ದೆಹಲಿ: ಟೀಂ ಇಂಡಿಯಾದ (Team India) ಫಾಸ್ಟ್ ಬೌಲರ್ ಮೊಹಮ್ಮದ್ ಶಮಿಯವರು (Mohammad Shami) ಅಪಘಾತಕ್ಕೀಡಾದ ವ್ಯಕ್ತಿಯನ್ನು ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ನೈನಿತಾಲ್‍ನಲ್ಲಿ ನಡೆದಿದ್ದು, ಇದರ ವೀಡಿಯೋವನ್ನು ಶಮಿಯವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಇನ್‍ಸ್ಟಾಗ್ರಾಮ್‍ನಲ್ಲಿ (Instagram) ವೀಡಿಯೋವನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಶಮಿಯವರು ರಸ್ತೆ ಅಪಘಾತಕ್ಕೊಳಗಾದ ಸಂತ್ರಸ್ತರಿಗೆ ಸಹಾಯ ಮಾಡುವುದನ್ನು ಕಾಣಬಹುದಾಗಿದೆ. ಅಲ್ಲದೆ, ಅವನು ತುಂಬಾ ಅದೃಷ್ಟಶಾಲಿ. ದೇವರು ಅವನಿಗೆ 2 ನೇ ಜೀವನವನ್ನು ಕೊಟ್ಟನು. ಅವರ ಕಾರು ನೈನಿತಾಲ್ ಬಳಿಯ ಬೆಟ್ಟದ ರಸ್ತೆಯಿಂದ ನನ್ನ ಕಾರಿನ ಮುಂದೆ ಬಿದ್ದಿತು. ನಾವು ಅವರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದೇವೆ. ಇಂದು ಒಬ್ಬರ ಜೀವವನ್ನು ರಕ್ಷಿಸಿದ ಖುಷಿ ನನಗಿದೆ ಎಂದು ಶಮಿ ವೀಡಿಯೋ ಜೊತೆಗೆ ಬರೆದುಕೊಂಡಿದ್ದಾರೆ.
Author: AIN Author
ನವದೆಹಲಿ: ಏಕದಿನ ವಿಶ್ವಕಪ್ (World Cup) ಫೈನಲ್‍ನಲ್ಲಿ ಟೀಂ ಇಂಡಿಯಾ ಸೋತಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಡ್ರೆಸ್ಸಿಂಗ್ ರೂಮಿಗೆ ತೆರಳಿ ಆಟಗಾರರಿಗೆ ಧೈರ್ಯ ತುಂಬಿದ್ದರ ಬಗ್ಗೆ ಭಾರತ ತಂಡದ (Team India) ಮಾಜಿ ಕೋಚ್ ರವಿಶಾಸ್ತ್ರಿ (Ravi Shastri) ಸಂತಸ ವ್ಯಕ್ತಪಡಿಸಿದ್ದಾರೆ. ನಾನು ಕೋಚ್ ಆಗಿ ಏಳು ವರ್ಷಗಳ ಕಾಲ ಇದ್ದೆ. ಒಂದು ತಂಡ ಸರಣಿ ಅಥವಾ ಪ್ರಮುಖ ಟೂರ್ನಿ ಸೋತ ಬಳಿಕ ಪರಿಸ್ಥಿತಿ ಹೇಗಿರಲಿದೆ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಈ ಕಾರಣದಿಂದ ಇದು ಅತ್ಯಂತ ಮಹತ್ವದ ವಿಚಾರ ಎಂದು ನನಗೆ ಅನಿಸುತ್ತದೆ ಸೋತು ಕಂಗೆಟ್ಟಿರುವಾಗ ಅದೊಂದು ವಿಚಿತ್ರ ಛಾಯೆ ಆವರಿಸಿರುತ್ತದೆ. ಇಂತಹ ಸಯಮದಲ್ಲಿ ಡ್ರೆಸ್ಸಿಂಗ್ ರೂಮ್‍ಗೆ ದೇಶದ ಪ್ರಧಾನಿಯಾದಂತವರು ಭೇಟಿ ನೀಡಿದಾಗ, ಅದು ದೊಡ್ಡ ವಿಚಾರವಾಗುತ್ತದೆ. ಇದು ಆಟಗಾರರ ಉತ್ಸಾಹವನ್ನು ಹೆಚ್ಚಿಸುತ್ತದೆ ಎಂದು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‍ಗೆ ಭೇಟಿ ನೀಡಿದ್ದಕ್ಕೆ ಕೆಲ ದಿನಗಳ ಹಿಂದೆ…
ಮೊದಲ ದಿನದಿಂದಲೂ ಕಾರ್ತಿಕ್ ಮತ್ತು ತನಿಷಾ ಜೊತೆ ಹೆಚ್ಚು ಆತ್ಮೀರಾಗಿದ್ದ ಸಂಗೀತ ಈ ವಾರ ಪೂರ್ತಿ ವಿನಯ್ ತಂಡದಲ್ಲೇ ಕಾಣಿಸಿಕೊಂಡರು. ಅಲ್ಲದೇ, ಟಾಸ್ಕ್ ಹೆಸರಲ್ಲಿ ಇವರು ತೋರಿದ ವರ್ತನೆ ನೋಡುಗರಿಗೆ ಸೇಡು ತೀರಿಸಿಕೊಳ್ಳುವಂತೆ ಕಾಣುತ್ತಿತ್ತು. ಗಾರ್ಡನ್ ಏರಿಯಾದಲ್ಲಿ ಮಾತನಾಡುವಾಗ ನಮ್ರತಾ ಮುಂದೆ ಅವರ ಜೊತೆ ಇದ್ದದ್ದು ಜಸ್ಟ್ ಟೈಂಪಾಸ್ ಎಂದಿದ್ದಾರೆ. ನಿನ್ನೆ ನಡೆದ ಕಿಚ್ಚ ಪಂಚಾಯ್ತಿಯಲ್ಲಿ ಸುದೀಪ್ ಈ ವಿಚಾರವನ್ನು ಸಹ ಮಾತನಾಡಿದ್ದಾರೆ. ಸಂಗೀತಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಆರು ವಾರ ಕಾರ್ತಿಕ್ ತಂಡದ ಜೊತೆಗೆ ಇದ್ದವರು ಈಗ ವಿನಯ್ ಟೀಂ ಸೇರಿದ್ದೀರಿ. ಎರಡು ತಂಡದಲ್ಲಿ ಏನೆಲ್ಲ ಚೇಂಜಸ್ ಇದೆ ಎಂದು ಸುದೀಪ್ ಕೇಳಿದ್ದಾರೆ. ಈ ಟೀಮ್‌ಗೆ ಬಂದಮೇಲೆ ವಿನಯ್ ನನಗೆ ವೆರಿ ಕೇರಿಂಗ್ ಹಾಗೂ ಕಾಮ್ ಎನಿಸಿದರು. ಕಾರ್ತಿಕ್ ಯಾವಾಗಲೂ ನನ್ನ ಬಳಿ ಮಾತನಾಡುವಾಗ ಸಂಗೀತ ಜಗಳಕ್ಕೆ ಬರುತ್ತಾಳೆ ಎಂದೇ ಹೇಳ್ತಿದ್ರು. ವಿನಯ್ ತುಂಬಾ ಮೆಚ್ಯೂರ್ಡ್. ಆದರೆ ಆ ಮೆಚ್ಯೂರಿಟಿ ಕಾರ್ತಿಕ್ ಟೀಮ್‌ನಲ್ಲಿ ನನಗೆ ಕಾಣಿಸಿಲ್ಲ ಎಂದಿದ್ದಾರೆ. ಇಷ್ಟೆಲ್ಲ ಮಾತನಾಡಿದ್ದನ್ನು…
ತುಮಕೂರು:- ಬೋರ್ವೆಲ್ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಶನಿವಾರ ರಾತ್ರಿ ಕಂಬಳ ನೋಡಿದ ಐವರು ಕಾರಿನಲ್ಲಿ ಮಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ಬೋರ್‌ವೆಲ್ ಕೊರೆಯುವ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶಾನ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ನಿವಾಸಿ ಫಿಲಿಪ್ ನೇರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದ ಐವರು ಕಂಬಳವನ್ನು ವೀಕ್ಷಿಸಲೆಂದೇ ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದರಂತೆ. ಶನಿವಾರ ಕಂಬಳ ವೀಕ್ಷಿಸಿದ್ದ ಅವರು ಮಂಗಳೂರಿಗೆ ವಾಪಸ್ ತೆರಳುತ್ತಿದ್ದರಂತೆ. ಲಾರಿ ಹಾಗೂ ಕಾರು ವೇಗವಾಗಿ ಚಲಾಯಿಸಿದ್ದೇ ಈ ಅಪಘಾತಕ್ಕೆ…
ಬೆಂಗಳೂರು: ರನ್ ಮೆಷಿನ್ ವಿರಾಟ್ ಕೊಹ್ಲಿ ಅವರು ತಮ್ಮ 38ನೇ ವಯಸ್ಸಿನವರೆಗೂ ಉತ್ತಮ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಲಿದ್ದು, 2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಆಡಲಿದ್ದಾರೆ ಎಂದು ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಬಟ್ ಭವಿಷ್ಯ ನುಡಿದಿದ್ದಾರೆ. 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದ 11 ಪಂದ್ಯಗಳಿಂದ 95.62ರ ಸರಾಸರಿಯಲ್ಲಿ ಕೊಹ್ಲಿ 765 ರನ್ ಬಾರಿಸಿ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದರು. 2027ರ ಏಕದಿನ ವಿಶ್ವಕಪ್ ಟೂರ್ನಿಯು ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾದ ಜಂಟಿ ಆತಿಥ್ಯದಲ್ಲಿ ನಡೆಯಲಿದ್ದು, ಆ ವೇಳೆಗೆ ವಿರಾಟ್ ಕೊಹ್ಲಿಗೆ 39 ವರ್ಷ ಆಗಿರುತ್ತದೆ. ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಾನು ಹೆಚ್ಚು ದಿನ ಟಿ20 ಪಂದ್ಯ ಆಡುವುದಿಲ್ಲ ಎಂದು ಬಿಸಿಸಿಐಗೆ ಹೇಳಿದ್ದಾರೆ. ಆದರೆ ವಿರಾಟ್ ಕೊಹ್ಲಿ ಈ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ. ವಿರಾಟ್ ಕೊಹ್ಲಿ ಅವರು ತಮ್ಮ ಫಿಟ್ನೆಸ್ ಬಗ್ಗೆ ತೋರುತ್ತಿರುವ ಕಾಳಜಿ ಹಾಗೂ ಆಟದ ಬಗೆಗಿನ ಬದ್ಧತೆಯನ್ನು ಗಮನಿಸುತ್ತಿದ್ದರೆ…
ಬೆಂಗಳೂರು:- ಮೋದಿ ನಮ್ಮ ಎಚ್‌ಎಎಲ್ ಮಾರಬೇಡಿ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಕೇವಲ ಫೋಟೋಶೂಟ್ ಮಾಡಿಸಿಕೊಳ್ಳಲು ಬಂದಿದ್ದೀರೋ ಅಥವಾ ಅದಾನಿಯ ಏಜೆಂಟ್ ಆಗಿ ಬಂದಿದ್ದೀರೋ ಗೊತ್ತಿಲ್ಲ. ಆದರೆ ನಮ್ಮ ಎಚ್‌ಎಎಲ್ ನಮಗೆ ಬಿಡಿ, ನಮ್ಮ ಹೆಮ್ಮೆಯ ಸಂಸ್ಥೆಯನ್ನು ಮಾರಬೇಡಿ’ ಎಂದು ಮನವಿ ಮಾಡಿದೆ. ಜತೆಗೆ ‘ಎಚ್‌ಎಎಲ್‌ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡ ಮೋದಿ ಅವರೇ, ಇದೇ ಎಚ್‌ಎಎಲ್‌ನೊಂದಿಗೆ ಮಾಡಿಕೊಂಡಿದ್ದ ರಫೆಲ್ ಒಪ್ಪಂದವನ್ನು ರದ್ದುಪಡಿಸಿ ಅಂಬಾನಿ ಜೋಳಿಗೆ ತುಂಬಿಸಿದ್ದೇಕೆ? ಎಚ್‌ಎಎಲ್‌ಗೆ ದ್ರೋಹವೆಸಗಿ ಈಗ ಫೋಟೋಶೂಟ್ ಮಾಡಿಸಿಕೊಳ್ಳುವುದಕ್ಕೆ ನಿಮ್ಮ ಮನಸು ಒಪ್ಪಿದ್ದು ಹೇಗೆ?’ ಎಂದು ಲೇವಡಿ ಮಾಡಿದೆ.
ಬೆಂಗಳೂರು: ಮುಂದಿನ ವರ್ಷ ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಇದರ ಅಂಗವಾಗಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20-ಐ ಸರಣಿಯಲ್ಲಿ ಟೀಮ್ ಇಂಡಿಯಾ ಪ್ರಬಲ ಪೈಪೋಟಿ ನಡೆಸುತ್ತಿದ್ದು, ಸರಣಿಯ ಮೊದಲ ಪಂದ್ಯದಲ್ಲಿ 2 ವಿಕೆಟ್ ರೋಚಕ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದ ಗೆಲುವಿನಲ್ಲಿ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್ ಮಹತ್ತರ ಪಾತ್ರ ವಹಿಸಿದ್ದರು. ಗುರುವಾರ (ನವೆಂಬರ್ 23) ವಿಶಾಖಪಟ್ಟಣಂನ ವಿಡಿಸಿಎ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಟಿ20-ಐ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಸೂರ್ಯಕುಮಾರ್ ಯಾದವ್, ಆಸ್ಟ್ರೇಲಿಯಾದ ಬೌಲರ್‌ಗಳ ವಿರುದ್ಧ ಪ್ರಾಬಲ್ಯ ಮೆರೆದು 42 ಎಸೆತಗಳಲ್ಲೇ 80 ರನ್ ಬಾರಿಸಿದ್ದರು. ಆ ಮೂಲಕ ಕಾಂಗರೂ ಪಡೆ ನೀಡಿದ್ದ 209 ರನ್‌ಗಳನ್ನು ಚೇಸ್ ಮಾಡಲು ತಂಡಕ್ಕೆ ನೆರವು ನೀಡಿದ್ದರು. ತಮ್ಮ ಈ ಪ್ರದರ್ಶನದಿಂದ ನಾಯಕತ್ವದ ಮೊದಲ ಪಂದ್ಯದಲ್ಲೇ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಸೂರ್ಯ ಭಾಜನರಾಗಿದ್ದರು. ಏಕದಿನ ಮಾದರಿಯಲ್ಲಿ…
ಕನ್ನಡದ ನಟಿ ರಶ್ಮಿಕಾ ಮಂದಣ್ಣ, ರಣ್‌ಬೀರ್ ಕಪೂರ್ (Ranbir Kapoor) ನಟನೆಯ ‘ಅನಿಮಲ್’ ಚಿತ್ರದ ಟ್ರೈಲರ್ ರಿಲೀಸ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡ್ತಿದೆ. ಹೀಗಿರುವಾಗ ‘ಅನಿಮಲ್’ (Animal) ಟ್ರೈಲರ್ ನೋಡಿ ನಟ ಪ್ರಭಾಸ್ ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಸಂಜು, ಬ್ರಹ್ಮಾಸ್ತ್ರ ಚಿತ್ರಗಳ ಬಳಿಕ ಹಿಂದೆಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ಮಾಸ್ ಆಗಿ ರಣ್‌ಬೀರ್ ಕಾಣಿಸಿಕೊಂಡಿದ್ದಾರೆ. ಅಪ್ಪ-ಮಗನ ಸಂಬಂಧದ ಕುರಿತು ಕಥೆಯಾಗಿದೆ. ಹಲವು ಶೇಡ್‌ಗಳಲ್ಲಿ ರಣ್‌ಬೀರ್ ಹೈಲೆಟ್ ಆಗಿದ್ದಾರೆ. ಬಾಬಿ ಡಿಯೋಲ್ ವಿಲನ್ ಆಗಿ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ನೋಡಿದ ಪ್ರೇಕ್ಷಕರು ಕೂಡ ಈ ಚಿತ್ರದ ಸೂಪರ್ ಹಿಟ್ ಆಗುತ್ತೆ ಎಂದೆಲ್ಲಾ ಫ್ಯಾನ್ಸ್ ಕಾಮೆಂಟ್ ಮಾಡ್ತಿದ್ದಾರೆ. ಅಂದಹಾಗೆ ರಣ್‌ಬೀರ್‌ಗೆ ನಾಯಕಿಯಾಗಿ ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅನಿಮಲ್ ಟ್ರೈಲರ್ ಪ್ರಭಾಸ್ (Prabhas) ರಿಯಾಕ್ಟ್ ಮಾಡಿದ್ದಾರೆ.
ಬೆಂಗಳೂರು:- ಬಸವನಗುಡಿ ಕಡ್ಲೆಕಾಯಿ ಪರಿಷೆಯಲ್ಲಿ ತುತ್ತೂರಿ ಸೌಂಡ್ ನಿಲ್ಲಿಸಿ ಎಂದು ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ. ಈ ಬಾರಿಯ ಪರಿಷೆ ಡಿಸೆಂಬರ್ 9 ರಿಂದ 11ರ ತನಕ ನಡೆಯಲಿದೆ. ಬಸವನಗುಡಿ ಕಡ್ಲೆಕಾಯಿ ಪರಿಷೆ ಅಧಿಕೃತವಾಗಿ ನಡೆಯುವುದು ಮೂರು ದಿನ. ಆದರೆ ಒಂದು ವಾರದ ಮುಂಚಿನಿಂದ ಅಂಗಡಿಗಳು ಬರುತ್ತವೆ. ನೂರಾರು ಕಡ್ಲೆಕಾಯಿ ವ್ಯಾಪಾರಸ್ಥರು ಆಗಮಿತ್ತಾರೆ. ಇದರ ಜೊತೆಗೆ ವಿವಿಧ ವಸ್ತುಗಳ ಮಾರಾಟದ ಅಂಗಡಿಯೂ ಬರುತ್ತದೆ. ಅದರಲ್ಲಿ ತುತ್ತೂರಿಯೂ ಒಂದು. ತುತ್ತೂರಿಯ ಸೌಂಡ್ ನಿಲ್ಲಿಸಿ ಬುಲ್ ಟೆಂಪಲ್ ರಸ್ತೆಯಲ್ಲಿ ಚುಮು ಚುಮು ಚಳಿಯ ನಡುವೆ ಸಾವಿರಾರು ಜನರ ನಡುವೆ ಕಡ್ಲೆಕಾಯಿ ತಿನ್ನುತ್ತಾ ತುತ್ತೂರಿ ಊದುತ್ತಾ ಹೋಗುವ ಜನರಿದ್ದಾರೆ. ಇದು ಹಲವರಿಗೆ ಸಂತೋಷ ನೀಡುತ್ತದೆ. ಆದರೆ ಇದರ ಶಬ್ದವೇ ಸ್ಥಳೀಯ ನಿವಾಸಿಗಳಿಗೆ ಕಿರಿಕಿರಿ ತಂದಿದೆ. ಹಲವು ವರ್ಷಗಳಿಂದಲೂ ತುತ್ತೂರಿ ಮಾರಾಟಕ್ಕೆ ತಡೆ ಹಾಕಬೇಕು ಎಂಬ ಬೇಡಿಕೆ ಇದೆ. ಈಗ ಮತ್ತೆ ಕಡ್ಲೆಕಾಯಿ ಪರಿಷೆ ಎದುರಾಗಿದೆ. ಆದ್ದರಿಂದ ಬಸವನಗುಡಿ ನಿವಾಸಿಗಳ ಹಿತರಕ್ಷಣಾ ವೇದಿಕೆ ತುತ್ತೂರಿ ಸೌಂಡ್ ನಿಲ್ಲಿಸಿ…
ದೆಹಲಿ: ಏಕದಿನ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೆ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಗೆ ಸಿದ್ದತೆಗಳು ಆರಂಭವಾಗಿವೆ. ಡಿಸೆಂಬರ್ ತಿಂಗಳಲ್ಲಿ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಉಳಿಸಿಕೊಳ್ಳಬಲ್ಲ ಮತ್ತು ಬಿಡುಗಡೆಗೊಳಿಸಬಲ್ಲ ಆಟಗಾರರ ಪಟ್ಟಿಯನ್ನು ಸಿದ್ದಪಡಿಸುತ್ತಿವೆ. ಇದರ ನಡುವೆ ಆಟಗಾರರನ್ನು ಖರೀದಿಸಲು ಪರ್ಸ್‌ನಲ್ಲಿ ಹಣವನ್ನು ಹೆಚ್ಚಿಸಲಾಗುತ್ತಿದೆ. ಕೆಲ ಫ್ರಾಂಚೈಸಿಗಳು ಹರಾಜಿಗೂ ಟ್ರೇಡ್ ವಿಂಡೋದ ಸಹಾಯದಿಂದ ಆಟಗಾರರನ್ನು ವಿನಿಮಯ ಮಾಡಿಕೊಳ್ಳುತ್ತಿವೆ. ಅವೇಶ್ ಖಾನ್, ದೇವದತ್ ಪಡಿಕ್ಕಲ್ ಅವರನ್ನು ಲಖಬೌ ಸೂಪರ್ ಜಯಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ವಿನಿಮಯ ಮಾಡಿಕೊಂಡಿವೆ. ಟ್ರೇಡ್ ವಿಂಡೋ ಎಂದರೆ ಏನು? ಹಾಗೂ ಇದರ ಸಹಾಯದಿಂದ ಆಟಗಾರರನ್ನು ಹೇಗೆ ವಿನಿಮಿಯ ಮಾಡಲಾಗುತ್ತದೆ ಎಂಬ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಫ್ರಾಂಚೈಸಿಗಳು ಪರಸ್ಪರ ಆಟಗಾರರನ್ನು ವಿನಿಮಯ ಮಾಡಿಕೊಳ್ಳಬಹುದು ಅಥವಾ ನಗದು ವ್ಯವಹಾರಗಳಲ್ಲಿ ಆಟಗಾರರನ್ನು ಖರೀದಿಸಬಹುದು. ಈ ಸಂಪೂರ್ಣ ವಿಷಯದಲ್ಲಿ ಐಪಿಎಲ್ ಆಡಳಿತ ಮಂಡಳಿಯು ಅಂತಿಮ ಅಧಿಕಾರವನ್ನು ನೀಡಿದೆ. ಹೆಚ್ಚಿನ ಫ್ರಾಂಚೈಸಿಗಳು ಒಂದೇ…