ಹುಬ್ಬಳ್ಳಿ:- ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ ನಡೆದಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಕೊಲೆಯಾದ ಮೃತ ವ್ಯಕ್ತಿ ಎನ್ನಲಾಗಿದೆ. ಆಸ್ತಿ ವಿಚಾರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Author: AIN Author
ಬೆಂಗಳೂರು:- ಡಿಕೆ ಶಿವಕುಮಾರ್, ಲಿಂಗಾಯತರು, ಒಕ್ಕಲಿಗರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಮೀಕ್ಷೆಗೆ 162 ಕೋಟಿ ರೂಪಾಯಿ ಖರ್ಚು ಮಾಡಲಾಗಿದ್ದು, ಸರ್ಕಾರ ವರದಿ ತರಿಸಿಕೊಂಡು ನಂತರ ತೀರ್ಮಾನಿಸಲಿದೆ ಎಂದರು. ನಾವು 162 ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ನಾವು ವರದಿ ತೆಗೆದುಕೊಳ್ಳಬೇಕು. ಅವರಿಗೆ (ವೊಕ್ಕಲಿಗರಿಗೆ) ಇರುವ ಅನುಮಾನಗಳು ವರದಿಯಲ್ಲಿವೆಯೇ ಇಲ್ಲವೇ ಎಂಬುದನ್ನು ನೋಡಬೇಕು. ನಾನು ವರದಿಯನ್ನು ನೋಡಿಲ್ಲ. ನಾನೇ ನೋಡದಿದ್ದರೆ ಬೇರೆಯವರು ಅದನ್ನು ಹೇಗೆ ನೋಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವರದಿ ಸಲ್ಲಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅವರು ವರದಿ ಸಲ್ಲಿಸುವವರೆಗೆ ಒಬಿಸಿ ಆಯೋಗದ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ವರದಿಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಇಬ್ಬರ ನಡುವೆ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಹೇಳಿದರು. ಈ ಬಗ್ಗೆ ಡಿಸಿಎಂ ನನ್ನೊಂದಿಗೆ ಯಾವತ್ತೂ ಮಾತನಾಡಿಲ್ಲ. ಒಕ್ಕಲಿಗ ಸಂಘದ ಮುಖಂಡರು ನನ್ನನ್ನು ಭೇಟಿ…
ದಾವಣಗೆರೆ:- ಬರ ಪರಿಹಾರ ಕುರಿತು ಕೇಂದ್ರ ಹಾಣಕಾಸು ಸಚಿವರೊಂದಿಗೆ ಚರ್ಚಿಸಲು ನ 23 ರಂದು ತಾವು ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ದೆಹಲಿಗೆ ತೆರಳುತ್ತಿರುವುದಾಗಿ ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚಿತ್ರದುರ್ಗ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಕೃಷಿ ಮತ್ತು ಜಲಾನಯನ ಇಲಾಖೆ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು. ರಾಜ್ಯದ 223 ತಾಲ್ಲೂಕುಗಳಲ್ಲಿ ಬರ ಘೋಷಣೆಯಾಗಿದೆ 18000 ಕೋಟಿಗೂ ಅಧಿಕ ಪರಿಹಾರ ಕೋರಲಾಗಿದೆ .ರಾಜ್ಯದ ನಿರಂತರ ಮನವಿಗಳ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವರು ಭೇಟಿಗೆ ಸಮಯ ನಿಗಧಿ ಪಡಿಸಿದ್ದು ತಾವು ಸಚಿವರಾದ ಕೃಷ್ಣಾ ಬೈರೇಗೌಡ ಮತ್ತು ಪ್ರಿಯಾಂಕಾ ಖರ್ಗೆ ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು. ರೈತರ ಹಿತ ಸಂರಕ್ಷಣೆ ರಾಜ್ಯ ಸರ್ಕಾರದ ಆದ್ಯತೆ ಅದಕ್ಕೆ ನಾವು ಸದಾ ಎಂದು ಚಲುವರಾಯಸ್ವಾಮಿ ಹೇಳಿದರು. ಈ ವರ್ಷ ಕೃಷಿ ಭಾಗ್ಯ ಮರು ಜಾರಿ ಗೊಳಿಸಿದ್ದು 200 ಕೋಟಿ ರೂ ವೆಚ್ಚದಲ್ಲಿ 30000 ಕ್ಕೂ…
ಬೆಂಗಳೂರು:- ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ. ಮುಂದಿನ 48 ಗಂಟೆಯಲ್ಲಿ ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾವೇರಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸಾಧ್ಯತೆ ಇದೆ. ಉಳಿದಂತೆ ಒಣಹವೆ ಇರಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ವ್ಯಾಪಕ ಮಳೆಯಾಗಲಿದ್ದು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ ಭರ್ಜರಿ ಮಳೆಯಾದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.
ರಾಮನಗರ: ಎದುರು ಬಂದ ಕಾರು ತಪ್ಪಿಸಲು ಹೋಗಿ ಹಳ್ಳಕ್ಕೆ ಬಸ್ ನುಗ್ಗಿದ ಘಟನೆ ರಾಮನಗರ ತಾಲೂಕಿನ ಮೇಳೇಹಳ್ಳಿ ಗೇಟ್ ಬಳಿ ಜರುಗಿದೆ. ಮಾಗಡಿಯಿಂದ ರಾಮನಗರಕ್ಕೆ ಬಾರುವಾಗ ಘಟನೆ ಜರುಗಿದೆ. ಬಸ್‌ನಲ್ಲಿದ್ದ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರನ್ನ ಬೇರೆ ಬಸ್‌ನಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ರಾಮನಗರಕ್ಕೆ ತಲುಪಿಸಿದ್ದಾರೆ. ಸ್ಥಳಕ್ಕೆ ರಾಮನಗರ ಕೆಎಸ್‌ಆರ್‌ಟಿಸಿ ಡಿಸಿ ಭೇಟಿ ಪರಿಶೀಲನೆ ಮಾಡಿದ್ದಾರೆ. ಬಸ್ ಹಳ್ಳಕ್ಕೆ ನುಗ್ಗಿದ ಪರಿಣಾಮ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ :- ಕ್ಷಯರೋಗಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಅತಿ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಕೆ ಅವರು ತಿಳಿಸಿದರು. ಅವರು ನ. 21ರ ಮಂಗಳವಾರ ರಾಮನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಚೇರಿ ಹಾಗೂ ರಾಮನಗರ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಕ್ಷಯರೋಗಿಗಳಿಗೆ ಉಚಿತವಾಗಿ ಪೌಷ್ಟಿಕಾಂಶಯುಕ್ತ ಆಹಾರ ಕಿಟ್‌ಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಧಾನ ಮಂತ್ರಿಯವರ ಟಿ.ಬಿ ಮುಕ್ತ ಭಾರತ್ ನಿಕ್ಷಯ್ ಮಿತ್ರ ಯೋಜನೆಯಡಿಯಲ್ಲಿ ಕ್ಷಯರೋಗಿಗಳಿಗೆ ಚಿಕಿತ್ಸೆಯ ಜೊತೆಯಲ್ಲಿ ಆರೋಗ್ಯ ವೃದ್ದಿಸುವಲ್ಲಿ ಪೌಷ್ಟಿಕ ಆಹಾರ ಸೇವನೆ ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಕ್ಷಯರೋಗಿಗೆ ಚಿಕಿತ್ಸಾ ಅವಧಿಯಲ್ಲಿ ಪ್ರತೀ ಮಾಹೆ 500 ರೂಗಳ ಸಹಾಯಧನವನ್ನು ಅವರ ಉಳಿತಾಯ ಖಾತೆಗೆ ರವಾನೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಡಿಎಂಒ ಡಾ. ಶಶಿಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗಂಗಾಧರ್ ಬಿ.ಎಸ್, ರಾಮನಗರ ಜಿಲ್ಲಾ ಭಾರತೀಯ ರೆಡ್ ಕ್ರಾಸ್…
ರಾಮನಗರ:- ರಾಮನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹುಲಿಕೆರೆ ಗುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಆರ್.ಎಸ್. ಬೆಟ್ಟ ಎಕೋ ಎಸ್‌ಟಿಪಿ ಮತ್ತು ಗೋಬರ್ಧನ ಘಟಕ ಹಾಗೂ ಚನ್ನಪಟ್ಟಣ ತಾಲ್ಲೂಕಿನ ವಂದಾರಗುಪ್ಪೆ ಗ್ರಾಮ ಪಂಚಾಯಿತಿಯ ಎಂಆರ್‌ಎಫ್ (ಮಟಿರೀಯಲ್ ರಿಕವರಿ ಫೆಸಿಲಿಟಿ) ಘಟಕ ವೀಕ್ಷಣೆ ಮಾಡಲು 5 ವಿವಿಧ ರಾಜ್ಯಗಳಿಂದ ಹಾಗೂ ರಾಜ್ಯ ಕಚೇರಿಯಿಂದ ಅನುಷ್ಠಾನ ಬೆಂಬಲಿತ ಸಂಸ್ಥೆ (ಐಎಸ್‌ಎ) ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ ಇಂದು ಭೇಟಿ ನೀಡಿ ಇಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಉಪಕಾರ್ಯದರ್ಶಿ ಚಿಕ್ಕಸುಬ್ಬಯ್ಯ, ರಾಜ್ಯ ಕಚೇರಿಯ ಎಚ್‌ಆರ್‌ಡಿ, ಎಸ್‌ಎಸ್‌ಡಬ್ಲ್ಯೂಎಂ ಹಾಗೂ ಇತರೆ ರಾಜ್ಯ ಸಂಯೋಜಕರು, ಕಾರ್ಯಪಾಲಕ ಅಭಿಯಂತರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಸ್ವಚ್ಛ ಭಾರತ್ ಮತ್ತು ಜಲಜೀವನ್ ಯೋಜನೆಯ ಸಿಬ್ಬಂದಿಗಳು ಹಾಗೂ ಜಿಲ್ಲಾ ಸಂಯೋಜಕರು ಉಪಸ್ಥಿತರಿದ್ದರು.
ಜೈಪುರ:- ಕಾಂಗ್ರೆಸ್ ಪಕ್ಷ ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬಂದ್ರೆ ಜಾತಿ ಗಣತಿ ನಡೆಸಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪರಿಚಯಿಸಿರುವ ಅಗ್ನಿಪಥ್ ಯೋಜನೆಯನ್ನು ಟೀಕಿಸಿದರು. ಇದು ದೇಶವನ್ನು ರಕ್ಷಿಸಲು ಬಯಸಿರುವ ಲಕ್ಷಾಂತರ ಯುವಕರ ಕನಸುಗಳನ್ನು ಛಿದ್ರಗೊಳಿಸಿದೆ ಎಂದರು. ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ಕಾಂಗ್ರೆಸ್ ಮೊದಲು ಜಾತಿ ಗಣತಿ ಮಾಡಲಿದೆ. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ರಾಷ್ಟ್ರಮಟ್ಟದಲ್ಲೂ ಜಾತಿ ಗಣತಿ ಮಾಡಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ದೇಶದ ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಜನರು ತಮ್ಮ ಸಂಖ್ಯೆಯನ್ನು ತಿಳಿದುಕೊಳ್ಳಲು ಜಾತಿ ಗಣತಿ ಅಗತ್ಯವಾಗಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಒಬಿಸಿ ಎಂದು ಕರೆದುಕೊಳ್ಳುತ್ತಿದ್ದರು, ಆದರೆ ನಾನು ಜಾತಿ ಗಣತಿಗೆ ಒತ್ತಾಯಿಸಿದ ತಕ್ಷಣ, ಅವರು ದೇಶದಲ್ಲಿ ಒಂದೇ ಜಾತಿ ಇದೆ ಎಂದು ಹೇಳಲು ಪ್ರಾರಂಭಿಸಿದ್ದಾರೆ ಎಂದು ಪ್ರಧಾನಿ ಮೋದಿ ಅವರನ್ನು ಟೀಕಿಸಿದರು.
ಡಂಕಿ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು.. ಶಾರುಖ್ ಖಾನ್ ಹಾಗೂ ರಾಜ್ ಕುಮಾರ್ ಹಿರಾನಿ ಜೋಡಿಯ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾಗಿತ್ತು. ಟೀಸರ್‌ಗೆ ಭರ್ಜರಿ ಪ್ರತಿಕ್ರಿಯೆ ಬಂದಿದೆ. ಇನ್ನೇನೂ ಡಂಕಿ ರಿಲೀಸ್ ಗೆ ದಿನಗಣೆಯಷ್ಟೇ ಬಾಕಿ ಉಳಿದಿದ್ದು, ಚಿತ್ರತಂಡ ಪ್ರಮೋಷನ್ ಅಖಾಡಕ್ಕೆ ಧುಮುಕಿದೆ. ಡಂಕಿ ಸಿನಿಮಾದ ಮೊದಲ ಹಾಡು ಇಂದು ಬಿಡುಗಡೆಯಾಗಿದೆ. ಟೀ ಸೀರಿಸ್ ಯೂಟ್ಯೂಬ್ ನಲ್ಲಿ ಹಾರ್ಡಿ ಹಾಗೂ ಮನುವಿನ ಪ್ರೇಮಗೀತೆ ಅನಾವರಣಗೊಂಡಿದೆ. ಲುಪ್ ಪುಟ್ ಗಯಾ ಎಂಬ ಸಾಹಿತ್ಯದ ಹಾಡಿಗೆ ಶಾರುಖ್ ಖಾನ್ ತಾಪ್ಸಿ ಹೆಜ್ಜೆ ಹಾಕಿದ್ದಾರೆ. ಮೆಲೋಡಿ ಮ್ಯೂಸಿಕ್ ಮಾಂತ್ರಿಕ ಪ್ರೀತಮ್ ಸಂಗೀತ, ಸ್ವಾನಂದ್ ಕಿರ್ಕಿರೆ ಮತ್ತು ಐಪಿ ಸಿಂಗ್ ಬರೆದ ಸಾಹಿತ್ಯದ ರೋಮ್ಯಾಂಟಿಕ್ ಸಿಂಗಿಂಗ್ ಅರಿಜಿತ್ ಸಿಂಗ್ ಅವರ ಭಾವಪೂರ್ಣ ಗಾಯನ ಕೇಳುಗರನ್ನು ಮೋಡಿ ಮಾಡ್ತಿದೆ. ಗಣೇಶ್ ಆಚಾರ್ಯ ಲುಪ್ ಪುಟ್ ಗಯಾ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. https://www.youtube.com/watch?v=9Z79T_o4v8c&ab_channel=T-Series ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್…
ದಿನಕ್ಕೆ ಎರಡು ಬಾರಿಯಾದರೂ ಹಲ್ಲುಜ್ಜುವುದು ಉತ್ತಮ ಎನ್ನುತ್ತಾರೆ ವೈದ್ಯಕೀಯ ತಜ್ಞರು. ಆದ್ದರಿಂದ ಯಾವಾಗಲೂ ಬ್ರಷ್ ಅನ್ನು ಎಚ್ಚರಿಕೆಯಿಂದ ಇರಿಸಿ. ಕೆಲವರು ಟೂತ್ ಬ್ರಷ್ ಗಳನ್ನು ಬಾತ್ ರೂಮಿನಲ್ಲಿ ಇಡುತ್ತಾರೆ. ಇದು ಒಳ್ಳೆಯ ಅಭ್ಯಾಸವಲ್ಲ. ಟೂತ್ ಬ್ರಷ್ ಅನ್ನು ಶೌಚಾಲಯದಲ್ಲಿ ಇಡುವುದರಿಂದ ಹಲವಾರು ತೊಂದರೆಗಳು ಉಂಟಾಗುತ್ತವೆ ಎನ್ನುತ್ತಾರೆ ತಜ್ಞರು. : ಬೆಳಗ್ಗೆ ಮತ್ತು ರಾತ್ರಿ ಹಲ್ಲುಜ್ಜುವುದರಿಂದ ಹಲ್ಲುಗಳು ಗಟ್ಟಿಯಾಗುತ್ತವೆ. ಅಲ್ಲದೆ ಹಲ್ಲುಗಳು ಬಿಳಿಯಾಗಿರುತ್ತವೆ. ಬಾಯಿ ಆರೋಗ್ಯ ಸ್ವಚ್ಚವಾಗಿರುತ್ತದೆ. 1) ಟೂತ್ ಬ್ರಷ್ ಅನ್ನು ಶೌಚಾಲಯದಲ್ಲಿ ಇಡುವುದರಿಂದ ರೋಗಾಣುಗಳ ಅಪಾಯ ಹೆಚ್ಚಾಗುತ್ತದೆ.ಇವೆಲ್ಲವೂ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗುವ ಸಾಧ್ಯತೆಯಿದೆ. 2) ಬಾತ್ರೂಮ್ನಲ್ಲಿ ಬ್ರಷ್ ಅನ್ನು ಇಟ್ಟುಕೊಳ್ಳುವುದರಿಂದ. ಫ್ಲಶಿಂಗ್ನಿಂದ ನೀರಿನ ಹನಿಗಳಿಂದ ಸೂಕ್ಷ್ಮಜೀವಿಗಳು ಬ್ರಶ್ನೊಳಗೆ ಸೇರಿಕೊಳ್ಳುತ್ತವೆ. ನಮಗೆ ತಿಳಿಯದೇ ದೇಹವನ್ನು ಸೇರಿ ರೋಗಗಳನ್ನು ಉಂಟುಮಾಡುತ್ತವೆ. 3) ಬ್ರಷ್ ಅನ್ನು ಬಾತ್ ರೂಂನಿಂದ ಸಾಧ್ಯವಾದಷ್ಟು ದೂರವಿಡುವುದು ಉತ್ತಮ. ಸ್ವಲ್ಪ ಗಾಳಿ ಮತ್ತು ಬಿಸಿಲಿಗೆ ತೆರೆದುಕೊಳ್ಳುವ ಪ್ರದೇಶದಲ್ಲಿ ಇರಿಸಿದರೆ, ಸೂರ್ಯನ ಶಾಖದಿಂದ ಸೂಕ್ಷ್ಮಜೀವಿಗಳು ಸಾಯುತ್ತವೆ. 4) ಬಾತ್ರೂಮ್ನಲ್ಲಿ ಹಾಕಲು ಸಾಧ್ಯವಾಗದಿದ್ದರೆ,…