ಬೆಂಗಳೂರು:- ನಗರದಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ದಾಖಲಾಗಿದೆ. ಗಾಡಿ ಟಚ್ ಆಗಿದಕ್ಕೆ ವಾಹನ ಸವಾರ ಹುಚ್ಚನಂತಾಡಿದ್ದಾನೆ. ಕಾರಿನ ಗ್ಲಾಸ್ ಒಡೆದು ದುರ್ವರ್ತನೆ ತೋರಿದ್ದಾನೆ. ಗಾಡಿ ಟಚ್ ಆಗಿದಕ್ಕೆ ಕಿರಿಕ್ ನಡೆದಿದೆ. ಮಹಾರಾಷ್ಟ್ರ ರಿಜಿಸ್ಟ್ರೇಷನ್ ಕಾರಿನ ಮೇಲೆ ದಾಳಿ ನಡೆದಿದೆ. ಈ ಸಂಬಂಧ x ನಲ್ಲಿ ಗೌಡ ಗ್ರೂಪ್ ಎಂಬ ಪೇಜ್ ಪೋಸ್ಟ್ ಮಾಡಿದೆ. ನಿಖರ ಸ್ಥಳದ ಬಗ್ಗೆ ಪೊಲೀಸರು ಮಾಹಿತಿ ಕೇಳಿದ್ದಾರೆ.
Author: AIN Author
ನವದೆಹಲಿ: ಕೋವಿಡ್-19 ವ್ಯಾಕ್ಸಿನೇಷನ್‌ಗೂ ಮತ್ತು ದೇಶದಲ್ಲಿ ಸಂಭವಿಸುತ್ತಿರುವ ಹಠಾತ್ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ. ಹೃದಯ ಸ್ತಂಭನ ಪ್ರಕರಣಗಳ ಕುರಿತು ಮಾಹಿತಿ ನೀಡುವಾಗ, ಮಾರಣಾಂತಿಕ ಕೋವಿಡ್-19 ರೋಗಕ್ಕೆ ಲಸಿಕೆಗಳನ್ನು ತೆಗೆದುಕೊಂಡ ನಂತರ ಜನರು ಹಠಾತ್ತನೆ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ ಎಂಬ ಐಸಿಎಂಆರ್ ಅಧ್ಯಯನ ನಡೆಸಿತು. 18 ರಿಂದ 45 ವರ್ಷ ವಯಸ್ಸಿನ ಆರೋಗ್ಯವಂತ ವಯಸ್ಕರಲ್ಲಿ ಹಠಾತ್ ಸಾವಿನ ಬಗ್ಗೆ ವರದಿ ಪ್ರಕಟಿಸಿದೆ. ಯುವಕರಲ್ಲಿ ಹಠಾತ್ ಹೃದಯಾಘಾತ ಸಂಭವಿಸುತ್ತಿದೆ. ಈ ಸಾವುಗಳಿಗೂ ಕೋವಿಡ್ ವ್ಯಾಕ್ಸಿನೇಷನ್‌ಗೂ ಯಾವುದೇ ಸಂಬಂಧ ಇಲ್ಲ. ಅದನ್ನು ಸಾಬೀತುಪಡಿಸಲು ಯಾವುದೇ ಪುರಾವೆ ನಮಗೆ ಕಂಡುಬಂದಿಲ್ಲ ಎಂದು ಸಂಶೋಧನಾ ತಂಡವು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಈ ರೀತಿಯ ಹಠಾತ್ ಸಾವಿಗೆ ಕುಟುಂಬದ ಹಿನ್ನೆಲೆ, ವ್ಯಕ್ತಿಯ ಜೀವನಶೈಲಿ (ಅತಿಯಾದ ಮದ್ಯಪಾನ ಮತ್ತು ತೀವ್ರ ದೈಹಿಕ ಚಟುವಟಿಕೆಯಂತಹ ಜೀವನಶೈಲಿ) ಕಾರಣವಾಗಿರಬಹುದು ಎಂದು ಹೇಳಲಾಗಿದೆ. ICMR ಸಂಶೋಧಕರು ತಮ್ಮ ಸಂಶೋಧನೆಯಲ್ಲಿ…
ನವದೆಹಲಿ: ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ದೂರು ದಾಖಲಾಗಿದೆ. ಪ್ರಧಾನಿಯನ್ನು ಪನೌತಿ ಮೋದಿ ಎಂದು ಹಾಗೂ ಜೇಬುಗಳ್ಳ ಎಂದು ಟೀಕಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ನೀಡಿದೆ. ಇದೇ ವೇಳೆ, ಮೋದಿ ಗುಜರಾತ್ ಮುಖ್ಯಮಂತ್ರಿಯಾದ ನಂತರ ಅವರ ಜಾತಿ ಒಬಿಸಿ ಪಟ್ಟಿಗೆ ಸೇರಿತು ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧವೂ ದೂರು ನೀಡಿದೆ. ಇನ್ನು ಇಂದಿರಾ ಗಾಂಧಿ ಅವರು 1982ರಲ್ಲಿ ಭಾರತವು ಪಾಕ್ ವಿರುದ್ಧ ಹಾಕಿ ಪಂದ್ಯ ಸೋಲುವ ಲಕ್ಷಣ ಕಾಣಿಸಿದ ಬೆನ್ನಲ್ಲೇ, ಪಂದ್ಯ ವೀಕ್ಷಿಸುತ್ತಿದ್ದ ಅಂದಿನ ಪ್ರಧಾನಿ ಇಂದಿರಾ ಗಾಂಧಿ, ಸ್ಟೇಡಿಯಂನಿಂದ ನಿರ್ಗಮಿಸಿದ್ದರು. ಇದು ಆಟಗಾರರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿತ್ತು. ಆದರೆ ಮೋದಿ ಹಾಗಲ್ಲ. ಭಾರತವು ಕ್ರಿಕೆಟ್‌ನಲ್ಲಿ ಸೋತರೂ ಆಟಗಾರರಿಗೆ ಧೈರ್ಯ ತುಂಬಿದರು ಎಂದು ಬಿಜೆಪಿ ಹೇಳಿದೆ. ಪ್ರಧಾನಿ ಮೋದಿ ಮೇಲೆ ನಿರಂತರವಾಗಿ ಹೀಗೆ ಟೀಕೆ ಮಾಡುತ್ತಿರುವ ಖರ್ಗೆ ಹಾಗೂ ರಾಹುಲ್ ಗಾಂಧಿ ವಿರುದ್ಧ…
ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ರವಿನಗರದ ಕರ್ನಾಟಕ ವೈನ್ಸ್ ಅಂಗಡಿಯ ವ್ಯವಸ್ಥಾಪಕ, ₹44.18 ಲಕ್ಷ ಮೌಲ್ಯದ ಮದ್ಯ ಮಾರಾಟದಲ್ಲಿ ಅವ್ಯವಹಾರ ನಡೆಸಿದ್ದಾನೆ ಎಂದು ಆರೋಪಿಸಿ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವೈನ್ಸ್ ಅಂಗಡಿ ಮಾಲೀಕ ನೀಲಕಂಠ ಆಕಳವಾಡಿ ಅವರು ಪ್ರಿಯದರ್ಶಿನಿ ಕಾಲೊನಿಯ ಮಂಜುನಾಥ ಪೂಜಾರಿ ವಿರುದ್ಧ ದೂರು ನೀಡಿದ್ದಾರೆ. ಮಂಜುನಾಥ ಅವರು ವೈನ್ಸ್ ಅಂಗಡಿಯಲ್ಲಿ ಹಣಕಾಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದರು. 2017ರ ಸೆ. 5ರಿಂದ 2023ರ ಎ. 25ರವರೆಗೆ ನಡೆದ ಅಂಗಡಿಯ ಲೆಕ್ಕಪತ್ರಗಳ ವರದಿ ನೀಡದೆ ಓಡಿಹೋಗಿದ್ದರು. ಲೆಕ್ಕ ಪರಿಶೋಧನೆ ನಡೆಸಿದಾಗ ಮದ್ಯ ಮಾರಾಟದಲ್ಲಿ ಅವ್ಯವಹಾರ ನಡೆದಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚಿಕ್ಕಮಗಳೂರು : -ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸದಸ್ಯನೇ ಬಲಿಯಾದ ಘಟನೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಜರುಗಿದೆ. 26 ವರ್ಷದ ಕಾರ್ತಿಕ್ ಗೌಡ ಮೃತ ದುರ್ದೈವಿಯಾಗಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಘಟನೆಯಿಂದ ಎರಡು ತಿಂಗಳಲ್ಲಿ ಮೂರು ಜನ ಕಾಡಾನೆ ದಾಳಿಗೆ ಬಲಿಯಾದಂತಾಗಿದೆ. 20 ದಿನಗಳೊಳಗೆ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ್ದಾರೆ ಮೃತ ಕಾರ್ತಿಕ್ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿಯಾಗಿದ್ದು, ಸರಕಾರ ರಚಿಸಿದ್ದ ಆನೆ ನಿಗ್ರಹ ಪಡೆಯಲ್ಲಿ ಕೆಲಸ ಮಾಡುತ್ತಿದ್ದರು.ಆನೆ ಓಡಿಸುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.20 ದಿನದ ಹಿಂದೆ ಆಲ್ದೂರಿನಲ್ಲಿ ವೀಣಾ ಎನ್ನುವವರು,ಒಂದೂವರೆ ತಿಂಗಳ ಹಿಂದೆ ಆಲ್ದೂರು ಸಮೀಪ ಚಿನ್ನಿ ಎನ್ನುವವರು ಆನೆ ದಾಳಿಗೆ ಬಲಿಯಾಗಿದ್ದರು.
ಕಾಯಿಸಿ ಕಾಯಿಸಿ ಕೊಡುವ ಊಟಕ್ಕೆ ರುಚಿ ಹೆಚ್ಚು ಅನ್ನುವಂತೆ ಸಲಾರ್ ಔತಣವನ್ನ ಕೊನೆಗೂ ಪ್ರೇಕ್ಷಕರಿಗೆ ಬಡಿಸಲು ಟೀಮ್ ಸಜ್ಜಾಗಿದೆ. ಆ ದಿನಕ್ಕೆ ಕೌಂಟ್‌ಡೌನ್ ಶುರುವಾಗಿದೆ. ವಿಶೇಷ ಅಂದ್ರೆ ಆಲ್‌ರೆಡಿ ಅಮೆರಿಕಾದಲ್ಲಿ ಲಕ್ಷಡಾಲರ್ ಕಲೆಕ್ಷನ್ ಮಾಡಿಬಿಟ್ಟಿದೆ ಸಲಾರ್. ಏನ್ ಆಶ್ಚರ್ಯವಿದು? ಬಿಡುಗಡೆಗೂ ಮುನ್ನ ಕಲೆಕ್ಷನ್ ಆಗಿದ್ಹೇಗೆ? ಆ ಬಗ್ಗೆ ಇಲ್ಲಿದೆ ಮಾಹಿತಿ. ಸಲಾರ್ ಪ್ರಭಾಸ್ (Prabhas) ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ (KGF) ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ. ಸಲಾರ್ (Salaar) ಮೇಲಿನ ನಿರೀಕ್ಷೆ ಎಷ್ಟಿದೆ ಅಂದ್ರೆ ಈಗಾಗಲೇ ಅಮೆರಿಕಾದಲ್ಲಿ ಈಗಾಗಲೇ ಲಕ್ಷ ಡಾಲರ್ ಕಲೆಕ್ಷನ್ ಟಿಕೆಟ್‌ನಿಂದ…
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ನಲ್ಲಿ ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ಮಾಡುತ್ತಿದ್ದ ಪ್ರವಾಸಿಗ ಬಾಲಕನೋರ್ವ ಮೇಲಿನಿಂದ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ಬಾಲಕನನ್ನು ಬೆಂಗಳೂರು ಮೂಲದ ಇಕ್ಷ್ಯಾನ್ ಚೌಧರಿ (12) ಎಂದು ಗುರುತಿಸಲಾಗಿದೆ. ಬಾಲಕ ಪ್ಯಾರಾ ಸೈಲಿಂಗ್ ಮಾಡುತ್ತಿದ್ದಾಗ 10 ಮೀಟರ್ ಎತ್ತರದಿಂದ ಬೋಟಿಗೆ ಬಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಸರಿಯಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಹಿನ್ನಲೆಯಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಬಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಲ್ಪೆ ಬೀಚ್ ನಲ್ಲಿ ಕಳೆದ ತಿಂಗಳು ಪ್ರವಾಸಿಗರಿಗೆ ಅವಕಾಶ ನೀಡಲಾಗಿತ್ತು ಅಡ್ವೆಂಚರ್ ಚಟುವಟಿಕೆ, ದೋಣಿ ವಿಹಾರ ಆರಂಭವಾಗಿತ್ತು. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಆದರೆ ಈ ಕುರಿತು ಟೆಂಡರ್ ಪಡೆದಿರುವವರು ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿಲ್ಲ ಬೋಟಿಂಗ್ ವೇಳೆಯಲ್ಲಿ ದೋಣಿಯ ಸಾಮರ್ಥ್ಯಕ್ಕಿಂತ ಅಧಿಕ ಜನರನ್ನು ಹತ್ತಿಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ಇಂತಹ ಚಟುವಟಿಕೆಗಳು ನಡೆಯುತ್ತಿದ್ದು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ ಎಂದು ತಿಳಿದು…
ಶ್ರೀಲೀಲಾ (Sreeleela) ಮತ್ತೆ ಮತ್ತೆ ಸುದ್ದಿಗೆ ಬರುತ್ತಿದ್ದಾರೆ. ವೈಷ್ಣವ್ ತೇಜ್ (Vaishnav Tej) ಜೊತೆ ಇವರು ಅಭಿನುಯಿಸಿದ ಆದಿಕೇಶವ ಸಿನಿಮಾ ಇನ್ನೇನು ತೆರೆಗೆ ಬರಲು ಸಿದ್ಧವಾಗಿದೆ. ಆದರೆ ಶ್ರೀಲೀಲಾ ಮಾತ್ರ ನಾ ಬರಲ್ಲ ಎಂದು ಹಠ ಹಿಡಿದಿದ್ದಾರೆ. ಇಷ್ಟಾದರೂ ಸಿನಿಮಾ ಗೆಲ್ಲುತ್ತೆ ಎನ್ನುತ್ತಿದ್ದಾರೆ ವೈಷ್ಣವ್. ಇದೇನಿದು ಹೀರೋ- ಹೀರೋಯಿನ್ ಜಗಳ ? ಇಲ್ಲಿದೆ ಅಪ್‌ಡೇಟ್. ಶ್ರೀಲೀಲಾ ಯಾರ ಕೈಗೂ ಸಿಗುತ್ತಿಲ್ಲ. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಟಾಪ್ ಹೀರೋಗಳು ಈಕೆ ಕಾಲ್‌ಶೀಟ್‌ಗೆ ಕಾಯುವಂತಾಗಿದೆ. ಪ್ರಿನ್ಸ್ ಮಹೇಶ್ ಬಾಬುವಿನಿಂದ ಹಿಡಿದು ಪವನ್ ಕಲ್ಯಾನ್ ಕೂಡ ಶ್ರೀಲೀಲಾ ಎಲ್ಲಿ ನಿನ್ನಯ ಪಾದ ಕಮಲ ಎನ್ನುತ್ತಿದ್ದಾರೆ. ಈ ಹೊತ್ತಲ್ಲೇ ಶ್ರೀ ನಟಿಸಿದ ಇನ್ನೊಂದು ಸಿನಿಮಾ ಧಮಾಕಾ, ಭಗವಂತ ಕೇಸರಿ ಹಿಟ್ ಆಗಿವೆ. ಇದರ ಬೆನ್ನಿಗೇ ಆದಿಕೇಶವ ಬರುತ್ತಿದೆ. ಆದರೆ ಶ್ರೀಲೀಲಾಗೆ ಮಾತ್ರ ಪ್ರಚಾರಕ್ಕೆ ಬರಲು ಆಗುತ್ತಿಲ್ಲ. ಹೀಗಿದ್ದರೂ ಸಿನಿಮಾ ಹಿಟ್ ಆಗುತ್ತದೆ. ಶ್ರೀಲೀಲಾ ಇದ್ದರೆ ಸಾಕು, ಸಿನಿಮಾ ಗೆಲ್ಲುತ್ತದೆ ಎನ್ನುತ್ತಿದ್ದಾರೆ ಹೀರೋ ವೈಷ್ಣವ್ ತೇಜ್. ಮೆಗಾ…
ಹುಬ್ಬಳ್ಳಿ: ಶಾಂತಿನಿಕೇತನ ಕಾಲೊನಿಯ ಪ್ರವೀಣ ಗಾಯಕವಾಡ, ಮಂಜುನಾಥ ಲೂತಿಮಠ ಮತ್ತು ಇತರರಿಗೆ ಅವಾಚ್ಯ ಪದಗಳಿಂದ ಬೈದು, ಜಾತಿ ನಿಂದನೆ ಮಾಡಿರುವ ಆರೋಪದ ಮೇಲೆ ಏಳು ಮಂದಿ ವಿರುದ್ಧ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯ ಅಳಗುಂಡಗಿ, ಶಿವಾನಂದ ಮುತ್ತಣ್ಣವರ, ವಿಜಯಕುಮಾರ ಅಪ್ಪಾಜಿ, ಭರತ್ ಜೈನ್, ಭವೇಶ ಜೈನ್, ಲಲಿತ ಜೈನ್ ಹಾಗೂ ಮತ್ತೊಬ್ಬ ವ್ಯಕ್ತಿ ವಿರುದ್ಧ ಪ್ರವೀಣ ದೂರು ದಾಖಲಿಸಿದ್ದಾರೆ. ಅಕ್ಕಿಹೊಂಡದ ವಿಠಲ ದೇವಸ್ಥಾನದ ಬಳಿ ಆರೋಪಿಗಳು ಬಂದು ಕರವೇ ಅಧ್ಯಕ್ಷರಿಗೆ ಮತ್ತು ಪದಾಧಿಕಾರಿಗಳಿಗೆ ಅವಾಚ್ಯವಾಗಿ ಬೈದು, ಜಾತಿ ನಿಂದನೆ ಮಾಡಿದ್ದಾರೆ. ಕುತ್ತಿಗೆ ಹಿಡಿದು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹುಬ್ಬಳ್ಳಿ: ಧಾರವಾಡ ಉಪನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ದಯಾನಂದ ಶೇಗುಣಸಿ ಅವರ ಬ್ಯಾಂಕ್ ಖಾತೆಯಲ್ಲಿದ್ದ ₹8.25 ಲಕ್ಷ, ಅವರ ಗಮನಕ್ಕೆ ಬರದೆ ಆನ್‌ಲೈನ್‌ಲ್ಲಿ ವರ್ಗಾವಣೆ ಆಗಿರುವ ಕುರಿತು ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರೊಂದಿಗೂ ವೈಯಕ್ತಿಕ ಮಾಹಿತಿ ಹಂಚಿಕೊಳ್ಳದಿದ್ದರೂ ಹಣ ವರ್ಗಾವಣೆಯಾಗಿದೆ. ಬ್ಯಾಂಕ್‌ನವರು ಸೆಕ್ಯೂರ್ ಇರುವ ನೆಟ್ ಸೆಕ್ಯೂರಿಟಿ ಬಳಸದೆ ನಿಷ್ಕಾಳಜಿಯಿಂದಲೋ ಅಥವಾ ಯಾವುದೋ ಅಧಿಕಾರಿಯ ಹಸ್ತಕ್ಷೇಪದಿಂದ ಅಪರಿಚಿತ ವ್ಯಕ್ತಿ ಹಣ ವರ್ಗಾಯಿಸಿಕೊಂಡಿದ್ದಾನೆ. ಬ್ಯಾಂಕ್ ಖಾತೆಗೆ ಲಿಂಕ್ ಇರುವ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದ ಸಂದರ್ಭ, ಇಂಟರ್‌ನೆಟ್ ಬ್ಯಾಂಕಿಂಗ್ ಮೂಲಕ ₹50 ಸಾವಿರ 12 ಬಾರಿ, ₹45 ಸಾವಿರ ಮೂರು ಬಾರಿ, ₹25ಸಾವಿರ ಎರಡು ಬಾರಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ‘ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಬ್ಯಾಂಕ್ ನಿಷ್ಕಾಳಜಿಯಿಂದಲೂ ಆಗಿರಬಹುದು. ಅಥವಾ ಹೊಸ ಬಗೆಯ ಸೈಬರ್ ಕ್ರೈಂ ಆರಂಭವಾಗಿರಬಹುದು’ ಎಂದು ಇನ್‌ಸ್ಪೆಕ್ಟರ್ ದಯಾನಂದ ಹೇಳಿದರು.