ಬೆಂಗಳೂರು:- ಪೊಲೀಸರ ವರ್ಗಾವಣೆ ಪದೇ ಪದೇ ಅಸಾಧ್ಯ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪೊಲೀಸ್ ಇಲಾಖೆಯಲ್ಲಿ ಕೆಳಹಂತದ ಸಿಬ್ಬಂದಿಯನ್ನು ಪದೇಪದೆ ವರ್ಗಾವಣೆ ಮಾಡಲು ಅಸಾಧ್ಯ. ಅಪರಾಧ ಪ್ರಕರಣಗಳ ತನಿಖೆಗೆ ಅಡ್ಡಿಯಾಗಲಿದೆ ಎಂದರು. ಮೈಸೂರು ರಸ್ತೆ ಕುಂಬಳಗೂಡು ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಗೃಹ ಸಚಿವರು ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕ್ರಿಮಿನಲ್‌ಗಳ ಮೇಲೆ ನಿಗಾ ವಹಿಸುವುದು ಮತ್ತು ಅಪರಾಧ ಕೃತ್ಯಗಳ ತನಿಖೆಯಲ್ಲಿ ಕೆಳಹಂತದ ಪೊಲೀಸ್ ಸಿಬ್ಬಂದಿ ಹೆಚ್ಚು ತೊಡಗಿಸಿಕೊಂಡಿರುತ್ತಾರೆ. ಪದೇ ಪದೆ ವರ್ಗಾವಣೆ ಮಾಡಿದರೇ ತನಿಖೆಗೆ ಮತ್ತು ಅಪರಾಧ ಕೃತ್ಯಗಳ ಮೇಲೆ ನಿಗಾವಹಿಸಲು ಕಷ್ಟವಾಗಲಿದೆ. ಜತೆಗೆ ಜಿಲ್ಲಾವಾರು ವರ್ಗಾವಣೆಗೆ ನಿರ್ಬಂಧ ಇರುವುದು ಸಹ ಕಾರಣವಾಗಿದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು. ಪೊಲೀಸ್ ಠಾಣೆಗಳಿಗೆ ಬರುವ ನೊಂದ ಜನರಿಗೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಇಲಾಖೆಗೆ ಒಳ್ಳೆಯ ಹೆಸರು ತರಬೇಕು. ಶಾಸಕ ಎಸ್.ಟಿ. ಸೋಮಶೇಖರ್ ಸಚಿವರಾಗಿದ್ದಾಗ ನೂತನ…
Author: AIN Author
ಬೆಳಗಾವಿ:- ರೈತರಿಗೆ ಹೆಚ್ಚಿನ ಪರಿಹಾರಕ್ಕಾಗಿ ಹೊಸ ಪ್ರಸ್ತಾವ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ರೈತರ ಅಹವಾಲು ಆಲಿಸಿದ ನಂತರ ಅವರು ಮಾತನಾಡಿದರು. ‘ಪ್ರತಿ ಗುಂಟೆಗೆ ತಲಾ ₹10 ಲಕ್ಷದಂತೆ ಎಕರೆಗೆ ₹4 ಕೋಟಿ ಪರಿಹಾರ ನೀಡಬೇಕೆಂದು ರೈತರ ಬೇಡಿಕೆಯಿದೆ. ಈ ಕುರಿತು ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯಿಂದ ಪ್ರತ್ಯೇಕ ಪ್ರಸ್ತಾವ ಸಲ್ಲಿಸಬೇಕು’ ಎಂದು ನಿರ್ದೇಶನ ಕೊಟ್ಟರು. ‘ಅಧಿಕಾರಿಗಳಿಂದ ಹೊಸದಾಗಿ ಪ್ರಸ್ತಾವ ಪಡೆದು, ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ನಿಮಗೆ ಹೆಚ್ಚಿನ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವರು ರೈತರಿಗೆ ಭರವಸೆ ನೀಡಿದರು. ‘ಯೋಜನೆಗೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ವೇಳೆ, ರೈತರಿಗೆ ಹೆಚ್ಚಿನ ಪರಿಹಾರ, ಉದ್ಯೋಗ ನೀಡುವುದಾಗಿ ಹಿಂದಿನ ಜಿಲ್ಲಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರು ಭರವಸೆ ನೀಡಿದ್ದರು. ಈಗ ರೈತರಿಗೆ ಅನ್ಯಾಯವಾಗಿದೆ. ಮುಂದೆ ಯಾವುದೇ ಕಾರಣಕ್ಕೂ ಅವರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.
ರಾಮನಗರ:- ಬೆಳೆ ಪರಿಹಾರ ಆನ್ಲೈನ್ ಮೂಲಕವೇ ರೈತರಿಗೆ ತಲುಪಲಿದ್ದು, ಅವರ ಮಾಹಿತಿ ಬಿಟ್ಟುಹೋದರೆ ಮ್ಯಾನ್ಯುವಲ್ ಆಗಿ ಅವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ. ಹೀಗಾಗಿ ಅಧಿಕಾರಿಗಳು ಉಡಾಫೆ ಬಿಟ್ಟು ಶೇ.100 ರಷ್ಟು ಎಲ್ಲಾ ರೈತರ ಬೆಳೆ ಸಮೀಕ್ಷೆಯ ಮಾಹಿತಿಯನ್ನು ಒಂದು ವಾರದಲ್ಲಿ ‘ಫ್ರೂಟ್ಸ್’ ತಂತ್ರಾಂಶದಲ್ಲಿ ನಮೂದಿಸಿ ಅವರಿಗೆ ನ್ಯಾಯಯುತ ಪರಿಹಾರ ತಲುಪಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ರಾಮನಗರದಲ್ಲಿ ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ರಾಜ್ಯ ಈ ವರ್ಷ ಇತಿಹಾಸ ಕಾಣದ ಬರಕ್ಕೆ ತುತ್ತಾಗಿದೆ. ಮಳೆ ಇಲ್ಲದ ಕಾರಣ ರೈತರು ಪರಿತಪಿಸುವಂತಾಗಿದೆ. ಬೆಳೆ ಕೈಸೇರದೆ ಸಂಕಷ್ಟಕ್ಕೀಡಾಗಿದ್ದಾರೆ ಇಂತಹ ಸಂದರ್ಭದಲ್ಲಿ ನಾವು ರೈತರ ಪರ ನಿಲ್ಲಬೇಕಾಗಿದೆ. ಹೀಗಾಗಿ ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಲು ಬೆಳೆ ಸಮೀಕ್ಷೆ ಅಗತ್ಯ” ಎಂದರು. ರಾಮನಗರದಲ್ಲಿ 242 ಗ್ರಾಮ ಆಡಳಿತ ಅಧಿಕಾರಿಗಳ ವೃತ್ತ ಇದೆ. ಆದರೆ, ಈವರೆಗೆ ಸಂಪೂರ್ಣ ಬೆಳೆ ಸಮೀಕ್ಷೆ ಆಗಿಲ್ಲ. ಪರಿಸ್ಥಿತಿ…
ಬೆಂಗಳೂರು:- ಡಿಸೆಂಬರ್ 4ರಿಂದ 15ರ ವರೆಗೆ ಒಟ್ಟು ಹತ್ತು ದಿನಗಳ ಕಾಲ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಡಿ.4ರ ಬೆಳಗ್ಗೆ 11ಗಂಟೆಗೆ ಸದನ ಸಮಾವೇಶಗೊಳ್ಳಲಿದೆ. ಶನಿವಾರ ಮತ್ತು ರವಿವಾರ ಹೊರತುಪಡಿಸಿ ಒಟ್ಟು 10 ದಿನಗಳ ಕಾಲ ಅಧಿವೇಶನ ಕಲಾಪ ನಡೆಯಲಿದೆ. ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನ ನಡೆಯಲಿದೆ. ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಜರುಗಲಿದೆ ಎಂದು ವಿಶಾಲಾಕ್ಷಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿ: ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾದ ಸನಾತನ ಧರ್ಮವನ್ನು ಕೈ ಬಿಡಬೇಕೆಂಬ ಬೇಡಿಕೆಯೊಂದಿಗೆ ನಾವು ಸನಾತನಿಗಳಲ್ಲ ಎಂಬ ಅಭಿಯಾನ ಆರಂಭಿಸಲಾಗಿದ್ದು, ರಾಜ್ಯದ ಎಲ್ಲ ಕಡೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ವಿಶ್ವ ಬಹುಜನ ಧ್ವಜ ಹಾಗೂ ಸಂವಿಧಾನ ರಕ್ಷಾ ಸೇನಾ ಟ್ರಸ್ಟ್ ಅಧ್ಯಕ್ಷ ಸದಾನಂದ ತೇರದಾಳ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಮುಂತಾದ ಆದರ್ಶಗಳಿಗೆ ಸನಾತನ ವಿರುದ್ಧವಾಗಿದೆ. ಸನಾತನ ಧರ್ಮವು ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತದೆ. ಅಸಮಾನತೆ ಪೋಷಿಸುವುದಲ್ಲದೆ ಅಸ್ಪಶ್ಯತೆಯಂತಹ ಸಾಮಾಜಿಕ ಅನಿಷ್ಟಗಳಿಗೆ ಜನ್ಮ ನೀಡುತ್ತದೆ ಎಂದರು. ಸಂಘಟನೆಯ ಬಾಪು ಹೆದ್ದೂರಶೆಟ್ಟಿ ಮಾತನಾಡಿ, ಸಂವಿಧಾನದ ಮೂಲ ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂಬರುವ ದಿನಗಳಲ್ಲಿ ಮೈಸೂರು ಹಾಗೂ ಮಂಗಳೂರು ಮತ್ತಿತರೆಡೆ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದರು. ಸಂವಿಧಾನ ಕೈಬಿಡಿ ಇಲ್ಲವೆ ಸನಾತನ ಕೈಬಿಡಿ ಎಂದು ಈಗಾಗಲೇ ಹುಬ್ಬಳ್ಳಿಯಲ್ಲಿ ನಾವು ಸನಾತನಿಗಳಲ್ಲ ಕಾರ್ಯಕ್ರಮ ನಡೆಸಲಾಗಿದೆ. ಅಲ್ಲದೆ ಬಲಿ ಚಕ್ರವರ್ತಿ ಸ್ಮರಣಾಂಜಲಿ ಸಮಾರಂಭ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ…
ಮಂಡ್ಯ :- ನೀತಿ ಸಂಹಿತೆ ಜಾರಿಯಾಗುತ್ತೆ ಎಂಬ ಭಯದಲ್ಲಿ ಅನುದಾನ ಇಲ್ಲದಿದ್ರು ಮದ್ದೂರು ಕ್ಷೇತ್ರದಾದ್ಯಂತ ನೂರಾರು ಗುದ್ದಲಿ ಪೂಜೆ ಮಾಡಿ ಹೋಗಿದ್ದಾರೆ ಎಂದು ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ವಿರುದ್ಧ ಕಾಂಗ್ರೆಸ್ ಶಾಸಕ ಕೆ.ಎಂ.ಉದಯ್ ಕಿಡಿಕಾರಿದ್ದಾರೆ. ಮದ್ದೂರು ತಾಲೂಕಿನ ಕದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರದೊಡ್ಡಿ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕ್ಷೇತ್ರದ ಜನತೆಗೆ ಸತತವಾಗಿ ಮಂಕುಬೂದಿ ಎರಚಿ ಮದ್ದೂರು ಕ್ಷೇತ್ರದಾದ್ಯಂತ ಸಿಕ್ಕ ಸಿಕ್ಕ ಕಡೆ ನೂರಾರು ಗುದ್ದಲಿ ಪೂಜೆ ಮಾಡಿ ಹೋಗಿದ್ದಾರೆ. ಯಾವುದಕ್ಕಾದ್ರು ಅನುದಾನ ಬಂದ್ದಿದಿಯಾ, ಅಗ್ರಿಮೆಂಟ್ ಆಗಿದ್ದಿಯಾ, ಅಪ್ರೂವಲ್ ಆಗಿದ್ದಿಯಾ ನೀತಿ ಸಂಹಿತೆ ಘೋಷಣೆಯಾಗುತ್ತೆ ಎಂಬ ಭಯದಲ್ಲಿ ತರಾತುರಿಯಲ್ಲಿ ಗುದ್ದಲಿ ಪೂಜೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಯಾರೋ ಅನುದಾನ ತಂದು ಪೂಜೆ ಮಾಡಿರೋದಕ್ಕೆ ನಾನು ಪೂಜೆ ಮಾಡೋ ಅಗತ್ಯವಿಲ್ಲ. ಅಂತ ಚೀಪ್ ಪಾಪ್ಯುಲಾರಿಟಿ ತಗಳೋಕೆ ನನಗೂ ಇಷ್ಟವಿಲ್ಲ. ನಾನು ಅಭಿವೃದ್ಧಿ ಮಾಡ್ಬೇಕು ಅಂತ ಬಂದ್ದಿದಿನಿ. ಹೋದ ಕಡೆಯಲ್ಲ ಕ್ಷೇತ್ರದ…
ರಾಮನಗರ:- ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಆಯ್ಕೆ ಇಂದಿನ ಸ್ಥಿತಿಗೆ ಸರಿಯಾಗಿದೆ ಎಂದು ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇಂದಿನ ಪರಿಸ್ಥಿತಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ನೂರಕ್ಕೆ ನೂರರಷ್ಟು ಸರಿಯಾಗಿದೆ’ ಎಂದರು. ವಿಜಯೇಂದ್ರ ಅವರು ಹಿಂದೆ ಪಕ್ಷದ ಉಪಾಧ್ಯಕ್ಷರಾಗಿದ್ದರು. ಅವರಿಗೆ ಅನುಭವ ಇದೆ. ಎಲ್ಲ ಜಿಲ್ಲೆಗಳ ನಾಯಕರ ಪರಿಚಯವೂ ಅವರಿಗಿದೆ. ಹೀಗಾಗಿ, ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಅವರ ಆಯ್ಕೆ ಒಳ್ಳೆಯ ಬೆಳವಣಿಗೆ’ ಎಂದರು. ‘ವಿಜಯೇಂದ್ರ ಅವರ ಆಯ್ಕೆ ಕುಟುಂಬ ರಾಜಕಾರಣ ಎಂದು ಹೇಳಲು ಸಾಧ್ಯವಿಲ್ಲ. ಅವರ ತಂದೆ ಬಿ.ಎಸ್. ಯಡಿಯೂರಪ್ಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದ ಮೇಲೆಯೇ ಅವರ ಮಗನಿಗೆ ಅಧಿಕಾರ ನೀಡಿದ್ದಾರೆ. ಅವರು ಹಿಂದೆ ಪಕ್ಷದ ಉಪಾಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿ, ಈಗ ಶಾಸಕರಾಗಿದ್ದಾರೆ’ ಎಂದು ತಿಳಿಸಿದರು. ನನ್ನನ್ನು ಯಾರು ಬೇಕಿದ್ದರೂ ಕಡೆಗಣಿಸಲಿ, ಬಿಡಲಿ. ಕ್ಷೇತ್ರದ ಜನ ನನ್ನನು ಕಡೆಗಣಿಸಿಲ್ಲ. ಬಿಜೆಪಿಯಿಂದಲೂ…
ಬೆಂಗಳೂರು:- ಬಿಎಚ್‌ಎಲ್ ಲೇಔಟ್‌ನ ಕೃಷ್ಣಪ್ಪ ಗಾರ್ಡನ್ ಬಳಿ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಬರ್ಬರವಾಗಿ ವ್ಯಕ್ತಿಯ ಕೊಲೆ ಮಾಡಿರುವ ಘಟನೆ ಜರುಗಿದೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ತಬ್ರೇಜ್ ಕೊಲೆಯಾದ ವ್ಯಕ್ತಿ, ಶಬ್ಬೀರ್ ಎಂಬಾತನ ಪತ್ನಿಯ ಜತೆ ತಬ್ರೇಜ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಈ ಹಿಂದೆ ಹಲವಾರು ಬಾರಿ ರಾಜಿ ಪಂಚಾಯಿತಿ ನಡೆದಿತ್ತು. ಬುಧವಾರ ಮತ್ತೆ ಸಂಧಾನಕ್ಕೆಂದು ಕರೆದು ತಬ್ರೇಜ್‌ನ ಶಬ್ಬೀರ್ ಗ್ಯಾಂಗ್ ಕೊಂದಿದೆ ಎಂದ ಆರೋಪ ಕೇಳಿಬಂದಿದೆ.
ಆನೇಕಲ್ :- ರಾಜಧಾನಿ ಬೆಂಗಳೂರಿನ ದೊಮ್ಮಸಂದ್ರದಲ್ಲಿ ಬುಲೆಟ್ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ಜರುಗಿದೆ. ಟ್ರ್ಯಾಕ್ಟರ್ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದು, ಈ ವೇಳೆ ಅವರ ಮೇಲೆ ಟ್ರ್ಯಾಕ್ಟರ್ ಹರಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಟ್ರಾಕ್ಟರ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸರ್ಜಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು:- ಹಲಸೂರು ಕೆರೆಯಲ್ಲಿ ಛಠ್ ಪೂಜೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿ. 19-11-2023 ಹಾಗೂ 20-11-2023ರಂದು “ಛಠ್ ಪೂಜೆ” – ಸೂರ್ಯದೇವರ ಆರಾಧನೆ ಕಾರ್ಯಕ್ರಮದ ಸಲುವಾಗಿ ಹಲಸೂರು ಕೆರೆ, ಗಣಪತಿ ವಿಸರ್ಜನೆ ಮಾಡುವ ಕಲ್ಯಾಣಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ ಎಂದು ಪಾಲಿಕೆ ಹೇಳಿದೆ. ಸದರಿ “ಛಠ್ ಪೂಜೆ”ಯಲ್ಲಿ ಭಾಗವಹಿಸುವ ಸಾರ್ವಜನಿಕರು ಹಲಸೂರು ಕೆರೆಯ ಉತ್ತರ ದಿಕ್ಕಿನಲ್ಲಿರುವ, ಅಣ್ಣಸ್ವಾಮಿ ಮೊದಲಿಯಾರ್ ರಸ್ತೆಯ (ಕಾರಾ ಕೆಫೆ ರೆಸ್ಟೋರೆಂಟ್ ಮುಂಭಾಗದ) ಮುಖ್ಯ ದ್ವಾರದ ಮೂಲಕವೇ ಬಂದು ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಮಾತ್ರವೇ “ಛಠ್, ಪೂಜೆಯನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಸದರಿ ಪೂಜೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಯಾವುದೇ ರೀತಿಯ ಪ್ಲಾಸ್ಟಿಕ್ ಪೇಪರ್ ಮುಂತಾದ ವಿಷಯುಕ್ತ ವಸ್ತುಗಳನ್ನು ಕೆರೆಯ ಅಂಗಳಕ್ಕೆ ತರಬಾರದೆಂದು ಸೂಚಿಸಲಾಗಿದೆ ಹಾಗೂ ಹಲಸೂರು ಕೆರೆಯ ಬೇರೆ ದಿಕ್ಕಿನ ದ್ವಾರಗಳು ಮುಚ್ಚಿರುತ್ತದೆ ಎಂಬುದಾಗಿ ತಿಳಿಸಲಾಗಿದೆ. ಪೂರ್ವ ವಲಯದ ಬೇರೆ ಯಾವುದೇ ಸ್ಥಳದಲ್ಲಿ “ಛಠ್ ಪೂಜೆಗೆ ವ್ಯವಸ್ಥೆ ಕಲ್ಪಿಸಿರುವುದಿಲ್ಲವೆಂದು ಪೂರ್ವ ವಲಯ ಆಯುಕ್ತರಾದ ಶ್ರೀಮತಿ ಆರ್.ಸ್ನೇಹಲ್, ಭಾ.ಆ.ಸೇ*…