ಬೆಂಗಳೂರು: ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಇರುವ ಹಿರಿಯ ನಟಿ ಲೀಲಾವತಿ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ಚಿರತೆ ಕಾಣಿಸಿಕೊಂಡಿದೆ. ಸೋಲದೇವನಹಳ್ಳಿ, ಬಾಣಸವಾಡಿ, ಆಗಳಗುಪ್ಪೆ, ಚೋಡಸಂದ್ರ, ಹಂದಿಗುಟ್ಟೆ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ತಾಜಾ ಸುದ್ದಿಗಾಗಿ ಹೀಗೆ ನೋಡ್ತಾ ಇರಿ AIN ನ್ಯೂಸ್ …..
Author: AIN Author
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ (WestBengal) 20 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಘೋಷಣೆ ಮಾಡಿದ್ದಾರೆ. ಕೋಲ್ಕತ್ತಾದಲ್ಲಿನ 7ನೇ ಬೆಂಗಾಲ್ ಜಾಗತಿಕ ಉದ್ಯಮ ಸಮಾವೇಶದಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ರಿಲಯನ್ಸ್ ಇದುವರೆಗೆ ಸುಮಾರು 45,000 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಹಾಗೆಯೇ ಮುಂದಿನ ಮೂರು ವರ್ಷಗಳಲ್ಲಿ ನಾವು 20 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೂಡಿಕೆ ಮಾಡುವುದಾಗಿ ಘೋಷಿಸಿದರು. ದೂರಸಂಪರ್ಕ, ರೀಟೇಲ್ ಮತ್ತು ಜೈವಿಕ ಇಂಧನ ಕ್ಷೇತ್ರಗಳಲ್ಲಿ ಈ 20 ಸಾವಿರ ಕೋಟಿ ಹೂಡಿಕೆ ಮಾಡಲಾಗುವುದು. ನಾವು 5ಜಿ ತಂತ್ರಜ್ಞಾನವನ್ನು ರಾಜ್ಯದ ಮೂಲೆ ಮೂಲೆಗೆ ಒಯ್ಯುತ್ತಿದ್ದೇವೆ. ವಿಶೇಷವಾಗಿ ಗ್ರಾಮೀಣ ಭಾಗದ ಬಂಗಾಳವನ್ನು ಸಂಪರ್ಕಿಸಲಾಗುತ್ತಿದೆ. ನಾವು ಬಂಗಾಳದ ಬಹುತೇಕ ಭಾಗಗಳನ್ನು ಆವರಿಸಿದ್ದೇವೆ. https://twitter.com/ANI/status/1726927310216151366?ref_src=twsrc%5Etfw%7Ctwcamp%5Etweetembed%7Ctwterm%5E1726927310216151366%7Ctwgr%5Ebe79ae2c3dcf1535a87472d3bbf4c344fc0ca814%7Ctwcon%5Es1_&ref_url=https%3A%2F%2Fpublictv.in%2Fmukesh-ambani-announces-investment-of-rs-20000-crore-in-west-bengal%2F ಜಿಯೋ ನೆಟ್‍ವರ್ಕ್ ರಾಜ್ಯದ ಜನಸಂಖ್ಯೆಯ 98.8%ರಷ್ಟು ಮತ್ತು ಕೋಲ್ಕತ್ತಾ ಟೆಲಿಕಾಂ ವಲಯದಲ್ಲಿ 100%ರಷ್ಟು ಜನಸಂಖ್ಯೆಯನ್ನು ತಲುಪಿದೆ. ಜಿಯೋದ ಪ್ರಬಲ ನೆಟ್‍ವರ್ಕ್ ಪಶ್ಚಿಮ ಬಂಗಾಳದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗದ…
ಬೆಂಗಳೂರು: ವಿದ್ಯಾರ್ಥಿನಿಗೆ ಚುಂಬಿಸಲು ಯತ್ನಿಸಿದ ಹೋಟೆಲ್ ಸಿಬ್ಬಂದಿಯನ್ನು ಪೊಲೀಸರು ಬಂಧನವಾಗಿರುವ ಘಟನೆ ಸೋಲದೇವನಹಳ್ಳಿಯಲ್ಲಿ ನಡೆದಿದೆ. https://ainlivenews.com/a-new-couple-dressed-as-farmers-pre-wedding-shoot/ ಕಬೀರ್, ಬಂಧಿತ ಆರೋಪಿ, ನಗರದ ಸೋಲದೇವನಹಳ್ಳಿ ಬಳಿ ಪಿಜಿಯೊಂದರಲ್ಲಿ ವಾಸವಾಗಿದ್ದ ಯುವತಿ ಪಿಜಿ ಪಕ್ಕದಲ್ಲೇ ಇದ್ದ ಹೋಟೆಲ್ ನಲ್ಲಿ ಊಟಕ್ಕೆ ಹೋಗಿದ್ದಾರೆ, ಲೈಂಗಿಕ ಕಿರುಕುಳ ನೀಡಿದ ಆರೋಪಿ ಚುಂಬಿಸಲು ಮುಂದಾಗಿದ್ದಾನೆ, ಕೂಡಲೇ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಸಂಬಂಧ ಆರೋಪಿ ಕಬೀರ್ ನನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ರಾಕೇಶ್ (22) ಮೃತ ದುರ್ದೈವಿಯಾಗಿದ್ದು, ಇತ್ತೀಚೆಗಷ್ಟೇ ಕೆಲಸಕ್ಕೆ ಸೇರಿದ್ದ ರಾಕೇಶ್ ನಿನ್ನೆ ನೈಟ್ ಶಿಫ್ಟ್ ಕೆಲಸದಲ್ಲಿದ್ದರು. ಇಂದು ಬೆಳಿಗ್ಗೆ ಬೂದಿ ತೆಗೆಯುವ ಮಷೀನ್ ಬೆಲ್ಟ್‌ಗೆ ಸಿಲುಕಿ ಮೃತಪಟ್ಟಿದ್ದಾರೆ. ತಕ್ಷಣವೇ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಇನ್ನೂ ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಬೆಂಗಳೂರು: ರೈತರ ವೇಷದಲ್ಲಿ ನವ ಜೋಡಿಯೊಂದು ಪ್ರೀ ವೆಡ್ಡಿಂಗ್ ಶೂಟ್ (Agriculture Pre Wedding Shoot) ಮಾಡಿಸಿಕೊಳ್ಳುವ ಮೂಲಕ ಸುದ್ದಿಯಾಗಿದೆ. ಚಾಮರಾಜನಗರ (Chamarajangara) ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ ಯುವ ರೈತ ಅಭಿಲಾಷ್ ಮತ್ತು ಚನ್ನಪಟ್ಟಣದ ಕೃತಿಕಾ ಅವರು ವಿಭಿನ್ನವಾಗಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿಸಿದ್ದಾರೆ. ಪ್ರವಾಸಿ ಸ್ಥಳ, ಜಲಪಾತ, ಸೇತುವೆ ಇತ್ಯಾದಿ ಸ್ಥಳಗಳಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡುವುದು ಇಂದು ಸಹಜ. ಆದರೆ ಇವರ ಪ್ರೀ ವೆಡ್ಡಿಂಗ್ ಶೂಟ್‌ನಲ್ಲಿ ಉಳುಮೆ, ಎತ್ತಿ ಬಂಡಿಯಲ್ಲಿ ಸವಾರಿ, ರಾಗಿ ಮುದ್ದೆ, ಉಪ್ಸಾರು ಮನೆ ಮುಂದೆ ರಂಗೋಲಿ ಹೀಗೆ ಕೃಷಿ ಚಟುವಟಿಕೆಗಳ ಅನಾವರಣ ಮಾಡಿದ್ದಾರೆ. ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಮಾತಿನ ಮಧ್ಯೆ ಈ ಯುವ ರೈತನ ‘ಕೃಷಿ ಪ್ರೀ ವೆಡ್ಡಿಂಗ್ ಶೂಟ್’ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರು: “ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ಜಾತಿ ಗಣತಿ ವರದಿ ತಿರಸ್ಕಾರಕ್ಕೆ ನೀವು ಸಹಮತ ವ್ಯಕ್ತಪಡಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು. “ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು, ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಬೇಧ ಮರೆತು ಹೋರಾಟ ಮಾಡಲಾಗುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ” ಎಂದು ತಿಳಿಸಿದರು. ನೀವು…
ತುಮಕೂರು: ಬಾವಿಗೆ ಜಿಗಿದು ಎರಡು ವರ್ಷದ ಪುಟ್ಟ ತಂಗಿಯನ್ನ ಕಾಪಾಡಿದ್ದ ಪೋರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಲಭಿಸಿದೆ. ಹೌದು ತನ್ನ ಎರಡು ವರ್ಷದ ತಂಗಿಯನ್ನ ಕಾಪಾಡಲು ಜೀವ ಪಣಕ್ಕಿಟ್ಟು ಬಾವಿಗೆ ಜಿಗಿದು ತಂಗಿಯನ್ನ ಕಾಪಾಡಿದ್ದ ಶಾಲು ಎಂಬ 8 ವರ್ಷದ ಬಾಲಕಿ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ವಿಜೇತೆಯಾಗಿದ್ದಾಳೆ. ತುಮಕೂರು ತಾಲೂಕಿನ ಕುಚಂಗಿ ಪಾಳ್ಯದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಾಳೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶಾಲುಗೆ ಅಧಿಕೃತ ಅಹ್ವಾನ ನೀಡಲಾಗಿದೆ. ಆಟ ಆಡುವ ವೇಳೆ ಬಾವಿಗೆ ಬಿದ್ದಿದ್ದ ಶಾಲುವಿನ ತಂಗಿ ಎರಡು ವರ್ಷದ ಪುಟ್ಟ ಕಂದಮ್ಮನನ್ನು ಲೈಫ್ ಜಾಕೆಟ್ ತೊಟ್ಟು ಬಾವಿಗೆ ಜಿಗಿದು ಕಾಪಾಡಿದ್ದಾಳೆ. ಕಳೆದ ಜೂನ್ ನಲ್ಲಿ ಈ ಘಟನೆ ನಡೆದಿದ್ದು, ಶಾಲು ಶೌರ್ಯ ಮೆಚ್ಚಿ ಸರ್ಕಾರ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ನೀಡುತ್ತಿದೆ. ನಾಳೆ ಬೆಂಗಳೂರು ಜವಹಾರ ಬಾಲಭವನದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.
ತನ್ನ ಸ್ನೇಹಿತರಿಂದ ದೂರವಾಗಿ ವಿನಯ್ ತಂಡ ಸೇರಿಕೊಂಡಿದ್ದ ಸಂಗೀತಾ, ಕಾರ್ತಿಕ್ ತಲೆಬೋಳಿಸಿಕೊಳ್ಳುವ ಸವಾಲ್ ಕೂಡ ಹಾಕಿದ್ದರು. ಹಾಗೆಯೇ ತನಿಷಾ ಮೆಣಸಿನಕಾಯಿ ತಿನ್ನಲೂ ಕಾರಣರಾಗಿದ್ದರು. ಸ್ನೇಹಿತರ ನೋವಿಗೆ ಕಾರಣರಾದ ಬಗ್ಗೆ ಅವರಲ್ಲಿ ಪಶ್ಚಾತ್ತಾಪ ಹುಟ್ಟಿದೆಯಾ? ಅದೇ ಅವರು ಮನೆಯಿಂದ ಹೊರಬರಲೂ ಕಾರಣವಾಯ್ತಾ? ಇಂಥದ್ದೊಂದು ಅನುಮಾನ JioCinema ಬಿಡುಗಡೆ ಮಾಡಿದ ಇಂದಿನ ಪ್ರೋಮೊ ನೋಡಿದರೆ ಹುಟ್ಟದೇ ಇರದು. ‘ನಾನು ನಾನಲ್ದೆ, ಬೇರೆ ಯಾರೋ ಆಗ್ತಿದೀನಿ ಅನಿಸ್ತಿದೆ’ ಎಂದು ಸಂಗೀತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತಲೆಯೊಳಗೆ ಪ್ರೆಷರ್ ಜಾಸ್ತಿ ಆಗ್ತಿದೆ ಎಂದು ಫ್ರೆಸ್ಟ್ರೇಟ್ ಆಗಿದ್ದಾರೆ. ಅವರನ್ನು ಸಮಾಧಾನ ಮಾಡಲು ಬಂದ ಕಾರ್ತಿಕ್‌ಗೆ ಕೈ ಮುಗಿದಿದ್ದಾರೆ. ಹಾಗೆಯೇ, ‘ನಿಮಗೆ ಬೇಕಾದಾಗ ಜಗಳ ಆಡ್ತೀರಾ. ಬೇಕಾದಾಗ ಸಮಾಧಾನ ಮಾಡ್ತೀರಾ?’ ಎಂದು ಕಾರ್ತಿಕ್ ಅವರನ್ನು ಕುಟುಕಿದ್ದಾರೆ. ಅದನ್ನು ಕೇಳಿ ಸಂಗೀತಾ ಬಳಿಯಿಂದ ಕಾರ್ತಿಕ್ ಎದ್ದು ಹೋಗಿದ್ದಾರೆ. ‘ನನಗೆ ಈ ಗೇಮ್ ಆಡಲು ಇಷ್ಟವಿಲ್ಲ’ ಎಂದು ಸಂಗೀತಾ ಬಿಗ್‌ಬಾಸ್ ಬಳಿಯಲ್ಲಿ ಬಿಕ್ಕಿ ಬಿಕ್ಕಿ ವಿನಂತಿಸಿಕೊಂಡಿದ್ದಾರೆ. ಅದರ ಬೆನ್ನಿಗೇ ಮನೆಯ ಮುಖ್ಯದ್ವಾರ ತೆರೆದುಕೊಂಡಿರುವ…
ಉಡುಪಿ: ಗೆಸ್ಟ್ ಹೌಸ್ ನ ಗೇಟ್ ಒಂದು ಪುಟ್ಟ ಮಗುವಿನ ಮೇಲೆ ಬಿದ್ದ ಪರಿಣಾಮ ಮಗು ಸಾವನಪ್ಪಿದ ಘಟನೆ ಕೋಟತಟ್ಟು ಪಡುಕರೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.ಮೃತ ಮಗುವನ್ನು ಸ್ಥಳೀಯ ನಿವಾಸಿ ಸುಧೀರ್ ಮೊಗವೀರ ಅವರ ಏಕೈಕ ಪುತ್ರ ಮೂರು ವರ್ಷದ ಸುಶಾಂತ್ (3) ಎಂದು ಗುರುತಿಸಲಾಗಿದೆ. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಮನೆಯ ಸಮೀಪದಲ್ಲಿರುವ ಗೆಸ್ಟ್‌ಹೌಸ್‌ನ ಗೇಟ್‌ನಲ್ಲಿ ಈ ಮಗು ಪ್ರತಿದಿನ ಆಟವಾಡುತ್ತಿದ್ದು ಅದರಂತೆ ಮಂಗಳವಾರ ಆಡುತ್ತಿದ್ದಾಗ ಗೇಟ್ ಕಳಚಿ ಮೈ ಮೇಲೆ ಬಿದ್ದಿತು. ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟಿದೆ. ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನೆಲೆಯಲ್ಲಿ ಇಂದು ಹೈ ಕೋರ್ಟ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರ ಅರ್ಜಿ ವಿಚಾರಣೆ ಇಂದು ನಡೆಯಲಿದೆ. https://ainlivenews.com/cylinder-explosion-in-bangalore-7-injured/ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಅನುಮತಿಯನ್ನು ಹೈ ಕೋರ್ಟ್ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಹಾಗಾಗಿ ಡಿ.ಕೆ.ಶಿವಕುಮಾರ್ ದ್ವಿಸದಸ್ಯ ಪೀಠಕ್ಕೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿ, ಹೈ ಕೋರ್ಟ್ ದ್ವಿಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಅದನ್ನು ಪ್ರಶ್ನಿಸಿ, ಸಿಬಿಐ ಸುಪ್ರಿಂಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣವನ್ನು ಹೈ ಕೋರ್ಟ್ ನಕ್ಕೇ ಇತ್ಯರ್ಥ ಪಡಿಸಿಕೊಳ್ಳುವಂತೆ ಸೂಚಿಸಿದ ಸುಪ್ರಿಂಕೋರ್ಟ್ 2 ವಾರಗಳ ಗಡುವು ನೀಡಿತ್ತು. ಹಾಗಾಗಿ ಇಂದು ಹೈ ಕೋರ್ಟ್ ನ ದ್ವಿ ಸದಸ್ಯ ಪೀಠದಲ್ಲಿ ಮತ್ತೆ ಅರ್ಜಿಯ ವಿಚಾರಣೆ ನಡೆಯಲಿದೆ. ದ್ವಿ ಸದಸ್ಯ ಪೀಠವು ಅರ್ಜಿಯನ್ನು ವಜಾ ಮಾಡಿದರೆ, ಡಿ.ಕೆ.ಶಿವಕುಮಾರ್ ಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನಲಾಗುತ್ತಿದೆ