ಜೈಪುರ:- ಕಾಂಗ್ರೆಸ್‌ನ ಓಲೈಕೆ ರಾಜಕಾರಣಕ್ಕೆ ಸೋಲಾಗಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜಸ್ಥಾನದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಓಲೈಕೆ ರಾಜಕಾರಣದಲ್ಲಿ ತೊಡಗಿದೆ, ಜನರು ಬೇಸತ್ತಿದ್ದಾರೆ. ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮಹಿಳೆಯರು, ದಲಿತರು ಸೇರಿ ಯಾರಾದರೂ ಕಷ್ಟದಲ್ಲಿದ್ದಾರೆ ಎಂದರೆ ಅದಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ನೇತೃತ್ವದ ಸರ್ಕಾರದ ಓಲೈಕೆ ನೀತಿಯೇ ಕಾರಣ. ಮತಬ್ಯಾಂಕ್ ರಾಜಕಾರಣಕ್ಕಾಗಿ ಗಲಭೆಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಅಮಿತ್ ಶಾ ಆರೋಪಿಸಿದರು. ರಾಮಮಂದಿರ ನಿರ್ಮಾಣ, ತ್ರಿವಳಿ ತಲಾಖ್ ರದ್ದತಿ, ಸಂವಿಧಾನದ ವಿಧಿ 370ರ ಅಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ಹಿಂಪಡೆದಿದ್ದನ್ನು ಉಲ್ಲೇಖಿಸಿ ಮಾತನಾಡಿದ ಅವರು, ಕಠಿಣ ನಿರ್ಣಯಗಳನ್ನು ಕಾರ್ಯರೂಪಕ್ಕೆ ತಂದಿರುವ ದಾಖಲೆ ಬಿಜೆಪಿಯದ್ದಾಗಿದೆ ಎಂದರು. ‘ಪಿ.ಎಂ ಎಂದರೆ ಪನೌತಿ ಮೋದಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ…
Author: AIN Author
ಧಾರವಾಡ :- ಕುಳ್ಳಿ ಎಂದು ಮಾನಸಿಕವಾಗಿ ನೊಂದಿದ್ದ ಯುವತಿಯೊಬ್ಬಳ್ಳು ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಜಯನಗರದ ಬಳಿ ನಡೆದಿದೆ. ಧಾರವಾಡ ಜಯ ನಗರದ ನಿವಾಸಿಯಾಗಿದ್ದ ದೀಪಾ ಪಾಟೀಲ್ (27) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ.ಇನ್ನೂ ದೀಪಾ ಹುಟ್ಟು ಕುಳ್ಳಿಯಾಗಿದ್ದು, ಎಲ್ಲರಂತೆ ನಾನು ಇಲ್ಲ ಎಂದು ನೊಂದಿದ್ದಳು ಎಂದು ಹೇಳಲಾಗುತ್ತಿದೆ. ಇದೆ ಕಾರಣಕ್ಕೆ ಸಂಜೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡರಬಹುದು ಎಂದು ಶಂಕಿಸಲಾಗಿದೆ. ಇನ್ನೂ ಘಟನೆಯ ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಲೆ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಯೊಂದಿಗೆ ಸೇರಿ ಯುವತಿಯ ಮೃತದೇಹ ಹೊರ ತೆಗೆದಿದ್ದಾರೆ. ಸದ್ಯ ಈಗ ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರ ತನಿಖೆಯ ನಂತರ ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ.
ಬೆಂಗಳೂರು: ಮುಂದಿನ ಎರಡು ವಾರಗಳ ಕಾಲ ಕರ್ನಾಟಕದ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿಮವೊಗ್ಗ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಜೋರು ಮಳೆ ಬರುವ ನಿರೀಕ್ಷೆಗಳು ಇವೆ. ಇನ್ನೂ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಹ ಶುಕ್ರವಾರದಿಂದ ಮೂರು ದಿನ ಮಳೆ ಅಬ್ಬರಿಲಿದೆ. ಮೂರು ದಿನಗಳ ನಂತರವು ಈ ಮಳೆ ತುಸು ದುರ್ಬಲಗೊಂಡರು ಸಹಿತ ಮತ್ತೆ ಡಿಸೆಂಬರ 1ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡಿನಲ್ಲಿ ಯಾವುದೇ ಮಳೆ ಮುನ್ಸೂಚನೆಗಳು ಇಲ್ಲ. ಆಗಾಗ ಬಿಸಿಲು ಕಡಿಮೆಯಾಗಿ ಮೋಡ ಕವಿದ ವಾತಾವರಣ ಅಲ್ಲಲ್ಲಿ ಕಂಡು ಬಂದರೂ ಸಹಿತ ತುಂತುರು ಮಳೆ ನಿರೀಕ್ಷೆ ಇದೆ ಹೊರತು ಜೋರು ಮಳೆ ಸಂಭವ ಇಲ್ಲ.…
ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನ ಆಯ್ಕೆ ಮಾಡಿದೆ…ನಟರಾಕ್ಷಸ ಡಾಲಿ ಧನಂಜಯ್ ಲಿಡ್ಕರ್ ಗೆ ರಾಯಭಾರಿಯಾಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುತ್ತಿದ್ದಾರೆ. ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ಪ್ರಕಟಣೆಯೊಂದೆ ಬಾಕಿ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ ಎಲ್ಲಾ ವರ್ಗದ…
ಪೀಣ್ಯ ದಾಸರಹಳ್ಳಿ:’ ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ವಿಚಾರವಾಗಿ ಎಲ್ಲೂ ಕಳಪೆ ಕಾಮಗಾರಿ ನಡೆಯಬಾರದು. ಹಾಗೇನಾದರೂ ಕಂಡು ಬಂದರೆ ಸೂಕ್ತ ಕ್ರಮ ಜರುಗಿಸಲಾಗುವುದು’ ಎಂದು ಶಾಸಕ ಎಸ್. ಮುನಿರಾಜು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕಮ್ಮಗೊಂಡನಹಳ್ಳಿಯಲ್ಲಿ ಒಂದು ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಸಾರ್ವಜನಿಕರಿಂದ ಯಾವುದೇ ದೂರು ಬರದಂತೆ ರಸ್ತೆ, ಚರಂಡಿ ಅಭಿವೃದ್ಧಿ ಆಗಬೇಕು. ಕೆಲವೊಂದು ರಸ್ತೆಗಳ ಪಕ್ಕದ ಚರಂಡಿಗಳಲ್ಲಿ ಜಲ್ಲಿಕಲ್ಲು, ಮಣ್ಣು ತುಂಬಿ ನೀರು ಹರಿಯುತ್ತಿಲ್ಲ ಅದನ್ನು ಕೂಡಲೇ ತೆಗಿಸುವ ಕೆಲಸ ಆಗಬೇಕು’ ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಜನರು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ವಿಶ್ವಾಸ ಇಟ್ಟಿದ್ದಾರೆ. ಅದನ್ನು ಹುಸಿಗೊಳಿಸಬಾರದು. ಆದಕಾರಣ ಗುಣಮಟ್ಟದ ರಸ್ತೆ ಅಭಿವೃದ್ಧಿಯಾಗಬೇಕು. ಎಲ್ಲೂ ಕಳಪೆಯಿಂದ ಕೂಡಿರಬಾರದು’ ಎಂದರು. ಈ ಸಂದರ್ಭದಲ್ಲಿ ದಾಸರಹಳ್ಳಿ ಮಂಡಲ ಬಿಜೆಪಿ ಅಧ್ಯಕ್ಷ ಸೋಮಶೇಖರ್, ಶೆಟ್ಟಿಹಳ್ಳಿ ವಾರ್ಡ್ ಬಿಜೆಪಿ ಅಧ್ಯಕ್ಷ ರಮೇಶ್ ಯಾದವ್, ಬಿಜೆಪಿ ಮುಖಂಡರಾದ ಹನಶ್ರೀ ಮಂಜಣ್ಣ, ಜಬ್ಬಾರ್, ಶ್ರೀಹರಿ, ಅಬ್ಬಿಗೆರೆ ವಿನೋದ್, ಎಇಇ ಕೃಷ್ಣಮೂರ್ತಿ ಮತ್ತು ಸ್ಥಳೀಯರಿದ್ದರು.
ಬೆಂಗಳೂರು:- ಲೋಕಸಭೆ ಚುನಾವಣೆ ಹಿನ್ನೆಲೆ, ಎಲ್ಲರೂ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಎಲ್ಲರೂ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ. ನಾವು ಇಬ್ಬರೂ ಸೇರಿ ಚರ್ಚೆ ಮಾಡಿದ್ದೇವೆ. ನಾಲ್ಕು ಗೋಡೆಗಳ ಮಧ್ಯೆ ಮಾಡಿದ ಚರ್ಚೆಯನ್ನು ಬಹಿರಂಗವಾಗಿ ಹೇಳಲ್ಲ. ವಿಜಯೇಂದ್ರ ಅವರು ಈಗ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಅವರ ಬಗ್ಗೆ ನಾವು ಪ್ರಶ್ನೆ ಮಾಡಲ್ಲ. ನಿನ್ನೆ ನಾನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ ಸುನೀಲ್ ಕುಮಾರ್ ಅವರು ಸೇರಿ ಚರ್ಚೆ ಮಾಡಿ, ಸಹಕಾರ ಕೊಡಲು ನಿರ್ಣಯ ತೆಗೆದುಕೊಂಡಿದ್ದೇವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ ಎಂದರು. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ಬಳಿಕ ಇವತ್ತು ನಮ್ಮ ಬಳಿ ಬಂದಿದ್ದಾರೆ. ಎಲ್ಲವೂ ಈಗ ಸರಿಯಾಗಿದೆ. ನಾವೆಲ್ಲ ಒಟ್ಟಿಗೆ ಕೆಲಸ ಮಾಡುತ್ತೇವೆ. ನಾವು ಅಸಮಾಧಾನ ತೋರಿಸಲ್ಲ. ವಿಜಯೇಂದ್ರ…
ಬೆಂಗಳೂರು:- ಮಾಜಿ ಸಿಎಂ ಯಡಿಯೂರಪ್ಪ ಅವರು, ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಆರ್.ಅಶೋಕ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ. ಮಾಜಿ ಸಚಿವ ವಿ ಸೋಮಣ್ಣ ಜೊತೆ ಕೂಡ ಮಾತನಾಡುತ್ತೇವೆ. ಸೋಮಣ್ಣ ಕೂಡ ಒಳ್ಳೆಯ ಸಂಘಟಕ. ಮುಂದಿನ ದಿನಗಳಲ್ಲಿ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ಆರ್. ಅಶೋಕ್ ಅವರನ್ನು ಪ್ರತಿಪಕ್ಷ ನಾಯಕ, ವಿಜಯೇಂದ್ರನನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಮಾಜಿ ಸಿಎಂ ಬೊಮ್ಮಾಯಿ ಎಲ್ಲರೂ ಸೇರಿ ಪಕ್ಷವನ್ನು ಮುನ್ನಡೆಸುತ್ತೇವೆ. ಇಂದು ಚುನಾವಣೆ ನಡೆದರು ನಾವು ಗೆಲ್ಲುತ್ತೇವೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು. ಜಾತಿ ಗಣತಿ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಸರ್ಕಾರ ಏನಂತ ತೀರ್ಮಾನ ಮಾಡಲಿ. ಆಮೇಲೆ ನೋಡೋಣ ಎಂದರು.
ಮಂಡ್ಯ: ಬಿಜೆಪಿಯವರು ಹೇಳಿದರೆ ಕುಮಾರಸ್ವಾಮಿ (H.D.Kumaraswamy) ಚಡ್ಡಿನೂ ಹಾಕ್ತಾರೆ, ಮಾಲೆನೂ ಎಂದಿದ್ದ ಸಚಿವ ಚಲುವರಾಯಸ್ವಾಮಿಗೆ (Chaluvaraya Swamy) ಜೆಡಿಎಸ್ ನಾಯಕರು ಟಾಂಗ್ ನೀಡಿದ್ದಾರೆ. ಚಲುವರಾಯಸ್ವಾಮಿಗೆ ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮದೇ ಶೈಲಿನಲ್ಲಿ ವಾಗ್ದಾಳಿ ನಡೆಸಿದ್ದರು. ಇಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್‌ಗೌಡ (Suresh Gowda) ವಾಗ್ದಾಳಿ ನಡೆಸಿದ್ದಾರೆ. https://ainlivenews.com/housewifes-body-found-hanging-in-bangalore/ ಚಲುವರಾಯಸ್ವಾಮಿ ಮೊದಲೇ ಚಡ್ಡಿ ಹಾಕಲ್ಲ. ಇವರಿಗೆ ಯಾರು ಹೇಳಬೇಕು ಚಡ್ಡಿ ಹಾಕು ಅಂತ ಎಂದು ತಿರುಗೇಟು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯ ಹೇಳಬೇಕಾ? ಇವರಿಗೆ ಯಾಕೆ ನಮ್ಮ ವಿಷಯ. ಇವರದ್ದು ಎಷ್ಟಿದೆ ಅಷ್ಟು ನೋಡಿಕೊಳ್ಳಬೇಕು. ಈತನಿಗೆ ಪ್ಯಾಂಟ್ ಹಾಕೋದು ಕಲಿಸಿದ್ದವರು ಯಾರು? ಚಲುವರಾಯಸ್ವಾಮಿಗೆ ಚಡ್ಡಿ ಹಾಕಿದ್ರೆ ತೊಂದರೆ ಆಗಬಹುದು. ಅದಕ್ಕೆ ಆತ ಚಡ್ಡಿ ವಿಚಾರ ಹೇಳ್ತಾ ಇದ್ದಾನೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು:- ಕಾಂತರಾಜು ವರದಿ ಸ್ವೀಕಾರಕ್ಕೆ ಗೊಂದಲ ಏಕೆ!? ಎಂದು ಮಾಜಿ ಸಚಿವ ಆರ್ ಅಶೋಕ್ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವರದಿ ಸ್ವೀಕಾರಕ್ಕೆ ತರಾತುರಿ ಏಕೆ?. ವರದಿ ಮೂಲ ಯಾರು ಕದ್ದಿದ್ದಾರೆ ಅನ್ನೋದು ತನಿಖೆ ಆಗಬೇಕು. ಅದರ ಮೂಲ ಕಳೆದುಹೋಗಿದೆ. ಅವರೇ ಬರೆಸಿ ವರದಿ ಮಾಡಿದ್ದಾರಾ?. ವರದಿ ವೈಜ್ಞಾನಿಕವಾದರೆ ಕಾರ್ಯದರ್ಶಿ ಏಕೆ ಸಹಿ ಹಾಕಿಲ್ಲ?. ಯಾರ ಮನೆಯಲ್ಲಿ ಬರೆದಿದ್ದಾರೆ, ಎಲ್ಲಿ ಕೂತು ಬರೆದಿದ್ದಾರೆ ಎಂಬುದು ಗೊತ್ತಾಗಬೇಕು ಎಂದರು. ಕಾಂತರಾಜು ವರದಿ ಗೊಂದಲಕ್ಕೆ ಕಾರಣವಾಗಿದೆ. ಕಾಂತರಾಜು ವರದಿ ಘೋಷಣೆ ಮಾಡುವಾಗ ಸಮಿತಿ ಮಾಡದೆ ಏಕಾಏಕಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಅದು ಹತ್ತು ವರ್ಷ ಹಳೆಯ ವರದಿ. ಜನಸಂಖ್ಯೆ ಬದಲಾವಣೆ ಆಗಿದೆ. ನಮ್ಮ ಮನೆಗೆ ಬಂದಿಲ್ಲ ಎಂದು ಸಾರ್ವಜನಿಕರಿಂದ ದೂರು ಇದೆ. ಕಾಂತರಾಜು ವರದಿಗೆ ಮೆಂಬರ್ ಸೆಕ್ರೆಟರಿ ಸಹಿ ಹಾಕಿಲ್ಲ. ಅಲ್ಲದೆ ವರದಿಯ ಮೂಲ ಪ್ರತಿ ಕಾಣೆಯಾಗಿದೆ ಎಂದು ತಿಳಿಸಿದರು. 168 ಕೋಟಿ ರೂಪಾಯಿ ಸರ್ಕಾರದ ಹಣ ಖರ್ಚು ಮಾಡಿದ ವರದಿ ಮೂಲ…
ಕೋಲಾರ: ರಾಜ್ಯದಲ್ಲಿನ ಅತಿಥಿ ಉಪನ್ಯಾಸಕರನ್ನು ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ.24 ರಿಂದ ನಗರದ ಶಾಶ್ವತ ನೀರಾವರಿ ವೇದಿಕೆಯಲ್ಲಿ ಪದವಿ ಕಾಲೇಜುಗಳ ತರಗತಿಗಳನ್ನು ಬಹಿಷ್ಕಾರಿಸಿ ಅನಿರ್ದಿಷ್ಟವಧಿ ಧರಣಿ ನಡೆಯಲಿದೆ ಎಂದು ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ರಾಜ್ಯಾಧ್ಯಕ್ಷ ನಾಗನಾಳ ಮುನಿಯಪ್ಪ ಅವ್ರು ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಡಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಯುಜಿಸಿ ನಿಯಮಾನುಸಾರವಾಗಿ ಸುಮಾರು 10 ಸಾವಿರದ 30 ಮಂದಿ ಹಾಗೂ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ 530 ಮಂದಿ ಕೆಲಸ ಮಾಡುತ್ತಾ ಇದ್ದು ಸರಕಾರ ಕೂಡಲೇ ಅಥಿತಿ ಉಪನ್ಯಾಸಕರನ್ನು ಖಾಯಂ ಸೇರಿದಂತೆ ರಜೆ, ವೇತನ ಸೌಲಭ್ಯದಲ್ಲಿ ಆಗುತ್ತಾ ಇರುವ ತಾರತಮ್ಯವನ್ನು ಸರ್ಕಾರ ಸ್ಪಂದಿಸಬೇಕು ಎಂದು ತಿಳಿಸಿದ್ರು. ರಾಜ್ಯ ಸರಕಾರ ಗ್ರಾಪಂನ ಸಿಬ್ಬಂಧಿ ಹಾಗೂ ಇತರೇ ಇಲಾಖೆ ಸಿಬ್ಬಂದಿಗಳಿಗೆ ಸೇವಾ ಭದ್ರತೆಯನ್ನು ನೀಡಲಾಗಿದೆ. ಹೀಗಾಗಿ ಇದೇ ಮಾದರಿಯಲ್ಲಿ ಅಥಿತಿ ಉಪನ್ಯಾಸಕರಿಗೂ ಸಹ ಸೇವಾ ಸೌಲಭ್ಯವನ್ನು ನೀಡಬೇಕು ರಾಜ್ಯದಲ್ಲಿ ಅಥಿತಿ ಉಪನ್ಯಾಸಕ ರಾಗಿ ಕಳೆದ…