ಐಸ್‍ಲ್ಯಾಂಡ್: ಸುಮಾರು 800 ಬಾರಿ ಭೂಮಿ ಕಂಪಿಸಿದ್ದರಿಂದ (Earthquake) ಐಸ್‍ಲ್ಯಾಂಡ್ʼನಲ್ಲಿ (Iceland) ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಪರಿಸ್ಥಿತಿ (Emergency) ಘೋಷಿಸಲಾಗಿದೆ. ಶುಕ್ರವಾರ ನಸುಕಿನ ಜಾವ 2 ಗಂಟೆಗೆ ಸರಣಿ ಭೂಕಂಪಗಳಾಗಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ. ಇದು ಜ್ವಾಲಾಮುಖಿ ಸ್ಫೋಟಕ್ಕೆ ಕಾರಣವಾಗಬಹುದು. ಇದು ಮುಂದುವರೆದರೆ ಹಲವಾರು ಸಮಸ್ಯೆಗಳು ಎದುರಾಗಬಹುದು ಎಂದು ಅಂದಾಜಿಸಲಾಗಿದೆ. ಅಕ್ಟೋಬರ್ ಅಂತ್ಯದಿಂದ ಇಲ್ಲಿಯವರೆಗೂ ದ್ವೀಪದಲ್ಲಿ ಸುಮಾರು 24,000 ಭೂಕಂಪಗಳು ದಾಖಲಾಗಿವೆ. https://ainlivenews.com/great-job-opportunity-in-hindustan-aeronautics-limited-posting-in-bangalore/ ಐಸ್‍ಲ್ಯಾಂಡ್‍ನ ಅತಿದೊಡ್ಡ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾದ ಬ್ಲೂ ಲಗೂನ್ ಜಿಯೋಥರ್ಮಲ್ ಸ್ಪಾ ಜ್ವಾಲಾಮುಖಿ ಸಾಧ್ಯತೆಯಿಂದಾಗಿ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅಲ್ಲದೇ ಜನರ ರಕ್ಷಣೆ ಸಲುವಾಗಿ ಭೂಕಂಪನ ಸ್ಥಳಗಳಲ್ಲಿ ಸೇನಾ ಹಡಗುಗಳು ಕಾರ್ಯ ನಿರ್ವಹಿಸುತ್ತಿವೆ. ವಾಸಿ ತಾಣಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ. ಕೆಲವೆಡೆ ನಿರಾಶ್ರಿತರ ತಾಣಗಳನ್ನು ತೆರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವಿನ ವರದಿಯಾಗಿಲ್ಲ.
Author: AIN Author
ಬೆಂಗಳೂರು: ಮುಂದಿನ ಶುಕ್ರವಾರ ಶಾಸಕಾಂಗ ಸಭೆ ನಡೆಯಲಿದ್ದು, ಈ ವೇಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಶಾಸಕರ ಅಭಿಪ್ರಾಯ ಪಡೆದು ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು. ಮಾಜಿ ಸಿಎಂ B.S.ಯಡಿಯೂರಪ್ಪ BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಚರ್ಚೆ ಮಾಡಿದ್ದಾರೆ ಎಂದರು. ಮಾಜಿ ಸಿಎಂ B.S.ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಈ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡುವ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗುತ್ತೇನೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ B.Y.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರು: ಕುಟುಂಬ ರಾಜಕಾರಣದ ಬಗ್ಗೆ ಈಗ ಮಾತನಾಡುವುದು ತಪ್ಪಾಗುತ್ತೆ. ಎಲ್ಲೆಲ್ಲೆಗೊ ಕನೆಕ್ಟ್ ಆಗುತ್ತೆ ಇಗ ಉತ್ತರಿಸುವುದಿಲ್ಲ. ನಾನು ಪಕ್ಷದ ಕಟ್ಟಾಳು. ಪಕ್ಷದ ನಿರ್ಣಯದ ವಿರುದ್ದ ಮಾತಾಡಿಲ್ಲಾ. ನಿರ್ಣಯ ಸರಿಯಿಲ್ಲ ಅನಿಸಿದರೆ ವೇದಿಕೆ ಇದೆ ಎಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ. https://ainlivenews.com/it-is-natural-for-other-aspirants-to-be-disappointed-by-vijayendras-choice-sriramulu/ ಬದಲಾಗದೇ ಇರೋದು ಕಾರ್ಯಕರ್ತ ಅನ್ನೋದು. ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷ ನೇಮಕ ಮಾಡಿದೆ. ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ, ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ, ಯಶಸ್ವಿಯಾಗಲಿ ಎಂದು ತಿಳಿಸಿದರು. ನೂತನ ಅಧ್ಯಕ್ಷನ ಆಯ್ಕೆ ಬಗ್ಗೆ ಕಾಂಗ್ರೆಸ್ (Congress) ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಸಮಾಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ. ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವರೆಗೂ ಜವಾಬ್ದಾರಿ ನಿರ್ವಹಿಸಿದ್ದೇನೆ. ಈಗಾಗಲೆ ಬಹಳ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದರೂ…
ಮೈಸೂರು: ಸೌಥ್ ಇಂಡಿಯನ್ (SIPM) ಪೇಪರ್ ಮಿಲ್‌ಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಭಸ್ಮವಾಗಿರುವ ಘಟನೆ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ನಡೆದಿದೆ. ಬೆಳಗಿನ ಜಾವ ಪೇಪರ್ ಮಿಲ್‌ನ ಗೋಡಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. https://ainlivenews.com/great-job-opportunity-in-hindustan-aeronautics-limited-posting-in-bangalore/ ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ 6 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎನ್ನಲಾಗಿದೆ.
ಇದೇ ಮೊದಲ ಬಾರಿಗೆ ‘ಬಿಗ್ ಬಾಸ್ ಕನ್ನಡ’ ಇತಿಹಾಸದಲ್ಲಿ ಏಕಕಾಲಕ್ಕೆ ಇಬ್ಬರು ಕಳಪೆ ಪಟ್ಟ ಪಡೆದು ಜೈಲಿಗೆ ತೆರಳಿರುವ ಘಟನೆ ದೋಡ್ಮನೆಯಲ್ಲಿ ನಡೆದಿದೆ. ಬಿಗ್ ಬಾಸ್ ಕನ್ನಡ ಸೀಸನ್ 10ರ ಐದನೇ ವಾರದ ಬೆಸ್ಟ್ ಪರ್ಫಾಮರ್ ಆಗಿ ಡ್ರೋನ್ ಪ್ರತಾಪ್ ಆಯ್ಕೆಯಾಗಿದ್ದಾರೆ. ಇನ್ನೂ ಕಳಪೆ ಪಟ್ಟ ಇಶಾನಿ ಮತ್ತು ನೀತು ಪಾಲಾಗಿದ್ದು,ಇಬ್ಬರೂ ಜೈಲಿಗೆ ಒಟ್ಟಿಗೆ ತೆರಳಿದ್ದಾರೆ. ಗಂಧದ ಗುಡಿ ತಂಡದ ಕ್ಯಾಪ್ಟನ್ ಆಗಿದ ಡ್ರೋನ್ ಪ್ರತಾಪ್ ತಂಡವನ್ನ ಒಗ್ಗೂಡಿಸಿದ ರೀತಿ, ನಾಮಿನೇಷನ್ ಅಸ್ತ್ರವನ್ನ ಬಳಸಿದ ರೀತಿ, ಉಸ್ತುವಾರಿ ವೇಳೆ ಡ್ರೋನ್ ಪ್ರತಾಪ್ ಫೇರ್ ಆಗಿ ಆಟವಾಡಿದ ರೀತಿ ಇತರೆ ಸ್ಪರ್ಧಿಗಳಿಗೆ ಇಷ್ಟವಾಗಿದೆ. ಹೀಗಾಗಿ ಡ್ರೋನ್ ಪ್ರತಾಪ್ ಅವರಿಗೆ ‘ಬೆಸ್ಟ್ ಪರ್ಫಾಮೆನ್ಸ್’ ಮೆಡಲ್ ಲಭಿಸಿದೆ. ಡ್ರೋನ್ ಪ್ರತಾಪ್‌ಗೆ ಸ್ನೇಹಿತ್, ಕಾರ್ತಿಕ್, ವರ್ತೂರು ಸಂತೋಷ್, ನೀತು, ಮೈಕಲ್ ವೋಟ್ ಹಾಕಿದರು. ಅತಿ ಹೆಚ್ಚು ಮತಗಳನ್ನ ಪಡೆದ ಡ್ರೋನ್ ಪ್ರತಾಪ್ ‘ಉತ್ತಮ’ ಪಟ್ಟ ಪಡೆದರು.
ಬೆಂಗಳೂರು : ಬೆಳಗಾವಿ ರಾಜಕಾರಣದಲ್ಲಿ ಹೊರಗಿನವರ ಹಸ್ತಕ್ಷೇಪದ ಬಗ್ಗೆ ಮುನಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ ಇದೀಗ ಮತ್ತೆ ಡಿಸಿಎಂ ಡಿ.ಕೆ. ಶಿವಕುಮಾರ್ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. https://ainlivenews.com/it-is-natural-for-other-aspirants-to-be-disappointed-by-vijayendras-choice-sriramulu/ ನಗರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ. ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕೇ ವಿನಃ ನಮ್ಮ ಹಂತದಲ್ಲಿ ಏನೂ ಇಲ್ಲ. ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಉದ್ದೇಶವೇ ಬೇರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಅಡ್ಜಸ್ಟ್ಮೆಂಟ್ ಎನ್ನುವ ಪ್ರಶ್ನೆ ಇಲ್ಲ. ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು. ಚುನಾವಣೆ ಬಳಿಕ ಯಾವ ಹೊಸ ವಿಚಾರ ಬರುತ್ತವೆಂದು ಕಾದು ನೋಡೋಣ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ ಎಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಡ್ಡಿ ಮುರಿದಂತೆ ಹೇಳಿದ್ದಾರೆ. ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು ನಮ್ಮ ಹಂತದಲ್ಲಿ ಏನೂ ಇಲ್ಲ. ನಾನು ಯಾವುದೇ ಹುದ್ದೆಯ ಕ್ಲೈಮ್ ಮತ್ತು ಡಿಮ್ಯಾಂಡ್ ಮಾಡಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. https://ainlivenews.com/great-job-opportunity-in-hindustan-aeronautics-limited-posting-in-bangalore/ ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಭೇಟಿಯಾದ ಉದ್ದೇಶ ಬೇರೆ. ಅಡ್ಜಸ್ಟ್ಮೆಂಟ್ ಎನ್ನುವ ಪ್ರಶ್ನೆ ಇಲ್ಲ. ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು. ಚುನಾವಣೆ ಬಳಿಕ ಯಾವ ಹೊಸ ವಿಚಾರ ಬರುತ್ತಾವೆಂದು ಕಾದುನೋಡೋಣ ಎಂದರು.
ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಸಾಲು-ಸಾಲು ರಜೆಗಳು ಇದ್ದು, ಇಂದು ಬೆಂಗಳೂರು ಮಂದಿ ತಮ್ಮ ಊರುಗಳ ಕಡೆ ಮುಖ ಮಾಡಿದ್ದಾರೆ. ಹಬ್ಬದ ಹಿನ್ನೆಲೆ ಮೆಜೆಸ್ಟಿಕ್ಗೆ ಪ್ರಯಾಣಿಕರ ದಂಡೇ ಹರಿದು ಬಂದಿದೆ. ಸೀಟ್ ರಿಸರ್ವ್ ಮಾಡಿರುವವರು ಆರಾಮವಾಗಿ ನಿಂತಿದ್ದರೇ, ಸೀಟ್ ರಿಸರ್ವ್ ಮಾಡದವರು ಬಸ್ನಲ್ಲಿ ಸೀಟು ಹಿಡಿಯಲು ಮುಗಿಬಿದ್ದಿದ್ದಾರೆ. https://ainlivenews.com/bangalores-reputed-eye-hospitals-are-on-full-alert/ ಇನ್ನು ಹಬ್ಬದ ಹಿನ್ನೆಲೆ ಬೆಂಗಳೂರಿನಿಂದ ಇತರ ಜಿಲ್ಲೆಗಳಿಗೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ 2 ಸಾವಿರ ಹೆಚ್ಚುವರಿ ಬಸ್ ಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ. ಆದರೂ ಸಹ ಬಸ್ಗಳು ಫುಲ್ ರಶ್ ಆಗಿ ಸಂಚರಿಸುತ್ತಿವೆ. ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ KSRTC ಹೆಚ್ಚುವರಿ ಬಸ್ ಬಿಡುತ್ತಿದೆ. ಕಳೆದ ರಾತ್ರಿಯಿಂದಲೇ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಜನರು ತಮ್ಮ ತಮ್ಮ ಊರುಗಳಿಗೆ ಪ್ರಯಾಣಿಸಲು ಆಗಮಿಸುತ್ತಿದ್ದು ಇಂದು ಸಹ ಬಳ್ಳಾರಿ, ಹುಬ್ಬಳ್ಳಿ, ದಾವಣಗೆರೆ, ಗುಲ್ಬರ್ಗ ಹಾಗೂ ಶಿವಮೊಗ್ಗಕ್ಕೆ ತೆರಳಲು ಜನರು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಾದು ಕುಳಿತಿದ್ದಾರೆ.
ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ ಆರೋಪಿ ಅಭಿನವ ಹಾಲಶ್ರೀ ಇಂದು ಬಿಡುಗಡೆ ಆಗಿದ್ದಾರೆ. ಬಿಡುಗಡೆಯ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಬಳಿ ಮಾದ್ಯಮಗಳೊಂದಿಗೆ ಅವರು ಮಾತನಾಡಿದರು, ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡಬೇಕು, ಮುಂದೊಂದು ದಿನ ನನ್ನ ವಿರುದ್ಧದ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ನಮ್ಮನ್ನ ನಂಬಿ ಆರಾಧಿಸುವ ಸಮಾಜಕ್ಕೆ, ನಮ್ಮ ಮೇಲೆ ನಂಬಿಕೆಯಿಟ್ಟಿರುವ ಭಕ್ತ ಸಮೂಹದಕ್ಕೆ ನಾನೂ ಆಭಾರಿ ಎಂದರು. ಇಲ್ಲಿಯವರೆಗೆ ಯಾವುದೇ ಧಕ್ಕೆ ಬರದಂತೆ ಬದುಕು ಕಟ್ಟಿಕೊಂಡು ಬಂದಿದ್ದೇನೆ. ಮುಂದೆಯೂ ಆದೇ ರೀತಿ ಬದುಕು ಸಾಗಿಸುತ್ತೇನೆ ಎಂದು ತಿಳಿಸಿದರು.
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ B.Y ವಿಜಯೇಂದ್ರ ಅವರಿಗೆ ನೀಡಿದ್ದರಿಂದ ಇತರೆ ಆಕಾಂಕ್ಷಿಗಳಿಗೆ ನಿರಾಸೆ ಮೂಡುವುದು ಸಹಜ’ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. https://ainlivenews.com/about-vijayendra-pandit-puttaraja-kavi-gawaigala-mutts-nizhavatu-bhavishyavani/ ಬೆಂಗಳೂರಿನ (Bengaluru) ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಪಕ್ಷದ ರಾಷ್ಟ್ರ ನಾಯಕರು ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಇದರಿಂದ ನಮಗೂ ಖುಷಿಯಾಗಿದೆ. ಆ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗುವುದು ಸಾಮಾನ್ಯ ಎಂದಿದ್ದಾರೆ. ವಿಜಯೇಂದ್ರ ಅವರು ಯಡಿಯೂರಪ್ಪ ಗರಡಿಯಲ್ಲಿ ಪಳಗಿದ್ದಾರೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ಇರಲಿದೆ. ಅವರೊಟ್ಟಿಗೆ ಸೇರಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.