ಕೋಲ್ಕತ್ತಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬೆನ್ನಲ್ಲೇ ಇದೀಗ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರು (Mamta Banerjee) ಟೀಂ ಇಂಡಿಯಾ ವಿಶ್ವಕಪ್ ಸೋತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಪರೋಕ್ಷವಾಗಿ ದೂರಿದ್ದಾರೆ. ಕೋಲ್ಕತ್ತಾ ನೇತಾಜಿ ಇಂಡೋರ್ ಕ್ರೀಡಂಗಣದಲ್ಲಿ ಟಿಎಂಸಿ (TMC) ಕಾರ್ಯಕರ್ತರ ಸಭೆಯಲ್ಲಿ ದೀದಿ ಮಾತನಾಡಿದರು. ಪಾಪಿಗಳು ಹಾಜರಾದ ಫೈನಲ್ ಪಂದ್ಯ ಉಳಿದ ಎಲ್ಲಾ ಪಂದ್ಯಗಳಲ್ಲಿಯೂ ಟೀಂ ಇಂಡಿಯಾ ಜಯಗಳಿಸಿದೆ. ವಿಶ್ವಕಪ್ 20203ರ (World Cup) ಫೈನಲ್ ಪಂದ್ಯವು ಕೋಲ್ಕತ್ತಾ ಅಥವಾ ಮುಂಬೈನಲ್ಲಿ ನಡೆಯುತ್ತಿದ್ದರೆ ಭಾರತ ಗೆಲುವು ಸಾಧಿಸುತ್ತಿತ್ತು ಎಂದು ಅವರು ತಿಳಿಸಿದರು. https://ainlivenews.com/shooting-in-metro-also-from-now-on-bmrcl-green-signal/ ಕೋಲ್ಕತ್ತಾದ ಈಡನ್ ಗಾರ್ಡನ್ ಅಥವಾ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ಫೈನಲ್ ಪಂದ್ಯ ನಡೆಯುತ್ತಿದ್ದರೆ ನಾವು ಗೆಲ್ಲುತ್ತಿದ್ದೆವು ಎಂದು ನಾನು ಈ ಸಂದರ್ಭದಲ್ಲಿ ಹೇಳಬಲ್ಲೆ. ಬಿಜೆಪಿಯವರು ಅವರಿಗೆ ಕೇಸರಿ ಜೆರ್ಸಿಯನ್ನು ನಿಡಿದ್ದಾರೆ ಎಂದು ಮಮತಾ ಇದೇ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ಕ್ರಿಕೆಟ್ (Team…
Author: AIN Author
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದವರಿಗೆ ದಲಿತರಿಗೆ ದ್ರೋಹ ಮಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ನ್ಯಾಯಲಯಕ್ಕೆ ಅಲೆಯುತ್ತಿದ್ದಾರೆ. ಸಚಿವ ಸಂಪುಟದ ಪಾವಿತ್ರ್ಯತೆ ಹಾಳು ಮಾಡುತ್ತಿದ್ದಾರೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ ವಿರುದ್ಧವಾಗಿ ತೀರ್ಪು ಬರಲಿದೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ ಜೈಲಿಗೆ ಹೋಗುತ್ತಾರೆ. https://ainlivenews.com/a-break-in-israels-war-against-hamas-militants-release-of-50-hostages/ ಇದರಲ್ಲಿ ಯಾವುದೇ ಅನುಮಾನ ಬೇಡ. ಇದರಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪು ಚುಕ್ಕೆ. ಡಿಕೆ ಶಿವಕುಮಾರ್ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡರು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು.
ಬೆಂಗಳೂರು: ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಇಂದು (ನ.24) ಬೆಂಗಳೂರಿಗೆ ಆಗಮಿಸಲಿದೆ. ಹೆಚ್ಎಎಲ್ ಏರ್ಪೋರ್ಟ್ಗೆ ಬರಲಿರುವ ಪ್ರಾಂಜಲ್ ಪಾರ್ಥಿವ ಶರೀರಕ್ಕೆ ಸರ್ಕಾರ ವತಿಯಿಂದ ಗೌರವ ಸಲ್ಲಿಸಲಾಗುತ್ತದೆ. ನಂತರ ಬನ್ನೇರುಘಟ್ಟ ಸಮೀಪ ನಂದನವನ ಲೇಔಟ್ ನಿವಾಸಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಇಲ್ಲಿ ಕುಟುಂಬಸ್ಥರು ಅಂತಿಮ ನಮನ ಸಲ್ಲಿಸುತ್ತಾರೆ. ಪ್ರಾಂಜಲ್ ಅವರ ತಂದೆ ವೆಂಕಟೇಶ್ ಎಂಆರ್ಪಿಎಲ್ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ. ಎಂಆರ್ಪಿಎಲ್ ಅಧಿಕಾರಿ ಸುದರ್ಶನ್ ಸೇರಿದಂತೆ 10 ಜನ ಸಿಬ್ಬಂದಿ ಪ್ರಾಂಜಲ್ ಅವರ ಮನೆಯಲ್ಲಿ ಮೊಕ್ಕಾಂ ಹೋಡಿದ್ದಾರೆ. ಸಿಬ್ಬಂದಿ ಮನೆಯ ಬಳಿ ಅಂತಿಮ ದರ್ಶನಕ್ಕೆ ಎಲ್ಲಾ ಸಿದ್ಧತೆ ಮಾಡುತ್ತಿದ್ದಾರೆ. ಸೋಮಸಂದ್ರಪಾಳ್ಯದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
ನಟಿ ರಾಗಿಣಿ ದ್ವಿವೇದಿ (Ragini Dwivedi) ಜಮ್ಮು ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಕುಟುಂಬದ ಜೊತೆ ದೇವರ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡು ವೈಷ್ಣೋ ದೇವಿ ದೇವಸ್ಥಾನಕ್ಕೆ ನಟಿ ಭೇಟಿ ನೀಡಿದ್ದಾರೆ. ಜೈ ವೈಷ್ಣೋ ಮಾ. ನಿಮ್ಮ ಮೇಲೆ ದೈವಿಕ ಶಕ್ತಿಯು ಪ್ರಜ್ವಲಿಸುತ್ತದೆ ಎಂದು ತಿಳಿದುಕೊಳ್ಳುವುದು ಅನುಭವಿಸುವುದು ಮತ್ತೊಂದು ಭಾವನೆ ಎಂದು ರಾಗಿಣಿ ತಮ್ಮ ಸೋಷಿಯಲ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಕೆಂಪೇಗೌಡ ಚಿತ್ರದ (Kempegowda) ನಟಿ ರಾಗಿಣಿ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸುತ್ತಿದ್ದಾರೆ. 8ಕ್ಕೂ ಹೆಚ್ಚು ಸಿನಿಮಾಗಳು ರಾಗಿಣಿ ಕೈಯಲ್ಲಿವೆ. ಈ ಕುರಿತ ಫೋಟೋಗಳನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ತಮಿಳಿನ ಹೆಸರಾಂತ ನಟ ಸೂರ್ಯಗೆ (Surya) ಶೂಟಿಂಗ್ ವೇಳೆ ತೀವ್ರ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಕಂಗುವ ಶೂಟಿಂಗ್ ವೇಳೆ ಅವರ ಭುಜದ ಮೇಲೆ ಕ್ಯಾಮೆರಾ ಬಿದ್ದ ಕಾರಣದಿಂದಾಗಿ ಏಟು ಬಿದ್ದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವಿಷಯ ಕೇಳುತ್ತಿದ್ದಂತೆಯೇ ಸೂರ್ಯನ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತಂತೆ ಸ್ವತಃ ಸೂರ್ಯ ಅವರೇ ಸೋಷಿಯಲ್ ಮಿಡಿಯಾದಲ್ಲಿ ಬರೆದುಕೊಂಡಿದ್ದಾರೆ. ಆತಂಕ ಪಡುವಂಥದ್ದು ಏನೂ ಆಗಿಲ್ಲ. ಚೇತರಿಸಿಕೊಳ್ಳುತ್ತಿದ್ದೇನೆ. ಹಾರೈಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಆದಷ್ಟು ಬೇಗ ಮತ್ತೆ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ. ಈ ನಡುವೆ ‘ಕಂಗುವ’ (Kanguva) ಸಿನಿಮಾ ಟೀಮ್ ನಿಂದ ಭರ್ಜರಿ ಅಪ್ ಡೇಟ್ ಸಿಕ್ಕಿದೆ. ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಈ ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ.…
ಬಾಗಲಕೋಟೆ: ನಮ್ಮ ಸಮಾಜ & ಲಂಬಾಣಿ ಸಮಾಜಕ್ಕೆ ಆಗಾಗ ಆತಂಕ ಉಂಟಾಗುತ್ತಿದೆ ಎಂದು ಬೋವಿ ಸಮಾಜದ ಕಾರ್ಯಕ್ರಮದಲ್ಲಿ ಅರವಿಂದ ಲಿಂಬಾವಳಿ ಹೇಳಿದರು. https://ainlivenews.com/a-break-in-israels-war-against-hamas-militants-release-of-50-hostages/ ಇನ್ನು ಹಿಂದುಳಿದ, ದಲಿತರ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅತ್ಯಂತ ಕಾಳಜಿ ಇದೆ. ದೇಶದಲ್ಲಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಸಿದ್ದರಾಮಯ್ಯ , ಇಬ್ಬರೂ ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಕೊಡುತ್ತಾರೆ ಎಂದರು.
ವಿಶಾಖಪಟ್ಟಣಂ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಬಳಿಕ ಭಾರತದಲ್ಲಿ ಕ್ರಿಕೆಟ್ ಕ್ರೇಜ್ ಮತ್ತಷ್ಟು ಹೆಚ್ಚಾಗಿದೆ. ಜಿಯೋಸಿನಿಮಾದಲ್ಲಿ (Jiocinema) ಅತ್ಯಧಿಕ ವೀಕ್ಷಕರ (Viewership) ಸಂಖ್ಯೆ ತಲುಪಿ ದಾಖಲೆ ಬರೆದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಗುರುವಾರ ನಡೆದ ಭಾರತ-ಆಸ್ಟ್ರೇಲಿಯಾ (Ind vs Aus) ನಡುವಿನ ಮೊದಲ ಟಿ20 ಪಂದ್ಯವನ್ನು ಏಕಕಾಲಕ್ಕೆ 8.6 ಕೋಟಿಗಿಂತಲೂ ಅಧಿಕ ಕ್ರಿಕೆಟ್ ಅಭಿಮಾನಿಗಳು ವೀಕ್ಷಣೆ ಮಾಡಿದ್ದು, ಕ್ರಿಕೆಟ್ ಇತಿಹಾಸದಲ್ಲೇ ಹೊಸ ಇತಿಹಾಸ ಸೃಷ್ಟಿಸಿದೆ. ಇತ್ತೀಚೆಗೆ ಭಾರತ ಮತ್ತು ಆಸೀಸ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯವನ್ನು 5.9 ಕೋಟಿ ಮಂದಿ ವೀಕ್ಷಿಸಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು. ಆದ್ರೆ ಜಿಯೋಸಿನಿಮಾ ಏಕಕಾಲಕ್ಕೆ 8.6 ಕೋಟಿಗೂ ಅಧಿಕ ವೀಕ್ಷಕರನ್ನ ಕಂಡಿದ್ದು, ಹೊಸ ದಾಖಲೆ ನಿರ್ಮಿಸಿದೆ. ಭಾರತ ಮತ್ತು ಆಸೀಸ್ (Ind vs Aus) ಟಿ20 ಆರಂಭದಿಂದಲೇ ಪ್ರೇಕ್ಷಕರು ಓಟಿಟಿ ವೇದಿಕೆಗೆ ಲಗ್ಗೆಯಿಡಲು ಶುರು ಮಾಡಿದರು. ಆಸೀಸ್ ಬ್ಯಾಟಿಂಗ್ ಮುಗಿದು, ಟೀಂ ಇಂಡಿಯಾ ತನ್ನ ಇನ್ನಿಂಗ್ಸ್ ಆರಂಭಿಸುತ್ತಿದ್ದಂತೆ ವೀಕ್ಷಕರ ಸಂಖ್ಯೆ 8 ಕೋಟಿ ಮೀರಿತ್ತು. ಭಾರತ ತನ್ನ ಇನ್ನಿಂಗ್ಸ್‌ನ…
ಲಂಡನ್: ಬ್ರಿಟನ್‌ನ ನೂತನ ವಿದೇಶಾಂಗ ಸಚಿವ ಸ್ಥಾನಕ್ಕೆ ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರನ್ನು ನೇಮಿಸಲಾಗಿದೆ. ಬ್ರಿಟನ್ ಗೃಹ ಕಾರ್ಯದರ್ಶಿ ಸುಯೆಲ್ಲಾ ಬ್ರಾವರ್‌ಮನ್ ಅವರನ್ನು ವಜಾಗೊಳಿಸಿದ ಬೆನ್ನಲ್ಲೆ ರಿಷಿ ಸುನಕ್ ಸಚಿವ ಸಂಪುಟದಲ್ಲಿ ಮಹತ್ತರ ಬದಲಾವಣೆ ಆಗಿದೆ. ಸುಯೆಲ್ಲಾ ಅವರ ಸ್ಥಾನಕ್ಕೆ ಜೇಮ್ಸ್ ಕ್ಲೆವರ್ಲಿ ಅವರನ್ನು ನೇಮಿಸಲಾಗಿದೆ. ಡೇವಿಡ್ ಕ್ಯಾಮರೂನ್, ಬ್ರೆಕ್ಸಿಟ್ ಜನಾಭಿಪ್ರಾಯ ಸಂಗ್ರಹಣೆಯಲ್ಲಿ ಸೋತು ಸ್ಥಾನ ತ್ಯಜಿಸುವ ಮೊದಲು 2010 ರಿಂದ 2016 ರವರೆಗೆ ಬ್ರಿಟನ್‌ನ ನಾಯಕರಾಗಿದ್ದರು. https://twitter.com/David_Cameron/status/1724009967697514558?ref_src=twsrc%5Etfw%7Ctwcamp%5Etweetembed%7Ctwterm%5E1724009967697514558%7Ctwgr%5E9d82d051e977e871bb06f967c0274ab3b284d023%7Ctwcon%5Es1_&ref_url=https%3A%2F%2Ftv9kannada.com%2Fworld%2Frishi-sunak-reshuffle-former-uk-pm-david-cameron-appointed-as-uk-foreign-secretary-716046.html ನೇಮಕಾತಿಯ ಕುರಿತು ಮಾತನಾಡಿದ ಡೇವಿಡ್ ಕ್ಯಾಮರೂನ್ “ನಾನು ಕೆಲವು ವೈಯಕ್ತಿಕ ನಿರ್ಧಾರಗಳೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದರೂ, ರಿಷಿ ಸುನಕ್ ಪ್ರಬಲ ಮತ್ತು ಸಮರ್ಥ ಪ್ರಧಾನ ಮಂತ್ರಿ ಎಂದು ನನಗೆ ಸ್ಪಷ್ಟವಾಗಿದೆ. ನಾನು ಈ ಸ್ಥಾನವನ್ನು ಸಂತೋಷದಿಂದ ಒಪ್ಪಿಕೊಂಡಿದ್ದೇನೆ. “ಉಕ್ರೇನ್‌ನಲ್ಲಿನ ಯುದ್ಧ ಮತ್ತು ಮಧ್ಯಪ್ರಾಚ್ಯದ ಬಿಕ್ಕಟ್ಟು ಸೇರಿದಂತೆ ಯುಕೆ ಅಂತರರಾಷ್ಟ್ರೀಯ ಸವಾಲುಗಳನ್ನು ಎದುರಿಸುತ್ತಿದೆ. ಆಳವಾದ ಜಾಗತಿಕ ಬದಲಾವಣೆಯ ಈ ಸಮಯದಲ್ಲಿ, ಅದು ನಮ್ಮ ಮಿತ್ರರಾಷ್ಟ್ರಗಳ ಪರವಾಗಿ ನಿಲ್ಲಲು, ನಮ್ಮ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು…
ತಿರುವನಂತಪುರಂ: ಕ್ರಿಕೆಟಿಗ (Cricket) ಶ್ರೀಶಾಂತ್ ವಿರುದ್ಧ 18.70 ಲಕ್ಷ ರೂ. ಪಡೆದು ವಂಚಿಸಿರುವ ಆರೋಪ (Cheating Case) ಕೇಳಿ ಬಂದಿದೆ. ಕೇರಳದ (Kerala) ವ್ಯಕ್ತಿಯೊಬ್ಬರಿಂದ ಶ್ರೀಶಾಂತ್ (S. Sreesanth) ಸೇರಿ ಇಬ್ಬರು ವ್ಯಕ್ತಿಗಳು ಹಣ ಪಡೆದು ವಂಚಿಸಿದ್ದಾರೆ ಎಂದು ದೂರು ದಾಖಲಾಗಿದೆ. ವಂಚನೆ ಪ್ರಕರಣದ ಆರೋಪಿಗಳಾದ ಶ್ರೀಶಾಂತ್, ರಾಜೀವ್ ಕುಮಾರ್ ಮತ್ತು ವೆಂಕಟೇಶ್ ಕಿಣಿ ಎಂಬವರು ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಕ್ರೀಡಾ ಅಕಾಡೆಮಿಯನ್ನು ನಿರ್ಮಿಸುವುದಾಗಿ ಹೇಳಿ 2019 ರಿಂದ ವಿವಿಧ ದಿನಾಂಕಗಳಲ್ಲಿ ಹಣ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 18.70 ಲಕ್ಷ ರೂ. ಹಣ ಪಡೆದಿದ್ದಾರೆ ಎಂದು ಚೂಂಡಾ ಮೂಲದ ದೂರುದಾರರ ಸರೀಶ್ ಗೋಪಾಲನ್ ಆರೋಪಿಸಿದ್ದಾರೆ. ಅಕಾಡೆಮಿಯಲ್ಲಿ ಪಾಲುದಾರರಾಗಲು ಅವಕಾಶ ನೀಡಿದ ನಂತರ ಹಣವನ್ನು ಹೂಡಿಕೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಶ್ರೀಶಾಂತ್ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಲಾಗಿದೆ.
ವಿಶಾಖಪಟ್ಟಣ: ವಿಶ್ವಚಾಂಪಿಯನ್ ಆಸ್ಟ್ರೇಲಿಯಾ (Australia) ವಿರುದ್ಧದ ಮೊದಲ ಟಿ20 (T20) ಪಂದ್ಯದಲ್ಲಿ ಟೀಂ ಇಂಡಿಯಾ (Team India) 2 ವಿಕೆಟ್ ಗಳ ಜಯ ಗಳಿಸಿದೆ. ಇಲ್ಲಿನ ವೈ.ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 209ರನ್ ಗಳ ಬೃಹತ್ ಗುರಿಯನ್ನು ಭಾರತ ತಂಡ ನಿಗಧಿತ ಓವರ್‌ಗಳಲ್ಲಿ 2 ವಿಕೆಟ್ ಗಳ ಅಂತರದ ರೋಚಕ ಜಯ ದಾಖಲಿಸಿದೆ. https://ainlivenews.com/shooting-in-metro-also-from-now-on-bmrcl-green-signal/ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಜೋಶ್ ಇಂಗ್ಲಿಸ್ (110 ರನ್, 50 ಎಸೆತ, 11 ಬೌಂಡರಿ, 8 ಸಿಕ್ಸರ್), ಸ್ಟೀವನ್ ಸ್ಮಿತ್ (52 ರನ್, 41 ಎಸೆತ, 8 ಬೌಂಡರಿ) ಬಿರುಸಿನ ಬ್ಯಾಟಿಂಗ್‍ನಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 208ರನ್ ಗಳಿಸಿತ್ತು ಟೀಂ ಇಂಡಿಯಾ ಪರ ಅರ್ಷ್‍ದೀಪ್ ಸಿಂಗ್ (4-0-41-0), ಪ್ರಸಿದ್ದ ಕೃಷ್ಣ (4-0-50-1), ರವಿ ಬಿಷ್ಣೋಯಿ (4-0-54-1), ಅಕ್ಷರ್ ಪಟೇಲ್ (4-0-32-0), ಮುಕೇಶ್ ಕುಮಾರ್ (4-0-29-0) ರನ್ ನೀಡಿ ವಿಕೆಟ್ ಪಡೆದಿದ್ದಾರೆ. 209…