ಮೈಸೂರು:- ಬಿ.ವೈ. ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ನೀಡಿದ್ದು ಒಳ್ಳೆಯ ಬೆಳವಣಿಗೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಯುವ ನಾಯಕ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿರುವುದು ಒಳ್ಳೆಯ ಬೆಳವಣಿಗೆ. ಎಲ್ಲ ಕ್ಷೇತ್ರದಲ್ಲೂ ಯುವಕರಿಗೆ ಮಣೆ ಹಾಕಲಾಗುತ್ತಿದೆ. ವಿಜಯೇಂದ್ರ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದವರು’ ಎಂದರು. ಬಿ.ಎಸ್. ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ. ಅವರ ಅನುಭವ- ಮಾರ್ಗದರ್ಶನ ವಿಜಯೇಂದ್ರ ಅವರಿಗೆ ಸಿಗುವುದರಿಂದ ಸಂಘಟನೆಯಲ್ಲಿ ಯಶಸ್ವಿಯಾಗುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ‘ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲೇ ನಾವೆಲ್ಲರೂ ಗೆದ್ದು ಬಂದಿದ್ದೇವೆ. ಮುಂದಿನ ಚುನಾವಣೆಯಲ್ಲೂ ಅವರ ಹೆಸರಿನಲ್ಲೇ ಗೆಲ್ಲಲಿದ್ದೇವೆ. ಬಿಜೆಪಿ ಬಹುಮತ ಗಳಿಸಲಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ’ ಎಂದರು.
Author: AIN Author
ಮೈಸೂರು:- ನಾನು ವಿಪಕ್ಷ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸೂಕ್ತ ವ್ಯಕ್ತಿಯನ್ನು ನಮ್ಮ ನಾಯಕರು ನೇಮಿಸುತ್ತಾರೆ. ಬಿಜೆಪಿಯ ಶಾಸಕರೆಲ್ಲರೂ ಆಕಾಂಕ್ಷಿಯಾಗಿದ್ದಾರೆ. ನಮ್ಮಲ್ಲೇ ಬೇಕಾದಷ್ಟು ನಾಯಕರಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಆಗಿರಬಹುದು. ಹಾಗೆಂದ ಮಾತ್ರಕ್ಕೆ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ಕೊಡಬೇಕೆಂದೇನಿಲ್ಲ’ ಎಂದರು. ‘ಬಿ.ವೈ. ವಿಜಯೇಂದ್ರ ಯುವಕ. ಪಕ್ಷವನ್ನು ಸಮರ್ಥವಾಗಿ ಕಟ್ಟುತ್ತಾರೆ. ಸಾಕಷ್ಟು ಜನ ಆಕಾಂಕ್ಷಿಗಳಿದ್ದರು. ಅದರಲ್ಲಿ ಹಿರಿಯರೂ ಇದ್ದರು. ಆದರೆ, ಕಿರಿಯರಿಗೆ ಕೊಡಬಾರದು ಎಂದೇನಿಲ್ಲ. ವಿ.ಸೋಮಣ್ಣ ಪ್ರಭಾವಿ ನಾಯಕರು. ಅವರಿಗೂ ಎಲ್ಲ ರೀತಿಯ ಅರ್ಹತೆ ಇತ್ತು. ಸಿ.ಟಿ. ರವಿ ಅವರಿಗೂ ಪಕ್ಷ ಅನೇಕ ಹುದ್ದೆಗಳನ್ನು ನೀಡಿದೆ. ಒಂದು ಹುದ್ದೆಯನ್ನು ಎಲ್ಲರಿಗೂ ಕೊಡಲಾಗದು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರಬೇಕಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು. ಲೋಕಸಭಾ ಚುನಾವಣೆ ಬಳಿಕ ನಾವೇನು ರಾಜ್ಯ ಸರ್ಕಾರ ಬೀಳಿಸುವುದಿಲ್ಲ. ಅವರ ಪಕ್ಷದವರಿಂದಲೇ ಸರ್ಕಾರ ಬೀಳಲಿದೆ’ ಎಂದರು.
ವಿಜಯವಾಡ:-ರಾಜಕೀಯದಲ್ಲಿ ಯಾರೂ ಶಾಶ್ವತವಾಗಿರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೇರು ಮಟ್ಟದಿಂದ ಪಕ್ಷವನ್ನು ಸದೃಢವಾಗಿ ಕಟ್ಟಬಹುದು, ಕಾರ್ಯಕರ್ತರು ಬಲಿಷ್ಠರಾಗಿದ್ದರೆ ಪಕ್ಷ ಸದೃಢವಾಗಿರುತ್ತದೆ. ರಾಜಕೀಯದಲ್ಲಿ ಯಾರೂ ಕೂಡಾ ಶಾಶ್ವತವಾಗಿರಲು ಸಾಧ್ಯವಿಲ್ಲ ಎಂದರು. ತೆಲಂಗಾಣ ಚುನಾವಣೆಗಾಗಿ ನಾನು ಇಲ್ಲಿಗೆ ಬಂದಿದ್ದೇನೆ.ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿದೆ. ತೆಲಂಗಾಣದಲ್ಲಿ ಬದಲಾವಣೆ, ಹೊಸ ಸರ್ಕಾರ ರಚನೆ ಬಗ್ಗೆ ದೊಡ್ಡ ಅಲೆ ಇದೆ. ಎಲ್ಲಾ ರಾಜಕೀಯ ಪಕ್ಷಗಳ ಮೂಲ ಬೇರು ಕಾಂಗ್ರೆಸ್ ಪಕ್ಷವೇ ಆಗಿದೆ. ಅವರು ಬೇರೆ ಏನನ್ನೇ ಹೇಳಲಿ. ವೈಎಸ್ ಆರ್ ಕಾಂಗ್ರೆಸ್ ಕೂಡಾ ಏಕೆ ಕಾಂಗ್ರೆಸ್ ಅಂತಾ ಹೆಸರು ಇಟ್ಟುಕೊಂಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಈ ದೇಶವನ್ನು ಒಗ್ಗೂಡಿಸಿದ ಪಕ್ಷ ಕಾಂಗ್ರೆಸ್ ಎಂದು ತಿಳಿಸಿದರು.
ಹುಬ್ಬಳ್ಳಿ: ಭಾವಸಾರ ವ್ಹಿಜನ್ ಇಂಡಿಯಾ ಸಂಸ್ಥೆಯ ವತಿಯಿಂದ ಶನಿವಾರ ರಂದು ಎಪಿಎಂಸಿ ಆವರಣದಲ್ಲಿರುವ ಜನಪದರು ಕರ್ನಾಟಕ ಜಾನಪದ ಜಗತ್ತು ಟ್ರಸ್ಟ್ (ರಿ) ಹುಬ್ಬಳ್ಳಿ ಯ ಶ್ರೀಮತಿ ಗಂಗಮ್ಮ ಗಿರಿಯಪ್ಪಗೌಡ ಬಾಳನಗೌಡರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ವಾಸಿಸುವ ಮಕ್ಕಳಿಗೆ ಹೊಸ ಉಡುಪು ಹಾಗೂ ಸಿಹಿತಿಂಡಿಗಳನ್ನು ವಿತರಿಸುವ ಮೂಲಕ ವಿಶಿಷ್ಟವಾಗಿ ದೀಪಾವಳಿ ಹಾಗು ಮಕ್ಕಳ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾದ ದಯಾನಂದ ಅಂಬರಕರ ಮಾತನಾಡುತ್ತ ಪಟಾಕಿ ಹಚ್ಚುವುದರಿಂದ ಪರಿಸರ ಮಾಲಿನ್ಯದ ಜತೆಗೆ ಹಕ್ಕಿ, ಪ್ರಾಣಿ, ಜಾನುವಾರುಗಳಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಅದರ ಬದಲಾಗಿ ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವದರ ಜತೆಗೆ ಸಮಾಜಕ್ಕೆ ಉಪಯೋಗವಾಗುವಂತೆ ಸಮಾಜ ಮುಖಿಯಾಗಿ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಬಹುದೆಂದರು. ಸಂಸ್ಥೆಯ ಮಕ್ಕಳ ಕಲ್ಯಾಣ ನಿರ್ದೇಶಕಿ ಸ್ನೇಹಾ ಬೇದರೆ ಮಾತನಾಡುತ್ತ ಮಕ್ಕಳು ವಸತಿ ನಿಲಯದಲ್ಲಿ ಶಿಸ್ತಿನಿಂದ ಇರುವುದನ್ನು ಕಂಡು ಮೆಚ್ಚುಗೆ ವೆಕ್ತಪಡಿಸಿ ದೀಪಾವಳಿ ಹಾಗೂ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಸಂಸ್ಥೆಯ ಹಿರಿಯ ಸದಸ್ಯರಾದ ಪ್ರಕಾಶ್ ತಿರುಮಲ್ಲೆಯವರು ಮಾತನಾಡುತ್ತ ಜಗತ್ತಿನಲ್ಲೇ ನಮ್ಮ ದೇಶದ…
ಬಳ್ಳಾರಿ:- ಗ್ಯಾರಂಟಿ ಯೋಜನೆ ಅನುಕೂಲ ನೋಡಿ ಬಿಜೆಪಿ ತತ್ತರಿಸಿ ಹೋಗಿದೆ ಎಂದು ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಯಿಂದ ಜನರಿಗೆ ಅನುಕೂಲವಾಗಿದೆ. ನೋಡಿ ಬಿಜೆಪಿ ತತ್ತರಿಸಿ ಹೋಗಿದೆ ಎಂದರು. ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದನ್ನು ಉಲ್ಲೇಖಿಸಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುವುದಕ್ಕೆ ಇಷ್ಟು ದಿನ ಬೇಕಾಯಿತು. ಇದರಿಂದ ನಮ್ಮ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಪಕ್ಷದ ಸಂಘಟನೆ ಗಟ್ಟಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೆಚ್ ಕೆ ಪಾಟೀಲ್ ಭರವಸೆ ವ್ಯಕ್ತಪಡಿಸಿದರು. ಮುಂದುವರೆದು ಬರ ಪರಿಶೀಲನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೇಂದ್ರದ ಬರ ಅಧ್ಯಯನ ತಂಡ ಬಂದು ಪರಿಶೀಲನೆ ನಡೆಸಿ ಹೋಗಿದೆ. ಸರ್ಕಾರದ ಜೊತೆ ಚರ್ಚೆ ಮಾಡಿದೆ. ಬರ ಪರಿಹಾರವಾಗಿ ಕೇಂದ್ರ ಸರ್ಕಾರ 3,700 ಕೋಟಿ ರೂಪಾಯಿ ರಿಲೀಸ್ ಮಾಡಬೇಕಿತ್ತು. ಆದರೆ, ಇದುವರೆಗೂ ನಯಾ ಪೈಸೆ ಕೊಟ್ಟಿಲ್ಲ. ಬರ ಪರಿಹಾರಕ್ಕೆ ಒತ್ತಾಯ ಮಾಡಬೇಕಾದ ಬಿಜೆಪಿ ನಾಯಕರು ಬರ…
ಬೆಂಗಳೂರು:- ಅಸ್ತಿತ್ವ ಕಳೆದುಕೊಂಡಿರುವ ಬಿಜೆಪಿಗೆ ಜೀವ ತುಂಬುವ ಶಕ್ತಿ ಕೊಡಲಿ ಎಂದು ಪ್ರಿಯಾಂಕ ಖರ್ಗೆ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯಾಧ್ಯಕ್ಷನಾಗಿ ವಿಜಯೇಂದ್ರ ಅವರನ್ನು ಆಯ್ಕೆ ಮಾಡುವ ಮೂಲಕ ಹೈಕಮಾಂಡ್ ಸಂತೋಷ್ ಅವರಿಗೆ ನೀವು ಕೇಶವ ಕೃಪಾದಲ್ಲೇ ಇರಿ ಎಂದು ಸ್ಪಷ್ಟ ಸಂದೇಶ ಕಳುಹಿಸಿದೆ ಎಂದು ಟೀಕಿಸಿದ್ದಾರೆ. ಬಿ.ವೈ ವಿಜಯೇಂದ್ರ ನೇಮಕ ಮೂಲಕ ‘ಬಿ.ಎಲ್. ಸಂತೋಷ್ ನಿಮ್ಮ ತಂತ್ರಗಾರಿಕೆ ನಮಗೆ ಸಂತೋಷ ಆಗಿಲ್ಲ. ಯಡಿಯೂರಪ್ಪ ಅವರ ಪುತ್ರನಿಗೆ ಪ್ರಮುಖ ಸ್ಥಾನ ಕೊಡುತ್ತಿದ್ದೇವೆ. ನೀವು ಕೇಶವ ಕೃಪಾದಲ್ಲಿ ಇರಿ ಎಂದು ವರಿಷ್ಠರು ಸಂದೇಶ ಕೊಟ್ಟಂತಿದೆ ಎಂದು ಟಾಂಗ್ ನೀಡಿದರು. ಬಳಿಕ ವೈಯಕ್ತಿಕವಾಗಿ ನಾನು ಟೀಕೆ ಮಾಡಲ್ಲ. ವಿಜಯೇಂದ್ರ ನನಗಿಂತ 4-5 ವರ್ಷ ದೊಡ್ಡವರು. ಅವರಿಗೆ ಒಳ್ಳೆಯದಾಗಲಿ. ಬಿಜೆಪಿ ಇಲ್ಲಿ ಅಸ್ತಿತ್ವ ಕಳೆದುಕೊಂಡಿದೆ. ಅದಕ್ಕೆ ಜೀವ ತುಂಬುವ ಶಕ್ತಿ ಕೊಡಲಿ ಎಂದರು. ಮುಂದುವರೆದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ.ಸೋಮಣ್ಣ, ಸಿ.ಟಿ.ರವಿ ರಾಜ್ಯಾಧ್ಯಕ್ಷ ಪ್ರಯತ್ನಿಸಿದ್ದರು. ಪ್ರಧಾನಿ ಮೋದಿ ಅವರು, ಕುಟುಂಬ ರಾಜಕಾರಣ ತೊಲಗಿಸಬೇಕು, ಓಲೈಕೆ ರಾಜಕಾರಣ, ಭ್ರಷ್ಟಾಚಾರ…
ಕೋಲಾರ : ಬಾರಿಯ ಬಜೆಟ್ ನಲ್ಲಿ ಕೆಜಿಎಫ್ ನಲ್ಲಿರುವ 965 ಕೈಗಾರಿಕಾ ಪ್ರದೇಶದವನ್ನು ಬಿ ಇ ಎಂ.ಎಲ್ ನಿಂದ ಹಿಂಪಡೆದು ಅಲ್ಲಿ ಹೊಸ ಕೈಗಾರಿಕಾ ಟೌ ನ್ಸ್ ಶಿಪ್ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೋಲಾರ, ಬಂಗಾರಪೇಟೆ ತಾಲ್ಲೂಕು ಗಳಿಗೆ ಕುಡಿಯುವ ನೀರನ್ನು ಒದಗಿಸುವ ಯರಗೋಳ್ ಯೋಜನೆ ಹಾಗೂ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಹಿಂದೆ ಪ್ರತ್ಯೇಕವಾಗಿದ್ದ ಒಂದು ಮಾಡಲಾಗಿದ್ದ ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ವನ್ನು ಒಂದು ಮಾಡಲಾಗಿತ್ತು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರತ್ಯೇಕ ಡೈರಿ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ. ಪ್ರತಿ ತಿಂಗಳು 2 ತಿಂಗಳು ವಿದ್ಯುತ್ ಬಿಲ್ಲು ಕಟ್ಟಲಾಗುತ್ತಿತ್ತು. ಅದನ್ನು ತಪ್ಪಿಸಲು 50 ಎಕರೆ ಜಾಗದಲ್ಲಿ ಸ್ವಂತ ವಿದ್ಯುತ್ ಉತ್ಪಾದಿಸಲು ಸೋಲಾರ್ ಘಟಕ ಸ್ಥಾಪನೆಗೆ ಪರವಾನಗಿ ನೀಡಲಾಗಿದೆ. ಕೋಲಾರ ಹಾಲು ಒಕ್ಕೂಟದಿಂದ ರೈತರಿಗೆ ಅನುಕೂಲವಾಗಲಿದೆ ಎಂದರು. ಬರಗಾರವಿದ್ದರೂ 2263 ಕೋಟಿ ರೂ.ಗಳನ್ನು ಜಿಲ್ಲೆಯ…
ಬೆಂಗಳೂರು:- ಕುಟುಂಬ ರಾಜಕಾರಣ ಆರೋಪ ಮಾಡುವ ಕಾಂಗ್ರೆಸ್ ಗೆ ನಾಚಿಕೆ ಆಗಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಕಲಿ ಗಾಂಧಿ ಕುಟುಂಬದ ಪಾದರಕ್ಷೆ ತಲೆ ಮೇಲೆ ಹೊತ್ತು ಕಾಲು ಸವೆಸಿಕೊಂಡಿರುವ ಕಾಂಗ್ರೆಸ್ನವರು ಬಿಜೆಪಿ ವಿರುದ್ಧ ಕುಟುಂಬ ರಾಜಕಾರಣ ಆರೋಪ ಮಾಡುತ್ತಿರುವುದು ನಾಚಿಕೆಗೇಡಿನ ಕೆಲಸ. ಈ ಗುಲಾಮರಿಗೆ ಮುಂದಿನ ದಿನಗಳಲ್ಲಿ ಬುದ್ಧಿ ಕಲಿಸುವ ಕಾಲ ಬರಲಿದೆ. ಅದಕ್ಕೆ ಉತ್ತರ ಬಿಜೆಪಿಯ ಕಾರ್ಯಕರ್ತರು ಕೊಡಲಿದ್ದಾರೆ ಎಂದರು. ವಿಜಯೇಂದ್ರ ಅವರಿಗೆ ಅವಕಾಶ ನೀಡುವ ಮೂಲಕ ಕುಟುಂಬ ರಾಜಕಾರಣಕ್ಕೆ ಬಿಜೆಪಿ ಜೋತುಬಿದ್ದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಇಲ್ಲಿ ಯಾವುದೋ ಒಂದು ಅಕಸ್ಮಾತ್ ಒಬ್ಬ ಕಾರ್ಯಕರ್ತ ಒಬ್ಬ ಹಿರಿಯ ಮುತ್ಸದ್ಧಿ ಮಗ ಆಗಿದ್ದ ಎನ್ನುವ ಕಾರಣಕ್ಕೆ ಅವಕಾಶ ಕೊಟ್ಟಾಗ ಈ ರೀತಿ ಮಾತನಾಡುತ್ತೀರಲ್ಲ, ನೀವು ಇಂದು ಎಣಿಕೆ ಮಾಡಿ ನೋಡಿ ಎಷ್ಟು ಜನ ಶಾಸಕರು ನಿಮ್ಮ ನಿಮ್ಮ ಕುಟುಂಬಗಳಿಂದ ಮಾತ್ರ ಬಂದಿದ್ದಾರೆ? ಎಷ್ಟು ಜನ ಮಂತ್ರಿಗಳು ಕುಟುಂಬದ ಮಂತ್ರಿಗಳಿದ್ದಾರೆ? ಎಂದು ಮೆಲುಕು ಹಾಕಿ…
ಈಗಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ಎಲ್ಲರಲ್ಲೂ ಕಾಣುವಂತ ಸಾಮಾನ್ಯ ಸಮಸ್ಯೆಯಾಗಿದೆ. ಕೂದಲು ಉದುರುವುದು, ತಲೆ ತುರಿಕೆ, ತಲೆ ಹೊಟ್ಟು ಹೀಗೆ ಕೂದಲಿನ ಸಮಸ್ಯೆಗಳು ಅನೇಕ. ಇತ್ತೀಚಿಗಿನ ದಿನಗಳಲ್ಲಿ ನಾವು ಬಳಸುವ ಕೆಲ ರಾಸಾಯನಿಕ ಉತ್ಪನ್ನಗಳಿಂದ ಕೂದಲಿನ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ ಎಂದು ಹೇಳಬಹುದು. ಕೂದಲಿನ ಎಲ್ಲಾ ರೀತಿಯ ಸಮಸ್ಯೆಗಳಿಗೆ ಈರುಳ್ಳಿ ಮನೆಮದ್ದು. ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿ ಬರುತ್ತಿರುವ ತರಕಾರಿ ಈರುಳ್ಳಿ. ಏಕೆಂದರೆ ಈರುಳ್ಳಿ ಬೆಲೆ ಈಗ ಗಗನಕ್ಕೇರಿದೆ. ಆದರೆ ಈರುಳ್ಳಿಯಿಂದ ತಲೆ ಕೂದಲಿನ ಹಲವಾರು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂಬುದು ಸುಳ್ಳಲ್ಲ. ಈರುಳ್ಳಿಯಲ್ಲಿ ಕ್ಯಾಲ್ಸಿಯಂ, ವಿಟಮಿನ್ ಸಿ ಹೆಚ್ಚಾಗಿರುವುದರಿಂದ ಇದು ಕೂದಲ ಬೆಳವಣಿಗೆಗೆ ಸಹಕಾರಿಯಾಗಿದೆ. ಕೂದಲು ಸೊಂಪಾಗಿ ಬೆಳೆಯಲು ಈರುಳ್ಳಿ ರಸ ಬಳಸುವುದು ಉತ್ತಮ. ಹೀಗೆ ಈರುಳ್ಳಿಯ ಕುರಿತು ವಿವಿಧ ವಿಷಯಗಳನ್ನು ತಿಳಿದುಕೊಳ್ಳೋಣ.. ತಲೆ ಕೂದಲಿಗೆ ನಾವು ತೆಂಗಿನ ಎಣ್ಣೆಯನ್ನು ಸಾಮಾನ್ಯವಾಗಿ ಬಳಸುತ್ತೇವೆ. ತೆಂಗಿನ ಎಣ್ಣೆಯೊಂದಿಗೆ ಈರುಳ್ಳಿ ರಸ ಉಪಯೋಗಿಸುವುದು ತಲೆ ಕೂದಲಿಗೆ ಇನ್ನೂ ಉತ್ತಮ. 2 ಚಮಚ…
ದಾವಣಗೆರೆ: ಸರ್ವಧರ್ಮ ಸಮನ್ವಯತೆಯಿಂದ ಸರ್ವಧರ್ಮಿಯರು ಬಾಳುವಂತೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ದಾವಣಗೆರೆ ತಾಲ್ಲೂಕಿನ ಗೊಲ್ಲರಹಳ್ಳಿಯಲ್ಲಿ ನಡೆದ ಕುಕ್ಕುವಾಡೇಶ್ವರಿ ದೇವಸ್ಥಾನ ಸಮಿತಿ, ವಾಲ್ಮೀಕಿ ನಾಯಕ ಯುವಕರ ಸಂಘ, ಗೊಲ್ಲರಹಳ್ಳಿಯ ಎಲ್ಲಾ ನೌಕರರು ಹಾಗೂ ಸಮಸ್ತ ಗ್ರಾಮಸ್ಥರು ಹಮ್ಮಿಕೊಂಡಿದ್ದ ಶ್ರೀ ಕುಕ್ಕುವಾಡೇಶ್ವರಿ ದೇವಸ್ಥಾನ ಉದ್ಘಾಟನಾ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿ ಕಿವಿಮಾತು ಹೇಳಿದರು. ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಆರ್ಶೀವಚನ ನೀಡಿದರು. ದೇವರು ನಿರಾಕಾರವಾಗಿದ್ದು, ಗಾಳಿಯಂತೆ ಕಣ್ಣಿಗೆ ಕಾಣುವುದಿಲ್ಲ. ದೇವರು ಬೇರೆ ರೂಪದಲ್ಲಿ ಕಂಡಾಗ ಅದಕ್ಕೆ ಜಾತಿ, ಧರ್ಮದ ಲೇಪನ ಮಾಡಬಾರದು. ಆಸ್ತಿ, ಮನೆಗಾಗಿ ಹೊಡೆದಾಟಕ್ಕಿಂತ ಮನುಷ್ಯ ಮನುಷ್ಯನ ಮೇಲೆ ಇವತ್ತು ಕ್ರೌರ್ಯ ಎಸೆಗುತ್ತಿರುವುದು ದೇವರು ಮತ್ತು ಧರ್ಮದ ಹೆಸರಿನಲ್ಲಿ ಎಂದು ವಿಷಾಧಿಸಿದರು. ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ, ಒಂದು ಊರು ಎಂದರೆ ಜಾತಿ, ಮತವೆಂಬ ಬೇಧ ಬಿಟ್ಟು ಬೆಳೆಯಬೇಕು. ಇಂತಹದ್ದನ್ನು ಒಗ್ಗಟ್ಟಾಗಿ ಅಣಜಿ, ಗೊಲ್ಲರಹಳ್ಳಿ ಗ್ರಾಮಸ್ಥರು ಮಾಡಿದ್ದಾರೆ. ಇದಕ್ಕೆ ಕುಕ್ಕವಾಡೇಶ್ವರಿ ಮೂರ್ತಿಯಾಗಿ ಪ್ರತಿಷ್ಠಾಪಿತವಾಗಲು ಕಾರಣ…