ಬೆಂಗಳೂರು: ಬಿಹಾರದ ಜಾತಿಗಣತಿ ವರದಿ ಬಿಡುಗಡೆಯಾದ್ಮೇಲೆ ರಾಜ್ಯದಲ್ಲಿ ಜಾತಿ ವಾರ್ ದೊಡ್ಡಮಟ್ಟದಲ್ಲಿ ಸೌಂಡ್ ಮಾಡ್ತಿದೆ. ಈಗಾಗ್ಲೆ ಒಕ್ಕಲಿಗ ಸಂಘಟನೆಯಿಂದ ವರದಿಗೆ ದೊಡ್ಡ ಮಟ್ಟದ ಆಕ್ರೋಶ ವ್ಯಕ್ರವಾಗ್ತಿದ್ರೆ, ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಗಣತಿ ವರದಿ ಬೇಡ ಅಂತಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ವರದಿ ಪಡೆದೇ ತೀರುತ್ತೇನೆ ಅನ್ನೋ ಹಠಕ್ಕೆ ಬಿದ್ದಿದ್ದು. ವಿಪಕ್ಷಗಳಿಂದಲೂ ಭಾರೀ ವಿರೋಧ ವ್ಯಕ್ತವಾಗ್ತಿದೆ, ಈ ಮಧ್ಯೆ ವರದಿಯ ಮೂಲ ಪ್ರತಿಯೇ ಕಾಣೆಯಾಗಿರೋದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.….. 2015 ರ ಕಾಂತರಾಜು ವರದಿಯ ಮೂಲ ಪ್ರತಿ ಕಳ್ಳತನ ವಾಗಿದೆ ಎಂಬ ಮಾಹಿತಿಗಳು ಹರಿದಾಡ್ತಿದ್ದು ಇದಕ್ಕೆ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸ್ಪಷ್ಟನೆ ಕೊಟ್ಟಿದ್ದಾರೆ. ಹಿಂದೆ ಸಿದ್ದಪಡಿಸಿದ್ದ ಮೂಲ ಪ್ರತಿ ನಮ್ಮ ಬಳಿ ಇಲ್ಲ ಆದ್ರೆ ಡೇಟಾ ಎಲ್ಲವೂ ಇದೆ ಯಾವುದು ಮಿಸ್ ಅಗಿಲ್ಲ ಸಾಪ್ಟ್ ವೇರ್ ನಲ್ಲೂ ಇದೆ. ಪ್ರತಿ ಜಿಲ್ಲಾಧಿಕಾರಿಗಳ ಬಳಿಯೂ ಡೆಟಾ ಇದೆ ಅದೊಂದು ವಿಷಯವೇ ಅಲ್ಲ ವಿವಾದವೂ ಅಲ್ಲಾ. ಡೇಟಾ ಆಧರಿಸಿ ನಾವು ವರದಿ ಸಿದ್ದಪಡಿಸುತ್ತೇವೆ…
Author: AIN Author
ಮಂಗಳೂರು: ಮೋದಿ (Narendra Modi) ಹೋಗಿದ್ದಕ್ಕೆ ವಿಶ್ವಕಪ್ ಫೈನಲಿನಲ್ಲಿ ಭಾರತ (Team India) ಸೋತಿತು ಎಂದ ರಾಹುಲ್ ಗಾಂಧಿಗೆ (Rahul Gandhi) ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ತಿರುಗೇಟು ನೀಡಿದ್ದು, ರಾಹುಲ್ ಎಂದರೆ ರಾಹು ಗ್ರಹ ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್‌ಗೆ (Congress) ಆವರಿಸಿದ ಮೇಲೆ ರಾಜಕೀಯ ಭೂಪಟದಲ್ಲಿ ಕಾಂಗ್ರೆಸ್ ಹುಡುಕಾಡುವ ಪರಿಸ್ಥಿತಿ ತಲುಪಿತು ಎಂದು ಕಾಂಗ್ರೆಸಿಗರೇ ಬೀದಿಯಲ್ಲಿ ನಿಂತು ಮಾತನಾಡಿಕೊಳ್ಳುತ್ತಾರೆ. ರಾಹುಗ್ರಹ ಬಿಡಿಸಲೆಂದೇ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾನ್ಯ ಖರ್ಗೆಯವರು (Mallikarjun Kharge) ಬಂದು ಕುಳಿತ್ತಿದ್ದಾರೆ. ಆದರೆ ರಾಹು ಎಂಬ ರಿಮೋಟ್ ಕಂಟ್ರೋಲ್ ಇನ್ನೂ ತಗುಲಿಕೊಂಡಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ವಿಶ್ವ ಮಟ್ಟದಲ್ಲಿ ಭಾರತವನ್ನು ಮೂಂಚೂಣಿ ಸಾಲಿಗೆ ತಂದು ಇವತ್ತು 4ನೇ ಸ್ಥಾನದಲ್ಲಿ ಭಾರತವನ್ನು ನಿಲ್ಲಿಸಿದ ಪ್ರಧಾನಿ ಮೋದಿಯವರು ಯಾವುದರ ಸಂಕೇತ? ವಿಜಯದ ಸಂಕೇತ, ಅಭಿವೃದ್ಧಿಯ ಸಂಕೇತ , ಸಾಮರ್ಥ್ಯದ ಸಂಕೇತ ಎಂದು ಜಗತ್ತು ಹೇಳುತ್ತಿದೆ̤. ಕಾಲಿಟ್ಟಲ್ಲಿ ಕಾಂಗ್ರೆಸ್ ಮುಳುಗಿಸಿದ ರಾಹುಲ್ ಗಾಂಧಿ ಶಕುನದ…
ಬೆಂಗಳೂರು: ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಇಂದು ದೆಹಲಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತೆರಳಲಿದ್ದಾರೆ. ಈ ನಾಯಕರ ಭೇಟಿಗೆ ಕೇಂದ್ರ ವಿತ್ತ ಸಚಿವರು ಇಂದು ಸಮಯ ನೀಡಿದ್ದಾರೆ. ಒಂದು ವಾರದೊಳಗೆ ಬರ ಪರಿಹಾರ ಘೋಷಣೆ ಮಾಡುವ ನಿರೀಕ್ಷೆಯನ್ನು ಸಚಿವರು ಹೊಂದಿದ್ದಾರೆ, ತಮಿಳುನಾಡಿಗೆ ನೀರು ಹರಿಸುವಂತೆ ನೀಡಿದ್ದ ಆದೇಶದ ಅವಧಿ ಮುಕ್ತಾಯ ಹಿನ್ನೆಲೆ ಇಂದು ದೆಹಲಿಯಲ್ಲಿ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಸಲಿದೆ. ಮುಂದಿನ ಅವಧಿಗೆ ನೀರು ಹರಿಸಬೇಕೇ ಬೇಡವೇ ಎಂಬುದರ ಬಗ್ಗೆ ಬೆಳಗ್ಗೆ 11.30ಕ್ಕೆ ಸಿಡಬ್ಲ್ಯುಆರ್‌ಸಿ ಸಭೆ ನಡೆಯಲಿದೆ.
ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಂಜುಮನ್ ಶಾಲೆಯ ಆವರಣದಲ್ಲಿ ಕಾರ್ಯಕ್ರಮ, ನವನಗರದ ಬೋವಿ ಪೀಠಕ್ಕೆ ಭೇಟಿ, ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ಗೆ ಸೇರಿದ ಉಚಿತ ಕೋಚಿಂಗ್ ಸೆಂಟರ್ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಕಲಬುರಗಿ:- ಬುರ್ಖಾ ಧರಿಸಿಕೊಂಡು ಗಿರಾಕಿ ತರ ಬಂದ ಇಬ್ಬರು ಚಾಲಾಕಿ ಲೇಡಿಗಳು ಚಿನ್ನದ ಬಳೆ ಕದ್ಕೊಂಡು ಹೋದ ಘಟನೆ ಕಲಬುರಗಿಯಲ್ಲಿ ನಡೆದಿದೆ.. ನಗರದ ಮಲಬಾರ್ ಗೋಲ್ಡ್ ಶೋರೂಮಲ್ಲಿ ಘಟನೆ ನಡೆದಿದ್ದು 30 ಗ್ರಾಂ ಚಿನ್ನದ ಬಳೆಗಳನ್ನ ಎಗರಿಸಿ ಎಸ್ಕೇಪ್ ಆಗಿದ್ದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಸೇಲ್ಸ್ ಮ್ಯಾನ್ ಚಂದ್ರಕಾಂತ ನೀಡಿದ ದೂರಿನನ್ವಯ ಸ್ಟೇಷನ್ ಬಜಾರ್ ಪೋಲೀಸ ಠಾಣೆಯಲ್ಲಿ ಕೇಸ್ ದಾಖಲಾಗಿದೆ..ಚಾಲಾಕಿಗಳ ಪತ್ತೆಗೆ ಪೋಲೀಸ್ರು ಬಲೆ ಬೀಸಿದ್ದಾರೆ…
ಮಂಗಳೂರು: ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಮೋದಿ ಸರ್ಕಾರ (Narendra Modi Govt) ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ. ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡುಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ (MP Nalin Kumar Kateel) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ (Congress) ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ (Siddaramaiah), ಡಿಕೆಶಿ ಮತ್ತು ಜಾರಕಿಹೊಳಿ ತಂಡ ಇಬ್ಭಾಗವಾಗುತ್ತಿದೆ. ಅದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್ ಡಿವೈಡ್ ಆಗ್ತಿದೆ, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಕೆಲವೇ ದಿನಗಳಲ್ಲಿ 30-40 ಶಾಸಕರು ಹೊರಗೆ ಬರುತ್ತಾರೆ. ಈ ಭಯದಿಂದ ಕಾಂಗ್ರೆಸ್ ನವರು ಬಿಜೆಪಿಯಿಂದ ಬರುತ್ತಾರೆ ಎಂದು ದಾರಿ ತಪ್ಪಿಸುತ್ತಿದ್ದಾರೆ. ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ.…
ಬೆಳಗಾವಿ:- ಬಿ.ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ವಿಚಾರವಾಗಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿ.ವೈ ವಿಜಯೇಂದ್ರ ಅವರನ್ನು ನಾವು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ. ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ ಎಂದು ಅಚ್ಛರಿ ಹೇಳಿಕೆ ನೀಡಿದ್ದಾರೆ. ಹೊಂದಾಣಿಕೆ ಮಾಡಿಕೊಳ್ಳುವವರಿಗೆ ಕಾಲ ಇದು ಎಂದು ಲಿಂಬಾವಳಿ ಹೈಕಮಾಂಡ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಧ್ಯಕ್ಷರು, ಪ್ರತಿಪಕ್ಷ ನಾಯಕರು ವಿರೋಧ ಪಕ್ಷಗಳ ಜೊತೆಗೆ ಹೊಂದಾಣಿಕೆ ಇದೆ. ಅಂಥ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಬಂದಿದೆ. ಹೊಂದಾಣಿಕೆಯಿಂದ ಲೋಕಸಭೆ ಚುನಾವಣೆಯಲ್ಲಿ ಜಾಸ್ತಿ ಸ್ಥಾನ ಗೆಲ್ಲಿಸ್ತಿರಬಹುದು ಇವರು. ಅದಕ್ಕಾಗಿ ವಿಜಯೇಂದ್ರ ಹಾಗೂ ಆರ್. ಅಶೋಕ ನೇಮಕ ಮಾಡಿದ್ದಾರೆಂದು ಆಕ್ರೋಶ ಹೊರ ಹಾಕಿದ್ದಾರೆ.
ಕಲಬುರಗಿ : ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿ. ಅವರು ವಿನಾಕಾರಣ ಆರ್.ಎಸ್.ಎಸ್ ವಿಚಾರಕ್ಕೆ ಬಂದರೆ ಸರ್ವನಾಶ ಆಗ್ತಾರೆ ಎಂದು ವಿರೋಧ ಪಕ್ಷದ ನಾಯಕ ಅಶೋಕ್ ಕಿಡಿಕಾರಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನಿಂದಲೂ ಹಿಂದೂಗಳನ್ನು ವಿರೋಧಿಸಿ ಕೊಂಡೇ ಬಂದಿದ್ದಾರೆ. ದಸರಾ ಕುಸ್ತಿ ವೇಳೆ ಕೇಸರಿ ಪೇಠ ಕಿತ್ತಸೆದರು. ಈಗ ಅವರ ಸಂಪುಟ ಸಹೋದ್ಯೋಗಿ ಜಮೀರ್ ಸ್ಪೀಕರ್ ಪೀಠಕ್ಕೆ ಧರ್ಮವನ್ನು ತಂದು ನೀಚ ರಾಜಕಾರಣ ಮಾಡುತ್ತಿದ್ದಾರೆ. ಇವೆಲ್ಲವನ್ನೂ ರಾಜ್ಯದ ಜನತೆ ಗಮನಿಸುತ್ತಾರೆ. ನಮ್ಮ ಪಕ್ಷ ವಿಧಾನಮಂಡಲದ ಒಳಗೆ ಮತ್ತು ಹೊರಗೆ ಈ ಎಲ್ಲಾ ವಿಷಯಗಳ ವಿರುದ್ಧ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಸರ್ಕಾರದ ಇಲಾಖೆಗಳು ಬಿಜೆಪಿ ಅವಧಿಯಲ್ಲಿ ಆರ್ ಎಸ್ ಎಸ್ ಶಾಖೆಗಳಾಗಿದ್ದವು, ಈಗ ಅವುಗಳನ್ನು ಕ್ಲೀನ್ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆಗೆ ಕಿಡಿ ಕಾರಿದ ಅಶೋಕ್, ಧಮ್ಮು ತಾಕತ್ತು ಇದ್ದರೆ ಮುಟ್ಟಿ ನೋಡಲಿ. ಅಂತಹ ಇಂದಿರಾಗಾಂಧಿ ಅವರ ಕೈನಲ್ಲಿ ಏನು ಮಾಡಲು ಆಗಲಿಲ್ಲ. ನಿರ್ಬಂಧ…
ಆನೇಕಲ್:- ಸಂಪ್ ಕ್ಲೀನಿಂಗ್ ಮಾಡುವ ವೇಳೆ ಇಬ್ಬರು ಕಾರ್ಮಿಕರು ದಾರುಣ ಸಾವನ್ನಪ್ಪಿದ ಘಟನೆ ಜರುಗಿದೆ. ನೆನ್ನೆ ಸಂಜೆ ವಾಟರ್ ಟ್ಯಾಂಕ್ ಕ್ಲೀನ್ ಮಾಡಲು ಮುಂದಾಗಿದ್ದ ವೇಳೆ ಅವಘಡ ಸಂಭವಿಸಿದೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ತಿರುಪಾಳ್ಯದ ಸನ್ ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ದುರ್ಘಟನೆ ಸಂಭವಿಸಿದೆ. ಶ್ರೀನಿವಾಸ್ ರೆಡ್ಡಿ ಎಂಬುವವರಿಗೆ ಸೇರಿದ ಕಂಪನಿ ಇದಾಗಿದ್ದು, ಆಸಿಡ್ ಹಾಕಿ ವಾಟರ್ ಟ್ಯಾಂಕ್ ಕ್ಲೀನ್ ಮಾಡಲು ಮುಂದಾಗಿದ್ದರು. ಈ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ದಾರುಣ ಸಾವನ್ನಪ್ಪಿದ್ದಾರೆ. ಬಿಹಾರ ಮೂಲದ ಕಾರ್ಮಿಕರಾದ ಚಂದನ್ ರಜ್ ಬನ್ ಸಿಂಗ್(31), ಪಿಂಟು ರಜ್ ಬನ್ ಸಿಂಗ್(22) ಮೃತರು. ಮೃತರಿಬ್ಬರು ಸಹೋದರರು, ಒಟ್ಟಿಗೆ ಕೆಲಸ ಮಾಡುತ್ತಿದ್ರು. ಕಾರ್ಮಿಕರನ್ನ ಉಳಿಸಲು ಜಗದೀಶ್ ಹಾಗೂ ಮಾಲೀಕ ಶ್ರೀನಿವಾಸ್ ರೆಡ್ಡಿ ಹರಸಾಹಸ ಪಟ್ಟಿದ್ದಾರೆ. ಅಸ್ವಸ್ತರನ್ನ ಕೂಡಲೇ ಅಲ್ಲಿನ ಕಾರ್ಮಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ…
ಬೆಂಗಳೂರು:- ನಗರದಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ದಾಖಲಾಗಿದೆ. ಗಾಡಿ ಟಚ್ ಆಗಿದಕ್ಕೆ ವಾಹನ ಸವಾರ ಹುಚ್ಚನಂತಾಡಿದ್ದಾನೆ. ಕಾರಿನ ಗ್ಲಾಸ್ ಒಡೆದು ದುರ್ವರ್ತನೆ ತೋರಿದ್ದಾನೆ. ಗಾಡಿ ಟಚ್ ಆಗಿದಕ್ಕೆ ಕಿರಿಕ್ ನಡೆದಿದೆ. ಮಹಾರಾಷ್ಟ್ರ ರಿಜಿಸ್ಟ್ರೇಷನ್ ಕಾರಿನ ಮೇಲೆ ದಾಳಿ ನಡೆದಿದೆ. ಈ ಸಂಬಂಧ x ನಲ್ಲಿ ಗೌಡ ಗ್ರೂಪ್ ಎಂಬ ಪೇಜ್ ಪೋಸ್ಟ್ ಮಾಡಿದೆ. ನಿಖರ ಸ್ಥಳದ ಬಗ್ಗೆ ಪೊಲೀಸರು ಮಾಹಿತಿ ಕೇಳಿದ್ದಾರೆ.