ಶನಿವಾರ ನಡೆದ ವಾರದ ಕಥೆ ಕಿಚ್ಚನ ಜತೆ ಸಂಚಿಕೆಯಲ್ಲಿ ಬಿಗ್‌ಬಾಸ್ ಮನೆಯಿಂದ ಡಬಲ್ ಎಲಿಮಿನೇಷನ್ಗೆ ಮೊದಲು ತುತ್ತಾಗಿದ್ದು ಇಶಾನಿ, ಬಿಗ್ ಮನೆಯಿಂದ ಹೊರಬಿದ್ದ ಕೂಡಲೇ ಸುದೀಪ್ ಎದುರು ಬಿಕ್ಕಿ ಬಿಕ್ಕಿ ಅತ್ತರು. ಬಿಗ್ ಬಾಸ್ ಮನೆಯೊಳಗೆ ಕಳೆದ ನೆನಪುಗಳು, ಸದಸ್ಯರ ಜತೆಗಿದ್ದ ಅನುಭವವನ್ನು ಜಿಯೋ ಸಿನಿಮಾ ನಡೆಸಿದ ಕಿರು ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ನನಗೆ ಏನು ಹೇಳಬೇಕು ಗೊತ್ತಾಗ್ತಿಲ್ಲ. ಬಿಗ್‌ಬಾಸ್ ಮನೆಯಿಂದ ಆಚೆ ಬಂದಿದೀನಿ. 99 ಪರ್ಸೆಂಟ್ ನಾನು ಇರ್ತೀನಿ ಅಂತ ಆತ್ಮವಿಶ್ವಾಸವಿತ್ತು. ಉಳಿದ ಒಂದು ಪರ್ಸೆಂಟ್ ನನಗೆ ಆಗಲ್ಲ ಅನಿಸಿತ್ತು. ನನಗೆ ಹಟ ಜಾಸ್ತಿ ಇದೆ. ಗೇಮ್ ಆಡುವ ಅವಕಾಶ ಜಾಸ್ತಿ ಸಿಗಲಿಲ್ಲ. ಅದರಿಂದ ನನಗೆ ಬೇಜಾರಾಗಿತ್ತು. ನನ್ನನ್ನು ಯಾರೂ ಸೀರಿಯಸ್ ಆಗಿ ತಗೊಂಡಿರಲಿಲ್ಲ. ಹಾಗಾಗಿ ನನ್ನ ಸ್ಟ್ರೆಂಥ್ ತೋರಿಸಲಾಗಲಿಲ್ಲ’ ಎಂದರು. ಮತ್ತೆ ಬಿಗ್‌ಬಾಸ್‌ಗೆ ಹೋಗುವುದು ಸಾಧ್ಯವಾದರೆ ನಾನು ನನ್ನದೇ ಲೆಕ್ಕಾಚಾರ ಇಟ್ಟುಕೊಂಡು ಆಟ ಆಡುತ್ತಿದ್ದೆ. ಯಾರು ಫೇಕ್, ಯಾರು ರಿಯಲ್ ಎಂದು ವಿಶ್ಲೇಷಿಸಿ ಮುಂದಡಿ ಇಡುತ್ತಿದ್ದೆ. ಟಾಸ್ಕ್ ವಿಷಯಲ್ಲಿಯೂ ನಾನು…
Author: AIN Author
ಜೈಪುರ:- ರಾಜಸ್ಥಾನಕ್ಕೆ ಬೇಕಿರುವುದು ಭ್ರಷ್ಟ ಸರ್ಕಾರವಲ್ಲ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜಸ್ಥಾನ ಜನರರಿಗೆ ಬೇಕಾಗಿರುವುದು ರಾಜ್ಯವನ್ನು ಅಭಿವೃದ್ಧಿಯತ್ತ ಕರೆದೊಯ್ಯುವ ಸರ್ಕಾರವೇ ಹೊರತು ಭ್ರಷ್ಟಾಚಾರದಿಂದ ಕೂಡಿದ ಹಾಗೂ ಕುಟುಂಬ ರಾಜಕಾರಣವಲ್ಲ ಎಂದರು. ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಮಹಿಳಾ ವಿರೋಧಿ ಮನಸ್ಥಿತಿಯನ್ನು ಹೊಂದಿದೆ ಎಂದರು. ನಾರಿ ಶಕ್ತಿ ವಂದನಾ ಅಧಿನಿಯಮ’ ಎಂಬ ಹೆಸರಿನಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಮಾಡಿದಾಗಿಂದಲೂ ‘ಇಂಡಿಯಾ ಮೈತ್ರಿಕೂಟ’ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದೆ’ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ. ‘ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಧಾನಸಭೆಯಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿದ್ದರು. ಆದರೆ ನಿತೀಶ್ ಈ ಹೇಳಿಕೆ ಸಂಬಂಧ ಕಾಂಗ್ರೆಸ್ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಇದು ಕಾಂಗ್ರೆಸ್‌ನ ನಿಜವಾದ ಮುಖ’. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆಂದು ಎಂದು ಮೋದಿ ಹೇಳಿದ್ದಾರೆ.
ಇಟಲಿಯ ಹಳ್ಳಿಯೊಂದರ ಜನರ ಮೇಲೆ ಸಂಶೋಧನೆ ನಡೆಸಲಾಗಿದ್ದು, ಅಲ್ಲಿನ 90 ವರ್ಷ ಮೇಲ್ಪಟ್ಟ ಎಲ್ಲಾ ಜನರು ಸಂಜೆ 7 ಗಂಟೆ ಸುಮಾರಿಗೆ ಊಟ ಮಾಡುತ್ತಿರುವುದು ಕಂಡುಬಂದಿದೆ. ಅಲ್ಲದೆ, ಅವರು ಕಡಿಮೆ ಕ್ಯಾಲೋರಿ ಆಹಾರವನ್ನು ಸೇವಿಸುತ್ತಾರೆ. ಈ ಜನರ ಆಹಾರವು ಸಸ್ಯ ಆಧಾರಿತವಾಗಿದೆ ಎಂದು ಸಹ ಕಂಡುಬಂದಿದೆ. ಅವರ ಆಹಾರದಲ್ಲಿ ಹೆಚ್ಚು ಧಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ಬೇಳೆಕಾಳುಗಳು ಸೇರಿವೆ. ಇಲ್ಲಿನ ಜನರ ಜೀವನಶೈಲಿಯೂ ತುಂಬಾ ಕ್ರಿಯಾಶೀಲವಾಗಿದೆ. ಜೀವನಶೈಲಿಯು ನಮ್ಮ ಜೀವನದ ಗುಣಮಟ್ಟದ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತದೆ ಎಂದು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬಹುದು. ಹಾಗಾದರೆ ರಾತ್ರಿ ಬೇಗ ಊಟ ಮಾಡುವುದರಿಂದ ಆಗುವ ಲಾಭಗಳೇನು ಎಂದು ತಿಳಿಯೋಣ. ಜೀರ್ಣಕ್ರಿಯೆಗೆ ಪ್ರಯೋಜನಕಾರಿ ರಾತ್ರಿ ಊಟವು ಜೀರ್ಣಕ್ರಿಯೆಗೆ ತುಂಬಾ ಪ್ರಯೋಜನಕಾರಿಯಾಗಿದೆ. ಸಂಜೆ ಏಳರ ಸುಮಾರಿಗೆ ಊಟ ಮಾಡುವುದರಿಂದ ಮಲಗುವ ಮುನ್ನ ಸಾಕಷ್ಟು ಸಮಯ ಸಿಗುತ್ತದೆ, ಇದರಿಂದಾಗಿ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ತಡವಾಗಿ ರಾತ್ರಿಯ ಊಟ ಮಾಡುವುದರಿಂದ ಅಸಿಡಿಟಿ, ಗ್ಯಾಸ್, ಉಬ್ಬುವುದು ಮುಂತಾದ ಸಮಸ್ಯೆಗಳು ಉಂಟಾಗಬಹುದು. ಏಕೆಂದರೆ ಆಗ…
ಬೆಂಗಳೂರು:- ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಇಬ್ರಾಹಿಂ ಕಿಡಿಕಾರಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾನು ಇನ್ನೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ. ಹೆಚ್ಡಿ ದೇವೇಗೌಡ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನವಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರೇ ರಾಷ್ಟ್ರಾಧ್ಯಕ್ಷರಾಗಿ ಇರ್ತಾರಾ ಇಲ್ಲವೋ ಎಂಬ ಅನುಮಾನವಿದೆ. ಆ ಬಗ್ಗೆ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ನಿರ್ಧಾರ ಆಗಲಿದೆ. ನಿಮ್ಮ ಮಗನಿಗಾಗಿ ಈ ತರ ಮಾಡಿದ್ರೆ ಏನು ಮಾಡ್ತೀರಾ? ಎಂದು ಪ್ರಶ್ನಿಸಿದ್ದಾರೆ. ರಾಷ್ಟ್ರೀಯ ಕಾರ್ಯಕಾರಣಿ ನಿರ್ಧಾರ ಕೈಗೊಂಡರೆ ಏನು ಮಾಡುತ್ತಾರೆ? ಒಬ್ಬ ವ್ಯಕ್ತಿ ತೆಗೆಯುತ್ತಿಲ್ಲ. ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮಾಡಿ ಸ್ಥಾನದಿಂದ ತೆಗೆದುಹಾಕಿದರೆ ಏನು ಮಾಡುತ್ತೀರಿ? ನಿಮ್ಮ ನಿರ್ಣಯವನ್ನು ವಾಪಸ್ ಪಡೆಯಿರಿ ಎಂದು ಇಬ್ರಾಹಿಂ ಒತ್ತಾಯಿಸಿದ್ದಾರೆ. ಇನ್ನೂ ನಾನು ಈಗಲೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷನೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ…
ಕೊಪ್ಪಳ:- ಯಾವುದೇ ಕಾರಣಕ್ಕೂ ಬಿಜೆಪಿ ನುಡಿದಂತೆ ನಡೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯವರು ನುಡಿದಂತೆ ನಡೆಯುವ ಪಕ್ಷ ಅಲ್ಲ. ಆದ್ದರಿಂದ ಅವರ ಯಾವ ಭರವಸೆಗಳನ್ನು ಜನರು ನಂಬುವುದಿಲ್ಲ ಎಂದರು. ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ರಾಜ್ಯಗಳಲ್ಲಿ ಬಿಜೆಪಿಯವರು ಈಗ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಬಹಳ ವರ್ಷಗಳಿಂದ ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿದ್ದರೂ, ಯಾವ ಪ್ರಗತಿಯನ್ನೂ ಸಾಧಿಸಿಲ್ಲ. ಈಗ ಪ್ರಗತಿ ಸಾಧಿಸುವುದಾಗಿ ಭರವಸೆಗಳನ್ನು ನೀಡುತ್ತಿದ್ದಾರೆ. ಅವರ ಮಾತುಗಳನ್ನು ಜನರು ನಂಬುವುದಿಲ್ಲ ಎಂದರು. ವಿದ್ಯುತ್ ಕಳ್ಳತನ ಎಸಗಿ ದಂಡ ಕಟ್ಟಿರುವ ಕುಮಾರಸ್ವಾಮಿಯವರಿಗೆ ನಮ್ಮನ್ನು ಅಪೇಕ್ಷಿಸಲು ಯಾವ ನೈತಿಕತೆಯೂ ಇಲ್ಲ. ಮಾಜಿ ಶಾಸಕ ಯತೀಂದ್ರರವರು ದುಡ್ಡಿನ ವ್ಯವಹಾರದ ಬಗ್ಗೆ ಮಾತನಾಡಿದ್ದಾರೆಯೇ , ಅವರ ಬಳಿ ಏನಾದರೂ ಪುರಾವೆ ಇದೆಯೇ ಎಂದು ಪ್ರಶ್ನಿಸಿದರು. ಯತೀಂದ್ರರವರು ಸಿಎಸ್ ಆರ್ ಫಂಡ್ ಬಗ್ಗೆ ಮಾತನಾಡಿದ್ದರೆ, ವರ್ಗಾವಣೆ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸುತ್ತಾರೆ. ಕುಮಾರಸ್ವಾಮಿಯವರ ಕಾಲದಲ್ಲಿ ವರ್ಗಾವಣೆಗಳ ಮೂಲಕ ದುಡ್ಡು ಮಾಡಿರುವುದು ಜಗಜ್ಜಾಹೀರವಾಗಿದೆ. ಅವರು ನಮ್ಮ ವಿರುದ್ದ…
ದೊಡ್ಡಬಳ್ಳಾಪುರ: ಸಾರ್ವಜನಿಕರ ದೂರು ಆಧರಿಸಿ ದೊಡ್ಡಬಳ್ಳಾಪುರ ಸೇರಿದ ರಾಜ್ಯದ 11 ಕಡೆ ಎಡಿಎಲ್ ಆರ್ ಹಾಗೂ ಡಿಡಿಎಲ್ ಆರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕ, ಕೆ.ಆರ್.ಪುರಂ, ದೊಡ್ಡಬಳ್ಳಾಪುರ ಸೇರಿ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ಎಡಿಎಲ್ ಆರ್ ಕಚೇರಿಗೆ ಖುದ್ದು ಲೋಕಾಯುಕ್ತ ನ್ಯಾಯಾಧೀಶೆ ಹಾಗೂ ಡೆಪ್ಯುಟಿ ರಿಜಿಸ್ಟ್ರಾರ್ ಅನಿತಾ ಅವರ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಎಸ್ಪಿ ಡಾ.ರಾಮ್ ಅರಸಿದ್ದಿ, ಡಿವೈಎಸ್ಪಿ ವೀರೇಂದ್ರ ನೇತೃತ್ವದಲ್ಲಿ 15 ಮಂದಿ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಸಾರ್ವಜನಿಕರೊಬ್ಬರು ಜೋರು ದನಿಯಲ್ಲಿ ಅಧಿಕಾರಿಗಳ ವಿಳಂಬ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೋಡಿ ದರಕಾಸ್ತು ಮಾಡಿಸಲು ಅರ್ಜಿ ನೀಡಿ ಎರಡು ವರ್ಷ ಕಳೆದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಆಗ ಡಿವೈಎಸ್ಪಿ ವೀರೇಂದ್ರ ಅವರು ಆ ವ್ಯಕ್ತಿಯನ್ನು ಮನವೊಲಿಸಿ ದೂರು ವಿವರಿಸುವಂತೆ ಕೇಳಿ ಕರೆದೋಯ್ದರು.
ಚಿಣಮಗೇರಿ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕಿ ಸಾವು ಹಿನ್ನಲೆ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಬಿಜೆಪಿ ಮುಖಂಡ ಅವ್ವಣ್ಣ ಮ್ಯಾಕೇರಿ ಸರ್ಕಾರವನ್ನ ಆಗ್ರಹಿಸಿದ್ದಾರೆ.. ಚಿಣಮಗೇರಿಯಲ್ಲಿಂದು ಮೃತ ಬಾಲಕಿ ಮಹಂತಮ್ಮ ಕುಟುಂಬಸ್ಥರಿಗೆ ಭೇಟಿಯಾಗಿ ಸಾಂತ್ವನ ಹೇಳಿ ಚರ್ಚಿಸಿದ್ರು.. ಇದು ಶಾಲೆಯಲ್ಲಿ ನಡೆದಿರೋ ಘಟನೆ.ಮಾತ್ರವಲ್ಲ ಸರ್ಕಾರದ ನಿರ್ಲಕ್ಷಕ್ಕೆ ಆಗಿರೋ ದುರಂತ.. ಹೀಗಾಗಿ ಸರ್ಕಾರ ಬಾಲಕಿ ಪೋಷಕರಿಗೆ 1 ಕೋಟಿ ಪರಿಹಾರ ನೀಡಬೇಕು ಸೇರಿದಂತೆ ನಾಲ್ಕು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೇವೆ.ಈಡೇರಿಸದಿದ್ರೆ ಹೋರಾಟ ಮಾಡ್ತೇವೆ ಅಂತ ಹೇಳಿದ್ರು..
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಂಬುವಾರಪಲ್ಲಿ ಗ್ರಾಮದಲ್ಲಿನ ಸುಮಾರು 48 ಎಕರೆಯ ಊರ ಮಾದಿಗ ಇನಾಂತಿ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ದಲಿತರಿಗೆ ಮೋಸ ಮಾಡಿರುವ ಅಧಿಕಾರಿಗಳು ಹಾಗೂ ಪ್ರಭಾವಿ ಮುಖಂಡ ಜಿ.ಆರ್ ಸುರೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಆದಿಜಾಂಭವ ಚಾರಿಟಬಲ್ ಟ್ರಸ್ಟ್ ಹಾಗೂ ಸೇವಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಸರಕಾರವು ಸುಮಾರು 75 ವರ್ಷಗಳ ಹಿಂದೆಯೇ ದಲಿತ ಕುಟುಂಬಗಳ ಅಭಿವೃದ್ಧಿಗಾಗಿ ಜಿಲ್ಲೆಯ ನೆಲವಂಕಿ ಹೋಬಳಿಯ ನಂಬುವಾರಪಲ್ಲಿ ಗ್ರಾಮದ ಸರ್ವೆ ನಂ 23, 26, 27, 28 ಹಾಗೂ 39 ರಲ್ಲಿ 48 ಎಕರೆ ಜಮೀನನ್ನು ತಾಲೂಕಿನ ಗ್ರಾಮದಲ್ಲಿ ಇನಾಂತಿ ನೌಕರರಿ ಮಾಡುವ ನಾಲ್ಕು ಕುಟುಂಬಗಳಿಗೆ ಸರಕಾರವೇ ನೀಡಿದ್ದಾರೆ ಈ ಜಾಗದಲ್ಲಿ ಅಂದಿನಿಂದ ವ್ಯವಸಾಯವನ್ನು ಮಾಡಿಕೊಂಡು ಜೀವನ ನಡೆಸುತ್ತಾ ಇದ್ದು ಈ ಜಮೀನಿಗೆ ಪ್ರಭಾವಗಳು ಕಣ್ಣು ಬಿದ್ದಿದ್ದು ದಲಿತರಿಗೆ ಮೋಸ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೊರವಿಮಾಕಲಹಳ್ಳಿಯ ಬಲಾಢ್ಯ…
ಕಂಪ್ಲಿ ತಾಲೂಕು ಆಡಳಿತ ಹಾಗೂ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲ್ಲೂಕು ಆಡಳಿತ ಕಂಪ್ಲಿ ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಇವರ ವತಿಯಿಂದ ಕಂಪ್ಲಿ ತಾಲೂಕಿನಲ್ಲಿ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ಸೋಮವಾರ. ಅದ್ದೂರಿಯಾಗಿ ಸ್ವಾಗತ ದೊರೆಯಿತು. ಹಲಗೆ, ತಾಷೆ-ರಾಂಡೋಲ್, ಕಂಸಾಳೆ, ವೀರಗಾಸೆ, ಡೊಳ್ಳು, ವಿವಿಧ ವಾದ್ಯಗಳು ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳಿಂದ ಭರ್ಜರಿ ಮೆರವಣಿಗೆಯೊಂದಿಗೆ ತಾಲ್ಲೂಕು ಆಡಳಿತವು ಅದ್ದೂರಿಯಾಗಿ ಬರಮಾಡಿಕೊಂಡರು. ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯ ಮೆರವಣಿಗೆಯಲ್ಲಿ ಅಧಿಕಾರಿಗಳು, ಶಾಲಾ ಮಕ್ಕಳು, ಸಾರ್ವಜನಿಕರು, ಹಿರಿಯರು-ಕಿರಿಯರು ಸೇರಿದಂತೆ ಸೇರಿದಂತೆ ಎಲ್ಲರೂ ಕುಣಿದು, ಕುಪ್ಪಳಿಸಿ, ನೃತ್ಯ ಮಾಡುವುದರ ಮೂಲಕ ಸಂಭ್ರಮದಿಂದ ಪಾಲ್ಗೊಂಡಿದ್ದರು. ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯು ಕಂಪ್ಲಿ ತಾಲೂಕಿನ ಸೋಮಲಾಪುರ ಕ್ರಾಸ್ ಗ್ರಾಮದ ಮೂಲಕ ಎಮ್ಮಿಗನೂರು ಹೊಸ ನಲ್ಲೂಡಿ ರಸ್ತೆ ಮಾರ್ಗವಾಗಿ ವಿವಿಧ ಹೋಬಳಿ, ಗ್ರಾಮ ಪಂಚಾಯತಿ ವತಿಯಿಂದ ಸಂಭ್ರಮದಿಂದ ಹೊರಟು, ಕಂಪ್ಲಿ ಆಗಮಿಸಿತು. ಕಂಪ್ಲಿ ತಹಸಿಲ್ದಾರ್ ಶಿವರಾಜ್ ಅವರು , ಅದ್ದೂರಿಯಾಗಿ ಬರಮಾಡಿಕೊಂಡರು. ಬಳಿಕ ಮಾತನಾಡಿದ ಅವರು,…
ವಿಜಯಪುರ: ಎಲ್ಲಿ ಸಹಕಾರಿ ಕ್ಷೇತ್ರ ಬೆಳೆದಿದೆಯೋ ಆ ರಾಜ್ಯ, ದೇಶ ಬೆಳದಿದೆ ಎಂದರ್ಥ ಎಂದು ವಿಜಯಪುರದಲ್ಲಿ ನಡೆದ 70ನೇ ಸಹಕಾರ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಎಲ್ಲಾ ಮಹಿಳೆಯರು ಸಹ ಸಹಕಾರ ಸಂಘಗಳ ಸದಸ್ಯರಾಗಬೇಕು. https://ainlivenews.com/geo-scientist-statue-murder-case-explosive-issue-comes-to-light-during-investigation/ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡುತ್ತಿದೆ. ಸಹಕಾರಿ ಬ್ಯಾಂಕ್ನಲ್ಲಿ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆಯಾಗಿದೆ. ಸಹಕಾರ ಬ್ಯಾಂಕ್ಗಳಿಗೆ ನಮ್ಮ ಸರ್ಕಾರ ಸಹಕಾರ ನೀಡಲಿದೆ. ಸಹಕಾರ ಕ್ಷೇತ್ರ ಬೆಳೆಯಲು ನೆಹರು, ಗಾಂಧೀಜಿ ಸಹಾಯ ಮಾಡಿದ್ದಾರೆ ಎಂದರು.