ಡಾಲಿ ಧನಂಜಯ್ ಹಾಗೂ ಸತ್ಯದೇವ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಝೀಬ್ರಾ. ಶುರು ಆದಾಗಿನಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ. ಝೀಬ್ರಾ ಎಂಬ ಮಾಸ್ ಎಂಟರ್‌ಟೇನರ್ ಚಿತ್ರವಾಗಿದ್ದು, ಡಾಲಿ ಜೊತೆ ಸತ್ಯದೇವ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಚಿತ್ರದ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸತ್ಯದೇವ್ ಮತ್ತು ಡಾಲಿ ಇಬ್ಬರೂ ಚಿತ್ರದ ನಾಯಕರಾಗಿದ್ದು, ಇಬ್ಬರ ಕಾಂಬಿನೇಷನ್ ಸಿನಿಮಾ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ಇಬ್ಬರದ್ದೂ 26ನೇ ಸಿನಿಮಾ ಎಂಬುದು ವಿಶೇಷ. ಝೀಬ್ರಾ ಸಿನಿಮಾ ತೆಲುಗು ಮತ್ತು ಕನ್ನಡದಲ್ಲಿ ಮೂಡಿ ಬರಲಿದೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ಪ್ರಿಯಾ ಭವಾನಿ ಶಂಕರ್, ಸತ್ಯರಾಜ್, ಸುನೀಲ್ ವರ್ಮ, ಜೆನಿಫರ್ , ಸುರೇಶ್‌ಚಂದ್ರ ಮೆನನ್, ಕಲ್ಯಾಣಿ ನಟರಾಜ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ. ಸಿನಿಮಾವನ್ನು ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ. ಪ್ಯಾನ್ ಇಂಡಿಯಾ ‘ZEBRA’ ಚಿತ್ರಕ್ಕೆ…
Author: AIN Author
ಬೆಂಗಳೂರು:- ಶಾಸಕ ಹರೀಶ್ ಪೂಂಜಾ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಷಣದ ಸಿಡಿ ಒದಗಿಸಲು ಹೈಕೋರ್ಟ್ ಸೂಚನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಮತ್ತು ಕೋಮು ಭಾವನೆ ಕೆರಳಿಸುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾದ ಕ್ರಿಮಿನಲ್ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಲ್ಲೇಖಿಸಿರುವ ಹೇಳಿಕೆಯ ವಿಡಿಯೊದ ಸಿಡಿಯನ್ನು ಒದಗಿಸಿ’ ಎಂದು ಪ್ರಕರಣದ ಫಿರ್ಯಾದುದಾರರಿಗೆ ಹೈಕೋರ್ಟ್ ಸೂಚಿಸಿದೆ. ಬೆಳ್ತಂಗಡಿ ಠಾಣಾ ಪೊಲೀಸರು ನನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಹರೀಶ್ ಪೂಂಜಾ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಇದೇ ವೇಳೆ ಫಿರ್ಯಾದುದಾರರ ಪರ ವಕೀಲ ಬಿ.ಲತೀಫ್, ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಸಮಯಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 8ಕ್ಕೆ ಮುಂದೂಡಿದೆ ಎನ್ನಲಾಗಿದೆ.
ಬೆಂಗಳೂರು:- ಬಿಜೆಪಿಯ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿವೈ ವಿಜಯೇಂದ್ರ ಅವರು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿ ದೊಡ್ಡ ಜವಾಬ್ದಾರಿ ಹೊತ್ತ ಹಿನ್ನೆಲೆ, ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಇನ್ನೂ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇದರ ಪರಿಣಾಮ MP ಎಲೆಕ್ಷನ್ ಮೇಲೆ ಬಿದ್ದರೂ ಅಚ್ಚರಿ ಇಲ್ಲ ಎಂದೇ ಹೇಳಲಾಗುತ್ತಿದೆ.
ಯಶ್ (Yash) ಬಾಲಿವುಡ್‌ನಲ್ಲಿ ರಾಕಿ ಹವಾ ನಿಂತಿಲ್ಲ. ನಿಲ್ಲೋದೂ ಇಲ್ಲ. ಹೊಸ ಸಿನಿಮಾ ಘೋಷಣೆ ಆಗಿಲ್ಲ. ಅಷ್ಟರಲ್ಲಿ ಬಾಲಿವುಡ್ ಸ್ಟಾರಿಣಿಯೊಬ್ಬರು ಯಶ್ ಜೊತೆ ಮಾತ್ರ ನಟಿಸುತ್ತೇನೆ. ಪ್ರಭಾಸ್, ಅಲ್ಲು ನಕೋ ಬಾಬಾ ಎಂದಿದ್ದಾಳೆ. ಅದ್ಯಾಕೆ ಎಲ್ಲರನ್ನೂ ಬಿಟ್ಟು ರಾಕಿ ಹಿಂದೆ ಬಿದ್ದಳಾ ಹೆಣ್ಣು? ಪ್ರಭಾಸ್ ಫ್ಯಾನ್ಸ್ ಕುದ್ದಿದ್ಯಾಕೆ? ಇಲ್ಲಿದೆ ಮಾಹಿತಿ. ಯಶ್ ಜೊತೆ ನಟಿಸೋದು ಹೆವ್ವಿ ಇಷ್ಟ. ಅದೇ ಲೈಫ್ ಟೈಮ್ ಅಚೀವ್‌ಮೆಂಟು. ಇಲ್ದಿದ್ರೆ ನಂಗ್ಯಾಕೆ ಲೋಕದ ನಂಟು. ಹೀಹಮ್ಮೋ ನೌಟಂಕಿ ನಟಿಯರಿಗೆ ಕಮ್ಮಿ ಇಲ್ಲ. ಕೆಜಿಎಫ್ (KGF) ಬರೋಕೂ ಮುಂಚೆ ಯಶ್ ಇದ್ರೂ. ಮುಂದೆಯೂ ರ‍್ತಾರೆ. ಆದರೆ ನಾಲಿಗೆಗೆ ಬಣ್ಣ ಬಳಿದುಕೊಳ್ಳುವ ಹುಟ್ಟಾ ಕಲಾವಿದೆಯರಿಗೆ ಆಗ ನೆನಪಾಗಲಿಲ್ಲ. ಈಗ ನೆನಪಾಗೋದು ನಿಲ್ಲಲ್ಲ. ಆ ಸಾಲಿಗೆ ಒಂದು ಮಗುವಿನ ತಾಯಿ ಕರೀನಾ ಕಪೂರ್ ಸೇರಿದ್ದಾರೆ. ಪ್ರಭಾಸ್, ರಾಮ್‌ಚರಣ್, ವಿಜಯ್ ದೇವರಕೊಂಡ ನಕೋ ಯಶ್ ಮಾತ್ರ ಬೇಕು ಅನ್ನೋದಾ ಕರೀನಾ (Kareena Kapoor) ಹೀಗಂದಿದ್ದೇ ಐತಿಹಾಸಿಕ ಸಾಧನೆ ಅಂದುಕೊಳ್ಳಬೇಕಿಲ್ಲ. ಕರೀನಾಗೆ ಮದುವೆಯಾಗಿದೆ. ಮಗು…
ಬೆಂಗಳೂರು:- ನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ ಮಾಡಿದ್ದು, ಯುವತಿಯನ್ನು ರಕ್ಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿಪೊಲೀಸರು ದಾಳಿ ಮಾಡಿದ್ದಾರೆ. ಓರ್ವ ಯುವತಿಯನ್ನು ರಕ್ಷಿಸಿ ಕಬ್ಬನ್ ಪಾರ್ಕ್ ಠಾಣೆಗೆ ಕರೆತಂದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ವಿದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ನವೆಂಬರ್ 25ರವರೆಗೂ ಮಳೆಯಾಗಲಿದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡದಲ್ಲೂ ಮಳೆಯಾಗುವ ನಿರೀಕ್ಷೆ ಇದೆ, ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಪುತ್ತೂರಿನಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಎಚ್ಎಎಲ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇತ್ತೀಚೆಗೆ ಪ್ರಕಾಶ್ ವೀರ್ (Prakash Veer) ಅವರ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸುತ್ತಿರುವ ‘ಡೆವಿಲ್’ (Devil) ಚಿತ್ರದ ಸ್ಕ್ರಿಪ್ಟ್ ಪೂಜೆ ಸರಳವಾಗಿ ನೆರವೇರಿತ್ತು. ಪೂಜೆ ಮುಗಿದಿದ್ದೆ ತಡ ಡೆವಿಲ್ ಹೆಸರಿನಲ್ಲಿ ಪೋಸ್ಟರ್ ಹರಿದಾಡಿದವು. ಆದರೆ, ಈ ಕುರಿತು ನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದಾರೆ. ಶುಭದಿನವೆಂದು ಡೆವಿಲ್ ಚಿತ್ರದ ಸ್ಕ್ರಿಪ್ಟ್ ಪೂಜೆ ಮಾಡಿದ್ದೇವೆ. ಆದರೆ, ಚಿತ್ರದ ಫಸ್ಟ್ ಲುಕ್ (First Look) ಆಗಲಿ, ಪೋಸ್ಟರ್ ಆಗಲಿ ಯಾವುದು ನಾವು ಬಿಡುಗಡೆ ಮಾಡಿಲ್ಲ. ಕಾಟೇರ ಚಿತ್ರದ ನಂತರ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದಾರೆ. ಹೆಸರಾಂತ ನಿರ್ದೇಶಕ ಮಿಲನ ಪ್ರಕಾಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ (Darshan) ಗಾಗಿ ಒಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಬೆಂಗಳೂರಿನ ದೊಡ್ಡ ಮಹಾ ಗಣಪತಿ ದೇವಸ್ಥಾನದಲ್ಲಿ ದರ್ಶನ್…
ಹುಬ್ಬಳ್ಳಿ: ಸಮಾಜದ ಬಡವರ ಬಗ್ಗೆ ಅವರ ಏಳ್ಗೆ ಕುರಿತು ಸದಾ ಚಿಂತನೆ ಮಾಡುವುದೇ ನಾನು ಶ್ರಮಿಸುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಎಸ್ ಎಸ್ ಕೆ ಸಮಾಜದ ಯುವ ನಾಯಕ ರಾಜು ಸಾ ನಾಯಕವಾಡಿ ಹೇಳಿದರು. ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ನಮ್ಮ ಸೋಮವಮಶ ಕ್ಷೇತ್ರೀಯ ಸಮಾಜ ಯಾವುದೇ ಕಾರಣಕ್ಕೂ ಯಾರಿಗೂ ಜು ಹುಜುರೋ ಅನ್ನುವ ಸಮಾಜ ಅಲ್ಲಾ ಶಕ್ತಿ ಶಾಲಿ ಹಾಗೂ ಸಾಹಸಕ್ಕೆ ಹೆಸರು ವಾಸಿಯಾಗಿದೆ. ಆದರೆ ಇಂದಿನ ದಿನಗಳಲ್ಲಿ ಸಮಾಜದ ಅನೇಕರಿಗೆ ಸಹಾಯ ಹಾಗೂ ಪ್ರೋತ್ಸಾಹ ಬೇಕಾಗಿದೆ. ಆದ್ದರಿಂದ ನಮ್ಮ ಸಮಾಜದ ಕೇಲ ನಾಯಕರು ತಮ್ಮ ಸ್ವಾರ್ಥಕ್ಕಾಗಿ ಸಮಾಜವನ್ನು ಬಲಿ ಪಶು ಮಾಡತಾ ಇದ್ದಾರೆ. ಅವರಿಗೆ ಕೇವಲ ಅಧಿಕಾರದ ಹಪಾಹಪಿ ಯಾವುದೇ ರೀತಿಯ ಕಳಕಳಿ ಇಲ್ಲ. ಆದ್ದರಿಂದ ಅನೇಕ ಪ್ರತಿಭಾವಂತರು, ಸಾಧಕರು, ಅವಕಾಶ ವಂಚಿತರು, ವಿದ್ಯಾವಂತರು ಇದ್ದಾರೆ ಅವರಿಗೆ ಸಹಾಯ ಸಹಕಾರ ಬೇಕು. ಆದ್ದರಿಂದ ಅಧಿಕಾರಕ್ಕೆ ನಮ್ಮ ಸಮಾಜದ ಹಿರಿಯರು ಒಬ್ಬೊಬ್ಬ ನಾಯಕನ ಹಿಂದೆ ಹೋಗತಾ ಇದ್ದಾರೆ ಆದರೆ…
ಭಾರತ-ಆಸ್ಟ್ರೇಲಿಯಾ ನಡುವೆ ಇಂದು ನಡೆಯಲಿರುವ ವಿಶ್ವ ಕಪ್ ಫೈನಲ್ ಪಂದ್ಯಕ್ಕೆ ಕಲಬುರಗಿಯಲ್ಲಿ ಶುಭಾಶಯಗಳ ಮಹಾಪುರವೇ ಹರಿದು ಬರ್ತಿದೆ.. ನಗರದ VTU ವಿದ್ಯಾರ್ಥಿಗಳು ಸೇರಿ ಹಲವೆಡೆ ಅಭಿಮಾನಿಗಳು ಜೈಕಾರ ಹಾಕಿದ್ದು ಕಪ್ ನಮ್ದೆ ಅಂತ ಘೋಷಣೆ ಮೊಳಗಿಸಿದ್ದಾರೆ..ಟೀಂ ಇಂಡಿಯಾ ತಂಡದ ಫೋಟೋಗಳನ್ನ ಹಿಡಿದು ಆಲ್ ದಿ ಬೆಸ್ಟ್ ಹೇಳಿದ್ದಾರೆ
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ನಟಿಸಿದ ‘ಕಾಂತಾರ’ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ’ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಸರಳವಾಗಿ ಜರುಗಲಿದೆ. ಕಾಂತಾರ (Kantara) ಸೂಪರ್ ಡೂಪರ್ ಹಿಟ್ ಆದಂತೆಯೇ ‘ಕಾಂತಾರ 2’ ಅದಕ್ಕಿಂತ ಹೆಚ್ಚಿನ ಯಶಸ್ಸು ಪಡೆದು ಗೆದ್ದು ಬೀಗಲೇಬೇಕೆಂದು ರಿಷಬ್ ಶೆಟ್ಟಿ ಕೂಡ ತೆರೆಮರೆಯಲ್ಲಿ ಸಿಕ್ಕಾಪಟ್ಟೆ ತಯಾರಿ ಮಾಡಿಕೊಂಡೆ ಅಖಾಡಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕಾಗಿ ತಮ್ಮ ಲುಕ್ ಕೂಡ ಜೇಂಜ್ ಮಾಡಿ, ಸಿನಿಮಾ ಕಥೆಯಲ್ಲಿ ಸಾಕಷ್ಟು ಕೆಲಸ ಮಾಡಿಯೇ ಕಾಂತಾರ 2ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿನಿಮಾ ಮುಹೂರ್ತ ಸಮಾರಂಭದ ದಿನ…