ಉಡುಪಿ: ಒಂದೇ ಕುಟುಂಬದ ನಾಲ್ವರ (Udupi Murder Case) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಗಳನ್ನು ಉಡುಪಿ ಎಸ್‌ಪಿ ಅರುಣ್ ಅವರು ಹಂಚಿಕೊಂಡಿದ್ದಾರೆ. ನೇಜಾರು ತೃಪ್ತಿ ನಗರದಲ್ಲಿ ಹಸೀನಾ, ಆಫ್ನಾನ್, ಅಯ್ನಾಝ್, ಆಸಿಮ್ ಹತ್ಯೆಯಾಗಿತ್ತು. ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಿ ನಾಲ್ವರ ಕೊಲೆಗೈದು ಚೂರಿಯನ್ನು ಅಡುಗೆ ಮನೆಯಲ್ಲಿ ಇಟ್ಟಿದ್ದ. ಪತ್ನಿಗೆ ಸಂಶಯ ಬಾರದ ಹಾಗೆ ಮನೆಯಲ್ಲಿ ಪ್ರವೀಣ್ ಚೌಗಲೆ ವರ್ತಿಸಿದ್ದ ಎಂದು ತಿಳಿಸಿದ್ದಾರೆ. ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಇಬ್ಬರಿಗೂ ಎಂಟು ತಿಂಗಳಿಂದ ಪರಿಚಯ ಇತ್ತು. ಇಬ್ಬರ ಮಧ್ಯೆ ಗೆಳೆತನ ಇತ್ತು. ಪ್ರವೀಣ್, ಆಯ್ನಾಸ್‌ಗೆ ಹಲವಾರು ಸಹಾಯ ಮಾಡದ್ದಾನೆ. ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಪೊಸೆಸಿವ್‌ನೆಸ್‌ನಿಂದ ಕೊಲೆ ಮಾಡಬೇಕೆಂದು ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಪ್ರವೀಣ್. ಆರಂಭದಲ್ಲಿ ಅಯ್ನಾಸ್‌ಗೆ ಮೊದಲ ಅಟ್ಯಾಕ್ ಮಾಡುತ್ತಾನೆ. ಹಸೀನಾ, ಅಫ್ನಾನ್, ಆಸಿಂಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಂತರ ಬೇರೆ ಬೇರೆ ವಾಹನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದಾನೆ. ಕೈ ಗಾಯಕ್ಕೆ ಚಿಕಿತ್ಸೆ…
Author: AIN Author
ಮಂಡ್ಯ: ಜಾತಿಗಣತಿ ವರದಿ ಜಾರಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯು ಸಮಾಜವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಲ್ಲ. ಬದಲಿಗೆ ಸಮಾಜವನ್ನು ಒಡೆಯುವ ಉದ್ದೇಶ ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ”ಜಾತಿಗಣತಿ ವಿಚಾರವಾಗಿ ಮುಖ್ಯಮಂತ್ರಿ ಮಾಡಿರುವ ಟ್ವೀಟ್ ಅನ್ನು ಗಮನಿಸಿದ್ದೇನೆ. ಅವರ ಹೆಮ್ಮೆಯ ರಾಹುಲ್ ಗಾಂಧಿ ಭಾವನೆಗೆ ಸ್ಪಂದಿಸಿ ಜಾತಿಗಣತಿ ವರದಿ ಸ್ವೀಕರಿಸುವುದಾಗಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಫಲವನ್ನು ಉಣ್ಣಬೇಕಾಗುತ್ತದೆ,” ಎಂದು ಎಚ್ಚರಿಕೆ ನೀಡಿದರು. https://ainlivenews.com/housewifes-body-found-hanging-in-bangalore/ ”ಒಂದೆಡೆ ಮುಖ್ಯಮಂತ್ರಿಗಳು ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವುದಾಗಿ ಹೇಳುತ್ತಾರೆ. ಮತ್ತೊಂದೆಡೆ ವರದಿಯ ಮೂಲ ಪ್ರತಿಯೇ ಕಾಣೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸರಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನುವ ಮಾಹಿತಿ ಇದೆ. ಮೂಲ ಪ್ರತಿ ಕಳ್ಳತನ ಆದ ಮೇಲೆ ಹೇಗೆ ಜಾರಿ ಮಾಡುತ್ತಾರೆ,” ಎಂದು ಮಾರ್ಮಿಕವಾಗಿ ನುಡಿದರು. ”ಪದೇ ಪದೇ ಕಾಂತರಾಜು ವರದಿಯನ್ನು ಎಚ್.ಡಿ. ಕುಮಾರಸ್ವಾಮಿ ತಿರಸ್ಕರಿಸಿದರೆಂದು…
ಬೆಂಗಳೂರು:- ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಮಹಿಳಾ ಪ್ರಯಾಣಿಕರ ಸಂಖ್ಯೆ ಶತ ಕೋಟಿ ದಾಟಿದೆ. ಯೋಜನೆಯಲ್ಲಿ ಅನುಕೂಲ ಪಡೆದಿರುವ ಮಹಿಳಾ ಪ್ರಯಾಣಿಕರ ಸಂಖ್ಯೆ ಬರೋಬ್ಬರಿ 100 ಕೋಟಿ ದಾಟಿದೆ. ಶಕ್ತಿ ಯೋಜನೆ ಜಾರಿಯಾಗಿ ಐದೇ ತಿಂಗಳಿಗೆ 2397 ಕೋಟಿ ರೂ. ವ್ಯಯವಾಗಿದ್ದು, ಕೆಲವೇ ದಿನಗಳಲ್ಲಿ 2500 ಕೋಟಿ ರೂ. ತಲುಪಲಿದೆ. ಪ್ರತಿನಿತ್ಯ ಲಕ್ಷ ಲಕ್ಷ ಮಹಿಳಾ ಮಣಿಗಳ ಪ್ರಯಾಣದಿಂದ 2397 ಕೋಟಿ ವ್ಯಯವಾಗಿದೆ. ಕಳೆದ 165 ದಿನಗಳಲ್ಲಿ 100,47,56,184 ಮಹಿಳಾ ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಮಹಿಳಾ ಪ್ರಯಾಣಿಕರ ವಿವರ ಕೆಎಸ್‌ಆರ್‌ಟಿಸಿ – 30,12,17,350 ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 900,29,21,508 ಬಿಎಂಟಿಸಿ – 32,69,60,082 ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 420,82,19,200 ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ – 23,37,23,007 ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 600,69,91,513 ಕಲ್ಯಾಣ ಕರ್ನಾಟಕ – 14,28,55,745 ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 475,98,79,341 ಶಕ್ತಿ ಯೋಜನೆ ಜಾರಿಯಾದ ಬಳಿಕ ಅಂದರೆ ಕಳೆದ…
ಕೋಲಾರ : ತನ್ನ ಹೆಂಡತಿ ನೋಡೋಕೆ ಸುಂದರವಾಗಿದ್ದಾಳೆ ಅಂತ ನಿನ್ನಷ್ಟೇ ಸುಂದರವಾದ ಆಭರಣ ಹಾಗೂ ಹಣವನ್ನು ನಿನ್ನ ತವರು ಮನೆಯಿಂದ ತರಬೇಕು ಎಂದು ವರದಕ್ಷಿಣೆ ಕಿರುಕುಳ ಕೊಟ್ಟ ಗಂಡ, ತನ್ನ ಮುದ್ದಾದ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಕೋಲಾರದಲ್ಲಿ ನಡೆದಿದೆ. ಪತ್ನಿಯ ಕತ್ತು ಹಿಸುಕಿ ಪತ್ನಿಯೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮೃತ ಮಹಿಳೆಯ ಕುಟುಂಬಸ್ಥರಿಂದ ಆಕೆಯ ಗಂಡನ ಮೇಲೆ ಆರೋಪ ಮಾಡಲಾಗಿದೆ. ಕೋಲಾರದ ಮಿಲ್ಲತ್ ನಗರದಲ್ಲಿ ಘಟನೆ ನಡೆದಿದೆ. ಮಿಲ್ಲತ್ ನಗರದ ಮಾಹೇನೂರ್ ( 22) ಮೃತ ಮಹಿಳೆಯಾಗಿದ್ದಾಳೆ. ಗಂಡ ಸಯ್ಯದ್ ಶುಹೇಬ್ ಕೊಲೆ ಮಾಡಿರುವುದಾಗಿ ಆರೋಪ ಮಾಡಲಾಗಿದೆ. ಮದುವೆ ಮಾಡಿಕೊಟ್ಟ ನಂತರ ವರದಕ್ಷಿಣೆ ಕಿರುಕುಳ ಕೊಟ್ಟು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಮನೆಯವರು ದೂರು ನೀಡಿದ್ದಾರೆ. https://ainlivenews.com/housewifes-body-found-hanging-in-bangalore/ ಕಳೆದ ಎರಡು ವರ್ಷಗಳ ಹಿಂದೆ ಮದುವೆ ಮಾಹೇನೂರ್ ಹಾಗೂ ಸಯ್ಯದ್ ಶುಹೇಬ್‌ಗೂ ಮದುವೆಯಾಗಿತ್ತು. ಆರಂಭದಲ್ಲಿ ಹೆಂಡತಿ ಯೊಂದಿಗೆ ಚೆನ್ನಾಗಿಯೇ ಇದ್ದ ಪತಿ ಕೆಲವೇ ದಿನಗಳಲ್ಲಿ ತನ್ನ…
ಬೆಂಗಳೂರು:- ರಾಜಧಾನಿ ಬೆಂಗಳೂರಿಗೆ ಕಂಬಳ ವೀಕ್ಷಣೆಗೆ ಲಕ್ಷಾಂತರ ಜನರು ಆಗಮಿಸುವ ನಿಟ್ಟಿನಲ್ಲಿ ಸಂಚಾರಿ ಪೊಲೀಸರು ಸಂಚಾರ ಮಾರ್ಗ ಬದಲಾವಣೆಯ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಮೊಟ್ಟ ಮೊದಲ ಬಾರಿಗೆ ಬೆಂಗಳೂರಲ್ಲಿ ಆಯೋಜಿಸಲಾದ ಕಂಬಳ (Kambala) ವೀಕ್ಷಣೆಗೆ ಬರುವವರ ಪ್ರವೇಶ ವಾಹನ ನಿಲುಗಡೆಗೆ ಪ್ರತ್ಯೇಕ ಸ್ಥಳ ವ್ಯವಸ್ಥೆ ಮಾಡಲಾಗಿದೆ. ಸಿಬಿಡಿ ಏರಿಯಾ, ಮೇಖ್ರಿ ಸರ್ಕಲ್ ಬಳಿಯಿಂದ ಬರುವ ವಾಹನಗಳಿಗೆ ಗೇಟ್ ನಂ.1 ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಹೆಬ್ಬಾಳ, ಮೇಖ್ರಿ ಸರ್ಕಲ್ ಅಂಡರ್ ಪಾಸ್, ಯಶವಂತಪುರ ಕಡೆಯಿಂದ ಬರುವ ವಾಹನಗಳಿಗೆ ಗೇಟ್ ನಂ.1 ರ ಮೂಲಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಕ್ಯಾಬ್ನಲ್ಲಿ ಬರುವವರು ಗೇಟ್ ನಂಬರ್ 2ರ ಮೂಲಕ ಪ್ರವೇಶಿಸಬೇಕು. ಗೇಟ್ ನಂಬರ್ 3ರ ಮೂಲಕ ಕ್ಯಾಬ್ಗಳು ನಿರ್ಗಮಿಸಬೇಕಾಗಿದೆ. ಅರಮನೆ ರಸ್ತೆ, ಬಿಡಿಎ ಜಂಕ್ಷನ್ನಿಂದ ಚಕ್ರವರ್ತಿ ಲೇಔಟ್ ಸೇರಿದಂತೆ ವಸಂತನಗರ ಅಂಡರ್ ಪಾಸ್ನಿಂದ ಹಳೇ ಉದಯ ಟಿವಿ ಜಂಕ್ಷನ್ವರೆಗೆ ಎಂ.ವಿ ಜಯರಾಂ ರಸ್ತೆ ಬಳಸುವಂತೆ ಸೂಚಿಸಿದ್ದಾರೆ. ಮೇಖ್ರಿ ವೃತ್ತದಿಂದ LRDE ಜಂಕ್ಷನ್ವರೆಗೆ ಬಳ್ಳಾರಿ ರಸ್ತೆ…
ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಯುವ ಸಿನಿಮೋತ್ಸಾಹಿಗಳು ವಿಭಿನ್ನ ಬಗೆಯ ಕಥಾಹಂದರದ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಸಿನಿಮಾವೇ ಒನ್ ಅಂಡ್ ಆಫ್. ರಂಗ್ಬಿರಂಗಿ, ಡೆವಿಡ್, ದಿ ವೆಕೆಂಟ್ ಹೌಸ್ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಯುವ ಪ್ರತಿಭೆ ಶ್ರೇಯಸ್ ಚಿಂಗಾ ಒನ್ ಅಂಡ್ ಆಫ್ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ಶ್ರೇಯಸ್ ಅಭಿನಯಿಸ್ತಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋಸ್ ನಲ್ಲಿ ಸುಲಕ್ಷ್ಮೀ ಫಿಲಂಸ್ ನಿರ್ಮಾಣ ಸಂಸ್ಥೆ ಲೋಗೋ ಹಾಗೂ ಒನ್ ಅಂಡ್ ಸಿನಿಮಾದ ಫಸ್ಟ್ ಲುಕ್ ಅನಾವರಣ ಮಾಡಲಾಯಿತು. ಈ ವೇಳೆ ಇಡೀ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನಟ ಕಂ ನಿರ್ದೇಶಕ ಶ್ರೇಯಸ್ ಚಿಂಗಾ ಮಾತನಾಡಿ, ಕಂಪ್ಲೀಟ್ ಕಾಮಿಡಿ ಸಿನಿಮಾ. ಇವತ್ತಿನಿಂದ ಶೂಟಿಂಗ್ ಶುರುವಾಗಿದೆ. ಐಟಿ ಕಂಪನಿ ಅಂದ್ಮೇಲೆ ಸಾಕಷ್ಟು ಜನ ಹುಡುಗಿಯರು ಇರುತ್ತಾರೆ. ಮಾನ್ವಿತಾ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಬೆಂಗಳೂರು, ಗೋವಾ ಭಾಗದಲ್ಲಿ ಶೂಟಿಂಗ್…
ಕಲಬುರ್ಗಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೂಪರ್ ಮಾರ್ಕೆಟ್ ಶಾಖೆ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು MLC ಬಿಜಿ ಪಾಟೀಲ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಂದರೇಶ್ ಬಾಬು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.. ಉದ್ಘಾಟನೆ ನಂತ್ರ ಪುಟಾಣಿ ಮಕ್ಕಳ ಸಮೂಹ ನೃತ್ಯ ಎಲ್ಲರ ಮನ ಸೆಳೆಯಿತು.ಅದ್ರಲ್ಲೂ ಅಣ್ಣಾವ್ರು ನಟಿಸಿದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಮಕ್ಕಳು ಕುಣಿದು ಕುಪ್ಪಳಿಸಿದ್ದು ವಿಶೇಷವಾಗಿತ್ತು. ಇದೇವೇಳೆ ಕನ್ನಡ ಗೀತೆಗಳನ್ನ ಹಾಡುವ ಮೂಲಕ ಬ್ಯಾಂಕಿನ ಸಿಬ್ಬಂದಿಗಳು ರಾಜ್ಯೋತ್ಸವ ಕ್ಕೆ ಮೆರಗು ತಂದ್ರು.. ಬ್ಯಾಂಕಿನ DGM ಶ್ರೀನಿವಾಸರಾವ್ AGM ಸುಮಾ ಹಾಗು ನೌಕರರ ಸಂಘದ ನವೀನ್ ಕಾಗಲಕರ್ ಸೇರಿ ಇಡೀ ಸಿಬ್ಬಂದಿ ಕನ್ನಡದ ಹಬ್ಬದಲ್ಲಿ ಉಪಸ್ತಿತರಿದ್ದರು.
ಲಕ್ನೋ: ಇಲ್ಲಿನ ರಸ್ತೆಯೊಂದರಲ್ಲಿ ಸ್ಕೇಟಿಂಗ್ ಅಭ್ಯಾಸ ಮಾಡುತ್ತಿದ್ದಾಗ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ 10 ವರ್ಷದ ಮಗ ಸಾವಿಗೀಡಾಗಿರುವ ಘಟನೆ ನಡೆದಿದೆ. ಮಗುವಿಗೆ ಡಿಕ್ಕಿ ಹೊಡೆದ ನಂತರ ವಾಹನ ವೇಗವಾಗಿ ಹೋಗಿದ್ದು, ಪ್ರಕರಣವನ್ನು ಭೇದಿಸಲು ಐದು ತಂಡಗಳನ್ನು ರಚಿಸಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ವೇತಾ ಶ್ರೀವಾಸ್ತವ್ ಅವರ ಪುತ್ರ ನಮಿಶ್ ಮಂಗಳವಾರ ಮುಂಜಾನೆ 5:30 ರ ಸುಮಾರಿಗೆ ನಗರದ ಉನ್ನತ ಮಟ್ಟದ ಗೋಮತಿ ನಗರ ವಿಸ್ತರಣೆ ಪ್ರದೇಶದ ಉದ್ಯಾನದ ಬಳಿ ಸ್ಕೇಟಿಂಗ್ ಮಾಡುತ್ತಿದ್ದಾಗ ವೇಗವಾಗಿ ಬಂದ ಬಿಳಿ ಬಣ್ಣದ ಎಸ್‌ಯುವಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕನ ವೇಗವಾಗಿ ವಾಹನ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಮಿಶ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. https://ainlivenews.com/housewifes-body-found-hanging-in-bangalore/ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಎಸ್‌ಯುವಿಯನ್ನು ಪತ್ತೆಹಚ್ಚಲು ಮತ್ತು ಚಾಲಕನನ್ನು ಗುರುತಿಸಲು ಐದು ತಂಡಗಳನ್ನು ರಚಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಆಶಿಶ್ ಶ್ರೀವಾಸ್ತವ್ ಹೇಳಿದ್ದಾರೆ.…
ಪಾಕಿಸ್ತಾನ ಕ್ರಿಕೆಟ್ ತಂಡ ಇದೀಗ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲು ಸಜ್ಜಾಗುತ್ತಿದೆ. ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿ ಬಳಿಕ ಪಾಕಿಸ್ತಾನ ತಂಡ ಮೊದಲ ಸರಣಿ ಆಡಲು ಆಸ್ಟ್ರೇಲಿಯಾಕ್ಕೆ ತೆರಳುತ್ತಿದೆ. ಬಾಬರ್ ಆಝಮ್ ಕ್ಯಾಪ್ಟನ್ಸಿ ಬಿಟ್ಟಿರುವ ಕಾರಣ ಅನುಭವಿ ಆರಂಭಿಕ ಬ್ಯಾಟರ್ ಶಾನ್ ಮಸೂದ್ ಟೆಸ್ಟ್ ಕ್ರಿಕೆಟ್ ತಂಡದ ನೂತನ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನವೆಂಬರ್ 21ರಂದು 18 ಸದಸ್ಯರ ಟೆಸ್ಟ್ ತಂಡವನ್ನು ಪ್ರಕಟ ಮಾಡಿದೆ. ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದ್ದು, ಡಿಸೆಂಬರ್ 12ರಿಂದ 2024ರ ಜನವರಿ 7ರವರೆಗೆ ಪಂದ್ಯಗಳು ನಡೆಯಲಿವೆ. ಅನುಭವಿ ಓನರ್ ಶಾನ್ ಮಸೂದ್ ತಂಡವನ್ನು ಮುನ್ನಡೆಸಲಿದ್ದಾರೆ. ಬಾಬರ್ ಆಝಮ್ ಕ್ಯಾಪ್ಟನ್ಸಿ ಬಿಟ್ಟ ಬಳಿಕ ನಡೆಯುತ್ತಿರುವ ಮೊದಲ ಸರಣಿ ಇದಾಗಿದ್ದು, ಪಾಕಿಸ್ತಾನ ತಂಡದ ಪ್ರದರ್ಶನದ ಮೇಲೆ ಪಿಸಿಬಿ ಹದ್ದಿನ ಕಣ್ಣಿಟ್ಟಿದೆ. ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿಯ 3ನೇ ಆವೃತ್ತಿಯ ಭಾಗವಾಗಿ ಈ ಟೆಸ್ಟ್ ಸರಣಿ ನಡೆಯಲಿದೆ.…
ದಾವಣಗೆರೆ:- ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್ ಮಾಡಲಾಗಿದೆ. ಹಾವೇರಿ ನಗರದ ಚಾಲಕ ಗಗನ್ ಆನವಟ್ಟಿ (26) ಹಾಗೂ ರಾಣೇಬೆನ್ನೂರು ತಾಲೂಕಿನ ಸುಜಲ್ ಎಸ್. ಜೈನ್ (21) ಬಂಧಿತ ಆರೋಪಿಗಳು. ನಗರದ ಹದಡಿ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜು ಕ್ರೀಡಾಂಗಣದ ಒಳಭಾಗದಲ್ಲಿ ಆಟೋದಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರ ಮೇಲೆ ದಾಳಿ ಮಾಡಿ ಬಂಧಿಸಲಾಗಿದೆ. ಆರೋಪಿತರ ಬಳಿ ಇದ್ದ ಸುಮಾರು 15 ಸಾವಿರ ರೂಪಾಯಿ ಮೌಲ್ಯದ 490 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 1.50 ಲಕ್ಷ ರೂ. ಬೆಲೆಯ ಆಟೋರಿಕ್ಷಾ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ. ಕೆಟಿಜೆ ನಗರ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ದಾವಣಗೆರೆ ನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಮಲ್ಲೇಶ ಡಿ, ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶಶಿಧರ ಯು. ಜೆ. ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಸಾಗರ್ ಅತ್ತರವಾಲ ರವರ ನೇತೃತ್ವದಲ್ಲಿ…