ಬೆಂಗಳೂರು:- ಸಂತ್ರಸ್ತೆಗೆ ಆರೋಪಿಯೇ ಜೀವನಾಧಾರ ಎಂದು ಅಭಿಪ್ರಾಯ ಪಟ್ಟ ಹೈಕೋರ್ಟ್ ಪೀಠವು, ಬಾಲ್ಯವಿವಾಹ ಕಾಯಿದೆಯಡಿ ತನಿಖೆಗೆ ಗುರಿಯಾಗಿದ್ದ ವ್ಯಕ್ತಿ ವಿರುದ್ಧದ ಪ್ರಕರಣ ರದ್ದುಪಡಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಸಂತ್ರಸ್ತೆಯ ಆಧಾರ್ ಕಾರ್ಡ್ ಪರಿಶೀಲಿಸಿದ ನ್ಯಾಯಪೀಠ, ಅರ್ಜಿದಾರರು ಸಂತ್ರಸ್ತೆಯನ್ನು ವಿವಾಹವಾದ ಸಂದರ್ಭದಲ್ಲಿ 17 ವರ್ಷ 8 ತಿಂಗಳಾಗಿತ್ತು. ಪ್ರಸ್ತುತ 22 ವರ್ಷ ವಯಸ್ಸಾಗಿದೆ. ಜತೆಗೆ, ಅರ್ಜಿದಾರರನ್ನೇ ಆಕೆ ಮತ್ತು ಆಕೆಯ ಮಗು ಜೀವನಾಧಾರವನ್ನಾಗಿಸಿಕೊಂಡಿದ್ದಾರೆ ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ, ಸಂತ್ರಸ್ತೆ(ಪತ್ನಿ)ಯ ಪ್ರಮಾಣಪತ್ರ ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರನ್ನು ಶಿಕ್ಷೆಗೆ ಗುರಿಪಡಿಸಿದಲ್ಲಿ ಸಂತ್ರಸ್ತೆ ಮತ್ತು ಆಕೆಯ ಮಗುವನ್ನು ಸಂಕಷ್ಟಕ್ಕೆ ದೂಡಿದಂತಾಗಲಿದೆ. ಇದು ಕಾನೂನಿನ ದುರ್ಬಳಕೆಯಾಗಲಿದೆ. ಆದ ಕಾರಣ ಅರ್ಜಿದಾರರ ವಿರುದ್ಧದ ವಿಚಾರಣೆ ರದ್ದುಪಡಿಸುತ್ತಿರುವುದಾಗಿ ಪೀಠ ತಿಳಿಸಿದೆ.
Author: AIN Author
ಪೀಣ್ಯ ದಾಸರಹಳ್ಳಿ:’ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು. ಕೆರೆ ಗುಡ್ಡದಹಳ್ಳಿ ಸರ್ಕಾರಿ ಶಾಲೆಗೆ ಕೊಠಡಿ ಮತ್ತು ಚರಂಡಿ, ಮಂಜುನಾಥ ನಗರದ ಸರ್ಕಾರಿ ಶಾಲೆಗೆ ನೂತನ 5 ಕೊಠಡಿ ನಿರ್ಮಾಣ, ಮಲ್ಲಸಂದ್ರದಲ್ಲಿ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಿ ಮಾತನಾಡಿದರು. ಈ 5 ವರ್ಷಗಳಲ್ಲಿ ಸರ್ಕಾರಿ ಶಾಲೆಗಳಿಗೆ ಒಂದು ಕೊಠಡಿ ಸಹ ನಿರ್ಮಾಣವಾಗಿಲ್ಲ, ನನ್ನ ಅವಧಿಯಲ್ಲಿ 300ಕ್ಕೂ ಹೆಚ್ಚು ಕೊಠಡಿಗಳು, ಕಾಂಪೌಂಡು, ಪೀಠೋಪಕರಣ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇನ್ನು ಮುಂತಾದ ಸೌಲಭ್ಯಗಳನ್ನು ಸರ್ಕಾರಿ ಶಾಲೆಗಳಿಗೆ ಮಾಡಲಾಗಿತ್ತು’ ಎಂದು ವಿವರಿಸಿದರು. ಮಂಜುನಾಥ ನಗರದ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು 1100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇಲ್ಲಿ ಕೊಠಡಿಗಳ ಕೊರತೆ ಇದ್ದು ಅನೇಕ ವಿದ್ಯಾರ್ಥಿಗಳು ದಾಖಲಾತಿ ಸಿಗದೇ ವಾಪಸ್ ಹೋಗಿದ್ದಾರೆ. ಖಾಸಗಿ ಶಾಲೆಯಲ್ಲಿ ಸಿಗುವಂತಹ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲೂ ಸಿಗಬೇಕು ಎಂಬ ನಿಟ್ಟಿನಲ್ಲಿ ಗುಣಮಟ್ಟದ ಕಟ್ಟಡ…
ಹುಬ್ಬಳ್ಳಿ :- ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ನವೆಂಬರ್ 12ರಿಂದ ಸಿಲುಕಿದ್ದ 41 ಕಾರ್ಮಿಕರನ್ನು ಕೊನೆಗೂ ಯಶಸ್ವಿಯಾಗಿ ಹೊರಗೆ ಕರೆತರಲಾಗಿದೆ. ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಹರ್ಷ ವ್ಯಕ್ತಪಡಿಸಿದ್ದಾರೆ. ‘ಉತ್ತರಾಖಂಡದಲ್ಲಿ ಕುಸಿದ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಹೊರತರುವ ಕಾರ್ಯಾಚರಣೆ ಯಶಸ್ವಿಯಾಯಿತು ಎಂದು ತಿಳಿದು ಹರ್ಷವೆನಿಸಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಎದುರಾದ ಹಲವು ಅಡೆತಡೆಗಳು, ಸವಾಲುಗಳನ್ನು ಎದುರಿಸಿ ಇವರನ್ನು ರಕ್ಷಿಸಲಾಗಿದೆ. ಇವರನ್ನು ರಕ್ಷಿಸುವಲ್ಲಿ ಕಲ್ಪಿಸಲಾದ ಕ್ಲಿಷ್ಟಕರ ಮೂಲಸೌಕರ್ಯ ಹಾಗೂ ವೈಯಕ್ತಿಕ ಅಪಾಯವನ್ನೂ ಮೀರಿ ಕಾರ್ಮಿಕರನ್ನು ಹೊರತರುವಲ್ಲಿ ನಡೆಸಿದ ಸಾಹಸಕ್ಕೆ ಇಡೀ ತಂಡಕ್ಕೆ ನಾನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ. ಕಾರ್ಮಿಕರ ಸ್ಟೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಮಿಕರಿಗೆ ಹೊಸ ಬದುಕು ಕೊಟ್ಟ ಎಲ್ಲ ರಕ್ಷಣಾ ಕಾರ್ಯಾಚರಣೆ ಯಲ್ಲಿ ತೊಡಗಿದ್ದ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ
ಕಲಬುರ್ಗಿ:- ಕಾಮಗಾರಿಗಳ ಬಗ್ಗೆ ಪ್ರಶ್ನೆ ಕೇಳಿದ್ರೆ ಸದನದಲ್ಲಿ ಸಚಿವ ಕೃಷ್ಣ ಭೈರೇಗೌಡ ನನ್ನ ಮೇಲೆಯೇ ಆರೋಪ ಮಾಡಿದ್ರು ಹೀಗಾಗಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದ ಹಿನ್ನಲೆ ಸಿಎಂಗೆ ಖಾರವಾಗಿ ಪತ್ರ ಬರೆದಿದ್ದೇನೆ ಅಂತ ಅಳಂದ ಶಾಸಕ ಬಿಆರ್ ಪಾಟೀಲ್ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಪಾಟೀಲ್ ಪಂಚರಾಜ್ಯ,ಚುನಾವಣೆ ಇದ್ದ ಕಾರಣ ಇಷ್ಟು ದಿನ ಸುಮ್ಮನಿದ್ದೆ ಅದಕ್ಕಾಗಿ ಈಗ ಪತ್ರ ಬರೆದಿದ್ದು ಸಚಿವ ಕೃಷ್ಣ ಬೈರೇಗೌಡರನ್ನ ಕರೆಸಿ ತನಿಖೆ ಮಾಡಬೇಕು ಅಲ್ಲಿಯವರೆಗೂ ಬೆಳಗಾವಿ ಅಧಿವೇಶನಕ್ಕೂ ಹೋಗಲ್ಲ ಅಂದ್ರು.. ಇದೇವೇಳೆ ಸ್ವಪಕ್ಷೀಯ ಶಾಸಕರ ವಿರುದ್ಧವೇ ಬೇಸರ ಹೊರಹಾಕಿರುವ ಪಾಟೀಲ್ ಕಾಮಗಾರಿ ವಿಚಾರದಲ್ಲಿ ನಾನು ಹಣಪಡೆದ ರೀತಿಯಲ್ಲಿ ಸಚಿವರು ಆರೋಪ ಮಾಡಿದಾಗ ನಮ್ಮ ಜಿಲ್ಲೆಯ ಶಾಸಕರೂ ಸೇರಿದಂತೆ ಯಾರೊಬ್ಬರೂ ನನ್ನ ಬೆಂಬಲಕ್ಕೆ ನಿಲ್ಲಲಿಲ್ಲ ಅದಕ್ಕೆ ಸಿಎಂಗೆ ಪತ್ರ ಬರೆದಿದ್ದು ಅಂತ ಹೇಳಿದ್ರು..
ಕದರಮಂಡಲಗಿ :- ಯುವಕರು ಮನಸ್ಸು ಮಾಡಿದರೆ ಏನೆಲ್ಲ ಸಾಧಿಸಬಹುದು ಎನ್ನುವುದಕ್ಕೆ ತಾಲ್ಲೂಕಿನ ಸುಕ್ಷೇತ್ರ ಕದರಮಂಡಲಗಿ ಗ್ರಾಮದಲ್ಲಿ 1ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಕಟ್ಟಡವೇ ಸಾಕ್ಷಿಯಾಗಿದೆ. ಈ ಶಾಲೆಯಲ್ಲಿ ಕಲಿತು ವಿದೇಶದಲ್ಲಿ ನೆಲೆಸಿರುವ, ಆರ್‌ಟಿಒ, ಕೆಎಸ್‌ಆರ್‌ಟಿಸಿ, ಶಿಕ್ಷಣ, ಪೊಲೀಸ್ ಸೇರಿದಂತೆ ಅನೇಕ ಇಲಾಖೆಗಳಲ್ಲಿ ಕೆಲಸ ಮಾಡುವ ಹಾಗೂ ಬೀಜೋತ್ಪಾದಕ ಕಂಪನಿಗಳನ್ನು ಸ್ಥಾಪಿಸಿಕೊಂಡ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಗುಂಪು ರಚಿಸಿಕೊಂಡು ನೆರವು ಪಡೆದುಕೊಳ್ಳಲಾಗಿದೆ. ನಾವು ಕಲಿತ ಶಾಲೆ ಉಳಿಸಿ ಬೆಳಸಬೇಕು ಎಂದು ಇಷ್ಟು ದೊಡ್ಡ ಮೊತ್ತದ ಹಣ ಸಂಗ್ರಹ ಮಾಡಿ ಈ ಸುಸಜ್ಜಿತ ಶಾಲೆ ನಿರ್ಮಾಣ ಮಾಡಲಾಗಿದೆ. ಇನ್ಮೂ ಈ ಶಾಲೆಯನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವೇ ಉದ್ಘಾಟನೆ ಮಾಡಲಿದ್ದಾರೆ, ಈ ಹಳೆಯ ವಿದ್ಯಾರ್ಥಿಗಳು ಮಾಡಿರುವ ಕಾರ್ಯಕ್ಕೆ ಇದೀಗ ಎಲ್ಲಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮಹದೇವಪುರ: ಕರ್ನಾಟಕ ರಾಜ್ಯ ಖೋ- ಖೋ ಸ್ಪೋರ್ಟ್ಸ್ ಸಂಸ್ಥೆ ಹಾಗೂ ಗುಂಜೂರು ಖೋ- ಖೋ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಅತಿ ಕಿರಿಯ ಬಾಲಕ ಬಾಲಕಿಯರ ಹೊನಲು ಬೆಳಕಿನ ಖೋ ಖೋ ಸ್ಪರ್ಧೆಯಲ್ಲಿ ಗುಂಜೂರು ಖೋ-ಖೋ ಸ್ಪೋರ್ಟ್ಸ್ ಕ್ಲಬ್ ನ ಬಾಲಕಿಯರು ಮತ್ತು ಬೆಂಗಳೂರು ಪೈನೀಯಿರ್ಸ್ ನ ಬಾಲಕರು ಪ್ರಥಮಸ್ಥಾನ ಪಡೆದಿದ್ದಾರೆ. ರಾಜ್ಯ ಮಟ್ಟದ ಖೋ- ಖೋ ಸ್ಪರ್ಧೆಯ ಕ್ರೀಡಾ ಕೂಟದಲ್ಲಿ ಬೆಂಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ. ಮೈಸೂರು, ಮಂಡ್ಯ, ತುಮಾಕೂರು ರಾಯಚೂರು, ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ 102 ತಂಡಗಳು ಭಾಗವಹಿಸಿದ್ದವು. ಬಾಲಕಿಯರ ವಿಭಾಗದ ಪೈನಲ್ ಪಂದ್ಯದಲ್ಲಿ ಟಿ.ನರಸೀಪುರ ತಂಡ ಮತ್ತು ಗುಂಜೂರು ಖೋ- ಖೋ ಸ್ಪೋರ್ಟ್ಸ್ ಕ್ಲಬ್ ನ ಬಾಲಕಿಯರ ತಂಡ ಸೆಣಸಾಡಿ ಅಂತಿಮವಾಗಿ ಗುಂಜೂರು ಖೋ- ಖೋ ಸ್ಪೋರ್ಟ್ಸ್ ಕ್ಲಬ್ ನ ಬಾಲಕಿಯರು ಪ್ರಥಮ ಸ್ಥಾನ ಪಡೆದರೆ ಟಿ.ನರಸೀಪುರದ ಬಾಲಕಿಯರ ತಂಡವು ದ್ವೀತಿಯ ಸ್ಥಾನ ಪಡೆಯಿತು. ಬಾಲಕರ…
ಕೆಆರ್‌ಪುರ:- ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವ ಕೇಂಬ್ರಿಡ್ಜ್ ಕಾಲೇಜಿನ ಕಾರ್ಯ ಶ್ಲಾಘನೀಯ ಎಂದು ನಟ ಪ್ರೇಮ್ ಅವರು ತಿಳಿಸಿದರು. ಕೆಆರ್‌ಪುರದ ಕೇಂಬ್ರಿಡ್ಜ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಚಿಗುರು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚಿಗುರು ಕಾರ್ಯಕ್ರಮ ಪ್ರತೀ ವರ್ಷ ವಿಜೃಂಭಣೆಯ ಕಳೆ ಕಟ್ಟುತ್ತಿದೆ. ರಾಜ್ಯಮಟ್ಟದಲ್ಲಿ ಈ ಕಾರ್ಯಕ್ರಮ ಹೆಸರು ಮಾಡಿದೆ ಎಂದು ಹೇಳಿದರು. ಕೇಂಬ್ರಿಡ್ಜ್ ಕಾಲೇಜಿನ ಅಧ್ಯಕ್ಷ ಡಿ.ಕೆ.ಮೋಹನ್ ಅವರು ಮಾತನಾಡಿ ಚಿಗುರು ಕಾರ್ಯಕ್ರಮದಲ್ಲಿ ಅಂತರ್ ಕಾಲೇಜು ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತದೆ, ಈ ಬಾರಿ ಸುಮಾರು 66 ಕಾಲೇಜುಗಳಿಂದ ವಿವಿಧ ಪ್ರತಿಭೆಗಳು ಭಾಗವಹಿಸಿದ್ದಾರೆ. ಎರಡು ದಿನದ ಈ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ಹೇಳಿದರು. ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಹೊರತರಲು ಈ ವೇದಿಕೆ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು. ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ, ಸಾಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸುವಂತೆ ಮಕ್ಕಳಿಗೆ ಪೋಷಕರೂ ಸಹ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.ಕೇಂಬ್ರಿಡ್ಜ್ ಕಾಲೇಜಿನಲ್ಲಿ ವಿದ್ಯೆಗೆ, ಕ್ರೀಡೆಗೆ, ಸಾಂಸ್ಕೃತಿಕ…
ಚಾಮರಾಜನಗರ:- ಮುಖ್ಯಮಂತ್ರಿ ಸಿದ್ದರಾಮ ಯ್ಯ ಅವರು ಡಿಸೆಂಬರ್ 20ರ ಒಳಗೆ ಸರಸ್ವತಿ ಅವರನ್ನು ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯನ್ನಾಗಿ ಮುಂದುವರೆಸಿ ಆದೇಶ ಮಾಡದಿದ್ದರೆ ‘ನಮ್ಮ ಕನ್ನಡಿಗರ ವಿಜಯ ಸೇನೆ’ವತಿಯಿಂದ ಮಲೆ ಮಹದೇಶ್ವರಬೆಟ್ಟದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ಮಾಡಲಾಗುವುದು ಎಂದು ‘ನಮ್ಮ ಕನ್ನಡಿಗರ ವಿಜಯ ಸೇನೆ’ಯ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಎಚ್ಚರಿಸಿದ್ದಾರೆ. ವಾ.ಓ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿರುವ ಸರಸ್ವತಿ ಅವರನ್ನು ವರ್ಗಾವಣೆ ಮಾಡಿಸಬೇಕೆಂದು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪದೇ ಪದೇ ಸಿಎಂ ಅವರಿಗೆ ಪತ್ರ ಬರೆದು ಸಂಚು ನಡೆಸುತ್ತಿದ್ದಾರೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಜೆ.ಮಹೇಶ್ ಅವರನ್ನು ಮಲೆ ಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹುದ್ದೆಗೆ ನಿಯೋಜಿಸುವಂತೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಸಿಎಂ ಅವರಿಗೆ ಪತ್ರ ಬರೆದಿದ್ದಾರೆ. ಜೆ.ಮಹೇಶ್ ಅವರು ಹನೂರಿನಲ್ಲಿ ದ್ವಿತೀಯ ಶ್ರೇಣಿ ತಹಸಿಲ್ದಾರ್ ಆಗಿದ್ದ ವೇಳೆ…
ಬೆಂಗಳೂರು:- ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ ಎಂದು ಬಿಜೆಪಿ ಸಾಬೀತು ಪಡಿಸಿಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳವಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ ಎಂಬುದನ್ನು ಅವರು ಸಾಬೀತುಪಡಿಸಲಿ ಎಂದರು. ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರನ್ನೂ ತಲುಪುತ್ತಿಲ್ಲ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕೇವಲ ಆರೋಪ ಮಾಡುವ ಉದ್ದೇಶದಿಂದ ಆರೋಪಿಸುತ್ತಿದ್ದಾರೆ. ಇದುವರೆಗೆ 1.17 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದೆ. ಇದರಲ್ಲಿ 1.14 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿದ್ದು, ಇನ್ನೂ 3 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿಸಲಾಗುವುದು ಎಂದರು. ಡಿಸೆಂಬರ್ ಅಂತ್ಯದೊಳಗೆ ಗೃಹಲಕ್ಷ್ಮಿ ನೋಂದಾಯಿಸಿಕೊಂಡಿರುವವರಿಗೆ ಆಗಿರುವ ತಾಂತ್ರಿಕ ಸಮಸ್ಯೆಗಳನ್ನು ನೀಗಿಸಿ, ಹಣ ಒದಗಿಸಲು ಸೂಚನೆ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 4.34 ಕೋಟಿ ಜನರಿಗೆ ಪ್ರತಿ ಮಾಹೆ 170 ರೂ. ನೀಡಲಾಗುತ್ತಿದೆ. ಇದುವರೆಗೂ 1.50 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡುತ್ತಿರುವುದು ಸುಳ್ಳು ಎನ್ನುವುದಾರೆ…
ಮುಂಬೈ ಇಂಡಿಯನ್ಸ್ಗೆ ಮರಳಲು ಹಾರ್ದಿಕ್ ಪಾಂಡ್ಯ ಅಪಾರವಾದ ಹಂಬಲ ವ್ಯಕ್ತಪಡಿಸಿದ್ದರಿಂದ ಅವರ ನಿರ್ಧಾರ ಗೌರವಿಸಿದ್ದೇವೆ ಎಂದು ಗುಜರಾತ್ ಟೈಟಾನ್ಸ್ ತಂಡದ ನಿರ್ದೇಶಕ ವಿಕ್ರಮ್ ಸೋಲಂಕಿ ಹೇಳಿದ್ದಾರೆ. ಮುಂಬೈ ಜತೆಗಿನ ಈ ಭಾವನಾತ್ಮಕ ಸಂಬಂಧದ ಕಾರಣವಲ್ಲದೆ, ವರ್ಗಾವಣೆಯಿಂದಾಗಿ ಸಿಗುವ ಹೆಚ್ಚುವರಿ ಹಣದ ಆಸೆಯಿಂದಲೂ ಹಾರ್ದಿಕ್ ತವರು ರಾಜ್ಯದ ಗುಜರಾತ್ ತಂಡವನ್ನು ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ, ಮುಂಬೈಗೆ ಮರಳಿರುವ ಹಾರ್ದಿಕ್ ನಡೆಯನ್ನು ಖ್ಯಾತ ವೀಕ್ಷಕವಿವರಣೆಕಾರ ಆಕಾಶ್ ಚೋಪ್ರಾ ಟೀಕಿಸಿದ್ದಾರೆ. ‘ಗುಜರಾತ್ ತಂಡದ ನಾಯಕರಾಗುವ ಸಲುವಾಗಿ ಹಾರ್ದಿಕ್ ಮುಂಬೈ ತಂಡ ತ್ಯಜಿಸಿದ್ದರು. ಇದೀಗ ರಾಷ್ಟ್ರೀಯ ತಂಡಕ್ಕೂ ನಾಯಕರಾಗಿದ್ದರೂ ಅವರು, ನಾಯಕರಾಗುವ ಖಚಿತತೆ ಇಲ್ಲದೆ ಮುಂಬೈ ತಂಡಕ್ಕೆ ಮರಳಿದ್ದಾರೆ. ಟಿ20 ವಿಶ್ವಕಪ್ಗೆ ಭಾರತ ತಂಡದ ನಾಯಕರಾಗುವವರು, ಫ್ರಾಂಚೈಸಿ ತಂಡಕ್ಕೆ ನಾಯಕರಲ್ಲ. ಇದರ ಔಚಿತ್ಯ ಅರ್ಥವಾಗುತ್ತಿಲ್ಲ’ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.