ಬೆಂಗಳೂರು:- ರಾಜ್ಯದ ೯೮ ನಗರಗಳಲ್ಲಿ ಆನ್‌ಲೈನ್ ಸೇವೆಗಳು ಮೂರು ದಿನಗಳವರೆಗೆ ಬಂದ್ ಆಗಲಿವೆ. ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್‌೨೪ರ ರಾತ್ರಿ ೧೨ರಿಂದ ನವೆಂಬರ್ ೨೬ರ ಬೆಳಿಗ್ಗೆ ೧೧.೫೯ ವರೆಗೆ ಎಲ್ಲಾ ರೀತಿಯ ಆನ್‌ಲೈನ್ ಸೇವೆಗಳು ಬಂದ್ ಆಗಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ತಾಂತ್ರಿಕ ಕಾಮಗಾರಿಯೇನು? : ಎಲ್ಲಾ ಐದು ಎಸ್ಕಾಂ ಪೋರ್ಟಲ್‌ಗಳನ್ನು ಒಂದೇ ಸೂರಿನಡಿ ಆನ್‌ಲೈನ್ ಪಾವತಿ ಸೇವೆ ಕಲ್ಪಿಸಲು ಆರ್-ಎಪಿಡಿಆರ್‌ಪಿ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಎಲ್ಲಾ ಪೋರ್ಟಲ್‌ಗಳ ಡಾಟಾವನ್ನು ನೂತನ ಪೋರ್ಟಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಹೀಗಾಗಿ ಪೋರ್ಟಲ್ ಸೇವೆ ಬಂದ್ ಆಗಲಿದ್ದು, ವಿದ್ಯುತ್ ಬಿಲ್ ಪಾವತಿ, ಆನ್‌ಲೈನ್ ಅರ್ಜಿ ಸಲ್ಲಿಕೆ ಸೇರಿದಂತೆ ಯಾವುದೇ ಸೌಲಭ್ಯಗಳು ದೊರೆಯುವುದಿಲ್ಲ. ಈ ಮೂರು ದಿನಗಳು ಎಲ್ಲಾ ಮಾಹಿತಿ ತಂತ್ರಜ್ಞಾನ ಆಧಾರಿತ ಹಾಗೂ ವಿದ್ಯುತ್ ಕಚೇರಿಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ. ಹಾಗೂ ಆನ್‌ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು/ ಲೋಡ್ ಬದಲಾವಣೆ, ನಗದು ಪಾವತಿ, ಬಿಲ್ ಪಾವತಿ ಸೇವೆಗಳು ಇರುವುದಿಲ್ಲ. ಆದರೆ…
Author: AIN Author
ಬೆಂಗಳೂರು:- 11 ಸಾವಿರ ಗ್ರಾಮ ಪಂಚಾಯಿತಿ ನೌಕರರ ಸೇವಾ ಭದ್ರತೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಿಯುಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕಡಿಮೆ ಅವಧಿಯಲ್ಲಿ ಹಂತ ಹಂತವಾಗಿ ಗ್ರಾಮ ಪಂಚಾಯತಿ ನೌಕರರ ಶ್ರೇಯೋಭಿವೃದ್ಧಿಗಾಗಿ ತಮ್ಮ ಸರ್ಕಾರ ಹಲವಾರು ಸೌಲಭ್ಯಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರಲ್ಲದೆ ಸುಮಾರು 11,000 ಮಂದಿ ಗ್ರಾಮ ಪಂಚಾಯಿತಿ ನೌಕರರಿಗೆ ಸೇವಾ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮೂಲವೇತನ, ವಿಶ್ರಾಂತಿ ವೇತನ, ಆರೋಗ್ಯ ಭತ್ಯೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನೌಕರರ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಬೇಡಿಕೆಯನ್ನು ಪರಿಶೀಲಿಸುವ ಭರವಸೆಯನ್ನು ಸಚಿವರು ನೀಡಿದರು.
ಬೆಂಗಳೂರು:- ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ನಿವಾಸಗಳ ಮೇಲೆ ಐಟಿ ದಾಳಿ ಮಾಡಿದ್ದ ಪ್ರಕರಣದಲ್ಲಿ ವಿದೇಶ ಪ್ರಯಾಣಕ್ಕಿರುವ ನಿರ್ಬಂಧಕ್ಕೆ ಈಗ ವಿನಾಯಿತಿ ದೊರೆತಿದೆ. ಐಟಿ ಪ್ರಕರಣದಲ್ಲಿ ಆರೋಪಿಯಾಗಿರುವ ಶಿವಕುಮಾರ್, ವಿಶ್ವಸಂಸ್ಥೆಯ ಪರಿಸರ ಸಮ್ಮೇಳನದಲ್ಲಿ ಭಾಗವಹಿಸಲು ತೆರಳಬೇಕಿದೆ. ಹೀಗಾಗಿ ನವೆಂಬರ್ 29ರಿಂದ ಡಿಸೆಂಬರ್ 3ರ ವರೆಗೆ ತೆರಳಲು ಅನುಮತಿ ನೀಡಬೇಕೆಂದು ಕೋರಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಧೀಶೆ ಜೆ. ಪ್ರೀತ್ ಅನುಮತಿಸಿ ಆದೇಶ ನೀಡಿದ್ದಾರೆ. ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ ಹೈಕೋರ್ಟ್ಗೆ ಇತ್ತೀಚೆಗಷ್ಟೇ ಅರ್ಜಿ ಸಲ್ಲಿಕೆಯಾಗಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ವಿದೇಶ ಪ್ರಯಾಣಕ್ಕೆ ಅನುಮತಿ ದೊರೆತಿದ್ದರಿಂದ ಡಿಕೆ ಶಿವಕುಮಾರ್ ನಿರಾಳರಾಗುವಂತಾಗಿದೆ.
ಬೆಂಗಳೂರು:- ನವೆಂಬರ್ 25 ಮತ್ತು 26ರಂದು ನಡೆಯಲಿರುವ ಚೊಚ್ಚಲ ಕಂಬಳ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ 200ಕ್ಕೂ ಹೆಚ್ಚು ಜೋಡಿ ಕೋಣಗಳು ಭಾಗವಹಿಸಲಿವೆ. 300ಕ್ಕೂ ಹೆಚ್ಚು ವಾಹನಗಳಲ್ಲಿ ಅವುಗಳನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿದ್ದು, ಗುರುವಾರ ರಾತ್ರಿಯೇ ಅರಮನೆ ಮೈದಾನಕ್ಕೆ ತಲುಪುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 6 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಪುತ್ತೂರು ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಗರ ಪೊಲೀಸರು ವಾಹನ ನಿಲುಗಡೆ ಮತ್ತು ಸಂಚಾರ ನಿಯಮಗಳ ವ್ಯವಸ್ಥೆ ಮಾಡಲು ಪ್ರಾರಂಭಿಸಿದ್ದಾರೆ. ಅರಮನೆ ಮೈದಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಅರಮನೆ ಮೈದಾನದ ಸುತ್ತಮುತ್ತಲಿನ ಪ್ರದೇಶಗಳಾದ ಗುಟ್ಟಹಳ್ಳಿ, ಸದಾಶಿವನಗರ, ವೈಯಾಲಿಕಾವಲ್, ನ್ಯೂ ಬಿಇಎಲ್ ರಸ್ತೆ, ಮೇಖ್ರಿ ವೃತ್ತ, ಜಯಮಹಲ್ ಮುಖ್ಯ ರಸ್ತೆ, ಕಂಟೋನ್ಮೆಂಟ್ ಸ್ಟೇಷನ್, ಹೆಬ್ಬಾಳ, ಗಂಗೇನಹಳ್ಳಿ, ಮತ್ತು ಇತರ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.…
ನವ ದೆಹಲಿ ನ 24 ;ಕರ್ನಾಟಕ ರಾಜ್ಯದಲ್ಲಿ ಬರಪರಿಸ್ಥಿತಿ ತಲೆದೋರಿದ್ದು ಶೀಘ್ರ ಪರಿಹಾರ ಧನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಲಾಗಿದೆ. ಬಿಡುಗಡೆ ಮಾಡಿದ ಹಣವನ್ನು ಪಾರದರ್ಶಕವಾಗಿ, ಶೀಘ್ರವಾಗಿ, ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು ಎಂದು ಸಚಿವರಾದ ಕೃಷ್ಣಾ ಬೈರೇಗೌಡ ತಿಳಿಸಿದರು. ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಜತೆಗೂಡಿ ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚೆ ನಡೆಸಿದ ನಂತರ ಅವರು ಸುದ್ದಿಗಾರರಿಗೆ ಇಂದಿನ ಭೇಟಿಯ ಬಗ್ಗೆ ಮಾಹಿತಿ ಒದಗಿಸಿದರು.. 2015 ರ ಕೇಂದ್ರ ಸರ್ಕಾರದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಸಣ್ಣ ಹಾಗೂ ಅತಿ ಸಣ್ಣ ರೈತರು ಶೇ 44 ರಷ್ಟಿದ್ದಾರೆ ಎಂಬ ಮಾಹಿತಿ ಇದೆ. 2015 ರ ಅಂಕಿ ಸಂಖ್ಯೆ ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿದರೆ ರಾಜ್ಯದ ರೈತರಿಗೆ ಅನ್ಯಾಯವಾಗುತ್ತದೆ. ಕಿಸಾನ್ ಸಮ್ಮಾನ್ ಹಾಗೂ ರಾಜ್ಯ ಸರ್ಕಾರದ ಫ್ರೂಟ್ ಐಡಿ ನೊಂದಣಿ ಪ್ರಕಾರ ರಾಜ್ಯದಲ್ಲಿ ಶೇ 70 ಕ್ಕಿಂತಲೂ ಅಧಿಕ ಪ್ರಮಾಣದ ಸಣ್ಣ ಮತ್ತು ಅತಿ…
ಚೆನ್ನೈ :- ಅಕ್ರಮ ಹಣ ವರ್ಗಾವಣೆ ಕೇಸ್ ಗೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್‌ಗೆ ಇಡಿ ಸಮನ್ಸ್ ಜಾರಿ ಮಾಡಿದೆ. ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಅವರ ವಿಚಾರಣೆಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ತನಿಖೆಯು ತಿರುಚಿರಾಪಳ್ಳಿ ಮೂಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್ ಜ್ಯುವೆಲರ್ಸ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದೆ. ನವೆಂಬರ್ 20 ರಂದು ಆ ಸಂಸ್ಥೆಯ ಮೇಲೆ ದಾಳಿ ನಡೆಸಿ, ರೂ. 23. 70 ಲಕ್ಷ ಹಾಗೂ ಚಿನ್ನಾಭರಣವನ್ನು ಇಡಿ ವಶ ಪಡಿಸಿಕೊಂಡಿತ್ತು ಪ್ರಕಾಶ್ ರಾಜ್ ಈ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಮುಂದಿನ ವಾರ ಚೆನ್ನೈನಲ್ಲಿರುವ ಇಡಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಹಿಂದಿ ಮತ್ತು ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರಾಗಿರುವ ಪ್ರಕಾಶ್ ರಾಜ್, ಬಿಜೆಪಿಯ ತೀವ್ರ ಟೀಕಾಕಾರರಾಗಿದ್ದಾರೆ. ತಮಿಳುನಾಡು ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಎಫ್ಐಆರ್ನಿಂದ ಇಡಿ ಪ್ರಕರಣ ದಾಖಲಿಸಿದೆ.…
ಜೈಪುರ:- ಕಾಂಗ್ರೆಸ್‌ನ ಓಲೈಕೆ ರಾಜಕಾರಣಕ್ಕೆ ಸೋಲಾಗಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜಸ್ಥಾನದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಓಲೈಕೆ ರಾಜಕಾರಣದಲ್ಲಿ ತೊಡಗಿದೆ, ಜನರು ಬೇಸತ್ತಿದ್ದಾರೆ. ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮಹಿಳೆಯರು, ದಲಿತರು ಸೇರಿ ಯಾರಾದರೂ ಕಷ್ಟದಲ್ಲಿದ್ದಾರೆ ಎಂದರೆ ಅದಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ನೇತೃತ್ವದ ಸರ್ಕಾರದ ಓಲೈಕೆ ನೀತಿಯೇ ಕಾರಣ. ಮತಬ್ಯಾಂಕ್ ರಾಜಕಾರಣಕ್ಕಾಗಿ ಗಲಭೆಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಅಮಿತ್ ಶಾ ಆರೋಪಿಸಿದರು. ರಾಮಮಂದಿರ ನಿರ್ಮಾಣ, ತ್ರಿವಳಿ ತಲಾಖ್ ರದ್ದತಿ, ಸಂವಿಧಾನದ ವಿಧಿ 370ರ ಅಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ಹಿಂಪಡೆದಿದ್ದನ್ನು ಉಲ್ಲೇಖಿಸಿ ಮಾತನಾಡಿದ ಅವರು, ಕಠಿಣ ನಿರ್ಣಯಗಳನ್ನು ಕಾರ್ಯರೂಪಕ್ಕೆ ತಂದಿರುವ ದಾಖಲೆ ಬಿಜೆಪಿಯದ್ದಾಗಿದೆ ಎಂದರು. ‘ಪಿ.ಎಂ ಎಂದರೆ ಪನೌತಿ ಮೋದಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ…
ಧಾರವಾಡ :- ಕುಳ್ಳಿ ಎಂದು ಮಾನಸಿಕವಾಗಿ ನೊಂದಿದ್ದ ಯುವತಿಯೊಬ್ಬಳ್ಳು ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಜಯನಗರದ ಬಳಿ ನಡೆದಿದೆ. ಧಾರವಾಡ ಜಯ ನಗರದ ನಿವಾಸಿಯಾಗಿದ್ದ ದೀಪಾ ಪಾಟೀಲ್ (27) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ.ಇನ್ನೂ ದೀಪಾ ಹುಟ್ಟು ಕುಳ್ಳಿಯಾಗಿದ್ದು, ಎಲ್ಲರಂತೆ ನಾನು ಇಲ್ಲ ಎಂದು ನೊಂದಿದ್ದಳು ಎಂದು ಹೇಳಲಾಗುತ್ತಿದೆ. ಇದೆ ಕಾರಣಕ್ಕೆ ಸಂಜೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡರಬಹುದು ಎಂದು ಶಂಕಿಸಲಾಗಿದೆ. ಇನ್ನೂ ಘಟನೆಯ ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಲೆ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಯೊಂದಿಗೆ ಸೇರಿ ಯುವತಿಯ ಮೃತದೇಹ ಹೊರ ತೆಗೆದಿದ್ದಾರೆ. ಸದ್ಯ ಈಗ ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರ ತನಿಖೆಯ ನಂತರ ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ.
ಬೆಂಗಳೂರು: ಮುಂದಿನ ಎರಡು ವಾರಗಳ ಕಾಲ ಕರ್ನಾಟಕದ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿಮವೊಗ್ಗ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಜೋರು ಮಳೆ ಬರುವ ನಿರೀಕ್ಷೆಗಳು ಇವೆ. ಇನ್ನೂ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಹ ಶುಕ್ರವಾರದಿಂದ ಮೂರು ದಿನ ಮಳೆ ಅಬ್ಬರಿಲಿದೆ. ಮೂರು ದಿನಗಳ ನಂತರವು ಈ ಮಳೆ ತುಸು ದುರ್ಬಲಗೊಂಡರು ಸಹಿತ ಮತ್ತೆ ಡಿಸೆಂಬರ 1ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡಿನಲ್ಲಿ ಯಾವುದೇ ಮಳೆ ಮುನ್ಸೂಚನೆಗಳು ಇಲ್ಲ. ಆಗಾಗ ಬಿಸಿಲು ಕಡಿಮೆಯಾಗಿ ಮೋಡ ಕವಿದ ವಾತಾವರಣ ಅಲ್ಲಲ್ಲಿ ಕಂಡು ಬಂದರೂ ಸಹಿತ ತುಂತುರು ಮಳೆ ನಿರೀಕ್ಷೆ ಇದೆ ಹೊರತು ಜೋರು ಮಳೆ ಸಂಭವ ಇಲ್ಲ.…
ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನ ಆಯ್ಕೆ ಮಾಡಿದೆ…ನಟರಾಕ್ಷಸ ಡಾಲಿ ಧನಂಜಯ್ ಲಿಡ್ಕರ್ ಗೆ ರಾಯಭಾರಿಯಾಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುತ್ತಿದ್ದಾರೆ. ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ಪ್ರಕಟಣೆಯೊಂದೆ ಬಾಕಿ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ ಎಲ್ಲಾ ವರ್ಗದ…