ನವದೆಹಲಿ : ಚಳಿಗಾಲದ ಸಂಸತ್ ಅಧಿವೇಶನವೂ (Parliament Session) ಡಿಸೆಂಬರ್ 4ರಿಂದ ಆರಂಭಗೊಂಡು 22ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಲಾಯದಿಂದ ಮಾಹಿತಿ ಲಭ್ಯವಾಗಿದೆ. ಇದಕ್ಕೂ ಮುನ್ನ ಡಿಸೆಂಬರ್ 2 ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಸುಗಮ ಕಲಾಪಕ್ಕಾಗಿ ಪ್ರತಿಪಕ್ಷಗಳ ಜೊತೆಗೆ ಮಾತುಕತೆ ನಡೆಯಲಿದೆ. ಡಿಸೆಂಬರ್ ಮೂರರಂದು ಪ್ರತಿಪಕ್ಷಗಳ ಸಭೆ ನಡೆಯಬೇಕಿತ್ತು ಅಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆ ಒಂದು ದಿನ ಮುನ್ನ ಅಂದರೆ ಡಿಸೆಂಬರ್ 2 ರಂದು ಸಭೆ ನಡೆಸಲು ನಿರ್ಧರಿಸಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಮಾಹಿತಿಯನ್ನು ಖಚಿತಪಡಿಸಿದ್ದಾರೆ. https://ainlivenews.com/golden-opportunity-to-work-in-banking-sector-there-are-8283-vacancies-in-sbi/ ಈ ಬಾರಿಯ ಅಧಿವೇಶನದಲ್ಲಿ ಮಹತ್ವದ IPC, CrPC ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸಲು ಬಯಸುವ ಮೂರು ಪ್ರಮುಖ ಮಸೂದೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬಹುದು ಎನ್ನಲಾಗಿದೆ. ಈ ಮಸೂದೆಗಳನ್ನು ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು ಪರಿಶೀಲಿಸುತ್ತಿದೆ. ಹೊಸ ಮಸೂದೆಗಳನ್ನು ಶೀಘ್ರದಲ್ಲೇ ಅಂಗೀಕರಿಸುವ ಸಾಧ್ಯತೆ ಇದೆ. ಈಗಾಗಲೇ ಲೋಕಸಭೆಯಲ್ಲಿ (Loksabhe) ಇಂಡಿಯನ್…
Author: AIN Author
ಹುಬ್ಬಳ್ಳಿ:- ಡಿಕೆಶಿ ಸಿಬಿಐ ಪ್ರಕರಣ ಹಿಂಪಡೆಯುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿರುವ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲು ನಿರ್ಧರಿಸಿರುವುದು ಸರಿಯಲ್ಲ. ಶಿವಕುಮಾರ ವಿರುದ್ಧ 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲು ನಿರ್ಧರಿಸಿರುವುದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. https://ainlivenews.com/golden-opportunity-to-work-in-banking-sector-there-are-8283-vacancies-in-sbi/ ದೇಶದಲ್ಲಿ ನಾಯಾಂಗ ವ್ಯವಸ್ಥೆಯಿದೆ. ಸರ್ಕಾರದ ನಿರ್ಣಯಗಳ ವಿರುದ್ಧವಾಗಿಯೂ ನ್ಯಾಯಾಲಯಗಳು ತೀರ್ಪು ನೀಡಿವೆ. ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಸ್ವತಂತ್ರವಾಗಿದ್ದು, ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿವೆ. ದೋಷಾರೋಪ ಪಟ್ಟಿ ಸಲ್ಲಿಸುವ ಹಂತದಲ್ಲಿ ಈ ರೀತಿ ವಾಪಸ್ ಪಡೆದಿರುವುದು ಸರಿಯಲ್ಲ. ಸಂಬಂಧಿಸಿದ ಏಜೆನ್ಸಿಗಳು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಸಚಿವ ಸಂಪುಟದ ಈ ನಿರ್ಧಾರವನ್ನು ನ್ಯಾಯಾಲಯ ತಿರಸ್ಕರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ಕರಾವಳಿ ತುಳು ಕೂಟದಿಂದ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ ನಮ್ಮ ಕಂಬಳಕ್ಕೆ ಸಾವಿರಾರು ಜನರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಕೂಟದ ಅಂತಿಮ ಫಲಿತಾಂಶವೂ ಕೂಡ ಹೊರಬಿದ್ದಿದೆ. ಕಂಬಳ ನೋಡಲು ಕರಾವಳಿ ಪೂಜಾ ಹೆಗಡೆ, ರಕ್ಷಿತ್ ಶೆಟ್ಟಿ, ರಮೇಶ್ ಅರವಿಂದ್, ಉಪೇಂದ್ರ ಸೇರಿದಂತೆ ಹಲವರು ಕಂಬಳ ಕಣ್ಣುಂಬಿಕೊಂಡರು. ಕಂಬಳದ ಫೈನಲ್ ಫಲಿತಾಂಶ ಹೀಗಿದೆ ಬೆಂಗಳೂರು “ರಾಜ ಮಹಾರಾಜ” ಜೋಡುಕರೆ ಕಂಬಳ ಕೂಟದ ಕನೆಹಲಗೆ, ಅಡ್ಡಹಲಗೆ, ಹಗ್ಗ ಹಿರಿಯ, ನೇಗಿಲು ಹಿರಿಯ, ಹಗ್ಗ ಕಿರಿಯ, ನೇಗಿಲು ಕಿರಿಯ ವಿಭಾಗಗಲ್ಲಿ ಒಟ್ಟು 159 ಕೋಣಗಳ ಜೊತೆ ಸ್ಪರ್ಧಿಸಿದ್ದವು. ಕಂಬಳದಲ್ಲಿ ಗೆದ್ದ -ಜೋಡಿಗೆ ಮೊದಲ ಬಹುಮಾನವಾಗಿ 16ಗ್ರಾಂ ಚಿನ್ನದ ಪದಕ ಹಾಗೂ ಒಂದು ಲಕ್ಷ ನಗದು, ಎರಡನೇ ಸ್ಥಾನಕ್ಕೆ 8 ಗ್ರಾಂ ಚಿನ್ನದ ಪದಕ ಹಾಗೂ 50 ಸಾವಿರ ನಗದು, ಮೂರನೇ ಸ್ಥಾನಕ್ಕೆ 4 ಗ್ರಾಂ ಚಿನ್ನ ಮತ್ತು 25 ಸಾವಿರ ಹಣವನ್ನು ವಿಭಾಗಾವಾರ ನೀಡಲಾಯಿತು. ಹಗ್ಗ ಹಿರಿಯ: ಪ್ರಥಮ:…
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ (First Look) ರಿಲಿಸ್ ಆಗಿದೆ. ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಅಚ್ಚರಿ ಮೂಡಿಸುವಷ್ಟು ಕಂಡಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವ ಪೋಸ್ಟರ್ ನಾನಾ ಚರ್ಚೆಗಳನ್ನು ಹುಟ್ಟು ಹಾಕುವಂತಿದೆ. ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ (Kantara Chapter 1) ಇಂದು ಮುಹೂರ್ತ ನಡೆದಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆಯನ್ನ ಮಾಡಿಸಲಿದೆ. ಉದ್ಭವಮೂರ್ತಿ ವಿನಾಯಕ ದೇವರಿಗೆ ಮೂಡು ಗಣಪತಿ ಸೇವೆ, ತ್ರಿಕಾಲ ಸೇವೆ, ಅನ್ನದಾನ ನಡೆಯಲಿದೆ. ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಬಣ್ಣ ಬಣ್ಣದ ಹೂವಿನಿಂದ ಸಿಂಗಾರ ಮಾಡಲಾಗಿದೆ. ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿವೆ. ಸಿನಿಮಾ ಟೀಮ್ ಅಧಿಕೃತವಾಗಿ ಯಾವುದೇ ಮಾಹಿತಿ ಸಿಗದೇ ಇದ್ದರೂ, ಬಲ್ಲ ಮೂಲಗಳು ಮಾಹಿತಿಯನ್ನು ಹೊರ ಹಾಕುತ್ತಲೇ ಇವೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಹಿಟ್ ಆದ ನಂತರ ಹಲವು ಭಾಷೆಗಳಲ್ಲಿ ಅದನ್ನು ಡಬ್ ಮಾಡಲಾಯಿತು. ಆದರೆ, ಕಾಂತಾರ 2 ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆಯಂತೆ. ಹಾಗಾಗಿ ಅದ್ಧೂರಿ ಮೇಕಿಂಗ್ ಕೂಡ ಇರಲಿದೆಯಂತೆ.
ಕಲಬುರಗಿ: ಗಣೇಶನ ಕಟ್ಟೆ ಕಟ್ಟುವ ವಿಚಾರ ವಿಕೋಪಕ್ಕೆ ತಿರುಗಿ ಎರಡು ಕೋಮಿನ ನಡುವೆ ಗಲಾಟೆಯಾದ ಘಟನೆ ಕಲಬುರಗಿಯ ಅಂಕಲಗಿಯಲ್ಲಿ ನಡೆದಿದೆ.. ಒಂದು ಗುಂಪು ಕಟ್ಟೆ ಕಟ್ಟಲು ಮುಂದಾದಾಗ ಮತ್ತೊಂದು ಕೋಮಿನ ಗುಂಪು ಕಿರಿಕ್ ಮಾಡಿದೆ.ಈ ವೇಳೆ ಎರಡೂ ಗುಂಪುಗಳು ಹೊಡೆದಾಡಿಕೊಂಡಿವೆ.. ಎರಡು ತಿಂಗಳ ಹಿಂದಷ್ಟೇ ಇದೇ ವಿಚಾರ ವಿವಾದವಾದಾಗ ಜೇವರ್ಗಿ ತಹಸೀಲ್ದಾರ್ ಬಂದು ಸರ್ವೆ ಮಾಡಿ ಪಂಚಾಯ್ತಿ ಜಾಗ ಅಂತ ಹೇಳಿದ್ರು.ಆಗ ಎರಡೂ ಕಡೆಯವರು ಸಮ್ಮತಿ ಸಹ ಸೂಚಿಸಿದ್ರು..ಆದ್ರೆ ಇದೀಗ ಮತ್ತೆ ಗಲಾಟೆಯಾಗಿದ್ದು ಪೋಲೀಸರು ಪರಿಶೀಲನೆ ನಡೆಸಿದ್ದಾರೆ…
ಏಳನೇ ವಾರದಲ್ಲಿ ಬಿಗ್‌ಬಾಸ್ (Bigg Boss Kannada) ಮನೆಯಿಂದ ನೀತು ವನಜಾಕ್ಷಿ (Neetu Vanajakshi) ಹೊರಬಿದ್ದಿದ್ದಾರೆ. ಏಳು ವಾರಗಳ ಸುದೀರ್ಘ ಅವಧಿಯಲ್ಲಿ ಬಿಗ್‌ಬಾಸ್ ಮನೆಯಲ್ಲಿ ಹಲವು ಏಳುಬೀಳುಗಳನ್ನು ಅವರು ಕಂಡಿದ್ದಾರೆ. ಈ ವಾರ ಅವರೇ ಮನೆಯ ಕ್ಯಾಪ್ಟನ್ ಆಗಿರುವುದೂ ವಿಶೇಷ. ಆದರೆ ಆ ಕ್ಯಾಪ್ಟನ್ಸಿ ಅವಧಿಯನ್ನು ಪೂರ್ತಿಗೊಳಿಸುವ ಮುನ್ನವೇ ಅವರು ಹೊರಗೆ ಬರಬೇಕಾಗಿದೆ. ಬಿಗ್‌ಬಾಸ್‌ನ ಈ ಜರ್ನಿಯ ಕುರಿತು JioCinemaಗೆ ನೀಡಿರುವ ಎಕ್ಸ್‌ಕ್ಲ್ಯೂಸಿವ್ ಸಂದರ್ಶನದಲ್ಲಿ (Interview) ನೀತು ಹಲವು ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಈವಾಗಷ್ಟೇ ಹೊರಗೆ ಬಂದಿದೀನಿ. ಸ್ವಲ್ಪ ಬೇಜಾರು ಇದ್ದೇ ಇದೆ. ಆದರೆ 50 ದಿನ ಮುಗಿಸಿದ್ದೇನೆ ಎಂಬ ಖುಷಿಯಿದೆ. ಎಲ್ಲ ಕಂಟೆಸ್ಟೆಂಟ್‌ಗಳ ಮಧ್ಯ ನಾನೂ ಅಷ್ಟು ದಿನ ಸರ್ವೈವ್ ಆಗಿದ್ದೀನಿ ಎಂಬ ಹೆಮ್ಮೆ ಇದೆ. ತುಂಬ ಅನುಭವಗಳ ಜೊತೆಗೆ ಮನೆಗೆ ಹೋಗುತ್ತಿದ್ದೇನೆ. ಈ ಅನುಭವಗಳನ್ನು ಮುಂದೆ ಒಳ್ಳೆಯ ರೀತಿಯಲ್ಲಿ ಬಳಸಿಕೊಂಡು ಮುನ್ನುಗ್ಗುತ್ತೇನೆ. ಎಲಿಮಿನೇಷನ್ ನಿರೀಕ್ಷಿತವೇ ಆಗಿತ್ತು! ಹೊರಗಡೆ ಬರ್ತೀನಿ ಅನ್ನುವುದನ್ನು ನಿರೀಕ್ಷೆ ಮಾಡಿದ್ದೆ. ಯಾಕಂದ್ರೆ ಕಳೆದ ಎರಡು ವಾರದಿಂದ ನನ್ನ…
ಮಂಡ್ಯ: ಕಳ್ಳರು ದೇವಸ್ಥಾನದ ಬೀಗ ಹೊಡೆದು ಹುಂಡಿ ಹೊತ್ತೊಯ್ದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ನಡೆದಿದೆ. ಒಂದೇ ತಿಂಗಳಲ್ಲಿ ಒಂದೇ ದೇವಸ್ಥಾನದಲ್ಲಿ ಎರಡು ಬಾರಿ ಕಳ್ಳತನ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನ ನಡೆದಿದ್ದು ಹುಂಡಿಯಲ್ಲಿದ್ದ ಹಣ ದೋಚಿ ಹುಂಡಿ ಬಿಸಾಕಿ ಕಳ್ಳರು ಪರಾರಿಯಾಗಿದ್ದಾರೆ. ಈ ದೇವಸ್ಥಾನ ಮಳವಳ್ಳಿಯ- ಬೆಂಗಳೂರು ರಸ್ತೆಯಲ್ಲಿ ಬರುತ್ತದೆ. ತಡರಾತ್ರಿ ದೇವಸ್ಥಾನದ ಬೀಗ ಹೊಡೆದು ಒಳನುಗ್ಗಿ ಹುಂಡಿ ತೆಗೆದುಕೊಂಡು ಪರಾರಿಯಾಗಿದ್ದಾರೆ. ಮೊದಲಿಗೆ ಬೀಗ ಹೊಡೆದು ದೇವಸ್ಥಾನಕ್ಕೆ ನುಗ್ಗಿದ ಖದೀಮರು ದೇವಸ್ಥಾನದ ಫ್ಯೂಸ್ ಕಿತ್ತು, ದೊಣ್ಣೆಯಲ್ಲಿ ಬಲ್ಪ್ ಗಳನ್ನ ಹೊಡೆದು ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ(Shivajinagar) ನರ್ಸರಿ ಶಾಲೆ ಕಟ್ಟಡವೊಂದು (School building collapsed) ಕುಸಿದುಬಿದ್ದಿದೆ. ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ರಾತ್ರೋ ರಾತ್ರಿ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ. ಅದೃಷ್ಟವಶಾತ್ ಶಾಲೆಯಲ್ಲಿ ಮಕ್ಕಳು ಇಲ್ಲದ ವೇಳೆ ಕಟ್ಟಡ ಬಿದ್ದಿದೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ. ಇದು ಬಿಬಿಎಂಪಿಗೆ ಸೇರಿದ ಇಂಗ್ಲಿಷ್ ಸ್ಕೂಲ್. ಈ ಸ್ಕೂಲ್ ನಲ್ಲಿ ಒಟ್ಟು 90 ಮಕ್ಕಳು ಪ್ರವೇಶ ಪಡೆದುಕೊಂಡಿದ್ದರು. ಅದರೆ, 90 ಮಕ್ಕಳ ಪೈಕಿ 75 ಮಕ್ಕಳು ಮಾತ್ರ ಪ್ರತಿದಿನ ಶಾಲೆಗೆ ಬರುತ್ತಿದ್ದರು. ದೇವರ ದೇವರ ದಯೆಯಿಂದ ಶಾಲಾ ಸಮಯದಲ್ಲಿ ಕಟ್ಟಡ ಬಿದ್ದಿಲ್ಲ. ಇದೀಗ ಸ್ಥಳಕ್ಕೆ ಜೆಸಿಬಿ ಆಗಮಿಸಿದ್ದು, ಕಟ್ಟಡದ ಅವಶೇಷಗಳನ್ನು ತೆರವು ಕಾರ್ಯ ನಡೆದಿದೆ. ಇನ್ನು ವಾಹನಗಳಿಗೆ ಹಾನಿಯಾಗಿದ್ದರಿಂದ ಮಾಲೀಕರು ಕಂಗಾಲಾಗಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಎಗ್ಗಿಲ್ಲದೇ ಟ್ರಾನ್ಸ್‌ಫರ್ ದಂಧೆ ನಡೆಯುತ್ತಿದ್ಯಾ ಎಂಬ ಅನುಮಾನ ಮೂಡಿದ್ದು, ಟ್ರಾನ್ಸ್‌ಫರ್ ಬಗ್ಗೆ ಕಾಂಗ್ರೆಸ್ ನಾಯಕನ ಸ್ಫೋಟಕ ಆಡಿಯೋ ವೈರಲ್ ಆಗಿದೆ. ಕಾಂಗ್ರೆಸ್ ನಾಯಕ ಉಮಾಪತಿಗೌಡ ಸಾಮಾಜಿಕ ಕಾರ್ಯಕರ್ತ ವಿಜಯ್ ಡೆನ್ನಿಸ್ ಜೊತೆ ಸಂಭಾಷಣೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇನ್ಸ್‌ಪೆಕ್ಟರ್ ಟ್ರಾನ್ಸ್‌ಫರ್‌ಗೆ ಉಮಾಪತಿಗೌಡ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. https://ainlivenews.com/a-woman-shows-a-fake-ticket-and-enters-the-airport/ ಅದೇ ಠಾಣೆಯಲ್ಲಿ ಉಳಿಸಲು ಇನ್ಸ್‌ಪೆಕ್ಟರ್ ಹಣ ನೀಡಿದ್ದಾರೆ. ಈ ಹಣವನ್ನ ಹೋಂ ಮಿನಿಸ್ಟರ್‌ಗೆ ಕೊಟ್ಟಿರೋ ಬಗ್ಗೆ ಆಡಿಯೋದಲ್ಲಿ ಪ್ರಸ್ತಾಪ ಮಾಡಲಾಗಿದೆ. ಸಚಿವರಿಗೆ ಹಣ ಕೊಟ್ಟಿರೋದಾಗಿ ಉಮಾಪತಿಗೌಡ ಹೇಳಿದ್ದಾರೆ. ನಾನು ಹೇಳಿದರೇ ನಮ್ಮ ಸರ್ಕಾರದಲ್ಲಿ ಕೆಲಸ ಆಗೇ ಆಗುತ್ತೆ ಎಂದು ಕಾಂಗ್ರೆಸ್ ನಾಯಕ ಉಮಾಪತಿಗೌಡ ಹೇಳಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜನಸ್ಪಂದನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಹಮ್ಮಿಕೊಂಡಿದ್ದು ಸಾಲು ಸಾಲು ಸಮಸ್ಯೆಗಳ ಅಹವಾಲುಗಳನ್ನು ಹೊತ್ತು ಬೆಳಗ್ಗೆಯಿಂದಲೇ ಸಿಎಂ ಮನೆಯ ಮುಂದೆ ಸಾಕುಕಟ್ಟಿ ನಿಂತಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರೆ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿದ್ದು ನಾಡಿನ ವಿವಿಧೆಡೆಗಳಿಂದ ಆಗಮಿಸಿರುವ ಜನರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಹೊತ್ತು ಸಿಎಂ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ, ತಳ್ಳಯವ ಗಾಡಿಯಲ್ಲಿ ವ್ಯಾಪಾರ ಮಾಡುವವರಿಗೆ ಆಗುತ್ತಿರುವ ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ಕಿರುಕುಳದ ಬಗ್ಗೆ ಬಡ ವ್ಯಾಪಾರಿ ನಿಂಗಮ್ಮ ಅವರಿಂದ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದರು. ತಕ್ಷಣ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ ನಿಂಗಮ್ಮ ಅವರಿಗೇ ಕಿರುಕುಳ ತಪ್ಪಿಸುವಂತೆ ಖಡಕ್ ಸೂಚನೆ ನೀಡಿದರು. ವೃದ್ದಾಪ್ಯ ವೇತನ ಮಂಜೂರಾತಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳ ಹಿನ್ನೆಲೆಯಲ್ಲಿ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಇಲಾಖೆ ನಿರ್ದೇಶಕರನ್ನು ಕರೆಸಿ ತಾಂತ್ರಿಕ ತೊಂದರೆ ಇದ್ದರೆ ತಕ್ಷಣ…