ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು. ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಇದು ಕಣ್ಣ ಮುಂದಿದೆ. ಆದರ ದಾಖಲೆ ಕಣ್ಣ ಮುಂದಿದೆ. ಬಿಜೆಪಿಯವರು ನಿರ್ಲಜ್ಜವಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು. ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ದಾಖಲೆಗಳು ಕಣ್ಣ ಮುಂದಿವೆ. ಆದರೂ ಈ ಬಿಜೆಪಿ ನಾಯಕರು…
Author: AIN Author
ರಾಮನಗರ: ಜಿಲ್ಲಾ ಕೇಂದ್ರದಲ್ಲಿಯೇ ಸಿವಿಲ್ ಪ್ರಕರಣಗಳನ್ನು ವಿಚಾರಣೆ ನಡೆಸುವ ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ವರ್ಗಾವಣೆ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇದು ಮಕ್ಕಳಾಟವೇ ಎಂದು ಕಿಡಿಕಾರಿದ್ದಾರೆ. ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನು ವಿರೋಧಿಸಿ, ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. https://ainlivenews.com/miley-is-the-new-president-of-argentina-who-talks-to-a-dead-dog/ ಎಸಿ ಕೋರ್ಟ್ ಅನ್ನು ವಾರದಲ್ಲಿ ಒಂದು ದಿನ ಕನಕಪುರಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಇದನ್ನು ಇಡೀ ರಾಜ್ಯದ ಪ್ರತಿ ತಾಲೂಕಿನಲ್ಲೂ ಮಾಡಿ, ಪ್ರತಿ ತಾಲೂಕಿಗೆ ಒಂದೊಂದು ಎಸಿ ಕೋರ್ಟ್ ಮಾಡಿ ಎಂದ ಅವರು; ಇದು ಸರ್ವಾಧಿಕಾರಿ ಧೋರಣೆ. ಕೋರ್ಟ್ ಸ್ಥಳಾಂತರಕ್ಕೆ ಅಂತಹ ತರಾತುರಿ ಏನಿದೆ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಹೆದರಿಸಿ, ಬೆದರಿಸಿ ಅಕ್ರಮವಾಗಿ ಬೇಲಿ ಹಾಕಿಕೊಂಡಿರುವ ಎಲ್ಲಾ ಭೂಮಿಗಳ ಪೋಡಿ ಮಾಡಿಸುವುದಕ್ಕೆ, ಲೂಟಿ ಮಾಡುವುದಕ್ಕೆ ಹೀಗೆ ಮಾಡ್ತಿದ್ದಾರೆ. ಅದೆಂತದ್ದೋ ಗ್ಲೋಬಲ್ ಸಿಟಿ ಮಾಡಲು, ಲೂಟಿ ಮಾಡೋಕೆ ಈ ಕೆಲಸಕ್ಕೆ…
ವಿಜಯಪುರ: ಬಿಜೆಪಿಯಲ್ಲಿನ (BJP) ಆಂತರಿಕ ಬೇಗುದಿ ಮುಂದುವರಿದಿದೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುನಿಸು ಕಂಟಿನ್ಯೂ ಆಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ (Basanagouda Patil Yatnal), ವಿಜಯೇಂದ್ರ ಬಂದು ನನ್ನ ಭೇಟಿ ಆಗುವ ನಾಟಕ ಮಾಡುವುದು ಬೇಡ. ಎಲ್ಲ ಸರಿಯಾಗಿದೆ ಎಂದು ಹೇಳಿ ಹೋಗುವುದು ಬೇಡ. https://ainlivenews.com/miley-is-the-new-president-of-argentina-who-talks-to-a-dead-dog/ ವಿಜಯೇಂದ್ರ ಮೊದಲು ಏನೇನು ನನಗೆ ಅಡೆತಡೆ ಮಡಿದ್ದಾರೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ (Vijayapura) ಜಿಲ್ಲೆಗೆ ಬಂದ ಅನುದಾನವನ್ನು ವಾಪಸ್ ಪಡೆದರು. ಈಗ ಸರಿ ಮಾಡೋಣ ಅಂದ್ರೆ ಆಗಲ್ಲ. ಲೋಕಸಭಾ ಚುನಾವಣೆ ಮುಗಿದ ನಂತರ ಎಲ್ಲಾ ನಿರ್ಧಾರ ಆಗುತ್ತೆ ಎಂದು ಯತ್ನಾಳ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಬಿ.ವೈ ವಿಜಯೇಂದ್ರ ಅವನ್ನು ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿದ ಬಳಿಕ ಕೆಲವು ನಾಯಕರುಗಳು ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು: ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು‘ಬೆಂಗಳೂರು ಕಂಬಳ ನಮ್ಮ ಕಂಬಳ’ ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದ್ದು, ಕಂಬಳಕ್ಕೆ ಭವ್ಯ ಮೆರವಣಿಗೆ ಮೂಲಕ ಕೋಣಗಳು ಆಗಮಿಸಲಿವೆ. ಹೌದು, ಸಿದ್ಧತೆಗಳು ಭರದಿಂದ ಸಾಗಿದ್ದು, ಕಂಬಳದಲ್ಲಿ ಭಾಗವಹಿಸಲು ಈಗಲೇ 228 ಜೋಡಿ ಕೋಣಗಳು ನೋಂದಣಿಯಾಗಿವೆ. ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳ ಕ್ರೀಡಾಕೂಟಕ್ಕೆ ಸುಮಾರು ಆರರಿಂದ ಎಂಟು ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಕಂಬಳದ ಅಖಾಂಡಕ್ಕೆ 228 ಜೋಡಿ ಕೋಣಗಳು ಇಳಿಯಲಿವೆ. ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ 77.50- 78 ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆಯಿದ್ದು, ಸರ್ಕಾರ ಒಂದು ಕೋಟಿ ರೂ. ಅನುದಾನ ಪ್ರಕಟಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳು ಹಣ ಸಹಾಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕೈಜೋಡಿಸಿವೆ
ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಿಬಿಐ ತನಿಖೆಯ ಕೇಸ್ ಹಿಂದೆ ಪಡೆದಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/dkc-cbi-case-back-yatnal-says-he-will-go-to-court/ ಸಂವಿಧಾನದ ಘನತೆ, ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ನಿಟ್ಟಿನಲ್ಲಿ, ತನ್ನದಲ್ಲದ ತಪ್ಪಿಗೂ ನೈತಿಕ ಹೊಣೆ ಹೊತ್ತು ಅಧಿಕಾರ ತ್ಯಾಗ ಮಾಡಿದ ಹಲವು ಮಹನೀಯರು ರಾಜಕಾರಣದಲ್ಲಿ ಇತಿಹಾಸ ಬರೆದು ಹೋಗಿದ್ದಾರೆ. ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ತನ್ನ ಸಂಪುಟ ಸದಸ್ಯ ಡಿಸಿಎಂ ಡಿ.ಕೆ ಶಿವಕುಮಾರ್‌ರವರ ಮೇಲಿರುವ ಸಿಬಿಐ ತನಿಖೆಯ ಕೇಸ್ ಹಿಂತೆಗೆದುಕೊಳ್ಳಲು ನಿರ್ಧರಿಸಿದೆ. ಸರ್ಕಾರದ ಈ ನಿಲುವು ಸಾಂವಿಧಾನಿಕ ಹಾಗೂ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ಸವಾರಿ ಮಾಡಿದ ಕ್ರಮವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ದ ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪವು ಗಂಭೀರ ಸ್ವರೂಪದ್ದಾಗಿದೆ. ಈ ಪ್ರಕರಣದ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಅಕ್ಷಮ್ಯ. ಇದನ್ನು ಆಮ್ ಆದ್ಮಿ ಪಕ್ಷ ಖಡಾಖಂಡಿತವಾಗಿ ತಿರಸ್ಕರಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. https://ainlivenews.com/dkc-cbi-case-back-yatnal-says-he-will-go-to-court/ ಮುಖ್ಯಮಂತ್ರಿ ಚಂದ್ರು ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿದೆ. ಚಾರ್ಜ್‌ಶೀಟ್ ಹಾಕುವ ಹಂತಕ್ಕೆ ಬಂದಿದೆ. ಮುಕ್ತಾಯ ಹಂತದಲ್ಲಿರುವ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆಯುವುದು ದುರುದ್ದೇಶಪೂರಿತವಾಗಿದೆ. ಈ ನಿರ್ಧಾರ ಕಾನೂನಿಗೆ ವಿರುದ್ಧವಾಗಿದೆ ಎಂದರು. ಜನಸಮಾನ್ಯರ, ರೈತರ ಆಸ್ತಿಗಳಲ್ಲಿ ಕೊಂಚವೂ ಹೆಚ್ಚಾಗುವುದಿಲ್ಲ. ಆದರೆ, ರಾಜಕಾರಣಿಗಳ ಆಸ್ತಿ ನೂರಾರು ಪಟ್ಟು ಹೆಚ್ಚಾಗುವುದು ಹೇಗೆ? 2013-18ರ ಐದು ವರ್ಷದಲ್ಲಿ ಶಿವಕುಮಾರ್ ಅವರ ಆಸ್ತಿ ಶೇ 380ರಷ್ಟು ಏರಿಕೆಯಾಗಿದೆ. ಇದು ಹೇಗೆ ಸಾಧ್ಯವಾಯ್ತು ಎಂಬುದಕ್ಕೆ ಆಧಾರ ಬೇಕಲ್ಲವೇ? ಒಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಣೆ ಮಾಡಲು ರಾಜ್ಯ ಸರ್ಕಾರ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ವಾಗ್ದಾಳಿ ಮಾಡಿದ್ದಾರೆ. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಕುರಿತು ಎಕ್ಸ್ (ಟ್ವಿಟರ್) ನಲ್ಲಿ “ಪ್ರಕರಣವನ್ನು ಹಿಂಪಡೆದಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಭ್ರಷ್ಟಾಚಾರ ಪ್ರಕರಣ ಹಿಂಪಡೆಯಲು ಸರ್ಕಾರ ಮರು ಪರಿಶೀಲಿಸಬೇಕು” ಎಂದು ಬರೆದುಕೊಂಡಿದ್ದಾರೆ. ಯತ್ನಾಳ್ ಟ್ವೀಟ್‌ನಲ್ಲೇನಿದೆ? ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಕೀಲರಾಗಿ ಅವರ ಹಲವು ಭ್ರಷ್ಟಾಚಾರದ ಪ್ರಕರಣವನ್ನು ಕೈಗೆತ್ತುಕೊಂಡು ವಾದ ಮಂಡಿಸಿದ್ದರು. ದುರಂತದ ವಿಷಯವೇನೆಂದರೆ, ಸರ್ಕಾರದ ಪ್ರಭಾವಿ ರಾಜಕಾರಣಿಯ ಖಾಸಗಿ ವಕೀಲರು ಅಡ್ವೋಕೇಟ್ ಜನರಲ್ ಆಗಿ ಡಿ.ಕೆ.ಶಿವಕುಮಾರ್ ಮೇಲೆ ನಡೆಯುತ್ತಿದ್ದ ಸಿ.ಬಿ.ಐ ತನಿಖೆಗೆ ಸರ್ಕಾರದ ಅನುಮತಿ ಹಿಂಪಡೆಯಬೇಕೆಂದು ಸಂಪುಟಕ್ಕೆ ಶಿಫಾರಸು ಮಾಡುತ್ತಾರೆ. ಈ ಶಿಫಾರಸಿನ ಕಾನೂನಿನ ಮಾನ್ಯತೆ ಬಗ್ಗೆ ಸಂಪುಟ…
ಉಡುಪಿ: ಪೆಟ್ರೋಲ್ ಪಂಪ್ (Petrol Pump) ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ (Tipper) ಹರಿದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ (Hebri) ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ನಡೆದಿದೆ. ಶಿವರಾಜ್ (38) ಟಿಪ್ಪರ್ ಹರಿದ ಪರಿಣಾಮ ಸಾವನ್ನಪ್ಪಿದ ಕಾರ್ಮಿಕ. ಮೃತ ಶಿವರಾಜ್ ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿ. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಬಳಿ ತಮ್ಮ ವಾಹನವನ್ನು ಬದಿಗಿಟ್ಟು ಮಲಗಿದ್ದರು. ನಿದ್ರೆಗೆ ಜಾರಿದ್ದ ವೇಳೆ ದುರ್ಘಟನೆ ನಡೆದಿದೆ. https://ainlivenews.com/miley-is-the-new-president-of-argentina-who-talks-to-a-dead-dog/ ಅದೇ ಪೆಟ್ರೋಲ್ ಪಂಪ್‌ಗೆ ಬಂದು ಪೆಟ್ರೋಲ್ ಹಾಕಿಸಿ ನಿರ್ಗಮಿಸುತ್ತಿದ್ದ ಟಿಪ್ಪರ್, ಅಲ್ಲೇ ಮಲಗಿದ್ದ ಶಿವರಾಜ್ ಹಾಗೂ ಮಹೇಂದ್ರ ಮೇಲೆ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನವೆಂಬರ್ 29ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಲ್ಲಿ ಸದ್ಯ ಮೋಡ ಕವಿದ ವಾತಾವರಣ ಇದ್ದು, ರಾತ್ರಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ…
ನಟ, ನಿರ್ದೇಶಕ, ಬಿಗ್ ಬಾಸ್ ವಿನ್ನರ್ ಪ್ರಥಮ್ (Pratham) ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಡ್ಯದ ಭಾನುಶ್ರೀ (Bhanushree) ಜೊತೆ ಅವರು ಸರಳವಾಗಿ ಮದುವೆಯಾಗಿದ್ದಾರೆ (Marriage). ಈ ಜೋಡಿಯನ್ನು ಶುಭ ಹಾರೈಸುವುದಕ್ಕಾಗಿ ಲವ್ಲಿ ಸ್ಟಾರ್ ಪ್ರೇಮ್, ಧ್ರುವ ಸರ್ಜಾ, ಗಾಯಕಿ ಇಶಾನಿ, ರಕ್ಷಕ್ ಬುಲೆಟ್ ಸೇರಿದಂತೆ ಹಲವಾರು ತಾರೆಯರು ಆಗಮಿಸಿದ್ದರು. ಎಲ್ಲರನ್ನೂ ಮದುವೆ ಕರೆಯಲಾರೆ ಎಂದು ಮೊದಲೇ ಪ್ರಥಮ್ ತಿಳಿಸಿದ್ದರು. ಎರಡು ಕುಟುಂಬಗಳ ಸದಸ್ಯರು ಮತ್ತು ಆಪ್ತರ ಮುಂದೆ ಸರಳವಾಗಿ ಮದುವೆ ಆಗುವುದಾಗಿ ಅವರು ತಿಳಿಸಿದ್ದರು. ಹಾಗೆಯೇ ಪ್ರಥಮ್ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ವಾರವಷ್ಟೇ ಇವರು ಸೋಷಿಯಲ್ ಮೀಡಿಯಾದಲ್ಲಿ, ‘ಮುಂದಿನ ವಾರ ಮದುವೆ. ಅಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೇ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೇಸೆಜ್ ಹಾಕಿ ನಿಮ್ಮನ್ನ ಮದುವೆಗೆ ಕಾಟಾಚಾರಕ್ಕೆ ಕರೆಯೋದಿಲ್ಲ. ಈಗ ಎಲ್ಲಿರ್ತೀರೋ ಅಲ್ಲಿಂದಲೇ ಹಾರೈಸಿ. ಗ್ರ್ಯಾಂಡ್ ಆಗಬಹುದಿತ್ತು. ನನಗೆ ಆಸಕ್ತಿ ಇಲ್ಲ. ಸರಳವಾಗಿ ಆಗ್ತಿರೋ ಕಾರಣ…