Author: AIN Author

ಬೆಂಗಳೂರು: ಸಿಎಂ ಇಬ್ರಾಹಿಂ (CM Ibrahim) ಅವರ ಮಗನ ಚುನಾವಣೆಗೆ ನನ್ನಿಂದ ಆರ್ಥಿಕ ಸಹಾಯ ಪಡೆದಿದ್ದಾರೆ ಎಂದು ಪರಿಷತ್ ಸದಸ್ಯ ಶರವಣ (T A Sharavana) ವಾಗ್ದಾಳಿ ನಡೆಸಿದ್ದಾರೆ. ಎಂಎಲ್‌ಸಿ (MLC) ಮಾಡೋಕೆ ಶರವಣರಿಂದ ಕುಮಾರಸ್ವಾಮಿ ಹಣ ಪಡೆದಿಲ್ಲ ಅಂತ ಮಗನ ಮೇಲೆ ತಲೆ ಕೈ ಇಟ್ಟು ಆಣೆ ಮಾಡಿ ಎಂಬ ಇಬ್ರಾಹಿಂ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಬೇರೆ ಪಕ್ಷದಿಂದ ಬಂದವನಲ್ಲ. ಸಮಯಕ್ಕೆ ತಕ್ಕಂತೆ ಪಕ್ಷ ಬದಲಾವಣೆ ಮಾಡೋನೂ ನಾನಲ್ಲ. 25 ವರ್ಷಗಳಿಂದ ದೇವೇಗೌಡ, ಕುಮಾರಸ್ವಾಮಿ (HD Kumaraswamy) ಜೊತೆ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡ್ತಿದ್ದೇನೆ. ನನ್ನ ರಕ್ತವೇ ಜೆಡಿಎಸ್ ಆಗಿದೆ. ಅಧಿಕಾರಕ್ಕಾಗಿ ಯಾವುದೇ ಪಕ್ಷಕ್ಕೆ ಹೋಗಲ್ಲ. ವಿರೋಧ ಪಕ್ಷ ನಾಯಕ ಮಾಡಿಲ್ಲ ಅಂತ ಹೀಗೆ ಮಾತನಾಡುತ್ತಿದ್ದಾರಾ? ಕಾಂಗ್ರೆಸ್‌ನಲ್ಲಿ (Congress) ಅಧಿಕಾರ ಕೊಡಲಿಲ್ಲ ಅಂತ ಜೆಡಿಎಸ್‌ಗೆ ಬಂದ್ರಿ. ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಇದ್ದಾಗ ಇಬ್ರಾಹಿಂ ಕೇಳಿಯೇ ಎಲ್ಲವನ್ನು ವರಿಷ್ಠರು ಮಾಡಿದ್ದರು. ದೇವೇಗೌಡರು ನನ್ನ ತಂದೆ ಸಮಾನ ಎಂದು ಹೇಳಿದ್ದಿರಿ.…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ (Bengaluru Kambala) ಬಿಜೆಪಿ ಸಂಸದ (BJP MP) ಬ್ರಿಜ್ ಭೂಷಣ್ ಶರಣ್‌ ಸಿಂಗ್‌ (Brij Bhushan Sharan Singh) ಅವರು ಆಗಮಿಸುವುದಿಲ್ಲ ಎಂದು ಪುತ್ತೂರು ಕಾಂಗ್ರೆಸ್‌ ಶಾಸಕ ಮತ್ತು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ರೈ (Ashok Rai) ತಿಳಿಸಿದ್ದಾರೆ. ಇದು ದೊಡ್ಡ ಕಾರ್ಯಕ್ರಮ ಆಗಿರುವ ಕಾರಣ ಬೇರೆ ಬೇರೆ ಸಂಘಟನೆಯವರು ಬಂದು ಅನೇಕ ಮನವಿ ಮಾಡುತ್ತಾರೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಬಂದು ವೇದಿಕೆಗೆ ಅವರ ಹೆಸರನ್ನು ಇಡಲು ಹೇಳುತ್ತಾರೆ. ಸಿದ್ದಿ ಜನಾಂಗದವರು ಬಂದು ಅವರನ್ನು ಆಹ್ವಾನಿಸುವಂತೆ ಕೇಳಿದ್ದರು. ಆದರೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಮೊನ್ನೆಯೇ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು. ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರಿದೆ. ಈಗ ನಾವು ಆಹ್ವಾನ ಪತ್ರಿಕೆಯನ್ನು ಬದಲಾಯಿಸುತ್ತೇವೆ. ಕಂಬಳದಲ್ಲಿ ಕಾಂಗ್ರೆಸ್‌, ಬಿಜೆಪಿಯವರು ಇದ್ದಾರೆ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದರು ಏನಿದು ವಿವಾದ: ನವೆಂಬರ್ 25…

Read More

ಬೆಂಗಳೂರು: ವಿಧಾನಸೌಧದಲ್ಲಿ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸ್ವಾಗತ ಭಾಷಣ ವೇಳೆ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ಡಿಸಿಎಂ ಹೇಳುವ ಬದಲಿಗೆ ಸಿಎಂ ಡಿ.ಕೆ ಶಿವಕುಮಾರ್​ಗೆ ಸ್ವಾಗತ ಎಂದಿದ್ದಾರೆ. ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮ ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ. ರಿಯಾಯ್ತಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ. ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂಪಾಯಿ ಸಹಾಯ ಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ ಎಂದು…

Read More

ತುಮಕೂರು: ಆಹಾರ ಅರಸಿಕೊಂಡು ಬಂದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ತಿಪಟೂರು ತಾಲ್ಲೂಕು ಮಾರನಗೆರೆಯಲ್ಲಿ ಘಟನೆ ಸಂಭವಿಸಿದ್ದು, ಆಹಾರ ಹುಡುಕಿಕೊಂಡು ಬಂದ ಚಿರತೆಯು‌ ಆಯ ತಪ್ಪಿ ಪಾಳು ಬಾವಿಗೆ ಬಿದ್ದಿದೆ. ಚಿರತೆ ಬಾವಿಗೆ ಬಿದ್ದ ವಿಷಯ ತಿಳಿದು ಜನರು ಚಿರತೆ ನೋಡಲು ಮುಗಿ ಬಿದ್ದಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಬಾವಿಯಿಂದ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ.  ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಮೂರು ಚಿರತೆಗಳು ಓಡಾಡಿಕೊಂಡಿರುವುದನ್ನು ಗ್ರಾಮಸ್ಥರು ಗಮನಿಸಿದ್ದರು. ಒಂದು ದಿನದ ಹಿಂದಷ್ಟೇ ಮೇಕೆಯೊಂದನ್ನು ಚಿರತೆ ಬಲಿ ಪಡೆದಿತ್ತು.

Read More

ದೊಡ್ಡಬಳ್ಳಾಪುರ: ಕಳೆದ ವಾರ ಸುರಿದ ಭಾರೀ ಮಳೆಯಿಂದಾಗಿ ನಗರದ ಮೂರನೇ ವಾರ್ಡ್ ಮುತ್ಸಂದ್ರದ ಡಾ.ಬಿ.ಆರ್ ಅಂಬೇಡ್ಕರ್ ಕಾಲೋನಿಯಲ್ಲಿ ನರಸಮ್ಮ ಎಂಬುವರ ಮನೆಯ ಮೇಲ್ಛಾವಣಿ ಕುಸಿದುಬಿದ್ದಿತ್ತು. ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಬಾರದ ಹಿನ್ನೆಲೆ ಅಜ್ಜಿ ನರಸಮ್ಮ ನೊಂದು ಪೌರಾಯುಕ್ತರ ಕಚೇರಿ ಬಳಿ ಕುಳಿತು ತಮ್ಮ ಅಳಲು ತೋಡಿಕೊಂಡರು ಯಾವುದೆ ಪ್ರಯೋಜನವಾಗಲಿಲ್ಲ. ಇದನ್ನು ತಿಳಿದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅಜ್ಜಿ ನರಸಮ್ಮನ ಮನೆಗೆ ಭೇಟಿ ನೀಡಿ ಆರ್ಥಿಕ ಸಹಾಯ ಮಾಡಿ ಮನೆ ಸರಿಪಡಿಸುವ ಭರವಸೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು ತಾಲ್ಲೂಕು ಆಡಳಿತ ಮಳೆ ಅನಾಹುತಗಳಾದಗ ಮಾತ್ರ ಸಭೆಗಳ ಮೇಲೆ ಸಭೆ ಮಾಡುತ್ತಾರೆ. ಪರಿಹಾರ ವ್ಯವಸ್ಥೆ ಮಾತ್ರ ಶೂನ್ಯವಾಗಿರುತ್ತದೆ. ಅಜ್ಜಿಯ ಮನೆ ಮಳೆಗೆ ಸಂಪೂರ್ಣ ಕುಸಿದಿದೆ. ಜೀವ ಭಯದಲ್ಲಿ ಜೀವನ ಮಾಡುವಂತ ಪರಿಸ್ಥಿತಿ ಇದೆ. ಅಧಿಕಾರಿಗಳು ತಕ್ಷಣಕ್ಕೆ ಎಸ್.ಡಿ.ಆರ್.ಎಫ್ ಅಥವಾ ಎನ್.ಡಿ.ಆರ್.ಎಫ್ ನಲ್ಲಿ ಪರಿಹಾರಕ್ಕೆ ಕ್ರಮ ಜರುಗಿಸಲು ಅವಕಾಶ ಇರುತ್ತದೆ. ಮಾಡಲು ಇಚ್ಛಾಶಕ್ತಿ ಕೊರತೆಯಿಂದ ಸೌಲಭ್ಯಗಳು ಬಡವರಿಗೆ ತಲುಪುತ್ತಿಲ್ಲ ಎಂದರು.…

Read More

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಪೋಸ್ಟರ್ ಪಾಲಿಟಿಕ್ಸ್ ಮಾಡುತ್ತಿದ್ದು, ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ತಕ್ಷಣ ಅದನ್ನು ತದೆಯದಿದ್ದರೆ ನಾವೂ ಅದೇ ದಾರಿ ತುಳಿಯಬೇಕಾಗುತ್ತದೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ಅವರು ಈ ಎಚ್ಚರಿಕೆ ನೀಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಜಿ ಶಾಸಕ ಅಶ್ವಿನ್ ಕುಮಾರ್, ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ಜತೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು ಅವರು. https://ainlivenews.com/another-victim-of-bescoms-negligence-cm-dcm-energy-minister-directly-responsible-for-death-of-mother-daughte/ ಕಾಂಗ್ರೆಸ್ ಪಕ್ಷ ಇತ್ತೀಚಿನ ದಿನಗಳಲ್ಲಿ ಪೋಸ್ಟರ್ ಪಾಲಿಟಿಕ್ಸ್ ಮೂಲಕ ಅಪಪ್ರಚಾರ ಮಾಡಿ ತೇಜೊವಧೆ ಮಾಡುವ ಕೆಲಸ ಮಾಡುತ್ತಿದೆ. ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿರುವುದಕ್ಕೆ ಜೆಡಿಎಸ್ ಪಕ್ಷದ ವತಿಯಿಂದ ಎಚ್ಚರಿಕೆ ಕೊಡುತ್ತಿದ್ದೇವೆ ಎಂದು ಎ‌.ಮಂಜುನಾಥ್ ತಿಳಿಸಿದರು‌. ಕಾಂಗ್ರೆಸ್ ಪಕ್ಷದವರು ಬಿಜೆಪಿ ಸರಕಾರದ ಸಮಯದಲ್ಲಿ ಪೇ ಸಿಎಂ ಪೋಸ್ಟರ್‌ಗಳನ್ನು ರಾತ್ರೋರಾತ್ರಿ ಅಂಟಿಸಿದರು‌. ಈಗ ಜನಪರ ವಿಷಯಗಳ ಬಗ್ಗೆ ಪ್ರಸ್ತಾಪ ಮಾಡುತ್ತಿರುವ ಕುಮಾರಸ್ವಾಮಿ ಅವರ ಬಗ್ಗೆ ಅಶ್ಲೀಲ, ಕೀಳು ಅಭಿರುಚಿಯ…

Read More

ಬೆಂಗಳೂರು: ನಗರದ ಅಶೋಕನಗರ ವ್ಯಾಪ್ತಿಯ ಸುಬ್ಬಣ್ಣ ಗಾರ್ಡನ್​ ಬಳಿ ಮಗಳ ಪ್ರಿಯಕರನನ್ನು ತಂದೆಯೇ ಕೊಂದು ಹಾಕಿರುವ ಘಟನೆ ನಡೆದಿದೆ. https://ainlivenews.com/another-victim-of-bescoms-negligence-cm-dcm-energy-minister-directly-responsible-for-death-of-mother-daughte/ ಡೇವಿಡ್​ ಕೊಲೆಯಾದ ಯುವಕ. ಯವತಿ ತಂದೆ ಮಂಜುನಾಥ್ ಎಂಬಾತನಿಂದ ಕೃತ್ಯ. ಆಟೋ ಡ್ರೈವರ್ ಆಗಿದ್ದ ಡೇವಿಡ್, ಮಂಜುನಾಥ್​ ಎಂಬಾತನ ಮಗಳನ್ನ ಪ್ರೀತಿಸ್ತಿದ್ದ. ಮದುವೆ ಮಾಡಿಕೊಡುವಂತೆ ಪದೇಪದೆ ಪೀಡಿಸುತ್ತಿದ್ದ. ಮದುವೆಗೆ ನಿರಾಕರಿಸಿದರೆ ನಿಮ್ಮ ಮಗಳೊಂದಿಗಿನ ಫೋಟೋಗಳನ್ನ ವೈರಲ್​​ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ಫೋಟೋ ಮತ್ತು ವಿಡಿಯೋ ಇದೆ ಅಂತ ಹೆದರಿಸ್ತಿದ್ದ. ಇದರಿಂದ ಮಗಳ ಮರ್ಯಾದೆ ಹಾಳಾಗುತ್ತೆ ಎಂಬ ನಿರ್ಧಾರಕ್ಕೆ ಬಂದ ತಂದೆ ಮಾತನಾಡುವ ನೆಪದಲ್ಲಿ ಡೇವಿಡ್​​ನನ್ನು ಕರೆದು ರಾಡ್​ನಿಂದ ಹೊಡೆದು, ಚಾಕುವಿನಿಂದ ಇರಿದಿದ್ದಾನೆ. ನಂತರ ಹಾಲೋಬ್ರಿಕ್ಸ್ ಕಲ್ಲುಎತ್ತಿಹಾಕಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ಮಂಜುನಾಥ್​​ನನ್ನು ಅಶೋಕ ನಗರ ಪೊಲೀಸರು ವಶಕ್ಕೆ ಪಡೆಡಿದ್ದಾರೆ.

Read More

ಬಳ್ಳಾರಿ: ಸತೀಶ್ ಜಾರಕಿಹೊಳಿ ಸಿಎಂ ಆಗ್ತಾರೆಂದು ಶಾಸಕ ವಿಶ್ವಾಸ್ ವೈದ್ಯ ಹೇಳಿಕೆ ವಿಚಾರಕ್ಕೆ ಸಂಭಂಧಿಸಿದಂತೆ ‘ ಯಾವ ಸಮಯ ಕ್ಕೆ ಯಾರು ಸಿಎಂ ಎಂದು ಪಕ್ಷ ನಿರ್ಧರಿಸುತ್ತದೆ ಎಂದು ಬಳ್ಳಾರಿಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ್ಳೆಯ ಆಡಳಿತ ನಡೆಸಲು ಜನರು ನಮಗೆ ಅಧಿಕಾರ ಕೊಟ್ಟಿದ್ದು, ಆ ಕಡೆ ನಾವು ಹೆಚ್ಚಿನ ಗಮನ ಕೊಡಬೇಕು. ಮುಂದೆ ಯಾರು ಸಿಎಂ ಎಂದು ಪಕ್ಷ ನಿರ್ಧಾರ ಮಾಡುತ್ತದೆ. ಅಭಿವೃದ್ಧಿ ಕಡೆಗೆ ನಮ್ಮ ಗಮನ ಇದ್ದರೆ ಎಲ್ಲರಿಗೂ ಒಳ್ಳೆಯದು. ಅಧಿಕಾರದ ಬಗ್ಗೆ ಚರ್ಚೆ ಮಾಡಿದ್ರೆ ಜನರಿಗೆ ಯಾವ ಲಾಭ ಇಲ್ಲ ಎಂದರು.

Read More

ಬೆಂಗಳೂರು: ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಸಿದ್ದ ಫ್ಲ್ಯಾಟ್ ಒಂದರ ಮೇಲೆ CCB ಪೊಲೀಸರು ದಾಳಿ ನಡೆಸಿದ್ದು, ಬೆಟ್ಟಿಂಗ್ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. https://ainlivenews.com/another-victim-of-bescoms-negligence-cm-dcm-energy-minister-directly-responsible-for-death-of-mother-daughte/ ಸಾಕೇತ್ ಮತ್ತು ರಿಷಬ್ ಬಂಧಿತ ಆರೋಪಿಗಳು. ರಾಜರಾಜೇಶ್ವರಿ ನಗರದ ಫ್ಲಾಟ್ ಒಂದರಲ್ಲಿ ಬೆಟ್ಟಿಂಗ್ ನಡೆಸುತ್ತಿರುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಪೊಲೀಸರು. ದಾಳಿ ವೇಳೆ ಲ್ಯಾಪ್ ಟಾಪ್ ಹಾಗೂ ಮೊಬೈಲ್‌ಗಳು ಪತ್ತೆಯಾಗಿದೆ. ಆನ್‌ಲೈನ್ ವೆಬ್ ಸೈಟ್ ಮೂಲಕ ಬೆಟ್ಟಿಂಗ್ ಆರೋಪಿಗಳು ನಡೆಸ್ತಿದ್ದರು ಎಂದು ತಿಳಿದು ಬಂದಿದೆ. ಬಳಿಕ ಆರೋಪಿಗಳ ಫ್ಲಾಟ್ ಪರಿಶೀಲನೆ ನಡೆಸಿದಾಗ 1 ಕೆಜಿ ಚಿನ್ನ ಪತ್ತೆಯಾಗಿದೆ. ನೂರು ಗ್ರಾಂ ತೂಕದ ಹತ್ತು ಚಿನ್ನದ ಬಿಸ್ಕೆಟ್ಸ್ ಪತ್ತೆಯಾಗಿವೆ. ಪತ್ತೆಯಾದ ಚಿನ್ನಕ್ಕೆ ಯಾವುದೇ ದಾಖಲೆಗಳು ಸಿಗದ ಹಿನ್ನಲೆ ಸಿಸಿಬಿ ಪೊಲೀಸರು ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಬೆಂಗಳೂರಿನಲ್ಲಿ ಬೆಟ್ಟಿಂಗ್ ಮಾಫಿಯಾ ಮತ್ತೆ ತಲೆ ಎತ್ತಿರುವ ಬಗ್ಗೆ ಮಾಹಿತಿ…

Read More

ಬೆಂಗಳೂರು: ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮೀನುಗಾರಿಕೆ ವಿಶ್ವ ವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಮೀನು ನಮ್ಮ ಆಹಾರ ಸಂಸ್ಕೃತಿಯ ಪ್ರಮುಖ ಭಾಗ. ಅತ್ಯಂತ ಆರೋಗ್ಯಕಾರಿ ಆಹಾರ. ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ನಮ್ಮ ಸರ್ಕಾರ ಅಗತ್ಯ ಎಲ್ಲಾ ನೆರವನ್ನೂ ನೀಡುತ್ತದೆ ಎಂದು ಭರವಸೆ ನೀಡಿದರು. ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ. ರಿಯಾಯ್ತಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ…

Read More