Author: AIN Author

ಹುಬ್ಬಳ್ಳಿ: ಕೊಲೆ ಯತ್ನ, ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡ ರೌಡಿಯೊಬ್ಬ ಹಿಡಿಯಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಪ್ರತಿಯಾಗಿ ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಗೆ ಯತ್ನ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ಎಂಬಾತನ ಕಾಲಿಗೆ ಗುಂಡೇಟು ಬಿದ್ದಿದೆ. ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ ಗೋನಾ ತಲೆಮರೆಸಿಕೊಂಡು ತಿರುಗಾಡುತ್ತಿದ್ದ. ಶನಿವಾರ ಗದಗ ರಸ್ತೆಯಲ್ಲಿ ಈತ ಇದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ‌ ಹಿಡಿಯಲು ಹೋದಾಗ, ಅವರ ಮೇಲೆ ಕಲ್ಲು ತೂರಿದ್ದಲ್ಲದೆ, ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಶಹರ ಠಾಣೆ ಇನ್ಸ್‌ಪೆಕ್ಟರ್ ರಫಿಕ್ ತಹಶೀಲ್ದಾರ್ ಹಲ್ಲೆಗೆ ಮುಂದಾದ ರೌಡಿಯನ್ನು ತಡೆಯಲು ಆತನ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ. ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರೌಡಿಶೀಟರ್ ನ ದಾಳಿಯಿಂದಾಗಿ ಶಹರ ಠಾಣೆ ಪಿಎಸ್ ಐ ವಿನೋದ ಮತ್ತು ಪೇದೆ ಜಗದೀಶ ಎಂಬುವರಿಗೆ…

Read More

ನವದೆಹಲಿ: ಸಲಿಂಗ ವಿವಾಹ (Same Sex Marriage) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ (Supreme Court) ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ಕೋರಿ ಹಿರಿಯ ವಕೀಲ ಮತ್ತು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ಗೆ ತುರ್ತು ಪ್ರಸ್ತಾಪವನ್ನು ಮಾಡಿದರು. ವಿವಾಹದ ಹಕ್ಕು ನಿರಾಕರಣೆ ಎಂದು ಪೀಠದಲ್ಲಿದ್ದ ಎಲ್ಲಾ ನ್ಯಾಯಾಧೀಶರು ಒಪ್ಪಿಕೊಂಡರೂ ತೀರ್ಪು ನೀಡಿದ ಸಂವಿಧಾನ ಪೀಠವು ಪರಿಹಾರವನ್ನು ನಿರಾಕರಿಸಿದ್ದರಿಂದ ಮರುಪರಿಶೀಲನಾ ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿ ಆಲಿಸಬೇಕು ಎಂದು ರೋಹಟಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ತಿಳಿಸಿದರು. ನ್ಯಾಯಾಧೀಶರು ತಾರತಮ್ಯವಿದೆ ಒಪ್ಪುತ್ತಾರೆ, ತಾರತಮ್ಯವಿದ್ದರೆ ಪರಿಹಾರವೂ ಇರಬೇಕು. ಹೆಚ್ಚಿನ ಸಂಖ್ಯೆಯ ಜನರ ಜೀವನ ಅವಲಂಬಿತವಾಗಿದೆ. ತೆರೆದ ನ್ಯಾಯಾಲಯದ ವಿಚಾರಣೆಗೆ ನಾವು ಒತ್ತಾಯಿಸಿದ್ದೇವೆ ಎಂದು ಮನವಿ ಮಾಡಿದರು. ನಾವು ಮನವಿಯನ್ನು ಪರಿಶೀಲಿಸಿ ವಿಚಾರಣೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಸಿಜೆಐ ಚಂದ್ರಚೂಡ್ ತಿಳಿಸಿದರು. https://ainlivenews.com/miley-is-the-new-president-of-argentina-who-talks-to-a-dead-dog/ ಮರು ಪರಿಶೀಲನಾ ಅರ್ಜಿಗಳನ್ನು ಸಾಮಾನ್ಯವಾಗಿ ಸುಪ್ರೀಂ ಕೋರ್ಟ್ ಚೇಂಬರ್‌ನಲ್ಲಿ ವಿಚಾರಣೆ…

Read More

ಕಲಬುರಗಿ:- ಜಿಲ್ಲೆಯ ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ಕಾರ್ತೀಕ ಮಾಸದ ಪ್ರಯುಕ್ತ ದೀಪೋತ್ಸವ ಅರ್ಚಕರಾದ ಗುಂಡಾಚಾರ್ಯ ಜೋಶಿ ನರಿಬೊಳ ಅವರ ನೇತೃತ್ವದಲ್ಲಿ ನೆರವೇರಿತು. ಕಾರ್ತೀಕ ಮಾಸದ ಪ್ರಯುಕ್ತ ಪ್ರತಿದಿನವೂ ಸಂಜೆ ದೀಪೋತ್ಸವ, ಭಜನೆ, ಶ್ರೀ ರಾಮತಾರಕ ಮಂತ್ರ ಜಪ, ಮಾಹಾಮಂಗಳಾರತಿ, ಮಂತ್ರಪುಷ್ಪ ನೆರವೇರುತ್ತಿದೆ, ಡಿಸೆಂಬರ್ 12 ರವರೆಗೂ ದೀಪೋತ್ಸವ ನಡೆಯಲಿದೆ ಎಂದು ಅರ್ಚಕರು ತಿಳಿಸಿದರು. ಜಯತೀರ್ಥ ಮಹಿಳಾ ಮಂಡಳಿಯ ಸದಸ್ಯರು, ಗೋಪಾಲರಾವ, ಶಾಮರಾವ ಕುಲಕರ್ಣಿ, ಪ್ರಮೋದ ಪಂಥ, ಗುರುರಾಜ, ಸೇರಿದಂತೆ ಅನೇಕ ಭಕ್ತರು ಭಾಗವಹಿಸಿದ್ದರು.

Read More

ಕಲಬುರ್ಗಿ:- ಜೈ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ನಡೆಯಿತು. ಜೈಕರಾವೇ ಮುಖ್ಯಸ್ಥ ಸಚಿನ್ ಫರ್ತಾಬಾದ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೈದ್ಯಕೀಯ ಹಾಗು ಮಾಧ್ಯಮ ಸೇರಿದಂತೆ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಕಲ್ಯಾಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.. ಇದೇವೇಳೆ ಜ್ಯೂನಿಯರ್ ವಿಷ್ಣುವರ್ಧನ್ ಎಂದೇ ಪ್ರಸಿದ್ಧಿಯಾಗಿರುವ ವಿಜಯಪುರದ ರವಿ ಕೋರೆ ಸಾಹಸಸಿಂಹನ ನಟನೆ ಮಾಡಿ ತೋರಿಸಿದ್ದು ಸೂಪರ್ ಆಗಿತ್ತು..ವಿವಿಧ ಮಠಾಧೀಶರು ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾದ್ರು..ಮಾಲಾಶ್ರೀ ತಳಕೇರಿ ಹಾಗು ಚನ್ನು ನಾಲವಾರ ಸಂಗೀತ ಸಂಜೆ ನಡೆಸಿಕೊಟ್ರು..

Read More

ಶನಿವಾರ ನಡೆದ ವಾರದ ಕಥೆ ಕಿಚ್ಚನ ಜತೆ ಸಂಚಿಕೆಯಲ್ಲಿ ಸುದೀಪ್​ ಅವರಿಂದ ಪ್ರತಿವಾರದಂತೆ ಈ ವಾರವೂ ಕೂಡ ಹೆಚ್ಚಿನ ಕ್ಲಾಸ್​ ಪಡೆದುಕೊಂಡಿದ್ದಾರೆ. ವೀಕ್ಷಕರ ಪ್ರಕಾರ ಯಾರು ಹೇಗೆಲ್ಲಾ ಕಾಣಿಸುತ್ತಿದ್ದಾರೆ ಹೊರಗಡೆ ಎಂಬುದನ್ನು ಆಯಾ ಸ್ಪರ್ಧಿಗಳಿಗೆ ಸುದೀಪ್​ ಸರಳವಾಗಿ ತಿಳಿ ಹೇಳಿದ್ದಾರೆ. ಈ ಮಧ್ಯೆ ಮೈಕಲ್​ಗೆ ಕಿಚ್ಚನ ಚಪ್ಪಾಳೆ ಕೊಟ್ಟ ಕಿಚ್ಚ, ಅವರ ಪ್ರಯತ್ನವನ್ನು ಮೆಚ್ಚಿ ಮಾತನಾಡಿದ್ದಾರೆ. ಶನಿವಾರದ ಕಿಚ್ಚನ ಪಂಚಾಯಿತಿಗಾಗಿ ಈ ಬಾರಿ ಹೆಚ್ಚಿನ ಕಾತರದಿಂದ ಕಾದಿದ್ದು ಮನೆಯ ಸದಸ್ಯರಿಗಿಂತ ವೀಕ್ಷಕರು ಎಂಬುದರಲ್ಲಿ ಅನುಮಾನವೇ ಇಲ್ಲ. ಕಾರಣ ಈ ವಾರದ ಆರಂಭದಿಂದಲೂ ಸ್ಪರ್ಧಿಗಳ ಮಧ್ಯೆ ಭಾರೀ ಜಟಾಪಟಿ, ಮಾತಿನ ಚಕಮಕಿ, ಹೊಡೆದಾಟ ಮಾಡಿಕೊಳ್ಳುವಷ್ಟು ಮಿತಿ ಮೀರಿದ ವರ್ತನೆ ವೀಕ್ಷಕರಲ್ಲಿ ಭಾರೀ ಗೊಂದಲ ಮೂಡಿಸಿತ್ತು. ಈ ವಿಚಾರಗಳ ಕುರಿತು ಯಾರದು ತಪ್ಪು? ಯಾರದು ಸರಿ? ಎಂಬ ಸಂಗತಿಗಳನ್ನು ಸುದೀಪ್ ಹೇಗೆ ತಿಳಿಸಲಿದ್ದಾರೆ ಎಂಬ ಕುತೂಹಲ ತೀವ್ರವಾಗಿತ್ತು. ಸ್ಪರ್ಧಿಗಳಿಗೆ ಕಿಚ್ಚನ ಕ್ಲಾಸ್​ ಎಂದಿನಂತೆ ಈ ವಾರವೂ ಖಡಕ್​ ಆಗಿಯೇ ಇತ್ತು. ಸ್ಪರ್ಧಿಗಳಿಗೆ ಕೆಲವು ಸಂಗತಿಗಳನ್ನು…

Read More

ಕಾಂತಾರ ಸಿನಿಮಾ ಟೀಮ್​​​ನಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾದ ಮುಹೂರ್ತದ ದಿನದಂದೇ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ರಿಷಬ್ ಶೆಟ್ಟಿ ಫಸ್ಟ್ ಲುಕ್ ಗಾಗಿ ಮಾಡಿದ ಪೋಸ್ಟರ್​​​ನಲ್ಲಿ ಇದು ಬರಿ ಬೆಳಕಲ್ಲ, ದರ್ಶನ ಎಂದು ಟ್ಯಾಗ್ ಲೈನ್ ಕೊಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿವೆ. ಸಿನಿಮಾ ಟೀಮ್ ಅಧಿಕೃತವಾಗಿ ಯಾವುದೇ ಮಾಹಿತಿ ಸಿಗದೇ ಇದ್ದರೂ, ಬಲ್ಲ ಮೂಲಗಳು ಮಾಹಿತಿಯನ್ನು ಹೊರ ಹಾಕುತ್ತಲೇ ಇವೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿತ್ತು. ಹಿಟ್ ಆದ ನಂತರ ಹಲವು ಭಾಷೆಗಳಲ್ಲಿ ಅದನ್ನು ಡಬ್ ಮಾಡಲಾಯಿತು. ಆದರೆ, ಕಾಂತಾರ 2 ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆಯಂತೆ. ಹಾಗಾಗಿ ಅದ್ಧೂರಿ ಮೇಕಿಂಗ್ ಕೂಡ ಇರಲಿದೆ ಎಂದು ಚಿತ್ರ ತಂಡದ ಮೂಲಗಳು ತಿಳಿಸಿದೆ.

Read More

ಬಾಗಲಕೋಟೆ:- ಬಿಜೆಪಿಯಲ್ಲಿ ಬಿಎಸ್‌ವೈಗೆ ಆದ ಸ್ಥಿತಿ ವಿಜಯೇಂದ್ರನಿಗೂ ಬರಲಿದೆ ಎಂದು ಸಚಿವ ತಿಮ್ಮಾಪುರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯಲ್ಲಿ ಸಾಕಷ್ಟು ನಾಯಕರಿಗೆ ಅನ್ಯಾಯಮಾಡಿದ್ದು, ನಮ್ಮ ಯಡಿಯೂರಪ್ಪ ಸಾಹೇಬರನ್ನು ಈ ಮುಂಚೆ ಯಾವ ರೀತಿಯಾಗಿ ಪಕ್ಷವು ನಡೆಸಿಕೊಂಡಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಷಯ. ಅದೇ ರೀತಿ ಪರಿಸ್ಥಿತಿ ಅವರ ಮಗನಿಗೂ ಬರಲಿದೆ ಎಂದು ಭವಿಷ್ಯ ನುಡಿದರು. ಲಿಂಗಾಯತರು, ದಲಿತರು ಎಲ್ಲ ಸರ್ವ ಜನಾಂಗದವರನ್ನು ತುಳಿಯುವ ವ್ಯವಸ್ಥೆ ಬಿಜೆಪಿಯಲ್ಲಿದೆ. ಯಾರನ್ನೂ ಸಹ ಅವರು ಸರಿಯಾಗಿ ನಡೆಸಿಕೊಳ್ಳುವುದಿಲ್ಲ. ಎಲ್ಲ ಮುಖಂಡರ ಪರಿಸ್ಥಿತಿಯೂ ಬಿಜೆಪಿಯಲ್ಲಿ ಹಾಗೆಯೇ ಇದೆ. ಇತ್ತೀಚೆಗೆ ವಿಧಾನಸಭೆ ಚುನಾವಣೆಯಲ್ಲಿ ವಿ.ಸೋಮಣ್ಣ ಅವರಿಗೆ ಬೇಕೆಂದಲೇ 2 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿ, ಕ್ಷೇತ್ರ ಬದಲಿಸಿ ಅವರನ್ನು ಸೋಲಿಸಲಾಗಿದೆ. ಇಂಥ ಪಕ್ಷದಲ್ಲಿ ಇರುವುದು ಎಲ್ಲ ನಾಯಕರಿಗೂ ಬೇಡವಾಗಿದೆ ಎಂದರು. ಹಿಂದು-ಮುಸ್ಲಿಂ ಗಲಾಟೆ ಮಾಡಿಸುವುದೇ ಬಿಜೆಪಿಯವರ ಮುಖ್ಯ ಕೆಲಸವಾಗಿದೆ. ತಮ್ಮ ಸ್ವಾರ್ಥ ಸಾಧನೆಗೆ ಬಿಜೆಪಿ ಹೈಕಮಾಂಡ್‌ ಮುಖಂಡರು ಎಲ್ಲರನ್ನೂ ಬಲಿಕೊಡುತ್ತಿದ್ದಾರೆ. ಅಧಿಕಾರದ ಲಾಲಸೆಗೆ ಏನು ಬೇಕಾದರೂ ಮಾಡಲು ಅವರು…

Read More

ಕಳೆದ ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಮತ್ತು ಫೋನ್ ನಂಬರ್​ಗಳನ್ನು ಡೀ ಆ್ಯಕ್ಟಿವೇಟ್ ಮಾಡುವ ಸಂಬಂಧ ಎನ್​ಪಿಸಿಐ (NPCI guidelines) ಮಾರ್ಗಸೂಚಿ ಹೊರಡಿಸಿದೆ. ಟಿಪಿಎಪಿ ಅಥವಾ ಪಿಎಸ್​ಪಿ ಅಪ್ಲಿಕೇಶನ್​ಗಳಿಂದ ಹಣಕಾಸು ವಹಿವಾಟನ್ನಾಗಲೀ ಅಥವಾ ಬ್ಯಾಲನ್ಸ್ ಎನ್​ಕ್ವೈರಿ ಇತ್ಯಾದಿ ಹಣಕಾಸೇತರ ವಹಿವಾಟನ್ನಾಗಲೀ (Non Banking Transaction) ಮಾಡದೇ ಇದ್ದರೆ ಡೀ ಆಕ್ಟಿವೇಟ್ ಆಗುವ ಸಾಧ್ಯತೆ ಇರುತ್ತದೆ ಟಿಪಿಎಪಿ, ಅಥವಾ ಥರ್ಡ್ ಪಾರ್ಟಿ ಅಪ್ಲಿಕೇಶನ್ ಪ್ರೊವೈಡರ್​ಗಳೆಂದರೆ ಫೋನ್ ಪೇ, ಪೇಟಿಎಂ, ಗೂಗಲ್ ಪೇ ಇತ್ಯಾದಿಯವರು. ಇನ್ನು, ಪಿಎಸ್​ಪಿ ಎಂದರೆ ಪೇಮೆಂಟ್ ಸರ್ವಿಸ್ ಪ್ರೊವೈಡರ್​ಗಳಾಗಿವೆ. ಪೇಮೆಂಟ್ ಒದಗಿಸುವ ಬ್ಯಾಂಕ್ ಇತ್ಯಾದಿಗಳು ಪಿಎಸ್​ಪಿಗಳಾಗಿವೆ. ಎನ್​ಪಿಸಿಐನ ಕೆಲ ಮಾರ್ಗಸೂಚಿಗಳು ಇವು ಒಂದು ವರ್ಷದಿಂದ ಯಾವ ವಹಿವಾಟು ನಡೆಸದ ಯುಪಿಐ ಐಡಿಗಳನ್ನು ಎಲ್ಲಾ ಟಿಪಿಎಪಿ ಮತ್ತು ಪಿಎಸ್​ಪಿಗಳು ಗುರುತಿಸಬೇಕು. ಯಾವುದೇ ಹಣ ವರ್ಗಾವಣೆ ಆಗದಂತೆ ಆ ಯುಪಿಐ ಐಡಿ ಮತ್ತು ಯುಪಿಐ ನಂಬರ್​ಗಳನ್ನು ಡಿಸೇಬಲ್ ಮಾಡಬೇಕು. ಈ ಫೋನ್ ನಂಬರ್ ಅನ್ನು ಯುಪಿಐ…

Read More

ಬೆಂಗಳೂರು:- ಹೈಗ್ರೌಂಡ್ಸ್ ಠಾಣಾ ಪೊಲೀಸರು ಕಾರ್ಯಚರಣೆ ನಡೆಸಿ ಸಿಗ್ನಲ್​ಗಳ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಬಂಧಿತರು. ಆರೋಪಿಗಳಿಂದಒಟ್ಟು ಐದು ಲಕ್ಷ ಮೌಲ್ಯದ 80 ಬ್ಯಾಟರಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಆರೇಳು ತಿಂಗಳಿಂದ ನಗರದ ಹಲವು ಜಂಕ್ಷನ್​ಗಳಲ್ಲಿ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಕಳ್ಳತನವಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಠಾಣಾ ಪೊಲೀಸರು, ಬರೋಬ್ಬರಿ 120 ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಚಲನವಲನಗಳು ಪತ್ತೆಯಾಗಿವೆ. ಅದರಂತೆ, ಆರೋಪಿಗಳ ಗುರುತು ಪತ್ತೆಹಚ್ಚಿದ ಹೈಗ್ರೌಂಡ್ಸ್ ಪೊಲೀಸರು, ಆರೋಪಿಗಳಾದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಎಂಬವರನ್ನು ಬಂಧಿಸಿ ಕಳ್ಳತನ ಮಾಡಿದ್ದ 80 ಬ್ಯಾಟರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾ

Read More

ಚನ್ನಪಟ್ಟಣ:  ವರ್ಕ್ ಫ್ರಂ ಹೋಂ ಹೆಸರಿನಲ್ಲಿ ಯುವತಿಯೊಬ್ಬಳಿಗೆ 5.43 ಲಕ್ಷ ರು. ವಂಚಿಸಿರುವ ಘಟನೆ ತಾಲೂಕಿನ ದೇವರಹೊಸ ಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಡಿ.ಸಿ.ಲಾವಣ್ಯ(28) ಹಣ ಕಳೆದುಕೊಂಡವರು. ಎಂಜಿನಿಯರಿಂಗ್ ಪೂರೈಸಿದ್ದ ಯುವತಿಗೆ 4 ದಿನಗಳ ಹಿಂದೆ ವಾಟ್ಸಾಪ್‌ನಲ್ಲಿ ವರ್ಕ್ ಫ್ರಂ ಹೋಂ ಅವಕಾಶವಿದೆ. ಕೆಲವು ಟಾಸ್ಕ್‌ಗಳನ್ನು ಪೂರೈಸಿದರೆ ಹಣ ಬರುತ್ತದೆ ಎಂಬ ಸಂದೇಶ ಬಂದಿದೆ. ಇದನ್ನು ನಂಬಿದ ಯುವತಿ ಸಂದೇಶದಲ್ಲಿ ಸೂಚಿಸಿದ್ದ ವೆಬ್‌ಸೈಟ್‌ಗೆ ಲಾಗಿನ್ ಆಗಿದ್ದಾಳೆ. https://ainlivenews.com/shooting-in-metro-also-from-now-on-bmrcl-green-signal/ ಆಗ ಯುವತಿಗೆ ಕೆಲವು ಟಾಸ್ಕ್‌ಗಳನ್ನು ಖರೀದಿಸುವಂತೆ ಸೂಚಿಸಿದ್ದು, ವಂಚಕರು ಸೂಚಿಸಿದ ವಿವಿಧ ಯುಪಿಐ ಐಡಿಗೆ ಒಂದು ಸಾವಿರ, 5 ಸಾವಿರ, 7 ಸಾವಿರದಂತೆ ಲಾವಣ್ಯ ಮೂರು ಬಾರಿ ಹಣ ವರ್ಗಾವಣೆ ಮಾಡಿದ್ದಾಳೆ. ಆ ನಂತರ ತಮ್ಮ ಹಣವನ್ನು ಮರಳಿ ಪಡೆಯಲು ಮತ್ತೆ ಹಣ ಹೂಡಿಕೆ ಮಾಡುವಂತೆ ಸೂಚಿಸಿದ್ದು, ಅದರಂತೆ ಯುವತಿ ಇನ್ನೊಂದು ಬ್ಯಾಂಕ್ ಖಾತೆಯಿಂದ ಮತ್ತೆ 68 ಸಾವಿರ, 28 ಸಾವಿರ, 1.36 ಲಕ್ಷ, 2.98 ಲಕ್ಷ ಹಣವನ್ನು ವಂಚಕರು ಸೂಚಿಸಿದಂತೆ ವರ್ಗಾಯಿಸಿದ್ದು, ಒಟ್ಟು…

Read More