ಬೆಂಗಳೂರು: ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://ainlivenews.com/bbmp-is-ready-to-implement-strict-rules-in-the-city/ ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಮೂಲಪ್ರತಿ ಕಾಣೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು. ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸುತ್ತಾರೆ ಎಂದು ತಿಳಿಸಿದರು. ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದರು ಎಂದರು.
Author: AIN Author
ಬೆಂಗಳೂರು: ಬೆಂಗಳೂರಿನಲ್ಲಿ ಬೆಸ್ಕಾಂ ದುರಂತಕ್ಕೆ ತಾಯಿ, ಮಗು ಬಲಿಯಾಗಿದ್ದಕ್ಕೆ ಬಿಬಿಎಂಪಿ ಎಚ್ಚೆತ್ತುಕೊಂಡಿದ್ದು ನಗರದಲ್ಲಿ ಕಠಿಣ ರೂಲ್ಸ್ ಜಾರಿಗೆ ಪಾಲಿಕೆ ಮುಂದಾಗಿದೆ. https://ainlivenews.com/bengaluru-indira-canteen-is-not-getting-proper-food-if-you-ask-the-officials-are-shy/ ನಗರಾದ್ಯಂತ ಅನಧಿಕೃತ ಕೇಬಲ್ಗಳ ಕಡಿವಾಣಕ್ಕೆ ಬಿಬಿಎಂಪಿ ಸಜ್ಜಾಗಿದೆ. ಇನ್ಮುಂದೆ ಯಾರೂ ಕೂಡ ಎಲ್ಲೆಂದರಲ್ಲಿ ರಸ್ತೆ ಅಗೆಯುವಂತಿಲ್ಲ. ಬೆಂಗಳೂರಿನಲ್ಲಿ ವಾರ್ಡ್ ರಸ್ತೆಗೆ ಸಂಬಂಧಿಸಿದಂತೆ ಒಟ್ಟು 13,800 ಕಿಲೋ ಮೀಟರ್ನಷ್ಟು ರಸ್ತೆಗಳು ಇವೆ. ಇನ್ಮುಂದೆ ಒಂದು ವಾರ್ಡ್ ಗೆ ಒಬ್ಬನೇ ಗುತ್ತಿಗೆದಾರ. ಯಾವುದೇ ಕೇಬಲ್ ಅಳವಡಿಕೆ ಮಾಡಬೇಕೆಂದರೂ ಗುತ್ತಿಗೆದಾರರು ಹೊಣೆಯಾಗಿರುತ್ತಾರೆ. ನಗರದಲ್ಲಿ ಇರುವ ಎಲ್ಲಾ ಒಎಫ್ಸಿ ಸೇರಿದಂತೆ ಎಲ್ಲಾ ರೀತಿಯ ಕೇಬಲ್ ಗಳು ಡಕ್ಟ್ ನಲ್ಲಿ ಅಳವಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ನಗರದಲ್ಲಿ ಎಲ್ಲಾ ರೀತಿಯ ಕೇಬಲ್ ಅಳವಡಿಕೆಗೆ ಡಕ್ಟ್ ನಿರ್ಮಾಣ ಮಾಡಲು ಕೆಲವೇ ದಿನಗಳಲ್ಲಿ ಟೆಂಡರ್ ಕರೆಯಲು ನಿರ್ಧಾರ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.
ಜೈಪುರ: ರಾಜ್ಯ ವಿಧಾನಸಭೆ ಚುನಾವಣೆ (Rajasthan Assembly Elections) ಹಿನ್ನೆಲೆ ಮತದಾರರನ್ನು ಸೆಳೆಯಲು ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆ (Manifesto) ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ರಾಜಸ್ಥಾನದ ಜನರಿಗೆ 7 ಗ್ಯಾರಂಟಿ (Guarantee) ಘೋಷಿಸಿದ್ದು ಜೊತೆಗೆ ಜಾತಿ ಸಮೀಕ್ಷೆ ನಡೆಸಿ ಬಿಡುಗಡೆ ಮಾಡುವ ಭರವಸೆ ನೀಡಲಾಗಿದೆ. ಕರ್ನಾಟಕದ ಮಾದರಿಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ವಾರ್ಷಿಕ 10,000 ರೂ. ನೀಡುವುದಾಗಿ ಕಾಂಗ್ರೆಸ್ ಹೇಳಿದೆ. ಗೊಧನ್ ಯೋಜನೆಯಡಿ ಸರ್ಕಾರವು ಹಸುವಿನ ಸಗಣಿ ಪ್ರತಿ ಕೆಜಿಗೆ 2 ರೂ.ಯಲ್ಲಿ ಖರೀದಿ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್/ಟ್ಯಾಬ್ಲೆಟ್ ವಿತರಿಸಲಾಗುವುದು ಎಂದು ಹೇಳಿದೆ. ಚಿರಂಜೀವಿ ವಿಪತ್ತು ಪರಿಹಾರ ವಿಮೆ ಯೋಜನೆಯಡಿ ಪ್ರತಿಯೊಬ್ಬರಿಗೂ 15 ಲಕ್ಷ ರೂ. ವಿಮೆ ನೀಡಲಾಗುವುದು, https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ 500 ರೂ.ಯಲ್ಲಿ ಗ್ಯಾಸ್ ಸಿಲಿಂಡರ್ ವಿತರಣೆ, ರಾಜ್ಯದ ಪ್ರತಿಯೊಂದು ಮಗುವಿಗೂ ಇಂಗ್ಲಿಷ್ ಶಿಕ್ಷಣ ನೀಡಲಾಗುವುದು, ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವ…
ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಸೌತ್ ಮತ್ತು ಬಾಲಿವುಡ್ ಇಂಡಸ್ಟ್ರಿಯಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅನಿಮಲ್ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ ಹಿಂದಿ ನಟ ರಣ್‌ಬೀರ್ ಕಪೂರ್‌ಗೆ (Ranbir Kapoor) ರಶ್ಮಿಕಾ ಕನ್ನಡದ ಪಾಠ ಮಾಡಿದ್ದಾರೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಅನಿಮಲ್’ ಚಿತ್ರದ ಟ್ರೈಲರ್, ಸಾಂಗ್ಸ್ ಎಲ್ಲವೂ ಮೋಡಿ ಮಾಡ್ತಿವೆ. ಅದರಲ್ಲೂ ರಶ್ಮಿಕಾ-ರಣ್‌ಬೀರ್ ಲಿಪ್‌ಲಾಕ್ ತುಣುಕು ಸಖತ್ ಸದ್ದು ಮಾಡ್ತಿದೆ. ಈ ಬೆನ್ನಲ್ಲೇ ಇದೀಗ ರಶ್ಮಿಕಾ ನಡೆ ಅನೇಕರಿಗೆ ಇಷ್ಟವಾಗಿದೆ. ರಿಯಾಲಿಟಿ ಶೋವೊಂದಕ್ಕೆ ಗೆಸ್ಟ್ ಆಗಿ ರಣ್‌ಬೀರ್-ರಶ್ಮಿಕಾ ಎಂಟ್ರಿ ಕೊಡುವಾಗ ಪಾಪರಾಜಿ ಎದುರಿಗೆ ಸಿಕ್ಕಿದ್ದಾರೆ. ಏನು ನಮ್ಮ ಡಾಕ್ಯುಮೆಂಟರಿ ಮಾಡುತ್ತಾ ಇದ್ದೀರಾ? ಎಂದು ರಣ್‌ಬೀರ್ ಹೇಳಿದ್ದಾರೆ. ಬಳಿಕ ಏನಾದ್ರು ಕನ್ನಡದಲ್ಲಿ ಮಾತನಾಡಿ ಎಂದು ರಶ್ಮಿಕಾಗೆ ಪಾಪರಾಜಿ ಹೇಳಿದ್ದಾರೆ ಅದಕ್ಕೆ ಎಲ್ಲರಿಗೂ ನಮಸ್ಕಾರ ಎಂದಿದ್ದಾರೆ. ಬಳಿಕ ಹೇಗಿದ್ದೀರಾ? ಎಲ್ಲರಿಗೂ ನಮಸ್ಕಾರ ಎಂದು ರಣ್‌ಬೀರ್‌ಗೆ ರಶ್ಮಿಕಾ ಕನ್ನಡ ಕಲಿಸಿ ಕೊಟ್ಟಿದ್ದಾರೆ. ರಣ್‌ಬೀರ್ ಕೂಡ ಕನ್ನಡದಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು: ರಾಜ್ಯದ ಜನಸಾಮಾನ್ಯರ ರಕ್ತ ಹೀನತೆಯನ್ನ ತೊಡೆದು ಹಾಕಲು ನಮ್ಮ ಆರೋಗ್ಯ ಇಲಾಖೆ ಕಠಿಬದ್ದವಾಗಿದ್ದು ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ನಿರ್ಮಾಣದತ್ತ ನಮ್ಮ ಸರ್ಕಾರ ಸದಾ ಸಿದ್ದವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಸಿಎಂ ಸಿದ್ದರಾಮಯ್ಯ ಅವರು ವಿಶೇಷ ಕಾಳಜಿ ವಹಿಸಿ ₹185.74 ಕೋಟಿ ಅನುದಾನ ಒದಗಿಸಿದ್ದಾರೆ. ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ನಿವಾರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ‘ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕʼ ಯೋಜನೆಗೆ ಇಂದು ಚಾಲನೆ ದೊರತಿದೆ. 2025 ರೊಳಗೆ ರಕ್ತಹೀನತೆ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಗುರಿ. ಇದೇ ವರ್ಷದ ಡಿಸೆಂಬರ್ ನಿಂದಲೇ ಶಾಲಾ ಮಕ್ಕಳಿಗೆ ತಪಾಸಣೆ ಆರಂಭಿಸಲಿದ್ದೇವೆ. ಪೌಷ್ಠಿಕ ಆರೋಗ್ಯ ಸಮಾಜ ನಿರ್ಮಾಣದತ್ತ ಹೆಚ್ಚು ಗಮನ ಹರಿಸಲಿದ್ಧೇವೆ ಎಂದರು. ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ನಗರಾಭಿವೃದ್ಧಿ ಮತ್ತು ಪಟ್ಟಣ…
ಬೆಂಗಳೂರು: ಇನ್ಮುಂದೆ ಗಾಡಿ ಟಚ್ ಆಯ್ತು ರಸ್ತೆಯಲ್ಲಿ ಗಲಾಟೆ ಮಾಡೋ ಮುನ್ನ ಸ್ವಲ್ಪ ಹುಷಾರಾಗಿರಿ. ಯಾಕಂದ್ರೆ ಯಾರು ಹೇಗೆ ಬೆಹೆವ್ ಮಾಡ್ತಾರೋ ಆ ದೇವರಿಗೆ ಗೊತ್ತು. ಹೀಗೆ ಎರಡು ಬೈಕ್ ಗಳ ನಡುವೆ ನಡೆದ ಸಣ್ಣ ಅಪಘಾತ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಹಾಗಾದ್ರೆ ಆ ಬೈಕ್ ಸವಾರರ ನಡುವೆ ಏನಾಯ್ತು ಅಂತೀರಾ ಈ ಸ್ಟೋರಿ ನೋಡಿ… ಹೌದು… ಸಿಲಿಕಾನ್ ಸಿಟಿ ರಸ್ತೆಗಳಲ್ಲಿ ಸಣ್ಣ ಪುಟ್ಟ ಆಕ್ಸಿಡೆಂಟ್ ಗಳು ಸರ್ವೇ ಸಾಮಾನ್ಯವಾಗಿವೆ. ಬೈಕ್, ಕಾರು, ಆಟೋಗಳು ಟಚ್ ಮಾಡ್ಕೊಂಡು ಸವಾರರು ರಸ್ತೆಯಲ್ಲೆ ಗಲಾಟೆ ಮಾಡ್ಕೊತಾರೆ. ಇದೇ ರೀತಿ ಎರಡು ಬೈಕ್ ಗಳ ನಡುವೆ ಸಣ್ಣ ಅಪಘಾತವಾಗಿದ್ದು, ಇಬ್ಬರು ಸವಾರರು ರಸ್ತೆಯಲ್ಲಿ ಗಲಾಟೆ ಮಾಡಿಕೊಂಡಿದ್ರು. ಅದ್ರೆ ಇಬ್ಬರ ನಡುವಿನ ಗಲಾಟೆ ತಾರಕಕ್ಕೇರಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಹೀಗೆ ಬೈಕ್ ಗಲಾಟೆಯಲ್ಲಿ ಕೊಲೆಯಾದ ವ್ಯಕ್ತಿ ಈತನೇ ನೋಡಿ ಹೆಸರು.. ಕೃಷ್ಣಪ್ಪ… ನಗರದ ವೈಯಾಲಿ ಕಾವಲ್ ನಿವಾಸಿಯಾದ ಕೃಷ್ಣಪ್ಪ ಬಿಪಿ ಮತ್ತು ಶುಗರ್ ನಿಂದ ಬಳಲುತ್ತಿದ್ರು. ಮನೆಯಲ್ಲಿದ್ದ…
ಮೈಸೂರು.:- ಎಸ್‌ಸಿಪಿ/ಟಿಎಸ್‌ಪಿ ಅನುದಾನ ಅರ್ಹ ಫಲಾನುಭವಿಗಳಿಗೆ ಸಂಪೂರ್ಣವಾಗಿ ಬಳಕೆ ಆಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಎಸ್.ಸಿ.ಪಿ/ಟಿ.ಎಸ್.ಪಿ ಅನುಧಾನ ಬಳಕೆ ಕುರಿತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿದೆಯೇ ಎಂಬುದನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ರ‍್ಯಾಂಡಮ್ ಆಗಿ ಪರಿಶೀಲಿಸಿ ವರದಿ ನೀಡಬೇಕು ಎಂದರು. ಹಾಸ್ಟೆಲ್‌ಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ನೀಡುತ್ತಿರುವ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಬೇಕು. ಎಸ್‌ಸಿಪಿ/ಟಿಎಸ್‌ಪಿ ಅಡಿ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟವನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪರಿಶೀಲಿಸಬೇಕು ಎಂದು ತಿಳಿಸಿದರು. ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗುವುದು ಎಂದರು. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಆಶಾದ್ ಉರ್ ರೆಹಮಾನ್…
ಚಿಕ್ಕಬಳ್ಳಾಪುರ: ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿಗಳ (Congress Guarantee) ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪಕ್ಷದ ಅಭ್ಯರ್ಥಿಯೊಬ್ಬರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ತೆಲಂಗಾಣದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಪ್ರತಿಭಟನೆ ನಡೆಸಿದ್ದಾರೆ. ತೆಲಂಗಾಣದಲ್ಲಿ (Telangana) ಕಾಂಗ್ರೆಸ್ ಪರವಾಗಿ ಶಾಸಕ ಪ್ರದೀಪ್ ಈಶ್ವರ್ ಚುನಾವಣಾ ಪ್ರಚಾರದಲ್ಲಿದ್ದರು. ಇದರ ನಡುವೆಯೇ ತೆಲಂಗಾಣ ಸಚಿವ ಪ್ರತಾಪ್ ರೆಡ್ಡಿ ಸ್ವಗ್ರಾಮದ ವೆಲುಪುರದಲ್ಲಿ ಅಂಬೇಡ್ಕರ್ ಪ್ರತಿಮೆ ಎದುರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಪ್ರದೀಪ್ ಈಶ್ವರ್ ಪ್ರತಿಭಟನೆ ನಡೆಸುತ್ತಿದ್ದಾರೆ. https://ainlivenews.com/young-woman-sexually-molested-in-our-metro-fellow-passengers-who-did-not-come-to-the-rescue/ ಶಾಸಕ ಪ್ರದೀಪ್ ಈಶ್ವರ್, ಬಾಲಕೊಂಡ ಕ್ಷೇತ್ರದಲ್ಲಿ ಚುನಾವಣಾ ಉಸ್ತುವಾರಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುತ್ಯಾಲ ಸುನೀಲ್ ಕುಮಾರ್ ಪರ ಪ್ರಚಾರ ನಡೆಸುತ್ತಿದ್ದಾರೆ. ಇದೇ ಕ್ಷೇತ್ರದ ಕೆಸಿಆರ್ ಪಕ್ಷದ ಅಭ್ಯರ್ಥಿ ಪ್ರತಾಪ್ ರೆಡ್ಡಿ ಅವರು ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡಿದ್ದರು. ಕರ್ನಾಟಕದಲ್ಲೇ ಕಾಂಗ್ರೆಸ್ ಗ್ಯಾರಂಟಿಗಳು ಅನುಷ್ಟಾನ ಆಗಿಲ್ಲ ಎಂದು ಪ್ರಚಾರ ಮಾಡಿದ್ದರು. ಹೀಗಾಗಿ ಸಚಿವ ಪ್ರತಾಪ್ ರೆಡ್ಡಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. ರೆಡ್ಡಿ ವಿರುದ್ಧ…
ಬೆಂಗಳೂರು: ರಾಜ್ಯದಲ್ಲಿ ಜಾತಿ ಜನಗಣತಿ (Caste Census) ವರದಿ ಸಲ್ಲಿಕೆಗೆ ದಿನಾಂಕ ನಿಗದಿಯಾಗಿದೆ. ಇದೇ ಶುಕ್ರವಾರ ಹಿಂದುಳಿದ ವರ್ಗಗಳ ಆಯೋಗ ಜಾತಿ ಜನಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಈ ಜಾತಿ ಜನಗಣತಿ ವರದಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ. ಇದು ಮುಂದಿನ ಲೋಕಸಭೆ ಚುನಾವಣೆ ಮೇಲೆಯೂ ಪರಿಣಾಮ ಬೀರಲಿದೆ ಎಂದು ರಾಜ್ಯ ಗುಪ್ತಚರ ಇಲಾಖೆ (Intelligence Bureau) ಎಚ್ಚರಿಸಿದೆ https://ainlivenews.com/re-examination-for-545-psi-posts-on-december-23/ ಇದರ ಸಾಧಕ ಭಾದಕಗಳ ವಿವರಗಳನ್ನು ಗುಪ್ತಚರ ಇಲಾಖೆ ಸಿಎಂಗೆ ವರದಿ ಸಲ್ಲಿಸಿದೆ. ಇದರಲ್ಲಿ ವರದಿಗೆ ಪ್ರಬಲ ಲಿಂಗಾಯತ (Lingayat), ಒಕ್ಕಲಿಗ (Vokkaliga) ಸಮುದಾಯಗಳಿಂದ ತೀವ್ರ ವಿರೋಧ ಬರಲಿದೆ. ಪ್ರತಿಭಟನೆಗಳು ತೀವ್ರಗೊಳ್ಳಲಿದ್ದು, ಇದಕ್ಕೆ ಕೆಲ ಕಾಂಗ್ರೆಸ್ (Congress) ಮುಖಂಡರೂ ಕೈಜೋಡಿಸಬಹುದು. ಪಕ್ಷದೊಳಗೂ ಬಿರುಕು ಸೃಷ್ಟಿಯಾಗುವ ಸಂಭವ ಇದೆ ಎಂದು ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಸಮುದಾಯವಾರು ಭಿನ್ನಾಭಿಪ್ರಾಯ, ಸಂಘರ್ಷಕ್ಕೂ ಕಾರಣವಾಗಬಹುದು. ಒಬಿಸಿ ವರ್ಗಗಳು ಕಾಂಗ್ರೆಸ್ ಕಡೆ ಮುಖ ಮಾಡಬಹುದು. ಆದರೆ ಲಿಂಗಾಯತ ಸಮುದಾಯ ವಿಮುಖರಾಗಬಹುದು. ಒಕ್ಕಲಿಗ ಸಮುದಾಯ ಕೂಡ ಧ್ರುವೀಕರಣ ಆಗಬಹುದು.…
ಬೆಂಗಳೂರು: ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ಗಳ ಮತ್ತೊಂದು ಅವ್ಯವಸ್ಥೆಯಿದು. ಅರ್ಧ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಗಳಲ್ಲಿ (Indira Canteen) ಇಡ್ಲಿ ಸೇರಿ ಕೆಲ ಉಪಹಾರವನ್ನ ನಿಲ್ಲಿಸಲಾಗಿದೆ. ಕೆ.ಆರ್ ಸಮೀಪದ ಎಸ್ ಪಿ ರಸ್ತೆಯಲ್ಲಿರೋ ಇಂದಿರಾ ಕಿಚನ್ ನಲ್ಲಿ ಇಡ್ಲಿ (Idli) ಸೇರಿ ಕೆಲ ಉಪಹಾವನ್ನ ತಯಾರಿಸುವ ಯಂತ್ರೋಪಕರಣಗಳು ಹಳೆಯದಾಗಿ, ಹಾಳಾಗಿವೆ. ಹೀಗಾಗಿ ಇಂದಿರಾ ಕ್ಯಾಂಟೀನ್ ಗಳಿಗೆ ಇಡ್ಲಿ ಸಪ್ಲೈ ಆಗ್ತಿಲ್ಲ. ಇನ್ನೂ ಕೆಲ ಇಂದಿರಾ ಕ್ಯಾಂಟೀನ್ ಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಊಟ ಸಪ್ಲೈ ಆಗ್ತಿದೆ. ಇತ್ತ ವಿಶ್ವೇಶ್ವಪುರಂ ವಾರ್ಡ್ 174 ರ ಇಂದಿರಾ ಕ್ಯಾಂಟೀನ್ ನಲ್ಲಿ ಇಡ್ಲಿ ಕೇಳಿದ ಗ್ರಾಹಕರ ಮೇಲೆ ಅಲ್ಲಿನ ಸಿಬ್ಬಂದಿಯೊಬ್ಬರು ದರ್ಪ ಮೆರೆದಿದ್ದಾರೆ. ಇಡ್ಲಿ ಸಿಗಲ್ಲ, ನಾವು ಕೊಟ್ಟಾಗಷ್ಟೆ ತಿನ್ನಬೇಕು. ಬೇಕಿದ್ರೆ ಪಕ್ಕದಲ್ಲೇ ಖಾಸಗಿ ಹೊಟೇಲ್ ಇದೆ. ಅಲ್ಲಿಗೆ ಹೋಗ್ರಿ ಅಂತ ಧಿಮಾಕು ತೋರಿಸಿದ್ದಾರೆ. https://ainlivenews.com/re-examination-for-545-psi-posts-on-december-23/ ಎರಡ್ಮೂರು ತಿಂಗಳಿನಿಂದ ಇಂದಿರಾ ಕ್ಯಾಂಟೀನ್ ಗಳಲ್ಲಿ ಬೆಳಗ್ಗಿನ ಸಮಯದಲ್ಲಿ ತಿಂಡಿ, ರಾತ್ರಿ ಹೊತ್ತಲ್ಲಿ ಊಟ ಸಿಗ್ತಿಲ್ಲ. ಇಂದಿರಾ ಕ್ಯಾಂಟೀನ್…