ಹೂವಿನಹಡಗಲಿ;- ಸರಕಾರ ಮೂರು ಗುಂಪಾಗಿ ಸಿಎಂ ಕುರ್ಚಿಗಾಗಿ ಕಿತ್ತಾಡುತ್ತಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಬರಗಾಲದಿಂದ ಜನತೆ ಸಂಕಷ್ಟದಲ್ಲಿದ್ದು ರಾಜ್ಯ ಸರಕಾರ ಮೂರು ಗುಂಪಾಗಿ ಸಿ.ಎಂ ಕುರ್ಚಿಗಾಗಿ ಕಿತ್ತಾಡುತ್ತಾ ಜನರ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಎಂದರು. ರಾಜ್ಯದಲ್ಲಿ ಬರ ತೀವ್ರವಾದ ಹಿನ್ನಲೆಯಲ್ಲಿ ರೈತರು ಬೆಳೆದ ಬೆಳೆ ನಷ್ಟವಾಗಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಪ್ರತಿ ಹೋಬಳಿ ಮಟ್ಟದಲ್ಲಿಯು ಮೇವು ಬ್ಯಾಂಕ್ ಹಾಗೂ ಗೋಶಾಲೆ ಪ್ರಾರಂಭ ಮಾಡಬೇಕು. ಇಷ್ಟೆಲ್ಲಾ ಇದ್ದಾಗ್ಯೂ ಸಹ ಸಿದ್ದರಾಮಯ್ಯನವರ ಸರಕಾರ ಜನತೆಯನ್ನು ನಿರ್ಲಕ್ಷಿಸಿದೆ.ಕೇಂದ್ರದ ಬರ ತಂಡ ಅಧ್ಯಯನಕ್ಕೆ ಬಂದಾಗ ನಿಜವಾದ ರಾಜ್ಯದ ಪರಿಸ್ಥಿತಿ ತೋರಲು ಸರ್ಕಾರ ವಿಫಲವಾಗಿದೆ.ವಿನಾಃ ಕಾರಣ ಹಣ ನೀಡಿಲ್ಲ ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಡಿ.ಕೆ.ಶಿವಕುಮಾರ್ ಮುಖ್ಯ ಮಂತ್ರಿಯಾಗುತ್ತರೆ ಎಂದಾದಲ್ಲಿ ನಾನು ಶಾಸಕರ ಬೆಂಬಲ ಕೊಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿ ಅವರಿಬ್ಬರ ಸಂಬಂಧ…
Author: AIN Author
ಬೆಂಗಳೂರು;- ಸರ್ಕಾರದ ವೈಫಲ್ಯದಿಂದಲೇ ಅಧಿಕಾರಿಗಳ ಹತ್ಯೆಯಾಗ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳಿಗೆ, ಜನಸಾಮಾನ್ಯರಿಗೆ ರಕ್ಷಣೆ ಇಲ್ಲ. ರಾಜ್ಯದ ಹಿರಿಯ ಅಧಿಕಾರಿಯನ್ನ ಮೆನೆಗೆ ಹೋಗಿ ಹತ್ಯೆ ಮಾಡಿದ್ದಾರೆ. ಇಂತಹ ಉದ್ಧಟತನ ತೋರುವ ಕೆಲಸ ಆಗ್ತಿದೆ. ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ. ಇಂತಹ ವಾತಾವರಣ ಇದ್ರೆ ಯಾವ ಅಧಿಕಾರಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯ. ಸರ್ಕಾರ ಕಠಿಣವಾದ ಕ್ರಮ ಕೈಗೊಳ್ಳಬೇಕು. ಕಿಡಿಗೇಡಿಗಳಿಗೆ ಯಾವುದೇ ಲಂಗುಲಗಾಮು ಇಲ್ಲ. ಗೃಹ ಇಲಾಖೆ ವೈಫಲ್ಯ ಎದ್ದು ಕಾಣ್ತಿದೆ. ಯಾವಯಾವ ಭಾಗದಲ್ಲಿ ಏನೇನು ನಡೆಯುತ್ತೆ ಅಂತ ಪೊಲೀಸ್ ಇಲಾಖೆಗೆ ಮಾಹಿತಿ ಇರುತ್ತದೆ. ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುವ ವಾತಾವರಣ ಇಲ್ಲ. ವರ್ಗಾವಣೆ ಮಾಡಿ ಹಣವಸೂಲಿ ಮಾಡ್ತಾ ನಿಂತಿದ್ರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರಾ? ಸರ್ಕಾರದ ನಡೆಯಿಂದಲೇ ಇಂತಹ ಘಟನೆ ಜರುಗುತ್ತಿದೆ ಎಂದು ಕಿಡಿಕಾರಿದರು. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದನ್ನ ಕಾಂಗ್ರೆಸ್ ಅವರು ಹೇಳಬೇಕು. ಲೋಕ ಸಭೆ ಚುನಾವಣೆ…
ಬೆಂಗಳೂರು;- ಸಿಎಂ ಕುರ್ಚಿ ಮೇಲೆ ಡಜನ್‍ಗಟ್ಟಲೆ ಜನರು ಕಣ್ಣಿಟ್ಟಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕರ್ನಾಟಕದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಸಿಎಂ ಕುರ್ಚಿ ಮೇಲೆ ಡಜನ್‍ಗಟ್ಟಲೆ ಜನರು ಕಣ್ಣಿಟ್ಟು ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ ಸಿದ್ದರಾಮಯ್ಯನವರು ಸಿಎಂ ಆಗಿ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ ಎಂಬ ಅರ್ಥದಲ್ಲಿ ಪ್ರಧಾನಿಯವರು ಹೇಳಿಕೆ ನೀಡಿದ್ದಾರೆ ಎಂದರು. ಗ್ಯಾರಂಟಿ ಘೋಷಿಸಿದ್ದು, ಅಧಿಕಾರಕ್ಕೆ ಬಂದು ನುಡಿದಂತೆ ನಡೆದಿಲ್ಲ. ಯಾವುದೇ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ ಎಂದಿದ್ದಾರೆ. ನಾವೇನೂ ಗ್ಯಾರಂಟಿ ವಿರೋಧಿಗಳು ಅಲ್ಲ. ಖಜಾನೆಯಲ್ಲಿರುವ ಹಣ ಗಮನಿಸದೆ ಜನರಿಗೆ ಕೊಟ್ಟ ಆಶ್ವಾಸನೆ ಉಳಿಸಿಕೊಳ್ಳುವುದು ಹೇಗೆ? ನಿಜವಾಗಿ ನಾವು ಕೊಟ್ಟ ಆಶ್ವಾಸನೆಗಳನ್ನು ಉಳಿಸಿಕೊಳ್ಳಲು ಸಾಧ್ಯವೇ ಎಂಬುದನ್ನು ವಿವೇಚಿಸಬೇಕಾಗಿತ್ತು. ಮತ್ತು ಆ ನಿಟ್ಟಿನಲ್ಲಿ ಪರಿಜ್ಞಾನ ಇರಬೇಕಿತ್ತು ಎಂದು ಹೇಳಿದ್ದಾರೆ. ಸಂಪೂರ್ಣವಾಗಿ ಇಡೀ ಸರಕಾರವು ಭ್ರಷ್ಟಾಚಾರದ ಕೂಪದಲ್ಲಿ ತುಂಬಿ ಹೋಗಿದೆ. ಭ್ರಷ್ಟಾಚಾರದ ಕಾರಣದಿಂದ ರಾಜ್ಯ ದಿವಾಳಿ ಆಗಿದೆ. ಬರ ಪರಿಸ್ಥಿತಿ ತೀವ್ರವಾಗಿದೆ. ಕುಡಿಯುವ ನೀರಿನ ಸಮಸ್ಯೆಯೂ ಹೆಚ್ಚಾಗಿದೆ. ಇವೆಲ್ಲವನ್ನೂ ಸರಕಾರ ಗಮನಿಸುತ್ತಿಲ್ಲ…
ಮೈಸೂರು;-ಮುಖ್ಯಮಂತ್ರಿ ಹುದ್ದೆ ಚರ್ಚೆ ಅಪ್ರಸ್ತುತ ಎಂದು ಕೆ ಎಚ್ ಮುನಿಯಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಬಜೆಟ್‌ಗಳನ್ನು ನೀಡಿರುವ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಯಾವುದೇ ತಂಟೆ, ತರಕಾರು ಇಲ್ಲದೆಯೇ ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಸದ್ಯಕ್ಕೆ ಅಪ್ರಸ್ತುತ ಎಂದರು. ಪ್ರಜಾಪ್ರಭುತ್ವದಲ್ಲಿ ರಾಜ್ಯದ 224 ಶಾಸಕರೂ ಮಂತ್ರಿ ಆಗಬೇಕು, ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇರುವುದು ಸಹಜ. ಆಡಳಿತ ಪಕ್ಷದಲ್ಲಿ 136 ಶಾಸಕರಿದ್ದೇವೆ. ಹೀಗಾಗಿ ಸರ್ಕಾರದ ಸ್ಥಿರತೆಯನ್ನು ಪ್ರಶ್ನಿಸುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಬಂದೋಬಸ್ತ್ ಆಗಿ ಇರುತ್ತಾರೆ’ ಎಂದರು.
ಮೈಸೂರು;- ಮೈಸೂರು ನಗರಪಾಲಿಕೆ ಚುನಾವಣೆ ತಡ ಮಾಡುವುದಿಲ್ಲ ಎಂದು ಸಚಿವ ಬಿ.ಎಸ್. ಸುರೇಶ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಮೈಸೂರು ಮಹಾನಗರಪಾಲಿಕೆ ಚುನಾವಣೆಯನ್ನು ಸಕಾಲದಲ್ಲಿ ನಡೆಸಲಾಗುವುದು. ಈ ವಿಷಯದಲ್ಲಿ ತಡ ಮಾಡುವ ಪ್ರಶ್ನೆಯೇ ಇಲ್ಲ’ ಎಂದರು. ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಚುನಾವಣೆ ನಡೆಸಲು ಉತ್ಸುಕರಾಗಿದ್ದೇವೆ. ಮುಂಬರುವ ಲೋಕಸಭಾ ಚುನಾವಣೆಗೂ ಪಾಲಿಕೆ ಚುನಾವಣೆ ನಡೆಸುವುದಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು. ‘ಪಾಲಿಕೆ ಚುನಾವಣೆ ಮೀಸಲಾತಿ ಬಗ್ಗೆಯೂ ಈಗಾಗಲೇ ಪ್ರಕ್ರಿಯೆ ಶುರುವಾಗಿದೆ. ನಮಗೆ ಚುನಾವಣೆ ಪ್ರಕ್ರಿಯೆ ನಡೆಸಲು 15 ದಿನ ಸಾಕು’ ಎಂದರು. ‘ಮೈಸೂರು-ಬೆಂಗಳೂರನ್ನು ಅವಳಿ ನಗರಗಳಾಗಿ ಪರಿಗಣಿಸಿ ಅಭಿವೃದ್ಧಿಪಡಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿಯೇ ಹಲವು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಬೆಂಗಳೂರಿನಿಂದಾಚೆಗಿನ ನಗರಗಳು ಬೆಳೆಯಬೇಕು ಎಂಬುದು ನಮ್ಮ ಆಶಯವಾಗಿದೆ’ ಎಂದರು.
ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 279 ರನ್‌ಗಳಿಗೆ ಸರ್ವಪತನ ಕಂಡಿತು. ಮೊದಲಿಗೆ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. 49.3 ಓವರ್‌ಗಳಲ್ಲಿ ಶ್ರೀಲಂಕಾ 279 ರನ್ ಗಳಿಸಿತು. ಬಾಂಗ್ಲಾದೇಶದ ಬೌಲರ್‌ಗಳು ಆರಂಭದಲ್ಲೇ ಎರಡು ಪ್ರಮುಖ ವಿಕೆಟ್ ಕಬಳಿಸಿ ಆತ್ಮವಿಶ್ವಾಸದಲ್ಲಿ ಆಡುತ್ತಿದ್ದಾರೆ. ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಪಂದ್ಯವು ಬಾಂಗ್ಲಾಗಿಂತ ಶ್ರೀಲಂಕಾಕ್ಕೆ ಮುಖ್ಯವಾಗಿದೆ. ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ಲಂಕಾ ತಂಡಕ್ಕೆ ಇನ್ನೆರಡು ಪಂದ್ಯಗಳು ಬಾಕಿಯಿವೆ. ಅವೆರೆಡರಲ್ಲೂ ಜಯ ಸಾಧಿಸಿದರೆ ನಾಲ್ಕರ ಘಟ್ಟಕ್ಕೆ ಪ್ರವೇಶಿಸುವ ಅಣ್ಣ ಅವಕಾಶ ಅದಕ್ಕಿದೆ. ಅದಾಗದಿದ್ದರೂ ಅಂತಿಮ ಏಳು ತಂಡಗಳಲ್ಲಿ ಸ್ಥಾನ ಉಳಿಸಿಕೊಂಡರೆ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ನೇರ ಅರ್ಹತೆ ಗಿಟ್ಟಿಸಬಹುದು ಎಂಬ ಲೆಕ್ಕಾಚಾರದಲ್ಲಿ ಕುಸಾಲ ಮೆಂಡಿಸ್ ಬಳಗ ಇದೆ.
ಬೆಂಗಳೂರು;- ಪ್ರತಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಆಯ್ಕೆ ವಿಳಂಬದಿಂದ ಪಕ್ಷಕ್ಕೆ ಹಿನ್ನಡೆ ಸಹಜ ಎಂದು ಎ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವಿಳಂಬದಿಂದ ರಾಜ್ಯದಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವುದು ಸಹಜ. ಪಂಚರಾಜ್ಯಗಳ ಚುನಾವಣೆ ನಂತರ ಪಕ್ಷದ ವರಿಷ್ಠರು ಈ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. ಪ್ರತಿಯೊಂದು ರಾಜಕೀಯ ಪಕ್ಷಕ್ಕೆ ಹೈಕಮಾಂಡ್ ಇರುತ್ತದೆ. ಪಕ್ಷದ ಒಳಿತು, ಜನಹಿತ ಸಾಧನೆಗೆ ಯೋಗ್ಯವಾದ ತೀರ್ಮಾನ ಕಾಲಕಾಲಕ್ಕೆ ತೆಗೆದುಕೊಳ್ಳುತ್ತಾರೆ. ಜೆಡಿಎಸ್ ಪಕ್ಷವನ್ನು ಎನ್ಡಿಎಗೆ ಸೇರಿಸಿಕೊಂಡಿದ್ದು, ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವ ತೀರ್ಮಾನವೆಲ್ಲ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಂತದಲ್ಲೇ ಆಗಿದೆ ಎಂದು ಸ್ಪಷ್ಟಪಡಿಸಿದರು. ಜಾತಿ ರಾಜಕಾರಣ ಇಷ್ಟಪಡುವುದಿಲ್ಲ, ಆ ಬಗ್ಗೆ ಹೆಚ್ಚು ಮಾತನಾಡಲು ಬಯಸುವುದಿಲ್ಲ. 3-4 ರಾಜ್ಯಗಳು ಬಿಟ್ಟರೆ ಬೇರೆಲ್ಲೂ ದಲಿತರು ಮುಖ್ಯಮಂತ್ರಿಯಾದದ್ದಿಲ್ಲ. ಈಗಲೂ ದಲಿತರು ಹಾಗೂ ಹಿಂದುಳಿದವರು ಚುನಾವಣೆಯಲ್ಲಿ ಸ್ಪರ್ಧಿಸಲು ರಾಜಕೀಯ ಪಕ್ಷಗಳ ನಾಯಕರ ಮನೆ ಬಾಗಿಲು ಕಾಯುವುದು ತಪ್ಪಿಲ್ಲ. ದಲಿತ ಸಿಎಂ ಚರ್ಚೆಗಿಂತ…
ಬೆಂಗಳೂರು;- 2028ರಲ್ಲಿ ಸಿಎಂ ಸ್ಥಾನಕ್ಕಾಗಿ ಕ್ಲೈಮ್ ಮಾಡುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್ ಮಾಡುತ್ತೇನೆ ಎಂದರು. ಬೇರೆಯವರು ಕೇಳುವುದು, ಬಿಡುವುದು ಅವರವರ ಇಷ್ಟಕ್ಕೆ ಬಿಟ್ಟದ್ದು. ನಾವು 28ಕ್ಕೆ ಕ್ಲೈಂ ಮಾಡ್ತೇವೆ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಹೇಳಿದ್ದಾರೆ, ಬೇರೆಯವರು ಹೇಳುವ ಅಗತ್ಯವಿಲ್ಲ ಎಂದರು. ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಪಕ್ಷದ ತೀರ್ಮಾನವೇ ನನ್ನ ತೀರ್ಮಾನ. ಈಗ ಅಂತಹ ಪರಿಸ್ಥಿತಿ ಉದ್ಭವಿಸಿಲ್ಲ ಎಂದರು. ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನಾಡಿನ ದೊರೆಯಾಗುವ ಶಕ್ತಿ ಇದೆ. ಬರುವ ದಿನಗಳಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ. ರಾಜ್ಯ ರಾಜಕೀಯದಲ್ಲಿ ಏನಾದರೂ ಬೆಳವಣಿಗೆಗಳು ನಡೆದರೆ ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂಬ ಸಂದೇಶ ಕಳುಹಿಸೋಣ” ಎಂಬ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಅವರು ಸಮುದಾಯದ ಪರವಾಗಿ ಹೇಳಿದ್ದಾರೆ.…
ಬೆಂಗಳೂರು;- 2028ರಲ್ಲಿ ಸಿಎಂ ಸ್ಥಾನಕ್ಕಾಗಿ ಕ್ಲೈಮ್ ಮಾಡುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್ ಮಾಡುತ್ತೇನೆ ಎಂದರು. ಬೇರೆಯವರು ಕೇಳುವುದು, ಬಿಡುವುದು ಅವರವರ ಇಷ್ಟಕ್ಕೆ ಬಿಟ್ಟದ್ದು. ನಾವು 28ಕ್ಕೆ ಕ್ಲೈಂ ಮಾಡ್ತೇವೆ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಹೇಳಿದ್ದಾರೆ, ಬೇರೆಯವರು ಹೇಳುವ ಅಗತ್ಯವಿಲ್ಲ ಎಂದರು. ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಪಕ್ಷದ ತೀರ್ಮಾನವೇ ನನ್ನ ತೀರ್ಮಾನ. ಈಗ ಅಂತಹ ಪರಿಸ್ಥಿತಿ ಉದ್ಭವಿಸಿಲ್ಲ ಎಂದರು. ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನಾಡಿನ ದೊರೆಯಾಗುವ ಶಕ್ತಿ ಇದೆ. ಬರುವ ದಿನಗಳಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ. ರಾಜ್ಯ ರಾಜಕೀಯದಲ್ಲಿ ಏನಾದರೂ ಬೆಳವಣಿಗೆಗಳು ನಡೆದರೆ ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂಬ ಸಂದೇಶ ಕಳುಹಿಸೋಣ” ಎಂಬ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಅವರು ಸಮುದಾಯದ ಪರವಾಗಿ ಹೇಳಿದ್ದಾರೆ.…
ಹುಬ್ಬಳ್ಳಿ: ಕೀಲಿ ಮುರಿದು ಮನೆಯಲ್ಲಿದ್ದ 3.54 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಇಲ್ಲಿನ ಗೋಕುಲ ರಸ್ತೆಯ ಮಂಜುನಾಥ ನಗರದಲ್ಲಿ ನಡೆದಿದೆ. ವೀರಪ್ಪ ಮಂಗಳೂರು ಎಂಬುವರ ಮನೆಯಲ್ಲಿದ್ದ 3.17 ಲಕ್ಷ ರೂ. ಮೌಲ್ಯದ 55 ಗ್ರಾಂ ಚಿನ್ನಾಭರಣ, 550 ಗ್ರಾಂ ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.