Author: AIN Author

ಬಿಗ್‌ಬಾಸ್‌ (Bigg Boss Kannada) ಮನೆಯಿಂದ ಈ ಶನಿವಾರ ಹೊರಬಿದ್ದ ಸ್ಪರ್ಧಿ ಇಶಾನಿ (Ishani). ಇಷ್ಟು ವಾರಗಳ ಕಾಲದ ಅವರ ಬಿಗ್‌ಬಾಸ್ ಜರ್ನಿ ಹೇಗಿತ್ತು, ಅವರು ಹೊರಬೀಳಲು ಕಾರಣವಾದ ಸಂಗತಿಗಳು ಏನು, ಷೋ ಬಗ್ಗೆ ಅವರು ಏನು ಹೇಳುತ್ತಾರೆ,  ಬಿಗ್‌ಬಾಸ್ ಮನೆಯಿಂದ ಹೊರಬಿದ್ದ ಮರುಕ್ಷಣವೇ ಅವರ ಎಕ್ಸ್‌ಕ್ಲೂಸೀವ್ ಸಂದರ್ಶನ ಇಲ್ಲಿದೆ. JioCinemaಗಾಗಿ ಅವರು ಹಲವಾರು ವಿಷಯಗಳನ್ನು ಮಾತನಾಡಿದ್ದಾರೆ. ಏನು ಹೇಳಬೇಕು ಎಂದು ಗೊತ್ತಾಗ್ತಿಲ್ಲ. ಬಿಗ್‌ಬಾಸ್ ಮನೆಯಿಂದ ಆಚೆ ಬಂದಿದೀನಿ. 99 ಪರ್ಸೆಂಟ್‌ ನನಗೆ ನಾನು ಇರ್ತೀನಿ ಅಂತ ಕಾನ್ಫಿಡೆನ್ಸ್ ಇತ್ತು. ಉಳಿದ ಒಂದು ಪರ್ಸೆಂಟ್ ನನಗೆ ಆಗಲ್ಲ ಅನಿಸಿತ್ತು. ನನಗೆ ಹಟ ಜಾಸ್ತಿ ಇದೆ. ಗೇಮ್ ಆಡುವ ಅವಕಾಶ ಜಾಸ್ತಿ ಸಿಗಲಿಲ್ಲ. ಅದರಿಂದ ನನಗೆ ಬೇಜಾರಾಗಿತ್ತು. ನನ್ನನ್ನು ಯಾರೂ ಸೀರಿಯಸ್ ಆಗಿ ತಗೊಂಡಿರ್ಲಿಲ್ಲ. ಹಾಗಾಗಿ ನನ್ನ ಸ್ಟ್ರೆಂಥ್ ತೋರಿಸಲಾಗಲಿಲ್ಲ. ನಾನು ಸ್ವಲ್ಪ ಎಮೋಷನಲ್ ಆಗಿದೀನಿ. ಆದರೆ ಎಮೋಷನಲ್ ಆಗಿರುವುದು, ಅದು ವಲ್ನರಬಲ್ ಆಗಿದ್ರೆ ಅದು ವೀಕ್‌ನೆಸ್ ಅಲ್ವೇ ಅಲ್ಲ. ಅದು ಸ್ಟ್ರೆಂಥ್‌.…

Read More

ಬೆಂಗಳೂರು: ಸರ್ಕಾರದ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ಮತ್ತೆ ಸಿಡಿದೆದ್ದು, ಇಂದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಸಜ್ಜಾಗಿದ್ದಾರೆ. ಅಂಗನವಾಡಿಗಳಿಗೆ ಸಹಾಯಕಿರನ್ನು ನೇಮಿಸುವಂತೆ ಒತ್ತಾಯಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವದಿ ಪ್ರತಿಭಟನೆ ನಡೆಸಲು ಕಾರ್ಯಕರ್ತೆಯರು ಮುಂದಾಗಿದ್ದಾರೆ. https://ainlivenews.com/lets-stand-with-the-indian-team-in-the-grief-of-defeat-cm-siddaramaiah/ ಕಳೆದೆ ಹಲವು ವರ್ಷಗಳಿಂದ ಅಂಗನವಾಡಿ ಸಹಾಯಕಿಯರ ನೇಮಕಾತಿ ವಿಳಂಬ ಆಗುತ್ತಿದ್ದು, ಬೆಂಗಳೂರು ಜಿಲ್ಲೆಯಲ್ಲಿ 2877 ಅಂಗನವಾಡಿ ಕೇಂದ್ರಗಳು ಇವೆ. ಅದರಲ್ಲಿ 1198 ಸಹಾಕಿಯರ ಹುದ್ದೆ ಖಾಲಿ ಇದ್ದು, ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನೇಮಕಾತಿಯಲ್ಲಿ ವಿಳಂಬ ಆಗುತ್ತಿದೆ ಎಂದು ಕಾರ್ಯಕರ್ತೆಯರು ಬೇಸರಗೊಂಡಿದ್ಧಾರೆ. ಇನ್ನೂ ನೇಮಕಾತಿ ಬೇಡಿಕೆಯ ಜೊತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರದ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

Read More

ಮೈಸೂರು: ಮೈಸೂರಿನ ಕುವೆಂಪು ನಗರದಲ್ಲಿರುವ ಸಾಹಿತಿ ಎಸ್ ಎಲ್ ಭೈರಪ್ಪ ನಿವಾಸಕ್ಕೆ ಬಿ ವೈ ವಿಜಯೇಂದ್ರ ಭೇಟಿ ನೀಡಿದ್ದು ಆಶೀರ್ವಾದ ಪಡೆದಿದ್ದಾರೆ. ರಾಜ್ಯಾಧ್ಯಕ್ಷರಾದ ನಂತರ ಮೈಸೂರಿಗೆ ಮೊದಲ ಬಾರಿ ಆಗಮಿಸಿರುವ ಬಿ.ವೈ. ವಿಜಯೇಂದ್ರ ಟೆಂಪಲ್ ರನ್, https://ainlivenews.com/geo-scientist-statue-murder-case-explosive-issue-comes-to-light-during-investigation/ ಮಠಗಳ ಭೇಟಿ ಜೊತೆಗೆ ಗಣ್ಯರು, ಸಾಹಿತಿಗಳ ಭೇಟಿ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ತವರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಎರಡನೇ ದಿನದ ಪ್ರವಾಸ ಕೈಗೊಂಡಿದ್ದಾರೆ. 

Read More

ಬೆಂಗಳೂರು : ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಭಾರತ ತಂಡ ಎಡವಿದೆ. ಆದರೆ, ಟೂರ್ನಿಯಲ್ಲಿ ನೀಡಿದ ಉತ್ತಮ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಸೋಲು ಹಾಗೂ ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ಭಾರತ ತಂಡದ ಜೊತೆ ನಿಲ್ಲೋಣ ಎಂದು ಹೇಳಿದ್ದಾರೆ. ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಿನಲ್ಲಿ ಅಚ್ಚಳಿಯದೆ ಉಳಿಯಲಿದೆ ಎಂದು ಪೋಸ್ಟ್ ಮಾಡಿದ್ದಾರೆ. ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದೆ ಇನ್ನೂ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಹ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋತರೂ, ಭಾರತ ತಂಡ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದೆ. ಇಡೀ ಸರಣಿಯಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದ ಭಾರತ ತಂಡದ ಬಗ್ಗೆ ಹೆಮ್ಮೆ ಇದೆ. ಆ ಎಲ್ಲ ನೆನಪುಗಳಿಗಾಗಿ ಧನ್ಯವಾದಗಳು’…

Read More

ವಿಜಯನಗರ: 2 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆ (Hospet) ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ. ಐಶ್ವರ್ಯ ರೈ ಮೃತಪಟ್ಟ ಯುವತಿ. ಕೇವಲ 2 ದಿನಗಳಲ್ಲಿ ಯುವತಿ ಅಂತರ್ಜಾತಿ ಯುವಕನನ್ನು ವಿವಾಹವಾಗಲು (Marriage) ತಯಾರಾಗಿದ್ದಳು. ಆದರೆ ಯುವತಿ ಮದುವೆಯಾಗಬೇಕಿದ್ದ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. https://ainlivenews.com/fast-bowler-shami-who-has-created-a-new-sensation-decision-to-hire-as-brand-ambassador/ ಯುವತಿ ಕೆಳ ಜಾತಿಯವಳು ಎಂಬ ಕಾರಣಕ್ಕೆ ಕೆಲವು ಷರತ್ತುಗಳ ಮೇಲೆ ಯುವಕನ ಕಡೆಯವರು ಮದುವೆಗೆ ಒಪ್ಪಿದ್ದರು. ಇದೇ ಕಾರಣಕ್ಕೆ ಯುವತಿಯ ಕೊಲೆಗೆ ಪ್ರಚೋದನೆ ನೀಡಲಾಗಿದೆ ಎಂದು ಐಶ್ವರ್ಯ ಪೋಷಕರು ಆರೋಪಿಸಿದ್ದಾರೆ. ಐಶ್ವರ್ಯ ಹಾಗೂ ವರ ಅಶೋಕ್ ಕಳೆದ 7-8 ವರ್ಷಗಳಿಂದ ಪ್ರೀತಿಸುತ್ತಿದ್ದರು. ನಮಗೂ ಅವರಿಗೂ ಹೊಂದಾಣಿಕೆ ಆಗಲ್ಲ, ನಾನು ಈ ಮದುವೆ ಬೇಡ ಎಂದು ಮಗಳಿಗೆ ಹೇಳಿದ್ದೆ. ನನ್ನ ಮಗಳು ಬಹಳ ಗಟ್ಟಿ ಮನಸ್ಸಿನವಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಯುವಕನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ. 

Read More

ಅಹಮದಾಬಾದ್‌: ವಿಶ್ವಕಪ್‌ ಕ್ರಿಕೆಟ್‌ನಲ್ಲಿ (World Cup Cricket) ಅತ್ಯುತ್ತಮ ಪ್ರದರ್ಶನ ನೀಡಿದ ವಿರಾಟ್‌ ಕೊಹ್ಲಿ (Virat Kohli) ಅರ್ಹವಾಗಿಯೇ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಒಟ್ಟು 11 ಪಂದ್ಯಗಳ 11 ಇನ್ನಿಂಗ್ಸ್‌ನಲ್ಲಿ 765 ರನ್‌ ಸಿಡಿಸಿದ್ದ ಕೊಹ್ಲಿಯ ಅತ್ಯತ್ತಮ ಆಟಕ್ಕೆ ಸರಣಿ ಶ್ರೇಷ್ಠ (Player Of The Series) ಗೌರವ ಸಿಕ್ಕಿದೆ. ಈ ಟೂರ್ನಿಯಲ್ಲಿ 90.31 ಸ್ಟ್ರೈಕ್‌ ರೇಟ್‌ನಲ್ಲಿ 3 ಶತಕ ಮತ್ತು 6 ಅರ್ಧಶತಕವನ್ನು ಕೊಹ್ಲಿ ಸಿಡಿಸಿದ್ದಾರೆ. 2003ರ ಫೈನಲಿನಲ್ಲಿ ಭಾರತ ಎದುರಾಳಿ ಆಸ್ಟ್ರೇಲಿಯಾವೇ ಆಗಿತ್ತು. ಫೈನಲ್‌ನಲ್ಲಿ (Final) ಭಾರತ ಸೋತಿದ್ದರೂ ಟೂರ್ನಿಯಲ್ಲಿ ಸಚಿನ್‌ ತೆಂಡೂಲ್ಕರ್‌ ಒಟ್ಟು 673 ರನ್‌ ಹೊಡೆಯುವ ಮೂಲಕ ವಿಶ್ವದಾಖಲೆ ಬರೆದಿದ್ದರು. ಈ ಅತ್ಯುತ್ತಮ ಆಟಕ್ಕೆ ಸಚಿನ್‌ಗೆ ಸರಣಿ ಶ್ರೇಷ್ಠ ಗೌರವ ಸಿಕ್ಕಿತ್ತು. ಸಚಿನ್‌ ಅವರ ವಿಶ್ವದಾಖಲೆಯನ್ನು ವಿರಾಟ್‌ ಕೊಹ್ಲಿ ಈ ಟೂರ್ನಿಯಲ್ಲಿ ಮುರಿದಿದ್ದರು. ಟೂರ್ನಿಯಲ್ಲಿ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರೂ ಇಬ್ಬರಿಗೆ ವಿಶ್ವಕಪ್‌ ಮಾತ್ರ ಮಿಸ್‌ ಆಗಿತ್ತು. 2011ರಲ್ಲಿ ಟೀಂ ಇಂಡಿಯಾ ಗೆಲ್ಲುವ ಮೂಲಕ ಸಚಿನ್‌…

Read More

ಮಂಡ್ಯ :- ಮದ್ದೂರು ಪಟ್ಟಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು ಶಿವಪುರದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕ್ರೇನ್ ಮೂಲಕ ಭಾರಿ ಗಾತ್ರದ ಹೂವಿನ ಹಾರ ಹಾಕುವ ಮೂಲಕ ಅದ್ದೂರಿಯಾಗಿ ಅಭಿನಂದಿಸಿದರು. ಶಿವಪುರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ರಾತ್ರಿ ನಡೆದ ಖಾಸಗಿ ಕಾರ್ಯಕ್ರಮಕ್ಕೆ ಅಗಮಿಸುವ ಮುನ್ನ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗಣ್ಯರನ್ನು ಪಟಾಕಿ ಸಿಡಿಸಿ, ಬೃಹತ್ ಹೂವಿನ ಹಾರ ಹಾಕಿ ಸಡಗರ ಸಂಭ್ರಮದಿಂದ ಬರ ಮಾಡಿಕೊಳ್ಳಲಾಯಿತು. ವಿವಾಹ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಕದಲೂರು ಗ್ರಾಮದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸ್ವೀಕರಿಸಿದರು. ಬಳಿಕ, ಶಾಸಕ ಕೆ.ಎಂ.ಉದಯ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿ ಮುಂಬರುವ ಲೋಕಸಭಾ, ಜಿಪಂ ಹಾಗೂ ತಾಪಂ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಯಾವ ರೀತಿ ಗೆಲ್ಲಿಸಬೇಕು ಮತ್ತು ಪಕ್ಷದ ಸಂಘಟನೆ ಹೇಗೆ ಮಾಡಬೇಕು ಎಂಬುವುದರ…

Read More

ನವದೆಹಲಿ: ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆಲುವಿನ ಹಂಬಲದಲ್ಲಿ ಅಂತಿಮ ಹಂತದಲ್ಲಿ ಎಡವಿತು. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಫೈನಲ್‌ನಲ್ಲಿ ಆಸ್ಟ್ರೇಲಿಯಾ ಆರು ವಿಕೆಟ್‌ಗಳ ಜಯ ಸಾಧಿಸಿತು. ಫೈನಲ್‌ನಲ್ಲಿ ಭಾರತದ ಸೋಲಿಗೆ ಕಾರಣವಾದ ಐದು ತಿರುವುಗಳೇನು ಎಂಬುದನ್ನು ನೋಡೋಣ. ಮಿಂಚುವಲ್ಲಿ ವಿಫಲರಾದ ಗಿಲ್‌ ಭಾರತ ತಂಡದ ಕ್ಯಾಪ್ಟನ್‌ ರೋಹಿತ್‌ ಶರ್ಮಾ ಉತ್ತಮ ಆರಂಭ ನೀಡಿದ್ದರು. ಆದರೆ ಅವರಿಗೆ ಜೊತೆಯಾಗಿ ನಿಲ್ಲುವಲ್ಲಿ ಶುಭಮನ್‌ ಗಿಲ್‌ ಎಡವಿದರು. ಇದರಿಂದ ಭಾರತಕ್ಕೆ ಉತ್ತಮ ಆರಂಭ ಒದಗಿಸಲು ಸಾಧ್ಯವಾಗಲಿಲ್ಲ. ಕೇವಲ 4 ರನ್‌ ಗಳಿಸಿ ಕ್ಯಾಚ್‌ ನೀಡಿ ಗಿಲ್‌ ಪೆವಿಲಿಯನ್‌ ಸೇರಿದರು. ತಂತ್ರಗಾರಿಕೆ ಮೂಲಕ ಭಾರತದ ಬ್ಯಾಟರ್‌ಗಳು ಹೆಚ್ಚು ರನ್‌ ಹೊಡೆಯದಂತೆ ಕಟ್ಟಿಹಾಕುವಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳು ಯಶಸ್ವಿಯಾದರು. ಮಧ್ಯಮ ಕ್ರಮಾಂಕದಲ್ಲಿ ನಿಧಾನಗತಿಯ ಆಟ ಐದನೇ ಓವರ್‌ನಲ್ಲಿ ಶುಭಮನ್ ಗಿಲ್ ಔಟಾದ ನಂತರ, ರೋಹಿತ್ ಶರ್ಮಾ ಆಕ್ರಮಣಕಾರಿ ಸ್ಟ್ರೋಕ್‌ಗಳನ್ನು ಆಡುವುದನ್ನು ಮುಂದುವರೆಸಿದರು. 10 ನೇ ಓವರ್‌ನಲ್ಲಿ ಔಟಾಗುವ ಮೊದಲು 31 ಎಸೆತಗಳಲ್ಲಿ…

Read More

ಮುಂಬೈ: ಮಹಾರಾಷ್ಟ್ರದ (Maharashtra) ಹಿಂಗೋಲಿಯಲ್ಲಿ (Hingoli) ಸೋಮವಾರ ಬೆಳಗ್ಗೆ 3.5 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಇಂದು ಬೆಳಗ್ಗೆ 5:09ಕ್ಕೆ 5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯನ್ನು ತೋರಿಸಿದೆ. ಸದ್ಯ ಯಾವುದೇ ಹಾನಿಯ ವರದಿಯಾಗಿಲ್ಲ. ಈ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.  https://ainlivenews.com/fast-bowler-shami-who-has-created-a-new-sensation-decision-to-hire-as-brand-ambassador/ ಇತ್ತೀಚೆಗೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಭೂಕಂಪ ಸಂಭವಿಸಿತ್ತು. ಹರಿಯಾಣದ ಫರಿದಾಬಾದ್‌ನಲ್ಲಿ 9 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿತ್ತು. ಅಕ್ಟೋಬರ್ 3ರಂದು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಭೂಕಂಪನ ಸಂಭವಿಸಿತ್ತು. ಸ್ಥಳೀಯ ಜನರು ಭಯಭೀತರಾಗಿ ತಮ್ಮ ಮನೆ, ಕಚೇರಿಗಳಿಂದ ಹೊರಗೆ ಓಡಿದ್ದರು. 

Read More

ಅಹಮದಾಬಾದ್‌: ವಿಶ್ವಕಪ್‌ ಸೋಲಿನಿಂದ ನಿರಾಸೆಗೊಂಡಿರುವ ಟೀಂ ಇಂಡಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಯ ನೀಡಿದ್ದಾರೆ. ಆಸ್ಟ್ರೇಲಿಯಾ ತಂಡದ ಗೆಲುವಿಗೆ ಅಭಿನಂದನೆ ಸಲ್ಲಿಸಿರುವ ಮೋದಿ, ಟೀಂ ಇಂಡಿಯಾ ಆಟಗಾರರಿಗೆ ಅಭಯ ನೀಡಿದ್ದಾರೆ. ಈ ಕುರಿತು ಸೋಶಿಯಲ್‌ ಮೀಡಿಯಾ ಎಕ್ಸ್‌ ನಲ್ಲಿ ಹೇಳಿಕೆ ನೀಡಿರುವ ಪ್ರಧಾನಿ ಮೋದಿ, ಆತ್ಮೀಯ ಟೀಂ ಇಂಡಿಯಾ, ಈ ವಿಶ್ವಕಪ್‌ ಟೂರ್ನಿ ಮೂಲಕ ನಿಮ್ಮ ಅಸಾಧಾರಣ ಪ್ರತಿಭೆ ಗಮನ ಸೆಳೆದಿದೆ. ಉತ್ಸಾಹದಿಂದಲೇ ನೀವು ಆಡಿದ್ದೀರಿ, ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದೀರಿ. ನಾವು ಇಂದು ಮತ್ತು ಯಾವಾಗಲೂ ನಿಮ್ಮೊಂದಿಗೆ ಇರುತ್ತೇವೆ ಎಂದು ಅಭಯ ನೀಡಿದ್ದಾರೆ ಇದೇ ವೇಳೆ ವಿಶ್ವಕಪ್‌ನಲ್ಲಿ ಅಮೋಘ ಜಯ ಸಾಧಿಸಿದ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಆಸ್ಟ್ರೇಲಿಯಾ ತಂಡವೂ ಶ್ಲಾಘನೀಯ ಪ್ರದರ್ಶನ ನೀಡಿದ್ದು, ಟ್ರಾವಿಸ್‌ ಹೆಡ್‌ ಅವರ ಇಂದಿನ ಆಟ ಗಮನಾರ್ಹವಾಗಿದೆ ಎಂದು ತಿಳಿಸಿದ್ದಾರೆ. ಭಾನುವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 240…

Read More