ಯುವತಿಯರು ಮೇಕಪ್ ಮಾಡುವಾಗ ಯಾವಾಗಲ್ಲೂ ಕನ್ಯ್ಫೂಸ್ ಆಗಿರುತ್ತಾರೆ. ಹೇಗೆ ಮೇಕಪ್ ಮಾಡಬೇಕೆಂದು ಗೊತ್ತಿಲ್ಲದೇ ತಪ್ಪು ಮಾಡಿ ತಮ್ಮ ಸೌಂದರ್ಯವನ್ನು ಹಾಳು ಮಾಡಿಕೊಳ್ಳುತ್ತಾರೆ. ಹೀಗಾಗಿ ಪರ್ಫೆಕ್ಟ್ ಮೇಕಪ್ ಹೇಗೆ ಮಾಡಬಹುದು ಅನ್ನೋದಕ್ಕೆ ಇಲ್ಲಿ ಕೆಲ ಸಲಹೆಗಳನ್ನು ನೀಡಲಾಗಿದೆ. 1. ನೀವು ಎಲ್ಲಿಗಾದರೂ ಹೊರಗೆ ಹೋಗಲು ತಯಾರಾಗುವಾಗ ಮೊದಲು ನಿಮ್ಮ ತ್ವಚೆಗೆ ನೇರವಾಗಿ ಫೌಂಡೇಶನ್ ಹಾಕುತ್ತೀರಾ? ಈ ರೀತಿ ಮಾಡುವುದು ತಪ್ಪು. ಫೌಂಡೇಶನ್ ಹಾಕುವ ಮೊದಲು ನೀವು ತಣ್ಣೀರಿನಲ್ಲಿ ಮುಖವನ್ನು ತೊಳೆಯಬೇಕು. ನಂತರ ಮುಖವನ್ನು ಡ್ರೈ ಮಾಡಬೇಕು. ಆದಾದ ಬಳಿಕ ನಿಮ್ಮ ಸ್ಕಿನ್‍ಗೆ ತಕ್ಕಂತೆ ಫೌಂಡೇಶನ್ ಹಾಕಿಕೊಳ್ಳಿ. 2. ಹಾಕಿರುವ ಮೇಕಪ್ ಯಾವುದೇ ರೀತಿಯಲ್ಲಿ ಕ್ರ್ಯಾಕ್ ಆಗಬಾರದು ಹಾಗೂ ಹೆಚ್ಚಿನ ಸಮಯವಿರಬೇಕೆಂದು ಫೌಂಡೇಶನ್ ಹಾಕಲಾಗುತ್ತದೆ. 3. ನೀವು ಫೌಂಡೇಶನ್ ಖರೀದಿಸಲು ಹೋಗುವಾಗ ನಿಮ್ಮ ಸ್ಕಿನ್ ಟೋನ್‍ಗೆ ತಕ್ಕಂತೆ ಇರಬೇಕು. ನಿಮ್ಮ ಸ್ಕಿನ್‍ಗೆ ಒಂದು ಟೋನ್ ಲೈಟ್ ಹಾಗೂ ಒಂದು ಟೋನ್ ಜಾಸ್ತಿ ಇರುವುದನ್ನು ಖರೀದಿಸಬೇಡಿ. ಫೌಂಡೇಶನ್ ಹಾಕಿದ ನಂತರ ಸ್ಪಂಜ್ ಬಳಸಿ ನಿಮ್ಮ ಮೇಕಪ್ ಸೆಟ್ ಮಾಡಿಕೊಳ್ಳಿ. 4. ಫೌಂಡೇಶನ್…
Author: AIN Author
ದೆಹಲಿ: ಗೂಗಲ್ (Google) ಕಂಪನಿ ತನ್ನ ಸುರಕ್ಷತಾ ನಿಯಮಗಳನ್ನು ಅಪ್‌ಡೇಟ್ ಮಾಡಿದ್ದು, ಜಿ-ಮೇಲ್ ಖಾತೆ ಹೊಂದಿದ್ದು, ಸಕ್ರಿಯರಾಗಿಲ್ಲದವರಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. 2 ವರ್ಷ ಬಳಸದೇ ಇರುವ ಜಿ-ಮೇಲ್ ಖಾತೆಗಳನ್ನು (Gmail Accounts) ಡಿಸೆಂಬರ್‌ನಲ್ಲಿ ಬಂದ್ ಮಾಡಲಾಗುವುದು ಎಂದು ತಿಳಿಸಿದೆ. ಹೀಗಾಗಿ ಒಮ್ಮೆ ಲಾಗಿನ್ ಆಗಿ ಖಾತೆ ಉಳಿಸಿಕೊಳ್ಳಿ ಎಂಬ ಎಚ್ಚರಿಕೆಯ ಸಂದೇಶವನ್ನೂ ರವಾನಿಸಿದೆ. ಗೂಗಲ್ ಕಂಪನಿಯು ಸುರಕ್ಷತಾ ನಿಯಮಗಳನ್ನು ಕಳೆದ ಮೇ ತಿಂಗಳಲ್ಲಿ ಅಪ್‌ಡೇಟ್ ಮಾಡಿತ್ತು. ಆಗಲೇ ಅದರ ಉಪಾಧ್ಯಕ್ಷೆ ರೂತ್ ಕ್ರಿಚೇಲ್, ಮುಂಬರುವ ಡಿಸೆಂಬರ್‌ನಲ್ಲಿ ಕಳೆದ 2 ವರ್ಷಗಳಿಂದ ಒಮ್ಮೆಯೂ ಲಾಗಿನ್ ಮಾಡದ ಅಥವಾ ಬಳಕೆ ಮಾಡದ ವೈಯಕ್ತಿಕ ಗೂಗಲ್ ಖಾತೆಗಳನ್ನು ಡಿಲೀಟ್ ಮಾಡಲು ಆರಂಭಿಸುತ್ತೇವೆ ಎಂದು ತಿಳಿಸಿದ್ದರು. ಮುಂದಿನ ಎರಡು ವರ್ಷಗಳಲ್ಲಿ ಕನಿಷ್ಠ ಬಳಕೆ ಮಾಡದ ಖಾತೆಗಳನ್ನು ನಿರಂತರವಾಗಿ ರದ್ದುಪಡಿಸುತ್ತೇವೆ ಎಂದು ಸೂಚನೆ ನೀಡಿದ್ದಾರೆ.ಮರೆತ, ಬಳಸದ ಖಾತೆಗಳು ಗೂಗಲ್ ಅಥವಾ ಖಾತೆದಾರರಿಗೆ ಅಪಾಯ ತರಬಹುದು ಎಂಬ ಕಾರಣಕ್ಕೆ ಡಿಲೀಟ್ ಮಾಡಲು ಗೂಗಲ್ ಮುಂದಾಗಿದೆ. ಜಿ-ಮೇಲ್ ಅಕೌಂಟ್‌ಗಳು ಡಿಲೀಟ್ ಆಗಬಾರದು…
ಚಾಮರಾಜನಗರ: ಹುಲಿಗಳ ಕಾದಾಟದಲ್ಲಿ ತೀವ್ರ ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿದ್ದ ಹುಲಿಯೊಂದು ಸಾವನ್ನಪ್ಪಿರುವ ಘಟನೆ ಬಂಡೀಪುರ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೀಪುರ ಹುಲಿ ಯೋಜನೆಯ ಮದ್ದೂರು ಅರಣ್ಯ ವಲಯದ ಮದ್ದೂರು ಕಾಲೋನಿಯ ಡಿಲೈನ್ ವ್ಯಾಪ್ತಿಯ ದೊಡ್ಡಕರಿಯಯ್ಯ ಎಂಬುವವರ ಜಮೀನಿನಲ್ಲಿ ನಿತ್ರಾಣಗೊಂಡಿದ್ದ ಹುಲಿ ಸಾವನ್ನಪ್ಪಿದೆ. ಕಾದಾಟದಲ್ಲಿ ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿ ಹುಲಿಯು ಪತ್ತೆಯಾಗಿತ್ತು ಎನ್ನಲಾಗಿದೆ. ಎರಡು ಹುಲಿಗಳ ಕಾದಾಟದಲ್ಲಿ ಮೃತ ಪಟ್ಟ 3 ವರ್ಷ ಪ್ರಾಯದ ಗಂಡು ಹುಲಿಯ ತಲೆ ಹಾಗೂ ದೇಹದ ಭಾಗಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿತ್ತು ಎನ್ನಲಾಗಿದೆ. ಮೃತ ಪಟ್ಟ ಹುಲಿ ಕಳೆಬರಹದ ಅಂತ್ಯಸಂಸ್ಕಾರವು ಅರಣ್ಯದೊಳಗೆ ನಡೆಯಿತು. ಈ ವೇಳೆಯಲ್ಲಿ ಘಟನಾ ಸ್ಥಳದಲ್ಲಿ ಬಂಡೀಪುರ ಸಿ.ಎಫ.ರಮೇಶಕುಮಾರ್, ಎಸಿಎಫ ರವೀಂದ್ರ, ಪಶುವೈದ್ಯ ಡಾ.ಮಿರ್ಜಾ ವಾಸೀಂ , ರಘುರಾಂ,ಸೇರಿದಂತೆ ಸಿಬ್ಬಂಧಿಗಳು ಇದ್ದರು
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮೆಚ್ಚುಗೆ ಪಡೆದುಕೊಂಡಿದೆ. “ಗಣ” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಮೈ ನೇಮ್ ಇಸ್ ಸೋನಾ ಬೇಬಿ ಬೇಬಿ.. ಕಣ್ಣಾಮುಚ್ಚಾಲೆ ನನ್ನ ಹಾಬಿ” ಎಂಬ ಮನಮೋಹಕ ಹಾಡು “ಸರಿಗಮಪ” ಆಡಿಯೋ ಸಂಸ್ಥೆ ಮೂಲಕ ಬಿಡುಗಡೆಯಾಗಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಮಾಸ್ ಐಟಂ ಹಾಡಿಗೆ ಪ್ರಜ್ವಲ್ ದೇವರಾಜ್ , ನಮೃತಾ ಮಲ್ಲ ಹಾಗೂ ರವಿಕಾಳೆ ಹೆಜ್ಜೆ ಹಾಕಿದ್ದಾರೆ. “ಕ್ರಾಂತಿ” ಚಿತ್ರದ “ಟೇಕ್ ಇಟ್ ಪುಷ್ಪವತಿ” ಹಾಡು ಸೇರಿದಂತೆ ಅನೇಕ ಯಶಸ್ವಿ ಗೀತೆಗಳನ್ನು ಹಾಡಿರುವ ಐಶ್ವರ್ಯ ರಂಗರಾಜನ್ ಈ ಹಾಡನ್ನು ಹಾಡಿದ್ದಾರೆ. “ಸೋನಾ ಬೇಬಿ” ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಎಲ್ಲರ ಮೆಚ್ಚುಗೆ ಪಡೆಯುತ್ತಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್…
ರಜನಿಕಾಂತ್ (Rajinikanth) ನಟನೆಯ 171ನೇ ಸಿನಿಮಾ ಕುರಿತಂತೆ ಭಾರೀ ಭಾರೀ ಸುದ್ದಿಗಳು ಹೊರ ಬರುತ್ತಿವೆ. ಅದರಲ್ಲೂ ತಾರಾಗಣದ ಕುರಿತಂತೆ ರೋಚಕ ವಿಷಯಗಳು ಕೇಳುತ್ತಿವೆ. ಅವುಗಳು ನಿಜವೋ ಸುಳ್ಳೋ ಗೊತ್ತಿಲ್ಲ. ಒಟ್ಟಿನಲ್ಲಿ ಥ್ರಿಲ್ ಅನುಭವಿಸುತ್ತಿದ್ದಾರೆ ರಜನಿ ಫ್ಯಾನ್ಸ್. ಇದೀಗ ಮತ್ತೊಂದು ಹೊಸ ಸುದ್ದಿ ಹರಿದಾಡುತ್ತಿದ್ದು ರಜನಿ ಜೊತೆ ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ (Mammootty) ಕೂಡ ಪಾತ್ರ ಮಾಡಲಿದ್ದಾರೆ. ‘ಜೈಲರ್’ (Jailer) ಸಿನಿಮಾದ ಭರ್ಜರಿ ಸಕ್ಸಸ್ ನಂತರ ರಜನಿಕಾಂತ್ ಸಿನಿಮಾ ಆಯ್ಕೆಯಲ್ಲಿ ಮತ್ತಷ್ಟು ಚ್ಯುಸಿಯಾಗಿದ್ದಾರೆ. ಹೀಗಿರುವಾಗ ತಮ್ಮ 171ನೇ ಚಿತ್ರಕ್ಕೆ ಲೋಕೇಶ್ ಕನಗರಾಜ್ ಜೊತೆ ಕೈಜೋಡಿಸಿದ್ದಾರೆ. ತಲೈವಾ ಮುಂದೆ ಅಬ್ಬರಿಸಲು ನಟ ರಾಘವ್ ಲಾರೆನ್ಸ್ ಕೂಡ ಸಜ್ಜಾಗಿದ್ದಾರೆ. ರಜನಿಕಾಂತ್ ಅವರ 171ನೇ ಚಿತ್ರದಲ್ಲಿ ವಿಲನ್‌ಗೂ ಕೂಡ ತೂಕವಾಗಿರುವಂತಹ ಪಾತ್ರವಿದ್ದು, ತಲೈವಾ ಮುಂದೆ ಅಬ್ಬರಿಸೋಕೆ ರಾಘವ್ ಸೂಕ್ತ ಎಂದೇನಿಸಿ ನಿರ್ದೇಶಕರು ಆಯ್ಕೆ ಮಾಡಿದ್ದಾರೆ. ಹಾಗಾಗಿ ರಾಘವ್ ವಿಶೇಷ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುತ್ತಿವೆ ಮೂಲಗಳು. ತಲೈವಾ ನಟಿಸಿದ್ದ ಚಂದ್ರಮುಖಿ ಸಿನಿಮಾದ ಮುಂದಿನ ಭಾಗ ಚಂದ್ರಮುಖಿ…
ಉತ್ತರ ಕರ್ನಾಟಕದಲ್ಲಿ ಹಿಂಗಾರು ಮಳೆ ಹಾಗೂ ವಿದ್ಯುತ್ ಏಕ ಕಾಲಕ್ಕೆ ಕೈ ಕೊಟ್ಟಿದ್ದರಿಂದ ರೈತರು ಬೆಳೆ ಉಳಿಸಿಕೊಳ್ಳಲು ಕೆರೆ, ತಗ್ಗು, ಹಳ್ಳಗಳಲ್ಲಿನ ನೀರಿಗೆ ಮೊರೆ ಹೋಗಿದ್ದು, ಆ ನೀರು ಎತ್ತಲು ಬೇಕಾದ ಆಯಿಲ್ ಎಂಜಿನ್ ಪಂಪ್‌ಸೆಟ್‌ಗಳಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಕಳೆದ ತಿಂಗಳಿನಿಂದ ಮಳೆ ಬಾರದೇ ಕಂಗಾಲಾಗಿರುವ ರೈತರಿಗೆ ವಿದ್ಯುತ್ ನಿಗಮ ಕೇವಲ ಐದು ತಾಸು ಮಾತ್ರ ತ್ರಿಪೇಸ್ ವಿದ್ಯುತ್ ನೀಡಲಿದೆ. ಹಿಂಗಾರು ಬಿತ್ತನೆ ಮಾಡಿ ಮೋಡದತ್ತ ಮುಖ ಮಾಡಿರುವ ರೈತರಿನಿಗೆ ಇತ್ತ ಮಳೆಯೂ ಇಲ್ಲ, ಬೋರವೆಲ್‌ಗಳ ಮೂಲಕ ನೀರು ತೆಗೆದುಕೊಳ್ಳಲು ಸಮರ್ಪಕ ವಿದ್ಯುತ್ ಸಹ ಇಲ್ಲದಾಗಿದೆ. ಕಳೆದ ಎರಡ್ಮೂರು ವರ್ಷಗಳಿಂದ ಮಳೆ ಚನ್ನಾಗಿ ಆಗಿದ್ದರಿಂದ ಹೆಚ್ಚುವರಿ ನೀರಿನ ಅಗತ್ಯ ಇರಲಿಲ್ಲ. ಈ ವರ್ಷ ಮುಂಗಾರು ಹಾಗೂ ಹಿಂಗಾರು ಮಾನಸೂನ್ ಕೈಕೊಟ್ಟಿದ್ದರಿಂದ ಮುಂಗಾರು ಹಂಗಾಮಿನ ಬೆಳೆ ಕೈಗೆ ಬರಲಿಲ್ಲ. ಹಿಂಗಾರು ಬೆಳೆಯಾದರೂ ಕೈಹಿಡಿಯಬಹುದೆಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಅದು ಕೂಡಾ ನಿರಾಸೆಯನ್ನುಂಟು ಮಾಡಿದೆ. ಕೆರೆ, ಹಳ್ಳಗಳಲ್ಲಿ ಜಲಮೂಲ ಇದ್ದರೂ ಅದನ್ನು ಹೊಲಕ್ಕೆ ತರಲು…
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ (Bengaluru Kambala) ನಡೆಯುತ್ತಿದೆ. ಕಂಬಳಕ್ಕಾಗಿ ಅರಮನೆ ಮೈದಾನ ಸಂಪೂರ್ಣವಾಗಿ ಸಿದ್ಧಗೊಂಡಿದೆ. ಇಂದು ಮತ್ತು ನಾಳೆ ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ (Anushka Shetty), ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ. https://ainlivenews.com/laser-therapy-soukhy-robotic-ortho-care/ ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್(Rishab Shetty), ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ. ನವೆಂಬರ್ 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಮಾಡಲಾಗಿದೆ. ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ…
ನವದೆಹಲಿ: ಕೊರೋನಾಜನಕ ಚೀನಾದಲ್ಲಿ (China) ಮತ್ತೊಂದು ಡೆಡ್ಲಿ ವೈರಸ್ ಶುರುವಾಗಿದ್ದು, ಇತ್ತ ಕೇಂದ್ರ ಆರೋಗ್ಯ ಇಲಾಖೆಯು (Central Health Department) ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದೆ. https://ainlivenews.com/laser-therapy-soukhy-robotic-ortho-care/ ಚೀನಾದಲ್ಲಿ ಶಾಲೆಗೆ ತೆರಳ್ತಿರುವ ಮಕ್ಕಳಿಗೆ ಹೊಸ ವೈರಸ್ ಕಂಟಕವಾಗ್ತಿದೆ. ನ್ಯೂಮೋನಿಯಾ (Pneumonia) ಮಾದರಿಯ ಲಕ್ಷಣಗಳಿಂದ ದೊಡ್ಡ ಮಟ್ಟದಲ್ಲಿ ಮಕ್ಕಳು ಅನಾರೋಗ್ಯಕ್ಕೆ ಗುರಿ ಆಗ್ತಿದ್ದಾರೆ. ನೇರ ಶ್ವಾಸಕೋಶಕ್ಕೆ ವೈರಸ್ ಅಟ್ಯಾಕ್ ಆಗುತ್ತದೆ. ಇದರಿಂದ ಮಕ್ಕಳು ಉಸಿರಾಟದ ಸಮಸ್ಯೆಯಿಂದ ಬಳಲ್ತಿದ್ದಾರೆ. ಹೀಗಾಗಿ ಚೀನಾದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚೀನಾ ಆಸ್ಪತ್ರೆಗಳಲ್ಲಿ ಸೋಂಕಿತರೇ ತುಂಬಿದ್ದಾರೆ. ಇದು ವಿಶ್ವದ ಕಳವಳಕ್ಕೆ ಕಾರಣವಾಗಿದೆ. ಇದು ಕೊರೋನಾದಂತೆ ಹಬ್ಬಿದ್ರೆ ಏನು ಗತಿ ಎಂಬ ಆತಂಕ ಶುರುವಾಗಿದೆ. ಈ ಬಗ್ಗೆ ಭಾರತ ಸರ್ಕಾರ ಸ್ಪಂದಿಸಿದೆ. ಶ್ವಾಸಕೋಶ ಸಮಸ್ಯೆಗೆ ಸಂಬಂಧಿಸಿದ ವರದಿಗಳನ್ನು ಪರಿಶೀಲಿಸಲಾಗ್ತಿದೆ. ಚೀನಾದಲ್ಲಿ ವರದಿ ಆಗ್ತಿರುವ ಶ್ವಾಸಕೋಶ ಸೋಂಕು, ಎವಿಎನ್ ಇನ್‍ಫ್ಲೂಯೆಂಜಾಗಳಿಂದ ಭಾರತಕ್ಕೆ (India) ಅಪಾಯ ಕಡಿಮೆ ಇದೆ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಮಕ್ಕಳ ಶ್ವಾಸಕೋಶ ಅನಾರೋಗ್ಯಕ್ಕೆ ಸಂಬಂಧಿಸಿ ಸಾಧಾರಣ ಕಾರಣಗಳೇ ಗೋಚರಿಸ್ತಿವೆ.…
ಟೆಲ್ ಅವೀವ್: ಅಕ್ಟೋಬರ್ 7 ರಿಂದ ನಡೆಯುತ್ತಿರುವ ಇಸ್ರೇಲ್-ಹಮಾಸ್ ನಡುವಿನ ಭೀಕರ ಯುದ್ಧದಲ್ಲಿ (Israel Hamas War) ಮಹತ್ವದ ಬೆಳವಣಿಗೆ ಕಂಡುಬಂದಿದೆ. ಒತ್ತೆಯಾಳುಗಳ (Hostages) ಬಿಡುಗಡೆಗಾಗಿ ಕದನ ವಿರಾಮ ನಿರ್ಧಾರಕ್ಕೆ ಒಪ್ಪಂದ ಏರ್ಪಟ್ಟಿದ್ದು, ಕೆಲವೇ ಗಂಟೆಗಳಲ್ಲಿ ಕದನ ವಿರಾಮ ಘೋಷಣೆಯಾಗಲಿದೆ. ನಾಲ್ಕು ದಿನ ಕದನ ವಿರಾಮ ಘೋಷಣೆಯಾಗಲಿದ್ದು, ಒತ್ತೆಯಾಳುಗಳ ವಿನಿಮಯವೂ ನಡೆಯಲಿದೆ. ಒಟ್ಟು 4 ದಿನಗಳು ಕದನ ವಿರಾಮ ಇರಲಿದೆ. ಮೊದಲ ದಿನವೇ ಹಮಾಸ್ ಉಗ್ರರ ಗುಂಪು ಸೆರೆಹಿಡಿದಿದ್ದ 13 ಮಂದಿ ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮಧ್ಯವರ್ತಿ ಕತಾರ್ (Qatar) ಹೇಳಿದೆ. https://ainlivenews.com/miley-is-the-new-president-of-argentina-who-talks-to-a-dead-dog/ ಕತಾರ್ ವಿದೇಶಾಂಗ ಸಚಿವಾಲಯದ ಪ್ರಕಾರ, ಭಾರತೀಯ ಕಾಲಮಾನ ಬೆಳಗ್ಗೆ 10:30ರಿಂದಲೇ ಕದನ ವಿರಾಮ ಪ್ರಾರಂಭವಾಗಲಿದೆ. ಆದ್ರೆ ಹಮಾಸ್ ಸಂಜೆ 7:30ರ ನಂತರ ಒತ್ತೆಯಾಳುಗಳ ಮೊದಲ ಬ್ಯಾಚ್ ಅನ್ನು ಬಿಡುಗಡೆ ಮಾಡಲಿದೆ. ಒಂದೇ ಕುಟುಂಬದ ಮಹಿಳೆಯರು ಮತ್ತು ಮಕ್ಕಳನ್ನು ಒಳಗೊಂಡು 13 ಮಂದಿಯನ್ನು ಹಮಾಸ್ ಬಿಡುಗಡೆಗೊಳಿಸಲಿದೆ. ಒಪ್ಪಂದದ ಪ್ರಕಾರ 4 ದಿನಗಳಲ್ಲಿ ಒಟ್ಟು 50 ಮಂದಿಯನ್ನು…
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದ ಜಿಗಣಿಯ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಮೃತದೇಹ ಬೆಂಗಳೂರಿಗೆ (Bengaluru) ಆಗಮಿಸಿದೆ. ಹೆಚ್‍ಎಎಲ್‍ನಲ್ಲಿ (HAL) ಮೃತ ಯೋಧನ ಪಾರ್ಥಿವ ಶರೀರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್, ಸಚಿವ ಕೆ.ಜೆ ಜಾರ್ಜ್, ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಮುಂತಾದ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ಬುಧವಾರ ಹಾಗೂ ಗುರುವಾರದ ನಡುವೆ ರಜೌರಿಯಲ್ಲಿ ಉಗ್ರರು ಹಾಗೂ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಸಾವಿಗೀಡಾಗಿದ್ದರು. ಇದರಲ್ಲಿ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಕೂಡ ಸೇರಿದ್ದಾರೆ. ಅವರ ಪಾರ್ಥಿವ ಶರೀರವನ್ನು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಸಮೀಪದ ನಂದನವನ ಬಡಾವಣೆಯ ನಿವಾಸಕ್ಕೆ ತರಲಾಗುತ್ತಿದೆ. ಜಮ್ಮು ಕಾಶ್ಮೀರದಿಂದ 11.30 ಕ್ಕೆ ವಿಶೇಷ ಸೇನೆಯ ವಿಮಾನದ ಮೂಲಕ ಪಾರ್ಥಿವ ಶರೀರವನ್ನು ಜಮ್ಮು ಕಾಶ್ಮೀರದಿಂದ ದೆಹಲಿಗೆ ತರಲಾಗಿತ್ತು. ಬಳಿಕ ದೆಹಲಿಯಿಂದ ಬೆಂಗಳೂರಿನ ಎಚ್‍ಎಎಲ್‍ಗೆ ತರಲಾಯಿತು.…