ಬಾಗಲಕೋಟೆ;- ವಿರೋಧ ಮಾಡುವವರಿಗೂ ಜಾತಿ ಜನಗಣತಿ ವರದಿಯಲ್ಲೇನಿದೆ ಎಂದು ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜಾತಿ ಜನಗಣತಿ ವರದಿ ಕುರಿತು ರಾಜ್ಯದಲ್ಲಿ ಶುರುವಾಗಿರುವ ಟೀಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಕಿಡಿಕಾರಿದ್ದಾರೆ. ಜಾತಿ ಗಣತಿ ವರದಿ ಸಲ್ಲಿಕೆಯಾಗುವ ಮೊದಲೇ ಅದರ ಕುರಿತು ರಾಜ್ಯದಲ್ಲಿ ಚರ್ಚೆ ಶುರುವಾಗಿದೆ. ವರದಿಯಲ್ಲೇನಿದೆ ಎಂಬುದು ಅದನ್ನು ಬೇಡ ಎನ್ನುತ್ತಿರುವವರಿಗೂ ಗೊತ್ತಿಲ್ಲ. ಸುಮ್ಮನೆ ಊಹೆಯ ಮೇಲೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವಿಚಾರವಾಗಿ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಹಾಗಾಗಿ ಅದರ ಕುರಿತು ವರದಿ ಸಲ್ಲಿಕೆಯಾದ ನಂತರ ಮಾತನಾಡೋಣ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಇದೇ ವೇಳೆ ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅವರಿಗೆ ವರದಿಯಲ್ಲಿ ಏನಿದೆ ಎಂಬುದು ಗೊತ್ತಿದೆಯೇ? ಯಾರೇ ಆಗಲಿ ವಿಷಯ ಗೊತ್ತಿಲ್ಲದೆ ಮಾತನಾಡಬಾರದು ಎಂದರು.
Author: AIN Author
ವಾಷಿಂಗ್ಟನ್: ಫೇಸ್‌ಬುಕ್‌ನ ಒಡೆತನ ಹೊಂದಿರುವ ಮೆಟಾ ಕಂಪನಿ ಹೊಸ ಉತ್ಪನ್ನವನ್ನು ಬಿಡುಗಡೆ ಮಾಡಿದೆ. ‘ರೇಬಾನ್ ಮೆಟಾ ಸ್ಮಾರ್ಟ್ ಗ್ಲಾಸ್’ ಹೆಸರಿನ ಈ ಕನ್ನಡಕವನ್ನು ಧರಿಸಿ ನೋಡಿದ್ದನ್ನೆಲ್ಲ ಫೇಸ್‌ಬುಕ್‌ನಲ್ಲಿ ಲೈವ್ ಮಾಡಬಹುದು. ಅಲ್ಲದೇ ಬೇಕೆನಿಸಿದ ಫೋಟೋವನ್ನೂ ಕ್ಲಿಕ್ಕಿಸಬಹುದು. ಇತ್ತೀಚಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು (ಎಐ) ಸರ್ವಾಂತರ್ಯಾಮಿ ಎನಿಸಿದೆ. ಗೂಗಲ್ ಮತ್ತು ಮೈಕ್ರೋಸಾಫ್ಟ್ ಕಂಪನಿಗಳು ಈ ತಂತ್ರಜ್ಞಾನದಲ್ಲಿ ಭಾರೀ ಹೂಡಿಕೆ ಮಾಡುತ್ತಿವೆ. ಈ ಓಟದಲ್ಲಿ ಫೇಸ್‌ಬುಕ್ ಒಡೆತನ ಹೊಂದಿರುವ ಮೆಟಾ ಸ್ವಲ್ಪ ಹಿಂದುಳಿದಿದೆ. ಆದರೆ ಮೆಟಾ ತನ್ನದೇ ಆದ ಎಐ ಅಸಿಸ್ಟೆಂಟ್ ಅನ್ನು ಅಭಿವೃದ್ಧಿಪಡಿಸುತ್ತಿದ್ದು, ಇದಕ್ಕೆ ಮೆಟಾ ಎಐ ಎಂದೇ ಹೆಸರಿಡಲಾಗಿದೆ. ಮೆಟಾ ಎಐ ಬಳಸಿ ನೂತನ ಸ್ಮಾರ್ಟ್ ಗ್ಲಾಸ್ ಅಭಿವೃದ್ಧಿಪಡಿಸಲಾಗಿದೆ. ಮೆಟಾದ ಮೊದಲ ಸ್ಮಾರ್ಟ್ ಗ್ಲಾಸ್ ಇದಾಗಿದ್ದು, ತುಂಬಾ ಹಗುರ ಮತ್ತು ಆರಾಮದಾಯಕವಾಗಿದೆ. ಇವುಗಳನ್ನು ಮುಂದಿನ ಪೀಳಿಗೆಯ ಸ್ಮಾರ್ಟ್ ಗ್ಲಾಸ್ ಎಂದೂ ವಿವರಿಸಲಾಗಿದೆ. ಸ್ಮಾರ್ಟ್ ಗ್ಲಾಸ್‌ಗಳನ್ನು ಧರಿಸಿ ನೀವು ನೋಡುವ ಎಲ್ಲವನ್ನೂ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಬಹುದು. ಇದರಲ್ಲಿ 12…
ಬೂದು ಕುಂಬಳಕಾಯಿ ಎಲ್ಲರಿಗೂ ಗೊತ್ತೇ ಇದೆ. ಇದರಿಂದ ಪೇಠಾ ಎನ್ನುವ ಪ್ರಸಿದ್ಧ ಸಿಹಿ ತಿನಿಸನ್ನೂ ತಯಾರಿಸುತ್ತಾರೆ. ಬೂದು ಕುಂಬಳಕಾಯಿಯನ್ನು ಸಾಂಬಾರಿನಲ್ಲಿಯೂ ಬಳಸುತ್ತಾರೆ. ಇದು ಔಷಧೀಯ ಗುಣಗಳನ್ನು ಹೊಂದಿರುವ ಅತ್ಯಂತ ಪೌಷ್ಟಿಕ ಆಹಾರವಾಗಿದೆ. ಆರೋಗ್ಯಕರ ಆಹಾರದಿಂದ ಕಾಯಿಲೆಗಳು ದೂರ ನಾವು ಮಾಡುವ ಆಹಾರದ ಆಯ್ಕೆಗಳು ನಾವು ಯಾವ ರೀತಿಯ ದೇಹವನ್ನು ಹೊಂದಿದ್ದೇವೆ ಎಂಬುದನ್ನು ನಿರ್ಧರಿಸುತ್ತದೆ. ದೇಹವು ಕಾರ್ಯನಿರ್ವಹಿಸುವ ರೀತಿಯಲ್ಲಿ ಪರಿಣಾಮ ಬೀರುತ್ತದೆ. ದೇಹವು ಕ್ಷಾರೀಯ ಸ್ಥಿತಿಯಲ್ಲಿದ್ದಾಗ, ಇದರರ್ಥ ದೇಹದ pH ಮಟ್ಟವು ಹೆಚ್ಚಾಗುತ್ತದೆ. ಇದು ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸುತ್ತದೆ. ಒಟ್ಟಾರೆಯಾಗಿ, ಕ್ಷಾರೀಯ ದೇಹವನ್ನು ಹೊಂದಿರುವುದು ಎಂದರೆ ನೀವು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಗಳು ಕಡಿಮೆಯಾಗುತ್ತದೆ. ಪೋಷಕಾಂಶಗಳಿಂದ ಸಮೃದ್ಧವಾಗಿದೆ ಬೂದು ಕುಂಬಳಕಾಯಿ ರಸವು ಪೋಷಕಾಂಶಗಳಿಂದ ತುಂಬಿರುತ್ತದೆ. ಇದು ಕಬ್ಬಿಣ, ಕ್ಯಾಲ್ಸಿಯಂ, ಫಾಸ್ಫರಸ್, ಸತು, ಮೆಗ್ನೀಸಿಯಮ್, ತಾಮ್ರ ಮತ್ತು ಮ್ಯಾಂಗನೀಸ್‌ನಂತಹ ಖನಿಜಗಳನ್ನು ಹೊಂದಿದೆ ಮತ್ತು ನಿಯಾಸಿನ್, ಥಯಾಮಿನ್, ವಿಟಮಿನ್ ಸಿ ಮತ್ತು ರೈಬೋಫ್ಲಾವಿನ್‌ನಂತಹ ವಿಟಮಿನ್‌ಗಳ ಮೂಲವಾಗಿದೆ. ಬರೀ ಹೊಟ್ಟೆಯಲ್ಲಿ…
ತುಳಸಿ ವಿವಾಹ ಸೂರ್ಯೋದಯ: 06.22 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ದ್ವಾದಶಿ 07:06 PM ತನಕ ನಂತರ ತ್ರಯೋದಶಿ ನಕ್ಷತ್ರ: ಇವತ್ತು ರೇವತಿ 04:01 PM ತನಕ ನಂತರ ಅಶ್ವಿನಿ ಯೋಗ: ಇವತ್ತು ಸಿದ್ಧಿ 09:05 AM ತನಕ ನಂತರ ವ್ಯತೀಪಾತ ಕರಣ: ಇವತ್ತು ಬವ 08:03 AM ತನಕ ನಂತರ ಬಾಲವ 07:06 PM ತನಕ ನಂತರ ಕೌಲವ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ: 03:00 ನಿಂದ 04:30 ವರೆಗೂ ಗುಳಿಕ ಕಾಲ: 07:30 ನಿಂದ 09:00 ವರೆಗೂ ಅಮೃತಕಾಲ: 01.44 PM to 03.15 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:40 ನಿಂದ ಮ.12:24 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc…
ಬೆಂಗಳೂರು:- ಸಚಿವ ಜಮೀರ್ ಅಹ್ಮದ್ ಅವರು ಸ್ಪೀಕರ್ ಪೀಠದ ಕುರಿತು ಆಡಿದ ಮಾತನ್ನು ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲು ತೀರ್ಮಾನಿಸಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಕಪ್ಪುಚುಕ್ಕಿ ಇಡುವ ರೀತಿಯಲ್ಲಿ ಜಮೀರ್ ಅಹ್ಮದ್ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸಿ ಮತ್ತು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಒತ್ತಾಯಿಸಿ ಎಸ್‌ಸಿ ಮೋರ್ಚಾ ವತಿಯಿಂದ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಡಿಸೆಂಬರ್ 2, 3 ಅಥವಾ ಸದನ ನಡೆಯುವಾಗಲೇ 4ರಂದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಸಚಿವ ಜಮೀರ್ ಅಹ್ಮದ್ ಅವರು ಮಂತ್ರಿಯಾಗಿ ಮುಂದುವರಿಯಲು ಯೋಗ್ಯರಲ್ಲ. ಆ ಕಾರಣದಿಂದ ಅವರು ಬೆಳಗಾವಿಯಲ್ಲಿ ನಡೆಯುವ ಸದನಕ್ಕೆ ಅವರು ಹಾಜರಾಗಬಾರದು ಎಂದು ಆಗ್ರಹಿಸಿದರು. ಗುರುವಾರ ನಡೆದ ಎಸ್‌ಸಿ ಮೋರ್ಚಾ ರಾಜ್ಯ ವಿಶೇಷ ಸಭೆಯು ಜಮೀರ್ ಹೇಳಿಕೆಯನ್ನು ಖಂಡಿಸಿದೆ ಎಂದು ಹೇಳಿದ ಅವರು ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಸ್ಥಾನ. ಆ…
ಬೆಂಗಳೂರು:- ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಬಿಜೆಪಿ ಹೊರಡಿಸಿದ್ದ ಆದೇಶಕ್ಕೆ ಕ್ಯಾಬಿನೆಟ್ ಬ್ರೇಕ್ ಹಾಕಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಸಚಿವ ಸಂಪುಟ ಸಭೆಗೆ ಡಿಸಿಎಂ ಡಿಕೆಶಿ ಗೈರಾಗಿದ್ದರು. ಹಿತಾಸಕ್ತಿ ಸಂಘರ್ಷ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಿಂದ ದೂರ ಉಳಿದಿದ್ದರು ಎನ್ನಲಾಗಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಗೃಹ ಇಲಾಖೆಗೆ ಈ ಸಂಬಂಧ ಕಾನೂನು ಅಭಿಪ್ರಾಯ ನೀಡಿದ್ದರು. ಈ ನಿಟ್ಟಿನಲ್ಲಿ ಒಳಾಡಳಿತ ಇಲಾಖೆ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ, ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸೆ.25, 2019ರಂದು ದೆಹಲಿ ವಿಶೇಷ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್ ಕಾಯ್ದೆ 1946 ಅಡಿ ಸೆಕ್ಷನ್ 6 ಅನ್ವಯ ತನಿಖೆ ಕೈಗೊಳ್ಳಲು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದ್ದರು ಎನ್ನಲಾಗಿದೆ.
ಬೆಂಗಳೂರು:- ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಆಯಸಿಡ್ ಎರಚಿರುವ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯು ಇದೇ ವರ್ಷ ಮೇ 19 ರಂದು 23 ವರ್ಷದ ಸಂತ್ರಸ್ತೆಯನ್ನು ವಿವಾಹವಾಗಿದ್ದ. ಆರೋಪಿಯು ಮದ್ಯವ್ಯಸನಿಯಾಗಿದ್ದು, ಅಪರೂಪಕ್ಕೆ ಕೆಲಸಕ್ಕೆ ಹೋಗುತ್ತಿದ್ದ ಎನ್ನಲಾಗಿದೆ. ಬದಲಾಗಿ ಪತ್ನಿಯಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದು, ಪದೇ ಪದೇ ಜಗಳವಾಗುತ್ತಿತ್ತು. ನಿತ್ಯವೂ ಕುಡಿದ ಅಮಲಿನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಆರೋಪಿ ತನ್ನ ಹೆಂಡತಿಗೆ ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಆಗಾಗ ತಲೆಗೂದಲು ಹಿಡಿದು ಎಳೆದಾಡುವ ಮೂಲಕ ಕೊಲೆ ಬೆದರಿಕೆ ಹಾಕುತ್ತಿದ್ದ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಮನೆ ಬಾಡಿಗೆ ಪಾವತಿಸದ ಕಾರಣ, ತಮ್ಮನ್ನು ಅವರ ನಿವಾಸದಿಂದ ಹೊರಹಾಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಇತ್ತೀಚೆಗಷ್ಟೇ ಆರೋಪಿಯು ಆಕೆಯ ಬೆನ್ನು ಮತ್ತು ಖಾಸಗಿ ಭಾಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಆಯಸಿಡ್ ಸುರಿದಿದ್ದಾನೆ. ಇದರಿಂದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಬೆಂಗಳೂರು:- ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದ್ದು, ಪಿಡಿಒ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. 50 ಸಾವಿರ ತೆರಿಗೆದಾರರಿಂದ ಅರ್ಜಿ! ಗೃಹಲಕ್ಷ್ಮಿ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ಡಿಲೀಟ್ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ಲ ಎಂಬ ಆತಂಕ ಬೇಡ, ಎಲ್ಲ ಮೊತ್ತ ಒಟ್ಟಿಗೇ ಸಿಗಲಿದೆ ಗೃಹಲಕ್ಷ್ಮಿ ಯೋಜನೆಯಲ್ಲಿ ನೋಂದಾಯಿಸಿಕೊಂಡ ಗೃಹಿಣಿಯರಲ್ಲಿ ಶೇಕಡಾ 95ರಷ್ಟು…
ಬೆಂಗಳೂರು :- ಲೋಕಸಭೆ ಚುನಾವಣೆಗೆ ಅಂತಿಮ ಹಂತದ ಸಿದ್ಧತೆಗೆ ಬಿಬಿಎಂಪಿ ಮುಂದಾಗಿದೆ. ಆ ಮೂಲಕ ನಗರದ ಮತಗಟ್ಟೆಗಳ ಸಂಖ್ಯೆ ಹೆಚ್ಚಿಸಲು ಚುನಾವಣಾ ವಿಭಾಗ ಮುಂದಾಗಿದೆ. 2024ರ ಲೋಕಸಭೆ ಚುನಾವಣೆಗೆ ನಗರದಲ್ಲಿ 450 ಮತಗಟ್ಟೆಗಳ ಹೆಚ್ಚಳ ಮಾಡಲಾಗುತ್ತಿದೆ. 2019ರ ಲೋಕಸಭಾ ಚುನಾವಣೆಯ ಮತದಾನ ಪ್ರಮಾಣ ಆಧರಿಸಿ ಕಡಿಮೆ ಮತದಾನವಾಗಿರುವ ವಾರ್ಡ್ಗಳಲ್ಲಿ ಮತಗಟ್ಟೆಗಳ ಸಂಖ್ಯೆ ಹೆಚ್ಚಳ ಮಾಡಲಾಗುತ್ತಿದೆ. ಮತಗಟ್ಟೆಗಳು ಬೆಂಗಳೂರು ಕೇಂದ್ರ: 44,000, ಬೆಂಗಳೂರು ದಕ್ಷಿಣ: 42,350 ಬೆಂಗಳೂರು ಉತ್ತರ: 52,000 ಬೆಂಗಳೂರು ಗ್ರಾಮಾಂತರ ಜಿಲ್ಲೆ: 97,000 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬರೋಬ್ಬರಿ 198 ವಾರ್ಡ್‌ಗಳು ಇವೆ. ಆದರೆ ಕಳೆದ ಬಿಜೆಪಿ ಸರ್ಕಾರ ಇದನ್ನ 243 ವಾರ್ಡ್‌ಗೆ ಹೆಚ್ಚಿಸಿತ್ತು. ಕೋರ್ಟ್‌ನಲ್ಲಿ ತಕರಾರು ಅದು ಇದು ಅಂತಾ ಚುನಾವಣೆ ನಡೆದೇ ಇಲ್ಲ. ಇದರ ನಡುವೆ ಇತ್ತೀಚೆಗೆ 243 ವಾರ್ಡ್‌ಗಳಿಂದ 225 ಕ್ಕೆ ವಾರ್ಡ್‌ಗಳ ಸಂಖ್ಯೆ ಇಳಿಸಿದ್ದ ಹೊಸ ಸರ್ಕಾರ, ಸಾರ್ವಜನಿಕರ ಅಕ್ಷೇಪಣೆ ಹಾಗೂ ಸಲಹೆ ಕೇಳಿತ್ತು. ಈ ಸಂಬಂಧ 3 ಸಾವಿರದಷ್ಟು ಆಕ್ಷೇಪಣೆಗಳು ಬಂದಿದ್ದವು.…
ನವದೆಹಲಿ:- ರಾಹುಲ್ ಗಾಂಧಿಗೆ EC ನೋಟಿಸ್ ವಿಚಾರ ಇದೇನು ದೊಡ್ಡ ವಿಚಾರವೇನಲ್ಲ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇತ್ತೀಚಿಗೆ ರಾಜಸ್ಥಾನದ ಜಾಲೋರ್ನಲ್ಲಿ ನಡೆದ ಚುಣಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಪನೌತಿ (ಅಪಶಕುನ)’ ಎಂದು ನಿಂದಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವುದು ದೊಡ್ಡ ವಿಚಾರವೇನಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಯಾರ ಮೇಲೂ ಅಂತಹ ತೀವ್ರ ಟೀಕೆಗಳು ಬಂದಿಲ್ಲ. ಆದರೆ ಚುನಾವಣೆ ನಡೆಯುತ್ತಿರುವುದರಿಂದ ಅಬ್ಬರದ ಪ್ರಚಾರ ನಡೆಯುತ್ತಿದೆ ಎಂದಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಚುನಾವಣೆಯಲ್ಲಿ ಹೆದರಿಸಲು ಯತ್ನಿಸುತ್ತಿರುವ ರೀತಿ ಸರಿಯಿಲ್ಲ. ಪ್ರಜಾಪ್ರಭುತ್ವ ಉಳಿಸಬೇಕಾದರೆ ಸಮವಾದ ವೇದಿಕೆ ಇರಬೇಕು. ಇದರ ಬದಲಾಗಿ ಸರ್ಕಾರಿ ಸಂಸ್ಥೆಗಳಾದ ಇಡಿ, ಸಿಬಿಐ ಇತ್ಯಾದಿಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪ್ರಧಾನಿನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನೋಟಿಸ್‌ಗೆ ಕಾಂಗ್ರೆಸ್ ಉತ್ತರ ನೀಡಲಿದೆ. ರಾಹುಲ್ ಗಾಂಧಿಗೆ ನೋಟಿಸ್ ಕಳುಹಿಸಲಿ ನಾವು…