Author: AIN Author

ಸೂರ್ಯೋದಯ: 06.23 AM, ಸೂರ್ಯಾಸ್ತ : 05.50 PMಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ,ಶರತ್ ಋತು, ತಿಥಿ: ಇವತ್ತು ಚತುರ್ದಶಿ 03:53 PM ತನಕ ನಂತರ ಹುಣ್ಣಿಮೆ ನಕ್ಷತ್ರ: ಇವತ್ತು ಭರಣಿ 02:05 PM ತನಕ ನಂತರ ಕೃತ್ತಿಕ ಯೋಗ: ಇವತ್ತು ವರಿಯಾನ್ 03:53 AM ತನಕ ನಂತರ ಪರಿಘ ಕರಣ: ಇವತ್ತು ಗರಜ 04:35 AM ತನಕ ನಂತರ ವಣಿಜ 03:53 PM ತನಕ ನಂತರ ವಿಷ್ಟಿ ರಾಹು ಕಾಲ: 04:30 ನಿಂದ 06:00 ವರೆಗೂ ಯಮಗಂಡ: 12:00 ನಿಂದ 01:30 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 09.27 AM to 11.00 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:41 ನಿಂದ ಮ.12:25 ವರೆಗೂ ಜಾತಕ ಆಧಾರದ ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ…

Read More

ಬೆಂಗಳೂರು:- ಬೆಂಗಳೂರು ತಂತ್ರಜ್ಞಾನ ಶೃಂಗಸಭೆ-2023ರಲ್ಲಿ 30 ರಾಷ್ಟ್ರಗಳ ತಂತ್ರಜ್ಞಾನ ಕ್ಷೇತ್ರದ ಪ್ರಮುಖರು, ನವೋದ್ಯಮಗಳ ಪ್ರತಿನಿಧಿಗಳು ಮತ್ತು ಹೂಡಿಕೆದಾರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. ಈ ಬಾರಿಯ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ‘ಬ್ರೇಕಿಂಗ್ ಬೌಂಡರೀಸ್‌- ಇನ್ನೋವೇಷನ್‌ ಫ್ರಂ ಇಂಡಿಯಾ ಇಂಪ್ಯಾಕ್ಟ್‌ ಫಾರ್‌ ವರ್ಲ್ಡ್‌’ ಎಂಬ ಧ್ಯೇಯವಾಕ್ಯದ ಅಡಿಯಲ್ಲಿ ನಡೆಯಲಿದೆ. ಕಝಕಿಸ್ತಾನದ ಸಚಿವ ಬಗ್ದತ್‌ ಮುಸ್ಸಿನ್‌ ಹಾಗೂ ಇವಿಪಿ ಆಯಂಡ್‌ ಸಿಟಿಒ ಕಂಪನಿಯ ವ್ಯವಸ್ಥಾಪಕ ಮಾರ್ಕ್‌ ಪೇಪರ್‌ಮಾಸ್ಟರ್‌ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದ ಗಣ್ಯರೂ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ವಿಪ್ರೊ ಕಾರ್ಯನಿರ್ವಾಹಕ ಅಧ್ಯಕ್ಷ ರಿಶಾದ್ ಪ್ರೇಮ್‌ಜಿ, ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಷಾ, ಇನ್ಫೊಸಿಸ್‌ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಸೇರಿದಂತೆ ಜೈವಿಕ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಹಲವು ಪ್ರಮುಖರು ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುವರು ಎಂದರು. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಸಂವಾದ, ಅಂತರರಾಷ್ಟ್ರೀಯ ಮಟ್ಟದಲ್ಲಿ ಆಗಿರುವ…

Read More

ಸನ್​ರೈಸರ್ಸ್​ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಯಾಂಕ್ ದಾಗರ್ ಮತ್ತು ಶಹಬಾಜ್ ಅಹ್ಮದ್ ಅವರನ್ನು ಟ್ರೇಡ್​ ಮಾಡಿಕೊಂಡಿವೆ. ಶನಿವಾರ ರಾತ್ರಿ ಅಥವಾ ಭಾನುವಾರ ಬೆಳಿಗ್ಗೆ ವೇಳೆಗೆ ಈ ಬಗ್ಗೆ ಅಧಿಕೃತ ಪ್ರಕಟಣೆ ಬರಬಹುದು ಎಂದು ವರದಿ ತಿಳಿಸಿದೆ. ದಾಗರ್ ಅವರನ್ನು ಕಳೆದ ವರ್ಷ ಎಸ್​ಆರ್​ಎಚ್​​ 1.8 ಕೋಟಿ ರೂ.ಗೆ ಖರೀದಿಸಿದರೆ, ಶಹಬಾಜ್ ಅವರನ್ನು 2022 ರ ಮೆಗಾ ಹರಾಜಿನಲ್ಲಿ ಆರ್​ಸಿಬಿ 2.4 ಕೋಟಿ ರೂ.ಗೆ ಖರೀದಿಸಿತ್ತು. ಎಸ್‌ಆರ್​ಎಚ್​ ಪರ ಮೂರು ಪಂದ್ಯಗಳನ್ನು ಆಡಿರುವ ದಾಗರ್ ಕಳೆದ ಋತುವಿನಲ್ಲಿ ಛಾಪು ಮೂಡಿಸಲು ವಿಫಲರಾಗಿದ್ದರು. ಅಂತೆಯೇ, ಕಳೆದ ಋತುವಿನಲ್ಲಿ ಆರ್​ಸಿಬಿ ಪರ ಆಡಿದ 10 ಪಂದ್ಯಗಳಲ್ಲಿ ಶಹಬಾಜ್ ಅತ್ಯುತ್ತಮ ಪ್ರದರ್ಶನ ನೀಡಿರಲಿಲ್ಲ. ಆರ್​ಸಿಬಿ ಈ ಋತುವಿನಲ್ಲಿ ವನಿಂದು ಹಸರಂಗ ಮತ್ತು ಹರ್ಷಲ್ ಪಟೇಲ್ ಅವರನ್ನು ಬಿಡುಗಡೆ ಮಾಡಬಹುದು ಎಂಬ ಊಹಾಪೋಹಗಳು ಸಹ ಹರಡಿವೆ. ಆದಾಗ್ಯೂ, ಅಂತಿಮ ನಿರ್ಧಾರಕ್ಕೆ ಬಂದಿಲ್ಲ ಎಂದು ಕ್ರಿಕ್​ಬಜ್​​ ವರದಿ ಮಾಡಿದೆ. ಶಹಬಾಜ್ ಮತ್ತು ದಾಗರ್ ಇಬ್ಬರೂ ನಿಧಾನಗತಿಯ ಎಡಗೈ…

Read More

ಬೆಂಗಳೂರು:- ಮರುಘಾಶ್ರೀಗಳಿಗೆ ಮರಣ ದಂಡನೆ ಆಗಬೇಕಾಗಿತ್ತು ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳನ್ನು ರಕ್ಷಿಸಲು ಪೋಕ್ಸೊ ಕಾಯ್ದೆ ಇದೆ. ನಿರ್ಭಯಾ ಪ್ರಕರಣದ ಬಳಿಕ ಅದು ಬಲಿಷ್ಠವಾಗಿದೆ. ಆದರೆ, ಶಿವಮೂರ್ತಿ ಶರಣರಂತಹವರ ಪ್ರಕರಣಗಳಲ್ಲಿ ಕರ್ನಾಟಕದಲ್ಲಿ ಪೋಕ್ಸೊ ಕಾಯ್ದೆ ದುರ್ಬಲವಾದಂತಿದೆ’ ಎಂದರು. ‘ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಆರೋಪಿಗಳಿಗೆ ಸುಲಭವಾಗಿ ಜಾಮೀನು ಮಂಜೂರಾಗುವುದಿಲ್ಲ. ಆಸಾರಾಂ ಬಾಪು ಹಲವು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಆದರೆ, ಶಿವಮೂರ್ತಿ ಶರಣರು ಜೈಲಿನಿಂದ ಹೊರಗೆ ಬಂದಿದ್ದಾರೆ’ ಎಂದು ಹೇಳಿದರು. ‘ಈ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆ ದುರ್ಬಲವಾದಂತೆ ಕಾಣುತ್ತಿದೆ. ರಾಘವೇಶ್ವರ ಶ್ರೀಗಳ ಪ್ರಕರಣ, ಸೌಜನ್ಯ ಪ್ರಕರಣ ಎಲ್ಲ ಏನಾದವು? ಶಿವಮೂರ್ತಿ ಶರಣರ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಧೀಶರು ಮಹಿಳೆ. ಅಕ್ಷಮ್ಯ ಅಪರಾಧ ಮಾಡಿದ ಶರಣರು ಹೇಗೆ ಹೊರಬಂದರು’ ಎಂದು ವಿಶ್ವನಾಥ್‌ ಪ್ರಶ್ನಿಸಿದರು.

Read More

ಬೆಂಗಳೂರು:-ಡಿಕೆಶಿ ವಿರುದ್ಧ ಸಿಬಿಐ ತನಿಖೆ ವಾಪಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ಸಿದ್ದರಾಮಯ್ಯ ತಿರುಚುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಇ.ಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಕೆಲವು ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸಿಬಿಐಗೆ ವಹಿಸುವಂತೆ ಸೂಚನೆ ನೀಡಿದ್ದರಿಂದಲೇ ನಮ್ಮ ಸರ್ಕಾರ ಈ ಕ್ರಮ ತೆಗೆದುಕೊಂಡಿತ್ತು ಎಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡರು. ಅಂದು ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯ ಪಡೆದೇ ಸಿಬಿಐ ತನಿಖೆಗೆ ಆದೇಶ ಮಾಡಲಾಗಿತ್ತು. ಇ.ಡಿಯವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಸಿಬಿಐಗೆ ಕೊಡುವಂತೆ ಸೂಚನೆ ಕೊಟ್ಟಿದ್ದರಿಂದ ಆದೇಶ ಮಾಡಿದೆವು. ಇದರಲ್ಲಿ ಯಾವುದೇ ನಿಯಮಗಳು ಉಲ್ಲಂಘನೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇದೆಲ್ಲವೂ ಗೊತ್ತಿದ್ದರೂ ಜನರನ್ನು ದಿಕ್ಕು ತಪ್ಪಿಸಲು ಸುಳ್ಳು ಹೇಳುತ್ತಿದ್ದಾರೆ. ಎಜಿಯವರ ಅಭಿಪ್ರಾಯದ ಮೇರೆಗೆ ಸಿಬಿಐಗೆ ವಹಿಸಿದ್ದೆವು. ಒಂದಲ್ಲ, ಎರಡಲ್ಲ, ಸಾವಿರ ಬಾರಿ ಹೇಳುತ್ತೇನೆ. ನಾನು ಹೇಳಿರುವುದಕ್ಕೆ ಬದ್ಧನಾಗಿದ್ದೇನೆ. ಇನ್ನು ಮುಂದಾದರೂ ಸರ್ಕಾರ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು…

Read More

ತುಮಕೂರು:- ಸಿಬಿಐನಿಂದ ತನಿಖೆ ವಾಪಸ್ ಪಡೆದ ಸರ್ಕಾರ, ಜನರ ಮುಂದೆ ಬೆತ್ತಲಾಗಿದೆ ಎಂದು ಎ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲಿನ ಪ್ರಕರಣದ ತನಿಖೆಯನ್ನು ಸಿಬಿಐನಿಂದ ರಾಜ್ಯ ಸರ್ಕಾರ ವಾಪಸ್ ಪಡೆದು ಜನರ ಮುಂದೆ ಬೆತ್ತಲಾಗಿದೆ ಎಂದರು. ಒಮ್ಮೆ ಎಫ್‌ಐಆರ್ ದಾಖಲಿಸಿ, ದೋಷಾರೋಪಣೆ ಪಟ್ಟಿ ಸಲ್ಲಿಸಿದ ನಂತರ ಬದಲಾವಣೆ ಮಾಡಲು ನ್ಯಾಯಾಧೀಶರ ಅನುಮತಿ ಪಡೆಯಬೇಕು. ನ್ಯಾಯಾಲಯದಲ್ಲಿ ಇರುವ ಪ್ರಕರಣದ ಬಗ್ಗೆ ನ್ಯಾಯಾಧೀಶರೇ ತೀರ್ಮಾನ ತೆಗೆದುಕೊಳ್ಳಬೇಕು. ವಾಪಸ್ ಪಡೆಯಲು ಸಚಿವ ಸಂಪುಟಕ್ಕೆ ಅಧಿಕಾರ ಇಲ್ಲ’ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ಕಾನೂನು, ನಿಯಮಗಳ ಬಗ್ಗೆ ಮಾತನಾಡುತ್ತಾರೆ. ಹಿಂದೆ ಸಿಬಿಐನವರು ಅನುಮತಿ ಕೇಳಿದ್ದು, ಸರ್ಕಾರ ಒಪ್ಪಿಗೆ ನೀಡಿತ್ತು. ಶಿವಕುಮಾರ್ ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ನಿರ್ದೋಷಿಯಾಗಿ ಹೊರ ಬಂದು ಜನರ ಮುಂದೆ ನಿಲ್ಲಬೇಕಿತ್ತು. ವಾಪಸ್ ತೆಗೆದುಕೊಂಡಿರುವುದನ್ನು ನೋಡಿದರೆ ನ್ಯಾಯಾಲಯಕ್ಕೆ ಸವಾಲ್ ಹಾಕಿದಂತಿದೆ ಎಂದು ತಿಳಿಸಿದರು. ಲೋಕಸಭೆ ಚುನಾವಣೆಗೂ ಮುನ್ನ ಒಳ ಮೀಸಲಾತಿ ಜಾರಿಗೆ ಬರಲಿದೆ. ಹಿಂದಿನ ಬಿಜೆಪಿ ಸರ್ಕಾರ ಒಳ ಮೀಸಲಾತಿ…

Read More

ಶಿವಮೊಗ್ಗ:- ನ.26ರಂದು ಶಿವಮೊಗ್ಗಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ನವೆಂಬರ್ 26ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ. ಸಂಜೆ 4 ಗಂಟೆಗೆ ಗದಗ ದಿಂದ ಶಿವಮೊಗ್ಗಕ್ಕೆ ಬರುವ ಅವರು, ಇಲ್ಲಿನ ಈಡಿಗರ ಭವನದಲ್ಲಿ ನಡೆಯುವ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದು, ನವೆಂಬರ್ 27ರಂದು ಬೆಳಿಗ್ಗೆ 9.30ಕ್ಕೆ ಬಾಳೆಹೊನ್ನೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಮದ್ದೂರು:- ರೈತರು ಕಾವೇರಿ ಹೋರಾಟ ಕೈಬಿಡಿ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಧರಣಿಯನ್ನು ಕೈಬಿಡುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು 38 ದಿನಗಳವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಈ ಕುರಿತು ಜಲಸಂಪನ್ಮೂಲ ಸಚಿವರು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಜಲಾಶಯಗಳಲ್ಲಿ ನೀರು ಇದ್ದರೆ ತಾನೇ ಬಿಡೋಕೆ ಸಾಧ್ಯ. ನೀರಿನ ಪರಿಸ್ಥಿತಿ ಏನು ಇದೆ ಎನ್ನುವುದನ್ನೂ ನೋಡಬೇಕಿದೆ. ನಮ್ಮಲ್ಲಿ ನೀರು ಇದ್ದರೆ ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ. ಈಗಾಗಲೇ ಬೆಳೆಗೆ ನೀರು ಕೊಟ್ಟಿದ್ದೇವೆ. ಸದ್ಯಕ್ಕೆ ಕುಡಿಯಲು ಮಾತ್ರ ನೀರು ಇದೆ. ವಾಸ್ತವ ಪರಿಸ್ಥಿತಿಯನ್ನು ನೀರು ನಿರ್ವಹಣಾ ಸಮಿತಿ, ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಇದರ ನಡುವೆಯೂ ನೀರು ಹರಿಸುವಂತೆ ಶಿಫಾರಸು ಮಾಡಿದರೆ ನೀರು ಬಿಡಲು ಹೇಗೆ ಸಾಧ್ಯ ಎಂದು…

Read More

ಬೆಂಗಳೂರು:- ಬಿಜೆಪಿಗೆ ಮರಳಿ ಹೋಗುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಜನಾರ್ದನ್ ರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಈಗ ಅದು ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ ಎಂದರು. ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಈಗ ಅದು ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ. ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಯೋಚನೆಯೇ ಮಾಡಿಲ್ಲ. ಕೆಆರ್​ಪಿಪಿ ಪಕ್ಷದ ಸ್ಥಾಪಿಸಿದಾಗ ಯಾರೆಲ್ಲಾ ಎಷ್ಟೇ ಪ್ರಯತ್ನಿಸಿದರೂ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ನಾನು ಮುಂದೆ ಹೋಗುತ್ತೇನೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನನ್ನ ಸಹಾಯ ಕೇಳುವ ಪರಿಸ್ಥಿತಿಯಲ್ಲಿ ಬಿಜೆಪಿ ಇಲ್ಲ. ಯಡಿಯೂರಪ್ಪ ಅವರನ್ನು ತಂದೆಯ ಸ್ಥಾನದಲ್ಲಿ ಗೌರವಿಸಿದರೆ, ಶ್ರೀರಾಮುಲು ಅವರನ್ನು ಮಗು ರೂಪದಲ್ಲಿ ನೋಡುತ್ತೇನೆ. ಅವರು ಆಯಾ ಪಕ್ಷದಲ್ಲಿ ಚೆನ್ನಾಗಿರಲಿ ಎಂದು ಬಯಸುವೆ ಹೊರತು ಅವರನ್ನು ಆಹ್ವಾನ ಮಾಡಲ್ಲ ಎಂದು ಹೇಳಿದ್ದಾರೆ.

Read More

ಹೈದರಾಬಾದ್:- ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಉತ್ತರ ಪ್ರದೇಶದಲ್ಲಿ ಹಲಾಲ್‌ ಟ್ಯಾಗ್ ಇರುವ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ ಬೆನ್ನಲ್ಲೇ ಹಲಾಲ್‌ ಟ್ಯಾಗ್ ಇರುವ ಉತ್ಪನ್ನಗಳ ನಿಷೇಧದ ಕುರಿತು ಸ್ಪಷ್ಟನೆ ನೀಡಿದ್ದಾರೆ ದೇಶಾದ್ಯಂತ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ನಿಷೇಧದ ಕುರಿತು ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹಲಾಲ್‌ ಪ್ರಮಾಣಪತ್ರ ಇರುವ ಉತ್ಪನ್ನಗಳ ಮಾರಾಟ, ಸಂಗ್ರಹಣೆ, ಸಾಗಣೆಯ ನಿಷೇಧದ ಕುರಿತು ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದರು. ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ಕೆಲವು ದಿನಗಳ ಹಿಂದಷ್ಟೇ ನಿಷೇಧಿಸಿತ್ತು. “ಜನರ ಆರೋಗ್ಯದ ದೃಷ್ಟಿಯಿಂದ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ಉಲ್ಲೇಖಿಸಿದೆ ಎನ್ನಲಾಗಿದೆ.

Read More