Author: AIN Author

ಬೆಂಗಳೂರು:  ಜಾತಿಗಣತಿ ವರದಿ ರಾಜಕೀಯ ಪ್ರೇರಿತ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ. https://ainlivenews.com/cylinder-explosion-in-bangalore-7-injured/ ರಾಜ್ಯ ಸರ್ಕಾರ ಸದುದ್ದೇಶದಿಂದ ಜಾತಿಗಣತಿ ವರದಿ ಪಡೆಯುತ್ತಿಲ್. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯ ಮಾಡ್ತಿದ್ದಾರೆ. ಈ ಸಮೀಕ್ಷೆ ಸರಿಯಾಗಿ ಆಗಿಲ್ಲ ಅಂತಾ ಪ್ರತಿಯೊಬ್ಬರೂ ಹೇಳ್ತಿದ್ದಾರೆ. ಜಾತಿ ಗಣತಿಗೆ ನಮ್ಮ ಸಂಪೂರ್ಣ ವಿರೋಧ ಇದೆ. ಸರ್ಕಾರ ಈವರೆಗೆ ಒಂದೂ ಭರವಸೆದಾಯಕ ಕೆಲಸ ಮಾಡಿಲ್ಲ. ರಾಹುಲ್ ಹೇಳಿದರೆಂದು ವರದಿ ಮೇಲೆ ರಾಜಕೀಯ ಮಾಡ್ತಿದ್ದಾರೆ. ಸರ್ಕಾರದ ನಿಲುವು ನೋಡಿಕೊಂಡು ನಾವು ಮುಂದುವರಿಯುತ್ತೇವೆ ಎಂದರು.

Read More

ಬೆಂಗಳೂರಿನಲ್ಲಿ  ಸಿಲಿಂಡರ್​ ಸ್ಫೋಟಗೊಂಡು ಐವರಿಗೆ ಗಾಯಗಳಾಗಿವೆ. ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ವಾರಾಣಸಿ ಮೂಲದ ಜಮಾಲ್, ನಾಜಿಯಾ, ಇರ್ಫಾನ್, ಗುಲಾಬ್, ಶಹಜಾದ್​ಗೆ ಸಿಲಿಂಡರ್​ ಸ್ಫೋಟದಿಂದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಜಾನೆ 5.30ರ ಸುಮಾರಿಗೆ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟವಾಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಕಿಟಕಿಗಳು ಛಿದ್ರವಾಗಿವೆ.

Read More

ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಕುರಿತು ತಡರಾತ್ರಿವರೆಗೂ ಸಭೆ ನಡೆದರೂ ಅಧ್ಯಕ್ಷರ ನೇಮಕ ಅಂತಿಮವಾಗಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ‌ (Randeep Surjewala) ಜೊತೆ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ (DK Shivkumar) ಸುದೀರ್ಘ ಚರ್ಚೆ ನಡೆಸಿದರು. ಅಸಮಧಾನಿತ ಕೆಲವು ಹಿರಿಯ ನಾಯಕರಿಗೆ ಸಭೆಯಿಂದಲೇ ಕರೆ ಮಾಡಿ ಸುರ್ಜೆವಾಲಾ ಅಭಿಪ್ರಾಯ ಕೇಳಿದರು. ಗೊಂದಲ ಇಲ್ಲದಂತೆ ಪಟ್ಟಿ ಸಿದ್ದ ಪಡಿಸಲು ಕಾಂಗ್ರೆಸ್ ನಾಯಕರ ಕಸರತ್ತು ನಡೆಯಿತು. ಅಸಮಧಾನಿತ ಶಾಸಕರ ಪೈಕಿ ಬಸವರಾಜ ರಾಯರೆಡ್ಡಿಯನ್ನು ಸಭೆಗೆ ಕರೆಸಿ ಸುರ್ಜೇವಾಲಾ, ಸಿದ್ದರಾಮಯ್ಯ, ಡಿಕೆಶಿ ಮಾತನಾಡಿದರು. https://ainlivenews.com/bengalureans-from-now-on-fresh-fish-will-arrive-at-your-doorstep/ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿಕೆಶಿ, ಪಕ್ಷ ಸಂಘಟನೆ ಹಾಗೂ ಬೋರ್ಡ್ ನೇಮಕದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಮೊದಲ ಸುತ್ತಿನ ಮಾತುಕತೆ ಆಗಿದೆ. ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಎಲ್ಲಾ ಭಾಗದ ಶಾಸಕರನ್ನ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಈಗ ಪಟ್ಟಿ ಮಾಡಿರುವ ಹೆಸರುಗಳನ್ನ ದೆಹಲಿ ನಾಯಕರಿಗೆ ಕಳುಹಿಸುತ್ತೇವೆ.…

Read More

ತಮಿಳು (Tamil) ಚಿತ್ರೋದ್ಯಮ ಖ್ಯಾತ ವಿಲನ್ ಮನ್ಸೂರ್ ಅಲಿ ಖಾನ್ (Mansoor Ali Khan), ನಿಜ ಜೀವನದಲ್ಲೂ ವಿಲನ್ ಆಗಿದ್ದಾರೆ. ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ ಅವರನ್ನು ರೇಪ್ ಮಾಡುವಂತಹ ಸನ್ನಿವೇಶ ಇದೆ ಅಂದುಕೊಂಡಿದೆ. ಆದರೆ, ಇರಲಿಲ್ಲ. ಇದ್ದರೆ ಅನಾಮತ್ತಾಗಿ ಎತ್ತಿಕೊಂಡು ಹೋಗಿ ಬೆಡ್ ಮೇಲೆ ಬೀಸಾಕುತ್ತಿದ್ದೆ. ಈ ಹಿಂದೆ ಖುಷ್ಬೂ ಸೇರಿದಂತೆ ಹಲವರನ್ನು ಹಾಗೆಯೇ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದರು. ತ್ರಿಷಾ (Trisha) ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು. ಜೊತೆಗೆ ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು. ಆಕ್ರೋಶ ಭುಗಿಲುಗೊಂಡ ಬೆನ್ನಲ್ಲೇ ಖುಷ್ಬೂ (Khushboo) ಕೂಡ ಘಟನೆಯ ಬಗ್ಗೆ ಮಾತನಾಡಿದ್ದರು. ಮನ್ಸೂರ್ ಅಲಿ ಖಾನ್ ನಂತಹ ಕೊಳಕು…

Read More

ಕಲುಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಹಲ್ಲೆ ಖಂಡಿಸಿ ಬಂಜಾರ ಸಮುದಾಯ ಫ್ರತಿಭಟನೆ ಹಿನ್ನಲೆ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿ ಪೋಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತ ಸೇರಿದಂತೆ ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ..ಚಿತ್ತಾಪುರದಿಂದ ಕಾರಲ್ಲಿ ಬರುತ್ತಿದ್ದ ವೇಳೆ ಬೈಕಲ್ಲಿ ಬಂದಿದ್ದ ದುಷ್ಕರ್ಮಿ ಗ್ಯಾಂಗ್ ಮಣಿಕಂಠ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು..

Read More

ದೊಡ್ಡಬಳ್ಳಾಪುರ: ಬಾಗಲಕೋಟೆಯ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಲಿಂಗೈಕ್ಯ ಶ್ರೀ ಶರಣಬಸವ ಸ್ವಾಮಿಗಳ ಸಂಸ್ಮರಣೋತ್ಸವದ ಅಂಗವಾಗಿ ನ.23 ರಂದು ಗದ್ದುಗೆ ಶಿಲಾಮಂಟಪದ ಶಿಲಾನ್ಯಾಸ ಹಾಗೂ ಗುರು ಕುಟೀರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸಮುದಾಯದ ಶಿವರಾಜ್ ತಂಗಡಗಿ ಭಾಗವಹಿಸಲಿ ದ್ದಾರೆ. ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಸುಮಾರು 2000 ಜನರು ಭಾಗವಹಿಸಲಿದ್ದಾರೆ ಎಂದು ತಾಲೂಕು ಭೋವಿ ಸಮಾಜದ ಅಧ್ಯಕ್ಷ ಎನ್. ರಾಮಕೃಷ್ಣ ತಿಳಿಸಿದರು. ಮಾಧ್ಯಮವದರೊಂದಿಗೆ ಮಾತನಾಡಿದ ಅವರು, ಗುರುಪೀಠ ಉದ್ಘಾಟನೆ ಹಾಗೂ ಸಮಾವೇಶದ ಕುರಿತು ಜಿಲ್ಲೆಯ ಎಲ್ಲ ತಾಲೂಕುಗ ಳಲ್ಲಿ ಈಗಾಗಲೇ ಪ್ರಚಾರ ಮಾಡಲಾಗಿದೆ. ಬುಧವಾರ ಸಂಜೆ ಅವರವರ ಸ್ವಂತ ವಾಹನಗಳಲ್ಲಿ ಬಾಗಲಕೋಟೆ ಗೆ ಪ್ರಯಾಣ ಬೆಳೆಸಲಾಗುವುದು ಎಂದು ವಿವರಿಸಿದರು. ಭೋವಿ ಅಭಿವೃದ್ಧಿ ನಿಗಮಕ್ಕೆ ಸಮಾಜದವರನ್ನೇ ಅಧ್ಯಕ್ಷ ರನ್ನಾಗಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು. ಜೊತೆಗೆ ಕಲ್ಲು ಬಂಡೆ ಹೊಡೆಯಲು ಸಮಾಜದವರಿಗೆ ಅನುಮತಿ ಕೊಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು…

Read More

ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿರುವ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗೆ ದರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ‌ಜಿಲ್ಲಾಧಿಕಾರಿ‌ ಕಚೇರಿ ಎದುರು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರ ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ  ನಡೆಸಿದರು. ಈಗಾಗಾಲೇ ಜಿಲ್ಲೆಯಲ್ಲಿರುವ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯ ಆರಂಭಿಸಿದರು, ದರ ಘೋಷಣೆ ಮಾಡಿಲ್ಲಾ. ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಈಗಾಗಾಲೇ ಕಬ್ಬು ಕಟಾವು ವೆಚ್ಚ ಹಾಗು ಸಾಗಾಣಿಕೆ ವೆಚ್ಚ ಹೊರತುಪಡಿಸಿ 2850 ರೂಗಳನ್ನ ನಿಗದಿ ಪಡಿಸಿದೆ. ಜಿಲ್ಲೆಯ ರೈತರು ನೆರೆ ರಾಜ್ಯಕ ದರ ತೆರಳದಂತೆ ತಡೆಯಬೇಕಾದರೆ ಕೂಡಲೇ ಜಿಲ್ಲೆಯ ಸಕ್ಕರೆ ಕಾರ್ಖಾನೆಯ ಮಾಲೀಕರು ದರ ನಿಗದಿ ಮಾಡಿ ಘೋಷಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು. ಈಗಾಗಲೇ ರಾಜ್ಯದಲ್ಲಿ ಬರಗಾಲ ಆವರಸಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಕಬ್ಬಿನ ಉತ್ಪಾದನೆಗೆ ಎಪ್‌ಆರ್‌ಪಿ ದರಕ್ಕಿಂತ ಹೆಚ್ಚಿನ ವೆಚ್ಚ ತಗುಲುತ್ತಿದೆ. ಒಂದು  ಹಾಗಾಗಿ ಸರ್ಕಾರ  ದರ ನೀಡಬೇಕು. ಒಂದು ಟನ್ ಕಬ್ಬು ಉತ್ಪಾದನೆಗೆ 3850 ರೂಗಳು ವೆಚ್ಚವಾಗುತ್ತಿದ್ದು, ಉತ್ಪಾದನಾ ವೆಚ್ಚಕ್ಕೆ…

Read More

ಬೆಂಗಳೂರು: ಬೆಂಗಳೂರಿನ ಲುಲು ಮಾಲ್ ನಲ್ಲಿ ನಡೆದಿದ್ದ ಲೈಂಗಿಕ ಕಿರುಕುಳ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಅಂತಹುದೇ ಮತ್ತೊಂದು ಲೈಂಗಿಕ ಕಿರುಕುಳ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಈ ಬಾರಿ ಬೆಂಗಳೂರಿನ ಪ್ರಮುಖ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಜನರಿಂದ ತುಂಬಿ ತುಳುಕುತ್ತಿದ್ದ ಮೆಟ್ರೋ ನಿಲ್ದಾಣದಲ್ಲಿ ದುಷ್ಕರ್ಮಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣ Reddit ವಿಚಾರ ಬಹಿರಂಗ ಪಡಿಸಿದ್ದು, ಕೂಡಲೇ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಸೋಮವಾರ ಬೆಳಗ್ಗೆ ಸುಮಾರು 8.30ರ ಸುಮಾರಿನಲ್ಲಿ ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನೆಡೆದಿದೆ ಎಂದು ಹೇಳಲಾಗಿದೆ. ಸಾಮಾಜಿಕ ಜಾಲತಾಣದಲ್ಲಿರುವಂತೆ, ‘ಆಕೆ ನಿತ್ಯ ಕಾಲೇಜಿಗೆ ಬಸ್‌ನಲ್ಲೇ ತೆರಳುತ್ತಿದ್ದಳು. ಆದರೆ, ಅಂದು ಬೆಳಿಗ್ಗೆ 8.30ರ ಸುಮಾರಿಗೆ ಮೆಟ್ರೊದಲ್ಲಿ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೊ ಏರುವಾಗ ದಟ್ಟಣೆಯಿತ್ತು. ರೈಲು ಏರಿದ ಮೇಲೆ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ…

Read More

ಶಿವಮೊಗ್ಗ: ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ವಸತಿ ಸಚಿವ ಜಮೀರ್ ಅಹಮ್ಮದ್ (Zameer Ahmed Khan) ಸಂವಿಧಾನ ಪೀಠಕ್ಕೆ ಅಪಮಾನ ಮಾಡಿದ್ದಾರೆ. ಅವರೊಬ್ಬ ರಾಷ್ಟ್ರದ್ರೋಹಿ, ತಕ್ಷಣ ಅವರನ್ನು ಸಚಿವ ಸಂಪುಟ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಚಿವ ಜಮೀರ್ ಅಹಮ್ಮದ್ ಮುಸ್ಲಿಂ ಸಭಾಧ್ಯಕ್ಷರಿಗೆ (Muslim Speaker) ಎಲ್ಲರೂ ತಲೆಭಾಗಿ ವಿಧಾನಸಭೆ ಚಟುವಟಿಕೆ ನಡೆಸುತ್ತಾರೆ ಎಂದು ಹೇಳಿದ್ದಾರೆ. ನಾವು ಗೌರವ ಕೊಡೋದು ಸಂವಿಧಾನಿಕ ಸಭಾಧ್ಯಕ್ಷರ ಪೀಠಕ್ಕೆ, ಮುಸ್ಲಿಂ ವ್ಯಕ್ತಿಗಲ್ಲ ಎಂದು ನುಡಿದಿದ್ದಾರೆ. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಇಂತಹ ಹೇಳಿಕೆಗಳನ್ನ ಗಮನಿಸಿದ್ರೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಭಾರತದ ಸಂವಿಧಾನದ ಪ್ರಕಾರ ಆಡಳಿತ ನಡೆಸುತ್ತಿದೆಯೋ? ಅಥವಾ ಪಾಕಿಸ್ತಾನದ ಇಸ್ಲಾಮಿಕ್ ಆಡಳಿತದ ಪ್ರಕಾರ ಆಡಳಿತ ನಡೆಸುತ್ತಿಯೋ ಎಂಬ ಸಂಶಯವಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Read More

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್‌ ಕಂಪನಿಯು ಬಿಡದಿಯಲ್ಲಿ 3,300 ಕೋಟಿ ರೂ. ವೆಚ್ಚದಲ್ಲಿ ತನ್ನ ಮೂರನೇ ಕಾರು ಉತ್ಪಾದನಾ ಘಟಕವನ್ನು ಆರಂಭಿಸಲು ಸರಕಾರ ಮತ್ತು ಕಂಪನಿ ನಡುವೆ ಇಂದು ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಸರ್ಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್‌ ಕೃಷ್ಣ ಮತ್ತು ಟೊಯೋಟಾ ಪರವಾಗಿ ಕಂಪನಿಯ ಉಪಾಧ್ಯಕ್ಷ ಸುದೀಪ್‌ ದಳವಿ ಅಂಕಿತ ಹಾಕಿ, ಒಡಂಬಡಿಕೆ ಪತ್ರವನ್ನು ವಿನಿಮಯ ಮಾಡಿಕೊಂಡರು. ಬಳಿಕ ಮಾತನಾಡಿದ ಸಚಿವ ಪಾಟೀಲ್‌ ಅವರು, ʻಟೊಯೋಟಾ ರಾಜ್ಯದಲ್ಲಿ ನೆಲೆಯೂರಿ 25 ವರ್ಷಗಳು ತುಂಬಿವೆ. ಈ ಸಂದರ್ಭದಲ್ಲೇ ಕಂಪನಿಯು ನೂತನ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಈ ಒಪ್ಪಂದದಿಂದ ಸ್ಥಳೀಯ ಮಟ್ಟದಲ್ಲಿ ಉತ್ಪಾದನಾ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದ್ದು, ನೂತನ ತಂತ್ರಜ್ಞಾನಾಧಾರಿತ ಕಾರುಗಳು ಎಲ್ಲರಿಗೂ ಸುಲಭವಾಗಿ ಲಭ್ಯವಾಗಲಿವೆʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಟೊಯೋಟಾ ಕಂಪನಿಯ ಎರಡು ಉತ್ಪಾದನಾ ಘಟಕಗಳು ಈಗಾಗಲೇ ಬಿಡದಿಯಲ್ಲಿ ಸಕ್ರಿಯವಾಗಿವೆ. ಉದ್ದೇಶಿತ ಮೂರನೇ ಘಟಕದಲ್ಲಿ ವರ್ಷಕ್ಕೆ ಹೆಚ್ಚುವರಿಯಾಗಿ 1 ಲಕ್ಷ ಕಾರುಗಳನ್ನು ಉತ್ಪಾದಿಸುವ ಸಾಮರ್ಥ್ಯವಿದ್ದು, ಇದರಿಂದ ಅಂದಾಜು 2…

Read More