Author: AIN Author

ಬೆಂಗಳೂರು:  ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನ ಜನರಿಗೆ ತಲುಪಿಸಲು ಸರ್ಕಸ್ ಮಾಡುತ್ತಿದೆ. ಅದರಲ್ಲೂ ಮಹಿಳೆಯರಿಗೆ ಅನುಕೂಲವಾಗುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ (Gruhalakshmi) ಸವಾಲುಗಳು ದಿನಕ್ಕೊಂದು ಬರುತ್ತಿದೆ. ಹೀಗಾಗಿ ಗೃಹಲಕ್ಷ್ಮಿ ತಾಂತ್ರಿಕ ದೋಷ ನಿವಾರಣೆಗಾಗಿ ಮನೆಬಾಗಿಲಲ್ಲಿ ದಾಖಲೆ ಸಂಗ್ರಹಕ್ಕೆ ಇಲಾಖೆ ರೆಡಿಯಾಗಿದೆ. https://ainlivenews.com/health-service-chief-minister-siddaramaiah-launched-new-262-ambulances/ ಗೃಹಲಕ್ಷ್ಮಿ ಗ್ಯಾರಂಟಿ ಜಾರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದಿನಕ್ಕೊಂದು ಕಸರತ್ತು ನಡೆಸುತ್ತಿದೆ. ಆದರೆ ಈಗ ತಾಂತ್ರಿಕ ದೋಷದ ಪರಿಣಾಮ ಬರೋಬ್ಬರಿ 5-6 ಲಕ್ಷದಷ್ಟು ಗೃಹಲಕ್ಷ್ಮಿಯರಿಗೆ ದುಡ್ಡು ಜಮೆಯಾಗಿಲ್ಲ. ಹೀಗಾಗಿ ಗ್ರಾಮ-ಗ್ರಾಮಗಳಲ್ಲಿ ಅದಾಲತ್‌ಗೆ ತಯಾರಾಗಿದೆ. ಆದರೆ ಅದಾಲತ್‌ಗೂ ಮುನ್ನಾ ಅಂಗನವಾಡಿ ಕಾರ್ಯಕರ್ತೆಯರು (Anganwadi Worker) ಖುದ್ದು ಮನೆಗಳಿಗೆ ತೆರಳಿ, ತಾಂತ್ರಿಕ ದೋಷಗಳ ಕಾರಣ ಹುಡುಕಿ ಪೂರಕ ದಾಖಲೆ ಕಲೆಹಾಕಲಿದ್ದಾರೆ. ಸುಮಾರು 5-6 ಲಕ್ಷದಷ್ಟು ಗೃಹಲಕ್ಷ್ಮಿ ದುಡ್ಡು ಜಮೆಯಾಗದ ಯಜಮಾನಿಯರ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹಿಸಿ, ಅವರಿಗೆ ಹಣ ತಲುಪಲು ಕ್ರಮ ವಹಿಸಲಾಗುತ್ತಿದೆ. ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಮಹಿಳೆಯರ ಖಾತೆಗೆ ದುಡ್ಡು ಜಮೆಯಾಗುವಂತೆ ನೋಡಿಕೊಳ್ಳಬೇಕು ಎಂದು ಈಗಾಗಲೇ…

Read More

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ತಾತನ ಕೊಲೆ ಮಾಡಿದ್ದ ಮೊಮ್ಮಗ ಹಾಗು ಆ ಮೊಮ್ಮಗನ ತಾಯಿ ಇಬ್ಬರನ್ನ ಪೋಲೀಸರು ಬಂಧಿಸಿದ್ದಾರೆ. ಕಲಬುರಗಿಯ ಜವಳಗಾ ಗ್ರಾಮದ ಬಳಿ ಇದೇ 27 ರಂದು ಸಿದ್ರಾಮಪ್ಪ ಎಂಬಾತನ ಕೊಲೆಯಾಗಿತ್ತು. ತನ್ನ ತಾಯಿಗೆ ಬೈದ ಅನ್ನೋ ಕಾರಣಕ್ಕೆ ಮೊಮ್ಮಗ ಆಕಾಶ್ ಕೊಲೆ ಮಾಡಿದ್ದ ಇದೇ ವಿಚಾರಕ್ಕೆ ಕೊಲೆ ಮಾಡಲು ಮಗನಿಗೆ ಪ್ರಚೋದನೆ ಕೊಟ್ಟಳು ಅನ್ನೋ ಕಾರಣಕ್ಕೆ ಆಕಾಶನ ತಾಯಿ ಸರೋಜಾಳನ್ನ ಬಂಧಿಸಲಾಗಿದೆ. ನರೋಣ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು..

Read More

ಹುಬ್ಬಳ್ಳಿ: ಇಲ್ಲಿನ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಗುರುವಾರ ಶ್ರೀರಾಮ ಸೇನಾ ಸಂಘಟನೆ ಕಾರ್ಯಕರ್ತರು ಸರಳವಾಗಿ ಕನಕದಾಸ ಜಯಂತಿ ಆಚರಿಸಿದರು. ಜೈ ಶ್ರೀರಾಮ ಘೋಷಣೆ ಹಾಕುತ್ತ ಮೈದಾನ ಪ್ರವೇಶಿಸಿದ ಕಾರ್ಯಕರ್ತರು, ಗಂಗಾಜಲ ಸಿಂಪಡಿಸಿ, ಮೈದಾನ ಶುದ್ಧೀಕರಿಸುತ್ತ ಪೆಂಡಾಲ್ ಬಳಿ ಬಂದರು‌. ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಪೂರ್ವ ಸಾಮೂಹಿಕವಾಗಿ ಶ್ರೀರಾಮ ಮಂತ್ರ ಪಠಿಸಿದರು. ನಂತರ ಪುನಃ ಪೆಂಡಾಲ್ ಆವರಣದಲ್ಲಿ ಗಂಗಾಜಲ ಸಿಂಪಡಿಸಿ, ಗೋಮಾತಾಕೀ ಜೈ, ಕನಕದಾಸ ಕೀ ಜೈ ಎಂದು ಘೋಷಣೆ ಕೂಗಿದರು. ಸತ್ಯಪ್ರಮೋದೇಂದ್ರ ಸರಸ್ವತಿ ಸ್ವಾಮೀಜಿ ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಂಘಟನೆ ಅಧ್ಯಕ್ಷ ಗಂಗಾಧರ ಕುಲಕರ್ಣಿ ಕಾರ್ಯಕ್ರಮದ ನೇತೃತ್ವವಹಿಸಿದ್ದರು. ಅಣ್ಣಪ್ಪ ದೀವಟಗಿ, ಮಂಜುನಾಥ ಕಾಟಗರ, ಗಣೇಶ ಕದಂ, ಬಸವರಾಜ ಗೌಡರ, ಬಸು ದುರ್ಗದ, ಪ್ರವೀಣ ಎಂ., ಮಹಾಂತೇಶ ತುಂಬಳಿ, ಚಂದ್ರು ಕೋಳೂರು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರು. ಮೈದಾನದಲ್ಲಿ ಜಯಂತಿ ಆಚರಣೆಗೆ ಮಹಾನಗರ ಪಾಲಿಕೆ ಷರತ್ತು ಬದ್ಧ ಅನುಮತಿ ನೀಡಿತ್ತು. ಮುಂಜಾಗ್ರತಾ ಕ್ರಮವಾಗಿ ಮೈದಾನದಲ್ಲಿ ವಾಹನ ಪಾರ್ಕಿಂಗ್…

Read More

ಬೆಂಗಳೂರು: ಜಾತಿಗಣತಿ ವರದಿ ಬಂದ ಬಳಿಕ ಜಾರಿ ಮಾಡಬೇಕಾ? ಬೇಡವಾ ಅಂತ ಸಿಎಂ ಸಿದ್ದರಾಮಯ್ಯ (Siddaramaiah) ತೀರ್ಮಾನ ಮಾಡ್ತಾರೆ ಅಂತ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಸ್ಪಷ್ಟಪಡಿಸಿದ್ದಾರೆ. https://ainlivenews.com/big-relief-for-dk-from-high-court-what-did-former-cm-hdk-say/ ಜಾತಿಗಣತಿ ವರದಿ ಜಾರಿ ವಿಚಾರ‌ವಾಗಿ ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಈಗಾಗಲೇ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರ ಜನವರಿವರೆಗೆ ವಿಸ್ತರಣೆ ಮಾಡಲಾಗಿದೆ. ಅವರು ಮೊದಲು ಜಾತಿಗಣತಿ ವರದಿ (Caste Census Report) ಕೊಡಲಿ ಆಮೇಲೆ ಬಿಡುಗಡೆ ಮಾಡಬೇಕಾ, ಬೇಡ್ವಾ? ಅನ್ನೋದನ್ನ ಚರ್ಚೆ ಮಾಡ್ತೀವಿ. ನಾನು, ‌ಸಿಎಂ ಯಾರು ಕೂಡಾ ವರದಿ ನೋಡಿಲ್ಲ. ವರದಿ ಇಲ್ಲದೇ ಚರ್ಚೆ ಮಾಡೋದು ಸರಿಯಲ್ಲ ಅಂತ ಹೇಳಿದ್ದಾರೆ. ವರದಿ ಸ್ವೀಕಾರ ಮಾಡಬಾರದು ಅಂತ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸಹಿ ಹಾಕಿರೋ ವಿಚಾರಕ್ಕೆ ಪ್ರತಿಕ್ರಿಯಿಸಿ, ವರದಿ ನೋಡದೇ ಸ್ವೀಕಾರ ಮಾಡಬೇಕು-ಬೇಡ ಅನ್ನೋದು ಸರಿಯಲ್ಲ. ಗಣತಿ ಕುರಿತು ಸಾಕಷ್ಟು ವರದಿಗಳು ಬಂದಿವೆ. ಅಂತಿಮ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕ ಜಾರಿ…

Read More

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಚಾಮರಾಜನಗರದಲ್ಲಿ 17.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಕೆಲವೆಡೆ ನಿನ್ನೆ ತುಂತುರು ಮಳೆಯಾಗಿದೆ. ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

Read More

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೈಕೋರ್ಟ್‍ನಿಂದ (Highcourt) ರಿಲೀಫ್ ಸಿಕ್ಕಿಲ್ಲ ಇವರೇ ತೆಗೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. https://ainlivenews.com/from-the-government-to-the-families-of-priests-good-news/ ಈ ವಿಚಾರ ಕುರಿತು ನಗರದಲ್ಲಿಮಾತನಾಡಿದ ಅವರು, ಸ್ವಲ್ಪ ದಿನ ಇದನ್ನ ಮುಂದಕ್ಕೆ ಎಳೆಯಬೇಕಲ್ಲ. ಬಹುಶಃ ಗ್ಯಾರಂಟಿ ಕಾರ್ಯಕ್ರಮದ ಮೂಲಕ ದೇಶದಲ್ಲಿ ಅಧಿಕಾರಕ್ಕೆ ಬಂದುಬಿಡ್ತೀವಿ. ಅಧಿಕಾರಕ್ಕೆ ಬಂದಮೇಲೆ ಎಲ್ಲಾ ಕೇಸ್‍ಗಳನ್ನ ಮುಚ್ಚಿಹಾಕಬಹುದು ಅಂತಾ ಐದಾರು ತಿಂಗಳು ಮುಂದೂಡ್ತಿದ್ದಾರೆ. ಇದೆಲ್ಲಾ ಅವರ ತಂತ್ರಗಾರಿಕೆ ಅಷ್ಟೇ. ಅದು ಮುಂದೆ ಏನೇನಾಗುತ್ತೋ ನೋಡೋಣ ಎಂದು ಹೆಚ್‍ಡಿಕೆ ವಾಗ್ದಾಳಿ ನಡೆಸಿದ್ದಾರೆ. ನಾನು ವಕೀಲನಾಗಿರುವುದಕ್ಕೆ ಕೇಸ್ ವಾಪಸ್ ತೆಗೆದುಕೊಂಡಿದ್ದು ಎಂಬ ಸಿಎಂ ಸಿದ್ದು ಹೇಳಿಕೆಗೆ ವ್ಯಂಗ್ಯವಾಡಿದ ಹೆಚ್‍ಡಿಕೆ, ಅವರು ದೊಡ್ಡ ವಕೀಲರು ಅಂತ ಗೊತ್ತು ನನಗೆ. ಇವರೊಬ್ಬರೇ ಕಾನೂನು ತಿಳಿದುಕೊಂಡಿದ್ದಾರಲ್ವಾ. ಅದಕ್ಕೆ ಅರ್ಕಾವತಿ ಡಿನೋಟಿಫಿಕೇಷನ್ ತೆಗೆದು ರಿಡೋ ಮಾಡಿದ್ರಿ. ಕೆಂಪಣ್ಣನ ಆಯೋಗ ಮಾಡಿ ಉಳಿದುಕೊಂಡ್ರಲ್ಲ. ಆ ರೀತಿಯ ವಕೀಲರು ಇವರು. ಜನಸಾಮಾನ್ಯರಿಗೆ ಒಂದು ನ್ಯಾಯ, ಇವರಿಗೊಂದು ನ್ಯಾಯ. ಆ ವಕೀಲಿಕೆಲಿಯಲ್ಲಿ ಇವರು ಬುದ್ದಿವಂತರಿದ್ದಾರೆ. ಎಸಿಬಿ…

Read More

ವಿಜಯನಗರ: ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿ ದಾಳಿ ನಡೆಸಿವೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದಲ್ಲಿ ದಾಳಿ ನಡೆಸಲಾಗಿದ್ದು, ಮಹಮ್ಮದ್ ರಫಿ (50) ಎಂಬ ನಕಲಿ ವೈದ್ಯನನ್ನು ಬಂಧಿಸಲಾಗಿದೆ. ಶಿವಪುರ ಗ್ರಾಮದ ತನ್ನ ಮನೆಯಲ್ಲಿ ನಕಲಿ ವೈದ್ಯ ಮಹಮ್ಮದ್ ರಫಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ.  ವಿಜಯನಗರ DHO ಡಾ. ಶಂಕರ್ ನಾಯ್ಕ್, ಕೂಡ್ಲಿಗಿ ಸಿಪಿಐ ಸುರೇಶ್ ತಳವಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಾಳಿಯ ವೇಳೆ ಅನೇಕ ಸಿರಿಂಜ್‌ಗಳು, ಮಾತ್ರೆಗಳು, ಸ್ಟೆತೋಸ್ಕೋಪ್ ಸೇರಿದಂತೆ ಇತರೆ ವೈದ್ಯಕೀಯ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ. ಮೊಹಮದ್ ರಫಿ ಮೇಲೆ ಹಲವು ದೂರುಗಳು ಬಂದಿದ್ದವು. ದೂರಿನ ಆಧಾರ ಮೇಲೆ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ದಾಳಿ ನಡೆಸಿವೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: 108 ಅಂಬುಲೆನ್ಸ್‌ (108 Ambulance) ಕೆಲ ಚಾಲಕರಿಗೂ ಖಾಸಗಿ ಆಸ್ಪತ್ರೆಯವರಿಗೂ ಒಂದು ಒಪ್ಪಂದ ಇರುತ್ತದೆ. 108 ಅಂಬುಲೆನ್ಸ್‌ ಚಾಲಕರು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಬಿಡ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K.Shivakumar) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಬಳಿ ನಡೆದ ಕಾರ್ಯಕ್ರಮದಲ್ಲಿ ನೂತನ 262 ಅಂಬುಲೆನ್ಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದರು. ಈ ವೇಳೆ 108 ಅಂಬುಲೆನ್ಸ್‌ ಕೆಲ ಚಾಲಕರ ವಿರುದ್ಧ ಡಿಕೆಶಿ ಅಸಮಾಧಾನ ಹೊರಹಾಕಿದರು. ಕನಕಪುರದಲ್ಲಿ ಮೆಡಿಕಲ್ ಕಾಲೇಜು ಬೇಕು ಅಂತ ಯಾಕೆ ಬಡಿದುಕೊಳ್ತೇನೆ ಗೊತ್ತಾ? 108 ಅಂಬುಲೆನ್ಸ್‌ನವರಿಗೂ ಖಾಸಗಿ ಆಸ್ಪತ್ರೆಯವರಿಗೂ ಒಂದು ಒಪ್ಪಂದ ಇರುತ್ತೆ. 108 ಅಂಬುಲೆನ್ಸ್‌ ಚಾಲಕರಿಗೆ ಈ ಚೇಷ್ಟೆ ಇದೆ. ರೋಗಿಗಳನ್ನ ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಬಿಡ್ತಾರೆ ಎಂದು ಗರಂ ಆದರು. ಅಲ್ಲಿಗೆ ಹೋದ ಮೇಲೆ ಬಿಲ್ ಜಾಸ್ತಿ ಆಗೇ ಆಗುತ್ತೆ. ಅವರು ಬಿಲ್ ಕೊಡುವುದಕ್ಕೆ ಆಗದೇ ಶಾಸಕರ…

Read More

ಮಂಡ್ಯ: ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ  ಬೈಕ್’​​ನಲ್ಲಿ ಬಂದು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ (35)ಬಂಧಿತ ಆರೋಪಿ. ಚಂದ್ರಶೇಖರ ಹೆಲ್ಮೆಟ್ ಧರಿಸಿ ಬೈಕ್​ನಲ್ಲಿ ಬಂದು ರಸ್ತೆಯಲ್ಲಿ ಹೋಗ್ತಿದ್ದ ಒಂಟಿ ಮಹಿಳೆಯರಿಗೆ ಕಿರುಕುಳ‌ ಕೊಡುತ್ತಿದ್ದನು. ಚಂದ್ರಶೇಖರ ಕಳೆದ ಒಂದು ತಿಂಗಳಿಂದ ಹಲವೆಡೆ ವಿಕೃತವಾಗಿ ನಡೆದುಕೊಂಡಿದ್ದನು. ಬುಧವಾರ ಸಂಜೆ ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದಾನೆ. ಈ ವೇಳೆ ಆರೋಪಿಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಂದ ಮಾಹಿತಿ ಪಡೆದ ಪೊಲೀಸರು ಸಿಸಿಕ್ಯಾಮರಾ ದೃಶ್ಯಾವಳಿ ಆಧರಿಸಿ ಚಂದ್ರಶೇಖರ್​ನನ್ನು ಬಂಧಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan), ಕೋರ್ಟಿನಿಂದ ನೆಮ್ಮದಿ ಸಿಕ್ಕಿದ್ದರೂ, ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi)  ಮಾತ್ರ ನೆಮ್ಮದಿ ನೀಡುತ್ತಿಲ್ಲ. ಪದೇ ಪದೇ ನಟನಿಗೆ ಜೀವ ಬೆದರಿಕೆ ಹಾಕುತ್ತಿದ್ದಾನೆ. ಮತ್ತೆ ಶಾರುಖ್ ಇ-ಮೇಲ್ ಖಾತೆಗೆ ಸಂದೇಶವೊಂದನ್ನು ಕಳುಹಿಸಿದ್ದು, ವಿದೇಶದಲ್ಲಿ ನೆಲೆಸೋಕೆ ವಿಸಾ ಇರಬಹುದು. ಸಾವಿಗೆ ಇಲ್ಲ ಎಂದು ಬರೆದಿದ್ದಾನೆ. ಲಾರೆನ್ಸ್ ನಿಂದ ಜೀವ ಬೆದರಿಕೆ (Life Threat) ಮೇಲ್ ಬರುತ್ತಿದ್ದಂತೆಯೇ ಮತ್ತೆ ಪೊಲೀಸ್ ಅಧಿಕಾರಿಗಳು ಸಲ್ಮಾನ್ ಮನೆಯ ಭದ್ರತೆಯನ್ನು ತಪಾಸಣೆ ಮಾಡಿದ್ದಾರೆ. ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗದಿರುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ, ಮತ್ತಷ್ಟು ಭದ್ರತೆಯನ್ನು ಹೆಚ್ಚಿಸುವ ಕುರಿತಂತೆ ಚರ್ಚಿಸಿದ್ದಾರೆ. ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಈ ಹಿಂದೆ ಲಾರೆನ್ಸ್ ಸಹಚರರನ್ನು ಬಂಧಿಸಿ ಅಗತ್ಯ ಮಾಹಿತಿಯನ್ನು ಮುಂಬೈ ಪೊಲೀಸ್ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಗಾಬರಿ ಹುಟ್ಟಿಸುವಂತಹ ಹೇಳಿಕೆಗಳು ಆ ಟೀಮ್ ನಿಂದ ಬಂದಿವೆ ಎಂದು ಸುದ್ದಿ ಆಗಿತ್ತು. ಹಾಗಾಗಿ ಈ ಹಿಂದೆಯೂ…

Read More