ಬೆಂಗಳೂರು: ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ಪ್ರಕಟಣೆ ಮಾಡಿದೆ. https://ainlivenews.com/caste-census-issue-we-are-committed-to-our-partys-stand-dk-shivakumar/ ಪಿಎಸ್ಐ ಮರುಪರೀಕ್ಷೆಯನ್ನು ಸ್ವತಂತ್ರ ಸಂಸ್ಥೆಯಿಂದ ನಡೆಸಲು ಹೈಕೋರ್ಟ್ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಪಿಎಸ್‌ಐ ಮರು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ಪ್ರಕಟಿಸಿದೆ. ಈ ಹಿಂದೆ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಈ ನೇಮಕಾತಿ ಸಂಬಂಧದ ಅಧಿಸೂಚನೆಯನ್ನು ರದ್ದುಪಡಿಸಿ, ನೂತನವಾಗಿ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಆರೋಪ ರಹಿತ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೇ ನ.10 ರಂದು ಹೈಕೋರ್ಟ್ ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಮೂಲಕ ನ್ಯಾಯಾದೀಶ ಪಿ.ಎಸ್.ದಿನೇಶ್ ಕುಮಾರ್, ಟಿ.ಜಿ.ಶಿವಶಂಕರೇಗೌಡರಿದ್ದ ಪೀಠ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿತ್ತು.
Author: AIN Author
ಎರಡು ದಿನಗಳ ಹಿಂದೆಯಷ್ಟೇ ಅನಾರೋಗ್ಯದ ಕಾರಣದಿಂದಾಗಿ ಖಾಸಗಿ ಆಸ್ಪತ್ರೆಗೆ (Hospital) ದಾಖಲಾಗಿದ್ದ ನಟ, ರಾಜಕಾರಣಿ ವಿಜಯಕಾಂತ್ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಮಾಧ್ಯಮಗಳ ವರದಿ ಮಾಡುವೆ. ಜೊತೆಗೆ ಅವರಿಗೆ ಚಿಕಿತ್ಸೆಯನ್ನು ವೈದ್ಯರು ಐಸಿಯುವಿನಲ್ಲೇ ಮುಂದುವರೆಸಿದ್ದಾರೆ. ತಮಿಳು ನಾಡಿನ ಡಿಎಂಡಿಕೆ (DMDK) ಮುಖ್ಯಸ್ಥರೂ ಆಗಿರುವ ಕ್ಯಾಪ್ಟನ್ ವಿಜಯಕಾಂತ್ ಕಳೆದೆರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ಎರಡು ದಿನಗಳ ಹಿಂದೆ ವರದಿ ಮಾಡಿವೆ. ಕ್ಯಾಪ್ಟನ್ ವಿಜಯಕಾಂತ್ (Vijayakanth) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿತ್ತು. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದರು
ಡೆಹ್ರಾಡೂನ್: ʻʻಅಮ್ಮ ನನ್ನ ಬಗ್ಗೆ ಚಿಂತಿಸಬೇಡ, ನಾನು ಚೆನ್ನಾಗಿದ್ದೇನೆ, ದಯವಿಟ್ಟು ನೀವು ಮತ್ತು ಅಪ್ಪ, ಸಮಯಕ್ಕೆ ಸರಿಯಾಗಿ ಊಟ ಮಾಡಿ, ನಿಮ್ಮ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಿ…ʼʼ ಕಳೆದ 10 ದಿನಗಳಿಂದ ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರೊಬ್ಬರು (Labor) ತಮ್ಮ ತಾಯಿಗೆ ತಲುಪಿಸಿದ ಭಾವುಕ ಸಂದೇಶ ಇದಾಗಿತ್ತು. ಸಿಲ್ಕಿಯಾರ ಸುರಂಗದೊಳಗೆ (Silkyara Tunnel) ಸಿಲುಕಿರುವ 41 ಕಾರ್ಮಿಕರಿಗೆ ಕಳೆದ 10 ದಿನಗಳಿಂದ 6 ಇಂಚಿನ ಪೈಪ್ ಮೂಲಕ ನೀರು, ಆಹಾರ ಕಳುಹಿಸಲಾಗುತ್ತಿದೆ. ಇದೀಗ ಕಾರ್ಮಿಕರು ಸುರಕ್ಷಿತರಾಗಿದ್ದಾರೆಯೇ ಎಂಬುದನ್ನು ತಿಳಿದುಕೊಳ್ಳಲು ಇದೇ ಪೈಪ್ ಮೂಲಕ ಎಂಡೋಸ್ಕೋಪಿ ಕ್ಯಾಮೆರಾವನ್ನ ಸುರಂಗದೊಳಗೆ ಕಳುಸಿದ್ದು, ಕಾರ್ಮಿಕರ ದೃಶ್ಯಗಳನ್ನ ಸೆರೆಹಿಡಿಯಲಾಗಿದೆ. ಸ್ವಲ್ಪ ಸಮಯದ ನಂತ್ರ ಕಾರ್ಮಿಕರೊಂದಿಗೆ ಸಂವಹನ ನಡೆಸಲಾಗಿದ್ದು, ಇದರಿಂದ ಕಾರ್ಮಿಕರ ರಕ್ಷಣೆಗೆ ಬಹುತೇಕ ಪರಿಹಾರ ಸಿಕ್ಕಂತಾಗಿದೆ. ರಕ್ಷಣಾ ತಂಡದ ಅಧಿಕಾರಿಗಳು ಸುರಂಗದಲ್ಲಿ ಸಿಲುಕಿಕೊಂಡವರೊಂದಿಗೆ ಸಂವಹನ ನಡೆಸುವ ಕಾರ್ಯವನ್ನು ಯಶಸ್ವಿಯಾಗಿ ಮಾಡಿದ್ದಾರೆ. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಈ ವೇಳೆ ಸುರಂಗದಲ್ಲಿ ಸಿಲುಕಿದ ಕಾರ್ಮಿಕರಲ್ಲಿ ಒಬ್ಬರಾದ ಜೈದೇವ್, ಮೇಲ್ವಿಚಾರಕರೊಂದಿಗೆ ಮಾತನಾಡುತ್ತಾ ತನ್ನ ಹೇಳಿಕೆಯನ್ನ…
ದೊಡ್ಮನೆಯಲ್ಲಿ ಮೊದಲು ಇದ್ದ ಸ್ನೇಹ, ಪ್ರೀತಿ ಈಗ ದ್ವೇಷಕ್ಕೆ ತಿರುಗಿದೆ. ತನಿಷಾ, ಕಾರ್ತಿಕ್ (Karthik Mahesh) ಜೊತೆಗಿನ ಸಂಗೀತಾ ಮುನಿಸು ಆಟದಲ್ಲೂ ಮುಂದುವರೆದಿದೆ. ಸವಾಲು ಎಸೆಯೋ ಟಾಸ್ಕ್‌ವೊಂದರಲ್ಲಿ ವರ್ತೂರುಗೆ ಮತ್ತು ತನಿಷಾ (Tanisha Kuppanda) ಹಸಿಮೆಣಸಿನಕಾಯಿ ತಿನ್ನಿಸಿ ಬೆವರಿಳಿಸಿದ್ದಾರೆ. ದೊಡ್ಮನೆಯಲ್ಲಿ ವೈಯಕ್ತಿಕ ದ್ವೇಷಗಳು ಈಗ ಆಟದಲ್ಲೂ ಎದ್ದು ಕಾಣ್ತಿದೆ. ತನಿಷಾ (Tanisha) ಮತ್ತು ಕಾರ್ತಿಕ್‌ಗೆ ಕೈ ಕೊಟ್ಟು ಈಗ ಚಮಚ ನಮ್ರತಾ ಜೊತೆ ಸಂಗೀತಾ (Sangeetha Sringeri) ಸೇರಿಕೊಂಡಿದ್ದಾರೆ. ಕಿಚ್ಚನ ಬುದ್ಧಿ ಮಾತಿಗೂ ಮಣಿಯದ ಸಂಗೀತಾ ಕಾರ್ತಿಕ್ ಟೀಮ್ ಬಿಟ್ಟು ವಿನಯ್ ಜೊತೆ ಸೇರಿಕೊಂಡಿದ್ದಾರೆ. ಇದೆಲ್ಲದರ ನಡುವೆ ಹೊಸ ಟಾಸ್ಕ್‌ವೊಂದನ್ನ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀಡಿದ್ದಾರೆ ಟಾಸ್ಕ್‌ಗಾಗಿ ಮತ್ತೆ 2 ತಂಡಗಳಾಗಿ ಬಿಗ್ ಬಾಸ್ ವಿಂಗಡಿಸಿದ್ದಾರೆ. ಟೀಮ್ ಗಜಕೇಸರಿ ಮತ್ತು ಟೀಮ್ ಸಂಪತ್ತಿಗೆ ಸವಾಲ್ ಎಂದು ತಂಡಗಳನ್ನ ಮಾಡಲಾಗಿದೆ. ಎದುರಾಳಿ ತಂಡಕ್ಕೆ ಟಾಸ್ಕ್ ನೀಡಿ ಸವಾಲು ಎಸೆಯಬೇಕು. ಅದನ್ನ ಪೂರ್ಣ ಮಾಡದಿದ್ದರೆ ಎದುರಿರುವ ತಂಡಕ್ಕೆ ವಿಶೇಷ ಅಧಿಕಾರ ಸಿಗಲಿದೆ. ಈ ಅನುಸಾರ,…
ಮಂಗಳೂರು: ಐದಾರು ತಿಂಗಳಲ್ಲೇ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ ಎಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಹೇಳಿದರು. ಇದು ರೈತ ವಿರೋಧಿ ಸರ್ಕಾರ, ಬರಗಾಲ ಇದ್ದರೂ ಜವಾಬ್ದಾರಿ ಇಲ್ಲ. ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲ ಸಂಪೂರ್ಣ ವಿಫಲವಾಗಿದೆ. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಒಬ್ಬ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಬರ ಪ್ರವಾಸ ಮಾಡಿಲ್ಲ. ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡುತ್ತೆ ಅಂತಾ ಭಾವಿಸಿದ್ದೆವು. ಆದರೆ ನಿನ್ನೆ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಬೇರೆ ಚರ್ಚೆ ಆಗಿದೆ. ಬರದ ಬದಲು ಲೋಕಸಭಾ ಚುನಾವಣೆ ಗೆಲ್ಲುವ ಬಗ್ಗೆ ಚರ್ಚೆ ಆಗಿದೆ ಎಂದು ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ದಾವಣಗೆರೆ: ಜಿಲ್ಲೆಯಲ್ಲಿ ರೈತರು ಸುಮಾರು 1.4 ಲಕ್ಷ ಎಕರೆಯಲ್ಲಿ ಭತ್ತ ಬೆಳೆದಿದ್ದಾರೆ. ಈಗಾಗಲೇ ಶೇಕಡ 20 ರಷ್ಟು ಕೊಯ್ಲಿಗೆ ಬಂದಿದ್ದು, ಕಟಾವು ಕಾರ್ಯ ಪ್ರಾರಂಭವಾಗಿದೆ. ಇನ್ನುಳಿದ ಶೇಕಡ 50 ರಷ್ಟು ಭತ್ತದ ಬೆಳೆ ಇನ್ನು ಎಂಟೇತ್ತು ದಿನಗಳಲ್ಲಿ ಕೊಯ್ಲಿಗೆ ಬರುತ್ತದೆ. ಆದರೆ ಇನ್ನುಳಿದ ಶೇಕಡ 30 ರಷ್ಟು ಭತ್ತದ ಬೆಳೆ ಕಾಳು ಕಟ್ಟುವ ಅಂತದಲ್ಲಿದೆ. ಈ ಬೆಳೆ ಈ ತಿಂಗಳ ಅಂತ್ಯಕ್ಕೆ ಕೊಯ್ಲಿಗೆ ಬರುತ್ತದೆ. ಈ ಬೆಳೆ ಕಾಳು ಕಟ್ಟುವ ಅಂತದಲ್ಲಿದಿರುವುದರಿಂದ ನಿತ್ಯ ನೀರು ಬೇಡುತ್ತದೆ. ಇಲ್ಲವಾದರೆ ಕಾಳು ಸಂಪೂರ್ಣ ಜಲ್ಲಾಗುತ್ತದೆ. ಇದರಿಂದ ರೈತರಿಗೆ ಕೈಯಿಗೆ ಬಂದ ತುತ್ತು ಬಾಯಿಗೆ ಬರದಂತೆ ಆಗುತ್ತದೆ. ಆದ್ದರಿಂದ ಈ ತಿಂಗಳ ಅಂತ್ಯದವರೆಗೆ ಭದ್ರಾ ನೀರು ಹರಿಸಬೇಕು ಎಂದು ಒತ್ತಾಯಿಸುತ್ತೇವೆ. ಈಗಾಗಲೇ ಭತ್ತದ ಪೈರು ಕೊಯ್ಲಿಗೆ ಬಂದಿರುವುದನ್ನು ಬಿಟ್ಟು ಕಾಳು ಕಟ್ಟುವ ಅಂತದಲ್ಲಿರುವ ಪೈರಿಗೆ ಮಾತ್ರ ನೀರು ಒದಗಿಸುವ ಕಾರ್ಯವಾಗಬೇಕು.ಪ್ರಸ್ತುತ ಈಗಾಗಲೇ ಕೊಯ್ಲಿಗೆ ಬಂದಿರುವ ಭಾಗಕ್ಕೂ ನೀರು ನಿರಂತರವಾಗಿ ಹರಿಸಲಾಗುತ್ತಿದೆ. ಇದರಿಂದ ನೀರು ವ್ಯರ್ಥವಾಗಿ ಹರಿದು…
ಗದಗ: ನ. 25 ರಂದು ಗದಗ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆ ಆಯೋಜನೆ ಮಾಡ ಲಾಗಿದೆ ಎಂದು ಗದಗ ನಗರದ ಪತ್ರಿಕಾ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವದ ಉಪನಿರ್ದೆಶಕ ಡಾ. ಕೃಷ್ಣಪ್ಪ ಸುದ್ದಿಗೋಷ್ಠಿ ನಡೆಸಿ ಹೇಳಿದರು. ಬೆಳಿಗ್ಗೆ 10 ಘಂಟೆಗೆ ಪ್ರಾರಂಭವಾಗಲಿರೋ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಯಾಗಿದ್ದು, ಮಧ್ಯಾನ್ಹ 3 ಘಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಸಂಸದೀಯ ವ್ಯವಹಾರಗಳ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ, ನರೇಗಲ್ ಸಂಯುಕ್ತ ಆಶ್ರಯದಲ್ಲಿ ಆಯೋಜನೆ ಮಾಡಲಾಗಿದ್ದು, 32 ಜಿಲ್ಲೆಗಳ ಒಟ್ಟು 64 ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಲಿರೋ ಹಾಲಕೆರೆ ಅನ್ನದಾನೇಶ್ವರ ಮಠದ ಶ್ರೀ. ಮ.ನಿ.ಪ್ರ. ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು. ವಿ.ಪ. ಸಭಾಪತಿ ಬಸವರಾಜ ಹೊರಟ್ಟಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಘನ ಉಪಸ್ಥಿತಿರಿರದ್ದಾರೆ. ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ…
ಬೆಂಗಳೂರು: ಜಾತಿಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. https://ainlivenews.com/a-leopard-was-spotted-near-the-gate-of-veteran-actress-lilavatis-garden/ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು, ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಬೇಧ ಮರೆತು ಹೋರಾಟ ಮಾಡಲಾಗುತ್ತಿದೆ. ಆದರೇ, ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ ಎಂದು ತಿಳಿಸಿದರು. ನೀವು ಕೂಡ ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ, “ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು…
ಬೆಂಗಳೂರು: ನವೆಂಬರ್ 25ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿರುವ ಪ್ರಧಾನಿ ಮೋದಿ HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ತೆಲಂಗಾಣಕ್ಕೆ ತೆರಲಿ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. https://ainlivenews.com/a-new-couple-dressed-as-farmers-pre-wedding-shoot/ ಇನ್ಮುಂದೆ ನೈಸ್ ರಸ್ತೆಯಲ್ಲೂ ಬಿಎಂಟಿಸಿ ಬಸ್ಗಳು ಸಂಚರಿಸಲಿವೆ. ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್ ರಸ್ತೆಯಲ್ಲೂ ಬಿಎಂಟಿಸಿ ಬಸ್ ಗಳ ಸಂಚಾರ. ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರ ರೂಟ್ ಗೆ ಹೊಸ ಮಾರ್ಗವಾಗಿ ಬಿಎಂಟಿಸಿ ಬಸ್ ಗಳ ಸೇವೆ. ಈ ಎರಡು ಸ್ಥಳಗಳಿಗೆ ನೈಸ್ ರೋಡ್ ಮೂಲಕವಾಗಿ ಬಿಎಂಟಿಸಿ ಬಸ್ ಗಳು ಸಂಚಾರ ನಡೆಸಲಿವೆ.
ಗದಗ: ನ.24 ರಿಂದ ಡಿ. 3ರ ವರೆಗೆ ಗದಗನಲ್ಲಿ ಕೊಪ್ಪಳದ ಅಭಿನವ ಗವಿಸಿಧ್ದೇಶ್ವರ ಸ್ವಾಮೀಜಿಗಳಿಂದ ಆಧ್ಯಾತ್ಮ ಪ್ರವಚನ ನಡೆಯಲಿದೆ ಎಂದು ಗದುಗಿನ ಪತ್ರಿಕಾಭವನದಲ್ಲಿ ಮಾಜಿ ಶಾಸಕ ಡಿ ಆರ್ ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಹೇಳಿದರು. ಪ್ರತಿನಿತ್ಯ ಸಂಜೆ 6 ರಿಂದ 7 ಘಂಟೆಯವರೆಗೆ ಆಧ್ಯಾತ್ಮ ಪ್ರವಚನ ನಡೆಯಲಿದ್ದು, ಗದಗ ನಗರದ ವಿದ್ಯಾದಾನ ಸಮಿತಿ ಶಾಲೆ ಮೈದಾನದಲ್ಲಿ ಪ್ರವಚನ ಆಯೋಜನೆ ಮಾಡಲಾಗಿದೆ. ಉದ್ಘಾಟನಾ ಕಾರ್ಯಕ್ರಮಗಳಲ್ಲಿ ವಿವಿಧ ಮಠಾಧಿಶರ ಸಾನಿಧ್ಯ ವಹಿಸಲಿದ್ದು, ಜೊತೆಗೆ ಗದಗ ನಗರ ಸೇರಿದಂತೆ ತಾಲೂಕಿನ ವಿವಿಧ ಗ್ರಾಮೀಣ ಭಾಗಗಳಲ್ಲಿ ಸದ್ಭಾವನಾ ಪಾದಯಾತ್ರೆ ನಡೆಯಲಿದೆ. ಸತ್ಸಂಗದಿಂದ ನಮ್ಮ ಬದುಕು, ಕೌಟುಂಬಿಕ ಬದುಕು ಸಾಧ್ಯ, ಮನಸ್ಸನ್ನು ಕೂಡಿಸೋ ಕೆಲಸ ಇಂದಿನ ದಿನಗಳಲ್ಲಿ ಅವಶ್ಯಕವಾಗಿದ್ದು, ಉತ್ತಮ ವಾತಾವರಣ ನಿರ್ಮಾಣಕ್ಕೆ ಆಧ್ಯಾತ್ಮ ಪ್ರವಚನಗಳಿಂದ ಸಾಧ್ಯವಾಗುತ್ತದೆ ಎಂದು ಮಾಜಿ ಶಾಸಕ ಡಿ ಆರ್ ಪಾಟೀಲ್ ಹೇಳಿದರು.