ಬೆಂಗಳೂರು:- ನಗರದ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭೇಟಿ ನೀಡಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಹಿನ್ನೆಲೆ, ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ, ಆರ್ಶಿವಾದವನ್ನು ಪಡೆದಿದ್ದಾರೆ. ಇದಾದ ಬಳಿಕ ಮಾತನಾಡಿದ ಅವರು ‘ರಾಜ್ಯದ ಮುತ್ಸದಿ, ಹಿರಿಯರು, ಮಣ್ಣಿನ ಮಗ ದೇವೇಗೌರನ್ನು ಭೇಟಿ ಮಾಡಿದೆ. ವಿಪಕ್ಷ ನಾಯಕನಾಗಿದ್ದಕ್ಕೆ ಅಭಿನಂಧನೆ ಸಲ್ಲಿಸಿದ್ರು, ಸಾಕಷ್ಟು ಹೊತ್ತು ಚರ್ಚೆ ಮಾಡಿದೆ. ಕಾವೇರಿ ಹಾಗೂ ಮಹದಾಯಿ ನದಿ ವಿಚಾರವಾಗಿ ಹೆಚ್ಡಿಡಿ ಸಲಹೆ ನೀಡಿದರು. ಇದಕ್ಕೆ ಸಂಬಂಧಪಟ್ಟಂತೆ ಪೂರ್ತಿ ಸಹಕಾರ ನೀಡುತ್ತೇನೆ ಎಂದು ಹೇಳಿದ್ದೇನೆ ಎಂದರು ಇನ್ನು ಇದೇ ವೇಳೆ ‘ಮೈತ್ರಿ ವಿಚಾರವಾಗಿ ಕೂಡ ಮಾತುಕತೆ ಮಾಡಿದ್ದೇವೆ. ವಿಧಾನಸಭೆ ಒಳಗೆ, ಹೊರಗೆ ಹೋರಾಟ ಮಾಡುತ್ತೀವಿ, ಆ ಮೂಲಕ ಸರ್ಕಾರಕ್ಕೆ ನಡುಕ ಹುಟ್ಟುವ ಕೆಲಸ ಮಾಡುತ್ತೇವೆ. ಜಮೀರ್ ಹೇಳಿಕೆಯಿಂದ ಕೋಮು ಸೌಹಾರ್ದತೆ ಹಾಳಾಗುವ ರೀತಿಯಲ್ಲಿ ಜಮೀರ್ ಮಾತನಾಡಿದ್ದಾರೆ. ಜಮೀರ್ ಮಾತಿಗೆ ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ರು, ವಿಧಾನಸಭೆಯಲ್ಲಿ ಚರ್ಚೆ ಮಾಡಿ ಎಂದು…
Author: AIN Author
ಬೆಂಗಳೂರು:- ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಮಾಜಿ ಸಚಿವ ಆರ್ ಅಶೋಕ್ ಅವರಿಗೆ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಬಂಧ ಎಕ್ಸ್ ನಲ್ಲಿ ( ಈ ಹಿಂದೆ ಟ್ವಿಟ್ಟರ್) ನಲ್ಲಿ ಪೋಸ್ಟ್ ಮಾಡಿರುವ ಶರವಣ ಅವರು, ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗು ಆತ್ಮೀಯರಾದ ಸನ್ಮಾನ್ಯ ಶ್ರೀ ಆರ್. ಅಶೋಕ್ ರವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ಇನ್ನೂ ಅಳೆದು ತೂಗಿ ಕೊನೆಗೂ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿದೆ. ಆರ್ ಅಶೋಕ್ ಅವರು ವಿಪಕ್ಷ ನಾಯಕನ ಸ್ಥಾನವನ್ನು ಅಲಂಕರಿಸಲಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕರನ್ನಾಗಿ ಪಕ್ಷದ ಹಿರಿಯ ಶಾಸಕ ಆರ್ ಅಶೋಕ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷವು ಸರ್ವಾನುಮತದಿಂದ ಆಯ್ಕೆ ಮಾಡಿದೆ. ಕೇಂದ್ರದಿಂದ ಬಂದಿದ್ದ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ನಾಯಕನ ಆಯ್ಕೆ ನಡೆದಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆ ನಡೆಯಲಿರೋ ವಲ್ಡ್ ಕಪ್ ಪಂದ್ಯಾವಳಿಗೆ ಹಾವೇರಿಯಲ್ಲಿ ಕ್ರೀಡಾಭಿಮಾನಿಗಳು ಗಾಳಿ ಆಂಜನೇಯ ಸ್ವಾಮೀಗೆ ಪೂಜೆ ಸಲ್ಲಿಸಿದರು. ನಗರದ ಆಂಜನೇಯ ಸ್ವಾಮೀಗೆ ಪೂಜೆ ಸಲ್ಲಿಸಿ, ಭಾರತ ಗೆಲ್ಲುವಂತೆ ಪ್ರಾರ್ಥನೆ ಸಲ್ಲಿಸಿದರು. ಭಾರತ ಪರ ಘೋಷಣೆ ಕೂಗಿ, ಜೈಕಾರ ಹಾಕಿದ್ದಾರೆ. ಈ ಭಾರಿ ನಮ್ಮ ಭಾರತ ತಂಡ ವಲ್ಡ್ ಕಪ್ ಗೆದ್ದೆ ಗೆಲ್ಲುತ್ತೆ, ಎಲ್ಲಾ ವಿಭಾಗದಲ್ಲಿ ಉತ್ತಮವಾದ ಪ್ರದರ್ಶನವನ್ನ ಭಾರತ ನೀಡುತ್ತಿದೆ. ಟೀಂ ಇಂಡೀಯಾ ಈ ಭಾರಿ ವಲ್ಡ್ ಕಪ್ ಗೆಲ್ಲಬೇಕೆಂದು ಹರಕೆ ಸಲ್ಲಿಸಿದರು.
ನಾಳೆ ವರ್ಲ್ಡ್ ಕಪ್ ಪೈನಲ್ ಪಂದ್ಯ ಹಿನ್ನಲೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಹಿನ್ನೆಲೆ, ಟೀಂ ಇಂಡಿಯಾಗೆ ಮಾಜಿ ಸಚಿವ ಬಿ. ಶ್ರೀರಾಮುಲು ಶುಭ ಕೋರಿದ್ದಾರೆ. ನಾನು ಕೂಡ ನಾಳೆಯ ಮ್ಯಾಚ್ ಗೆ ಕಾತುರದಿಂದ ಕಾಯುತ್ತಿದ್ದೇನೆ. ಮನೆಯ ಮದುವೆಯ ಜಂಜಾಟದಲ್ಲಿದ್ದರು ಮ್ಯಾಚ್ ನೋಡುತ್ತೇನೆ. ನಾಳೆ ಕೆಲಸ ಮುಗಿಸಿ ಪೂರ್ತಿ ಮ್ಯಾಚ್ ನೋಡುತ್ತೇನೆ. ಅದು ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿಯೇ ಇದೆ. ಅಲ್ಲಿರುವುದರಿಂದ ಎಲ್ಲರೂ ಉತ್ಸುಕರಾಗಿದ್ದಾರೆ. ಕ್ರಿಕೆಟ್ ತಂಡದ ಆಟಗಾರರು ಕೂಡ ಉತ್ಸುಕರಾಗಿದ್ದಾರೆ. ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿರುವುದು ಒಂದು ಹೆಮ್ಮೆ. ಹಿಂದೆ ನಾವು ಕೂಡ ಕ್ರಿಕೆಟ್ ಆಡಿದ್ದೇವೆ. ಹೀಗಾಗಿ ನಮಗೂ ಕಾತುರ ಜಾಸ್ತಿ ಇದೆ. ಈಗಾಗಲೇ ಟೀ ಇಂಡಿಯಾ 10 ಪಂದ್ಯಗಳನ್ನ ಗೆದ್ದಿದೆ. ನಾಳೆಯೂ ಟೀಂ ಇಂಡಿಯಾ ಗೆದ್ದೆ ಗೆಲ್ಲುತ್ತೆ ಎಂಬ ವಿಶ್ವಾಸವಿದೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ಕಲಬುರಗಿ :-ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಾಳೆ ಅಹಮದಾಬಾದನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಾವಳಿಯ ನೇರ ಪ್ರಸಾರದ ವೀಕ್ಷಣೆ ವ್ಯವಸ್ಥೆಯನ್ನು ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಮಾಡಲಾಗಿದೆ. ಹೀಗಾಗಿ ಸಾರ್ವಜನಿಕರು, ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯ ವೀಕ್ಷಿಸಬೇಕೆಂದು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯತ್ರಿ ತಿಳಿಸಿದ್ದಾರೆ. ವೀಕ್ಷಣೆಗೆ LED ಪರದೆ ಮತ್ತು ಸೌಂಡ್ ಸಿಸ್ಟಮ್ ಅಳವಡಿಸಿಲಾಗಿದೆ ಎಂದಿದ್ದಾರೆ…
ಮಂಡ್ಯ :- ಜನತಾ ದರ್ಶನದಲ್ಲಿ ಸ್ವೀಕೃತವಾಗುವ ಕುಂದು ಕೊರತೆ ಅರ್ಜಿಯನ್ನು 15 ದಿನದೊಳಗಾಗಿ ವಿಲೇವಾರಿ ಮಾಡಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದರು. ಸಾರ್ವಜನಿಕರು ತಮ್ಮ ಕುಂದು ಕೊರತೆಗೆ ಸಂಬಂಧಿಸಿದಂತೆ ತಮ್ಮ ವ್ಯಾಪ್ತಿಯ ಅಧಿಕಾರಿಗಳನ್ನು ಸಂಪರ್ಕಿಸಿ. ಕೆಲಸವಾಗದೇ ಇದ್ದ ಸಂದರ್ಭದಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸಿ. ಈ ಹಂತದಲ್ಲೂ ಕೆಲಸವಾಗದಿದ್ದಲ್ಲಿ ನನ್ನ ಕಛೇರಿಯನ್ನು ಸಂಪರ್ಕಿಸಬಹುದು ಎಂದರು. ಕೊಪ್ಪ ಹೋಬಳಿಗೆ ಸಂಬಂಧಿಸಿದಂತೆ 8 ಗ್ರಾಮ ಪಂಚಾಯಿತಿಗಳಿದ್ದು, ಈ ವ್ಯಾಪ್ತಿಯ ಜನರ ಕುಂದು ಕೊರತೆಗಳನ್ನು ಪರಿಹರಿಸಲು ಇಂದು ಜನತಾ ದರ್ಶನವನ್ನು ಆಯೋಜಿಸಲಾಗಿದೆ. ಕೊಪ್ಪ ಭಾಗದ ಜನರು ಆಧಾರ್ ತಿದ್ದುಪಡಿ ಹಾಗೂ ನೋಂದಣಿಗಾಗಿ ತಾಲೂಕು ಅಥವಾ ಜಿಲ್ಲಾ ಕೇಂದ್ರಕ್ಕೆ ತೆರಳಬೇಕಿತ್ತು…
ಬೆಂಗಳೂರು:- ಅಶೋಕ್ ಗುಡುಗಿದರೆ ವಿಧಾನಸೌಧ ನಡುಗಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈ ಹಿಂದೆ ಯಡಿಯೂರಪ್ಪ ಗುಡುಗಿದರೆ ವಿಧಾನಸಭೆ ನಡುಗುವುದು ಅಂತಾ ಜನರು ಮಾತಾಡುತ್ತಿದ್ದರು. ಮುಂದಿನ ದಿನಗಳಲ್ಲಿ ಅಶೋಕ್ ಗುಡುಗಿದರೆ ವಿಧಾನಸಭೆ ನಡುಗಬೇಕು ಆ ರೀತಿಯಲ್ಲಿ ಅಶೋಕ್ ಸದನದಲ್ಲಿ ಹೋರಾಟ ಮಾಡುತ್ತಾರೆ, ಮಾತನಾಡುತ್ತಾರೆ ಎಂದರು. ನಿನ್ನೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಶೋಕ್ ಅವರನ್ನ ವಿಪಕ್ಷ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ. ಏಳು ಬಾರಿ ಶಾಸಕರಾಗಿ, ಡಿಸಿಎಂ ಆಗಿ, ಹಲವು ಖಾತೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಹಿರಿಯರ ಅಪೇಕ್ಷೆಯಂತೆ ಮೋದಿ ಅವರು, ನಡ್ಡಾ, ಅಮಿತ್ ಶಾ ಅವರು ಬಿಜೆಪಿ ಮುನ್ನಡೆಸಿಕೊಂಡು ಹೋಗುವಂತೆ ಜವಾಬ್ದಾರಿ ನೀಡಿದ್ದಾರೆ. ಕಳೆದ ಆರು ತಿಂಗಳಿಂದ ಆಡಳಿತ ಪಕ್ಷ ಕಾಂಗ್ರೆಸ್ ವಿಪಕ್ಷ ನಾಯಕರಿಲ್ಲ, ರಾಜ್ಯಾಧ್ಯಕ್ಷ ಇಲ್ಲ ಅಂತ ಟೀಕೆಮಾಡುತ್ತಿದ್ದರು. ನಮ್ಮ ರಾಷ್ಟ್ರೀಯ ನಾಯಕರ ತೀರ್ಮಾನ ದಿಂದ ನನ್ನ, ಅಶೋಕ್ ಅವರನ್ನ ಆಯ್ಕೆ ಮಾಡಿದ್ದಾರೆ. ಈಗ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಹೇಗಾಗಿದೆ ಅಂದರೆ ನಮ್ಮ…
ಬೆಂಗಳೂರು:- ನನ್ನನ್ನು ಜೈಲಿಗೆ ಹಾಕಲು ಸಿದ್ಧತೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,, ಅವರು ಏನೇನೋ ದೊಡ್ಡ ಸ್ಕೀಮು, ತಂತ್ರ, ಲೆಕ್ಕಾಚಾರ ಹಾಕುತ್ತಿದ್ದಾರೆ. ಎಲ್ಲವೂ ನಡೆಯಲಿ ಬಿಡಿ. ನನ್ನನ್ನು ಜೈಲಿಗೆ ಹಾಕಲು ಸಿದ್ಧತೆ ಮಾಡುತ್ತಿದ್ದಾರೆ. ಅವರಿಗೆ ನಾನು ಶುಭ ಕೋರುತ್ತೇನೆ” ಎಂದು ತಿಳಿಸಿದರು. ದಿನಬೆಳಗಾದರೆ ಸುಳ್ಳು ಆರೋಪ ಮಾಡುವುದು ಅವರ ಘನತೆಗೆ ಸರಿಯಲ್ಲ. ಕುಮಾರಣ್ಣ ಹಾಗೂ ವಿಜಯೇಂದ್ರ ಅವರು ಈಗ ಪಾರ್ಟ್ನರ್ಗಳು. ಅವರ ಮಧ್ಯೆಯೇ ಗೊಂದಲ ಇರುವಾಗ ನಾನು ಹೇಗೆ ಪ್ರತಿಕ್ರಿಯೆ ನೀಡಲಿ. ಕುಮಾರಣ್ಣ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು. ಪಕ್ಷದ ಅಧ್ಯಕ್ಷರಾಗಿದ್ದವರು. ಅವರು ಆ ಸ್ಥಾನಗಳಿಗೆ ತಕ್ಕಂತೆ ಗೌರವ ಉಳಿಸಿಕೊಳ್ಳಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ಅವರ ತಂದೆಯವರು ಅನೇಕ ಬಾರಿ ಈ ಬಗ್ಗೆ ಸಲಹೆ ನೀಡಿದ್ದಾರೆ ಎಂಬ ವಿಚಾರ ಕೇಳಿದೆ. ದೇವೇಗೌಡರು, ಯಡಿಯೂರಪ್ಪ, ಎಸ್.ಎಂ ಕೃಷ್ಣ, ವೀರಪ್ಪ ಮೊಯ್ಲಿ, ಸದಾನಂದಗೌಡರು, ಬಸವರಾಜ ಬೊಮ್ಮಾಯಿ ಅವರು ಕೂಡ ಮಾಜಿ ಮುಖ್ಯಮಂತ್ರಿಗಳು. ಅವರುಗಳು ಇವರಂತೆ…
ವಿದೇಶಿಗರು ಹಾಗೂ ಭಾರತೀಯರ ಜೀವನ ಶೈಲಿ ಭಿನ್ನವಾಗಿದೆ. ಕೌಟುಂಬಿಕ ಹಲ್ಲೆ, ಹಿಂಸೆ ಸೇರಿದಂತೆ ಗಂಭೀರ ಸಮಸ್ಯೆಯಲ್ಲಿ ವಿಚ್ಛೇದನ ಅನಿವಾರ್ಯ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಡಿವೋರ್ಸ್ ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಎಲ್ಲರೂ ಅಂದುಕೊಂಡಂತೆ ವಿಚ್ಛೇದನ ಪ್ರಕ್ರಿಯೆ ಅಷ್ಟು ಸುಲಭವಲ್ಲ. ಇಲ್ಲಿ ನಾನಾ ಸಮಸ್ಯೆಗಳು ಎದುರಾಗುತ್ತವೆ. ಮಹಿಳೆ ಅದ್ರಲ್ಲೂ ಕೆಲಸವಿಲ್ಲದ ಗೃಹಿಣಿ ಡಿವೋರ್ಸ್ ನಿರ್ಧಾರಕ್ಕೆ ಬರುವ ಮೊದಲು ಪ್ರತಿಯೊಂದು ಅಂಶವನ್ನು ಅರ್ಥ ಮಾಡಿಕೊಳ್ಳಬೇಕು. ವಿಚ್ಛೇದನಕ್ಕಿಂತ ಮೊದಲು ನೀವು ಯಾವೆಲ್ಲ ವಿಷ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂಬುದನ್ನು ನಾವಿಂದು ನಿಮಗೆ ಹೇಳ್ತೇವೆ. ವಿಚ್ಛೇದನಕ್ಕಿಂತ ಮೊದಲು ನೆನಪಲ್ಲಿಡಬೇಕಾದ ವಿಷಯ :- *ವಿಚ್ಛೇನದ ಬಗ್ಗೆ ಕಾನೂನು ಸಲಹೆ *ಆರ್ಥಿಕ ಸ್ಥಿತಿ *ಮಕ್ಕಳಾದ್ಮೇಲೆ ವಿಚ್ಛೇದನ *ಮಾನಸಿಕ ಬೆಂಬಲ ಮುಖ್ಯ *ಎಲ್ಲವನ್ನೂ ನಿಭಾಯಿಸುವ ಶಕ್ತಿ ವಿಚ್ಛೇನದ ಬಗ್ಗೆ ಕಾನೂನು ಸಲಹೆ:- ಮೊದಲು ವಿಚ್ಛೇದನ ಪ್ರಕ್ರಿಯೆಯಲ್ಲಿ ಏನೆಲ್ಲ ಮಾಡಬೇಕು ಎಂಬುದನ್ನು ವಕೀಲರಿಂದ ತಿಳಿದುಕೊಳ್ಳಿ. ಹಕ್ಕುಗಳು, ಜವಾಬ್ದಾರಿಗಳು ಮತ್ತು ಒಳಗೊಂಡಿರುವ ಕಾನೂನು ಪ್ರಕ್ರಿಯೆಗಳನ್ನು ಅರ್ಥಮಾಡಿಕೊಳ್ಳಿ. ಆರ್ಥಿಕ ಸ್ಥಿತಿ:- ಮೊದಲು ನಿಮ್ಮ ಆರ್ಥಿಕ ಸ್ಥಿತಿ ಗಮನಿಸಿ. ನೀವು ಕನಿಷ್ಠ…
ಹೆಚ್ಚಿನ ಜನರು ತೂಕ ಕಡಿಮೆ ಮಾಡಿಕೊಳ್ಳಲು ಮತ್ತು ತೂಕ ನಿಯಂತ್ರಣಕ್ಕಾಗಿ ಗ್ರೀನ್ ಟೀ ಕುಡಿಯುತ್ತಾರೆ. ಇದು ಕೇವಲ ತೂಕ ಕಡಿಮೆ ಮಾಡುವುದಲ್ಲದೇ ಹೃದಯ ಸಂಬಂಧಿ ಸಮಸ್ಯೆ ಹಾಗೂ ಕರುಳಿನ ಆರೋಗ್ಯಕ್ಕೂ ಉತ್ತಮವಾಗಿದೆ. ಹಲವಾರು ರೋಗಕ್ಕೆ ರಾಮಬಾಣ ಹೆಚ್ಚಿನ ಜನರು ಗ್ರೀನ್ ಟೀ ಅಂದ್ರೆ ಮುಖ ತಿರುಗಿಸಿಕೊಳ್ಳುತ್ತಾರೆ. ಕನಿಷ್ಠ ಪಕ್ಷ ಅದರ ಉಪಯೊಗವನ್ನು ತಿಳಿದುಕೊಳ್ಳುವ ಪ್ರಯತ್ನವನ್ನೂ ಮಾಡಲ್ಲ. ಈ ಗ್ರೀನ್ ಟೀ, ಹಲವಾರು ಗಿಡ ಮೂಲಿಕೆಯಿಂದ ಕೂಡಿದ್ದು, ಹಲವಾರು ಕಾಯಿಲೆಗಳಿಗೆ ಮದ್ದಾಗಿದೆ. ಇದು ಪರಿಧಮನಿಯ ಕಾಯಿಲೆ, ಟೈಪ್ 2 ಮಧುಮೇಹ ಮತ್ತು ಬೊಜ್ಜು, ಚರ್ಮ ಸಂಬಂಧಿ ಸಮಸ್ಯೆಗಳನ್ನು ದೂರ ಮಾಡುತ್ತದೆ. ಸೌಂದರ್ಯವರ್ಧಕ ಗ್ರೀನ್ ಟೀಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ದೇಹವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದರೊಂದಿಗೆ ತ್ವಚ್ಛೆಯ ಅಂದವನ್ನು ಹೆಚ್ಚಿಸುವ ಗುಣವೂ ಇದರಲ್ಲಿದೆ. ಸೌಂದರ್ಯ ಉತ್ಪನ್ನಗಳಲ್ಲಿ ಕೂಡ ಗ್ರೀನ್ ಟೀಯನ್ನು ಬಳಕೆ ಮಾಡುತ್ತಾರೆ. ಇದು ಯುವಿ ಕಿರಣಗಳಿಂದ ತ್ವಚ್ಚೆಯನ್ನು ರಕ್ಷಿಸುವ ಗುಣ, ಅಕಾಲಿಕ ನೆರೆ ತಡೆಯುವುದು, ಉರಿಯೂತದ ಲಕ್ಷಣಗಳನ್ನು ನಿವಾರಿಸುತ್ತದೆ.…