Author: AIN Author

ಬೆಂಗಳೂರು:- ಬೈಕ್ ಟ್ಯಾಕ್ಸಿ ಚಾಲಕನ ಮೇಲೆ‌ ಆಟೋ ಚಾಲಕ ಹಲ್ಲೆ ಮಾಡಿದ ಘಟನೆ ಯಲಹಂಕದ ಬಾಗಲೂರು ಕ್ರಾಸ್ ಬಳಿ ಜರುಗಿದೆ. https://ainlivenews.com/trouble-for-minister-jameer-loka-notice-in-the-case-of-illegal-property-gain/ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ ಆಟೋ ಚಾಲಕ ಗುಂಡಾವರ್ತನೆ ತೋರಿದ್ದಾನೆ. ಯಲಹಂಕದ ಬಾಗಲೂರು ಕ್ರಾಸ್ ಬಳಿ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ಜರುಗಿದೆ. ಗ್ರಾಹಕನ ಕರೆದುಕೊಂಡು ಹೋಗ್ತಿದ್ದಗಲೇ ಬೈಕ್ ಅಡ್ಡಹಾಕಿ ದಾಂಧಲೆ ಮಾಡಿದ್ದಾನೆ. 3-4 ಆಟೋ ಚಾಲಕರಿಂದ ಬೈಕ್ ಟ್ಯಾಕ್ಸಿ ಅಡ್ಡ ಹಾಕಿ ಚಾಲಕನ ಜೊತೆ ಕಿರಿಕ್ ತೆಗೆದಿದ್ದಾನೆ. ಈ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಓರ್ವ ಆಟೋ ಚಾಲಕ ಹಲ್ಲೆ ಮಾಡಿದ್ಜಾನೆ. ಬೈಕ್ ನಲ್ಲಿ ರೇಡ್ ಬಂದಿದ್ದ ಗ್ರಾಹಕನಿಂದ ಘಟನೆ ವಿಡಿಯೋ ರೆಕಾರ್ಡ್ ಆಗಿದೆ. ಘಟನೆ ವಿಡಿಯೋ ಎಕ್ಸ್ ನಲ್ಲಿ ಶೇರ್ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

Read More

ಬೆಂಗಳೂರು:- ವಸತಿ ಸಚಿವ ಜಮೀರ್ ಅಹಮ್ಮದ್ ಗೆ ಸಂಕಷ್ಟ ಎದುರಾಗಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. https://ainlivenews.com/india-vs-south-africa-team-india-won-against-south-africa/ ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್‌ ನೀಡಿದ್ದಾರೆ. ಇ.ಡಿ ದಾಳಿಯ ಬಳಿಕ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಗಳಿಕೆ ಸಂಬಂಧ ತನಿಖೆಗೆ ಇ.ಡಿ ಸೂಚಿಸಿತ್ತು. ಕಳೆದೆರಡು ವರ್ಷದಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ.

Read More

ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ಸೌತ್ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 135 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. https://ainlivenews.com/bbk-11-chaitra-suddenly-collapsed-in-the-bathroom-what-happened/ ಪಂದ್ಯದಲ್ಲಿ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾಗೆ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ವಿಕೆಟ್‌ಗೆ 73 ರನ್ ಗಳ ಜೊತೆಯಾಟವಾಡಿ ಅಭಿಷೇಕ್ ಶರ್ಮಾ (36) ಔಟಾದರು. ಆ ಬಳಿಕ ಶುರುವಾಗಿದ್ದೇ ಸ್ಯಾಮ್ಸನ್ – ತಿಲಕ್ ವರ್ಮಾ ಅಬ್ಬರ. ಈ ಜೋಡಿಯು 2ನೇ ವಿಕೆಟ್‌ಗೆ 210 ರನ್​ಗಳ ಜೊತೆಯಾಟವಾಡಿದರು. ಇದರ ನಡುವೆ ಸಂಜು ಸ್ಯಾಮ್ಸನ್ 56 ಎಸೆತಗಳಲ್ಲಿ ಅಜೇಯ 106 ರನ್ ಬಾರಿಸಿದರೆ, ತಿಲಕ್ ವರ್ಮಾ 47 ಎಸೆತಗಳಲ್ಲಿ ಅಜೇಯ 120 ರನ್ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟದೊಂದಿಗೆ 283 ರನ್ ಕಲೆಹಾಕಿತು. 283 ರನ್​ಗಳೊಂದಿಗೆ ಸೌತ್ ಆಫ್ರಿಕಾದಲ್ಲಿ ಟಿ20 ಕ್ರಿಕೆಟ್​ನಲ್ಲಿ…

Read More

ಬಿಗ್​ಬಾಸ್​ ಕನ್ನಡ ಸೀಸನ್​ 11ರ ಸ್ಪರ್ಧಿಯಾಗಿದ್ದ ಚೈತ್ರಾ ಕುಂದಾಪುರ ಏಕಾಏಕಿ ಬಾತ್​ ರೂಂನಲ್ಲೇ ಕುಸಿದು ಬಿದ್ದಿದ್ದಾರೆ. ಹೌದು, ಬಿಗ್​ಬಾಸ್​ ಮನೆಯ ಬಾತ್​ ರೂಂನಲ್ಲಿ ನಿಂತುಕೊಂಡಿದ್ದರು. ಆಗ ಕೂಡಲೇ ನಿಂತುಕೊಂಡ ಜಾಗದಲ್ಲೇ ಕುಸಿದು ಬಿದ್ದಿದ್ದಾರೆ. https://ainlivenews.com/hontini-to-nandini-delhi-kmf-products-available-from-nov-21/ ಬಿಗ್ ಬಾಸ್ ಮನೆಯಲ್ಲಿ ದಿನಕ್ಕೆ ಒಂದಿಲ್ಲೊಂದು ಟಾಸ್ಕ್ ಕೊಡುತ್ತಾರೆ. ಪ್ರತಿ ಸ್ಪರ್ಧಿಗಳು ನಾವು ಗೆಲ್ಲಲೇ ಬೇಕು ಎಂದು ತುಂಬಾ ಎನರ್ಜಿಯಿಂದ ಆಟ ಆಡ್ತಾರೆ. ಆದ್ರೆ ಯಾಕೋ ಚೈತ್ರಾ ಕುಂದಾಪುರ್ ಅವರು ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದಾರೆ. ಚೈತ್ರಾ ಕುಂದಾಪುರ ಅವರು ನೆಲದ ಮೇಲೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಬಿಗ್ ಬಾಸ್ ಮನೆಯ ಇನ್ನುಳಿದ ಸದಸ್ಯರು ಕೂಡ ಓಡೋಡಿ ಬಂದರು. ಎಷ್ಟು ಪ್ರಯತ್ನಿಸಿದರೂ ಕೂಡ ಚೈತ್ರಾ ಅವರಿಗೆ ಪ್ರಜ್ಞೆ ಬಂದಿಲ್ಲ ಪ್ರಜ್ಞೆ ತಪ್ಪಿ ಬಿದ್ದಿದ್ದ ಚೈತ್ರಾ ಕುಂದಾಪುರ ಅವರ ಮುಖದ ಮೇಲೆ ನೀರು ಚಿಮುಕಿಸಲಾಯಿತು. ಆದರೂ ಸಹ ಅವರ ಎಚ್ಚರಗೊಳ್ಳಲಿಲ್ಲ. ಕೂಡಲೇ ಅವರನ್ನು ಕನ್ಫೆಷನ್​ ರೂಮಿಗೆ ಕರೆದುಕೊಂಡು ಬರುವಂತೆ ಬಿಗ್ ಬಾಸ್ ಆದೇಶಿಸಿದರು.…

Read More

ಬೆಂಗಳೂರು:- ನಾನು ನಂದಿನಿ ಡೆಲ್ಲಿಗೆ ಹೊಂಟೀನಿ ಎಂಬಂತೆ ಕರ್ನಾಟಕದ ಹೆಮ್ಮೆಯ ನಂದಿನಿ ಇನ್ಮುಂದೆ ದೇಹಲಿಯಲ್ಲೂ ಸಿಗಲಿದೆ. https://ainlivenews.com/hubli-former-member-of-parishad-savitramma-gundi-passed-away-funeral-today/ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನವೆಂಬರ್ 21ರಿಂದ ದೆಹಲಿಯಲ್ಲಿ ನಂದಿನ ಹಾಲಿನ ಉತ್ಪನ್ನಗಳು ಲಭ್ಯ ಆಗಲಿವೆ. ಆರಂಭಿಕ ಹಂತದಲ್ಲಿ ನಿತ್ಯ 1 ಲಕ್ಷ ಲೀಟರ್ ಹಾಲನ್ನು ದೆಹಲಿಗೆ ಪೂರೈಸಲು ಕೆಎಂಎಫ್ ಮುಂದಾಗಿದೆ. ಹಸುವಿನ ಹಾಲು ಪೂರೈಸುವಂತೆ ಕೆಎಂಎಫ್‍ಗೆ ದೆಹಲಿ ಸರ್ಕಾರ ಮನವಿ ಮಾಡಿತ್ತು. ಈ ಸಂಬಂಧ ಕಳೆದ ನಾಲ್ಕೈದು ತಿಂಗಳಿಂದ ದೆಹಲಿ ಸರ್ಕಾರದ ಜೊತೆ ಕೆಎಂಎಫ್ ಮಾತುಕತೆ ನಡೆಸುತ್ತಿತ್ತು. 29 ವರ್ಷದ ಹಿಂದೆಯೇ ದೆಹಲಿಗೆ ಕೆಎಂಎಫ್ ಹಾಲನ್ನು ಪೂರೈಸುತ್ತಿತ್ತು. ಇದು ಕಾರಣಾಂತರಗಳಿಂದ ನಂತರದ ದಿನಗಳಲ್ಲಿ ಸ್ಥಗಿತಗೊಂಡಿತ್ತು. ಇದೀಗ ದೆಹಲಿಯಲ್ಲಿ ಚಾಲ್ತಿಯಲ್ಲಿರುವ ಅಮೂಲ್, ಮದರ್ ಡೈರಿಗೆ ಕೆಎಂಎಫ್ ಪೈಪೋಟಿ ನೀಡಲಿದೆ.

Read More

ಹುಬ್ಬಳ್ಳಿ:- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪರಿಷತ್ ಮಾಜಿ ಸದಸ್ಯೆ ಸಾವಿತ್ರಮ್ಮ ಗುಂಡಿ ಶುಕ್ರವಾರ ವಿಧಿವಶರಾಗಿದ್ದಾರೆ. https://ainlivenews.com/defacement-of-idol-of-hindu-god-by-stoning/ ಶುಕ್ರವಾರ ಸಂಜೆ ಹುಬ್ಬಳ್ಳಿಯ ಜೆಸಿ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಸಾವಿತ್ರಿ ಗುಂಡಿ ಅವರು ಕರ್ನಾಟಕ ರಾಜ್ಯ ಸಂಯುಕ್ತ ಜನತಾ ದಳ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿದ್ದರು. ಅಲ್ಲದೇ ವಕೀಲರು, ವಿಧಾನ ಪರಿಷತ್ ಮಾಜಿ ಸದಸ್ಯೆ ಆಗಿಯೂ ಕೆಲಸ ನಿರ್ವಹಿಸಿದರು. ಮೃತರಿಗೆ ಸಾಕಷ್ಟು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 1 ಕ್ಕೆ ಮಂಟೂರು ರಸ್ತೆಯಲ್ಲಿನ ಕಲಬುರಗಿ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ.

Read More

ಬೆಂಗಳೂರು:- ಇತ್ತೀಚಿನ ದಿನಗಳಲ್ಲಿ ಧರ್ಮ ಧರ್ಮಗಳ ನಡುವೆ ಕಿಚ್ಚು ಜೋರಾಗಿದ್ದು, ಕೆಲವು ಪುಡಾರಿಗಳು ಹಿಂದೂ ದೇವರ ವಿಗ್ರಹಗಳನ್ನೇ ಟಾರ್ಗೆಟ್ ಮಾಡಿ ಹಾನಿ ಮಾಡ್ತಿದ್ದಾರೆ. ಇಂತಹ ಎಷ್ಟೋ ಪ್ರಕರಣಗಳು ರಾಜ್ಯದ ಹಲವೆಡೆ ನಡೆದಿದೆ. https://ainlivenews.com/would-you-be-surprised-if-you-hear-about-the-benefits-of-parangi-fruit-seeds/ ಅದರಂತೆ ಹಿಂದೂ ದೇವರ ವಿಗ್ರಹ ವಿರೂಪಗೊಳಿಸಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿರುವ ಘಟನೆ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿನಲ್ಲಿ ಜರುಗಿದೆ. ಲಕ್ಷ್ಮೀ ಭುವನೇಶ್ವರಿ ದೇವರ ವಿಗ್ರಹವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಇನ್ನೂ ಈ ಘಟನೆಯನ್ನು ಹಿಂದೂ ಸಂಘಟನೆ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಗಳು, ಕಲ್ಲು ಹಿಡಿದು ಸಿಸಿ ಕ್ಯಾಮೆರಾದಲ್ಲಿ ಮುಖ ಕಾಣಿಸದಂತೆ ದೇವಸ್ಥಾನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಘಟನೆ ಸಂಬಂಧ ಸ್ಥಳೀಯರು ಹಾಗೂ ಭಕ್ತಾದಿಗಳು ಆಕ್ರೋಶ ಹೊರ ಹಾಕಿದ್ದಾರೆ. ಇನ್ನೂ ದೇವರ ವಿಗ್ರಹ ವಿರೂಪ ಗೊಳಿಸಿದವನ ವಿರುದ್ಧ ಸಿಡಿದೆದ್ದ ಭಕ್ತರು, ಜೀವನ್ ಭೀಮಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Read More

ಪಪ್ಪಾಯಿ ಹಣ್ಣು ಅತ್ಯಂತ ಶಕ್ತಿಶಾಲಿ ಉತ್ಕರ್ಷಣ ನಿರೋಧಕಗಳಲ್ಲಿ ಒಂದಾಗಿದ್ದು, ಇದು ಹೃದಯ, ಕಣ್ಣಿನ ಮತ್ತು ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಅಂತ ಹೇಳುವುದನ್ನು ನಾವೆಲ್ಲಾ ಚಿಕ್ಕವರಾಗಿದ್ದಾಗಿನಿಂದಲೂ ಅನೇಕ ಬಾರಿ ಕೇಳುತ್ತಲೇ ಬೆಳೆದಿದ್ದೇವೆ. https://ainlivenews.com/cheating-an-old-man-in-the-guise-of-a-cbi-officer-two-khatarnaks-arrested/ ಪ್ರತಿಯೊಬ್ಬರೂ ಪಪ್ಪಾಯಿ ಹಣ್ಣುಗಳನ್ನು ತಿನ್ನುವಾಗ ಅದರ ಬೀಜಗಳನ್ನು ಬಿಸಾಡುತ್ತೇವೆ. ಆದರೆ ನಿಮಗೆ ಗೊತ್ತಾ ಪಪ್ಪಾಯಿ ಹಣ್ಣಿನ ಬೀಜಗಳಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಅವು ಪಪೈನ್‌ನಂತಹ ಶಕ್ತಿಯುತ ಕಿಣ್ವಗಳಿಂದ ತುಂಬಿರುತ್ತವೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಆಂಟಿಬ್ಯಾಕ್ಟೀರಿಯಲ್, ಆಂಟಿವೈರಲ್ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಪಪ್ಪಾಯಿ ಬೀಜಗಳು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವಲ್ಲಿ ಸಹಕಾರಿಯಾಗಿದೆ. ಪಪ್ಪಾಯಿಯಲ್ಲಿ ಬಿ ಪ್ರೋಟೀನ್, ವಿಟಮಿನ್, ಸತು, ರಂಜಕ ಸಮೃದ್ಧವಾಗಿದೆ.ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.ವಿಶೇಷವಾಗಿ ಮಲಬದ್ಧತೆಯಿಂದ ಬಳಲುತ್ತಿರುವವರು ಈ ಬೀಜವನ್ನು ಬೆಳಿಗ್ಗೆ ಸೇವಿಸಬೇಕು. ಇದು ಮಲಬದ್ಧತೆಗೆ ಮಾತ್ರವಲ್ಲದೆ ಕೆಟ್ಟ ಕೊಲೆಸ್ಟ್ರಾಲ್‌ಗೂ ಸಹಾಯ ಮಾಡುತ್ತದೆ. ಪಪ್ಪಾಯಿ ಬೀಜಗಳನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳು: ಮಲಬದ್ಧತೆ ಗುಣವಾಗುತ್ತದೆ: ಇಂದಿನ ಕಾಲಮಾನದಲ್ಲಿ ಬಹುತೇಕ ಜನರಿಗೆ ಮಲಬದ್ಧತೆ ಸಮಸ್ಯೆ ಕಾಡುತ್ತಿದೆ.ಅದರಲ್ಲಿ ಪ್ರಮುಖವಾಗಿ ಅನಾರೋಗ್ಯಕರ…

Read More

ಶಿವಮೊಗ್ಗ:-ಜಿಲ್ಲೆಯ ಶಿಕಾರಿಪುರ ಸರ್ಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನೀರಿನ ಸಂಪ್​ಗೆ ಬಿದ್ದು 3 ವರ್ಷದ ಮಗು ದುರ್ಮರಣ ಹೊಂದಿರುವ ಘಟನೆ ಜರುಗಿದೆ. https://ainlivenews.com/bangalore-two-bike-thieves-arrested-11-two-wheelers-seized/ ಮೃತರನ್ನು ಮೊಹಮ್ಮದ್ ಐಯಾನ್ ಎಂದು ಗುರುತಿಸಲಾಗಿದೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೊಹಮ್ಮದ್ ಐಯಾನ್ ಎಂಬ ಮಗು ಆಟವಾಡುತ್ತಿದ್ದ ವೇಳೆ ತುಂಬಿದ್ದ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಮುಚ್ಚಳ ಮುಚ್ಚದಿದ್ದಕ್ಕೆ ತೊಟ್ಟಿಗೆ ಬಿದ್ದು ಮಗು ಸಾವು ಎಂದು ಆರೋಪ ಮಾಡಲಾಗಿದೆ. ಮಗು ಮೃತಪಟ್ಟ ನಂತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೇ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Read More

ತಿರುಪತಿ: ಲಡ್ಡು ಅಕ್ರಮದಲ್ಲಿ ಸಾಕಷ್ಟು ಸದ್ದು ಮಾಡಿದ್ದ ತಿರುಪತಿ ತಿಮ್ಮಪ್ಪನ ಸನ್ನಿಧಾನದ ಈಗಷ್ಟೇ ಶಾಂತವಾಗ್ತಿದೆ. ಈ ಮಧ್ಯೆ ಸಿಲಿಕಾನ್ ಸಿಟಿ ತಿರುಮಲ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾಗಿದ್ದ ದಿವಂಗತ ಆದಿಕೇಶವಲು ಅಳಿಯ ಜಿವಿಎಸ್ ಎಸ್ಟೇಟ್ ಚೇರ್ಮನ್ ಶ್ರೀನಿವಾಸಮೂರ್ತಿ ಭೂದೇವಿ ಮತ್ತು ಶ್ರೀದೇವಿಗೆ ಗಂಡಭೇರುಂಡ ವಜ್ರಮಾಲೆ ಮತ್ತು ವೈಜಯಂತಿ ಮಾಲೆ ಕೊಡುಗೆ ನೀಡಿದ್ದಾರೆ. https://ainlivenews.com/bangalore-two-bike-thieves-arrested-11-two-wheelers-seized/ ಇಂದು ಮುಂಜಾನೆ ಕೆ.ಎಂ. ಶ್ರೀನಿವಾಸಮೂರ್ತಿ ಅವರ ಕುಟುಂಬ ತಿಮ್ಮಪ್ಪನ ಸನ್ನಿಧಿಗೆ ಅಪರೂಪದ ನೀಲಿ ನವ ರತ್ನಗಳೊಂದಿಗೆ ವಿಶಿಷ್ಟವಾಗಿ ವಿನ್ಯಾಸಗೊಳಿಸಿರೋ ಗಂಡಭೇರುಂಡ ವಜ್ರಮಾಲೆ ಹಾಗೂ ರುಬೀಗಳ ವೈಜಯಂತಿ ಮಾಲೆಯನ್ನು ದೇವಸ್ಥಾನಕ್ಕೆ ಕೊಡುಗೆ ನೀಡಿದ್ದಾರೆ. ಈ ಆಭರಣಗಳ ಮೌಲ್ಯ ಅಂದಾಜು 1.26 ಕೋಟಿ ಎಂದು ಹೇಳಲಾಗ್ತಿದೆ‌. ಶ್ರೀನಿವಾಸ್ ಕುಟುಂಬಕ್ಕೂ ತಿಮ್ಮನ್ನ ಸನ್ನಿದಿಗೂ ಸಾಕಷ್ಟು ಒಡನಾಟವಿದ್ದು, ತಿಮ್ಮಪ್ಪ ಉದ್ಯಮಿ ಶ್ರೀನಿವಾಸ್ ಅವರ ಮನೆ ದೇವರು ಕೂಡ ಆಗಿದೆ. ಇಂದು ತಮ್ಮ ತುಂಬು ಕುಟುಂಬದೊಂದಿಗೆ ದೇವಸ್ಥಾನಕ್ಕೆ ತೆರಳಿ ಈ ಸೇವೆ ಸಲ್ಲಿಸಿದ್ದಾರೆ. ಇನ್ನೂ ತಿಮ್ಮಪ್ಪನ ಸನ್ನಿಧಿಗೆ ಆಭರಣಗಳನ್ನ ಕೊಡುಗೆ ನೀಡಿದಾರೆ.

Read More