಿತವಾಗಿ ತಿರಸ್ಕರಿಸುತ್ತದೆ ಎಂದು ಅರ್ಜುನ ಹಲಗಿಗೌಡರ ಆಮ್ ಆದ್ಮಿ ಪಕ್ಷ ಉತ್ತರ ಕರ್ನಾಟಕ ಸಂಘಟನೆಯ ಕಾರ್ಯದರ್ಶಿ ಹೇಳಿದರು. ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಸಿಬಿಐ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿದೆ. ಚಾರ್ಜ್‌ಶೀಟ್‌ ಹಾಕುವ ಹಂತಕ್ಕೆ ಬಂದಿದೆ. ಮುಕ್ತಾಯ ಹಂತದಲ್ಲಿರುವ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆಯುವುದು ದುರುದ್ದೇಶಪೂರಿತವಾಗಿದೆ. ಈ ನಿರ್ಧಾರ ಕಾನೂನಿಗೆ ವಿರುದ್ಧವಾಗಿದೆ ಎಂದರು. ಜನಸಮಾನ್ಯರ, ರೈತರ ಆಸ್ತಿಗಳಲ್ಲಿ ಕೊಂಚವೂ ಹೆಚ್ಚಾಗುವುದಿಲ್ಲ. ಆದರೆ ರಾಜಕಾರಣಿಗಳ ಆಸ್ತಿ ನೂರಾರು ಪಟ್ಟು ಹೆಚ್ಚಾಗುವುದು ಹೇಗೆ? 2013-18ರ ಐದು ವರ್ಷದಲ್ಲಿ ಶಿವಕುಮಾರ್‌ ಅವರ ಆಸ್ತಿ ಶೇ 380ರಷ್ಟು ಏರಿಕೆಯಾಗಿದೆ. ಇದು ಹೇಗೆ ಸಾಧ್ಯವಾಯ್ತು ಎಂಬುದಕ್ಕೆ…

Read More

ಕೋಲಾರ: ಕೃಷಿ ಉತ್ಪನ್ನ ಮಾರುಕಟ್ಟೆಗೆ ಬೇಕಾದ ೮೦ ಎಕರೆ ಜಾಗ ಗುರುತಿಸಿಲ್ಲ ಎಂದು ರೈತ ಸಂಘ ಹಾಗೂ ಜೆಡಿಎಸ್ ನಿಂದ ಪ್ರತಿಭಟನೆ ಮಾಡಲಾಯಿತು. ಕೋಲಾರ ಹೊರ ವಲಯದ ಕೊಂಡರಾಜನಹಳ್ಳಿ ಬಳಿ ಇರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಎದುರು ಸರ್ಕಾರ ಹಾಗೂ ಜಿಲ್ಲಾಡಳಿತ ದ ವಿರುದ್ದ ಜಾನುವಾರು, ಬಂಡಿ, ಟ್ರಾಕ್ಟರ್, ಹಣ್ಣು- ತರಕಾರಿ, ಸೊಪ್ಪುಇನೊಂದಿಗೆ ಪ್ರತಿಭಟನೆ ನಡೆಸಿದರು. ಎಪಿಎಂಸಿ ಬಳಿಕ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇನ್ನೂ ಹೆದ್ದಾರಿ ತಢದ್ರೆ ಹೋರಾಟಗಾರರನ್ನ ಬಂಧಿಸುವ ಸಾಧ್ಯತೆ ಇದೆ.

Read More

ನಟಿ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌ‍ಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ. ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದಾರೆ. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಆಗಿದೆ ಎಂದು ವರದಿ ಆಗಿದೆ. ಮನ್ಸೂರ್ ಅಲಿ ಖಾನ್ (Mansoor Ali Khan) ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳು ಚಿತ್ರೋದ್ಯಮದಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ (Trisha) ಅವರನ್ನು ರೇಪ್ (Rape) ಮಾಡುವಂತಹ ಸನ್ನಿವೇಶ ಇದೆ ಅಂದುಕೊಂಡಿದೆ. ಆದರೆ, ಇರಲಿಲ್ಲ.…

Read More

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತೇರದಾಳ ಹಿಡಕಲ ರಸ್ತೆಯ ಒಂದನೇ ಕಾಲುವೆಯ ಬಳಿ ಜಮೀನಲ್ಲಿ ಹರಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಬಸಪ್ಪ ಅಥಣಿ (65) ಮೃತಪಟ್ಟವರು. ತಮ್ಮ ಜಮೀನಿನಲ್ಲಿ ಹೋಗಿ ಮರಳಿ ಬರುವಾಗ ಅಲ್ಲೇ ತುಂಡಾಗಿ ಬಿದ್ದಿದ್ದ ಹೆಸ್ಕಾಂ ವಿದ್ಯುತ್ ತಂತಿ ( ಎಲ್ ಟಿ ಲೈನ್) ಬಸಪ್ಪ ಅವರ ಗಮನಕ್ಕೆ ಬಂದಿರಲಿಲ್ಲ ಹೊಟ್ಟೆ ಹಾಗೂ ಕೈಗಳಿಗೆ ವಿದ್ಯುತ್ಪರ್ಶವಾಗಿ ಮೃತಪಟ್ಟಿದ್ದಾರೆ ಎಂದು ಮೃತರು ಪುತ್ರ ರಾಜು ಬಸಪ್ಪ ಅಥಣಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ತೇರದಾಳ ಪಿಎಸ್ಐ ಅಪ್ಪು ಐಗಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪ್ರಕಾಶ ಕುಂಬಾರ ಬಾಗಲಕೋಟೆ

Read More

ಜನಪ್ರಿಯ ಸೀರಿಯಲ್ ‘ರಂಗನಾಯಕಿ’ ಮೂಲಕ ಪರಿಚಿತರಾದ ನಟಿ ಪ್ರೇರಣಾ ಕಂಬಂ (Prerana Kambam) ಅವರು ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಶ್ರೀಪಾದ್ ದೇಶಪಾಂಡೆ ಜೊತೆ ನಟಿ ಹಸೆಮಣೆ ಏರಿದ್ದಾರೆ. ಇತ್ತೀಚೆಗೆ ಪ್ರೇರಣಾ ಅವರು ಶ್ರೀಪಾದ್ ಜೊತೆ ಅದ್ದೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೀಗ ಬೆಂಗಳೂರಿನಲ್ಲಿ ಖಾಸಗಿ ರೆಸಾರ್ಟ್‌ವೊಂದರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ನಟಿ ಮದುವೆಯಾಗಿದ್ದಾರೆ. ಈ ಮದುವೆಗೆ ನಮ್ಮನೆ ಯುವರಾಣಿ ಸೀರಿಯಲ್‌ ನಟಿ ಅಂಕಿತಾ ಅಮರ್‌ ಆಗಮಿಸಿದ್ದರು. ಸ್ಪೆಷಲ್ ಫೋಟೋಶೂಟ್ ಮೂಲಕ ನಟಿ ಕೆಲ ದಿನಗಳ ಹಿಂದೆ ಭಾವಿ ಪತಿಯನ್ನ ಸೋಷಿಯಲ್ ಮೀಡಿಯಾದಲ್ಲಿ ಪರಿಚಯಿಸಿದ್ದರು. ಅಷಕ್ಕೂ ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಎಂಬುದರ ಬಗ್ಗೆ ಮಾಹಿತಿ ಇಲ್ಲ ‘ರಂಗನಾಯಕಿ’ (Ranganayaki) ಸೀರಿಯಲ್‌ನಲ್ಲಿ ಹೀರೋಯಿನ್ ಆಗಿ ನಟನಾ ಕ್ಷೇತ್ರಕ್ಕೆ ಪರಿಚಿತರಾದ ಪ್ರೇರಣಾ ಬಳಿಕ ಕನ್ನಡದ ಮಿನಿ ಬಿಗ್ ಬಾಸ್‌ನಲ್ಲಿ ಕಾಣಿಸಿಕೊಂಡಿದ್ದರು. ‘ಫಿಸಿಕ್ಸ್ ಟೀಚರ್’ ಎಂಬ ಚಿತ್ರದಲ್ಲಿ ನಟಿಸಿದ್ದರು. ತೆಲುಗಿನಲ್ಲಿ ‘ಕೃಷ್ಣ ಮುಕುಂದ ಮುರಾರಿ’ ಸೀರಿಯಲ್‌ನಲ್ಲಿ ಪ್ರೇರಣಾ ಲೀಡ್ ರೋಲ್‌ನಲ್ಲಿ ನಟಿಸಿದ್ದರು.

Read More

ದೊಡ್ಮನೆಯ ಮನೆಯ (Bigg Boss Kannada 10) ಆಟ ರಂಗೇರಿದೆ. ಗೆಲ್ಲೋದ್ದಕ್ಕೆ ಏನು ಮಾಡೋಕು ಸೈ ಅಂತ ಸ್ಪರ್ಧಿಗಳು ರೆಡಿಯಾಗಿದ್ದಾರೆ. ಇದೀಗ ತನಿಷಾ ಬಳಿಕ ಮೈಕಲ್, ಕೂಡ ಸಂಗೀತಾ ಸಮಯ ಸಾಧಕಿ, ಅವಕಾಶವಾದಿ ಎಂದು ಕಿಡಿಕಾರಿದ್ದಾರೆ. ಸಂಗೀತಾ ಆಟಕ್ಕೆ ಮೈಕಲ್ ಫುಲ್ ರಾಂಗ್ ಆಗಿದ್ದಾರೆ. ಈಗಾಗಲೇ ಎರಡು ತಂಡಗಳಾಗಿ ವಿಂಗಡಿಸಿರೋ ಬಿಗ್ ಬಾಸ್. ಈ ಬಾರಿ ಗಜಕೇಸರಿ ಮತ್ತು ಸಂಪತ್ತಿಗೆ ಸವಾಲ್ ಎರಡು ತಂಡದ ಜಟಾಪಟಿ ಜೋರಾಗಿದ್ದು, ಗಜಕೇಸರಿ ತಂಡದ ಲೀಡರ್ ಸಂಗೀತಾ ಟೀಮ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹೂವುವನ್ನ ಎದುರಾಳಿ ತಂಡದಿಂದ ರಕ್ಷಿಸುವ ಟಾಸ್ಕ್‌ನಲ್ಲಿ ಸಂಗೀತಾ ಟೀಮ್ ಯಡವಟ್ಟು ಮಾಡಿದೆ. ಈ ವೇಳೆ, ತುಕಾಲಿ ಕಾಲಿಗೆ ಪೆಟ್ಟಾಗಿದೆ. ಸಂಗೀತಾ ಸಮಯ ಸಾಧಕಿ (Opportunist) ಅಂತ ಹಿಂದೊಮ್ಮೆ ತನಿಷಾ ಕುಟುಕಿದ್ದರು. ವರ್ತೂರು ಸಂತೋಷ್‌ಗೆ 34 ಲಕ್ಷಕ್ಕೂ ಅಧಿಕ ವೋಟ್ಸ್ ಬಿದ್ದಿದೆ ಅಂತ ಬಹಿರಂಗವಾದ್ಮೇಲೆ,ಅವರ ಜೊತೆಗೆ ಸಂಗೀತಾ ಕ್ಲೋಸ್‌ ಆಗಿದ್ದನ್ನ ಕಂಡು ಸಂಗೀತಾ ಅವಕಾಶವಾದಿ ಎಂದು ಮೈಕಲ್ ಅಭಿಪ್ರಾಯ ಪಟ್ಟಿದ್ದರು. ಇದೀಗ ಚಟುವಟಿಕೆಯೊಂದರಲ್ಲಿ…

Read More

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮದಲಮಟ್ಟಿ ಗ್ರಾಮದಲ್ಲಿ ಮಹಿಳೆಯೊಬ್ಬರು ಸಂಶಯಸ್ಪದವಾಗಿ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿತ್ತು. ಮದಲಮಟ್ಟಿ ಗ್ರಾಮದ ಕಬ್ಬಿನ ಜಮೀನಿನಲ್ಲಿ ನಾಗವ್ವ ಸಿದ್ದಪ್ಪ ಯಲ್ಲಟ್ಟಿ (46) ಶವ ಕೊಳೆತು ದುರ್ವಾಸನೆ ಬರುತ್ತಿತ್ತು. ಘಟನೆ ಬಗ್ಗೆ ಮಾಹಿತಿ ತಿಳಿದ ತೇರದಾಳ ಪೊಲೀಸ್ ಠಾಣೆ ಪಿಎಸ್ಐ ಅಪು ಐಗಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ನಾಗವ್ವ ಅವರ ತಾಯಿ ನೀಲವ್ವ ಇತ್ನಾಳ ಮಗಳ ಸಾವಿನ ಕುರಿತು ಸಂಶಯವಿರುವುದಾಗಿ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪಿಎಸ್ಐ ಅಪು ಮತ್ತು ಬನಹಟ್ಟಿ ಸಿಪಿಐ ಸಂಜೀವ ಬಳಗಾರ ತನಿಖೆ ಆರಂಭಿಸಿ ನಾಗವ್ವ ಕೊಲೆ ಆಗಿರುವುದನ್ನು ದುಡಪಡಿಸಿದ್ದು ಕೊಲೆ ಆರೋಪಿ ಹಳಿಂಗಳಿ ಗ್ರಾಮದ ಕಲ್ಲಪ್ಪ ಪರಪ್ಪ ಚಿನಗಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಹಳ ವರ್ಷಗಳಿಂದ ನಾಗವ್ವ ಜೊತೆ ಅಕ್ರಮ ಸಂಬಂಧ ಹೊಂದಿದ ಕಲ್ಲಪ್ಪ ಆಕೆಯನ್ನು ನವಂಬರ 17 ರಂದು ರಾತ್ರಿ ಕಬ್ಬಿನ ಜಮೀನಿಗೆ ಹೋಗಿ ಆ ವೇಳೆ ಇಬ್ಬರ ನಡುವೆ ಜಗಳ ನಡೆಯಿತು. ಕಲ್ಲಪ್ಪ ಸೀರೆಯಿಂದ…

Read More

ಮಂಡ್ಯದ ಗಂಡು ಅಂಬರೀಶ್ ಅವರು ಅಗಲಿ ಇಂದಿಗೆ ಐದು ವರ್ಷಗಳಾಗಿವೆ. ಅವರ ಪುಣ್ಯ ಸ್ಮರಣೆಯ ನಿಮಿತ್ತ ಹಲವಾರು ಕಾರ್ಯಕ್ರಮಗಳನ್ನು ಅಂಬರೀಶ್ ಅವರ ಕುಟುಂಬ ಮತ್ತು ಅಭಿಮಾನಿಗಳು ಆಯೋಜಿಸಿದ್ದಾರೆ. ಬೆಳಗ್ಗೆ ಸುಮಲತಾ ಅಂಬರೀಶ್ (Sumalatha), ಅಭಿಷೇಕ್ ಅಂಬರೀಶ್ (Abhishek), ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವಾರು ಚಿತ್ರೋದ್ಯಮದ ಗಣ್ಯರು ಮತ್ತು ಅಂಬಿ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸಮಾಧಿಗೆ ಬಂದು ಪೂಜೆ ಸಲ್ಲಿಸಿದ್ದಾರೆ. ಅಂಬಿ ಸ್ಮರಣೆ (Punyasmarane) ಕುರಿತಂತೆ ಸುಮಲತಾ ಅಂಬರೀಶ್ (Ambarish) ಅವರು ಭಾವುಕ ಪೋಸ್ಟ್ ಮಾಡಿದ್ದಾರೆ. ‘ಇರುವುದೊಂದೇ ಜೀವನ ಅದೆಷ್ಟು ವ್ಯತ್ಯಾಸವಿದೆ. ಎಂದೆಂದಿಗೂ ನಮ್ಮ ನೆನಪುಗಳಲ್ಲಿ, ಸುಖ, ದುಃಖ, ನಗು, ಕಣ್ಣೀರು. ಪ್ರತಿಯೊಂದು ಕ್ಷಣವೂ ನೀವು ಬಿಟ್ಟ ನಿರ್ವಾತವನ್ನು ಅಳೆಯಲಾಗದು.ನಾನು ಆ ಪ್ರೀತಿಯನ್ನು ಕಾಪಿಟ್ಟುಕೊಳ್ಳುತ್ತೇನೆ, ನಷ್ಟವನ್ನಲ್ಲ. ಅನೇಕರನ್ನು ಒಳಗೊಂಡ ಜೀವನವನ್ನು ಎಂದಿಗೂ ಕಳೆದುಕೊಳ್ಳಲು ಆಗುವುದಿಲ್ಲ. ನೀವು ಶಾಶ್ವತವಾಗಿರುತ್ತೀರಿ.ನೀವೊಂದು ಜೀವ ಮೀರಿದ, ಒಂದು ಪ್ರಪಂಚ. ಇಂದು ನನಗೆ ಖಾತ್ರಿಯಿದೆ, ನೀವು ಅತ್ಯಂತ ಹೆಮ್ಮೆಯಿಂದ ಸಂಭ್ರಮದಲ್ಲಿರುವಿರಿ ಮತ್ತು ನಿಮ್ಮ ಆ ಪ್ರಪಂಚದಿಂದ…

Read More

ಕನ್ನಡ ಚಿತ್ರೋದ್ಯಮಕ್ಕೆ ಮತ್ತೊಂದು ಶುಕ್ರವಾರ ಬಂದಿದೆ. ವಾರ ವಾರ ಕನ್ನಡದ ಐದಾರು ಸಿನಿಮಾಗಳು ರಿಲೀಸ್ (Release) ಆಗುವ ಮೂಲಕ ಒಂದು ರೀತಿಯಲ್ಲಿ ಸಂಭ್ರಮ ಮತ್ತೊಂದು ರೀತಿಯಲ್ಲಿ ಆತಂಕ ಸೃಷ್ಟಿ ಮಾಡುತ್ತಿವೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ವಾರಕ್ಕೆ 20ಕ್ಕೂ ಹೆಚ್ಚು ಚಿತ್ರಗಳು ರಿಲೀಸ್ ಆಗುವುದರಿಂದ ಯಾವ ಸಿನಿಮಾವನ್ನು ನೋಡಬೇಕು ಎನ್ನುವ ಗೊಂದಲಕ್ಕೆ ಬಿದ್ದಿದ್ದಾನೆ ಪ್ರೇಕ್ಷಕ. ಈ ವಾರವೂ ಕನ್ನಡದ ಐದು ಚಿತ್ರಗಳು ಬಿಡುಗಡೆ ಆಗುತ್ತಿವೆ. ಸೂರಿ ಮತ್ತು ಅಭಿಷೇಕ್ ಅಂಬರೀಶ್ (Abhishek Ambarish) ಕಾಂಬಿನೇಷನ್ ನ ‘ಬ್ಯಾಡ್ ಮ್ಯಾನರ್ಸ್’, ಡಾರ್ಲಿಂಗ್ ಕೃಷ್ಣ ನಟನೆಯ ಶುಗರ್ ಫ್ಯಾಕ್ಟರಿ, ರಾಜ್ ಬಿ ಶೆಟ್ಟಿ (Raj B Shetty) ನಿರ್ದೇಶಿಸಿ, ನಟಿಸಿರುವ ಹಾಗೂ ರಮ್ಯಾ (Ramya) ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಸೇರಿದಂತೆ ಈ ವಾರ ಐದು ಚಿತ್ರಗಳು ಬಿಡುಗಡೆ ಆಗುತ್ತಿವೆ. ಈಗಾಗಲೇ ಬ್ಯಾಡ್ ಮ್ಯಾನರ್ಸ್ ಮತ್ತು ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಕುತೂಹಲ ಮೂಡಿಸಿವೆ. ಬ್ಯಾಡ್ ಮ್ಯಾನರ್ಸ್…

Read More