ಬೆಂಗಳೂರು:- ನೀರಾವರಿ ಪಂಪ್ಸೆಟ್ಗಳಿಗೆ 7ತಾಸು ವಿದ್ಯುತ್, ಬೇಸಿಗೆಯಲ್ಲಿ ಪವರ್ ಸಮಸ್ಯೆ ಇರಲ್ಲ ಎಂದು ಸಚಿವ ಜಾರ್ಜ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ತೀವ್ರ ಬರದ ನಡುವೆಯೂ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಗೆ ತಕ್ಕಂತೆ ಪೂರೈಸಲು ರಾಜ್ಯ ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮ ಕೈಗೊಂಡಿದೆ ಎಂದರು. ಸದ್ಯದ ಅಂಕಿ ಅಂಶದ ಪ್ರಕಾರ ರಾಜ್ಯದ ದೈನಂದಿನ ಬಳಕೆಗೆ ವಿದ್ಯುತ್ ಬೇಡಿಕೆ ಸುಮಾರು 14,000 ಮೆ ವ್ಯಾ ಮತ್ತು ನೀರಾವರಿ ಪಂಪ್‌ಸೆಟ್ ಸೆಟ್ಗಳಿಗೆ 4,500 ಮೆ.ವ್ಯಾ ವಿದ್ಯುತ್ ಅಗತ್ಯವಿದೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣ ಹೆಚ್ಚಳದ ಜತೆಗೆ ಸೆಕ್ಷನ್ 11 ಜಾರಿ ಹಾಗೂ ಇತರ ರಾಜ್ಯಗಳಿಂದ ವಿದ್ಯುತ್ ಮತ್ತು ಇಂಧನ ಮಾರುಕಟ್ಟೆಯಿಂದ ಖರೀದಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ನೀರಾವರಿ ಪಂಪ್ಸೆಟ್ಗಳಿಗೆ 7 ತಾಸು ವಿದ್ಯುತ್ ಪೂರೈಸುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು. ಈ ವರ್ಷ ಮಳೆ ಕೊರತೆಯಿಂದಾಗಿ ಇಂಧನ ಬೇಡಿಕೆ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಯಾರಿಗೂ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಸದ್ಯ ವಿದ್ಯುತ್ ಬೇಡಿಕೆಗೆ…
Author: AIN Author
ಮಂಗಳೂರು:- ಕೆಲವೇ ದಿನಗಳಲ್ಲಿ 30-40 ಶಾಸಕರು ಕಾಂಗ್ರೆಸ್‌ನಿಂದ ಹೊರಬರಲಿದ್ದಾರೆ ಎಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್‌ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ಟೀಮ್ ಡಿವೈಡ್ ಆಗಿದೆ. ಅದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿ ಪಟ್ಟಕ್ಕೆ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್ ಡಿವೈಡ್ ಆಗ್ತಿದೆ, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗುತ್ತಿದೆ. ಕೆಲವೇ ದಿನಗಳಲ್ಲಿ 30-40 ಶಾಸಕರು ಹೊರಗೆ ಬರ್ತಾರೆ ಎಂದು ಅವರು ಹೇಳಿದರು. ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್ ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ. ಈ ಭಯದಿಂದ ಕಾಂಗ್ರೆಸ್ ನವರು ಬಿಜೆಪಿಯಿಂದ ಹಲವಾರು ಮಂದಿ ಬರ್ತಾರೆ ಎಂದು ದಾರಿ ತಪ್ಪಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಯಾರೂ ಹೋಗ್ತಾ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು. ʻʻಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವೆಲ್‌ಗಳು ಬಿದ್ದಿವೆ. ಸತೀಶ್ ಜಾರಕಿಹೊಳಿ, ಜಿ. ಪರಮೇಶ್ವರ್ ಜೊತೆಗೆ ದಲಿತ…
ಬೆಂಗಳೂರು:- ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರು ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಈ ಸಂಬಂಧ ರಾಜ್ಯಪಾಲರು ಈ ಆದೇಶ ಹೊರಡಿಸಿದ್ದಾರೆ. ಅಧಿಕಾರವನ್ನು ಡಿ. 1 ರಂದು ಸ್ವೀಕರಿಸಲಿದ್ದಾರೆ. ಪ್ರಸ್ತುತ ರಜನೀಶ್ ಗೋಯಲ್ ಅವರು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಸದ್ಯ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರ ಕಾರ್ಯಾವಧಿ ಇದೇ ನವೆಂಬರ್ 30ಕ್ಕೆ ಕೊನೆಗೊಳ್ಳುತ್ತಿರುವುದರಿಂದ ಹೊಸ ಮುಖ್ಯ ಕಾರ್ಯದರ್ಶಿಯ ನೇಮಕವಾಗಿದೆ.
ಮಂಡ್ಯ :- ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಆತಗೂರು ಗ್ರಾಮಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಕೆ.ಎಂ.ಉದಯ್ ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮಂಗಳವಾರ ಬರ ಅಧ್ಯಯನ ನಡೆಸಿದರು. ಆತಗೂರು ಗ್ರಾಮದ ಜೋಗಿ ನಿಂಗಯ್ಯ ಹಾಗೂ ಜಯಮ್ಮ ಎಂಬುವವರ ಜಮೀನಿನಲ್ಲಿ ಬೆಳೆದು ನಿಂತಿರುವ ರಾಗಿ ಬೆಳೆಯನ್ನು ಪರಿಶೀಲಿಸಿದ ಸಚಿವರು ಜಮೀನಿನ ಮಾಲೀಕನಿಂದ ಅಗತ್ಯ ಮಾಹಿತಿ ಪಡೆದರು. ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ 216 ಕ್ಷೇತ್ರಗಳಲ್ಲಿ ಬರಗಾಲ ವ್ಯಾಪಿಸಿದ್ದು, ಹೀಗಾಗಿ ಆತಗೂರು ಹೋಬಳಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ನೀರಿಲ್ಲದೇ ಬೆಳೆಗಳು ಒಣಗಿದ್ದು, ಈ ಸಂಬಂಧ ಕಂದಾಯ ಹಾಗೂ ಕೃಷಿ ಇಲಾಖೆಯಿಂದ ಜಂಟಿ ಸರ್ವೆ ಕಾರ್ಯ ಕೈಗೊಂಡು ಈಗಾಗಲೇ ಕೇಂದ್ರ ಸರ್ಕಾರಕ್ಕೆ 18 ಸಾವಿರ ಕೋಟಿ ಬೆಳೆ ನಷ್ಟ ಪರಿಹಾರದ ವರದಿ ಸಲ್ಲಿಸಿರುವುದಾಗಿ ಹೇಳಿದರು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ…
ಭಾಗ್ಯಶ್ರೀ ಹಾಗೂ ಇಶಾನಿ ಬಿಗ್ ಬಾಸ್ ಮನೆಯಿಂದ ಹೊರಗೆ ಹೋದ ಬಳಿಕ ಬ್ರಹ್ಮಾಂಡ ಗುರೂಜಿ ಎಂಟ್ರಿ ಕೊಟ್ಟರು. ಗುರೂಜಿ ಸ್ಪರ್ಧೆಗಾಗಿ ಬಂದಿದ್ದಾರಾ ಎನ್ನುವ ಗೊಂದಲದಲ್ಲಿ ಮನೆಯವರಿದ್ರು. ಕಾರ್ತಿಕ್, ತನಿಷಾ ಎಲ್ಲರೂ ಬ್ರಹ್ಮಾಂಡ ಗುರೂಜಿಗೆ ನಾನಾ ಪ್ರಶ್ನೆಗಳನ್ನು ಕೇಳಿದ್ರು. ನೀವು ಸ್ಪರ್ಧಿಯಾಗಿ ಬಂದ್ರಾ ಇಲ್ಲ ಗೆಸ್ಟ್ ಆಗಿ ಬಂದ್ರಾ ಎಂದ್ರು. ಇದಕ್ಕೆ ಸರಿಯಾಗಿ ಉತ್ತರಿಸದೆ ಎಲ್ಲರನ್ನು ಆಟವಾಡಿಸಿದ್ದಾರೆ. ಮನೆಯವರ ಜೊತೆ ಬ್ರಹ್ಮಾಂಡ ಗುರೂಜಿ ಬಳಿ ಅನೇಕರು ಭವಿಷ್ಯದ ಬಗ್ಗೆ ಮಾತಾಡಿದ್ರು. ಈ ವೇಳೆ ಕಾರ್ತಿಕ್ ಮದುವೆ ಪ್ರಸ್ತಾಪ ಕೂಡ ಬಂದಿದೆ. ಕಾರ್ತಿಕ್ ಗೆ 2 ಮದುವೆ ಆಗುವ ಯೋಗವಿದೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ರು. ಗುರೂಜಿ ಮಾತು ಕೇಳಿ ಸುಮ್ನಿರಿ ಗುರುಗಳೇ ಎಂದು ನಕ್ಕು ಸುಮ್ಮನಾದ್ರು. ಅಯ್ಯೋ ಹೌದ ಗುರೂಜಿ ಸಂತೋಷ್ ಕೂಡ ಕಾರ್ತಿಕ್ 2 ಮದುವೆ ಆಗ್ತಾರೆ ಎಂದು ತುಕಾಲಿ ಸಂತು ಹೇಳಿದ್ರು. ಇದೇ ವೇಳೆ ಬ್ರಹ್ಮಾಂಡ ಗುರೂಜಿ ತುಕಾಲಿ ನಿನಗೆ ಮಕ್ಕಳಾಗಿದ್ಯಾ ಎಂದು ಪ್ರಶ್ನಿಸಿದ್ದಾರೆ. ಇಲ್ಲ ಎಂದ ಸಂತುಗೆ ಗುರೂಜಿ,…
ವಿಜಯಪುರ:- ಮುಖ್ಯಮಂತ್ರಿ ಬದಲಾವಣೆ ಎಂಬ ವಿಷಯದಲ್ಲಿ ಹುರುಗಳಿಲ್ಲ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಜನರ ಸಮಯ ಹಾಗೂ ಮಾಧ್ಯಮದ ಸಮಯ ಹಾಳುವ ಇಂಥ ಹೇಳಿಕೆಗಳನ್ನು ನೀಡುವುದು ರಾಜಕೀಯವಾಗಿ ಸರಿಯಾದ ನಿಲುವಲ್ಲ ಎಂದು ಸಿಡುಕಿದರು. ಯಾರಿಗೆ ಉದ್ಯೋಗ ಇಲ್ಲವೋ ಅಂಥವರು ಪ್ರಚಾರಕ್ಕೆ ಅನಗತ್ಯವಾಗಿ ಮುಖ್ಯಮಂತ್ರಿ ಬದಲಾವಣೆ ಅಂತೆಲ್ಲ ಮಾತನಾಡುತ್ತಿದ್ದಾರೆ ಎಂದು ವಿಪಕ್ಷದ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಖ್ಯಮಂತ್ರಿ ಬದಲಾವಣೆ, ಸರ್ಕಾರದ ಪತನದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರಿಗೆ ಪ್ರಚಾರ ಬೇಕಾಗಿದೆ ಅವರು ಸಿಎಂ ಪದದ ಬಗ್ಗೆ ಚರ್ಚೆ ಮಾಡುತ್ತಾರೆ. ಸರ್ಕಾರ ನಿದ್ದೆ ಮಾಡುತ್ತಿದೆ, ಮುಖ್ಯಮಂತ್ರಿ ಬದಲಾವಣೆಗೆ ತಂತ್ರ ನಡೆಯುತ್ತಿದೆ, ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಎಂದೆಲ್ಲ ವಿಪಕ್ಷಗಳ ನಾಯಕರು ನೀಡುತ್ತಿರುವ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ಎಂದರು.
ಮಂಡ್ಯ :- ರೈತರು ತೋಟಗಾರಿಕೆ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಬೇಕು. ತೋಟಗಾರಿಕೆ ವಿಜ್ಞಾನಿಗಳು ಹಾಗೂ ಅಧಿಕಾರಿಗಳ ಸಲಹೆ ಪಡೆದು ತೆಂಗಿನ ಬೆಳೆಯನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವ ಮೂಲಕ ಫಸಲನ್ನು ಹೆಚ್ಚಿಸಿಕೊಳ್ಳಿ ಎಂದು ಶಾಸಕ ಕೆ.ಎಂ.ಉದಯ್ ಸಲಹೆ ನೀಡಿದರು. ಮದ್ದೂರು ಪಟ್ಟಣದ ತೋಟಗಾರಿಕೆ ಇಲಾಖೆ ಕಛೇರಿ ಆವರಣದಲ್ಲಿ ರೈತರಿಗೆ ತೆಂಗಿನ ಸಸಿ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯ ರೈತರು ಕಬ್ಬು, ಭತ್ತ, ರಾಗಿ ಹಾಗೂ ರೇಷ್ಮೆ ಬೆಳೆಗಳ ಜತೆಗೆ ತೆಂಗು, ಮಾವು, ಸೀಬೆ, ಬಾಳೆ ಹಾಗೂ ಇನ್ನಿತರ ಬೆಳೆಗಳಿಗೆ ಹನಿ ನೀರಾವರಿ ಯೋಜನೆಯನ್ನು ಅಳವಡಿಸಿಕೊಂಡು ಲಾಭದಾಯಕ ಬೆಳೆಗಳನ್ನು ಬೆಳೆದರೆ ಆರ್ಥಿಕವಾಗಿ ಸಬಲರಾಗಬಹುದೆಂದು ರೈತರಿಗೆ ಕಿವಿಮಾತು ಹೇಳಿದರು. ಮುಂದಿನ ದಿನಗಳಲ್ಲಿ 25 ಸಾವಿರಕ್ಕೂ ಹೆಚ್ಚು ತೆಂಗಿನ ಸಸಿಗಳನ್ನು ನೀಡಲಾಗುತ್ತಿದ್ದು, ರೈತರು ತೋಟಗಾರಿಕೆ ಕಛೇರಿಗೆ ದಾಖಲೆಗಳನ್ನು ನೀಡಿ ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದರು. ಇದೇ ವೇಳೆ ರಾಜ್ಯ ವಲಯದ ಉಪ ನಿರ್ದೇಶಕ ರಾಜು, ಹಿರಿಯ ಸಹಾಯಕ ನಿರ್ದೇಶಕಿ ರೇಖಾ, ತೋಟಗಾರಿಕೆ…
ಹಲಗೂರು’:- ಬರ ಪರಿಹಾರ ನೀಡಲು ಸಿದ್ಧ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಸರ್ಕಾರದ ಬಳಿ ₹18 ಸಾವಿರ ಕೋಟಿ ಬರ ಪರಿಹಾರ ಕೇಳಿದ್ದು, ತಕ್ಷಣವೇ ಮಂತ್ರಿ ಮಂಡಲದ ಸಭೆ ಕರೆದು ರಾಜ್ಯ ಸರ್ಕಾರವು ಸಮಸ್ತ ರೈತರ ಪರವಾಗಿ ನಿಲ್ಲಲಿದೆ’ ಎಂದರು ರಾಜ್ಯದ ಜನತೆ 26 ಸಂಸದರನ್ನು ಗೆಲ್ಲಿಸಿರುವುದನ್ನು ಬಿಜೆಪಿ ಮರೆತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವುದನ್ನು ಬಿಜೆಪಿ ಸಹಿಸದೇ ಬರ ಪರಿಹಾರ ಅನುದಾನ ಬಿಡುಗಡೆ ಮಾಡುವುದಕ್ಕೆ ಹಿಂದೇಟು ಹಾಕುತ್ತಿದೆ’ ಎಂದು ಆರೋಪಿಸಿದರು. ‘ಸಂಪುಟ ಸಭೆಯಲ್ಲಿ ಮಂಜೂರಾತಿ ಪಡೆದು ಕೇಂದ್ರ ಸರ್ಕಾರಕ್ಕೆ ಬರ ಅಧ್ಯಯನ ವರದಿ ಸಲ್ಲಿಸಿದ್ದು, 226 ತಾಲ್ಲೂಕುಗಳಲ್ಲಿ ‘ಬರ ಘೋಷಣೆ’ ಮಾಡಲಾಗಿದೆ. ಹಲವು ಹಂತದ ಕೆಲಸಗಳು ಮುಗಿದಿದ್ದು, ಪರಿಹಾರ ನೀಡುವ ಹಂತದಲ್ಲಿದ್ದೇವೆ. ಕೇಂದ್ರ ಸರ್ಕಾರದ ಪರಿಹಾರ ಘೋಷಣೆಗಾಗಿ ಕಾಯುತ್ತಿದ್ದು, ರಾಜ್ಯದ ಜನರಿಗೆ ₹75 ಸಾವಿರ ಕೋಟಿಯನ್ನು ವಿವಿಧ ರೀತಿಯಲ್ಲಿ ಪರಿಹಾರ ನೀಡಲು ಯೋಜನೆ ರೂಪಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ…
ಬೆಂಗಳೂರು:- ಬ್ಲೂ ಫಿಲಂ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಕೊಡುವುದಾಗಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ನನ್ನ ಒಡೆತನದಲ್ಲಿನ ಚಿತ್ರಮಂದಿರದಲ್ಲಿ ‘ನೀಲಿ ಚಿತ್ರ’ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಎಚ್‌ಡಿ ಕುಮಾರಸ್ವಾಮಿ ಅವರ ಈ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಬೇಕಿದ್ದರೆ ಕನಕಪುರಕ್ಕೆ ಭೇಟಿ ನೀಡಿ ಕುಮಾರಸ್ವಾಮಿಯವರೇ ಸ್ವತಃ ವಿಚಾರಿಸುವಂತೆಯೂ ಶಿವಕುಮಾರ್ ಅವರು ಸವಾಲೆಸೆದಿದ್ದಾರೆ. ನನಗೆ ಕುಮಾರಸ್ವಾಮಿಯವರ ಬಗ್ಗೆ ಕರುಣೆ ಮತ್ತು ವಿಷಾಧವಿದೆ. ಅಂತಹ ಹಿರಿಯ ನಾಯಕರು, ಇಂತಹ ವ್ಯಕ್ತಿಯನ್ನು ತನ್ನ ಸಚಿವ ಸಂಪುಟದಲ್ಲಿ ಇಟ್ಟುಕೊಂಡಿದ್ದೇಕೆ? ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಕನಕಪುರದ ಜನರನ್ನು ಕೇಳಲಿ. ನಾನು ಎಲ್ಲಿಂದ ಆಯ್ಕೆಯಾಗಿದ್ದೇನೆ. ನಾನು 1.23 ಲಕ್ಷ ಮತದಾರರಿಂದ ಆಯ್ಕೆಯಾಗಿದ್ದೇನೆ. ಯಾರಾದರೂ ಹೇಳಿದರೆ ನಾನು ರಾಜಕೀಯ ತ್ಯಜಿಸುತ್ತೇನೆ. ಇದು ತುಂಬಾ ನಾಚಿಕೆಗೇಡಿನ ಸಂಗತಿ. ಅವರ ಅಂತಸ್ತಿನ ಯಾರಾದರೂ ಹಾಗೆ ಮಾತನಾಡಬಾರದು ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದರು.
ಬೆಂಗಳೂರು:- ಆಟೋ ಮೇಲೆ ಕ್ಯಾಂಟರ್ ಉರುಳಿ ಬಿದ್ದ ಘಟನೆ ಜರುಗಿದೆ. ಕ್ಯಾಂಟರ್ ಬಿದ್ದ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರ ಪಾಳ್ಯದಲ್ಲಿ ಘಟನೆ ಜರುಗಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.