Author: AIN Author

ಗೋಕಾಕ : ಅನಾರೋಗ್ಯದ ಕಾರಣದಿಂದಾಗಿ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಉಪಹಾರ ಸಭೆಗೆ ಹೋಗಿಲ್ಲ. ಸಭೆಗೆ ಬರಲು ನನಗೂ ಆಹ್ವಾನ ನೀಡಿದ್ದರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತಮ್ಮ ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 4 ದಿನಗಳಿಂದ ನನಗೆ ಆರೋಗ್ಯ ಸರಿಯಲ್ಲ. ಆದ್ದರಿಂದ ವಿಶ್ರಾಂತಿ ಪಡೆಯುತ್ತಿದ್ದೇನೆ. ನನಗೆ ಆರೋಗ್ಯವೇ ಮೊದಲು. ಆಮೇಲೆ ರಾಜಕಾರಣ ಎಂದರು. ಸಭೆಯಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ. ಐದು ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಸರ್ಕಾರ ಆಡಳಿತ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. https://ainlivenews.com/suprem-ray-healing-center-reiki/#google_vignette  ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಬದಲಾವಣೆ ಆಗುತ್ತದೆ ಎಂದ ಸಹೋದರ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಹೇಳಿಕೆ ಈ ಮೂಲಕ ಅವರು ಟಾಂಗ್ ನೀಡಿದರು. ಸದ್ಯದಲ್ಲೇ ಡಿಕೆಶಿ ಮಾಜಿ ಮಂತ್ರಿ ಆಗುತ್ತಾರೆ ಎನ್ನುವ ರಮೇಶ…

Read More

ಬೆಂಗಳೂರು;- ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದ್ದ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಪ್ರತಿಭಟನೆ ಹಿಂಪಡೆದಿದ್ದಾರೆ. ಸಹಾಯಕಿಯರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿನ ಮೂಲಭೂತ ಸಮಸ್ಯೆಗಳ ಪರಿಹಾರದ ಕುರಿತು ಬೇಡಿಕೆ ಈಡೇರಿಕೆಗೆ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಸರ್ಕಾರ ಬೇಡಿಕೆ ಈಡೇರಿಸದ ಕಾರಣ ಪ್ರತಿಭಟನೆ ಕರೆ ಕೊಟ್ಟಿದ್ರು. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು, ಅಂಗನವಾಡಿ ಫೆಡರೇಷನ್ನಿನ ಪದಾಧಿಕಾರಿಗಳಿಂದ ಸಭೆ ನಡೆದಿದ್ದು, ಸಭೆಯಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ವಾಪಸ್ಸು ಪಡೆದಿದ್ದಾರೆ.

Read More

ಬೆಂಗಳೂರು;- ಹಿರಿಯ ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ನಿನ್ನೆ ಪ್ರತಿಮಾ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ವಶಕ್ಕೆ ಪಡೆದ ಮೊಬೈಲ್ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸರಿಂದ ಮೊಬೈಲ್ ಫೋನ್ ಪರಿಶೀಲನೆ ನಡೆಯುತ್ತಿದೆ. ಕೊಲೆಯಾದ ವೇಳೆ ಮನೆಯಲ್ಲಿ ಬಾಗಿಲು ಬಳಿ ಪ್ರತಿಮಾ ಮೊಬೈಲ್ ಫೋನ್ ಪತ್ತೆಯಾಗಿತ್ತು. ಪೋನ್ ಅನ್ಲಾಕ್‌ ಹಾಗೂ ರಿಟ್ರೀವ್ ಗೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಒಂದು ವಾರದಿಂದ ಎಷ್ಟು ಕರೆಗಳು ಬಂದಿದ್ವು, ಯಾರ್ಯಾರು ಕರೆ ಮಾಡಿದ್ದಾರೆ ಎಂದು ಪರಿಶೀಲನೆ ಮಾಡುತ್ತಿದ್ದಾರೆ. ಪ್ರತಿಮಾ ಯಾರಿಗಾದ್ರು ಕರೆ ಮಾಡಿ ಮಾತನಾಡಿದ್ದಾರಾ ಅಂತಾಲೂ ಪರಿಶೀಲನೆ ಮಾಡುತ್ತಿದ್ದಾರೆ. ಆದ್ರೆ ಫೋನ್‌ ಲಾಕ್ ಹಿನ್ನೆಲೆ, ಟೆಕ್ನಿಕಲ್ ಸೆಲ್ ಗೆ ರವಾನಿಸಿ ಪರಿಶೀಲನೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದು, ಸುಬ್ರಮಣ್ಯಪುರ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ.

Read More

ಬೆಂಗಳೂರು;- ರೈತರ ಸಮಸ್ಯೆಗೆ ಸರ್ಕಾರವಾಗಿ ನಿಮ್ಮ ಸಾಧನೆ ಏನು? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ರೈತ ಸಾಂತ್ವನ ಯಾತ್ರೆಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ ಎಂದರು. ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ.ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರ್ಕಾರ ಎಷ್ಟು ʼಗಂಭೀರ(!?)ʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು? ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜತೆ ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ…

Read More

ನವದೆಹಲಿ: ನಾನು ಮತ್ತು ಧೋನಿ (MS Dhoni) ಆತ್ಮೀಯ ಸ್ನೇಹಿತರಲ್ಲ. ನಾವು ಕ್ರಿಕೆಟ್‌ನಿಂದ (Cricket) ಸ್ನೇಹಿತರಾಗಿದ್ದೇವೆ ಎಂದು ಟೀಂ ಇಂಡಿಯಾದ (Team India) ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ (Yuvraj Singh) ಹೇಳಿದ್ದಾರೆ. ಯೂಟ್ಯೂಬ್‌ ವಾಹಿನಿಯ ಸಂದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವಿಬ್ಬರು ಒಟ್ಟಾಗಿ ಆಡಿದ್ದರೂ ಮಹಿಯ ಜೀವನಶೈಲಿ ನನಗಿಂತ ತುಂಬಾ ಭಿನ್ನವಾಗಿತ್ತು, ಆದ್ದರಿಂದ ನಾವು ಎಂದಿಗೂ ಆತ್ಮೀಯ ಸ್ನೇಹಿತರಾಗಿರಲಿಲ್ಲ ಎಂದರು. ಧೋನಿ ನಾಯಕನಾಗಿದ್ದಾಗ ನಾನು ಉಪನಾಯಕನಾಗಿದ್ದೆ. ಕೆಲವೊಮ್ಮೆ ನನಗೆ ಇಷ್ಟವಿಲ್ಲದ ನಿರ್ಧಾರಗಳನ್ನು ಅವರು ತೆಗೆದುಕೊಂಡಿದ್ದರು. ಕೆಲವೊಮ್ಮೆ ಅವರು ಇಷ್ಟಪಡದ ನಿರ್ಧಾರಗಳನ್ನು ನಾನು ತೆಗೆದುಕೊಂಡಿದ್ದೇನೆ. ಇದು ಪ್ರತಿ ತಂಡದಲ್ಲಿ ಸಂಭವಿಸುತ್ತದೆ. ನನ್ನ ವೃತ್ತಿಜೀವನದ ಕೊನೆಯಲ್ಲಿದ್ದಾಗ ನಾನು ಅವರ ಬಳಿ ಸಲಹೆ ಕೇಳಿದೆ. ಈ ವೇಳೆ ಆಯ್ಕೆ ಸಮಿತಿಯು ಈಗ ನಿನ್ನನ್ನು ಪರಿಗಣನೆ ಮಾಡುತ್ತಿಲ್ಲ ಎಂದು ಹೇಳಿದ್ದರು. 2019ರ ವಿಶ್ವಕಪ್‌ಗೆ ಮೊದಲೇ ನನಗೆ ಈ ವಿಷಯ ತಿಳಿದಿತ್ತು ಎಂದು ತಿಳಿಸಿದರು ತಂಡದ ಸಹ ಆಟಗಾರರು ಒಬ್ಬರಿಗೊಬ್ಬರು ಉತ್ತಮ ಸ್ನೇಹಿತರಾಗಿರಬೇಕಾಗಿಲ್ಲ. ಆದರೆ ಮೈದಾನಕ್ಕೆ ಕಾಲಿಟ್ಟಾಗ…

Read More

ಮಂಗಳೂರು;- ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ವಿಶೇಷ ಮನವಿ ಮಾಡಲಾಗಿದೆ. ವಿಜಯಪುರ-ಮಂಗಳೂರು ರೈಲಿನ ವೇಳಾಪಟ್ಟಿ ಪರಿಷ್ಕರಣೆ ಮಾಡಬೇಕು ಮತ್ತು ಈ ರೈಲನ್ನು ಮಂಗಳೂರು ಸೆಂಟ್ರಲ್‌ ತನಕ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಮುಂದಿಟ್ಟುಕೊಂಡು ಆನ್‌ಲೈನ್ ಸಹಿ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿದೆ. ಆನ್‌ಲೈನ್ ಸಹಿ ಅಭಿಯಾನಕ್ಕೆ ಬೆಂಬಲ ನೀಡುವಂತೆ ಕುಕ್ಕೆ ಸುಬ್ರಮಣ್ಯ ಮತ್ತು ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ಮನವಿ ಮಾಡಲಾಗಿದೆ. ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಲಾಗಿದೆ, ಸಹಿ ಮಾಡಲು ಲಿಂಕ್ ಸಹ ನೀಡಲಾಗಿದೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಜಯಪುರ, ಗದಗ, ಬಾಗಲಕೋಟೆ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಸೇರಿ ನೆರೆ ಜಿಲ್ಲೆಗಳ ಭಾಗಗಳಿಂದ ರೈಲಿನಲ್ಲಿ ಬರುವ ಭಕ್ತಾದಿಗಳ ಬಳಿ ನಮ್ಮದೊಂದು ಮನವಿ ಎಂದು ತಿಳಿಸಲಾಗಿದೆ.

Read More

ಬಿಗ್ ಬಾಸ್ ಮನೆಯಿಂದ ರಕ್ಷಕ್ ಬುಲೆಟ್ ಔಟ್ ಆಗಿದ್ದಾರೆ. ಸದಾ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದ ಯುವ ನಟ ರಕ್ಷಕ್‌ಗೆ ದೊಡ್ಮನೆಯ ಆಟ ಅಂತ್ಯವಾಗಿದೆ. ಸ್ನೇಕ್ ಶ್ಯಾಮ್, ಗೌರೀಶ್ ಬಳಿಕ ರಕ್ಷಕ್ ಬುಲೆಟ್ ದೊಡ್ಮನೆಯ ಆಟಕ್ಕೆ ವಿದಾಯ ಹೇಳಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ 2ನೇ ವಾರದ ಕ್ಯಾಪ್ಟನ್ ಆಗಿ ಗಮನ ಸೆಳೆದಿದ್ದರು. ಮನೆಯ ಉತ್ತಮ ಆಟಗಾರ ಎಂದು ಕೂಡ ಗುರುತಿಸಿಕೊಂಡಿದ್ದರು. ಇತ್ತೀಚೆಗೆ ಡ್ರೋನ್ ಪ್ರತಾಪ್ (Drone Prathap) ಗೂಬೆ ಎಂದಿದ್ದಕ್ಕೆ ಕಿಚ್ಚ (Sudeep) ರಕ್ಷಕ್‌ಗೆ ಖಡಕ್ ಕ್ಲಾಸ್ ಕೂಡ ತೆಗೆದುಕೊಂಡಿದ್ದರು. ಟಾಸ್ಕ್, ಪಂಚಿಂಗ್ ಡೈಲಾಗ್ ಹೇಳೋದ್ರಲ್ಲಿ ರಕ್ಷಕ್ ಸದಾ ಮುಂದಿದ್ದರು. ರಕ್ಷಕ್ ಮನರಂಜನೆ ಕೂಡ ಫ್ಯಾನ್ಸ್‌ಗೆ ಖುಷಿಕೊಟ್ಟಿತ್ತು. ರಕ್ಷಕ್ ಬುಲೆಟ್ ಎಲಿಮಿನೇಟ್ ಆಗಿರೋದು ಅವರ ಫ್ಯಾನ್ಸ್ ಬೇಸರಯುಂಟು ಮಾಡಿದೆ. ಆದರೆ ಮುಂಬರುವ ಸಿನಿಮಾಗಳಲ್ಲಿ ನಟನೆಯ ಮೂಲಕ ರಕ್ಷಕ್ ಮೋಡಿ ಮಾಡಲಿ ಎಂಬುದೇ ಅಭಿಮಾನಿಗಳ ಆಶಯವಾಗಿದೆ.

Read More

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆ ಮುಂಚೆಯೇ ಬಿದ್ದು ಹೋಗುತ್ತದೆ ಎಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು. ಬಾಗಲಕೋಟೆ ಜಿಲ್ಲೆಯಲ್ಲಿ ಮಾತನಾಡಿದ ಅವರು, ” ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಸಿಎಂ ಸ್ಥಾನ ವಿವಾದವನ್ನು ಅವರು ಮೊದಲು ಸರಿ ಮಾಡಿಕೊಳ್ಳಲಿ, ಸರ್ಕಾರ ಪತನ ಬಗ್ಗೆ ನಾವು ಕಾಯುತ್ತಿಲ್ಲ. ಬಿಜೆಪಿ ಪಕ್ಷವು ರೈತರ ಪರವಾಗಿದೆ, ರೈತರಿಗೆ ಸರ್ಕಾರ ನ್ಯಾಯ ಕೊಡದೇ ಇದ್ದಲ್ಲಿ ಹೋರಾಟ ಮಾಡಿ ನ್ಯಾಯ ಒದಗಿಸುವ ಕೆಲಸ ಬಿಜೆಪಿ ಪಕ್ಷ ಮಾಡುತ್ತದೆ ” ಎಂದರು. ಆಪರೇಷನ್ ಹಸ್ತದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದರು. ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಬರ ಇದ್ದರೂ ರೈತರ ಕಣ್ಣೀರು ಒರೆಸುವ ಬದಲು ತಮ್ಮ ಶಾಸಕರ, ಸಚಿವರ ಕಣ್ಣೀರು ಒರೆಸುತ್ತಿದ್ದಾರೆ. ರೈತರ ಶಾಪ ಸರ್ಕಾರಕ್ಕೆ ತಟ್ಟುತ್ತದೆ ಸರ್ಕಾರ ಪತನವಾಗುತ್ತದೆ ಎಂದು ತಿಳಿಸಿದ ಕಟೀಲ್, https://ainlivenews.com/suprem-ray-healing-center-reiki/#google_vignette ರಾಜ್ಯದಲ್ಲಿ ಭೀಕರ ಬರಗಾಲದಿಂದ ಮುಖ್ಯಮಂತ್ರಿ ಅವರು ರೈತರೊಂದಿಗೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚೆ ಮಾಡುವ ರೈತರ ಸಮಸ್ಯೆ ಬಗೆ ಹರಿಸಬೇಕಾಗಿತ್ತು. ಆದರೆ…

Read More

ಡಿ.ಜೆ ಚಕ್ರವರ್ತಿ (ಚಕ್ರವರ್ತಿ ಚಂದ್ರಚೂಡ) ನಿರ್ದೇಶನದಲ್ಲಿ ಮೂಡಿ ಬರಲಿರುವ ಹುಲಿ ನಾಯಕ ಸಿನಿಮಾದ ಮೋಷನ್ ಪೋಸ್ಟರ್  (Motion poster) ರಿಲೀಸ್ ಆಗಿದೆ. ಬಿಡುಗಡೆಯಾದ ಪೋಸ್ಟರ್ ನಲ್ಲಿ ಹತ್ತು ಹಲವು ಕೌತುಕದ ವಿಷಯಗಳು ತುಂಬಿವೆ. ವೀರ ಸಂಗೊಳ್ಳಿ ರಾಯಣ್ಣನ ಗಿಗಿ ಪದವನ್ನು ಬಳಸಿಕೊಂಡು ಅನ್ಯಾಯಕ್ಕೊಳಗಾದವರ ನ್ಯಾಯ ಕೇಳುತ್ತಿದ್ದಾರೆ ನಿರ್ದೇಶಕ. ಟ್ಯಾಗ್ ಲೈನ್ ಆಗಿ ಜಸ್ಟಿಸ್ ಫಾರ್ ಸೌಮ್ಯ ಎಂದು ಹೆಸರಿಟ್ಟಿದ್ದಾರೆ. ಹೀಗಾಗಿ ಈ ಸಿನಿಮಾದಲ್ಲಿ ಏನೆಲ್ಲ ವಿಷಯಗಳು ಇರಲಿವೆ ಎನ್ನುವುದು ಸದ್ಯಕ್ಕಿರುವ ಕ್ಯೂರಿಯಾಸಿಟಿ. ಹುಲಿ ನಾಯಕ ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. ಜನವರಿಯಿಂದ ಚಿತ್ರೀಕರಣಕ್ಕೆ ನಿರ್ದೇಶಕರು ಪ್ಲ್ಯಾನ್ ಮಾಡಿದ್ದು, ಅದಕ್ಕೂ ಮುನ್ನ ತಮ್ಮ ಚಿತ್ರದ ನಾಯಕನಿಗೆ ಭರ್ಜರಿ ತಯಾರಿಯನ್ನೂ ಮಾಡಿಸುತ್ತಿದ್ದಾರೆ ಚಕ್ರವರ್ತಿ. ಸಿನಿಮಾ ಶುರುವಾಗುವ ಮುನ್ನವೇ ಆಡಿಯೋ ರೈಟ್ಸ್ ಭರ್ಜರಿ ಮೊತ್ತಕ್ಕೆ ಸೇಲ್ ಆಗಿದ್ದು, ಚಿತ್ರದ ಬಗ್ಗೆ ಈಗಿನಿಂದಲೇ ಹೈಪ್ ಕ್ರಿಯೇಟ್ ಆಗುತ್ತಿದೆ. ವರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು ರಿಯಲ್ ಸ್ಟಾರ್ ಉಪೇಂದ್ರ (Upendra) ತುಂಬು ಪ್ರೀತಿಯಿಂದ ಮಯೂರ ಮೋಶನ್…

Read More

ಬೆಂಗಳೂರು;- ರಾಜಧಾನಿ ಬೆಂಗಳೂರು ನಗರದಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿ ಮತ್ತೆ ಆತಂಕ ಸೃಷ್ಟಿ ಮಾಡಿದೆ. ನೈಸ್ ರಸ್ತೆ ಸಮೀಪದ ಚಿಕ್ಕತೋಗೂರು ಬಳಿ ಚಿರತೆ ಪ್ರತ್ಯಕ್ಷವಾಗಿದೆ. ನಿನ್ನೆ ನ4 ರ ಸಂಜೆ 7.40ರ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಶನಿವಾರ ಸಂಜೆ ಚಿರತೆ ಮನೆ ಕಂಪೌಂಡ್​​ ಒಳಗೆ ನುಗ್ಗಿದ್ದು, ಬಾಗಿಲು ಬಳಿ ಬಂದ ಚಿರತೆ ಕಂಡು ಬಾಲಕ ಕಿರುಚಾಡಿದ್ದಾನೆ. ಬಾಲಕನ ಕಿರುಚಾಟಕ್ಕೆ ಚಿರತೆ ಓಡಿ ಹೋಗಿದೆ ಎಂದು ತಿಳಿದು ಬಂದಿದೆ. ಕೆ.ಆರ್.ಪುರಂ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪರಿಶೀಲನೆ ನಡೆಸಿ ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶನಿವಾರ ಮಳೆ ಬಂದ ಹಿನ್ನೆಲೆಯಲ್ಲಿ ಹೆಜ್ಜೆ ಗುರುತು ಪತ್ತೆಯಾಗಿದೆ.

Read More