ಕೋಲಾರ: ಕೋಲಾರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.ಈ ಘಟನೆ ಇಲ್ಲಿಯ ಮಿಲ್ಲತ್ ನಗರದಲ್ಲಿ ನಡೆದಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ ಎಂಬ ಅನುಮಾನ ಮೃತ ಮಹಿಳೆಯ ಕುಟುಂಬದಿಂದ ವ್ಯಕ್ತವಾಗಿದೆ. ಮೃತ ಮಹಿಳೆ ಮಾಹೇನೂರ್ (22) ಎಂದು ಗುರುತಿಸಲಾಗಿದೆ. ಪತಿ ಸಯ್ಯದ್ ಶುಹೇಬ್ ಕೊಲೆ ಮಾಡಿ ಗ್ಯಾಸ್ ಗೀಸರ್ ಲೀಕ್ ನಿಂದ ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಣ, ಜಾಗ ಹಾಗೂ ಬುಲೆಟ್ ಬೈಕ್‍ಗಾಗಿ ಪತ್ನಿಯ ತವರಿನಿಂದ ಹಣ ತರುವಂತೆ ಪೀಡಿಸುತ್ತಿದ್ದ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈತ ಹೆಚ್ಚು ಪೀಡಿಸುತ್ತಿರುವ ಹಿನ್ನೆಲೆಯಲ್ಲಿ ಮೂರು ಬಾರಿ ನ್ಯಾಯ ಪಂಚಾಯ್ತಿ ಮಾಡಿದ್ದೇವೆ. ಹೀಗಾಗಿ ಗಲಾಟೆ ನಡೆಸಿ ಮಹಿಳೆಯ ಹತ್ಯೆ ಮಾಡಲಾಗಿದೆ ಎಂದು ಸಂಬಂಧಿಕರು ಹೇಳಿದ್ದಾರೆ. ಈ ಕುರಿತು ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
Author: AIN Author
ವಿಜಯಪುರ: ಶಾಲೆ ಕಟ್ಟಡದಿಂದ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಆರ್. ಎಂ ಶಾಹಾ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಇಂಡಿ ತಾಲೂಕಿನ ಮಾವಿನಳ್ಳಿ ಗ್ರಾಮದ ಶಿವರಾಜ್ ರೋಡಗಿ (5) ಮೃತ ದುರ್ದೈವಿಯಾಗಿದ್ದು,ಶಿವರಾಜ್ ರೋಡಗಿ ಯು.ಕೆ.ಜಿ ಓದುತ್ತಿದ್ದು, ಬುಧವಾರ ಬೆಳಗ್ಗೆ ಎಂದಿನಂತೆ ಶಾಲೆಗೆ ಬಂದಿದ್ದ. ಮೊದಲ ಮಹಡಿಯಿಂದ ಬರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೆಳಗಿದ್ದ ನೀರಿನ ಫೀಲ್ಟರ್ ಮೇಲೆ ರಭಸವಾಗಿ ಬಿದ್ದ ಪರಿಣಾಮ ಬಾಲಕನ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಾಲಕ ಬಿದ್ದ ವಿಷಯವನ್ನು ಶಾಲೆಯವರು ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಆಸ್ಪತ್ರೆಗೆ ತರುವ ಮೊದಲೇ ಬಾಲಕ ಮೃತಪಟ್ಟಿದ್ದಾನೆ. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಬಾಲಕನ ಮೃತದೇಹವನ್ನು ಆಸ್ಪತ್ರೆಗೆ ತಂದು ಶಾಲಾ ಆಡಳಿತ ಮಂಡಳಿಯವರು ಪರಾರಿಯಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಸುರಕ್ಷಿತ ಕ್ರಮಕೈಗೊಳ್ಳದೆ ಇರುವುದೇ ಬಾಲಕನ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಪ್ರಕರಣ ಮುಚ್ಚಿ ಹಾಕಲು ಶಾಲೆಯವರು ಯತ್ನಿಸುತ್ತಿದ್ದಾರೆ ಎಂದು ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.…
ಮಂಗಳೂರು:- ರಾಹುಲ್ ಗಾಂಧಿಗೂ, ರಾಹುಕಾಲಕ್ಕೂ ವ್ಯತ್ಯಾಸ ಇಲ್ಲ ಎಂದು ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ, ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೂ ರಾಹುಕಾಲಕ್ಕೂ ವ್ಯತ್ಯಾಸ ಇಲ್ಲ. 55 ವರ್ಷಕ್ಕೂ ಹೆಚ್ಚು ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷಕ್ಕೆ ಇತಿಶ್ರೀ ಹಾಡಿದ್ದು ಇದೇ ರಾಹುಲ್ ಗಾಂಧಿ. ಅವರು ಪಕ್ಷದ ಜವಾಬ್ದಾರಿ ಪಡೆದ ಸಂದರ್ಭದಿಂದ ಕಾಂಗ್ರೆಸ್ ಗೆ ರಾಹುಕಾಲ ಶುರುವಾಗಿದೆ’ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಅವರು ‘ಅಪಶಕುನ’ ಎಂದು ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ‘ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಅಂತಿಮ ಪಂದ್ಯದಲ್ಲಿ ಕ್ರೀಡಾ ಮನೋಭಾವದಿಂದ ಪ್ರಧಾನಿ ಅವರು ಭಾಗವಹಿಸಿದ್ದರು.ಅದಕ್ಕೂ ಪುಣ್ಯಾತ್ಮ ರಾಹುಲ್ ಗಾಂಧಿ, ‘ಮೋದಿ ಬಂದಿದ್ದೇ ಅಪಶಕುನ’ ಎಂದು ಹೇಳಿದ್ದಾರೆ’ ಎಂದರು. ‘ನಾವು ಮಂಗಳ ಕಾರ್ಯ ಶುರುಮಾಡಲು ಒಳ್ಳೆಯ ಕಾಲವನ್ನು ನೋಡುತ್ತೇವೆ. ಯಾರೂ ರಾಹು ಕಾಲದಲ್ಲಿ ಶುಭ ಕೆಲಸ ಮಾಡಲು ಬಯಸುವುದಿಲ್ಲ’ ಎಂದು ಅವರು ವ್ಯಂಗ್ಯವಾಗಿ ಹೇಳಿದರು. ನಾನು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಇರಬಹುದು.…
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಕಮೀಷನರೇಟ್ ವತಿಯಿಂದ ಅವಳಿನಗರದಲ್ಲಿ ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಈಗಾಗಲೇ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಓಸಿ ಮಟ್ಕಾ, ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ಪ್ರಕರಣಗಳನ್ನು ದಾಖಲು ಮಾಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ. ಇವುಗಳಲ್ಲದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ರೌಡಿಶೀಟರ್ ಮನೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಅನಿರೀಕ್ಷಿತ ದಾಳಿ ನಡೆಸುವ ಮೂಲಕ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, ಉತ್ತರ, ದಕ್ಷಿಣ ಹಾಗೂ ಧಾರವಾಡ ಉಪವಿಭಾಗಗಳ ವ್ಯಾಪ್ತಿಯಲ್ಲಿ ಒಟ್ಟು 172 ರೌಡಿಶೀಟರ್ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದು, ಅಪರಾಧ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದೆ. ದಾಳಿ ವೇಳೆ ಬೆಂಡಿಗೇರಿ ಪೊಲೀಸ್ ಠಾಣೆಯ ರೌಡಿಶೀಟರಾದ ಷಣ್ಮುಗ ರವೀಂದ್ರ ಗುಡಿಹಾಳ ಎಂಬುವವನ ಮನೆಯಲ್ಲಿ ಮಾರಕಾಸ್ತ್ರಗಳು ದೊರೆತಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ…
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಅಧೀನದಲ್ಲಿರುವ ವಿವಿಧ ಆಸ್ಪತ್ರೆಯಲ್ಲಿ ಖಾಲಿಯಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿ ಹುದ್ದೆಯ ಸಂದರ್ಶನಕ್ಕೆ ನಗರದ ಚಿಟಗುಪ್ಪಿ ಆಸ್ಪತ್ರೆಗೆ ಬಂದ ಅಭ್ಯರ್ಥಿಗಳಿಗೆ ನಿರಾಸೆ ಕಾದಿತ್ತು. ಬುಧವಾರ ನಡೆಯಬೇಕಿದ್ದ ಸಂದರ್ಶನ ನ. 27, 28ಕ್ಕೆ ಮುದೂಡಿದ್ದು ಅವರ ಆಕ್ರೋಶಕ್ಕೆ ಕಾರಣವಾಯಿತು. ಪ್ರಸೂತಿ ಹಾಗೂ ಸ್ತ್ರೀರೋಗ ವೈದ್ಯರು, ಎಂಬಿಬಿಎಸ್ ವೈದ್ಯರು, ಸಾಮಾನ್ಯ ವೈದ್ಯರು, ಅರವಳಿಕೆ ತಜ್ಞರು, ಅರೆ ವೈದ್ಯಕೀಯ ಸಿಬ್ಬಂದಿ, ಎಲ್.ಡಿ.ಸಿ., ಡೇಸ್ಟರ್, ವಾರ್ಡ್’ಬಾಯ್, ಆಯಾ ಮತ್ತು ಆ್ಯಂಬೂಲೆನ್ಸ್ ವಾಹನ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಮಾಸಿಕ ಗೌರವಧನ ಆಧಾರದ ಮೇಲೆ 11 ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿ, ನ. 22ರಂದು ಸಂದರ್ಶನ ನಿಗದಿಪಸಲಾಗಿತ್ತು. ಅರ್ಜಿ ಸಲ್ಲಿಸಿದ್ದ ಮಹಾರಾಷ್ಟ್ರದ ಪುಣೆ, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ, ಹಾವೇರಿ, ಉತ್ತರಕನ್ನಡ, ಬೆಂಗಳೂರು ಭಾಗದ 70ಕ್ಕೂ ಹೆಚ್ಚು ಅಭ್ಯರ್ಥಿಗಳು ಬಂದಿದ್ದರು. ಆಸ್ಪತ್ರೆ ಮುಂಭಾಗ ‘ಕಾರಣಾಂತರಗಳಿಂದ ಸಂದರ್ಶನ ಮುಂದೂಡಲಾಗಿದೆ’ ಎನ್ನುವ ನೋಟಿಸ್ ನೋಡಿ ಅಸಮಾಧಾನ ವ್ಯಕ್ತಪಡಿಸಿದರು. ‘ಟೆಕ್ನಿಷಿಯನ್ ಹುದ್ದೆಗೆ ಆಯ್ಕೆ…
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ಗೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆ ಡಿ.ಕೆ.ಶಿವಕುಮಾರ್, ಸಿಬಿಐ ವಕೀಲರ ಮನವಿ ಮೇರೆಗೆ ಮುಂದೂಡಲಾಗಿದೆ. ವಾದ ಮಂಡನೆಗಾಗಿ ವಿಚಾರಣೆಯನ್ನು ನ.29ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ. ಸಿಬಿಐ ತನಿಖೆಗೆ ಸರ್ಕಾರದ ಅನುಮತಿಯನ್ನು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಅನುಮತಿಯನ್ನು ಹೈ ಕೋರ್ಟ್ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಹಾಗಾಗಿ ಡಿ.ಕೆ.ಶಿವಕುಮಾರ್ ದ್ವಿಸದಸ್ಯ ಪೀಠಕ್ಕೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿ, ಹೈ ಕೋರ್ಟ್ ದ್ವಿಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಅದನ್ನು ಪ್ರಶ್ನಿಸಿ, ಸಿಬಿಐ ಸುಪ್ರಿಂಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣವನ್ನು ಹೈ ಕೋರ್ಟ್ ನಕ್ಕೇ ಇತ್ಯರ್ಥ ಪಡಿಸಿಕೊಳ್ಳುವಂತೆ ಸೂಚಿಸಿದ ಸುಪ್ರಿಂಕೋರ್ಟ್ 2 ವಾರಗಳ ಗಡುವು ನೀಡಿತ್ತು.
ವಿಜಯಪುರ: ರಾಜ್ಯದಲ್ಲಿ ಜಾತಿ ಗಣತಿ ವರದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಾವಿರಾರು ಕೋಟಿ ಖರ್ಚು ಮಾಡಿ ಈಗಾಗಲೇ ಜಾತಿ ಗಣತಿಯನ್ನು ಸಿದ್ಧ ಮಾಡಲಾಗಿದೆ. ಸಿಎಂ ಸಿದ್ಧರಾಮಯ್ಯ ಜಾತಿ ಗಣತಿ ವರದಿಯನ್ನು ಸ್ವೀಕಾರ ಮಾಡಲಿದ್ದಾರೆ ಎನ್ನುವ ಸೂಚನೆ ಸಿಕ್ಕ ಬೆನ್ನಲ್ಲಿಯೇ ಜಾತಿ ಗಣತಿಯ ಮೂಲ ಪ್ರತಿ ಅಥವಾ ಹಸ್ತಪ್ರತಿ ನಾಪತ್ತೆಯಾಗಿದೆ ಎನ್ನುವ ಮಾಹಿತಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಸಚಿವ ಹೆಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ನಾಪತ್ತೆ ಆಗಿಲ್ಲ, ಪತ್ರಿಕೆಗಳಲ್ಲಿ ಹಾಗೇ ವರದಿ ಬಂದಿದೆ. ಇಲಾಖೆ ಅಥವಾ ಆಯೋಗ ಈ ಬಗ್ಗೆ ಕನ್ಪರ್ಮ್ ಮಾಡಿಲ್ಲ. ಹೀಗಾಗಿ ವರದಿ ಸರಿ ಅಲ್ಲ ಎಂದು ಹೇಳಿದರು. ಜಾತಿ ಗಣತಿಗೆ ಒಕ್ಕಲಿಗರು, ಲಿಂಗಾಯತರಿಂದ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಆಯೋಗ ಯಾವುದೆ ರೀತಿಯ ವರದಿ ಕೊಟ್ಟಿಲ್ಲ. ಕ್ಯಾಬಿನೆಟ್ ಸಮಿತಿಗೆ ಬಂದಾಗ ಚರ್ಚೆ ಆಗುತ್ತದೆ. ಅಲ್ಲಿವರೆಗೆ ವಾದ-ವಿವಾದ, ಚರ್ಚೆಗಳ ಅಗತ್ಯ ಇಲ್ಲ ಎಂದ ಸಚಿವ ಹೆಚ್ ಕೆ ಪಾಟೀಲ್. ವಿರೋಧದ ಬಗ್ಗೆ ಈಗ ಮಾತನಾಡಲ್ಲ, ಕ್ಯಾಬಿನೆಟ್‌ನಲ್ಲಿ ಮಾತನಾಡ್ತೇನೆ.…
ಮಂಡ್ಯ: ಮೇಲುಕೋಟೆಯ ತೊಟ್ಟಿಲುಮಡು ಜಾತ್ರೆಯ ವೇಳೆ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ಜನ ಭಕ್ತರು ಗಾಯಗೊಂಡು, ಸುಮಾರು 17 ಮಂದಿ ಅಸ್ವಸ್ಥರಾಗಿದ್ದಾರೆ. ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವದ ವೇಳೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದಾರೆ. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಕರ್ಪೂರದ ಹೊಗೆಯಿಂದ ಹೆಜ್ಜೇನು ದಾಳಿ ನಡೆಸಿವೆ. ಇದರಿಂದ ಭಕ್ತರು ದಿಕ್ಕಾಪಾಲಾಗಿ ಓಡಿದ್ದಾರೆ. ಜೇನು ದಾಳಿಗೆ ಒಳಗಾದವರನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ 17 ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 2 ದಿನ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಈ ಸಂಬಂಧ ಮಾತನಾಡಿದ ಅವರು,ದಕ್ಷಿಣ ಒಳನಾಡಿನ ಮಲೆನಾಡು, ಮಧ್ಯ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದ ಅಲ್ಲಲ್ಲಿ ಇಂದು ಮತ್ತು ನಾಳೆ ಮಳೆಯಾಗಬಹುದು ಎಂದು ಭಾರತೀಯ ಹಮಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಪ್ರಾದೇಶಿಕ ಕೇಂದ್ರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ಬಹಳಷ್ಟು ಇವೆ. ಆದರೆ ಕರಾವಳಿಯ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳ ಒಳಗಡೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಕಂಡು ಬರಲಿದೆ. ಅದೇ ರೀತಿ ಕರಾವಳಿ ಭಾಗದಲ್ಲೂ ಒಣ ಹವೆ ಇರಲಿದೆ. ಆದರೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಮುನ್ಸೂಚನೆ…
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ JDS ಮುಖಂಡರು ದೂರು ನೀಡಿದ್ದಾರೆ. JDS ಕಚೇರಿ, ಕುಮಾರಸ್ವಾಮಿ ನಿವಾಸದ ಬಳಿ ಪೋಸ್ಟರ್ ಅಂಟಿಸಿದ್ದಾನೆ ಎಂದು ಎಸ್.ಮನೋಹರ್ ವಿರುದ್ಧ ಮಾಜಿ ಎಂಎಲ್ಸಿ ರಮೇಶ್ ಗೌಡ ವಾಗ್ದಾಳಿ ಮಾಡಿದ್ದಾರೆ. https://ainlivenews.com/give-collection-corporation-board-power-bjp-poster-war-against-congress/ ಪೋಸ್ಟರ್ನಲ್ಲಿ ಏನಿದೆ? ಕರೆಂಟ್ ಕಳ್ಳ ಖ್ಯಾತಿಯ ಹೆಚ್ಡಿಕೆ ನಿರ್ಮಾಣದ ಚಿತ್ರ “ಪೆನ್ ಡ್ರೈವ್ ಬ್ರದರ್”. ಪ್ರಾಮಾಣಿಕ ಕರೆಂಟ್ ಕಳ್ಳ ಖ್ಯಾತಿಯ ನಿರ್ದೇಶನ. ಬರೀ ಟೀಸರ್ಗೆ ಇಷ್ಟೊಂದು ಟೆನ್ಶನ್ ಆದರೆ ಹೇಗೆ ಸಿನಿಮಾ ಇನ್ನೂ ಬಾಕಿಯಿದೆ. ರಾಧಾ, ಮಾರ, ಬ್ಲೂ ಬಾಯ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆ. ಚಿತ್ರದ ನಿರ್ಮಾಣದ ವೆಚ್ಚ 68000 ಎಂದು ಪೋಸ್ಟರ್ನಲ್ಲಿ ವ್ಯಂಗ್ಯವಾಡಲಾಗಿದೆ. ಹೆಚ್ಡಿ ಕುಮಾರಸ್ವಾಮಿಯವರ ಯಾವ ಹೇಳಿಕೆಗೆ ಆಕ್ರೋಶ? ಇನ್ನು ಇತ್ತೀಚೆಗೆ ತಮ್ಮ ವಿರುದ್ಧ ನಡೆಯುತ್ತಿರುವ ಪೋಸ್ಟರ್ ಅಭಿಯಾನಕ್ಕೆ ಡಿ.ಕೆ. ಶಿವಕುಮಾರ್ ಅವರೇ ಕಾರಣ ಎಂದು ಹೆಚ್ಡಿ ಕುಮಾರಸ್ವಾಮಿಯವರು ಆರೋಪಿಸಿದ್ದರು. ಈ ವೇಳೆ “ನನ್ನ ವಿರುದ್ಧ ಪೋಸ್ಟರ್ ಅಭಿಯಾನ…