ಧಾರವಾಡ: ದೆಹಲಿಯಲ್ಲಿ ನಡೆದ ರೈತ ಹೋರಾಟದ ನೆನಪಿಗೋಸ್ಕರ ವಿವಿಧ ಹಕ್ಕುಗಳಿಗಾಗಿ ಬೆಂಗಳೂರಿನಲ್ಲಿ ಮಹಾಧರಣಿ ನಡೆಸಲು ಸಂಯುಕ್ತ ಹೋರಾಟಗಳ ಸಮಿತಿ ಸಜ್ಜಾಗಿದೆ. ಈ ಹೋರಾಟದ ಪೋಸ್ಟರ್‌ಗಳನ್ನು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರು ಇಂದು ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ರೈತರು, ಹಿಂದುಳಿದ ವರ್ಗದವರು, ವಿದ್ಯಾರ್ಥಿಗಳು, ಯುವಜನರು ಹಾಗೂ ಮಹಿಳಾ ಸಂಘಟನೆಗಳನ್ನೊಳಗೊಂಡು 72 ಗಂಟೆಗಳ ಕಾಲ ಈ ಹೋರಾಟ ನಡೆಯಲಿದೆ. ನ.26 ರಿಂದ 28ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಈ ಮಹಾಧರಣಿ ನಡೆಯಲಿದೆ ಎಂದು ಹಿರೇಮಠ ಈ ಸಂದರ್ಭದಲ್ಲಿ ತಿಳಿಸಿದರು. https://ainlivenews.com/housewifes-body-found-hanging-in-bangalore/ ದೆಹಲಿಯಲ್ಲಿ ಬೇರೆ ಬೇರೆ ರಾಜ್ಯಗಳ ರೈತರು ನಡೆಸಿದ ಧರಣಿಯ ನೆನಪನ್ನು ಮುಂದಿಟ್ಟುಕೊಂಡು ರಾಜ್ಯದ ಜನರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಈ ಮಹಾಧರಣಿ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ರಾಜಭವನ ಚಲೋ ಚಳವಳಿಯನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಹಿರೇಮಠ ತಿಳಿಸಿದರು.
Author: AIN Author
ತೆಲುಗಿನ ಹೆಸರಾಂತ ನಟ ರಾಮ್ ಚರಣ್ (Ram Charan) ಇದೀಗ ಮೈಸೂರಿನಲ್ಲಿದ್ದಾರೆ. ಅವರ ಗೇಮ್ ಚೇಂಜರ್ ಸಿನಿಮಾದ ಶೂಟಿಂಗ್ ಗಾಗಿ ಅವರು ಹೈದರಾಬಾದ್ ನಿಂದ ಮೈಸೂರಿಗೆ ಖಾಸಗಿ ಜೆಟ್ ನಲ್ಲಿ ಆಗಮಿಸಿದ್ದಾರೆ. ಬೆಳಗ್ಗೆ ಮೈಸೂರು (Mysore) ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಟನಿಗೆ ಸ್ವಾಗತ ಕೋರಲಾಗಿದೆ. ಮೈಸೂರಿನಲ್ಲಿ ಅವರ ನಟನೆಯ ಸಿನಿಮಾ ಶೂಟ್ ಆಗುತ್ತಿದೆ. ಒಂದು ಕಡೆ ಸಿನಿಮಾದ ಭರ್ಜರಿ ಚಿತ್ರೀಕರಣ ನಡೆಯುತ್ತಿದ್ದರೆ, ಮತ್ತೊಂದು ಕಡೆ ಸೋರಿಕೆಯ ಸಮಸ್ಯೆಯನ್ನು ಟೀಮ್ ಎದುರಿಸುತ್ತಿದೆ. ಸಿನಿಮಾದ ಯಾವುದೇ ವಿಷಯ ಸೋರಿಕೆ ಆಗದಂತೆ ಎಚ್ಚರಿಕೆ ತೆಗೆದುಕೊಂಡಿದ್ದರೂ, ಮೊನ್ನೆಯಷ್ಟೇ ಹಾಡಿಗೇ ಹಾಡೇ ಸೋರಿಕೆ (Song Leak) ಆಗಿ ಆತಂಕ ಮೂಡಿಸಿತ್ತು. ಈ ಕುರಿತಂತೆ ನಿರ್ಮಾಪಕರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ಒಬ್ಬರನ್ನು ಅರೆಸ್ಟ್ ಕೂಡ ಮಾಡಿದ್ದಾರೆ. ಡೈರೆಕ್ಟರ್ ಶಂಕರ್ (Shankar) ನಿರ್ದೇಶನದ ‘ಗೇಮ್ ಚೇಂಜರ್’ನಲ್ಲಿ(Game Changer) ಕಿಯಾರಾ ಅಡ್ವಾಣಿ- ರಾಮ್ ಚರಣ್ ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾಗೆ ಸೋರಿಕೆ ಕಾಟ ಶುರುವಾಗಿದೆ.…
ಬೆಂಗಳೂರು: ಬಹುಕೋಟಿ ರೂಪಾಯಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ನೆಚ್ಚಿನ ಐಷಾರಾಮಿ ಕಾರುಗಳನ್ನು ಹರಾಜಿಗೆ ಇಟ್ಟಿದ್ದಾರೆ ಐಟಿ ಅಧಿಕಾರಿಗಳು. ನೂರಾರು ಕೋಟಿ ರೂಪಾಯಿ ವಂಚನೆ ಕೇಸಲ್ಲಿ ಬಂಧನ ಆಗಿರೋ ಸುಕೇಶ್ ಚಂದ್ರಶೇಖರ್, ಸದ್ಯ ದೆಹಲಿ ಕಾರಾಗೃಹದಲ್ಲಿದ್ದಾರೆ. ಹಲವು ಸಂಸ್ಥೆಗಳಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಲವು ಸ್ವತ್ತುಗಳನ್ನು ವಶಪಡಿಸಿಕೊಂಡಿತ್ತು. ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದ 12 ಐಷಾರಾಮಿ ಕಾರುಗಳನ್ನೂ ಜಪ್ತಿ ಮಾಡಿದ್ದ ಐಟಿ ಅಧಿಕಾರಿಗಳು BMW, ರೇಂಜ್ ರೋವರ್, ಜಾಗ್ವಾರ್, ಪೋರ್ಷೆ, ಬೆಂಟ್ಲಿ, ರೋಲ್ಸ್ ರಾಯ್ಸ್, ಲ್ಯಾಂಬೋರ್ಗಿನಿ, ಡುಕಾಟಿ ಡಿಯಾವೆಲ್ ಸೇರಿ ಹಲವು ಐಷಾರಾಮಿ ಕಾರುಗಳನ್ನು ಇದೀಗ ಹರಾಜಿಗೆ (Auction) ಇಟ್ಟಿದ್ದಾರೆ. ನ.28 ರಂದು ಹರಾಜು ಹಾಕಲು ಮುಂದಾಗಿದ್ದು, ಸುಮಾರು 308 ಕೋಟಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದರ ಪರಿಣಾಮ ಇದಾಗಿದೆ. ಈಗ ಕಾರು ಹರಾಜಿನ ಕಾರಣದಿಂದಾಗಿ ಸುದ್ದಿ ಆಗಿರುವ ಸುಕೇಶ್, ಈ ಹಿಂದೆ ಜೈಲಿನಲ್ಲಿದ್ದುಕೊಂಡೇ (Jail) ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಗೆ…
ಬೆಂಗಳೂರು: ಸಾಫ್ಟ್‌ವೇರ್, ಹಾರ್ಡ್‌ವೇರ್ ಅಪ್‌ಡೇಟ್ ಹಿನ್ನೆಲೆ ಶುಕ್ರವಾರದಿಂದ 3 ದಿನಗಳ ಕಾಲ ಎಸ್ಕಾಂ (ESCOM) ಆನ್‌ಲೈನ್ ಸೇವೆಗಳು ಬಂದ್ ಇರಲಿದೆ. ಈ ಹಿನ್ನೆಲೆ ಬೆಂಗಳೂರು (Bengaluru) ಸೇರಿದಂತೆ ಹಲವೆಡೆ ಆನ್‌ಲೈನ್ ಸೇವೆಗಳು ಸ್ಥಗಿತವಾಗಿರಲಿದೆ. https://ainlivenews.com/bjp-state-presidents-exercise-to-convince-the-disaffected/ ಶುಕ್ರವಾರ ನವೆಂಬರ್ 24 ರಿಂದ 26 ರವರೆಗೆ 98 ನಗರ ಹಾಗೂ ಪಟ್ಟಣಗಳಲ್ಲಿ ಸೇವೆಗಳು ಅಲಭ್ಯವಾಗಿರಲಿದೆ. ಸಾಫ್ಟ್‌ವೇರ್, ಹಾರ್ಡ್‌ವೇರ್ ಅಪ್‌ಡೇಟ್ ಹಿನ್ನೆಲೆ ಸೇವೆಗಳು ಬಂದ್ ಇರಲಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು ಸೇರಿದಂತೆ ಹಲವೆಡೆ ಆನ್‌ಲೈನ್ ಸೇವೆಗಳು ಸ್ಥಗಿತವಾಗಲಿದೆ. ಈ ಬಗ್ಗೆ ಬೆಸ್ಕಾಂ ಅಧಿಕೃತ ಪ್ರಕಟಣೆ ನೀಡಿದೆ. ಯಾವೆಲ್ಲಾ ಸೇವೆ ಇರಲ್ಲ? * ಹೊಸ ವಿದ್ಯುತ್ ಸಂಪರ್ಕ ನೋಂದಣಿ * ಆನ್‌ಲೈನ್ ಹಣ ಪಾವತಿ * ಕೌಂಟರ್‌ಗಳಲ್ಲಿ ನಗದು ಪಾವತಿ ಇರಲ್ಲ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಗಡಿ ಜಿಲ್ಲೆ ರಜೌರಿಯಲ್ಲಿ ಭಯೋತ್ಪಾದಕರ ಜೊತೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಹುತಾತ್ಮರಾದ ನಾಲ್ವರಲ್ಲಿ 63 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನ ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಪ್ರಾಂಜಲ್, ದೆಹಲಿ ಪಬ್ಲಿಕ್ ಸ್ಕೂಲ್, MRPL ನ ಹಳೆಯ ವಿದ್ಯಾರ್ಥಿಯಾಗಿದ್ದರು. https://ainlivenews.com/housewifes-body-found-hanging-in-bangalore/ ಭಯೋತ್ಪಾದಕರ ಬಗ್ಗೆ ನಿರ್ದಿಷ್ಟ ಮಾಹಿತಿ ಆಧರಿಸಿ ನವೆಂಬರ್ 19 ರಂದು ಕಲಾಕೋಟೆ ಪ್ರದೇಶದ ಗುಲಾಬ್ಗಢ ಅರಣ್ಯದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ನವೆಂಬರ್ 22 ರಂದು ಎನ್‌ಕೌಂಟರ್ ನಡೆದಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಶೋಧನಾ ತಂಡದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿಗೆ…
ಮೈಸೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ನೇಮಕ ವಿಚಾರವಾಗಿ ಪಕ್ಷದ ಮೇಲೆ ಮತ್ತಷ್ಟು ಮುನಿಸುಗೊಂಡ ಮಾಜಿ ಸಚಿವ ವಿ.ಸೋಮಣ್ಣ, ಡಿಸೆಂಬರ್ 6ರ ಬಳಿಕ ತನ್ನ ಮನಸ್ಸಿನ ಭಾವನೆ ತಿಳಿಸುವುದಾಗಿ ಹೇಳಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. https://ainlivenews.com/housewifes-body-found-hanging-in-bangalore/ ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ. ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ, ನಾನೂ ಯಾರನ್ನು ಸಂಪರ್ಕಿಸಿಲ್ಲ ಎಂದರು.
ಬೀದರ್: ಜಾತಿಗಣತಿ ವರದಿ ಬಗ್ಗೆ ಸರ್ಕಾರ ಏನು ನಿರ್ಧಾರ ಮಾಡುತ್ತೋ ನೋಡೋಣ ಎಂದು ಬೀದರ್ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. https://ainlivenews.com/housewifes-body-found-hanging-in-bangalore/ ಜಾತಿಗಣತಿ ವರದಿ ಬಗ್ಗೆ ಸ್ಪಷ್ಟವಾಗಿ ಏನೂ ಹೇಳುವುದಕ್ಕೆ ಇಷ್ಟಪಡುವುದಿಲ್ಲ. ಜನರ ಅಭಿಪ್ರಾಯ ಪಡೆದು ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡ್ತೇವೆ. ಜಾತಿಗಣತಿ ವರದಿಗೆ ವೀರಶೈವ ಲಿಂಗಾಯತ, ಒಕ್ಕಲಿಗರ ವಿರೋಧವಿದೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿ; ವಾಣಿಜ್ಯ ನಗರಿ ಹುಬ್ಬಳ್ಳಿಯ ಸರ್. ಸಿದ್ದಪ್ಪ ಕಂಬಳಿ ರಸ್ತೆಯ ಲ್ಯಾಮಿಂಗ್ಟನ್ ಸ್ಕೂಲ್ ಬಸ್ ನಿಲ್ದಾಣದ ಬಳಿಯ ಚರಂಡಿಯಲ್ಲಿ ಬಿದ್ದಿದ್ದ ನಾಯಿಯನ್ನು ಹು-ಧಾ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಡಾ. ಶ್ರೀಧರ್ ದಂಡೆಪ್ಪನವರ ನೇತೃತ್ವದಲ್ಲಿ ಪಾಲಿಕೆಯ ಸಿಬ್ಬಂದಿಯಿಂದ ಸುರಕ್ಷಿತವಾಗಿ ರಕ್ಷಣೆ ಮಾಡಲಾಯಿತು. ಬೆಳಿಗ್ಗೆಯೇ ಚರಂಡಿಯಲ್ಲಿ ನಾಯಿ ಬಿದ್ದಿತ್ತು ಎನ್ನಲಾಗಿದ್ದು, ಕೆಲ ಗಂಟೆಗಳ ಕಾಲ ಚರಂಡಿಯಲ್ಲಿಯೇ ಪರದಾಡಿದ್ದು, ಚರಂಡಿಯಿಂದ ಮೇಲೆ ಬಾರದೇ ಗಾಬರಿಗೊಂಡಿತ್ತು. ಪಾದಾಚಾರಿಗಳು ನಾಯಿಯ ಸ್ಥಿತಿ ನೋಡಿ ಅಯ್ಯೋ ಪಾಪಾ ನಾಯಿ ಚರಂಡಿಯಲ್ಲಿ ಬಿದ್ದಿದೆ ಎಂದು ಗುಣುಗುತ್ತಾ ಹೋದರೇ ವಿನಃ ನಾಯಿಯ ರಕ್ಷಣೆಯ ಗೋಜಿಗೆ ಹೋಗಲಿಲ್ಲ. ಆದರೇ ಅದೇ ದಾರಿಯಲ್ಲಿ ಹೊರಟಿದ್ದ ಪತ್ರಕರ್ತರು ನಾಯಿಯ ಅವಾಂತರವನ್ನು ನೋಡಿ ರಕ್ಷಣೆಗೆ ಮುಂದಾದರು. ಆದರೇ ನಾಯಿಯನ್ನು ರಕ್ಷಣೆ ಮಾಡುವಲ್ಲಿ ಅವ್ಯವಸ್ಥೆ ಉಂಟಾಯಿತು. ಅದೇ ರಸ್ತೆಯಲ್ಲಿ ಹೊರಟಿದ್ದ ಹು-ಧಾ ಪಾಲಿಕೆ ಮೇಯರ್ ವೀಣಾ ಚೇತನ್ ಬರದ್ವಾಡ ಅವರ ಕಾರ್ ನ್ನು ತಡೆದ ಪತ್ರಕರ್ತರು ನಾಯಿಯ ಪರದಾಟವನ್ನು ತಿಳಿಸಿದಾಗ, ಮೇಯರ್ ಪಾಲಿಕೆ ಸಿಬ್ಬಂದಿಗಳಿಗೆ ತಿಳಿಸಿದರು. https://ainlivenews.com/housewifes-body-found-hanging-in-bangalore/ ಮತ್ತೇ ಪಾಲಿಕೆ…
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಅನೇಕರ ಅಸಮಾಧಾನಕ್ಕೆ ಗುರಿಯಾಗಿದ್ದ ಬಿ.ವೈ.ವಿಜಯೇಂದ್ರ (B.Y.Vijayendra) ಇಂದು (ಗುರುವಾರ) ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಮನೆಗೆ ಭೇಟಿ ನೀಡಿದರು. ಆ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ. ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಬೆಳಗ್ಗೆ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ವಿಜಯೇಂದ್ರಗೆ ಜಾರಕಿಹೊಳಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಇಬ್ಬರೂ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದರು. ವಿಜಯೇಂದ್ರ ನೇಮಕ ಹಾಗೂ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅತೃಪ್ತಿಗೊಂಡಿದ್ದರು. ಹೀಗಾಗಿ ಅವರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು. ಕೆಲವು ಸಲ ಅವರು ಅಸಮಾಧಾನ ತೋಡಿಕೊಂಡಿದ್ದರು. ನನ್ನ ಜವಾಬ್ದಾರಿ ಎಲ್ಲರನ್ನೂ ಪಕ್ಷದಲ್ಲಿ ಜೊತೆಗೆ ಕರೆದೊಯ್ಯುವುದು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಅರ್ಧ…
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಗಡಿ ಜಿಲ್ಲೆ ರಜೌರಿಯಲ್ಲಿ ಬುಧವಾರ ಭಯೋತ್ಪಾದಕರ ಜೊತೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಹುತಾತ್ಮರಾದ ನಾಲ್ವರಲ್ಲಿ 63 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನ ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಪ್ರಾಂಜಲ್, ದೆಹಲಿ ಪಬ್ಲಿಕ್ ಸ್ಕೂಲ್, MRPL ನ ಹಳೆಯ ವಿದ್ಯಾರ್ಥಿಯಾಗಿದ್ದರು ಮಗನ ಸಾವಿನ ಹಿನ್ನೆಲೆ ಮನೆಯಲ್ಲಿ ನೀರವ ಮೌನ ಪ್ರಾಂಜಲ್ ಪೋಷಕರನ್ನು ಸಂತೈಸಲು ಆಗಮಿಸುತ್ತಿರುವ ಸಂಬಂಧಿಗಳು ನೋವಿನಲ್ಲಿರುವ ತಂದೆ ವೆಂಕಟೇಶ್ ಮತ್ತು ತಾಯಿ ಅನುರಾಧ ಕಳೆದ ಆರು ತಿಂಗಳ ಹಿಂದೆ ಮನೆಗೆ ಆಗಮಿಸಿದ್ದ ಪ್ರಾಂಜಲ್ ಮನೆಯಲ್ಲಿ ಹಮ್ಮಿಕೊಂಡಿದ್ದ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಿದ್ದರು ಒಂದು ವಾರ ಪೋಷಕರ ಜೊತೆ ಇದ್ದು ಕರ್ತವ್ಯಕ್ಕೆ ಮರಳಿದ್ದ ಪ್ರಾಂಜಲ್ ಜಿಗಣಿ ಸಮೀಪದ ನಂದನ ವನ ಬಡಾವಣೆಯಲ್ಲಿರುವ ನಿವಾಸ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ…