ಹುಬ್ಬಳ್ಳಿ : ಪೊಲೀಸರ ಪ್ರತಿನಿತ್ಯ ಕೆಲಸ ಒತ್ತಡದಿಂದ ಆರಂಭವಾಗುತ್ತದೆ. ಇಂತಹ ಸಂದರ್ಭದಲ್ಲಿ ಕ್ರೀಡಾಕೂಟ ಆಯೋಜನೆ ಮಾಡಿರುವುದು ಸಮಂಜಸವಾಗಿದೆ. ಕ್ರೀಡೆ ಎಂದಾಕ್ಷಣ ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಉತ್ಸಾಹ ಇಮ್ಮಡಿಯಾಗುವುದು. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಾಯಕವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಜಿ. ಶಾಂತಿ ಹೇಳಿದರು. ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪ್ರಗತಿಯ ಸಂಕೇತ ಪಾರಿವಾಳ ಹಾಗೂ ತ್ರಿವರ್ಣ ಬಲೂನುಗಳನ್ನು ಗಾಳಿಯಲ್ಲಿ ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಒತ್ತಡದಿಂದ ಹೊರಬರಲು ವ್ಯಾಯಾಮ ತುಂಬಾ ಅವಶ್ಯಕ. ದಿನನಿತ್ಯ ಉತ್ಸಾಹದಿಂದ ಕರ್ತವ್ಯ ನಿರ್ವಹಿಸಲು ಕ್ರೀಡೆ ಬಹಳ ಮುಖ್ಯ. ಸಮಾಜದಲ್ಲಿನ ನಾಗರಿಕರು ಕಾನೂನು ಪರಿಪಾಲನೆ ಮಾಡಬೇಕಿದೆ. ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಸಕರಾತ್ಮಕ ಚಿಂತನೆ ಮಾಡಲು ಕ್ರೀಡೆ ಅತೀ ಅವಶ್ಯಕ. ತಾಳ್ಮೆ ಹಾಗೂ ಶಿಸ್ತನ್ನು ಕ್ರೀಡೆಯಿಂದ…
Author: AIN Author
ವೈವಿಧ್ಯಮಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಹೊಂದಿರುವ ಕಂಟೆಂಟ್ ಅನ್ನು ಜನರಿಗೆ ನೀಡುವಲ್ಲಿ JioCinema ಮುಂಚೂಣಿಯಲ್ಲಿದೆ. ಆ ಪ್ರಯತ್ನದ ಭಾಗವಾಗಿ ಇದೀಗ, ಮುತ್ತಯ್ಯ ಮುರಳೀಧರನ್ (Muttiah Muralidharan) ಅವರ ಜೀವನವನ್ನಾಧರಿಸಿದ, ಎಂ.ಎಸ್. ಶ್ರೀಪತಿ (MS Sripathy) ನಿರ್ದೇಶಿಸಿರುವ ‘800’ ಸಿನಿಮಾ JioCinemaದಲ್ಲಿ ಬಿಡುಗಡೆಗೊಳ್ಳುತ್ತಿದೆ. ಇದೇ ಡಿಸೆಂಬರ್ 2ರಂದು ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೊಳ್ಳುತ್ತಿರುವ ಈ ಸಿನಿಮಾ, ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ್ದು. ಟೆಸ್ಟ್ ಕ್ರಿಕೆಟ್‌ನಲ್ಲಿ 800 ವಿಕೆಟ್‌ಗಳನ್ನು ಪಡೆದುಕೊಂಡು ದಾಖಲೆ ನಿರ್ಮಿಸಿದ್ದ ಬೌಲರ್ ಬದುಕಿನ ತೆರೆ-ಮರೆಯ ಕಥೆಯನ್ನು ಹೇಳುವ ಈ ಸಿನಿಮಾ, ಕ್ರಿಕೆಟ್ ಪ್ರಿಯರಿಗಂತೂ ಮನರಂಜನೆಯ ಮೃಷ್ಟಾನ್ನವನ್ನೇ ಉಣಿಸುತ್ತದೆ. ವಿವೇಕ್ ರಂಗಾಚಾರಿ ನಿರ್ಮಾಣದ ಈ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ, ಬೆಂಗಾಲಿ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ವೀಕ್ಷಣೆಗೆ ಲಭ್ಯವಿರುವುದು ವಿಶೇಷ. ಖ್ಯಾತ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಕ್ರಿಕೆಟ್ ಬದುಕಿನ ಸಾಧನೆಗಳನ್ನು ಹೇಳುವ ‘800’ ಸಿನಿಮಾ, ಅವರ ಖಾಸಗೀ ಬದುಕಿನ ಸಂಕಷ್ಟಗಳನ್ನೂ ನೋಡುಗರ ಎದುರಿಗೆ…
ಅಹಮದಾಬಾದ್: 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡ ಗೆದ್ದು ವಿಶ್ವ ಸಾಮ್ರಾಟನಾದ ಬೆನ್ನಲ್ಲೇ ಟೀಂ ಇಂಡಿಯಾ ಅಭಿಮಾನಿಗಳಲ್ಲಿ (Team India Fans) ಆಸೀಸ್ ಆಟಗಾರ ಡೇವಿಡ್ ವಾರ್ನರ್ (David Warner) ಭಾರತೀಯ ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಕಾಂಗರೂ ಪಡೆ ಟೀಂ ಇಂಡಿಯಾ (Team India) ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿ 6ನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಆದ್ರೆ ತಮ್ಮ ಎಕ್ಸ್ ಖಾತೆಯಲ್ಲಿ ಟೀಂ ಇಂಡಿಯಾ ಅಭಿಮಾನಿಗಳ ಕ್ಷಮೆ ಕೋರಿರುವ ಡೇವಿಡ್ ವಾರ್ನರ್, ಆಸ್ಟ್ರೇಲಿಯಾ (Australia) 6ನೇ ಟ್ರೋಫಿ ಗೆಲ್ಲುವ ಮೂಲಕ ಕೋಟ್ಯಾನು ಕೋಟಿ ಭಾರತೀಯ ಅಭಿಮಾನಿಗಳ ಹೃದಯ ಒಡೆದಿದ್ದೇವೆ ಅದಕ್ಕಾಗಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ನಾನು ಕ್ಷಮೆಯಾಚಿಸುತ್ತೇನೆ. ನಿಜಕ್ಕೂ ಇದೊಂದು ಅತ್ಯದ್ಬುತ ಪಂದ್ಯವಾಗಿತ್ತು ಮತ್ತು ನಂಬಲಾಗದ ವಾತಾವರಣ ಸೃಷ್ಟಿಯಾಗಿತ್ತು. ಭಾರತ ನಿಜಕ್ಕೂ ಗಂಭೀರವಾದ ವಿಶ್ವಕಪ್ ಟೂರ್ನಿಯನ್ನೇ ನಡೆಸಿಕೊಟ್ಟಿದೆ. ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ…
ಒಟ್ಟೋವಾ: ಖಲಿಸ್ತಾನಿ (Khalistani) ಪರ ಬೆಂಬಲಿಗರು ಹಿಂದೂ ದೇವಾಲಯಗಳನ್ನ ಟಾರ್ಗೆಟ್ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತ ಮೂಲದ ಕೆನಡಾದ (Canada) ಸಂಸದ ಚಂದ್ರ ಆರ್ಯ (Chandra Arya) ಒತ್ತಾಯಿಸಿದ್ದಾರೆ. ಖಲಿಸ್ತಾನಿಗಳು ಲಕ್ಷ್ಮಿ ನಾರಾಯಣ ಮಂದಿರದಲ್ಲಿ ತೊಂದರೆ ಸೃಷ್ಟಿಸಲು ಮುಂದಾಗಿದ್ದಾರೆ. ಇವರ ವಿರುದ್ಧ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಕ್ರಿ.ಪೂ. ಸರ್ರೆಯಲ್ಲಿರುವ ಸಿಖ್ ಗುರುದ್ವಾರದ ಹೊರಗೆ ಖಲಿಸ್ತಾನ್ ಬೆಂಬಲಿಗರು ಸಿಖ್ ಕುಟುಂಬವನ್ನು ಮೌಖಿಕವಾಗಿ ನಿಂದಿಸಿದ್ದಾರೆ. ಈಗ ಅದೇ ಖಲಿಸ್ತಾನ್ ಗುಂಪು ಸರ್ರೆಯ ಹಿಂದೂ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ತೊಂದರೆಯನ್ನು ಸೃಷ್ಟಿಸಲು ಬಯಸಿದೆ ಎಂದು ಚಂದ್ರ ಆರ್ಯ ಅವರು ಎಕ್ಸ್ ಪೋಸ್ಟ್ ಮಾಡಿದ್ದಾರೆ. https://twitter.com/AryaCanada/status/1726642274379915312?ref_src=twsrc%5Etfw%7Ctwcamp%5Etweetembed%7Ctwterm%5E1726642274379915312%7Ctwgr%5Ed719aeca7d036ea025b638f9714bd448aff82bf9%7Ctwcon%5Es1_&ref_url=https%3A%2F%2Fpublictv.in%2Fstep-in-take-action-canada-mp-alleges-khalistani-plan-to-target-temple%2F ಇವೆಲ್ಲವನ್ನೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಮಾಡಲಾಗುತ್ತಿದೆ. ಕೆನಡಾದ ಅಧಿಕಾರಿಗಳು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳುವಂತೆ ನಾನು ಮತ್ತೊಮ್ಮೆ ಕೇಳುತ್ತಿದ್ದೇನೆ ಎಂದು ಪೋಸ್ಟ್‌ನಲ್ಲಿ ಒತ್ತಾಯಿಸಿದ್ದಾರೆ. ಕಳೆದ ವರ್ಷಗಳಲ್ಲಿ ಹಿಂದೂ ದೇವಾಲಯಗಳು ದಾಳಿಗೆ ಗುರಿಯಾಗಿವೆ. ಎರಡು ವರ್ಷಗಳ ಅವಧಿಯಲ್ಲಿ ಹಿಂದೂ ದೇವಾಲಯಗಳ ಮೇಲೆ ಹಲವು ಬಾರಿ ದಾಳಿ…
ಬೆಂಗಳೂರು:- ರಸ್ತೆಯಲ್ಲಿ ನಡೆದ ಗಲಾಟೆಯಲ್ಲಿ ವೃದ್ಧ ಸಾವನ್ನಪ್ಪಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 77 ವರ್ಷದ ಕೃಷ್ಣಪ್ಪ ಮೃತ ವೃದ್ಧ.. ನವೆಂಬರ್ 16 ರಂದು ಪ್ಯಾಲೇಸ್ ಗುಟ್ಟಹಳ್ಳಿ ಬಳಿ ಮೆಡಿಸಿನ್ ತರಲು ವೃದ್ಧ ಹೋಗುತ್ತಿದ್ದ. ಆಗ ಕೃಷ್ಣಪ್ಪನ ಬೈಕ್ ಗೆ ಸರ್ಫರಾಜ್ ಖಾನ್ ಡಿಕ್ಕಿ ಹೊಡಿದಿದ್ದ. ನಂತರ ಕೃಷ್ಣಪ್ಪ ಖಾನ್ ಮೇಲೆ ಕೂಗಾಡಿದ್ದರು, ಸರಿಯಾಗಿ ಬೈಕ್ ಓಡಿಸುವಂತೆ ಹೇಳಿದ್ದರು. ಆಗ ಕೃಷ್ಣನ ಮೇಲೆ ಖಾನ್ ಕಲ್ಲಿನಿಂದ ಹಲ್ಲೆ ಮಾಡಿದ್ದ. ನಂತರ ಅಲ್ಲಿಂದ ಪರಾರಿಯಾಗಿದ್ದ. ಸ್ಥಳಿಯರ ಸಹಾಯದಿಂದ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.. ನಂತರ ಕೃಷ್ಣಪ್ಪ ಮೃತ ಪಟ್ಟಿದ್ದರು. ನವೆಂಬರ್ 17 ರಂದು ಕೃಷ್ಣಪ್ಪನವರ ಮಗ ಅನುಮಾನ ಬಂದು ಸಿಸಿಟಿವಿ ಪರಿಶೀಲಿಸಿದ್ರು. ಆಗ ಕೃಷ್ಣಪ್ಪ ನವರ ಮೇಲೆ ಹಲ್ಲೆ ಆಗಿರೋದು ಗೊತ್ತಾಗಿತ್ತು. ಕೃಷ್ಣಪ್ಪನ ಮಗ ಸತೀಶ್ ಆಗ ವಯಾಲಿಕಾವಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಯಾಲಿಕಾವಲ್ ಪೊಲೀಸರಿಂದ ಖಾನ್ ಬಂಧನ ಮತ್ತು ಖಾನ್ ಮೇಲೆ ರೌಡಿಶೀಟರ್ ಓಪನ್ ಆಗಿದೆ. ವಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಸ್ಯಾಂಡಲ್ವುಡ್ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ತಮ್ಮ ಬ್ಯಾಡ್ ಮ್ಯಾನರ್ಸ್ ಚಿತ್ರದ ಪ್ರಚಾರದ ವೇಳೆ ಮಾತನಾಡಿರುವ ಅವರು, ನಾನು ರಾಜಕೀಯಕ್ಕೆ ಬರಲ್ಲ. ಚಿತ್ರರಂಗ ಹಾಗೂ ರಾಜಕೀಯ ರಂಗ ಬೇರೆ ಬೇರೆ. ರಾಜಕಾರಣದಲ್ಲಿ ನಾವೇ ದುಡ್ಡು ಕೊಟ್ಟು ಜನರನ್ನು ಕರೆಯಬೇಕಾಗುತ್ತದೆ ಎಂದು ಹೇಳಿದ್ದಾರೆ. ‘ನನ್ನ ತಂದೆ ಅಂಬರೀಶ್ ಅವರು 34 ವರ್ಷ ಚಿತ್ರರಂಗದಲ್ಲಿದ್ದು ಬಳಿಕ ರಾಜಕೀಯಕ್ಕೆ ಬಂದವರು. ನನ್ನ ತಾಯಿ ನಾನು ಇರೋವರೆಗೆ ರಾಜಕೀಯಕ್ಕೆ ಬರಬೇಡ ಎಂದು ಹೇಳಿದ್ದಾರೆ. ಹಾಗಾಗಿ, ನಾನು ರಾಜಕೀಯಕ್ಕೆ ಬರುವ ಉದ್ದೇಶವನ್ನೇ ಇಟ್ಟುಕೊಂಡಿಲ್ಲ, ರಾಜಕೀಯ ಕಾರ್ಯಕ್ರಮಗಳಲ್ಲೂ ಭಾಗವಹಿಸುವುದಿಲ್ಲ’ ಎಂದು ತಿಳಿಸಿದ್ದಾರೆ. ಸೇವಾ ಕಾರ್ಯಗಳು ಇದ್ದರೆ ಮಾತ್ರ ಅಂತಹ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ರಾಜಕೀಯ ಆಡಳಿತದಲ್ಲಿ ಮಕ್ಕಳ ಹಸ್ತಕ್ಷೇಪ ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಟ್ಟಿದ್ದಾರೆ. ಇದು ಅಭಿಷೇಕ್ಗೆ ಬಿಟ್ಟ ವಿಚಾರ ಅಭಿಷೇಕ್ ಅಂಬರೀಶ್ ಸ್ಪರ್ಧೆ ವಿಚಾರದ ಬಗ್ಗೆ ಈ ಹಿಂದೆ ತಾಯಿ ಸುಮಲತಾ ಸ್ಪಷ್ಟನೆ ನೀಡಿದ್ದರು. ‘ಅಭಿಷೇಕ್ ಸ್ಪರ್ಧೆ ಬಗ್ಗೆ…
ಡಂಕಿ (Dunki) ಸಿನಿಮಾ ಮೂಲಕ ಶಾರುಖ್ ಖಾನ್ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಈಗಾಗಲೇ ರಿಲೀಸ್ ಆಗಿರೋ ‘ಡಂಕಿ’ ಡ್ರಾಪ್ 1 ಝಲಕ್ ಕಿಕ್ ಕೊಟ್ಟಿದೆ. ಮೊದಲ ಹಾಡನ್ನು (Song) ಡ್ರಾಪ್ 2 ಎಂದು ಚಿತ್ರತಂಡ ರಿಲೀಸ್ ಮಾಡಲು ಹೊರಟಿದೆ. ‘ಡಂಕಿ’ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದೊಂದು ರೊಮ್ಯಾಂಟಿಕ್ ಸಾಂಗ್ ಆಗಿದ್ದು, ಶಾರುಖ್ ಖಾನ್ ಅಭಿಮಾನಿಗಳ ಕಣ್ಣು ಅರಳಿದೆ. ಕಳೆದ ಎರಡು ಸಿನಿಮಾಗಳಲ್ಲಿ ಶಾರುಖ್ ಖಾನ್ (Shah Rukh Khan) ಅನ್ನು ಹೆಚ್ಚಾಗಿ ಆಕ್ಷನ್ ಅವತಾರದಲ್ಲಿಯೇ ನೋಡಿದ್ದರು. ಹೀಗಾಗಿ ರೊಮ್ಯಾಂಟಿಕ್ ಲುಕ್‌ನಲ್ಲಿ ನೋಡುವುದಕ್ಕೆ ಕಾತುರರಾಗಿದ್ದಾರೆ. ‘ಡಂಕಿ’ ಸಿನಿಮಾದ ಈ ರೊಮ್ಯಾಂಟಿಕ್ ಸಾಂಗ್ ಇಂದು ರಿಲೀಸ್ ಆಗಲಿದೆ. ‘ಲುಪ್ ಪುಟ್ ಗಯಾ..’ ಅನ್ನೋ ಈ ಮೇಲೋಡಿ ಹಾಡನ್ನು ಕೇಳುವುದಕ್ಕೆ ಸಂಗೀತ ಆಸಕ್ತರು ಕಾದು ಕೂತಿದ್ದಾರೆ. ಬಾಲಿವುಡ್‌ನ ಜನಪ್ರಿಯರ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ ಈ ಸಿನಿಮಾಗೆ ಟ್ಯೂನ್ ಹಾಕಿದ್ದಾರೆ. ಶಾರುಖ್ ಖಾನ್ ಹಾಗೂ ತಾಪ್ಸಿ ಪನ್ನು…
ಮಂಡ್ಯ : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನೆಗೆ ಅಕ್ರಮವಾಗಿ ನಾವು ವಿದ್ಯುತ್ ಕನೆಕ್ಷನ್ ಕೊಡಿಸಿದ್ವಾ? ಗೊತ್ತಿಲ್ಲದೇ ತಪ್ಪಾಗಿದೆ ಅಂತಾ ಹೇಳಿದ್ರೆ ಮುಗಿತಿತ್ತು. ಅದು ಬಿಟ್ಟು ಎಲ್ಲರನ್ನು ಲಘುವಾಗಿ ಬಾಯಿಗೆ ಬಂದಾಗೆ ಮಾತನಾಡಿದರು. ಇವರಿಗೆ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ರಕ್ಷಣೆ ಇದೆ ಅಂತಾ ಬಾಯಿಗೆ ಬಂದಾಗೆ ಮಾತಾಡ್ತಾರಾ.? ಮಾತನಾಡುವ ನಾಲಿಗೆಗೆ ಇತಿಮಿತಿ ಇರುತ್ತೆ ಅಲ್ವ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಿಡಿ ಕಾರಿದರು. ಮಂಡ್ಯ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಮನೆಗೆ ಅಕ್ರಮವಾಗಿ ವಿದ್ಯುತ್ ಕನೆಕ್ಷನ್ ನಾವು ಕೊಡಿಸಿದ್ವಾ? 68 ಸಾವಿರ ಪೆನಾಪ್ಟಿ ಕಟ್ಟೋಕೆ ನಾವು ಹೇಳಿದ್ವಾ? ಹಳ್ಳಿಗಳಲ್ಲಿ ಅಕ್ರಮವಾಗಿ ಮನೆ ಕಟ್ಟುವಾಗ ವಿದ್ಯುತ್ ತಕೊಂಡಿರ್ತಾರೆ. ಆ ಸಂದರ್ಭ ನಾನೇ ಮಂತ್ರಿಯಾಗಿ ಬುದ್ದಿ ಹೇಳ್ತೀನಿ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ದಂಡವನ್ನ ಕಡಿಮೆ ಮಾಡಿ ಅಂತಾ ಅಧಿಕಾರಿಗೆ ಹೇಳಿದ್ದೇವೆ. ಗೊತ್ತಿಲ್ಲದೇ ತಪ್ಪಾಗಿದೆ ಅಂತಾ ಹೇಳಿದ್ರೆ ಮುಗಿತಿತ್ತು. ಅದು ಬಿಟ್ಟು ಎಲ್ಲರನ್ನು ಲಘುವಾಗಿ ಬಾಯಿಗೆ ಬಂದಾಗೆ ಮಾತನಾಡಿದರು. ಇವರಿಗೆ ಪ್ರಧಾನಿ, ಮಾಜಿ…
ಬೆಂಗಳೂರು:- ಮೆಟ್ರೋದಲ್ಲಿ ಯುವತಿಯೋರ್ವಳಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಲಾಗಿದೆ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಿರುಕುಳ ಎಸಗಿದ ವ್ಯಕ್ತಿ ಗುಂಪಿನಲ್ಲಿ ಸಲೀಸಾಗಿ ಕಣ್ಮರೆಯಾಗಿದ್ದಾನೆ. ಸಂತ್ರಸ್ತೆಯ ಸ್ನೇಹಿತರು ಈ ಘಟನೆಯನ್ನು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಘಟನೆಯನ್ನು ಹಂಚಿಕೊಂಡಿರುವ ಆಕೆಯ ಸ್ನೇಹಿತರು, ಕಾಲೇಜಿಗೆ ಹೋಗಲು ಬಸ್ ಬಳಸಲಾಗುತ್ತಿತ್ತು. ಆದರೆ ಸೋಮವಾರ ಮೆಟ್ರೋದಲ್ಲಿ ಪ್ರಯಾಣಿಸಲಾಯಿತು. ಮೆಜೆಸ್ಟಿಕ್‌ನಲ್ಲಿ ಬೆಳಗ್ಗೆ 8.50ರ ಸುಮಾರಿಗೆ ಮೆಟ್ರೋದಲ್ಲಿ ಸಾಕಷ್ಟು ಜನಸಂದಣಿ ಇತ್ತು. ಅಲ್ಲಿ ತಳ್ಳಾಟ, ನೂಕಾಟ ನಡೆಯುತ್ತಿತ್ತು. ಜನಸಂದಣಿ ನಿರ್ವಹಣೆಯ ಜವಾಬ್ದಾರಿ ಹೊಂದಿರುವ ಮಹಿಳೆ ಹೆಚ್ಚಿನ ಸಂಖ್ಯೆಯ ಜನರನ್ನು ರೈಲಿಗೆ ಪ್ರವೇಶಿಸಲು ಅವಕಾಶ ಮಾಡಿಕೊಟ್ಟರು ‘ಸ್ವಲ್ಪ ಸಮಯದ ನಂತರ, ಸ್ನೇಹಿತೆಗೆ ತುಂಬಾ ಅನಾನುಕೂಲವಾಯಿತು. ಕೆಂಪು ಅಂಗಿಯ ವ್ಯಕ್ತಿಯೊಬ್ಬನು ತನ್ನ ಹಿಂದೆ ನಿಂತಿದ್ದಾನೆ ಎಂದು ಅವಳು ಅರಿತುಕೊಂಡಳು. ಅವನು ಅವಳನ್ನು ಮುಟ್ಟುತ್ತಿದ್ದನು. ಅವನ ಉಗುರುಗಳು ಅವಳನ್ನು ಚುಚ್ಚುತ್ತಿದ್ದವು. ಆರಂಭದಲ್ಲಿ ಏನಾಗುತ್ತಿದೆ ಎಂದು ಆಕೆಗೆ ತಿಳಿದಿರಲಿಲ್ಲ, ಅವಳು ತಿರುಗಿ ನೋಡಿದಾಗ, ಒಬ್ಬ ವ್ಯಕ್ತಿ ತನ್ನ ಹಿಂದೆ ನಿಂತಿದ್ದನು. ಸಹಾಯಕ್ಕಾಗಿ ಕಿರುಚಲು ಪ್ರಾರಂಭಿಸಿದಳು. ಆದರೆ ಜನರು…
ಬೆಂಗಳೂರು:- ಇಂದು ನಗರದಲ್ಲಿ ಕುದಿ ಕಂಬಳಕ್ಕೆ ಚಾಲನೆ ದೊರೆಯಲಿದೆ. ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ -ನಮ್ಮ ಕಂಬಳದ ಪೂರ್ವಭಾವಿಯಾಗಿ ಬುಧವಾರ ಕುದಿ ಕಂಬಳಕ್ಕೆ ಚಾಲನೆ ಸಿಗಲಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಬೆಳಗ್ಗೆ 10ಕ್ಕೆ ಅರಮನೆ ಮೈದಾನದ 5ನೇ ಗೇಟ್‌ನಲ್ಲಿ ನಿರ್ಮಿಸಲಾದ ಕಣದಲ್ಲಿ ಕುದಿ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ. ಅರಮನೆ ಮೈದಾನದಲ್ಲಿ ಕಂಬಳದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ವೇದಿಕೆ, ಆಸನ, ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕಂಬಳ ಸಮಿತಿ ಹಗಲಿರುಳು ಶ್ರಮಿಸುತ್ತಿದೆ. ಜತೆಗೆ ಸ್ಟಾಲ್‌ಗಳ ನೋಂದಣಿ ಕೆಲಸವು ಭರದಿಂದ ನಡೆಯುತ್ತಿದೆ. ಕಂಬಳ ಸ್ಪರ್ಧಾಕೂಟ ಸಮೀಪಿಸುತ್ತಿದ್ದಂತೆ ಕುದಿ ಕಂಬಳ ಆಯೋಜಿಸಲಾಗುತ್ತದೆ. ಕರಾವಳಿಯಲ್ಲಿ ಸ್ಪರ್ಧೆ ನಡೆಯುವ ಒಂದು ತಿಂಗಳ ಮೊದಲು ಕುದಿ ಕಂಬಳ ಎಂಬ ಕೋಣಗಳ ಓಟದ ರಿಹರ್ಸಲ್ ಅಥವಾ ಓಟದ ತಾಲೀಮು ಮಾಡಲಾಗುತ್ತದೆ. ಈ ವೇಳೆ ಕೋಣಗಳಿಗೆ ಹುರಿದುಂಬಿಸುವ ಕೆಲಸವಾಗುತ್ತದೆ. ಅಂತೆಯೇ ಬೆಂಗಳೂರು ಕಂಬಳದ ಪೂರ್ವಭಾವಿಯಾಗಿ ಬುಧವಾರ ಮಂಗಳೂರಿನಿಂದ ಆಗಮಿಸಿದ ಎರಡು ಜೋಡಿ ಕೋಣಗಳು ಕುದಿ ಕಂಬಳದ ಟ್ರಯಲ್‌ಗೆ ಇಳಿಯಲಿದೆ.